Tag: ಮಹಾಕಾಲೇಶ್ವರ ದೇವಸ್ಥಾನ

  • ಉಜ್ಜಯಿನಿ ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಿಯಾಂಕ ಗಾಂಧಿ

    ಉಜ್ಜಯಿನಿ ಮಹಾಕಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಿಯಾಂಕ ಗಾಂಧಿ

    ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರನಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಮಧ್ಯಪ್ರದೇಶದಲ್ಲಿ ಪ್ರಚಾರ ಕೈಗೊಳ್ಳಲು ಹೆಲಿಕಾಪ್ಟರ್ ಮೂಲಕ ಉಜ್ಜಯಿನಿಗೆ ಆಗಮಿಸಿದ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಪಕ್ಷದ ಅನೇಕ ನಾಯಕರು ಸ್ವಾಗತಿಸಿದರು. ಇಲ್ಲಿಂದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ ಅವರು, ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಸಿಎಂ ಕಮಲ್ ನಾಥ್ ಸಾಥ್ ನೀಡಿದರು.

    ಈ ವಿಶೇಷ ಪೂಜೆ ಬಳಿಕ ಪ್ರಿಯಾಂಕ ಗಾಂಧಿ ಅವರು ರತ್ಲಂ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದರು. ಕೊನೆಯ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಅನೇಕ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸಿದ್ದಾರೆ.

    ಕೊನೆಯ ಹಂತದ ಮತದಾನವು ಮೇ 19ರಂದು ನಡೆಯಲಿದೆ. ಅಂದು ಮಧ್ಯಪ್ರದೇಶದ ಇಂದೋರ್, ಉಜ್ಜೈನಿ, ರತ್ಲಂ ಸೇರಿದಂತೆ 8 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಹೊರ ಬೀಳಲಿದೆ.