Tag: ಮಹಾರಾಜ ಕಾಲೇಜು

  • ಮೈಸೂರಿಗೆ ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ

    ಮೈಸೂರಿಗೆ ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ

    ಮೈಸೂರು: ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಇಂದು ಮೈಸೂರಿಗೆ (Mysuru) ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

    ಮೈಸೂರಿನ ಮಹಾರಾಜ ಕಾಲೇಜು (Maharaja College) ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11:35ಕ್ಕೆ ನಿತಿನ್ ಗಡ್ಕರಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ಉಳಿಸಿ- ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಕೌಸ್ತವ್ ಬಾಗ್ಚಿ

    ಕಾರ್ಯಕ್ರಮದ ಬಳಿಕ ಮೈಸೂರು ವಿಮಾನ ನಿಲ್ದಾಣದ ಮೂಲಕ ಗಡ್ಕರಿ ಕೇಂದ್ರ ಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ. ಇನ್ನು ಈ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಹಾಗೂ ಸಚಿವ ಮಹದೇವಪ್ಪ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ- ರಾಯಚೂರಿನಲ್ಲೂ ಅಲರ್ಟ್

  • ಮಹಾರಾಜ ಕಾಲೇಜಿನ ಮೇಲ್ಚಾವಣಿ ಕುಸಿತ – ಮೂವರು ವಿದ್ಯಾರ್ಥಿಗಳಿಗೆ ಗಾಯ

    ಮಹಾರಾಜ ಕಾಲೇಜಿನ ಮೇಲ್ಚಾವಣಿ ಕುಸಿತ – ಮೂವರು ವಿದ್ಯಾರ್ಥಿಗಳಿಗೆ ಗಾಯ

    ಮೈಸೂರು: ಮಹಾರಾಜ ಕಾಲೇಜಿನ ಮೇಲ್ಛಾವಣಿ ಕುಸಿತಗೊಂಡು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

    ಕಾಲೇಜಿನಲ್ಲಿ ಇಂದು ಅಂತರಿಕ ನಿಬಂಧನೆ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ನಡೆಯುತ್ತಿದ್ದಾಗ ಬೆಳಗ್ಗೆ 11:30ಕ್ಕೆ ಏಕಾಏಕಿ ಮೇಲ್ಚಾವಣಿ ಕುಸಿದಿದೆ.

    ಘಟ‌ನೆಯಲ್ಲಿ ವಿದ್ಯಾರ್ಥಿಗಳಾದ ವಿಶಾಲ್, ಯಶವಂತ್, ಸಲೀಂ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.