Tag: ಮಹಾಂತೇಶ ಕವಟಗಿಮಠ

  • ಅತಿಯಾದ ಆತ್ಮವಿಶ್ವಾಸದಿಂದ ಸೋಲು: ಕವಟಗಿಮಠ

    ಅತಿಯಾದ ಆತ್ಮವಿಶ್ವಾಸದಿಂದ ಸೋಲು: ಕವಟಗಿಮಠ

    ಬೆಳಗಾವಿ: ಬಿಜೆಪಿ ಪಕ್ಷದ ಸಮನ್ವಯದ ಕೊರತೆಯೇ ವಿಧಾನ ಪರಿಷತ್ ಚುನಾವಣೆ ಸೋಲಿಗೆ ಕಾರಣ ಎಂದು ಬಿಜೆಪಿ ನಯಕ ಮಹಾಂತೇಶ ಕವಟಗಿಮಠ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೋಡೌನ್‌ ಮೇಲೆ ಅಧಿಕಾರಿಗಳ ದಾಳಿ

    ಬೆಳಗಾವಿ ಪರಿಷತ್ ಸೋಲಿನ ಅವಲೋಕನ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲ ಪೋಸ್ಟ್ ಮಾರ್ಟಮ್ ಆಗಿದೆ ಇನ್ನೇನು ಮಾತನಾಡಬೇಕು. ಸಭೆಯಲ್ಲಿ ಎಲ್ಲಿ ತಪ್ಪಾಗಿದೆ ಎನ್ನುವ ಬಗ್ಗೆ ರಾಜ್ಯಾಧ್ಯಕ್ಷರು ವಿವರ ಪಡೆದುಕೊಂಡಿದ್ದಾರೆ. ಯಾರ ಬಗ್ಗೆಯೂ ಶಿಸ್ತು ಕ್ರಮದ ಬಗ್ಗೆ ಚರ್ಚೆಯಾಗಿಲ್ಲ ಎಂದರು. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

    ಪಕ್ಷೇತರರ ಅಭ್ಯರ್ಥಿಯಿಂದ ಸೋಲಾಯ್ತು ಎಂದು ನಾನು ಹೇಳೋಕೆ ಆಗಲ್ಲ. ಪ್ರಥಮ ಪಾಶಸ್ತ್ಯದ ಮತ ಕೇಳೋದರಲ್ಲಿ ವಿಫಲವಾಗಿದ್ದೇವೆ ಎನ್ನುವುದು ಕಷ್ಟ. ಆದರೆ ಅತಿಯಾದ ಆತ್ಮವಿಶ್ವಾಸ ಸೋಲಿಗೆ ಕಾರಣವಾಯ್ತು. ಅಂತರಿಕವಾಗಿ ಸಾಕಷ್ಟು ಚರ್ಚೆಯಾಗಿದೆ. ಈ ಬಗ್ಗೆ ಎಲ್ಲ ಹೇಳೋಕೆ ಆಗೋದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

  • ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ

    ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ

    ಚಿಕ್ಕೋಡಿ: ಜಾತಿ-ಜಾತಿ ಹಾಗೂ ಧರ್ಮ-ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕಾರ್ಯವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಚಿಕ್ಕೋಡಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ, ವಿವಿಧ ಕಾಮಗಾರಿಗಳಿಗೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಜೊತೆಗೂಡಿ ಉದ್ಘಾಟನೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನಡುವಳಿಕೆ ತಾಲಿಬಾನಿಗಳ ತರ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಹಿಂದು ಪರವಾಗಿ ಇರುವ ಪಕ್ಷ ಅಂದ್ರೆ ಭಾರತಿ ಜನತಾ ಪಕ್ಷ, ಭಾರತ ದೇಶ ಅಖಂಡವಾಗಿರುವ ಹಿಂದೂ ದೇಶ, ಇಲ್ಲಿರುವ ಎಲ್ಲಾ ರಾಷ್ಟ್ರೀಯ ಜನರು ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಪಕ್ಷದ ಉದ್ದೇಶ. ಆದರೆ ಕಾಂಗ್ರೆಸ್ ಪಕ್ಷ ಮತ ಮತಗಳ ನಡುವೆ ಮತ್ತು ಧರ್ಮ ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ – ಆಪ್ ವಿರೋಧ

    ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗಿಲ್ಲ. ಸಿದ್ದರಾಮಯ್ಯ ವೀರಶೈವ ಲಿಂಗಾಯತ ಧರ್ಮವನ್ನು ಒಡೆಯಲು ಹೋಗಿ ಅಧಿಕಾರ ಕಳೆದುಕೊಂಡರು. ಭಾರತೀಯ ಜನತಾ ಪಕ್ಷ ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದತೆಯಿಂದ ಹಾಗೂ ವಿಶ್ವಾಸ ಹೊಂದಿರುವ ಪಕ್ಷ ಹೀಗಾಗಿ ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ಬಿಜೆಪಿಗೆ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡ್ತೇವೆ – ಕಾಂಗ್ರೆಸ್

    ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತೆ. ಎಂದು ಅವರು ಕಾಗವಾಡ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಪರ್ವ ಶುರುವಾಗಿದೆ ಒಂದೇ ದಿನ ಒಂದೇ ಗ್ರಾಮದಲ್ಲಿ 22 ಕಾಮಗಾರಿಗಾಗಿ ಚಾಲನೆ ನೀಡಲಾಗಿದೆ. ಇದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.

  • ಕೊರೊನಾ ಭೀತಿ- ಸ್ವತಃ ಆದೇಶ ಹೊರಡಿಸಿ ಅದ್ದೂರಿ ಮದ್ವೆಯಲ್ಲಿ ಸಿಎಂ ಭಾಗಿ

    ಕೊರೊನಾ ಭೀತಿ- ಸ್ವತಃ ಆದೇಶ ಹೊರಡಿಸಿ ಅದ್ದೂರಿ ಮದ್ವೆಯಲ್ಲಿ ಸಿಎಂ ಭಾಗಿ

    – ರಾಜ್ಯದಲ್ಲಿ ಕೊರೊನಾ ಭೀತಿ ಇದ್ದರೂ ಅದ್ದೂರಿ ಮದುವೆ
    – ಎಂಎಲ್‍ಸಿ ಕವಟಗಿಮಠ ಮಗಳ ಮದುವೆಯಲ್ಲಿ ಗಣ್ಯಾತಿಗಣ್ಯರು ಭಾಗಿ

    ಬೆಳಗಾವಿ: ರಾಜ್ಯಾದ್ಯಂತ ಅದ್ದೂರಿ ಮದುವೆಗೆ ಬ್ರೇಕ್ ಹಾಕಿದ್ದು ನೂರಕ್ಕೂ ಹೆಚ್ಚು ಜನ ಒಂದೆಡೆ ಸೇರಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದರು. ಆದರೆ ಇದೆಲ್ಲವನ್ನೂ ಗಾಳಿಗೆ ತೂರಿದ ಸರ್ಕಾರದ ಮುಖ್ಯ ಸಚೇತಕ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದಾರೆ.

    ಅಷ್ಟೇ ಅಲ್ಲದೆ ಈ ಮದುವೆಯಲ್ಲಿ ಸಚಿವರು, ಮಾಜಿ ಶಾಸಕರು ಗಣ್ಯಾತಿಗಣ್ಯರು ಸೇರಿದಂತೆ ಸಿಎಂ ಯಡಿಯೂರಪ್ಪ ಅವರು ಕೂಡ ಭಾಗವಹಿಸಿ ನವ ದಂಪತಿಗಳಿಗೆ ಆಶೀರ್ವಾದ ಮಾಡಿದ್ದಾರೆ. ಆದರೆ ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ. ಸರ್ಕಾರದ ಮುಖ್ಯ ಸಚೇತಕರೇ ಸಿಎಂ ಆದೇಶವನ್ನು ಗಾಳಿಗೆ ತೂರಿದ್ದಾರೆ. ಹಾಗಾದರೆ ಸಿಎಂ ಆದೇಶ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಮಗಳ ಮದುವೆಗೆ ಅನ್ವಯವಾಗುದಿಲ್ವಾ ಎಂಬ ಪ್ರಶ್ನೆ ಸಾರ್ವಜನಕರಿಂದ ಕೇಳಿ ಬರುತ್ತಿದೆ.

    ಬೆಳಗಾವಿಯ ಉದ್ಯಮ್ ಬಾಗ್‍ನಲ್ಲಿರುವ ಶಗುನ್ ಗಾರ್ಡನ್‍ನಲ್ಲಿ ಮಹಾಂತೇಶ್ ಕವಟಗಿಮಠ ಮಗಳ ಮದುವೆ ನಡೆಯಿತು. ಈ ಮದುವೆಗೆ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಮದುವೆಗೆ ಆಗಮಿಸಿದ್ದರು. ಅದ್ದೂರಿ ಮದುವೆ ತಡೆಯಲು ಅಧಿಕಾರಿಗಳ ಮಿನಾಮೇಷ ತೋರಿದರು. ಜೊತೆಗೆ ಜಿಲ್ಲಾಡಳಿತ ಹಾಗೂ ಪೊಲೀಸರು ಶ್ರೀರಕ್ಷೆ ಒದಗಿಸಿದ್ದರು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಜನಪ್ರತಿನಿಧಿಗಳು:
    ಅದ್ದೂರಿ ಮದುವೆ ನಡೆಸದಂತೆ ಆದೇಶ ಹೊರಡಿಸಿದ್ದ ಸಿಎಂ ಯಡಿಯೂರಪ್ಪ ಅವರ ಆದಿಯಾಗಿ ಜನಪ್ರತಿನಿಧಿಗಳಾದ ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವ ಶ್ರೀಮಂತ ಪಾಟೀಲ್, ಸಚಿವೆ ಶಶಿಕಲಾ ಜೊಲ್ಲೆ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಮದುವೆಗೆ ಆಗಮಿಸಿದ್ದರು. ಜೊತೆಗೆ ಕಾಶಿ ಜಗದ್ಗುರುಗಳಾದ ಚೆನ್ನಸಿದ್ದರಾಮ ಪಂಡಿತರಾದ್ಯೆ ಶಿವಾಚಾರ್ಯ ಸ್ವಾಮೀಜಿ, ಗದಗದ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿದ್ದರು.

  • ಮೀಡಿಯಾ ಗ್ರೂಪ್‍ನಲ್ಲಿ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟ ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ

    ಮೀಡಿಯಾ ಗ್ರೂಪ್‍ನಲ್ಲಿ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟ ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ

    ಬೆಳಗಾವಿ: ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ ಮಾಧ್ಯಮಗಳಿರುವ ವಾಟ್ಸಪ್ ಗ್ರೂಪಿಗೆ ಅಶ್ಲೀಲ ಫೋಟೋಗಳನ್ನು ಹಾಕಿದ್ದಾರೆ.

    ಇಂದು ಸಂಜೆ ಮಹಾಂತೇಶ ಕವಟಗಿಮಠ ಬೆಳಗಾವಿ ಮೀಡಿಯಾ ಫೋರ್ಸ್ ಗ್ರೂಪ್‍ನಲ್ಲಿ ಫೋಟೋ ಹಾಕಿ ಗ್ರೂಪಿನಲ್ಲಿರುವ ಸದಸ್ಯರಿಗೆ ಮುಜುಗರವನ್ನು ಉಂಟು ಮಾಡಿದ್ದಾರೆ.

    ಈ ಗ್ರೂಪಿನಲ್ಲಿ ರಾಜಕಾರಣಿಗಳು, ಮಾಧ್ಯಮದ ವ್ಯಕ್ತಿಗಳು, ಅಧಿಕಾರಿಗಳು ಸೇರಿ ಸುಮಾರು 50ಕ್ಕೂ ಹೆಚ್ಚು ಮಂದಿ ಸದಸ್ಯರಿದ್ದು ಸಂಜೆ ಕವಟಗಿಮಠ ಅವರ ವಾಟ್ಸಪ್ ನಂಬರ್ ನಿಂದ ಫೋಟೋಗಳು ಬಂದಿವೆ. ಈ ಫೋಟೋಗಳನ್ನು ನೋಡಿದ ಕೂಡಲೇ 30ಕ್ಕೂ ಹೆಚ್ಚು ಸದಸ್ಯರು  ಕವಟಗಿಮಠ ಅವರನ್ನು ತರಾಟೆಗೆ ತೆಗೆದುಕೊಂಡು ಗ್ರೂಪ್‍ನಿಂದ  ಲೆಫ್ಟ್ ಆಗಿದ್ದಾರೆ.

    ಈ ವಿಚಾರದ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಮಹಾಂತೇಶ ಕವಟಗಿಮಠ, ಅಚಾತುರ್ಯವಾಗಿ ಈ ಘಟನೆ ನಡೆದಿದೆ. ನಾನು ಉದ್ದೇಶ ಪೂರ್ವಕವಾಗಿ ಪೋಟೋ ಹಾಕಿಲ್ಲ. ಈ ಘಟನೆಯಿಂದ ಯಾರಿಗಾದರೂ ನೋವಾದರೆ ಕ್ಷಮೆಕೇಳುತ್ತೇನೆ ಎಂದು  ತಿಳಿಸಿದ್ದಾರೆ.

    ಇದನ್ನೂ ಓದಿ: ಕರ್ನಾಟಕದಲ್ಲಿ ಫಸ್ಟ್: ಅವಹೇಳನಕಾರಿ ಪೋಸ್ಟ್ ಪ್ರಕಟವಾಗಿದ್ದಕ್ಕೆ ವಾಟ್ಸಪ್ ಅಡ್ಮಿನ್ ಅರೆಸ್ಟ್