Tag: ಮಹಾದೇವಿ

  • ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ಕಿರುತೆರೆಯಲ್ಲಿ ಮಹಾದೇವಿ (Mahadevi), ಮಂಗಳಗೌರಿ ಮದುವೆ, ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ನಟಿಸಿರುವ ಮಾನಸ ಜೋಶಿ (Manasa Joshi) ಇದೀಗ ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ್ದಾರೆ. ಪುಟ್ಟ ಮಗಳ ಮುದ್ದಾದ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪಾತ್ರಕ್ಕಾಗಿ ಅವನು ಸಹಕರಿಸು ಅಂದ: ಕರಾಳ ಘಟನೆ ಬಿಚ್ಚಿಟ್ಟ ನಟಿ ಮಾಳವಿಕಾ

    2015ರಲ್ಲಿ ಸಂಕರ್ಷಣ ಪ್ರಸಾದ್ ಎಂಬುವವರ ಜೊತೆ ನಟಿ ಬೆಂಗಳೂರಿನಲ್ಲಿ ಹಸೆಮಣೆ (Wedding) ಏರಿದ್ದರು. ಸಂಪ್ರದಾಯ ಬದ್ಧವಾಗಿ ಮಾನಸ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಕಳೆದ ನವೆಂಬರ್‌ನಲ್ಲಿ ಹೆಣ್ಣು ಮಗುವಿಗೆ ಪೋಷಕರಾದರು. ಇದೀಗ ನಟನೆಯಿಂದ ದೂರ ಸರಿದು ಮಗಳ ಪಾಲನೆಯಲ್ಲಿ ನಟಿ ಬ್ಯುಸಿಯಾಗಿದ್ದಾರೆ.

     

    View this post on Instagram

     

    A post shared by Manasa Joshi (@manasajoshi)

    ಹಸಿರು ಬಣ್ಣದ ಮುದ್ದಾದ ಫೋಟೋ ಶೇರ್ ಮಾಡಿ, ಮಗಳಿಗೆ (Paarthavi Kashyap) ಮುದ್ದಾದ ಹೆಸರನ್ನ ಇಟ್ಟಿದ್ದಾರೆ. ಈ ಫೋಟೋ ನೋಡಿ, ಅಭಿಮಾನಿಗಳು ಮಗುವಿಗೆ ಶುಭಹಾರೈಸಿದ್ದಾರೆ.

    ಮಾನಸ ಜೋಶಿ ಅವರು ಕಿರುತೆರೆ ಮಾತ್ರವಲ್ಲ ಹಿರಿತೆರೆಯಲ್ಲೂ ನಟಿಸಿದ್ದಾರೆ. ಲಾಸ್ಟ್ ಬಸ್, ಅಮೃತಾ ಅಪಾರ್ಟ್‌ಮೆಂಟ್ಸ್‌, ಯಶೋಗಾಥೆ, ಕಿರಗೂರಿನ ಗಯ್ಯಾಳಿಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

  • ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಮಾನಸ ಜೋಶಿ

    ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಮಾನಸ ಜೋಶಿ

    `ಹಾದೇವಿ'(Mahadevi) ಸೇರಿದಂತೆ ಸಾಕಷ್ಟು ಸೀರಿಯಲ್ ಮತ್ತು ಸಿನಿಮಾಗಳಲ್ಲಿ ನಟಿಸಿರುವ ಮಾನಸ ಜೋಶಿ(Manasa Joshi) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಟಿಯ ಕುಟುಂಬದಲ್ಲಿ ಇದೀಗ ಸಂತಸ ಮನೆ ಮಾಡಿದೆ. ಈ ಕುರಿತ ಸಿಹಿ ಸುದ್ದಿಯನ್ನು ಸ್ವತಃ ಸೋಷಿಯಲ್ ಮೀಡಿಯಾ ಮೂಲಕ ನಟಿಯೇ ತಿಳಿಸಿದ್ದಾರೆ.

     

    View this post on Instagram

     

    A post shared by Manasa Joshi (@manasajoshi)

    ಕಿರುತೆರೆಯಲ್ಲಿ(Television ದೇವಿಯಾಗಿ ಮತ್ತು ಬಗೆ ಬಗೆಯ ಪಾತ್ರಗಳಲ್ಲಿ ಮಿಂಚಿದ್ದ ನಟಿ ಮಾನಸ ಜೋಶಿ ಅವರು ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಈ ಕುರಿತು ಕೆಲ ತಿಂಗಳುಗಳ ಹಿಂದೆ ಬೇಬಿ ಬಂಪ್ ಫೋಟೋಶೂಟ್ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ತಿಳಿಸಿದ್ದರು. ಇದೀಗ ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಇದನ್ನೂ ಓದಿ:ಅಥರ್ವ್-ಆಧವ್ ಎಂದು ಅವಳಿ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ನಟಿ ಅಮೂಲ್ಯ

     

    View this post on Instagram

     

    A post shared by Manasa Joshi (@manasajoshi)

    ಮಗಳ ಆಗಮನದ ಖುಷಿಯಲ್ಲಿರುವ ನಟಿ, ಬಣ್ಣದ ಲೋಕದಿಂದ ಸದ್ಯಕ್ಕೆ ಅಂತರ ಕಾಯ್ದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೊದಲ ಮಗುವಿನ ನಿರೀಕ್ಷೆಯಲ್ಲಿ `ಮಹಾದೇವಿ’ ಖ್ಯಾತಿಯ ಮಾನಸಾ ಜೋಷಿ

    ಮೊದಲ ಮಗುವಿನ ನಿರೀಕ್ಷೆಯಲ್ಲಿ `ಮಹಾದೇವಿ’ ಖ್ಯಾತಿಯ ಮಾನಸಾ ಜೋಷಿ

    `ಬಹುಪರಾಕ್’ ಚಿತ್ರದ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ನಟಿ ಮಾನಸಾ ಜೋಷಿ ಸಾಕಷ್ಟು ಸೀರಿಯಲ್ ಮೂಲಕ ಜನಪ್ರಿಯತೆ ಗಳಿಸಿದ್ದರು. ಇದೀಗ ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ತಾವು ತಾಯಿಯಾಗುತ್ತಿರುವ ಶುಭ ಸಮಾಚಾರವನ್ನು ವಿಶೇಷ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

    `ಮಹಾದೇವಿ’ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ್ದ ಕಲಾವಿದೆ, ಹೆಚ್ಚೆಚ್ಚು ದೇವಿ ಪಾತ್ರಕ್ಕೆ ಜೀವ ತುಂಬುವ ಮೂಲಕ ಸೈ ಎನಿಸಿಕೊಂಡಿದ್ದರು. ನಂತರ `ಮಂಗಳ ಗೌರಿ’ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ಮಿಂಚಿದ್ದರು. ನಟನೆಯ ಮೂಲಕ ಸುದ್ದಿಯಲ್ಲಿದ್ದ ನಟಿ ಈಗ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಶೇಷ ಫೋಟೋಶೂಟ್ ಮಾಡಿಸಿ, ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಹರ್ಷಿಕಾ ಪೂಣಚ್ಚ

    View this post on Instagram

     

    A post shared by Manasa Joshi (@manasajoshi)

    ಸಿನಿಮಾ, ಕಿರುತೆರೆ ಅಂತಾ ಬ್ಯುಸಿಯಿದ್ದ ಮಾನಸಾ ಜೋಷಿ ಈಗ ವೈಯಕ್ತಿಕ ಜೀವನದತ್ತ ಗಮನ ಕೊಡ್ತಿದ್ದಾರೆ. ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಒಟ್ನಲ್ಲಿ ನೆಚ್ಚಿನ ನಟಿಯ ಖುಷಿ ನೋಡಿ ಫ್ಯಾನ್ಸ್ ಶುಭ ಹಾರೈಸುತ್ತಿದ್ದಾರೆ.

    Live Tv