ಕಲಬುರಗಿ: ಕಾಂಗ್ರೆಸ್‍ಗೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುವ ನೈತಿಕತೆ ಇಲ್ಲ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಿ.ಟಿ.ರವಿ, ರಾಜ್ಯದ ಮೂರು ಮಹಾನಗರಪಾಲಿಕೆಗಳಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು. ಚುನಾವಣೆಗಳು ಬಂದಾಗ ಸಿದ್ಧರಾಮಯ್ಯನವರು ರೆಸ್ಟ್ ಮಾಡಲು ಹೋಗುವುದಲ್ಲದೇ ಅಲ್ಲಿಂದ ಕೆಲವು ಸಂದೇಶಗಳನ್ನು ಕೊಡುತ್ತಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಗೆಲ್ಲಬಾರದು ಎಂದು ಈಗ ಸದ್ಯ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ಮತ್ತೆ ಅವರು ಇದನ್ನೇ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಪ. ಜಾತಿ, ಪಂಗಡದವರ ಮೇಲಿನ ದೌರ್ಜನ್ಯ – ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ
ಕೆಲವೊಮ್ಮೆ ಸಿದ್ಧರಾಮಯ್ಯನವರೇ ನೇರವಾಗಿ ಸಂದೇಶ ಕೊಡ್ತಾರೆ. ಕೆಲವೊಮ್ಮೆ ಹಿಂಬಾಲಕರ ಮೂಲಕ ಸಂದೇಶ ರವಾನಿಸುತ್ತಾರೆ. ಆದರೆ ಈ ಬಾರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಗೆಲ್ಲಬಾರದೆಂಬ ಸಂದೇಶ ನೀಡಿದ್ದಾರೆ ಎಂದು ಹೇಳಿದರು. ಕಳೆದ 20 ವರ್ಷದಿಂದ ಕಾಂಗ್ರೆಸ್ ಪಕ್ಷ ಹೊಸ ಅಧ್ಯಕ್ಷರ ಹುಡುಕಾಟದಲ್ಲಿ ನಿರತವಾಗಿದೆ, ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಿಗೆ ಇನ್ನೂ ಕೂಡ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ, ಪಕ್ಷದ ತಂಡವನ್ನೇ ಕಟ್ಟಿಕೊಳ್ಳೊಕ್ಕೆ ಆಗದಿರೋರು ಅಧಿಕಾರಕ್ಕೆ ಬರಲು ಹಗಲುಗನಸು ಕಾಣುವ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ:ಭಾರತದಲ್ಲಿರೋದು ಬ್ರಿಟಿಷರ ಗುಲಾಮಗಿರಿ ಎಜುಕೇಶನ್ ಸಿಸ್ಟಮ್: ರಿಷಬ್ ಶೆಟ್ಟಿ ಆಕ್ರೋಶ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾಣೆಯ 55 ಸ್ಥಾನಗಳ ಪೈಕಿ ಕನಿಷ್ಠ 35 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಮಹಾನಗರ ಚುನಾವಣೆ ಹಿನ್ನೆಲೆ ಡಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಹಿತ ಕಾಪಾಡಲು ವಿಫಲವಾಗಿವೆ. ಸುಮಾರು 2,000 ಕೋಟಿಯಷ್ಟು ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಸರ್ಕಾರ ವಿಫಲವಾಗಿದ್ದು, ಸಾವಿನ ಸಂಖ್ಯೆ ಕಡಿಮೆ ತೋರಿಸುವ ಮೂಲಕ ಜನರಿಗೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿನ ಸಂಖ್ಯೆ ಕುರಿತು ಆಂತರಿಕ ತನಿಖೆ ನಡೆಸುತ್ತಿದೆ. ರಾಜ್ಯ ಸರ್ಕಾರ ಕೋವಿಡ್‍ನಿಂದ ನಿಧನರಾದ ವ್ಯಕ್ತಿಗಳ ಕುಟುಂಬದವರಿಗೆ ತಲಾ ರೂ. 5 ಲಕ್ಷ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಮೊಟ್ಟೆ ಹಗರಣದಲ್ಲಿಭಾಗಿಯಾಗಿರುವ ಶಶಿಕಲಾ ಜೊಲ್ಲೆ ಪ್ರಮಾಣ ಸ್ವೀಕಾರಕ್ಕೆ ಬರಲು ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಬರಲು ಜೀರೋ ಟ್ರಾಫಿಕ್ ಮಾಡಿದ್ದು ನೋಡಿದರೆ ಸರ್ಕಾರದ ನೈತಿಕತೆ ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ. ಇತ್ತೀಚಿಗೆ ನಾಲ್ವರು ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಸಿದರು. ಯಾವ ಪುರುಷಾರ್ಥಕ್ಕೆ ಈ ಕಾರ್ಯಕ್ರಮ ನಡೆಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ ಅಪಾರ ಜನರು ಸಾವು ನೋವು ಅನುಭವಿಸಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಜನರಿಗೆ ಅಚ್ಚೇದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ, ಸುಮಾರು 13,000 ಕೋಟಿ ಜಿಎಸ್‍ಟಿ ಅನುದಾನ ಬಿಡುಗಡೆ ಮಾಡಿಸಲು ಸಾಧ್ಯವಾಗದ್ದಕ್ಕೆ ಬಿಜೆಪಿ ಮಂತ್ರಿಗಳು ಕ್ಷಮೆ ಕೇಳುವ ಯಾತ್ರೆ ನಡೆಸಬೇಕಿತ್ತು ಎಂದಿದ್ದಾರೆ. ಇದನ್ನೂ ಓದಿ:ಚಾಮುಂಡಿ ದೇವಿಯ ತಪ್ಪಲಿನಲ್ಲಿ ಅತ್ಯಾಚಾರ ಆಗಿರುವುದು ಅಪಮಾನ: ಜಯ ಮೃತ್ಯುಂಜಯ ಸ್ವಾಮೀಜಿ
ಯಾದಗಿರಿಯಲ್ಲಿ ಕೇಂದ್ರ ಸಚಿವರ ಸ್ವಾಗತ ಸಮಯದಲ್ಲಿ ಗಾಳಿಯಲ್ಲಿ ಗುಂಡುಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಲೀಂ ಅಹಮದ್ ಅವರು ಉತ್ತರ ಪ್ರದೇಶ ಹಾಗೂ ಬಿಹಾರದ ಸಂಸ್ಕೃತಿಯನ್ನು ಬಿಜೆಪಿ ರಾಜ್ಯದಲ್ಲಿ ಪರಿಚಯಿಸುತ್ತಿದೆ ಇದು ನಾಚಿಕೆಗೇಡು. ಮಾಜಿ ಸಚಿವರೊಬ್ಬರ ಅಣತಿಯಂತೆ ಆ ಘಟನೆ ನಡೆದಿದ್ದು, ಹೋಂ ಮಿನಿಸ್ಟರ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡುವಾಗ ಗೃಹ ಸಚಿವರು ಉಢಾಫೆಯಾಗಿ ಉತ್ತರಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನವಿರೋಧಿ ನೀತಿಯಿಂದಾಗಿ ರೋಸಿ ಹೋಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಆರಿಸಿ ಕಳಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಒಂದು ಹೊಸತನಕ್ಕೆ ನಾಂದಿ ಹಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್ಗಳು
ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಾಗಿದೆ. ಅತೃಪ್ತರೆಲ್ಲ ಬೇರೆ, ಬೇರೆ ಪಕ್ಷ ಸೇರಿದ್ದಾರೆ. ಇದು ಪಕ್ಷಕ್ಕೆ ಹಿನ್ನೆಡೆಯಾಗಲಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಜೊತೆಗೆ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. 55 ಸೀಟುಗಳಲ್ಲಿ 36 ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಸಹಜವಾಗಿ ಎಲ್ಲ ಪಕ್ಷದಲ್ಲಿ ಅಸಮಾಧಾನ ಇದ್ದೇ ಇರುತ್ತದೆ. ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸಲಾಗಿದೆ. ಇಷ್ಟಾಗಿಯೂ ಕೆಲವರು ಎಂಐಎಂ ಹಾಗೂ ಜೆಡಿಎಸ್‍ಗೆ ಹೋಗಿದ್ದಾರೆ. ಆದರೂ ಕೂಡಾ ನಮ್ಮ ಪಕ್ಷಕ್ಕೆ ನಷ್ಟವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಅಜಯ್ ಸಿಂಗ್ ಅವರು ನಮ್ಮ ಪಕ್ಷದಲ್ಲಿ ಟಿಕೆಟ್ ಹಂಚಿಕೆಯಾದ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಬಿಜೆಪಿಯಲ್ಲಿ ಅಭ್ಯರ್ಥಿಗಳು ಸಿಗದೆ ಕೆಲಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಲು ವಿಫಲವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಜನರ ಮರ್ಯಾದೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಗ್ಯಾಂಗ್ ರೇಪ್ ಕಿರಾತಕರು
ರಾಷ್ಟ್ರೀಯ ಪಕ್ಷ ಎಂದು ಹೇಳುವ ಬಿಜೆಪಿ ತನ್ನ ಬಿ ಟೀಮ್ ಆದ ಎಂಐಎಂಗೆ ಸ್ಥಾನ ಬಿಟ್ಟುಕೊಟ್ಟಿದೆ ಎಂದು ಕುಟುಕಿದ ಸಲೀಂ ಅಹಮದ್, ಇದು ಆ ಪಕ್ಷದ ಚುನಾವಣಾ ನೀತಿಯನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂಎಲ್‍ಸಿ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಮತ್ತಿತರಿದ್ದರು.
ಕಲಬುರಗಿ: ಸೆಪ್ಟಂಬರ್ 3ರಂದು ನಡೆಯಲಿರುವ ರಾಜ್ಯದ ಮೂರು ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಆಡಳಿತರೂಢ ನಮ್ಮ ಪಕ್ಷ ಅಧಿಕಾರ ಚುಕ್ಕಾ ಹಿಡಿಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ಕಲಬುರಗಿ, ಬೆಳಗಾವಿ, ಹುಬ್ಬಳಿ-ಧಾರವಾಡ ಈ ಮೂರು ಮಹಾನಗರ ಪಾಲಿಕೆಗಳು ಬಿಜೆಪಿ ತೆಕ್ಕೆಗೆ ಬರಲಿದೆ. ಒಳ್ಳೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಅದರಲ್ಲೂ ಕಲಬುರಗಿಯಲ್ಲಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾಲಿಕೆಯ ಅತೀ ಹೆಚ್ಚು ವಾರ್ಡ್ ಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಭರವಸೆ ವ್ಯಕ್ತಪಡಿಸಿದರು.
ಈಗಾಗಲೇ ನಮ್ಮ ಪಕ್ಷವು ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದು, ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಟ್ಟಿದೆ. ಹೀಗಾಗಿ ಜನರು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಅವಧಿ ಪೂರ್ಣ ಮಾಡಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಕಟೀಲ್ ಅವರು, ಸಿದ್ದರಾಮಯ್ಯನವರು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಇರೋದು ಕನ್ಫರ್ಮ್ ಆಗಿದೆ. ಹಾಗಾಗಿ ಸಿದ್ದರಾಮಯ್ಯ ಜೋತಿಷ್ಯ ಹೇಳೋದಕ್ಕೆ ಮುಂದಾಗಿದ್ದಾರೆ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ
ಇತ್ತ ಈಗಾಗಲೇ ಅತೃಪ್ತ ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆಯುತ್ತಿದ್ದಾರೆ. ಇಂದು ಬಿಜೆಪಿ ಮಾಜಿ ಪಾಲಿಕೆ ಸದಸ್ಯ ಬಸವರಾಜ ನಾಶಿ ಅವರು ಕಾಂಗ್ರೆಸ್ ಸೇರುವ ಮೂಲಕ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದಂತಾಗಿದೆ. ಟಿಕೆಟ್ ಸಿಗದ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಬಗ್ಗೆ ಸುಳಿವು ಲಭ್ಯವಾಗಿದೆ. ಇದನ್ನೂ ಓದಿ: ಇಡಿ ಬುಲಾವ್ -ದೆಹಲಿಗೆ ತೆರಳಿದ ಜಮೀರ್ ಅಹ್ಮದ್ ಖಾನ್!
ಬೆಳಗಾವಿ: ಕಾಂಗ್ರೆಸ್ ಮಹಾಪಾಲಿಕೆ ಚುನಾವಣೆಯನ್ನ ಪಾರ್ಟಿಯ ಚಿಹ್ನೆಯನ್ನ ಆಧಾರಿಸಿ ಎದುರಿಸಬೇಕೋ, ಬೇಡವೋ ಎಂಬುದರ ಬಗ್ಗೆ ನಿರ್ಣಯ ಕೈಗೊಂಡಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಶುಕ್ರವಾರದಂದು ಬೆಳಗಾವಿಯಲ್ಲಿ ಮಾತನಾಡಿದ ಅವರು, ಶೇ7.5 ರಷ್ಟು ಮೀಸಲಾತಿಯನ್ನ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾತಿಯನ್ನ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದ್ದೇವೆ. ಸಿಎಂ ಬೊಮ್ಮಾಯಿ ಅವರಿಂದ ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ. ಅಲ್ಲದೇ ಇದಕ್ಕೆ ಸ್ವಲ್ಪ ಸಮಯ ನೀಡಬೇಕಾಗುತ್ತದೆ. ಅವರು ಅಧ್ಯಯನ ಮಾಡಿ ಕ್ರಮಕೈಗೊಳ್ಳಲಿ. ಯಾವುದೇ ಸರ್ಕಾರವಿದ್ಧರೂ ಇಚ್ಛಾಶಕ್ತಿಯ ಅಭಾವದಿಂದ ಬೇಡಿಕೆ ಈಡೇರಿಲ್ಲ. ಬಿಜೆಪಿ ಸರ್ಕಾರವಾದರೂ ಈಡೇರಿಸುತ್ತದೆಯೇ ಎಂಬುದನ್ನ ಕಾಯ್ದು ನೋಡಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: ವಧು, ವರರಿಗೆ ಪೆಟ್ರೋಲ್ ಗಿಫ್ಟ್ ಕೊಟ್ಟ ಹಾಸ್ಯ ನಟ
ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯನ್ನ ಪಕ್ಷದ ಚಿಹ್ನೆಯ ಮೇಲೆ ನಡೆಸಬೇಕೋ ಬೇಡವೋ ಎಂಬುದರ ಬಗ್ಗೆ ಅಂತಿಮವಾಗಿ ತೀರ್ಮಾನಿಸಿಲ್ಲ. ಬೇರೆಯವರಂತೆ ನಾವೂ ಮಾಡಲ್ಲ ನಮ್ಮ ಪಾರ್ಟಿಗೂ ತನ್ನದೇಯಾದ ಸಿದ್ಧಾಂತವಿದೆ ಎಂದರು. ಇದನ್ನೂ ಓದಿ: ಬೆಣ್ಣೆ ನಗರಿಯಲ್ಲಿ ಕಲಬೆರಕೆ ಬೆಣ್ಣೆ ಮಾರಾಟ ದಂಧೆ- ಓರ್ವ ಅರೆಸ್ಟ್
ಬೆಳಗಾವಿ ಮತ್ತು ಹುಬ್ಬಳ್ಳಿ ಸೇರಿದಂತೆ ಎಲ್ಲೆಡೆ ಸಮಿತಿಯನ್ನ ನೇಮಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದು, ನಮಗೆ ಜನ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಲಬುರಗಿ: ಈ ಬಾರಿ ಮಹಾನಗರ ಪಾಲಿಕೆಯ ಚುನಾವಣೆ ಕಾವು ತೀವ್ರತರವಾಗಿದ್ದು, ಪ್ರಸ್ತುತ ಪಕ್ಷಾಂತರಿಗಳ ಪರ್ವ ಶುರುವಾಗಿದೆ. ಇದೇ ವೇಳೆ ವಲಸಿಗರಿಗೆ ಟಿಕೆಟ್ ನೀಡದಿರಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳುವ ಮೂಲಕ ಶಾಕ್ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲ ಕಾಂಗ್ರೆಸ್ಸಿಗರಿಗೆ, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಟಿಕೆಟ್ ನೀಡಲು ಸಮಿತಿ ನಿರ್ಧರಿಸಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಾರುಪಥ್ಯ ಸ್ಥಾಪಿಸಲು ಪಕ್ಷ ಸೂತ್ರಗಳನ್ನು ಹೆಣಿದಿದೆ ಎಂದು ಸುಳಿವು ನೀಡಿದರು.
ಕಳೆದ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 35 ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್, ಮಹಾನಗರ ಪಾಲಿಕೆಯೆಂದರೆ ತಮ್ಮ ಜೀವ ಎಂಬಂತೆ ಕಾಪಾಡಿಕೊಂಡು ಬಮದಿದ್ದರು. ಮಾಜಿ ಸಚಿವರಾಗಿದ್ದ ದಿ.ಖಮರುಲ್ ಇಸ್ಲಾಂ ಅವರು ಮಹಾನಗರ ಪಾಲಿಕೆಯ ಟಿಕೆಟ್ ನೀಡುವಲ್ಲಿ ಯಾರೂ ಮೂಗು ತೂರಿಸಬಾರದು, ಬೇಕಿದ್ದರೆ ಶಿಫಾರಸು ಮಾಡಿ, ಗೆಲ್ಲುವ ಯೋಗ್ಯ ಅಭ್ಯರ್ಥಿಯಾಗಿದ್ದರೆ ಅವರಿಗೆ ಮಾತ್ರ ಟಿಕೆಟ್ ನೀಡುತ್ತೇವೆ ಎನ್ನುತ್ತಿದ್ದರು. ಈ ಹಿನ್ನೆಲೆಯಲ್ಲಿ ಈ ಹಿಂದೆ ಎಷ್ಟು ಬಾರಿ ಮಹಾನಗರಪಾಲಿಕೆಗೆ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತಿತ್ತು.
ಈಗ ಬದಲಾದ ಸನ್ನಿವೇಶದಲ್ಲಿ ಖಮರುಲ್ ಇಸ್ಲಾಂ ಇಲ್ಲದ ಪಾಲಿಕೆ ಎಂಬಾಂತಾಗಿದೆ. ಹೀಗಾಗಿ ಮತ್ತೆ ಕಾಂಗ್ರೆಸ್ ಪಾಲಿಕೆಯ ಚುಕ್ಕಾಣಿ ಹಿಡಿಯಲು ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್ ನೀಡುತ್ತಿದ್ದು, ಗೆಲುವಿನ ಕಾರ್ಯತಂತ್ರವನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ರೂಪಿಸುತ್ತಿದ್ದಾರೆ.
ವಿಜಯಪುರ: ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯೋಜನೆಯನ್ನು ಮಾಜಿ ಸಚಿವ ಎಂ.ಬಿ.ಪಾಟೀಲ್ ತಲೆ ಕೆಳಗಾಗಿಸಿದ್ದಾರೆ.
ಇಂದು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಇದರಲ್ಲಿ ಮೇಯರ್ ಸ್ಥಾನ ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ಲೋಗಾಂವಿ ಅವರ ಪಾಲಾಗಿದೆ. ಇತ್ತ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿ ಗೋಪಾಲ್ ಘಟಕಾಂಬಳೆ ಸ್ಪರ್ಧಿಸಿದ್ದರು. ಹೀಗಾಗಿ ಎಂ.ಬಿ.ಪಾಟೀಲ್ ಸಲಹೆಯಂತೆ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡಿ ಆಯ್ಕೆ ಮಾಡಿದ್ದಾರೆ.
ಬಿಜೆಪಿ ಬಂಡಾಯ ಅಭ್ಯರ್ಥಿಯ ಗೆಲುವಿನಿಂದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳಗೆ ತೀವ್ರ ಮುಖಭಂಗ ಉಂಟಾಗಿದೆ. ಮೇಯರ್ ಶ್ರೀದೇವಿ ಲೋಗಾಂವಿ 20 ಮತ ಗಳಿಸಿ ಜಯ ಸಾಧಿಸಿದ್ದರೇ, ಗೋಪಾಲ್ ಘಟಕಾಂಬಳೆ 26 ಮತಗಳ ಮೂಲಕ ಗೆಲುವಿನ ನಗೆ ಬೀರಿದರು.
ಇತ್ತ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಸಂತೋಷ್ ಚವ್ಹಾಣ್ 4 ಮತಗಳ ಅಂತರದಿಂದ ಸೋಲಬೇಕಾಯಿತು. ಮೇಯರ್-ಉಪಮೇಯರ್ ಆಯ್ಕೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್, ನಾಗಠಾಣ ಶಾಸಕ ದೇವಾನಂದ ಚವ್ಹಾಣ್, ತಲಾ ಒಬ್ಬರಂತೆ ಸಂಸದ ಹಾಗೂ ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಬಹುದಾಗಿದೆ. ಆದರೆ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಅರುಣ ಶಾಪೂರ್, ಪಕ್ಷೇತರ ಕಾರ್ಪೊರೇಟರ್ ರವಿ ಲೋಣಿ ಚುನಾವಣೆಯಿಂದ ದೂರ ಉಳಿದಿದ್ದರು. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ ಎನ್ನಲಾಗಿದೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘನ್ನವರ್ ಚುನಾವಣೆಯನ್ನು ನಡೆಸಿಕೊಟ್ಟರು.