Tag: ಮಹಾಕುಂಭಮೇಳ

  • ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    – ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಪರಿಹಾರ

    ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ (Central Government) ಘೋಷಿಸಿದೆ.

    ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.ಇದನ್ನೂ ಓದಿ: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ನವದೆಹಲಿ ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಅದಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ನಿಲ್ದಾಣವನ್ನು ತಲುಪಿದವು. ಹೀಗಾಗಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು.

    ಇದೇ ಸಮಯಕ್ಕೆ ಪ್ಲಾಟ್‌ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ ರಾಜ್‌ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಹೀಗಾಗಿ ರೈಲಿನ ಒಳಗೆ ಮತ್ತು ಹೊರಗೆ ಕಾಲ್ತುಳಿತ ಸಂಭವಿಸಿದೆ. ಈ ಅವಘಡದಲ್ಲಿ 18 ಮಂದಿ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದಾರೆ. ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

    ಕಳೆದ ಜ.29ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್‌ರಾಜ್‌ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಟರ್ & ಡಾಕ್ಟರ್ – ಮೈಸೂರಲ್ಲಿ ಅದ್ದೂರಿಯಾಗಿ ನಡೆದ ಡಾಲಿ, ಧನ್ಯತಾ ಮದುವೆ

  • ಮಹಾ ಕುಂಭಮೇಳದಿಂದ ಹಿಂದಿರುಗುವಾಗ ಹೃದಯಾಘಾತದಿಂದ ವ್ಯಕ್ತಿ ಸಾವು

    ಮಹಾ ಕುಂಭಮೇಳದಿಂದ ಹಿಂದಿರುಗುವಾಗ ಹೃದಯಾಘಾತದಿಂದ ವ್ಯಕ್ತಿ ಸಾವು

    ಬೀದರ್: ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ, ವಾಪಸ್ಸಾಗುತ್ತಿರುವಾಗ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttara Pradesh) ಕಾಶಿಯಲ್ಲಿ ನಡೆದಿದೆ.ಇದನ್ನೂ ಓದಿ: ದತ್ತಪೀಠ ವಿವಾದ; ಭೂ ದಾಖಲೆಗಳ ಆಧಾರದ ಮೇಲೆ ವಿವಾದ ಬಗೆಹರಿಯಲಿ: ಸಿ.ಟಿ ರವಿ

    ಮೃತ ವ್ಯಕ್ತಿಯನ್ನು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಠಾಣಾಕುಶನೂರು ಗ್ರಾಮದ ಮುಖಂಡ ಕಂಟೆಪ್ಪಾ ಜಿರ್ಗೆ (65) ಎಂದು ಗುರುತಿಸಲಾಗಿದೆ.

    ಮೃತ ವ್ಯಕ್ತಿ ಹಲವು ದಿನಗಳ ಹಿಂದೆ ಮಹಾಕುಂಭಮೇಳಕ್ಕೆ ಕುಟುಂಬದ ಜೊತೆಗೆ ಹೋಗಿದ್ದರು. ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ ಮುಗಿಸಿಕೊಂಡು ಬೀದರ್‌ಗೆ ಹಿಂದಿರುಗುತ್ತಿದ್ದಾಗ ಉತ್ತರಪ್ರದೇಶದ ಕಾಶಿಯಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಗೆ ಸೇರಿಸಿದಾಗ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಮೆಟ್ರೋ ದರ ಬದಲಾವಣೆ, ಶೀಘ್ರವೇ ಪರಿಷ್ಕೃತ ಪಟ್ಟಿ ಪ್ರಕಟ: ಬಿಎಂಆರ್‌ಸಿಎಲ್‌

  • ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವಾಗ ಹೃದಯಾಘಾತ – ವ್ಯಕ್ತಿ ಸಾವು

    ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವಾಗ ಹೃದಯಾಘಾತ – ವ್ಯಕ್ತಿ ಸಾವು

    ತುಮಕೂರು: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಭಾಗಿಯಾಗಿ ಪುಣ್ಯ ಸ್ನಾನ ಮಾಡುತ್ತಿರುವಾಗ ಹೃದಯಾಘಾತದಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ

    ಮೃತ ವ್ಯಕ್ತಿಯನ್ನು ಶಿರಾ (Sira) ತಾಲೂಕಿನ ಬರಗೂರು ಮೂಲದ ನಾಗರಾಜ್ (57) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ರಮ್ಯಾಗೆ ನಿಶ್ಚಿತಾರ್ಥ ಆಗಿದ್ಯಾ?- ಮದುವೆ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ

    ಎಲ್‌ಎನ್‌ಪಿ ಬ್ರಿಕ್ಸ್ನ ಮಾಲೀಕರಾದ ನಾಗರಾಜು ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಮಂಗಳವಾರ ಸಾಯಂಕಾಲ ತ್ರಿವೇಣಿ ಸಂಗಮದಲ್ಲಿ ಸಂಧ್ಯಾ ವಂದನೆ ಮಾಡಿ ಪುಣ್ಯಸ್ನಾನ ಮಾಡುತ್ತಿರುವಾಗ ಹೃದಯಾಘಾತವಾಗಿದ್ದು, ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: ಚುನಾವಣಾ ರಾಜಕೀಯದಿಂದ ಸದ್ಯಕ್ಕೆ ನಿವೃತ್ತಿ ಇಲ್ಲ: ಎದುರಾಳಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ ಸಿಎಂ

  • ಮಹಾ ಕುಂಭಮೇಳದ ಹೆಸರಲ್ಲಿ ವ್ಯಕ್ತಿಗೆ 64 ಸಾವಿರ ಪಂಗನಾಮ

    ಮಹಾ ಕುಂಭಮೇಳದ ಹೆಸರಲ್ಲಿ ವ್ಯಕ್ತಿಗೆ 64 ಸಾವಿರ ಪಂಗನಾಮ

    ಬೆಂಗಳೂರು: ಮಹಾಕುಂಭಮೇಳದ ಹೆಸರಿನಲ್ಲಿ ವ್ಯಕ್ತಿಯೋರ್ವ ವಂಚನೆಗೊಳಗಾಗಿ ಬರೋಬ್ಬರಿ 64 ಸಾವಿರ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿಯಲ್ಲಿ ನಡೆದಿದೆ.

    ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವುದು ಕೋಟ್ಯಂತರ ಜನರ ಹೆಬ್ಬಕೆಯಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಜನರಿಗೆ ವಂಚಿಸಲು ಶುರುಮಾಡಿದ್ದಾರೆ.ಇದನ್ನೂ ಓದಿ: ಬೆಂಗಳೂರು| ಹೊಸ ಇಂದಿರಾ ಕ್ಯಾಂಟೀನ್‍ಗಳಿಗೆ ಆರಂಭದಲ್ಲೇ ವಿಘ್ನ – 52 ಹೊಸ ಕ್ಯಾಂಟೀನ್‍ಗಳು ಓಪನ್ ಆಗೋದೇ ಡೌಟ್?

    ಹೌದು, ಸೈಬರ್ ವಂಚಕರು ಟ್ರೆಂಡ್‌ಗೆ ತಕ್ಕಂತೆ ವಂಚನೆ ಮಾಡಲು ಶುರುಮಾಡಿದ್ದಾರೆ. ಜ್ಞಾನಭಾರತಿಯ ಓರ್ವ ನಿವಾಸಿ ಪ್ರಯಾಗ್‌ರಾಜ್‌ಗೆ ತೆರಳುವ ಪ್ಲ್ಯಾನ್‌ ಮಾಡಿದ್ದರು. ಹಾಗೆಯೇ ಗೂಗಲ್‌ನಲ್ಲಿ ಸರ್ಚ್ ಮಾಡಿ ಕುಂಭಮೇಳಕ್ಕೆ ಹೋಗಲು ಎಷ್ಟು ವೆಚ್ಚ ತಗಲಬಹುದು ಎಂದು ನೋಡಿದ್ದಾರೆ. ಅದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದೆ. ನಾನು ರಾಕೇಶ್ ಟೂರ್ಸ್‌ & ಟ್ರಾವೆಲ್‌ನಿಂದ ಮಾತಾಡ್ತಿದ್ದೀನಿ. ನಮ್ ಕಂಪನಿಯಿಂದ ಕಡಿಮೆ ಬೆಲೆಯಲ್ಲಿ ಪ್ರಯಾಗ್‌ರಾಜ್‌ಗೆ ಹೋಗುವ ಪ್ಯಾಕೆಜ್ ಇದೆ ಎಂದು ಪರಿಚಯ ಮಾಡಿಕೊಂಡಿದ್ದ. ಕರೆ ಮಾಡಿ ವ್ಯಕ್ತಿಯ ಮಾತನ್ನು ನಂಬಿ, ಅವರು ಹೇಳಿದ ಅಕೌಂಟ್‌ಗೆ ಹಂತ ಹಂತವಾಗಿ 64 ಸಾವಿರ ರೂ. ಹಾಕಿದ್ದಾರೆ.

    ಹಣ ಹಾಕಿದ ಕೆಲವೇ ನಿಮಿಷಗಳ ನಂತರ ಆ ವ್ಯಕ್ತಿಗೆ ಕರೆ ಮಾಡಿದಾಗ, ನಂಬರ್ ಸ್ವಿಚ್ ಆಫ್ ಬಂದಿದೆ. ಬಳಿಕ ಮೋಸ ಹೋಗಿರುವ ಬಗ್ಗೆ ಅರಿವಾದಾಗ 1930ಗೆ ಕರೆ ಮಾಡಿ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಹಣ ಹಾಕಿರುವ ದಾಖಲೆಯೊಂದಿಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

    ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದಾಗ ಸೈಬರ್ ವಂಚಕರು, ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಕುಂಭಮೇಳಕ್ಕೆ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಜೊತೆಗೆ ನಗರದ ಹಲವು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಇದೇ ರೀತಿಯ ವಂಚನೆ ಪ್ರಕರಣಗಳು ದಾಖಲಾಗುತ್ತಿವೆ.ಇದನ್ನೂ ಓದಿ: ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

  • ಮೊನಾಲಿಸಾ ಹಾಟ್‌ ಸಾಂಗ್‌ ರಿಲೀಸ್‌ – ವಿಡಿಯೋ ವೈರಲ್‌!

    ಮೊನಾಲಿಸಾ ಹಾಟ್‌ ಸಾಂಗ್‌ ರಿಲೀಸ್‌ – ವಿಡಿಯೋ ವೈರಲ್‌!

    ನವದೆಹಲಿ: ‌ಮಹಾಕುಂಭಮೇಳದಲ್ಲಿ (Mahakumbhamela) ತನ್ನ ಕಣ್ಣಿನ ಮೂಲಕ ಎಲ್ಲರ ನಿದ್ದೆಗೆಡಿಸಿದ್ದ ಮೊನಲಿಸಾಳ (Monalisa) ಹಾಟ್‌ ಸಾಂಗ್‌ ರಿಲೀಸ್‌ ಆಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

    ಉತ್ತರ ಪ್ರದೇಶದ (Uttara Pradesh) ಪ್ರಯಾಗ್‌ರಾಜ್‌ದಲ್ಲಿ (Prayagraj) ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಹುಡುಗಿಯೊಬ್ಬಳು ರುದ್ರಾಕ್ಷಿ ಮಾರುತ್ತಿದ್ದಳು. ಆಕೆಯ ಮುಗ್ಧ ನಗು, ನೀಲಿ ಕಣ್ಣುಗಳ ಮೂಲಕವೇ ಎಲ್ಲರ ಗಮನಸೆಳೆದು ರಾತ್ರೋರಾತ್ರಿ ಫೇಮಸ್‌ ಆಗಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ್ದಳು.ಇದನ್ನೂ ಓದಿ: ಶೂಟಿಂಗ್‌ ಮುಗಿಸಿದ ದುಷ್ಯಂತ್‌, ಆಶಿಕಾ ನಟನೆಯ ‘ಗತವೈಭವ’ ಸಿನಿಮಾ

    ಇದೀಗ ಸಾಮಾಜಿಕ ಜಾಲತಾಣದಲ್ಲಿ ಮೊನಾಲಿಸಾ ಹಾಟ್‌ ಡ್ಯಾನ್ಸ್‌ ಮಾಡಿರುವ ವಿಡಿಯೋ ವೈರಲ್‌ ಆಗಿದೆ. ಕೆಂಪು ಬಣ್ಣದ ಒನ್‌ಪೀಸ್‌ನಲ್ಲಿ ಕಾಣಿಸಿಕೊಂಡಿರುವ ಮೊನಾಲಿಸಾಳ ಸಂಪೂರ್ಣ ಲುಕ್‌ ಬದಲಾಗಿದ್ದು, ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿಕೊಂಡು ಮಾಡಿರುವ ವಿಡಿಯೋ ಇದಾಗಿದೆ.

     

    View this post on Instagram

     

    A post shared by ni8.out9⭐Star (@ni8.out9)

    ವೈರಲ್‌ ಆಗಿರುವ ವಿಡಿಯೋದಿಂದಾಗಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹರಿದಾಡುತ್ತಿರುವ ವಿಡಿಯೋಗೆ ಹಲವರು ಕಮೆಂಟ್‌ ಮಾಡಿದ್ದು, ಎಡಿಟ್‌ ಮಾಡಿರುವವರ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ: ಕುಂಭಮೇಳದಿಂದ ವಾಪಸ್ ಆಗುವಾಗ ರಸ್ತೆ ಅಪಘಾತ – ಮೈಸೂರಿನ ಇಬ್ಬರು ದುರ್ಮರಣ

     

  • ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ: ಮಹಾ ಕುಂಭಮೇಳ ಬಣ್ಣಿಸಿದ ಸಂಸದೆ ಸುಧಾಮೂರ್ತಿ

    ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ: ಮಹಾ ಕುಂಭಮೇಳ ಬಣ್ಣಿಸಿದ ಸಂಸದೆ ಸುಧಾಮೂರ್ತಿ

    ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ (Maha Kumbh Mela) ವ್ಯವಸ್ಥೆಗಳ ಬಗ್ಗೆ ರಾಜ್ಯಸಭಾ ಸಂಸದೆ ಸುಧಾಮೂರ್ತಿ (Sudha Murthy) ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಮಹಾ ಕುಂಭಮೇಳ ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್ ಎಂದು ಬಣ್ಣಿಸಿದ್ದಾರೆ. ಮಹಾಕುಂಭ ವ್ಯವಸ್ಥೆಗಳ ಮಾದರಿಯು ಇತರ ಸರ್ಕಾರಗಳು ಅನುಸರಿಸಲು ಮಾನದಂಡವಾಗಿ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನಮ್ಮ ಭಾಗ್ಯ: ಗೌತಮ್ ಅದಾನಿ

    ಸೋಮವಾರ ಮಹಾಕುಂಭದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್‌ಗೆ ಆಗಮಿಸಿದ್ದ ರಾಜ್ಯಸಭಾ ಸಂಸದೆ ಸುಧಾಮೂರ್ತಿ, ಕಾರ್ಯಕ್ರಮದ ವ್ಯವಸ್ಥೆ ಮತ್ತು ಸಂಘಟನೆಯಿಂದ ಪ್ರಭಾವಿತರಾಗಿದ್ದಾರೆ.

    ತುಂಬಾ ಚೆನ್ನಾಗಿ ವ್ಯವಸ್ಥೆ ಮಾಡಲಾಗಿದೆ. ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್ ಆಗಿದೆ. ಇದು ನನ್ನ ಮೊದಲ ಕುಂಭ. ವ್ಯವಸ್ಥೆಗಳು ತುಂಬಾ ಚೆನ್ನಾಗಿವೆ. ಎಲ್ಲಾ ಸರ್ಕಾರಗಳು ಈ ಮಾದರಿಯನ್ನು ಅನುಸರಿಸಬಹುದು. ತುಂಬಾ ಒಳ್ಳೆಯ ಅನುಭವ ನೀಡಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಬರೋಬ್ಬರಿ 10 ಕೋಟಿ ಭಕ್ತರಿಂದ ಪುಣ್ಯಸ್ನಾನ

    ಮಹಾ ಕುಂಭಮೇಳ ಆರಂಭವಾದಾಗಿನಿಂದ, 10.2 ಕೋಟಿಗೂ ಹೆಚ್ಚು ಜನರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಈ ಬೃಹತ್ ಆಧ್ಯಾತ್ಮಿಕ ಕಾರ್ಯಕ್ರಮವು ಅಭೂತಪೂರ್ವ ಭಕ್ತ ಸಮೂಹಕ್ಕೆ ಸಾಕ್ಷಿಯಾಗಿದೆ.

  • ಮಹಾ ಕುಂಭಮೇಳದಲ್ಲಿ ಚಿತ್ರವಿಚಿತ್ರ ಸನ್ನಿವೇಶ – 9 ವರ್ಷದಿಂದ ಸಾಧು ತಲೆಯ ಮೇಲೆ ಕುಳಿತ ಪಾರಿವಾಳ!

    ಮಹಾ ಕುಂಭಮೇಳದಲ್ಲಿ ಚಿತ್ರವಿಚಿತ್ರ ಸನ್ನಿವೇಶ – 9 ವರ್ಷದಿಂದ ಸಾಧು ತಲೆಯ ಮೇಲೆ ಕುಳಿತ ಪಾರಿವಾಳ!

    ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದೇಶ ವಿದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದು, ಚಿತ್ರ ವಿಚಿತ್ರ ದೃಶ್ಯಗಳು ಕಂಡುಬರುತ್ತಿವೆ.

    ಜ.13 ರಿಂದ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಛಿತ್ತೋರ್‌ಘಡದ ಕಬೂತರ್ ಬಾಬಾ ಎನ್ನುವವರು ಎಲ್ಲರ ಗಮನ ಸೆಳೆದಿದ್ದಾರೆ. ಹೌದು, ಈ ಕಬೂತರ್‌ ಬಾಬಾ ತಲೆಯ ಮೇಲೆ 9 ವರ್ಷದಿಂದ ಪಾರಿವಾಳ ಇದೆಯಂತೆ.ಇದನ್ನೂ ಓದಿ: ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ – ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್

    ಇನ್ನೂ ಜನಸಾಗರದಲ್ಲಿ ತಮ್ಮವರು ತಪ್ಪಿಹೋಗಬಾರದು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ತಮ್ಮ ಕುಟುಂಬಸ್ಥರ ಸುತ್ತ ಹಗ್ಗವೊಂದನ್ನು ಕಟ್ಟಿದ್ದ ದೃಶ್ಯ ಕಂಡುಬಂದಿದೆ.

    ಪವಿತ್ರ ಸಂಗಮ ಸ್ಥಳದಲ್ಲಿ ಅಳವಡಿಸಿದ ಮೋದಿ-ಯೋಗಿ ಕಟೌಟ್‌ಗಳು ಎಲ್ಲರನ್ನು ಸೆಳೆಯುತ್ತಿವೆ. ಜಗತ್ತಿನ ಅತ್ಯಂತ ಹೆಚ್ಚು ಜನಸಂಖ್ಯೆಯ ನಗರ ಎಂಬ ಗರಿಮೆಗೂ ಪ್ರಯಾಗ್‌ರಾಜ್ ಪಾತ್ರವಾಗಿದ್ದು, ಮಕರ ಸಂಕ್ರಾಂತಿ ದಿನ 4 ಕೋಟಿ ಮಂದಿ ಸೇರಿದ್ದರು ಎನ್ನಲಾಗಿದೆ.ಇದನ್ನೂ ಓದಿ: ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ ಕೇಸ್‌ – 1 ಕೋಟಿಗೆ ಬೇಡಿಕೆಯಿಟ್ಟಿದ್ದ ಹಂತಕನ ಫೋಟೋ ಬಹಿರಂಗ

  • ಸ್ಟೀವ್‌ ಜಾಬ್ಸ್‌ ಪತ್ನಿ ಅಸ್ವಸ್ಥ – ಸನಾತನದ ಬಗ್ಗೆ ಸಾಕಷ್ಟು ಪ್ರಶ್ನೆ ಕೇಳುತ್ತಿದ್ದಾರೆ ಕಮಲಾ

    ಸ್ಟೀವ್‌ ಜಾಬ್ಸ್‌ ಪತ್ನಿ ಅಸ್ವಸ್ಥ – ಸನಾತನದ ಬಗ್ಗೆ ಸಾಕಷ್ಟು ಪ್ರಶ್ನೆ ಕೇಳುತ್ತಿದ್ದಾರೆ ಕಮಲಾ

    ಪ್ರಯಾಗ್‌ರಾಜ್‌: ಮಹಾಕುಂಭಮೇಳದಲ್ಲಿ (Mahakumbh) ಪಾಲ್ಗೊಂಡಿರುವ ಆಪಲ್ (Apple) ಸಹ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ (Steve Jobs) ಪತ್ನಿ ಲಾರೆನ್ ಪಾವೆಲ್ (Laurene Powell) ಅಸ್ವಸ್ಥಗೊಂಡಿದ್ದಾರೆ.

    ಕಮಲಾ (Kamala) ಎಂದು ಹೆಸರು ಬದಲಿಸಿಕೊಂಡಿರುವ ಲಾರೆನ್ ಪಾವೆಲ್, ಹೊಸ ವಾತಾವರಣದ ಕಾರಣದಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ. ನಿರಂಜನ ಅಖಾಡದ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಕೈಲಾಸನಂದಗಿರಿ ಮಹಾರಾಜ್ ಪ್ರತಿಕ್ರಿಯಿಸಿ, ಈಗ ಅವರು ನನ್ನ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರಿಗೆ ಕೆಲವು ಅಲರ್ಜಿಗಳಿವೆ. ಅವರು ಎಂದಿಗೂ ಇಷ್ಟೊಂದು ಜನದಟ್ಟಣೆಯ ಸ್ಥಳಕ್ಕೆ ಹೋಗಿರಲಿಲ್ಲ. ಚೇತರಿಕೆ ಬಳಿಕ ಅವರು ಅಮೃತಸ್ನಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್‌ ಜಾಬ್ಸ್‌ ಪತ್ನಿ ಲಾರೆನ್ ಇನ್ಮುಂದೆ ʻಕಮಲಾʼ – ಹಿಂದೂ ಹೆಸರು ನಾಮಕರಣ

    ಲಾರೆನ್ ಪಾವೆಲ್ ತುಂಬಾ ಸರಳ ವ್ಯಕ್ತಿಯಾಗಿದ್ದಾರೆ. ಪೂಜೆಯ ಸಮಯದಲ್ಲಿ ಅವರು ನಮ್ಮೊಂದಿಗೆ ಇದ್ದರು. ಅವರು ಸನಾತನ ಧರ್ಮದಕ್ಕೆ ಸಂಬಂಧಿಸಿದಂತೆ ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

     

    ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮಕ್ಕೆ ತೆರಳುವ ಮೊದಲು ಲಾರೆನ್ ಪಾವೆಲ್ ಅವರು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

    ಜನವರಿ 20 ರಂದು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಅಮೆರಿಕಕ್ಕೆ ಹಿಂತಿರುಗುವ ಮೊದಲು ಅವರು ಜನವರಿ 15 ರವರೆಗೆ ನಿರಂಜಿನಿ ಅಖಾರ ಶಿಬಿರದಲ್ಲಿ ಇರುತ್ತಾರೆ ಎಂದು ವರದಿಯಾಗಿದೆ.

     

  • ಮಹಾಕುಂಭಮೇಳ: ಸಂಕ್ರಾಂತಿಯಂದು ಸಂಗಮದಲ್ಲಿ ‘ಅಮೃತ ಸ್ನಾನ’ ಮಾಡಿದ 1 ಕೋಟಿ ಭಕ್ತರು

    ಮಹಾಕುಂಭಮೇಳ: ಸಂಕ್ರಾಂತಿಯಂದು ಸಂಗಮದಲ್ಲಿ ‘ಅಮೃತ ಸ್ನಾನ’ ಮಾಡಿದ 1 ಕೋಟಿ ಭಕ್ತರು

    ಪ್ರಯಾಗ್‌ರಾಜ್‌: ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭಮೇಳಕ್ಕೆ ಸೋಮವಾರ ಅದ್ದೂರಿ ಚಾಲನೆ ಸಿಕ್ಕಿದೆ. 2ನೇ ದಿನವಾದ ಮಂಗಳವಾರ ಬೆಳಗ್ಗೆ ಕುಂಭಮೇಳದಲ್ಲಿ (Maha Kumbh Mela) 1 ಕೋಟಿ ಭಕ್ತರು ಅಮೃತ ಸ್ನಾನ (Amrit Snan) ಮಾಡಿದ್ದಾರೆ.

    ಮಕರ ಸಂಕ್ರಾಂತಿ ಹಿನ್ನೆಲೆ ಮಂಗಳವಾರ ಬೆಳಗ್ಗೆ 8:30 ರ ಹೊತ್ತಿಗೆ ಮಹಾ ಕುಂಭಮೇಳದಲ್ಲಿ ಒಂದು ಕೋಟಿ ಭಕ್ತರು ಅಮೃತ ಸ್ನಾನ ಮಾಡಿದರು. ಮುಂಜಾನೆ ಪಂಚಾಯತ್ ನಿರ್ವಾಣಿ ಅಖಾರದ ನಾಗಾ ಸಾಧುಗಳು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಇತರ ಅಖಾಡಗಳ ಋಷಿಗಳು ಪವಿತ್ರ ಸ್ನಾನ ಮಾಡಿದರು. ಇದನ್ನೂ ಓದಿ: ಮಹಾಕುಂಭಮೇಳದಲ್ಲಿ ‘ನಂದಿನಿ’ ಕಮಾಲ್ – ಕೆಎಂಎಫ್ ಸಹಭಾಗಿತ್ವದಲ್ಲಿ 10 ಚಾಯ್ ಪಾಯಿಂಟ್

    ಭಾರತ ಮತ್ತು ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಯಾತ್ರಿಕರು ಚಳಿಯನ್ನು ಲೆಕ್ಕಿಸದೇ, ಅಮೃತ ಸ್ನಾನಕ್ಕಾಗಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ಸಂಗಮಕ್ಕೆ ಆಗಮಿಸಿದರು. ಬ್ರಾಹ್ಮಿ ಮುಹೂರ್ತದಂದು (ಸೂರ್ಯೋದಯಕ್ಕೆ ಸ್ವಲ್ಪ ಮೊದಲು), ಅಸಂಖ್ಯಾತ ಭಕ್ತರು ಪವಿತ್ರ ನೀರಿನಲ್ಲಿ ಮುಳುಗಿದರು.

    ಪಂಚಾಯತ್ ನಿರ್ವಾಣಿ ಅಖಾಡದ ನಾಗಾ ಸಾಧುಗಳು ಈಟಿ, ತ್ರಿಶೂಲ ಮತ್ತು ಕತ್ತಿಗಳಿಂದ ಅಲಂಕರಿಸಲ್ಪಟ್ಟ ರಾಜ ರೂಪದಲ್ಲಿ ಅಮೃತ ಸ್ನಾನ ಮಾಡಿದರು. ಕುದುರೆಗಳು ಮತ್ತು ರಥಗಳ ಮೇಲೆ ಸವಾರಿ ಮಾಡಿ, ಸಾಧುಗಳು ಮತ್ತು ಸಂತರು ಭವ್ಯ ಮೆರವಣಿಗೆ ಮುನ್ನಡೆಸಿದರು. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ – ಲಕ್ಷಾಂತರ ನಾಗ ಸಾಧುಗಳಿಂದ ಶಾಹಿ ಸ್ನಾನ

    ಪ್ರಯಾಗ್‌ರಾಜ್‌ನ ನಾಗವಾಸುಕಿ ದೇವಸ್ಥಾನ ಮತ್ತು ಸಂಗಮ್ ಪ್ರದೇಶದಲ್ಲಿ ಬೆಳಗಿನ ಜಾವದಿಂದಲೇ ಭಕ್ತರು ನೆರೆದಿದ್ದರು. ಸ್ನಾನ ಘಟ್ಟಗಳ 12 ಕಿ.ಮೀ. ವ್ಯಾಪ್ತಿಯಲ್ಲಿ ‘ಹರ ಹರ ಮಹಾದೇವ್’ ಮತ್ತು ‘ಜೈ ಶ್ರೀ ರಾಮ್’ ಘೋಷಣೆಗಳು ಪ್ರತಿಧ್ವನಿಸಿದವು.

    ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ವಾಹನಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು. ಡಿಐಜಿ ವೈಭವ್ ಕೃಷ್ಣ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ನೇತೃತ್ವದ ಭದ್ರತಾ ಪಡೆಗಳು ಕುದುರೆಗಳ ಜೊತೆಗೂಡಿ ಜಾತ್ರೆಯ ಪ್ರದೇಶದಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿ, ಅಮೃತ ಸ್ನಾನಕ್ಕೆ ತೆರಳುತ್ತಿದ್ದ ಅಖಾಡ ಸಾಧುಗಳಿಗೆ ದಾರಿ ಮಾಡಿಕೊಟ್ಟವು.

  • ಬೆಂಗ್ಳೂರಿಂದ ಕುಂಭಮೇಳಕ್ಕೆ ಹೋಗ್ಬೇಕಾ? – ನಿಮಗಾಗಿಯೇ ಹೊರಡಲಿದೆ ವಿಶೇಷ ರೈಲು

    ಬೆಂಗ್ಳೂರಿಂದ ಕುಂಭಮೇಳಕ್ಕೆ ಹೋಗ್ಬೇಕಾ? – ನಿಮಗಾಗಿಯೇ ಹೊರಡಲಿದೆ ವಿಶೇಷ ರೈಲು

    ಬೆಂಗಳೂರು: ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ (Prayagraj) ಜ.13ರಿಂದ ನಡೆಯಲಿರುವ ಮಹಾ ಕುಂಭಮೇಳಕ್ಕೆ (Maha Kumbh Mela) ಹೋಗುವ ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

    ಪ್ರಯಾಗ್‌ರಾಜ್‌ಗೆ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್‌ (Kumbh Mela Express Train) ವಿಶೇಷ ರೈಲು ಓಡಾಟ ನಡೆಸಲಿದೆ. ಎಸ್‌ಎಂವಿಟಿ ಬೆಂಗಳೂರು ಟು ಪ್ರಯಾಗ್‌ರಾಜ್ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ರೈಲು ಸಂಖ್ಯೆ 06577 ಎಸ್‌ಎಂವಿಟಿ ಬೆಂಗಳೂರು-ಪ್ರಯಾಗ್‌ರಾಜ್ ಏಕಮಾರ್ಗ ಕುಂಭಮೇಳ ವಿಶೇಷ ಎಕ್ಸ್‌ಪ್ರೆಸ್‌ ಬುಧವಾರ ರಾತ್ರಿ 8:50ಕ್ಕೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಡಲಿದೆ. ಜ.10 ಶುಕ್ರವಾರ ಸಂಜೆ 5:15ಕ್ಕೆ ಪ್ರಯಾಗ್‌ರಾಜ್ ತಲುಪಲಿದೆ. ಇದನ್ನೂ ಓದಿ: ಟಿಬೆಟ್‌ನಲ್ಲಿ ಭಾರೀ ಭೂಕಂಪ – 32 ಮಂದಿ ಬಲಿ

    ಈ ರೈಲು ವೈಟ್‌ಫೀಲ್ಡ್, ಬಂಗಾರಪೇಟೆ, ಜೋಲಾರ್ ಪೆಟ್, ಕಟಪಾಡಿ, ಪೆರಂಬೂರು, ಗುಡೂರು, ವಿಜಯವಾಡ, ವಾರಂಗಲ್, ಬಲ್ಹರ್ಷಾ, ಚಂದ್ರಾಪುರ, ಸೇವಾಗ್ರಾಮ್, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಇದನ್ನೂ ಓದಿ: ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

    ಈ ರೈಲು 14 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 4 ಸ್ಲೀಪರ್ ಬೋಗಿಗಳು ಮತ್ತು 2 ಲಗೇಜ್ ಕಂ ಬ್ರೇಕ್ ವ್ಯಾನ್‌ಗಳು ಸೇರಿ 20 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಇದನ್ನೂ ಓದಿ: ಚೀನಿ ವೈರಸ್‌ ಪತ್ತೆಯಾದ 8 ತಿಂಗಳ ಮಗು ಇಂದು ಡಿಸ್ಚಾರ್ಜ್‌