Tag: ಮಹಾನ್‌

  • ‘ಮಹಾನ್’ ಟೀಮ್ ಸೇರಿಕೊಂಡ ಖ್ಯಾತ ನಟಿ ವರ್ಷ ಬೊಳ್ಳಮ್ಮ

    ‘ಮಹಾನ್’ ಟೀಮ್ ಸೇರಿಕೊಂಡ ಖ್ಯಾತ ನಟಿ ವರ್ಷ ಬೊಳ್ಳಮ್ಮ

    ದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ಜನಪ್ರಿಯ ನಟ ವಿಜಯ ರಾಘವೇಂದ್ರ (Vijay Raghavendra) ನಾಯಕರಾಗಿ ನಟಿಸುತ್ತಿರುವ ಮಹಾನ್ (Mahaan) ಚಿತ್ರದ ಪ್ರಮುಖ ಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ (Varsha Bollamma) ಅಭಿನಯಿಸುತ್ತಿದ್ದಾರೆ.

    ತಮಿಳಿನ ಬಿಗಿಲ್, 96 ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಹಾಗೂ ತೆಲುಗು, ಮಲಯಾಳಂ ಚಿತ್ರಗಳಲ್ಲೂ ನಟಿಸಿರುವ ವರ್ಷ ಬೊಳ್ಳಮ್ಮ ಅವರು ನಟಿಸುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದೆ. ಮಹಾನ್ ಚಿತ್ರದ ಬಗ್ಗೆ ವರ್ಷ ಬೊಳ್ಳಮ್ಮ ಅವರು ಈ ರೀತಿ ಹೇಳುತ್ತಾರೆ. ಇದನ್ನೂ ಓದಿ: ಕಾಂತಾರ-1 ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌

    ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ ಮಹಾನ್ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ಮಹಾನ್ ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ನಾನು ಪಿ.ಸಿ.ಶೇಖರ್ ನಿರ್ದೇಶನದ ಚಿತ್ರಗಳನ್ನು ನೋಡಿದ್ದೇನೆ. ಸದಭಿರುಚಿಯ ಚಿತ್ರಗಳ ನಿರ್ದೇಶಕರು ಅವರು. ಪಿ.ಸಿ.ಶೇಖರ್ ಅವರು ಮಹಾನ್ ಚಿತ್ರದ ಕಥೆ ಹೇಳಿದಾಗ, ಕಥೆಯಲ್ಲಿರುವ ಸಾಮಾಜಿಕ ಕಳಕಳಿ ಬಹಳ ಇಷ್ಟವಾಯಿತು. ಪಿ.ಸಿ.ಶೇಖರ್ ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಹಾಗೂ ವಿದ್ಯಾ ಸಂಸ್ಥೆ ನಡೆಸುತ್ತಿರುವ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಕಳಕಳಿಯುಳ್ಳ ಈ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ನನಗೆ ಬಹಳ ಸಂತಸ ತಂದಿದೆ. ಇನ್ನೂ, ನಾನು ವಿಜಯ ರಾಘವೇಂದ್ರ ಅವರ ಅಭಿಮಾನಿ. ಅವರೊಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ವರ್ಷ ಬೊಳ್ಳಮ್ಮ ತಿಳಿಸಿದ್ದಾರೆ.

    ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತ ಗೌಡ, ವರ್ಷ ಬೊಳ್ಳಮ್ಮ ಅವರು ‘ಮಹಾನ್’ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ಅರ್ಜುನ್ ಸರ್ಜಾ ನಟನೆಯ ಮಫ್ತಿ ಪೊಲೀಸ್ ಸಿನಿಮಾದ ಟೀಸರ್ ರಿಲೀಸ್

  • ‘ಮಹಾನ್’ ಚಿತ್ರ ಒಪ್ಪಿಕೊಂಡ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ

    ‘ಮಹಾನ್’ ಚಿತ್ರ ಒಪ್ಪಿಕೊಂಡ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ

    ನಾಗಿಣಿ ಧಾರಾವಾಹಿಯ ಮೂಲಕ ನಾಡಿನ ಜನರ ಮನಗೆದ್ದ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ ಗೌಡ (Namratha Gowda) ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ ಮಹಾನ್ (Mahaan) ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಕುರಿತು ನಟ ನಮ್ರತಾ ಗೌಡ ಈ ರೀತಿ ಹೇಳುತ್ತಾರೆ.

    ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ನಾನು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು ಮಹಾನ್ ಚಿತ್ರದ ಕಥೆ ಹೇಳಿದಾಗ, ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ ಬದುಕು ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ ಎಂದು ನಮ್ರತಾ ತಿಳಿಸಿದ್ದಾರೆ. ಇದನ್ನೂ ಓದಿ: ಬಿಗ್‌ ಬಾಸ್‌ ಪ್ರೋಮೋ ರಿಲೀಸ್‌ – ಸ್ಪರ್ಧಿಗಳ ಬಗ್ಗೆ ಮಾಹಿತಿಯೂ ಔಟ್‌

    ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ಚೇತನ್, ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತೆಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಟಿ ನಮ್ರತಾ ಗೌಡ.

  • ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

    ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

    ನ್ನಡದಲ್ಲಿ (Kannada) ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ (PC Shekar) ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijay Raghavendra) ನಾಯಕರಾಗಿ ನಟಿಸುತ್ತಿರುವ ಮಹಾನ್ (Mahan) ಚಿತ್ರದ ಪ್ರಮುಖಪಾತ್ರದಲ್ಲಿ ಹೆಸರಾಂತ ನಟ ಮಿತ್ರ (Mithra) ಅಭಿನಯಿಸುತ್ತಿದ್ದಾರೆ. “ಮಹಾನ್” ಚಿತ್ರದ ಪಾತ್ರದ ಕುರಿತು ಮಿತ್ರ ತಮ್ಮ ಮಾತುಗಳ ಮೂಲಕ ತಿಳಿಸಿದ್ದಾರೆ.  ಇದನ್ನೂ ಓದಿ: ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

    ನಾನು “ರಾಗ” ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೇನೆ. “ರಾಗ” ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಮಹಾನ್” ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ. ನಿರ್ಮಾಪಕ ಪ್ರಕಾಶ್ ಬುದ್ದೂರು ಅವರು ಇಂತಹ ಉತ್ತಮ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಹಾಗೂ ನಟ ವಿಜಯ ರಾಘವೇಂದ್ರ ಬಹಳ ಅದ್ಭುತವಾದ ನಟ. ಅವರೊಂದಿಗೆ ನಟಿಸುತ್ತಿರುವಿದು ಬಹಳ ಖುಷಿಯಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಹೊಂದಿರುವ ಚಿತ್ರವನ್ನು ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದು, ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರ ಕೂಡ ನಾಯಕನ ಪಾತ್ರದ ಜೊತೆಗೆ ಸಾಗುತ್ತದೆ. ನಮ್ಮಿಬ್ಬರ ಕಾಂಬಿನೇಶನ್ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎನ್ನುತ್ತಾರೆ ನಟ ಮಿತ್ರ. ಇದನ್ನೂ ಓದಿ: `ರಾಮ್‌ಚರಣ್‌ಗೆ ಚಿತ್ರ ಮಾಡಿ ಕೆಟ್ಟೆ’ ಎಂದ ಪ್ರೊಡ್ಯೂಸರ್

    ನನ್ನ ಹಾಗೂ ಮಿತ್ರ ಅವರ ಕಾಂಬಿನೇಶನ್ ನಲ್ಲಿ ಬಂದ “ರಾಗ” ಚಿತ್ರ ಇಂದು ಕೂಡ ಜನಪ್ರಿಯ. ಆನಂತರ ನನ್ನ ನಿರ್ದೇಶನದ ಚಿತ್ರಗಳಲ್ಲಿ ಮಿತ್ರ ಅವರು ನಟಿಸಿಲ್ಲ. ಏಕೆಂದರೆ, ಮಿತ್ರ ಅವರು ಸಣ್ಣ ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುವುದು ನನಗೆ ಇಷ್ಟವಿಲ್ಲ. “ರಾಗ” ಚಿತ್ರದ ಅಭಿನಯಕ್ಕಾಗಿ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ಆ ಚಿತ್ರದಲ್ಲಿ ಅಂತಹ ಅದ್ಭುತ ನಟನೆ ನೀಡಿದ್ದ ಮಿತ್ರ ಅವರಿಗೆ “ಮಹಾನ್” ಚಿತ್ರದಲ್ಲೂ ಎಲ್ಲರ ನೆನಪಿನಲ್ಲುಳಿಯುವಂತ ಪಾತ್ರ ಇರುತ್ತದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೆ ಸೂಕ್ತ ಎನಿಸಿತು. ಅವರಿಗೆ ಸರಿಯಾದ ಪಾತ್ರವಿದು. ಇಡೀ ಚಿತ್ರ ಪೂರ್ತಿ ನಾಯಕನ ಪಾತ್ರದ ಜೊತೆಗೆ ಸಾಗುವ ಪಾತ್ರ ಅವರದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಸದಾ ಇರುತ್ತಾನೆ. ಆ ಸ್ಪೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ. “ಮಹಾನ್” ಚಿತ್ರದ ಮಿತ್ರ ಅವರ ಪಾತ್ರ ಕೂಡ ಎಲ್ಲರ ಮನಸ್ಸಿಗೂ ಇಷ್ಟವಾಗುತ್ತದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.ದನ್ನೂ ಓದಿಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

    ತಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ ಮಿತ್ರ ಅವರಂತಹ ಅನುಭವಿ ನಟರು ಅಭಿನಯಿಸುತ್ತಿರುವುದಕ್ಕೆ ನಿರ್ಮಾಪಕ ಪ್ರಕಾಶ್ ಬುದ್ದೂರು ಸಂತಸ ವ್ಯಕ್ತಪಡಿಸಿದ್ದಾರೆ.