Tag: ಮಹಾರಾಷ್ಟ್ರ ರಾಜಕೀಯ

  • ಒಡೆದ ಕುಟುಂಬ, ಪಕ್ಷ- ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಲೆ

    ಒಡೆದ ಕುಟುಂಬ, ಪಕ್ಷ- ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಲೆ

    -ಸುಪ್ರಿಯಾ ಕಣ್ಣಂಚಲ್ಲಿ ನೀರು

    ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಪುತ್ರಿ ಸಂಸದೆ ಸುಪ್ರಿಯಾ ಸುಲೆ, ಒಡೆದ ಕುಟುಂಬ ಮತ್ತು ಪಕ್ಷ ಎಂದು ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ.

    ಇಂದು ಎನ್‍ಸಿಪಿ ಶಾಸಕಾಂಗ ನಾಯಕ ಅಜಿತ್ ಪವಾರ್ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಶರದ್ ಪವಾರ್ ಅವರಿಗೂ ಸೂಚಿಸದೇ ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸುಪ್ರಿಯಾ ಸುಲೆ, ಜೀವನದಲ್ಲಿ ಬೇರೆಯವರನ್ನು ಯಾಕೆ ನಂಬಬೇಕು ಎಂದು ಪ್ರಶ್ನೆ ಮೂಡುತ್ತಿದೆ. ನಾನು ಜೀವನದಲ್ಲಿ ನಂಬಿದವರಿಂದ ಈ ರೀತಿ ಮೋಸಕ್ಕೊಳಗಾಗಿರಲಿಲ್ಲ. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಶೀಘ್ರದಲ್ಲಿಯೇ ಉತ್ತರಿಸುತ್ತೇನೆ. ಒಬ್ಬ ವ್ಯಕ್ತಿಗೆ ಗೌರವ ನೀಡಿ, ಪ್ರೀತಿಯನ್ನು ಕೊಟ್ಟಿದ್ದಕ್ಕೆ ಪ್ರತಿಫಲವಾಗಿ ನಮಗೇನು ಸಿಕ್ತು ಎಂದು ಪ್ರಶ್ನೆ ಮಾಡುತ್ತಾ ಸುಪ್ರಿಯಾ ಕಣ್ಣಾಲಿಗಳು ತುಂಬಿಕೊಂಡವು. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ

    ನಾವು ಮೊದಲೇ ಎಲ್ಲ ಎನ್‍ಸಿಪಿ ಶಾಸಕರ ಸಹಿಯನ್ನು ಪಡೆದುಕೊಳ್ಳಲಾಗಿತ್ತು. ಶಾಸಕರ ಹಸ್ತಾಕ್ಷರವುಳ್ಳ ಪತ್ರಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಇಂದು ಸಂಜೆ ಶರದ್ ಪವಾರ್ ನೇತೃತ್ವದಲ್ಲಿ ಎಲ್ಲ ಶಾಸಕರ ಸಭೆಯನ್ನು ಕರೆಯಲಾಗಿದೆ ಎಂದು ಎನ್‍ಸಿಪಿ ಮುಖಂಡ ನವಾಬ್ ಮಲಿಕ್ ಹೇಳಿದ್ದಾರೆ.