Tag: ಮಹಾರಾಷ್ಟ್ರ ಪ್ರವಾಹ

  • ಪ್ರವಾಹ ಸಂತ್ರಸ್ತರಿಗೆ ಅಮೀರ್‌ರಿಂದ 25 ಲಕ್ಷ ರೂ. – ಲತಾರಿಂದ 11 ಲಕ್ಷ ರೂ. ದೇಣಿಗೆ

    ಪ್ರವಾಹ ಸಂತ್ರಸ್ತರಿಗೆ ಅಮೀರ್‌ರಿಂದ 25 ಲಕ್ಷ ರೂ. – ಲತಾರಿಂದ 11 ಲಕ್ಷ ರೂ. ದೇಣಿಗೆ

    ಮುಂಬೈ: ಮಹಾರಾಷ್ಟ್ರ ಪ್ರವಾಹಕ್ಕೆ ಸಂತ್ರಸ್ತರಿಗೆ ಬಾಲಿವುಡ್ ನಟ ಅಮೀರ್ ಖಾನ್ ಅವರು 25 ಲಕ್ಷ ರೂ. ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು 11 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

    ಅಮೀರ್ ಖಾನ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ನಿಧಿಗೆ 25 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪ್ರವಾಹ ಸಂತ್ರಸ್ತರಿಗಾಗಿ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಿದ ಅಮೀರ್ ಖಾನ್ ಅವರಿಗೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.

    ನಟ ಅಮೀರ್ ಖಾನ್ ಅಲ್ಲದೆ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಕೂಡ ಮಹಾರಾಷ್ಟ್ರ ಪ್ರವಾಹಕ್ಕೆ 11 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ದೇವೇಂದ್ರ ಅವರು ಈ ಬಗ್ಗೆ ಕೂಡ ತಮ್ಮ ಟ್ವಿಟ್ಟಿರಿನಲ್ಲಿ, “ಸಿಎಂ ಪರಿಹಾರ ನಿಧಿಗೆ 11 ಲಕ್ಷ ರೂ. ದೇಣಿಗೆ ನೀಡಿದ ಗೌರವಾನ್ವಿತ ಲತಾ ಮಂಗೇಶ್ಕರ್ ದೀದಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

    ಇದೇ ತಿಂಗಳು 12ರಂದು ಸ್ಟಾರ್ ಜೋಡಿ ನಟ ರಿತೇಶ್ ದೇಶ್‍ಮುಖ್ ಹಾಗೂ ಜೆನಿಲಿಯಾ ಡಿಸೋಜಾ ಮಹಾರಾಷ್ಟ್ರ ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ್ದರು. ಸಿಎಂ ದೇವೇಂದ್ರ ಅವರು ತಮ್ಮ ಟ್ವಿಟ್ಟರಿನಲ್ಲಿ, “ಮಹಾರಾಷ್ಟ್ರ ಪ್ರವಾಹಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಿದ ಜೆನಿಲಿಯಾ ಹಾಗೂ ರಿತೇಶ್‍ಗೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿಕೊಂಡಿದ್ದರು.

    ಬಳಿಕ ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ಕೂಡ ಸಿಎಂ ಪರಿಹಾರ ನಿಧಿಗೆ 51 ಲಕ್ಷ ರೂ. ದೇಣಿಗೆ ನೀಡಿದ್ದರು. ಈ ವಿಷಯವನ್ನು ಅಮಿತಾಬ್ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಆದರೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ವಿಷಯವನ್ನು ಟ್ವೀಟ್ ಮಾಡುವ ಮೂಲಕ ಎಲ್ಲರಿಗೂ ತಿಳಿಸಿದ್ದರು. ಅಮಿತಾಬ್ ಅಲ್ಲದೆ ನಟ ನಾನಾ ಪಾಟೇಕರ್ ಅವರು ಕೂಡ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 500 ನಿವಾಸಗಳನ್ನು ಕಟ್ಟಿಕೊಡುವ ಭರವಸೆಯನ್ನು ನೀಡಿದ್ದಾರೆ.

  • ಮಹಾರಾಷ್ಟ್ರ ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ ರಿತೇಶ್ ದಂಪತಿ

    ಮಹಾರಾಷ್ಟ್ರ ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ ರಿತೇಶ್ ದಂಪತಿ

    ಮುಂಬೈ: ಬಾಲಿವುಡ್ ಸ್ಟಾರ್ ಜೋಡಿ ನಟ ರಿತೇಶ್ ದೇಶ್‍ಮುಖ್ ಹಾಗೂ ನಟಿ ಜೆನಿಲಿಯಾ ಡಿಸೋಜಾ ಮಹಾರಾಷ್ಟ್ರ ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

    ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ತಮ್ಮ ಟ್ವಿಟ್ಟರಿನಲ್ಲಿ ರಿತೇಶ್ ಹಾಗೂ ಜೆನಿಲಿಯಾ ಚೆಕ್ ನೀಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ಮಹಾರಾಷ್ಟ್ರ ಪ್ರವಾಹಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಿದ ಜೆನಿಲಿಯಾ ಹಾಗೂ ರಿತೇಶ್‍ಗೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

    ಹಲವು ಕಲಾವಿದರು ಮಹಾರಾಷ್ಟ್ರ ಪ್ರವಾಹ ಪೀಡಿತರಿಗೆ ಸಹಾಯ ಮಾಡಿ ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಆದರೆ ರಿತೇಶ್ ಹಾಗೂ ಜೆನಿಲಿಯಾ ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಸರ್ಕಾರ ಪ್ರವಾಹ ಪೀಡಿತ ಸಾಂಗ್ಲಿ, ಕೊಲ್ಹಾಪುರ ಹಾಗೂ ಸತಾರಾ ಜಿಲ್ಲೆಗಳಲ್ಲಿ ಸ್ಥಾಪಿಸಿರುವ 432 ಪರಿಹಾರ ಕೇಂದ್ರಗಳಿಗೆ ಒಟ್ಟು 3.78 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಮಹಾರಾಷ್ಟ್ರದ ದಕ್ಷಿಣ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋಲ್ಹಾಪುರ, ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಹಲವು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ.

    ಇತ್ತ ಕರ್ನಾಟಕದ ಬಹುತೇಕ ಜಿಲ್ಲೆಗಳು ನದಿಗಳ ಅಬ್ಬರಕ್ಕೆ ಬೆಚ್ಚಿ ಬೀಳುತ್ತಿವೆ. ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮಗಳು ಜಲಾವೃತಗೊಂಡಿವೆ. ನಿರಾಶ್ರಿತರಿಗಾಗಿ ಸ್ಥಳೀಯ ಸುರಕ್ಷಿತ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ.