Tag: ಮಹದಾಯಿ ನ್ಯಾಯಾಧೀಕರಣ

  • ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ಕೊಡ್ತೇವೆ – ಸುರ್ಜೆವಾಲ

    ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ಕೊಡ್ತೇವೆ – ಸುರ್ಜೆವಾಲ

    ಹುಬ್ಬಳ್ಳಿ: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೃಷ್ಣಾ ನದಿ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ ಎಂದು ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲ (Randeep Surjewala) ಭರವಸೆ ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೃಷ್ಣಾ ನದಿ (Krishna River Project) ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿಯವರು (BJP) ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ. ಪರಿಣಾಮ ಉತ್ತರ ಕರ್ನಾಟಕ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ. ಇನ್ನೂ ಮೂರು ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅದಾದ ಮೇಲೆ ಕೃಷ್ಣಾ ನದಿ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು- ಯುವತಿಯ ಹರಕೆ

    ಅಮಿತ್ ಶಾ ರಾಜ್ಯಕ್ಕೆ ಬಂದಿದ್ದರೂ ಕೃಷ್ಣಾ ಮತ್ತು ಮಹದಾಯಿ ನೀರು ಹಂಚಿಕೆ (Kalasa Banduri Yojana) ವಿಚಾರವಾಗಿ ಮಾತನಾಡಿಲ್ಲ. ಏಕೆಂದರೆ ಅವರ ಮನಸ್ಸಿನಲ್ಲಿ ಕಳ್ಳನಿದ್ದಾನೆ. ಇಂದಿಗೂ ಶಾ ಮತ್ತು ಮೋದಿ ಅವರು ಕೃಷ್ಣಾ ಮತ್ತು ಮಹದಾಯಿ ನೀರಿನ ಹಕ್ಕಿನಿಂದ ಉತ್ತರ ಕರ್ನಾಟಕದ ಜನರನ್ನು ದೂರ ಇಟ್ಟಿದ್ದಾರೆ. ಅರಣ್ಯ ಇಲಾಖೆ ಕ್ಲಿಯರೆನ್ಸ್, ಹಸಿರು ನ್ಯಾಯಾಧಿಕರಣದ ಕ್ಲಿಯರೆನ್ಸ್, ಕಾಮಗಾರಿ ಟೆಂಡರ್ ಎಲ್ಲಿದೆ ತೋರಿಸಲಿ? ಮೋಸಗಾರ ಬಿಜೆಪಿ ಒಂಟೆಯ ಬಾಯಲ್ಲಿ ಜೀರಿಗೆ ಹಾಕುವ ಕೆಲಸ ಮಾಡುತ್ತಿದೆ. ಈಗ ಇಲ್ಲಸಲ್ಲದ ಮಾತನಾಡಿ ದಿಕ್ಕುತಪ್ಪಿಸುತ್ತಿದೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಏನಾದರೂ ನ್ಯಾಯ ಒದಗಿಸಿದ್ದಾರಾ – ಡಿಕೆಶಿ ಪ್ರಶ್ನೆ

    ಡಿ.ಕೆ.ಶಿವಕುಮಾರ್ (DK Shivakumar) ಮತ್ತು ಸಿದ್ದರಾಮಯ್ಯ (Siddaramaiah) ತಮ್ಮ ಯಾತ್ರೆಯ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಳಿಕ ಮುಂದಿನ ಕಾಂಗ್ರೆಸ್ ಸರ್ಕಾರ ಮಹದಾಯಿ ಯೋಜನೆಗೆ 3 ಸಾವಿರ ಕೋಟಿ ರೂ. ಅನುದಾನ ಕೊಡಲಿದೆ. ಮೊದಲ ಕ್ಯಾಬಿನೆಟ್‌ನಲ್ಲಿ ಐದು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಇದು ಕಾಂಗ್ರೆಸ್ ಪಕ್ಷದ ಬದ್ಧತೆ, ದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹದಾಯಿ ನ್ಯಾಯಾಧೀಕರಣದ ಐತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ

    ಮಹದಾಯಿ ನ್ಯಾಯಾಧೀಕರಣದ ಐತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ

    – ಸೂರಲ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

    ನವದೆಹಲಿ: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ಮಹತ್ವದ ತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸಿವೆ. ಈ ಸಂಬಂಧ ಅಲ್ಲಿನ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದು, ಈ ಬೆನ್ನಲ್ಲೇ ಗೋವಾದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

    ಮಾಂಡೋವಿ ಬಚಾವೋ ಆಂದೋಲನದ ಕಾರ್ಯಕರ್ತರು ಕರ್ನಾಟಕ- ಗೋವಾ ಗಡಿಭಾಗದ ಸೂರಲ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಮಹದಾಯಿ ತೀರ್ಪು ಸ್ವಲ್ಪ ಕರ್ನಾಟಕದ ಪರ ಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ರೈತರು ಸಂಭ್ರಮಿಸಿದ್ದಾರೆ.

    ನ್ಯಾಯಾಧಿಕರಣದ ಐತೀರ್ಪಿನಲ್ಲಿ ಒಟ್ಟು 13.05 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಹಂಚಿಕೆ ಮಾಡಿದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರಿನಲ್ಲಿ, 5.5 ಟಿಎಂಸಿ ನೀರು ಕುಡಿಯುವ ಬಳಕೆಗೆ ಸಿಕ್ಕಿದರೆ, 8 ಟಿಎಂಸಿ ನೀರು ನೀರಾವರಿಗೆ ಸಿಕ್ಕಿದೆ. ಈ ಸಂಬಂಧ ಪಬ್ಲಿಕ್ ಟಿವಿಗೆ ರಾಜ್ಯದ ವಕೀಲ ಮೋಹನ್ ಕಾತರಕಿ ಪ್ರತಿಕ್ರಿಯಿಸಿ, ನನಗೆ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಒಟ್ಟು 13.05 ಟಿಎಂಸಿ ನೀರು ಸಿಕ್ಕಿದೆ. ಪೂರ್ಣವಾಗಿ ನಾನು ತೀರ್ಪು ಓದಿಲ್ಲ. ಈ ತೀರ್ಪು ಸ್ವಲ್ಪ ಸಮಧಾನ, ಸ್ವಲ್ಪ ಬೇಸರ ತಂದಿದೆ ಎಂದು ಹೇಳಿದರು.

    ಕರ್ನಾಟಕಕ ಪರ ವಾದ ಏನಾಗಿತ್ತು?
    ಹುಬ್ಬಳ್ಳಿ- ಧಾರವಾಡಕ್ಕೆ ಕುಡಿಯುವ ನೀರಿಗೆ ಸೂಕ್ತ ಪರ್ಯಾಯವಿಲ್ಲ. ಕೇಂದ್ರ ಜಲ ಆಯೋಗದ ಪ್ರಕಾರ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕಕ್ಕೆ ತನ್ನ ಪಾಲಿನ 14.98 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ನೀಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಹುಬ್ಬಳ್ಳಿ ಧಾರವಾಡಕ್ಕೆ ಕುಡಿಯಲು 7.56 ಟಿಎಂಸಿ ನೀರು ಬೇಕು. ಮಹದಾಯಿಯ ನೀರು ಹು-ಧಾ ಕ್ಕೆ ಕುಡಿಯಲು ಸಿಕ್ಕರೆ ಮಲಪ್ರಭದ ಮೇಲಿನ ಒತ್ತಡ ಕಡಿಮೆ ಆಗಿ ಅದರ ನೀರನ್ನು ನೀರಾವರಿಗೆ ಬಳಸಬಹುದು.

    ಗೋವಾ ಸರ್ಕಾರ 113 ಟಿಎಂಸಿ ನೀರು ಮಹದಾಯಿಯಲ್ಲಿದೆ ಎನ್ನುತ್ತದೆ. ಆದರೆ 173 ಟಿಎಂಸಿ ಮಹದಾಯಿ ನೀರಿಗೆ ಬೇಡಿಕೆ ಸಲ್ಲಿಸುತ್ತದೆ. ಗೋವಾ ಮಂಡಿಸಿರುವ ವಾದ ಸರಿಯಲ್ಲ ಮತ್ತು ತಪ್ಪು ದಾರಿಗೆಳೆಯುತ್ತಿದೆ. ಅಂತಾರಾಜ್ಯ ನದಿಗಳಲ್ಲಿ ನೀರಿನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ರಾಜ್ಯವು ಇನ್ನೊಂದು ರಾಜ್ಯದ ಅನುಮತಿ ಪಡೆಯಬೇಕು ಎಂಬುದಿಲ್ಲ. ಆದರೆ ಮತ್ತೊಂದು ರಾಜ್ಯವು ಯೋಜನೆಯಿಂದ ತನಗೆ ಹಾನಿ ಆಗುತ್ತದೆ ಎಂದರೆ ಮಾತ್ರ ದೂರು ಸಲ್ಲಿಸಬಹುದು ಎಂದು ವಾದ ಮಂಡಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv