Tag: ಮಹದೇವಪ್ಪ

  • ಭೇಟಿಗೆ ಬರುವವರು ಹಾರ, ಪೇಟ ತರಬೇಡಿ, ನೋಟ್ ಬುಕ್ಸ್ ತನ್ನಿ: ಸಚಿವರ ಮನವಿ

    ಭೇಟಿಗೆ ಬರುವವರು ಹಾರ, ಪೇಟ ತರಬೇಡಿ, ನೋಟ್ ಬುಕ್ಸ್ ತನ್ನಿ: ಸಚಿವರ ಮನವಿ

    ಮೈಸೂರು: ತಮ್ಮನ್ನು ಭೇಟಿ ಮಾಡಲು ಬರುವಾಗ ಹಾರ ಹಾಗೂ ಪೇಟಗಳನ್ನು ತರಬೇಡಿ. ಅದರ ಬದಲು 200 ಪುಟಗಳ ನೋಟ್ ಬುಕ್ (Book) ತನ್ನಿ ಎಂದು ಮೈಸೂರು ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ (Dr H.C Mahadevappa) ಮನವಿ ಮಾಡಿದ್ದಾರೆ.

    ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಪೇಟ ಹಾಗೂ ಶಾಲಿಗೆ ದುಂದು ವೆಚ್ಚ ಮಾಡಬೇಡಿ. ಅದೇ ಹಣದಲ್ಲಿ ನೋಟ್ ಬುಕ್ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ತೆಗೆದುಕೊಂಡು ಬನ್ನಿ. ಬಳಿಕ ಈ ಪುಸ್ತಕಗಳನ್ನು ಹಾಗೂ ಸಾಮಗ್ರಿಗಳನ್ನು ಮಕ್ಕಳಿಗೆ ಹಂಚಲಾಗುವುದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ- ಗಣೇಶನಾಗಿ ಬದಲಾದ ಆ್ಯಂಡ್ರೆ

    ಈ ಮೂಲಕ ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಸಚಿವ ಮಹದೇವಪ್ಪ ಮನವಿ ಮಾಡಿದ್ದಾರೆ. ಇದರಿಂದಾಗಿ ನೂತನ ಬದಲಾವಣೆಗೆ ಸಚಿವರು ಮುಂದಾಗಿದ್ದಾರೆ. ಅಲ್ಲದೇ ತಮಗೆ ನೀಡುವ ಶಿಕ್ಷಣ ಸಾಮಾಗ್ರಿಗಳನ್ನು ಶಾಲಾ ಮಕ್ಕಳಿಗೆ ನೀಡುವ ಭರವಸೆ ನೀಡಿದ್ದಾರೆ. ಸಚಿವರ ಈ ನಡೆಯಿಂದ ಉಳಿದವರಿಗೂ ಮಾದರಿಯಾಗಿದ್ದಾರೆ. ಇದನ್ನೂ ಓದಿ: ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಸ್ವಾವಲಂಬನೆ: ಹೆಚ್.ಸಿ ಮಹದೇವಪ್ಪ

    ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಸ್ವಾವಲಂಬನೆ: ಹೆಚ್.ಸಿ ಮಹದೇವಪ್ಪ

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಕೊಡುತ್ತಿರುವ ಗ್ಯಾರಂಟಿಗಳಿಂದ ಬಡವರ ಕುಟುಂಬಗಳು ಆರ್ಥಿಕವಾಗಿ ಸ್ವಾವಲಂಬನೆ ಆಗುತ್ತಿವೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ (H.C Mahadevappa) ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಕಾಂಗ್ರೆಸ್ ಗ್ಯಾರಂಟಿಗಳಿಂದ ಪ್ರಬಲ ಆರ್ಥಿಕ ವ್ಯವಸ್ಥೆಯು ದುರ್ಬಲ ಆಗುತ್ತದೆ ಎಂಬ ಪ್ರಧಾನಿ ಮೋದಿ (Narendra Modi) ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿಯವರು ಪ್ರಬಲವಾಗಿರುವ ಆರ್ಥಿಕ ವ್ಯವಸ್ಥೆಯಲ್ಲಿ ಎಷ್ಟು ಬಡತನ ನಿರ್ಮೂಲನೆ ಮಾಡಿದ್ದಾರೆ? ಇವರಿಂದ ಬಡತನ ನಿರ್ಮೂಲನೆ ಆಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೋಲಿನ ಹತಾಶೆಯಿಂದ ಬಿಜೆಪಿಯಿಂದ ಕಮಿಷನ್ ಆರೋಪ: ಹೆಚ್.ಸಿ ಮಹದೇವಪ್ಪ

    ನಮ್ಮ 5 ಗ್ಯಾರಂಟಿಗಳಿಂದ ಒಂದು ಕುಟುಂಬಕ್ಕೆ ತಿಂಗಳಿಗೆ 4-5 ಸಾವಿರ ರೂ. ವರಮಾನ ಬರುತ್ತದೆ. ವಾರ್ಷಿಕ 50 ಸಾವಿರ ರೂ. ಬೇರೆಯ ಕೆಲಸಗಳಿಗೆ ಸಹಾಯ ಆಗಲಿದೆ. ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆ ಕೊಟ್ಟರೆ ಅದು ತಪ್ಪಾ? ಬಡವರಿಗೆ ಕಾರ್ಯಕ್ರಮಗಳಿಗೆ ಹಣ ಕೊಟ್ಟರೆ ರಾಜ್ಯ ಮತ್ತು ದೇಶ ದಿವಾಳಿ ಆಗುತ್ತಾ? ಅದಾನಿ ಮತ್ತು ಅಂಬಾನಿಗೆ ಸಾಲ ಮನ್ನಾ ಮಾಡಿದರೆ ದೇಶ ದಿವಾಳಿ ಆಗೋದಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾನು ಗುತ್ತಿಗೆದಾರರಿಂದ ಕಮಿಷನ್ ಕೇಳಿದ್ದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಉದ್ಯೋಗ – ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುತ್ತೇವೆ: ಮಹದೇವಪ್ಪ

    ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಉದ್ಯೋಗ – ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುತ್ತೇವೆ: ಮಹದೇವಪ್ಪ

    ಬೆಂಗಳೂರು : ನಕಲಿ ಜಾತಿ ಪ್ರಮಾಣ ಪತ್ರ (Fake Caste Certificate) ಕೊಟ್ಟು ಉದ್ಯೋಗ ಪಡೆಯುವವರಿಗೆ ನೀಡುವ‌ ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ಸಮಾಜ ಕಲ್ಯಾಣ ‌ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ (HC Mahadevappa) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ ಗೋವಿಂದ ರಾಜು (Govind Raju) ನಕಲಿ ಜಾತಿ ಪತ್ರ ಕೊಟ್ಟು ಹುದ್ದೆ ಪಡೆದಿರುವ ವಿಷಯ ಪ್ರಸ್ತಾಪ ಮಾಡಿದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ, ರಾಜ್ಯದಲ್ಲಿ 836 ಮಂದಿ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಉದ್ಯೋಗ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. 836 ಪ್ರಕರಣಗಳಲ್ಲಿ 598 ಪ್ರಕರಣ ದಾಖಲಿಸಲಾಗಿದೆ. 238 ಕೇಸ್ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗಳಲ್ಲಿ ಬಾಕಿ ಇದೆ. 598 ಪ್ರಕರಣದಲ್ಲಿ 93 ನೌಕರರನ್ನ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆಗಸ್ಟ್‌ನಲ್ಲಿ ಫಲಾನುಭವಿಗಳ ಖಾತೆಗೆ ʻಗೃಹಲಕ್ಷ್ಮಿʼ – ಲಕ್ಷ್ಮಿ ಹೆಬ್ಬಾಳ್ಕರ್

     

    ನಕಲಿ ಜಾತಿ ಪತ್ರ ಕೊಟ್ಟು ಉದ್ಯೋಗ ಪಡೆಯೋದು ಸಂವಿಧಾನ ವಿರೋಧ. ಈಗ ಇರೋ‌ ಶಿಕ್ಷೆ ಪ್ರಮಾಣ ಸಾಕಾಗುವುದಿಲ್ಲ. ಹೀಗಾಗಿ ಇಂತಹ ಪ್ರಕರಣಕ್ಕೆ ಇರುವ ಶಿಕ್ಷೆ ಪ್ರಮಾಣ ಹೆಚ್ಚಳ ಮಾಡುವ ಚಿಂತನೆ ಮಾಡುತ್ತಿದ್ದೇವೆ. ಮುಂದಿನ ವಾರ ಗೃಹ ಇಲಾಖೆ ಜೊತೆ ಸಭೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೇಣುಗೋಪಾಲ್‌ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ಕೈವಾಡ: ಸೂಲಿಬೆಲೆ

    ವೇಣುಗೋಪಾಲ್‌ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ಕೈವಾಡ: ಸೂಲಿಬೆಲೆ

    ಬೆಂಗಳೂರು: ಟಿ ನರಸೀಪುರದಲ್ಲಿ ವೇಣುಗೋಪಾಲ್‌ (Venugopal) ಹತ್ಯೆಯ ಹಿಂದೆ ಸಚಿವ ಮಹದೇವಪ್ಪ (Mahadevappa) ಅವರ ಪುತ್ರ ಸುನಿಲ್‌ ಬೋಸ್‌ ಕೈವಾಡವಿದೆ ಎಂದು ಯುವ ಬ್ರಿಗೇಡ್‌ (Yuva Brigade) ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ನೇರವಾಗಿ ಆರೋಪ ಮಾಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ವೇಣುಗೋಪಾಲ್ ಹತ್ಯೆ ಹಿಂದೆ ಕಾಂಗ್ರೆಸ್ ಸರ್ಕಾರದ (Congress Government) ಕೈವಾಡ ಇದೆ. ಮಹದೇವಪ್ಪ ಮಗ ಸುನೀಲ್‍ಬೋಸ್ ತನ್ನ ಸಹಚರರಿಂದ ಈ ಕೆಲಸ ಮಾಡಿಸಿದ್ದಾರೆ ಎಂದು ವೇಣುಗೋಪಾಲ್ ಮನೆಯವರು, ಸ್ನೇಹಿತರು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

     

    ವೇಣುಗೋಪಾಲ್‌ ಮೃತದೇಹವನ್ನು ನೋಡಲು ತೆರಳಿದ ಮೊದಲ ದಿನವೇ ಟಿ ನರಸಿಪುರದ ಸ್ನೇಹಿತರು ಈ ಕೃತ್ಯವನ್ನು ಸುನಿಲ್‌ ಬೋಸ್‌ ಕಡೆಯವರು ಮಾಡಿದ್ದಾರೆ ಎಂದು ಹೇಳಿದ್ದರು. ಆದರೆ ಅಧಿಕೃತ ದಾಖಲೆಗಳು ಇಲ್ಲದೇ ಹೇಳುವುದು ಸರಿಯಲ್ಲ ಎಂದು ನಾನು ಹೇಳಲಿಲ್ಲ. ಆದರೆ ಈಗ ಸುನಿಲ್‌ ಬೋಸ್‌ ಜೊತೆಗೆ ಆರೋಪಿಗಳ ಇರುವ ಸಂಬಂಧ, ಫೋಟೋಗಳು ಎಲ್ಲವನ್ನು ನೋಡಿದಾಗ ಇದು ದೃಢವಾಗುತ್ತದೆ. ಹತ್ಯೆ ಮಾಡಿದ ಆರೋಪಿಗಳು ಕಾಂಗ್ರೆಸ್‌ ಪಕ್ಷ ಕಾರ್ಯಕರ್ತರು ಎಂದು ಹೇಳಿದರು.

    ದಲಿತ ವರ್ಗಕ್ಕೆ ಸೇರಿದ್ದ ವೇಣುಗೋಪಾಲ್‌ ಆರಂಭದಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಯುವ ಬ್ರಿಗೇಡ್‌ ಸಂಪರ್ಕಕ್ಕೆ ಬಂದ ಬಳಿಕ ತಂಡವನ್ನು ಕಟ್ಟಿ ಕೆರೆ ಸ್ವಚ್ಛಗೊಳಿಸಿ ಬಾಳೆ ಮಂಡಿ ಹಾಕುವ ಮಟ್ಟಕ್ಕೆ ಬೆಳೆದಿದ್ದರು. ಅಷ್ಟೇ ಅಲ್ಲದೇ ತಾಲೂಕಿನ ಯುವ ಬಿಗ್ರೇಡ್‌ ಸಂಚಾಲಕರಾಗಿದ್ದರು. ವೇಣುಗೋಪಾಲ್‌ ಬೆಳವಣಿಗೆಯನ್ನು ಸಹಿಸದೇ ಅವರನ್ನು ಸುನಿಲ್‌ ಬೋಸ್‌ ಕಡೆಯವರು ಹತ್ಯೆ ಮಾಡಿದ್ದಾರೆ ಎಂದು ದೂರಿದರು.

    ಕಳೆದ ವರ್ಷ ಹನುಮಾನ್‌ ಜಯಂತಿ ಕಾರ್ಯಕ್ರಮಕ್ಕೆ ಅಡ್ಡಿ ಮಾಡಿದ್ದರೂ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಿದ್ದರು. ಈ ಬಾರಿಯೂ ಕಾರ್ಯಕ್ರಮಕ್ಕೆ ಅಡ್ಡಿ ಮಾಡಲು ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಪುನಿತ್‌ ಫೋಟೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂಬುದನ್ನು ನಂಬಲು ಸಾಧ್ಯವಿಲ್ಲ. ವೇಣುಗೋಪಾಲ್‌ ಪುನೀತ್‌ ಅವರ ಅಭಿಮಾನಿಯಾಗಿದ್ದರು. ಪೊಲೀಸರು ತನಿಖೆಯನ್ನು ಸರಿಯಾಗಿ ನಡೆಸಿದರೆ ಸತ್ಯಾಂಶ ಹೊರ ಬರಬಹದು ಎಂದರು.

    ಇದೇ ವೇಳೆ ನಗರ ಪಾಲಿಕೆಯ ಬಿಜೆಪಿ ಸದಸ್ಯೆಯ ಸಹೋದರ 4ನೇ ಆರೋಪಿ ಆಗಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಕೃತ್ಯ ಯಾರೇ ಮಾಡಿದರೂ ಅದು ತಪ್ಪು. ಬಿಜೆಪಿ ಪಕ್ಷದ ಸದಸ್ಯನಾಗಿದ್ದರೆ ಆತನನ್ನು ವಜಾ ಮಾಡಲಿ, ಅದೇ ರೀತಿಯಾಗಿ ಸಂಪುಟದಿಂದ ಮಹದೇವಪ್ಪ ಅವರನ್ನು ಕೈಬಿಡಲಿ. ಈ ಮೂಲಕ ಎಲ್ಲಾ ಕಾಂಗ್ರೆಸ್‌ ನಾಯಕರಿಗೆ ಸಿದ್ದರಾಮಯ್ಯ ಒಂದು ಸಂದೇಶ ಕಳುಹಿಸಲಿ. ಒಂದು ವೇಳೆ ಈಗಲೇ ಕ್ರಮ ಕೈಗೊಳ್ಳದೇ ಇದ್ದರೆ ಮುಂದೆ ಮತ್ತಷ್ಟು ಯುವ ಜನರ ಹತ್ಯೆಯಾಗಬಹುದು. ಮತದಾನಕ್ಕೆ ಹಾಕಿದ ಶಾಯಿ ಇನ್ನೂ ಅಳಿಸಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು 60 ದಿನ ಆಗಿಲ್ಲ. ಇನ್ನು 60 ತಿಂಗಳಲ್ಲಿ ಎಷ್ಟು ಮಂದಿ ಬಲಿಯಾಗಬೇಕು ಎಂದು ಸೂಲಿಬೆಲೆ ಸಿದ್ದರಾಮಯ್ಯ ಸರ್ಕಾರವನ್ನು ಪ್ರಶ್ನಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

    ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

    ಬೆಂಗಳೂರು: ಕಾಂಗ್ರೆಸ್ ಯುವ ನಾಯಕರ ಒಳ ಜಗಳ ಈಗ ಬೀದಿಗೆ ಬಂದಿದೆ. ಈ ಬೀದಿ ಜಗಳವನ್ನು ಶಮನ ಮಾಡಲು ಈಗ ಹಿರಿಯ ನಾಯಕರು ಅಖಾಡಕ್ಕೆ ಧುಮುಕಿದ್ದಾರೆ.

    ರಮ್ಯಾ, ನಲಪಾಡ್ ಮಧ್ಯೆ ವಾಕ್ಸಮರದ ಬಳಿಕ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದರು. ಈಗ ಕಾಂಗ್ರೆಸ್‍ನ ಹಿರಿಯ ನಾಯಕ, ಮಾಜಿ ಸಚಿವ ಮಹದೇವಪ್ಪ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

     

    ಟ್ವೀಟ್ ಮಾಡಿದ ಅವರು, ನಮ್ಮ ಹೋರಾಟ ಬಿಜೆಪಿ ವಿರುದ್ಧ ಇರಬೇಕು ಹೊರತು ರಮ್ಯಾ ವಿರುದ್ಧ ಅಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಅವರ ಬೆಂಬಲಿಗರಿಗೆ ಟಾಂಗ್ ನೀಡಿದ್ದಾರೆ.

    DKS AND RAMYA

    ಎಂಬಿ ಪಾಟೀಲ್ ಅಶ್ವಥ್ ನಾರಾಯಣ ಭೇಟಿ ವಿಚಾರಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ ಬಳಿಕ ಕಾಂಗ್ರೆಸ್ ಒಳಜಗಳ ಈಗ ಬೀದಿಗೆ ಬಂದಿದೆ. ಡಿಕೆಶಿ ಹೇಳಿಕೆ ವಿರೋಧಿಸಿ ರಮ್ಯಾ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    ನನ್ನನ್ನು ಟ್ರೋಲ್ ಮಾಡಲು ನೀವು ಯಾವುದೇ ತೊಂದರೆ ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದೆ ನಟಿ ರಮ್ಯಾ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ್ದರು. ಈ ಹಿನ್ನೆಲೆ ಮಾಧ್ಯಮಗಳ ಮೂಲಕ ರಮ್ಯಾ ಟ್ವೀಟ್‍ಗೆ ಉತ್ತರಿಸಿದ ಡಿಕೆ ಶಿವಕುಮಾರ್, ಯಾರ್ಯಾರಿಗೆ ಏನು ನೋವಿದೆಯೋ ಏನು ದುಗುಡ ಇದೆಯೋ ಗೊತ್ತಿಲ್ಲಾ ಎಂದಿದ್ದರು.

    ಇಬ್ಬರ ನಡುವಿನ ಟ್ವೀಟ್ ವಾರ್‌ಗೆ ಸಂಬಂಧಪಟ್ಟಂತೆ ಕಾಂಗ್ರೆಸ್‍ನ ಹಲವು ನಾಯಕರು ಪ್ರತಿಕ್ರಿಯಿಸಿದ್ದರು. ನಿನ್ನೆ ಉಡುಪಿಯಲ್ಲಿ ಮೊಹಮ್ಮದ್ ನಲಪಾಡ್ ಮಾತನಾಡಿ, ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಟಾಂಗ್ ಕೊಟ್ಟಿದ್ದರು.

  • ಸಿದ್ದು ಹೊಗಳಿದ ಪ್ರತಾಪ್ ಸಿಂಹನ ಕಾಲೆಳೆದ ಡಾ.ಮಹದೇವಪ್ಪ

    ಸಿದ್ದು ಹೊಗಳಿದ ಪ್ರತಾಪ್ ಸಿಂಹನ ಕಾಲೆಳೆದ ಡಾ.ಮಹದೇವಪ್ಪ

    ಮೈಸೂರು: ಫೇಸ್‍ಬುಕ್‍ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೊಗಳಿದ್ದ ಸಂಸದ ಪ್ರತಾಪ್‍ಸಿಂಹ ವಿರುದ್ಧ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಫೇಸ್‍ಬುಕ್‍ನಲ್ಲೇ ಟಾಂಗ್ ಕೊಟ್ಟಿದ್ದಾರೆ.

    ಪ್ರತಾಪ್ ಸಿಂಹ ಪೋಸ್ಟ್ ಗೆ ಖಾರವಾದ ಪ್ರತಿಕ್ರಿಯೆ ನೀಡಿರುವ ಮಹದೇವಪ್ಪ, “ಕಳೆದ ಚುನಾವಣೆಯಲ್ಲಿ ಬಿಜೆಪಿಗರು ಸುಳ್ಳು ಪ್ರಚಾರ ಮಾಡಿದರು. ಶವ ರಾಜಕೀಯ ಮಾಡುತ್ತಾ ಅಪಪ್ರಚಾರ ಮಾಡಿದರು. ಆದರೆ ಈಗ ಸಿದ್ದರಾಮಯ್ಯರ ಸಾಧನೆಯನ್ನ ಶ್ಲಾಘಿಸುತ್ತಾರೆ. ಇದು ಬಿಜೆಪಿಗರ ಇಬ್ಬಂದಿ ನೀತಿ. ಈಗ ಸಿದ್ದರಾಮಯ್ಯರನ್ನ ಹೊಗಳಿರುವ ಈ ವ್ಯಕ್ತಿ ಮುಂದಿನ ಚುನಾವಣೆಗೆ ಇನ್ನೊಂದು ವರಸೆ ತೆಗೆಯಬಹುದು”ಎಂದು ಗರಂ ಆಗಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪ್ರತಾಪ್ ಸಿಂಹ

    “ಹಾಗಾಗಿ ಯಾರು ಏನೇ ಹೇಳಿದರೂ ಜನರಿಗೆ ಕೆಲಸ ಮಾಡುವುದಷ್ಟೇ ನಮ್ಮ ಗುರಿಯಾಗಿರಬೇಕೆಂಬ ಸ್ಪಷ್ಟತೆ ನನಗಿದೆ. ಈ ನಿಟ್ಟಿನಲ್ಲಿ ಇಂತಹವರ ಕುತಂತ್ರ, ಇಬ್ಬಂದಿ ತನ ಮತ್ತು ಆತ್ಮವಂಚನೆಯ ಮಾತುಗಳನ್ನು ನಮ್ಮ ಜನರು ಅರ್ಥ ಮಾಡಿಕೊಳ್ಳಬೇಕಿರುವುದು ಈ ಕ್ಷಣದ ತುರ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯರನ್ನು ಹೊಗಳಿದ್ದ ಪ್ರತಾಪ್ ಅವರಿಗೆ  ಟಾಂಗ್ ಕೊಟ್ಟಿದ್ದಾರೆ.

    ಪ್ರತಾಪ್ ಸಿಂಹ ಪೋಸ್ಟ್:
    “ಆತ್ಮೀಯರಾದ ಅಣ್ಣಯ್ಯ ನಾಯಕರು ಲಘು ಹೃದಯಾಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆ ಸೇರಿದ್ದು, ಅವರನ್ನು ನೋಡಲು ಹೋಗಿದ್ದೆ. ಕಟ್ಟಡ ಮತ್ತು ವ್ಯವಸ್ಥೆ ಅದ್ಭುತವಾಗಿದೆ. 168 ಕೋಟಿ ಕೊಟ್ಟು ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬ್ರಿಗೆ, ಉತ್ತಮ ಸೇವೆ ನೀಡುತ್ತಿರುವ ಮಂಜುನಾಥ್ ಅವರಿಗೆ ಧನ್ಯವಾದ” ಎಂದು ಪೋಸ್ಟ್ ಹಾಕಿದ್ದಾರೆ.

    ಬಿಜೆಪಿಯಲ್ಲಿದ್ದರು ಸಿದ್ದರಾಮಯ್ಯ ಸರ್ಕಾರದ ಯೋಜನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ಪ್ರತಾಪ್‍ಸಿಂಹ ಬಗ್ಗೆ ನೆಟ್ಟಿಗರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಮೋದಿಗೆ ಅಮೆರಿಕದಲ್ಲಿ ಬುದ್ಧ ಬೇಕು, ಭಾರತದಲ್ಲಿ ಯುದ್ಧ ಬೇಕು: ಮಹದೇವಪ್ಪ ಕಿಡಿ

    ಮೋದಿಗೆ ಅಮೆರಿಕದಲ್ಲಿ ಬುದ್ಧ ಬೇಕು, ಭಾರತದಲ್ಲಿ ಯುದ್ಧ ಬೇಕು: ಮಹದೇವಪ್ಪ ಕಿಡಿ

    ಮಂಡ್ಯ: ಟಿಪ್ಪು ಸುಲ್ತಾನ್ ಜಯಂತಿಯನ್ನು ವಿರೋಧಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಸಿ ಮಹದೇವಪ್ಪ ಕಿಡಿಕಾರಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದಲ್ಲಿ ಬುದ್ಧ ಬೇಕು, ಭಾರತದಲ್ಲಿ ಯುದ್ಧ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

    ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಸುಲ್ತಾನ್ ರಾಜ್ಯದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆಯನ್ನ ಜಾರಿಗೆ ತಂದ ವ್ಯಕ್ತಿ. ಆತ ದೇಶದ ಸ್ವಾತಂತ್ರ್ಯ ಸೇನಾನಿ. ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಒಬ್ಬ ಶ್ರೀಮಂತನಿಗೂ ಜಮೀನು ಕೊಟ್ಟಿರಲಿಲ್ಲ. ದೇವದಾಸಿ ಪದ್ಧತಿಯನ್ನು ಅಳಿಸಿ ಹಾಕಿ ರೇಷ್ಮೆ ಕೃಷಿಯನ್ನು ಪರಿಚಯಿಸಿದ್ದ. ವಾಣಿಜ್ಯ ವಹಿವಾಟಿಗಾಗಿ ಹರಿಹರ, ಗುಬ್ಬಿಯನ್ನು ಕೇಂದ್ರವನ್ನಾಗಿ ಮಾಡಿಕೊಂಡಿದ್ದ. ಶೃಂಗೇರಿಯ ಶಾರದಾ ಪೀಠದಲ್ಲಿ ಮರಾಠರು ದಾಳಿ ಮಾಡಿ ಚಿನ್ನದ ಕಳಶವನ್ನು ಹೋತ್ತುಕೊಂಡು ಹೋಗಿದ್ದರು. ಆಗ ಟಿಪ್ಪು ಮರಾಠರ ವಿರುದ್ಧ ಹೋರಾಡಿ ಚಿನ್ನದ ಕಳಸವನ್ನು ಮತ್ತೆ ಶೃಂಗೇರಿ ಮಠಕ್ಕೆ ತಂದು ಕೊಟ್ಟಿದ್ದ ಎಂದು ಹೇಳಿದರು. ಇದನ್ನೂ ಓದಿ: ಟಿಪ್ಪು ಕಾಲದಲ್ಲಿರುತ್ತಿದ್ದರೆ ಅಬ್ದುಲ್ ಸಿದ್ದರಾಮಯ್ಯ ಆಗ್ತಿದ್ರು- ಅಶೋಕ್

    ಹಿಂದೂ ಮತಾಂದರು ಈಗ ಮತಾಂದ ಕೆಲಸಕ್ಕೆ ಕೈ ಹಾಕಿದ್ದಾರೆ. ಟಿಪ್ಪು ಅಂತಹ ಚಾರಿತ್ರಿಕ ಪುರಷನನ್ನು ಚರಿತ್ರೆಯಿಂದ ಹೋಗಲಾಡಿಸಲು ಮುಂದಾಗಿದ್ದಾರೆ. ಹಾಗೆಯೇ ರಾಜ್ಯ ಸರ್ಕಾರ ಬೌದ್ಧಿಕ ದಿವಾಳಿಯಿಂದ ಟಿಪ್ಪುವನ್ನು ಪಠ್ಯದಿಂದ ತೆಗೆಯಲು ಮುಂದಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಜೆಪಿಗೆ ಟಿಪ್ಪು ಬೇಡ, ಬಿಎಸ್‍ವೈ ಜೈಲಿಗೆ ಹೋದ ವಿಚಾರವನ್ನು ಮಕ್ಕಳು ಓದಬೇಕಿದೆ – ತನ್ವೀರ್ ಸೇಠ್

  • ಅರಸ್ ಬಳಿಕ ರಾಜ್ಯ ಕಂಡ ಉತ್ತಮ ಸಿಎಂ ಅಂದ್ರೆ ಅದು ಸಿದ್ದರಾಮಯ್ಯ : ಮಹದೇವಪ್ಪ

    ಅರಸ್ ಬಳಿಕ ರಾಜ್ಯ ಕಂಡ ಉತ್ತಮ ಸಿಎಂ ಅಂದ್ರೆ ಅದು ಸಿದ್ದರಾಮಯ್ಯ : ಮಹದೇವಪ್ಪ

    ಹುಬ್ಬಳ್ಳಿ: ಮಾಜಿ ಸಿಎಂ ದೇವರಾಜ್ ಅರಸ್ ಅವರ ನಂತರ ರಾಜ್ಯಕ್ಕೆ ಉತ್ತಮ ಆಡಳಿತ ನೀಡಿದ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ ಎಂದು ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಹಾಡಿ ಹೊಗಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ದೇವರಾಜ್ ಅರಸ್ ಅವರ ನಂತರ ಉತ್ತಮ ಆಡಳಿತ ಮಾಡಿದ ವ್ಯಕ್ತಿ. ಅಭಿವೃದ್ಧಿ ಪರವಾದ ಆಡಳಿತ ಕೊಟ್ಟದ್ದಾರೆ ಎಂದರು.

    ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಆದರೆ ಜನರ ಮನಸ್ಸಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರು ಮುಖ್ಯಮಂತ್ರಿ ಅಲ್ಲದಿದ್ದರೂ ಜನರಿಗೆ ಮಾತ್ರ ಮುಖ್ಯಮಂತ್ರಿಯೇ. ದೋಸ್ತಿ ಸರ್ಕಾರದ ಎರಡು ಪಕ್ಷದ ವರಿಷ್ಠರು ಸೇರಿ ಈಗಾಗಲೇ ಮುಖ್ಯಮಂತ್ರಿ ಅವರನ್ನ ನೇಮಕ ಮಾಡಿದ್ದಾರೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ, ದಲಿತರು ಮುಖ್ಯಮಂತ್ರಿ ಆಗಬೇಕೆಂಬ ಕೂಗೂ ಇದೆ. ಹೀಗಾಗಿ ದಲಿತ ಮುಖಂಡರಿಗೆ ಸಿಎಂ ಆಗುವ ಅವಕಾಶ ಸಿಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ನಾಯಕ ವಿಶ್ವನಾಥ್ ಮಾತನಾಡಿರುವ ಬಗ್ಗೆ ಪ್ರತಿಕ್ರಯಿಸಿ, ಗುಣಕ್ಕೆ ಮತ್ಸರ ಪಡೋರು ಲೀಡರ್ ಅಲ್ಲ, ಸಾರ್ವಜನಿಕ ಸ್ಥಳದಲ್ಲಿ ಬದುಕಲು ಅರ್ಹರಲ್ಲ ಎಂದು ಹೇಳಿ ಟಾಂಗ್ ನೀಡಿದರು.

  • ನನ್ನ ಡೆಡ್ ಬಾಡಿ ಕೂಡ ಬಿಜೆಪಿಗೆ ಹೋಗಲ್ಲ- ಕಾಂಗ್ರೆಸ್ ಸೋತಿದ್ದಕ್ಕೆ ಕಾರಣಕೊಟ್ಟ ಮಹದೇವಪ್ಪ

    ನನ್ನ ಡೆಡ್ ಬಾಡಿ ಕೂಡ ಬಿಜೆಪಿಗೆ ಹೋಗಲ್ಲ- ಕಾಂಗ್ರೆಸ್ ಸೋತಿದ್ದಕ್ಕೆ ಕಾರಣಕೊಟ್ಟ ಮಹದೇವಪ್ಪ

    ಮೈಸೂರು: ಬಿಜೆಪಿ ತನ್ನ ಎಲ್ಲ ವೋಟನ್ನು ಜೆಡಿಎಸ್‍ಗೆ ಹಸ್ತಾಂತರ ಮಾಡಿ ಮಂಗನ ಥರ ಆಯಿತು. ಇದರಿಂದಾಗಿ ಜೆಡಿಎಸ್‍ಗೆ ಅದೃಷ್ಟ ಬಂತು ಎಂದು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನಗೆ ಈ ಚುನಾವಣೆಯಿಂದ ಆಘಾತವಾಯಿತು. ಸರ್ಕಾರ ಮತ್ತೆ ಬರುವ ಅವಕಾಶವಿದ್ದರೂ ಸರ್ಕಾರ ಬಂದಿಲ್ಲ ಅನ್ನೋ ನೋವು ಇದೆ. ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಊಹೆಗೆ ನಿಲುಕದ ಶಾಕ್ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ನನ್ನ ಸೋಲಿಗೆ ಜೆಡಿಎಸ್ ಗೆಲುವು ಕಾರಣವಲ್ಲ. ಬದಲಿಗೆ ಬಿಜೆಪಿ ತಾನು ಗೆಲ್ಲಲು ಆಗದ ಜಾಗದಲ್ಲಿ ತನ್ನ ವೋಟುಗಳನ್ನ ಜೆಡಿಎಸ್‍ಗೆ ವರ್ಗಾವಣೆ ಮಾಡಿದ್ದೆ ಕಾರಣವಾಗಿದೆ. ಕಾಂಗ್ರೆಸ್ಸನ ಕಳೆದುಕೊಂಡಿದ್ದರಿಂದ ರಾಜ್ಯಕ್ಕೆ ನಷ್ಟವಾಯಿತು ಎಂದರು. ಇದನ್ನು ಓದಿ: ಚುನಾವಣೆಯಲ್ಲಿ ನಾವು ಸೋತಿದ್ದು ಹೇಗೆ: ಕೆಪಿಸಿಸಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಆತ್ಮಾವಲೋಕನ

    ಇದೇ ವೇಳೆ ಬಿಜೆಪಿಗೆ ಸೇರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಎಂದಿಗೂ ಪಕ್ಷಾಂತರಿ ಅಲ್ಲ. ನಾನು ಒಂದು ಸಿದ್ಧಾಂತ ನೀತಿಯನ್ನು ಇಟ್ಟುಕೊಂಡು 35 ವರ್ಷದಿಂದ ಸಾರ್ವಜನಿಕ ಜೀವನದಲ್ಲಿ ಇದ್ದೇನೆ. ಕಾಂಗ್ರೆಸ್ಸಿನಲ್ಲಿ ಇದ್ದೇನೆ. ಕಾಂಗ್ರೆಸ್ಸಿನಲ್ಲಿಯೇ ಕೊನೆಯಾಗುತ್ತೇನೆ. ಸಿದ್ದರಾಮಯ್ಯನವರೇ ನಮ್ಮ ನಾಯಕರು. ನಾನು ಬಿಜೆಪಿ ಸೇರುತ್ತೇನೆ ಎಂದು ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದಿರುವ ಕೆಲವರು ಪಿತೂರಿ ಮಾಡುತ್ತಿದ್ದಾರೆ ಎಂದು ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರಕ್ಕೆ ಇನ್ನು ಎರಡು ತಿಂಗಳು ತುಂಬಿಲ್ಲ. ಅವರ ಆಡಳಿತ ಕಾರ್ಯನಿರ್ವಹಣೆಯನ್ನು ನೋಡಲು ಆರು ತಿಂಗಳು ಸಮಯ ಬೇಕು. ಎರಡು ಪಕ್ಷಗಳ ಪ್ರಣಾಳಿಕೆ ಇದೆ. ಇದನ್ನು ಸರಿದೂಗಿಸಿಕೊಂಡು ನಡೆಸಿಕೊಂಡು ಹೋದರೆ 5 ವರ್ಷ ಪೂರೈಸುತ್ತದೆ. ಸಮ್ಮಿಶ್ರ ಸರ್ಕಾರ 5 ಪೂರೈಸಬೇಕು ಎಂದು ನಮ್ಮ ಆಶಯವಾಗಿದೆ. ಬಜೆಟನ್ನು ಮುಖ್ಯಮಂತ್ರಿಯಾಗಿ ಮಂಡಿಸಿದ್ದಾರೆ. ಹಿಂದಿನ ಸರ್ಕಾರದ ಬಜೆಟನ್ನೇ ಮುಂದುವರಿಸಿದ್ದಾರೆ. ಸದ್ಯಕ್ಕೆ ಪಕ್ಷದಲ್ಲಿ ಇದ್ದು ಕಾರ್ಯನಿರ್ವಹಿಸುತ್ತೇನೆ ಎಂದು ಮಹದೇವಪ್ಪ ತಿಳಿಸಿದರು.

  • ನಿಂಬೆಹಣ್ಣು ಇಟ್ಕೊಂಡು ಮಾಧ್ಯಮಗಳಿಗೆ ಉತ್ತರ ಕೊಟ್ರು ಸಚಿವ ಮಹದೇವಪ್ಪ

    ನಿಂಬೆಹಣ್ಣು ಇಟ್ಕೊಂಡು ಮಾಧ್ಯಮಗಳಿಗೆ ಉತ್ತರ ಕೊಟ್ರು ಸಚಿವ ಮಹದೇವಪ್ಪ

    ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮೊಯ್ಲಿ ಟ್ವೀಟ್ ನಿಂದ ಇವತ್ತು ಲೋಕೋಪಯೋಗಿ ಸಚಿವ ಮಹದೇವಪ್ಪ ಟೆನ್ಷನ್ ಆದಂತೆ ಕಂಡು ಬಂದಿದ್ದರು.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಸಮಯದಲ್ಲಿ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ಒತ್ತಡ ನಿವಾರಣೆ ಮಾಡಿಕೊಳ್ಳುತ್ತಿದ್ದರು.

    ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಬಳಿಕ ಮಾತನಾಡಿದ ಅವರು, ನಿಂಬೆಹಣ್ಣ ನಾನು ಇಟ್ಕೊಂಡಿದ್ದಲ್ಲ. ಬೇರೆಯವರು ಕೊಟ್ಟಿದ್ದು ಎಂದು ಹಾಸ್ಯ ಮಾಡಿದರು. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದನ್ನ ಕೈಯಲ್ಲಿ ಇಟ್ಟುಕೊಳ್ಳೊದರಿಂದ ಒಳ್ಳೆಯದು. ನಾನು ವೈಜ್ಞಾನಿಕವಾಗಿ ಚಿಂತನೆ ಮಾಡುತ್ತೇನೆ ಎಂದು ಹೇಳಿ ನಿಂಬೆಹಣ್ಣನ್ನು ಕೈಯಲ್ಲಿ ಇಟ್ಟುಕೊಂಡಿದ್ದಕ್ಕೆ ಸಮರ್ಥನೆ ನೀಡಿದರು. ಇದನ್ನೂ ಓದಿ: ಟ್ವೀಟ್‍ಗೆ ನನಗೂ ಯಾವುದೇ ಸಂಬಂಧವಿಲ್ಲ, ಕೈ ಗೆಲುವಿನ ವಾತಾವರಣವನ್ನು ಕೆಡಿಸಲು ವಿರೋಧಿಗಳ ಕೆಲ್ಸ: ಮಹದೇವಪ್ಪ