Tag: ಮಹಾರಾಷ್ಟ್ರ ಡಿಸಿಎಂ

  • ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ `ಮಹಾ’ ಡಿಸಿಎಂ ಅಜಿತ್ ಪವಾರ್ ವಾಗ್ವಾದ – ವಿಡಿಯೋ ವೈರಲ್

    ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ `ಮಹಾ’ ಡಿಸಿಎಂ ಅಜಿತ್ ಪವಾರ್ ವಾಗ್ವಾದ – ವಿಡಿಯೋ ವೈರಲ್

    ಮುಂಬೈ: ಸೋಲಾಪುರದಲ್ಲಿ ಅಕ್ರಮವಾಗಿ ಮಣ್ಣು ಅಗೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ (Maharashtra DCM) ಅಜಿತ್ ಪವಾರ್ (Ajit Pawar) ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿವೆ.

    ಆ.31ರಂದು ಮಹಿಳಾ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರು ರಸ್ತೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಅಗೆಯುತ್ತಿದ್ದ ಸೋಲಾಪುರದ (Solapur) ಕುರ್ದು ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಐಪಿಎಸ್ ಅಧಿಕಾರಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರೆ ಮಾಡಿ, ವಾಗ್ವಾದ ನಡೆಸಿರುವುದು ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿದೆ.ಇದನ್ನೂ ಓದಿ: 14 ಪಾಕಿಸ್ತಾನಿ ಉಗ್ರರು, 400 ಕೆಜಿ RDX, 34 ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ

    ಎರಡು ನಿಮಿಷಗಳ ಈ ವಿಡಿಯೋದಲ್ಲಿ, ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್. ಮಣ್ಣು ಅಗೆಯುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲಾಧಿಕಾರಿಗಳಿಗೆ ತಿಳಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಆದರೆ ಈ ವೇಳೆ ಐಪಿಎಸ್ ಅಧಿಕಾರಿ, ಅಜಿತ್ ಪವಾರ್ ಅವರನ್ನು ಗುರುತಿಸದೇ ನನ್ನ ಮೊಬೈಲ್‌ಗೆ ಕರೆ ಮಾಡಿ ಎಂದು ಹೇಳಿದ್ದಾರೆ.

    ಆಗ ಅಜಿತ್ ಪವಾರ್ ಅವರು, ನೀವು ನನ್ನನ್ನು ನೋಡ್ಬೇಕು ಅಲ್ವಾ? ನನಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಅಥವಾ ನನಗೆ ವಾಟ್ಸಾಪ್‌ನಲ್ಲಿ ಕರೆ ಮಾಡಿ. ಆಗ ನಾನು ಯಾರು ಅಂತ ಗೊತ್ತಾಗುತ್ತೆ? ನಾನು ಹೇಳಿದರೂ ಕೇಳುವುದಿಲ್ಲ ಎಂದರೆ ನಿಮಗೆ ಎಷ್ಟು ಧೈರ್ಯ? ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಬೆಳಗಾವಿ ಸುವರ್ಣ ಸೌಧ| ಬಿಲ್‌ ಪಾವತಿಸದಿದ್ದರೆ ವಿದ್ಯುತ್‌ ಸಂಪರ್ಕ ಕಡಿತ – ಹೆಸ್ಕಾಂ ಎಚ್ಚರಿಕೆ

  • DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

    DCM ಆದ ಮರುದಿನವೇ ಬೇನಾಮಿ ಆಸ್ತಿ ಆರೋಪದಿಂದ ಮುಕ್ತ; 1,000 ಕೋಟಿ ಮೌಲ್ಯದ ಆಸ್ತಿ ಪವಾರ್‌ಗೆ ರಿಲೀಸ್‌!

    – ಅಜಿತ್ ಪವಾರ್ ಮೇಲಿನ ಬೇನಾಮಿ ಆಸ್ತಿ ಆರೋಪ ವಜಾ

    ಮುಂಬೈ: ಬಿಜೆಪಿ ಮೈತ್ರಿ ಪಕ್ಷವಾದ ಎನ್‌ಸಿಪಿಯ ನಾಯಕ ಅಜಿತ್ ಪವಾರ್ (Ajit Pawar) ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಆರೋಪವೊಂದರಿಂದ ಮುಕ್ತವಾಗಿದ್ದಾರೆ.

    ಬೇನಾಮಿ ಆಸ್ತಿ (Benami Property Case) ವಹಿವಾಟು ತಡೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮಂಡಳಿಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪವನ್ನು ಶುಕ್ರವಾರ ವಜಾಗೊಳಿಸಿತು. ನ್ಯಾಯಾಲಯದ ತೀರ್ಪಿನ ನಂತರ, ಆದಾಯ ತೆರಿಗೆ ಇಲಾಖೆಯು 2021ರ ಬೇನಾಮಿ ವಹಿವಾಟು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಜಿತ್ ಪವಾರ್‌ ಅವರಿಗೆ ಬಿಡುಗಡೆ ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇತ್ತೀಚೆಗೆ ಚುನಾಯಿತರಾದ ಮಹಾಯುತಿ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಸಾಕಷ್ಟು ಪುರಾವೆಗಳ ಆಧಾರದ ಮೇಲೆ ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಬೇನಾಮಿ ಮಾಲೀಕತ್ವದ ಅಡಿಯಲ್ಲಿ ಆಸ್ತಿಗಳನ್ನು ಲಿಂಕ್ ಮಾಡಿದ 2021ರ ಪ್ರಕರಣವನ್ನು ನ್ಯಾಯಮಂಡಳಿ ವಜಾಗೊಳಿಸಿದೆ ಎಂದು ವರದಿಗಳು ತಿಳಿಸಿವೆ.

    ಆದಾಯ ತೆರಿಗೆ ಇಲಾಖೆಯು 2021ರ ಅಕ್ಟೋಬರ್ 7 ರಂದು ಅಜಿತ್ ಪವಾರ್‌ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಮತ್ತು ಮಹಾರಾಷ್ಟ್ರದಾದ್ಯಂತ ಹಲವಾರು ಭೂಮಿ ಸೇರಿದಂತೆ ಹಲವು ಆಸ್ತಿಗಳು ಸೇರಿತ್ತು.

    ಆದಾಯ ತೆರಿಗೆ ಇಲಾಖೆ ದಾಳಿ ವೇಳೆ, ಅಜಿತ್ ಪವಾರ್ ಅವರು ಅವಿಭಜಿತ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು. ಈ ವೇಳೆ ಜೂನ್ 2022ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು. ಈ ವೇಳೆ ಅಜಿತ್ ಪವಾರ್ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಪತನದ ನಂತರ ಅವರು ಪಕ್ಷವನ್ನು ಒಡೆದು ಜುಲೈ 2023 ರಿಂದ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು. ಈ ಸರ್ಕಾರಕ್ಕೆ ಬಿಜೆಪಿ ಕೂಡಾ ಸೇರಿದ್ದು, ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿದ್ದರು. ಶುಕ್ರವಾರ ನ್ಯಾಯಪೀಠವು ಬೇನಾಮಿ ವ್ಯವಹಾರದ ಪ್ರತಿಪಾದನೆಯನ್ನು ತಿರಸ್ಕರಿಸಿ, ಆರೋಪಗಳಿಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಹೇಳಿದೆ.

    ಅಜಿತ್ ಪವಾರ್, ಪತ್ನಿ ಸುನೇತ್ರಾ ಪವಾರ್ ಮತ್ತು ಮಗ ಪಾರ್ಥ್ ಪವಾರ್ ಬೇನಾಮಿ ಆಸ್ತಿಗಳನ್ನು ಸಂಗ್ರಹಿಸಲು ಹಣವನ್ನು ವರ್ಗಾಯಿಸಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ. ಎಲ್ಲಾ ಆಸ್ತಿ ವಹಿವಾಟುಗಳನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ. ದಾಖಲೆಗಳಲ್ಲಿ ಯಾವುದೇ ಅಕ್ರಮಗಳಿಲ್ಲ ಎಂದು ಅಜಿತ್ ಪವಾರ್ ಅವರ ಕಾನೂನು ಸಲಹೆಗಾರರು ವಾದಿಸಿದ್ದರು.

  • ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ಗೆ ಸೇರಿದ 1,000 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ಗೆ ಸೇರಿದ 1,000 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರಿಗೆ ಸೇರಿದ್ದು ಎನ್ನಲಾದ ಸುಮಾರು 1,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

    ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನಿರ್ಮಲ್‌ ಟವರ್‌ ಸೇರಿದಂತೆ ಐದು ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಕಳೆದ ತಿಂಗಳು ಅಜಿತ್‌ ಪವಾರ್‌ ಅವರ ಸಹೋದರಿಯ ನಿವಾಸಗಳು ಹಾಗೂ ಸಂಸ್ಥೆಗಳಲ್ಲಿ ತೆರಿಗೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಕೈಗೊಳ್ಳಲಾಗಿತ್ತು.

    ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿದ್ದ ಪವಾರ್‌ ಅವರು, “ಪ್ರತಿ ವರ್ಷ ತೆರಿಗೆಯನ್ನು ಪಾವತಿಸುತ್ತಿದ್ದೇವೆ. ನಾನು ಹಣಕಾಸು ಸಚಿವ. ಹೀಗಾಗಿ ತೆರಿಗೆ ಪಾವತಿ ಸಂಬಂಧ ಬದ್ಧತೆ ಇದೆ. ತಮಗೆ ಸಂಬಂಧಿಸಿದ ಎಲ್ಲಾ ಘಟಕಗಳು ನಿಯಮಿತವಾಗಿ ತೆರಿಗೆ ಪಾವತಿಸಿವೆ” ಎಂದು ತಿಳಿಸಿದ್ದರು. ಇದನ್ನೂ ಓದಿ: ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ – ಬಿಜೆಪಿ ನಾಯಕನ ವಿರುದ್ಧ FIR

    ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಪವಾರ್‌,”ನನ್ನ ಸಹೋದರಿ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವುದಕ್ಕೆ ಬೇಸರವಾಗಿದೆ. ನನ್ನ ಸಂಬಂಧಿ ಎಂಬ ಕಾರಣಕ್ಕೆ ನಡೆದಿರುವ ದಾಳಿ ಬಗ್ಗೆ ಜನರೇ ಆಲೋಚಿಸಬೇಕಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.