ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Elections) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 48 ಅಭ್ಯರ್ಥಿಗಳನ್ನು ಪಕ್ಷ ಘೋಷಿಸಿದೆ.
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ (Maharashtra Assembly Election) ಮುನ್ನ ಮಹಾ ವಿಕಾಸ್ ಅಘಾಡಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಮತ್ತು ಒಕ್ಕೂಟವು ಸಾಮೂಹಿಕ ನಾಯಕತ್ವದಲ್ಲಿ ಸ್ಪರ್ಧಿಸಲಿದೆ ಎಂದು ಶರದ್ ಪವಾರ್ (Sharad Pawar) ಹೇಳಿದ್ದಾರೆ. ಸಿಎಂ ಮುಖ ಘೋಷಿಸುವಂತೆ ಉದ್ಧವ್ ಠಾಕ್ರೆ (Uddhav Thackeray) ಒತ್ತಾಯಿಸಿರುವ ನಡುವೆ ಈ ಮಹತ್ವದ ಹೇಳಿಕೆ ಹೊರಬಂದಿದೆ.
ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾವ ಪಕ್ಷವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬುದರ ಆಧಾರದ ಮೇಲೆ ಮುಖ್ಯಮಂತ್ರಿಯಾಗುತ್ತಾರೆ. ಸಿಎಂ ಮುಖವನ್ನು ಪ್ರಕಟಿಸದೇ ಚುನಾವಣೆ ಹೋಗುವುದು ಯಾವುದಕ್ಕೂ ಅಡ್ಡಿಯಾಗುವುದಿಲ್ಲ. ಒಕ್ಕೂಟ ಗೆಲುವು ಸಾಧಿಸಿದ ಬಳಿಕ ಯಾರು ನೇತೃತ್ವ ವಹಿಸಬೇಕು ಎಂಬುದು ಸಂಖ್ಯಾಬಲದ ಮೇಲೆ ನಿರ್ಧಾರವಾಗಬೇಕು ಎಂದರು. ಇದನ್ನೂ ಓದಿ: ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ
ಇದಕ್ಕೆ ಪೂರಕವಾಗಿ ಉದಾಹರಣೆ ನೀಡಿದ ಅವರು, ತುರ್ತು ಪರಿಸ್ಥಿತಿಯ ನಂತರ ಮೊರಾರ್ಜಿ ದೇಸಾಯಿ ಅವರ ಹೆಸರು ಘೋಷಣೆಯಾಯಿತು. ಚುನಾವಣೆಯಲ್ಲಿ ಮತ ಕೇಳುವಾಗ ಅವರ ಹೆಸರನ್ನು ಎಲ್ಲೂ ಘೋಷಿಸಿರಲಿಲ್ಲ. ಹೀಗಾಗಿ ಈಗ ಸಿಎಂ ಮುಖಕ್ಕೆ ಬೇಡಿಕೆ ಇಡುವ ಅಗತ್ಯವಿಲ್ಲ. ಜನರ ಬೆಂಬಲ ಪಡೆದ ನಂತರ ನಾವು ಒಟ್ಟಾಗಿ ಕೂತು ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಳಸಾ-ಬಂಡೂರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕಲು ಸಭೆ ಕರೆಯಿರಿ- ಸಿಎಂಗೆ ಕೋನರೆಡ್ಡಿ ಒತ್ತಾಯ
ಕಳೆದ ತಿಂಗಳು ನಡೆದ ಎಂವಿಎ ಸಭೆಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಅನುಮೋದಿಸಿದ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಹೇಳಿದರು. ಮುಖ್ಯಮಂತ್ರಿ ಹುದ್ದೆಗೆ ತಮ್ಮ ಆಯ್ಕೆಯನ್ನು ಘೋಷಿಸುವಂತೆ ನಾನು ಮೈತ್ರಿಕೂಟದ ಎಲ್ಲಾ ನಾಯಕರಿಗೆ ಮನವಿ ಮಾಡುತ್ತೇನೆ ಮತ್ತು ನಾನು ಅವರನ್ನು ಬೇಷರತ್ತಾಗಿ ಬೆಂಬಲಿಸುತ್ತೇನೆ ಎಂದು ಠಾಕ್ರೆ ಹೇಳಿದ್ದರು. ಇದನ್ನೂ ಓದಿ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ: ರಾಜ್ಯದಲ್ಲಿ 1 ಕೋಟಿ ನೋಂದಣಿ ಗುರಿ
ಮುಂಬೈ: ನಾನೇ ಮುಂದಿನ ಐದು ವರ್ಷದ ಮುಖ್ಯಮಂತ್ರಿ ಎಂದು ಘೋಷಿಸಿಕೊಂಡಿರುವ ಹಂಗಾಮಿ ಸಿಎಂ ದೇವೇಂದ್ರ ಫಡ್ನವೀಸ್ ಏಕಾಂಗಿಯಾಗಿದ್ದಾರೆ. ಕೇಂದ್ರದಿಂದ ಯಾವುದೇ ಸೂಚನೆ ಸಿಗುತ್ತಿಲ್ಲ. ಶಿವಸೇನೆ ತನ್ನ ಹಠವನ್ನು ಬಿಡುತ್ತಿಲ್ಲ. ಇಬ್ಬರ ಹಗ್ಗಜಗ್ಗದಾಟದಲ್ಲಿ ದೇವೇಂದ್ರ ಫಡ್ನವೀಸ್ ಏಕಾಂಗಿಯಾಗಿದ್ದಾರೆ ಎಂಬ ಚರ್ಚೆಗಳು ಮಹಾರಾಷ್ಟ್ರ ರಾಜಕಾರಣದಲ್ಲಿ ಕೇಳಿ ಬರುತ್ತಿವೆ.
ಚುನಾವಣೆ ಬಳಿಕ ನಾನೇ ಎರಡನೇ ಬಾರಿ ಸಿಎಂ ಆಗಲಿದ್ದೇನೆ. ಮುಂದಿನ ಐದು ವರ್ಷ ಸಹ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತೇನೆ. ಮೈತ್ರಿ ಮಾಡಿಕೊಳ್ಳುವಾಗ ಶಿವಸೇನೆ ಎಲ್ಲಿಯೂ ಸಿಎಂ ಸ್ಥಾನದ ಬಗ್ಗೆ ಮಾತನಾಡಿರಲಿಲ್ಲ. ಅಲ್ಲದೇ 50:50 ಫಾರ್ಮುಲಾ ಸಹ ಮುಂದಿಟ್ಟಿರಲಿಲ್ಲ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದರು. ಇದನ್ನೂ ಓದಿ: ನಮ್ಮ ಬಳಿ ಮ್ಯಾಜಿಕ್ ನಂಬರ್ ಇದೆ: ಶಿವಸೇನೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಮೈತ್ರಿ ಮಾಡಿಕೊಳ್ಳುವಾಗ 50:50 ಫಾರ್ಮುಲಾದಂತೆ ಎರಡೂವರೆ ವರ್ಷದಂತೆ ಎರಡು ಪಕ್ಷದ ನಾಯಕರು ಸಿಎಂ ಆಗಬೇಕೆಂದು ಒಪ್ಪಿಕೊಳ್ಳಲಾಗಿತ್ತು ಎಂದು ಹೇಳುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸರ್ಕಾರ ರಚನೆಯ ಬಗ್ಗೆ ಯಾವ ಸಂದೇಶವನ್ನು ದೇವೇಂದ್ರ ಫಡ್ನವೀಸ್ ಅವರಿಗೆ ಕಳುಹಿಸಿಲ್ಲ ಎನ್ನಲಾಗಿದೆ. ಇತ್ತ ಶಿವಸೇನೆ ನಿಮ್ಮ ನಿರ್ಧಾರವನ್ನು ತಿಳಿಸಬೇಕೆಂದು ದೇವೇಂದ್ರ ಫಡ್ನವೀಸ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸಿಎಂ ಸ್ಥಾನ ನಮಗೆ ಬರೆದಿಟ್ಟುಕೊಳ್ಳಿ – ಬಿಜೆಪಿ ಇಲ್ಲದೇ ಸರ್ಕಾರ ರಚನೆಗೆ ಶಿವಸೇನೆ ಪ್ಲಾನ್
ಈ ನಡುವೆ ಬಿಜೆಪಿಯ ಮುಖಂಡ ಸುಧೀರ್ ಮುಂಗಂಟಿವೀರ್, ನವೆಂಬರ್ 8ರೊಳಗೆ ಸರ್ಕಾರ ರಚನೆ ಆಗದಿದ್ದರೆ, ಮಹಾರಾಷ್ಟ್ರದಲ್ಲಿ ರಾಷ್ಟ್ಟಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದರು. ಬಿಜೆಪಿಯ ಈ ಹೇಳಿಕೆಗೆ ಕೆಂಡಾಮಂಡಲಗೊಂಡ ಶಿವಸೇನೆ ತನ್ನ ಸಾಮ್ನಾ ಪತ್ರಿಕೆಯಲ್ಲಿ, ರಾಷ್ಟ್ರಪತಿಗಳು ನಿಮ್ಮ ಜೇಬಿನಲ್ಲಿದ್ದರಾ? ಶೀರ್ಷಿಕೆ ಅಡಿಯಲ್ಲಿ ಸುದ್ದಿಯನ್ನು ಪ್ರಕಟಿಸಿ ತಿರುಗೇಟು ನೀಡಿತ್ತು. ಇದನ್ನೂ ಓದಿ: ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ? ಬಿಜೆಪಿ ಹೇಳಿಕೆಗೆ ಶಿವಸೇನೆ ಕೆಂಡಾಮಂಡಲ
ಶಿವಸೇನೆ ಮಾತ್ರ ಎನ್‌ಸಿಪಿ, ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸುತ್ತಾ ಬಂದಿದೆ. ಎನ್‌ಸಿಪಿಯ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದ ಶಿವಸೇನೆಯ ಮುಖಂಡ ಸಂಜಯ್ ರಾವತ್, ಬಿಜೆಪಿಯೇತರ ಸರ್ಕಾರ ರಚನೆ ಬಗ್ಗೆ ಮಾತನಾಡಿದ್ದರು. ಹೊಸ ಸಮೀಕರಣ (ಶಿವಸೇನೆ+ಕಾಂಗ್ರೆಸ್+ಎನ್‌ಸಿಪಿ=ಸರ್ಕಾರ) ಒಪ್ಪಿಕೊಂಡರೆ ಮಹಾರಾಷ್ಟ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚಿಸಬಹುದು ಎಂದು ಸಂಜಯ್ ರಾವತ್ ತಿಳಿಸಿದ್ದರು ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿತ್ತು. ಇದನ್ನೂ ಓದಿ: 50-50 ಫಾರ್ಮುಲಾಗೆ ಶಿವಸೇನೆ ಆಗ್ರಹ- ಜೆಡಿಎಸ್ ಅಸ್ತ್ರ ಪ್ರಯೋಗಿಸಿದ ಉದ್ಧವ್ ಠಾಕ್ರೆ
ಎನ್‌ಸಿಪಿ ಬಿಜೆಪಿ ಜೊತೆ ಹೋಗಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ ಶರದ್ ಪವಾರ್, ಜನಾದೇಶದ ಪ್ರಕಾರ ನಾವು ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತೇವೆ. ಆದರೆ ಯಾರೊಂದಿಗೆ ನಾವು ಮೈತ್ರಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದರು. ಇಂದು ಸಂಜಯ್ ರಾವತ್, ಈಗಾಗಲೇ ನಮಗೆ 170 ಶಾಸಕರ ಬೆಂಬಲ ಸಿಕ್ಕಿದೆ. ಶೀಘ್ರದಲ್ಲಿಯೇ ಈ ಸಂಖ್ಯೆ 175 ಆಗಲಿದೆ ಎಂದಿದ್ದಾರೆ.ಇದನ್ನೂ ಓದಿ: ಇಲ್ಲಿ ಯಾರು ಜೈಲಿನಲ್ಲಿರುವ ಪುತ್ರ ದುಷ್ಯಂತ್ ಚೌಟಾಲಾ ಇಲ್ಲ: ಶಿವಸೇನೆ
ಮುಂಬೈ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಶಿವಸೇನೆ, ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ ಎಂದು ಪ್ರಶ್ನೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬಿಕ್ಕಟ್ಟು ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ಶಿವಸೇನೆ ಮತ್ತು ಬಿಜೆಪಿಗೆ ಬಹುಮತ ಸಿಕ್ಕಿದೆ. ಎರಡೂ ಪಕ್ಷಗಳ ನಡುವಿನ ಹಗ್ಗ-ಜಗ್ಗಾಟದಾಟ ಮತ್ತಷ್ಟು ಕಠಿಣವಾಗುತ್ತಿದೆ. ಎರಡೂ ಪಕ್ಷಗಳ ನಾಯಕರ ಪರಸ್ಪರ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು, ಮಹಾರಾಷ್ಟ್ರ ರಾಜಕಾರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.
ನವೆಂಬರ್ 8ರೊಳಗೆ ಸರ್ಕಾರ ರಚಿಸದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಬಿಜೆಪಿಯ ಸುಧೀರ್ ಮುಂಗಂಟಿವರ್ ಸ್ಫೋಟಕ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಎಬ್ಬಿಸಿದ್ದರು. ಇದೀಗ ಸುಧೀರ್ ಹೇಳಿಕೆಗೆ ತಿರುಗೇಟು ನೀಡಿರುವ ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯ ಮುಖಪುಟದಲ್ಲಿ ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ ಎಂದು ಪ್ರಶ್ನಿಸಿದೆ.
ರಾಷ್ಟ್ರಪತಿಗಳ ಸಹಿಯ ರಬ್ಬರ್ ಸ್ಟ್ಯಾಂಪ್ ಮಹಾರಾಷ್ಟ್ರದ ಬಿಜೆಪಿಯ ಕಾರ್ಯಾಲಯದಲ್ಲಿರಬೇಕು. ಒಂದು ವೇಳೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡದಿದ್ದಲ್ಲಿ, ಈ ರಬ್ಬರ್ ಸ್ಟ್ಯಾಂಪ್ ಬಳಸುವ ಮೂಲಕ ರಾಷ್ಟ್ರಪತಿ ಆಡಳಿತದ ತುರ್ತು ಪರಿಸ್ಥಿತಿ ತರಲು ಮುಂದಾಗುತ್ತಿದ್ದಾರೆ. ಬಿಜೆಪಿಯ ಈ ಬೆದರಿಕೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳುತ್ತಾರೆ ಬರೆದುಕೊಂಡಿದೆ.
ಸುಧೀರ್ ಮುಂಗಂಟಿವರ್ ಅವರು ಈಗಿರುವ ವಿಧಾನಸಭೆ ಅವಧಿಯ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದೆ. ನವೆಂಬರ್ 7ರೊಳಗೆ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದಿದ್ದರು.
ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಶಿವಸೇನೆ ಬಿಜೆಪಿಯೇತರ ಸರ್ಕಾರ ರಚನೆಗೆ ಪ್ಲಾನ್ ಮಾಡಿಕೊಂಡಿದೆ. ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್ ಭೇಟಿಯಾಗಿ ಹೊಸ ಸಮೀಕರಣ (ಶಿವಸೇನೆ+ಎನ್‍ಸಿಪಿ+ಕಾಂಗ್ರೆಸ್=ಸರ್ಕಾರ) ಮುಂದಿಟ್ಟು ರಹಸ್ಯ ಮಾತುಕತೆ ನಡೆಸಿದ್ದರು. ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರು ಸಹ ದೆಹಲಿಗೆ ತೆರಳಿ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಮಾತ್ರ ತಾನೇ ಐದು ವರ್ಷ ಸರ್ಕಾರ ರಚಿಸೋದು, ನಮ್ಮವರೇ ಸಿಎಂ ಸ್ಥಾನ ಅಲಂಕರಿಸೋದು ಎಂದು ಹೇಳುತ್ತಿದೆ.
ಮುಂಬೈ: ಮಾಹಾರಾಷ್ಟ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚಿಸಲು ಶಿವಸೇನೆ ಮುಂದಾಗುತ್ತಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಪೂರಕ ಎಂಬಂತೆ ಶಿವಸೇನೆ ನಾಯಕರು ಎನ್‍ಸಿಪಿ ಮತ್ತು ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿದ್ದಾರೆ. ಬುಧವಾರ ಆದಿತ್ಯ ಠಾಕ್ರೆ ಸಹ ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿಯಾಗಿದ್ದರು.
ವಿಧಾನಸಭಾ ಚುನಾವಣೆ ಫಲಿತಾಂಶ ಬಂದು 10 ದಿನಗಳಾದ್ರೂ ಬಹುಮತ ಪಡೆದಿರುವ ಬಿಜೆಪಿ-ಶಿವಸೇನೆ ಸರ್ಕಾರ ರಚನೆಗೆ ಮುಂದಾಗುತ್ತಿಲ್ಲ. ಶಿವಸೇನೆ 50:50 ಸೂತ್ರಕ್ಕೆ ದೃಢವಾಗಿದ್ದರೆ, ಬಿಜೆಪಿಯ ದೇವೇಂದ್ರ ಫಡ್ನವೀಸ್ ಮಾತ್ರ ನಾನೇ ಮುಂದಿನ ಐದು ವರ್ಷದ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಇಲ್ಲಿ ಯಾರು ಜೈಲಿನಲ್ಲಿರುವ ಪುತ್ರ ದುಷ್ಯಂತ್ ಚೌಟಾಲಾ ಇಲ್ಲ: ಶಿವಸೇನೆ
*साहिब…* *मत पालिए, अहंकार को इतना,* *वक़्त के सागर में कईं,* *सिकन्दर डूब गए..!*
ಈ ಬೆಳವಣಿಗೆ ನಡುವೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶರದ್ ಪವಾರ್ ಭೇಟಿ ಬಳಿಕ ಮಾತನಾಡಿರುವ ಸಂಜಯ್ ರಾವತ್, ಒಂದು ವೇಳೆ ಶಿವಸೇನೆ ನಿರ್ಧರಿಸಿದ್ರೆ ತನ್ನ ಸ್ವಂತ ಸಾಮರ್ಥ್ಯದಿಂದ ಸರ್ಕಾರ ರಚಿಸಬಹುದು. 50:50 ಫಾರ್ಮುಲಾದಲ್ಲಿ ಸರ್ಕಾರ ರಚನೆಗೆ ಜನಾದೇಶ ಬಂದಿದೆ. ರಾಜ್ಯದ ಜನತೆ ಶಿವಸೇನೆಯ ನಾಯಕ ಸಿಎಂ ಆಗಲಿ ಎಂದು ಹೇಳುತ್ತಿದ್ದಾರೆ. ಶಿವಸೇನೆಗೆ ಸಿಎಂ ಸ್ಥಾನ ಸಿಗಲಿದೆ ಬೇಕಾದರೆ ಬರೆದಿಟ್ಟುಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೂ ಓದಿ: 50-50 ಫಾರ್ಮುಲಾಗೆ ಶಿವಸೇನೆ ಆಗ್ರಹ- ಜೆಡಿಎಸ್ ಅಸ್ತ್ರ ಪ್ರಯೋಗಿಸಿದ ಉದ್ಧವ್ ಠಾಕ್ರೆ
Sanjay Raut, Shiv Sena: If Shiv Sena decides, it'll get the required numbers to form stable government in the state. People have given mandate to form government on basis of 50-50 formula that was reached in front of people of Maharashtra.They want Chief Minister from Shiv Sena. pic.twitter.com/mFwLu7LbhV
ಶರದ್ ಪವಾರ್ ಅವರನ್ನು ಭೇಟಿಯಾಗಿರುವ ಸಂಜಯ್ ರಾವತ್ ಸರ್ಕಾರ ರಚನೆಯ ಹೊಸ ಸಮೀಕರಣ(ಶಿವಸೇನೆ+ಎನ್‍ಸಿಪಿ+ಕಾಂಗ್ರೆಸ್=ಸರ್ಕಾರ)ವನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿ 50:50 ಫಾರ್ಮುಲಾ ಒಪ್ಪದಿದ್ದಲ್ಲಿ ಶಿವಸೇನೆ ಹೊಸ ಮೈತ್ರಿಗೆ ಮುಂದಾಗುವ ಸಾಧ್ಯತೆಗಳಿವೆ. ಟ್ವಿಟ್ಟರ್ ನಲ್ಲಿ ಪರೋಕ್ಷವಾಗಿ ಕಿಡಿಕಾರಿರುವ ಸಂಜಯ್ ರಾವತ್, ಸಾಹೇಬರೇ ಅಹಂಕಾರವನ್ನು ಬೆಳೆಸಿಕೊಳ್ಳಬೇಡಿ, ಸಮಯದ ಸಾಗರದಲ್ಲಿ ಸಿಕಂದರ್ ಸಹ ಮುಳುಗಿದ್ದಾನೆ ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ನಾಯಕರು ಮತ್ತು ಕಾರ್ಯಕರ್ತರರು ವ್ಯಾಪಾರಿಗಳಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಶಿವಸೇನೆ-ಬಿಜೆಪಿ ಮೈತ್ರಿಯಲ್ಲಿ ಬಿರುಕು
ಗುರುವಾರ ಶಿವಸೇನೆಯ ಎಲ್ಲ ಶಾಸಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ, ಮುಖ್ಯಮಂತ್ರಿ ಸ್ಥಾನ ಅಲಂಕರಿಸೋದು ಶಿವಸೇನೆಯ ಕನಸು. ಓರ್ವ ರಾಜಕೀಯ ನಾಯಕನಾಗಿ ನಮ್ಮ ಪಕ್ಷಕ್ಕೆ ಸಿಎಂ ಸ್ಥಾನ ಸಿಗಲಿ ಅಂತಾ ಕೇಳೋದರಲ್ಲಿ ತಪ್ಪೇನಿದೆ? ಸಿಎಂ ಸ್ಥಾನವೇ ನಮ್ಮ ಗುರಿ. ಹಾಗಾಗಿ ಈ ಗುರಿ ತಲುಪಲು ನಿಮ್ಮೆಲ್ಲರ ಸಹಕಾರದ ಅವಶ್ಯಕತೆವಿದೆ. ಮುಖ್ಯಮಂತ್ರಿ ಕುರ್ಚಿ ಮೇಲೆ ಒಬ್ಬರೇ ಬಹಳ ದಿನ ಕುಳಿತುಕೊಳ್ಳಲಾರರು ಎಂದು ಪರೋಕ್ಷವಾಗಿ ದೇವೇಂದ್ರ ಫಡ್ನವೀಸ್‍ಗೆ ಟಾಂಗ್ ಕೊಟ್ಟಿದ್ದರು. ಇದನ್ನೂ ಓದಿ: ನಾನು ಮಹಾರಾಷ್ಟ್ರ ಸಿಎಂ ಆಗುತ್ತೇನೆ – ರಾಜ್ಯಪಾಲರಿಗೆ ಪತ್ರ ಬರೆದ ರೈತ
ಮುಂಬೈ: ಯಾವುದೇ 50:50 ಫಾರ್ಮುಲಾ ಇಲ್ಲ. ನಾನೇ ಮುಂದಿನ ಐದು ವರ್ಷ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿಎಂ ದೇವೇಂದ್ರ ಫಡ್ನವೀಸ್ ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರದ ಚುನಾವಣಾ ಫಲಿತಾಂಶ ಹೊರ ಬಂದು ಐದು ದಿನ ಕಳೆದರೂ ಸರ್ಕಾರ ರಚನೆಯಾಗಿಲ್ಲ. ಶಿವಸೇನೆ ಮತ್ತು ಬಿಜೆಪಿ ನಡುವೆ ಸಿಎಂ ಪದವಿಗಾಗಿ ಪೈಪೋಟಿ ನಡೆಯುತ್ತಿದೆ. ಈ ನಡುವೆ ದೇವೇಂದ್ರ ಫಡ್ನವಿಸ್ ಮಾತ್ರ ಸಿಎಂ ಸ್ಥಾನವನ್ನು ಬಿಜೆಪಿ ಯಾರೊಂದಿಗೆ ಹಂಚಿಕೊಳ್ಳಲ್ಲ. ಶಿವಸೇನೆ ಯಾವುದೇ ಬೇಡಿಕೆಯನ್ನ ನಮ್ಮ ಮುಂದಿ ಇರಿಸಿಲ್ಲ. ಒಂದು ವೇಳೆ ಬೇಡಿಕೆಗಳನ್ನು ಮುಂದಿಟ್ಟರೆ ಮೆರಿಟ್ ಆಧಾರದಲ್ಲಿ ಬಗೆಹರಿಸಿಕೊಳ್ಳಲಾಗುವುದು ಎಂದಿದ್ದಾರೆ.
Maharashtra CM Fadnavis:At the time of Lok Sabha polls, Shiv Sena had put forward a proposal for rotational chief minister for 2.5 yrs but no decision was taken on it in front of me. Any discussion on it b/w Amit Shah Ji&Uddhav Ji is known only to them&only they can decide on it pic.twitter.com/BgFWuQrQpz
ಮಹಾರಾಷ್ಟ್ರದಲ್ಲಿ ಬಿಜೆಪಿಯೇ ಸರ್ಕಾರ ರಚನೆ ಮಾಡಲಿದೆ ಎಂಬ ಭರವಸೆಯನ್ನು ನೀಡುತ್ತೇನೆ. ಮುಂದಿನ ಐದು ವರ್ಷ ಸಹ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಚುನಾವಣೆಗೂ ಮುನ್ನವೇ ಶಿವಸೇನೆ ಮತ್ತು ಬಿಜೆಪಿ ಮೈತ್ರಿಗೆ ಅಂತಿಮ ಸ್ವರೂಪ ನೀಡಲಾಗಿದೆ. ಮೈತ್ರಿ ರಚನೆ ವೇಳೆ ಶಿವಸೇನೆ ಎರಡೂವರೆ ವರ್ಷ ಸಿಎಂ ಸ್ಥಾನ ನೀಡಬೇಕೆಂಬ ಷರತ್ತು ಹಾಕಿರಲಿಲ್ಲ. ಹಾಗಾಗಿ ಸಿಎಂ ಸ್ಥಾನ ಹಂಚಿಕೆ ಆಗಲ್ಲ ಎಂದು ಫಡ್ನವೀಸ್ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇದನ್ನೂ ಓದಿ:ಇಲ್ಲಿ ಯಾರು ಜೈಲಿನಲ್ಲಿರುವ ಪುತ್ರ ದುಷ್ಯಂತ್ ಚೌಟಾಲಾ ಇಲ್ಲ: ಶಿವಸೇನೆ, ಬಿಜೆಪಿ-ಜೆಜೆಪಿ ಮೈತ್ರಿಯನ್ನ ಟೀಕಿಸಿದ ಶಿವಸೇನೆ
Maharashtra CM Devendra Fadnavis: We have support of 10 independent MLAs till now. We expect 5 more independent MLAs to support us. (file pic) pic.twitter.com/ONTLPMbWLS
ಸೋಮವಾರ ಬಿಜೆಪಿಯ ನೂತನ ಶಾಸಕರು ಮತ್ತು ಮುಖಂಡರ ಸಭೆಯನ್ನು ಕರೆಯಲಾಗಿತ್ತು. ಇಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತಾಗಿ ಚರ್ಚೆಗಳು ನಡೆದಿವೆ ಎಂದು ವರದಿಯಾಗಿದೆ. ಶಿವಸೇನೆ ಮತ್ತು ಬಿಜೆಪಿ ನಡುವೆ ಉಂಟಾಗಿರುವ ವೈಮನಸ್ಸು ದೂರ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈಗೆ ಆಗಮಿಸುವ ಸಾಧ್ಯತೆಗಳಿವೆ. ನವೆಂಬರ್ 8ಕ್ಕೆ ಬಿಜೆಪಿ ಮಹಾರಾಷ್ಟ್ರದಲ್ಲಿ ಎರಡನೇ ಬಾರಿ ಸರ್ಕಾರ ರಚನೆ ಮಾಡಲಿದೆ ಎಂದು ವರದಿಗಳು ಬಿತ್ತರವಾಗಿವೆ.
ಏನದು 50:50 ಫಾರ್ಮುಲಾ?
ಶಿವಸೇನೆ ತಮ್ಮ ಪಕ್ಷದ ನಾಯಕ ಎರಡೂವರೆ ವರ್ಷ ಸಿಎಂ ಆಗಬೇಕು. ಬಿಜೆಪಿಯ ನಾಯಕ ಎರಡೂವರೆ ಸಿಎಂ ಆಗಬೇಕು ಎಂಬ ಷರತ್ತನ್ನು ಶಿವಸೇನೆ ಕಮಲ ನಾಯಕರ ಮುಂದೆ ಇರಿಸಿದೆ. ಶಿವಸೇನೆಗೆ ಡಿಸಿಎಂ ಸ್ಥಾನದ ಆಯ್ಕೆಯನ್ನು ನೀಡಿ, ಷರತ್ತನ್ನು ಒಪ್ಪಿಲ್ಲ.
#Maharashtra CM Devendra Fadnavis: Shiv Sena has not made any demand yet. If they make a demand, we will decide on merit. (file pic) pic.twitter.com/TX6BXKsBZ1
ಮುಂಬೈ: ಶಿವಸೇನೆಯಲ್ಲಿ ಯಾರು ದುಷ್ಯಂತ್ ಚೌಟಾಲ ಇಲ್ಲ. ಅವರ ತಂದೆ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ನಮ್ಮದು ಧರ್ಮ ಮತ್ತು ಸತ್ಯದ ರಾಜಕೀಯ ಎಂದು ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಹರ್ಯಾಣ ಮೈತ್ರಿಯನ್ನ ಟೀಕಿಸಿದ್ದಾರೆ.
ಬಿಜೆಪಿ, ಎನ್‍ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿದೆ ಎಂಬ ಲೆಕ್ಕಾಚಾರಗಳು ಮಹಾರಾಷ್ಟ್ರದ ರಾಜಕೀಯ ಅಂಗಳಲ್ಲಿ ಕೇಳಿ ಬರುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಜತ್ ರಾವತ್, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಬಂಡಾಯ ಬಂದು ಪಕ್ಷ ರಚನೆ ಮಾಡಿದ್ದಾರೆ. ನನ್ನ ಪ್ರಕಾರ ಶರದ್ ಪವಾರ ಬಿಜೆಪಿ ಜೊತೆ ಹೋಗಲ್ಲ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಶಿವಸೇನೆ ಬೇರೆ ವಿಚಾರಗಳು ಮತ್ತು ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸಿಲ್ಲ. ಶಿವಸೇನೆ ಮುಂದೆ ಹಲವು ಅವಕಾಶಗಳಿದ್ದು, ಆದ್ರೆ ನಾವು ಅದರತ್ತ ಹೋಗಿ ಪಾಪ ಮಾಡಲ್ಲ. ಶಿವಸೇನೆ ಯಾವಾಗಲೂ ಸತ್ಯದ ರಾಜಕಾರಣ ಮಾಡಿಕೊಂಡು ಬಂದಿದೆ. ನಾವು ಅಧಿಕಾರಕ್ಕಾಗಿ ಹಸಿದು ಕುಳಿತಿಲ್ಲ ಎಂದು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದರು.
S Raut on being asked 'why it's taking time to form govt despite pre-poll alliance with BJP': There is no Dushyant here whose father is in jail. Here it's us who do politics of 'dharma & satya',Sharad ji who created an environment against BJP &Congress who will never go with BJP. https://t.co/aHADYgz6wH
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಬಂದು ಐದು ದಿನ ಕಳೆದರೂ ಇದೂವರೆಗೂ ಸರ್ಕಾರ ರಚನೆಯಾಗಿಲ್ಲ. ಬಿಜೆಪಿ ಮತ್ತು ಶಿವಸೇನೆ ಮೈತ್ರಿಗೆ ಸ್ಪಷ್ಟ ಬಹುಮತ ಹೊಂದಿದ್ದರೂ, ಎರಡು ಪಕ್ಷಗಳ ನಡುವೆ ಸಿಎಂ ಪದವಿಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಿವಸೇನೆಯ 50:50 ಫಾರ್ಮುಲಾ ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಅಕ್ಟೋಬರ್ 24ರಂದು ಫಲಿತಾಂಶ ಹರ್ಯಾಣದಲ್ಲಿ ಜೆಜೆಪಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಮನೋಹರ್ ಲಾಲ್ ಖಟ್ಟರ್ ಎರಡನೇ ಬಾರಿ ಸಿಎಂ ಆದ್ರೆ, ಜೆಜೆಪಿಯ ದುಷ್ಯಂತ್ ಚೌಟಾಲಾ ಡಿಸಿಎಂ ಆಗಿದ್ದಾರೆ.
2014ರ ಚುನಾವಣೆಯಲ್ಲಿ ಶಿವಸೇನೆ ಮತ್ತು ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದವು. ಶಿವಸೇನೆ 63 ಮತ್ತು ಬಿಜೆಪಿ 122 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು. ನಂತರ ಎರಡೂ ಪಕ್ಷಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲಾಗಿತ್ತು.
2019ರಲ್ಲಿ ಬಿಜೆಪಿ ಚುನಾವಣೆ ಪೂರ್ವದಲ್ಲಿಯೇ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇತ್ತ ಕಾಂಗ್ರೆಸ್ ಮತ್ತು ಎನ್‍ಸಿಪಿ ಮೈತ್ರಿ ರಚನೆ ಮಾಡಿಕೊಂಡು ಅಖಾಡಕ್ಕೆ ಇಳಿದಿದ್ದವು. ಬಿಜೆಪಿ 105, ಶಿವಸೇನೆ, 56, ಎನ್‍ಸಿಪಿ 54, ಕಾಂಗ್ರೆಸ್ 44 ಮತ್ತು ಇತರರು 29 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.
ಚೌಟಾಲಾ ತಂದೆಗೆ ಪೆರೋಲ್:
ದುಷ್ಯಂತ್ ಚೌಟಾಲಾ ತಂದೆ ಅಜಯ್ ಚೌಟಾಲಾ ಜೂನಿಯರ್ ಬೇಸಿಕ್ ಟ್ರೆಂಡ್ (ಜೆಬಿಟಿ) ಶಿಕ್ಷಕರ ಹುದ್ದೆ ಭರ್ತಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ತಿಹಾರ್ ಜೈಲು ಸೇರಿದ್ದಾರೆ. ಅಜಯ್ ಚೌಟಾಲಾಗೆ ಸಿಬಿಐ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿ ಜೈಲಿಗೆ ಕಳುಹಿಸಿದೆ. ಸದ್ಯ ಎರಡು ವಾರಗಳ ಪೆರೋಲ್ ಪಡೆದುಕೊಂಡು ಹೊರ ಬಂದಿದ್ದಾರೆ. ತಿಹಾರ್ ಜೈಲಿನಲ್ಲಿರುವ ಅಜಯ್ ಚೌಟಾಲಾರ ಬಳಿ ಮೊಬೈಲ್ ಪತ್ತೆಯಾಗಿತ್ತು. ಅಧಿಕಾರಿಗಳು ಜೂನ್ ನಲ್ಲಿ ಅಜಯ್ ಚೌಟಾಲಾರನ್ನು ಪರಿಶೀಲನೆಗೆ ಒಳಪಡಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ತಿಹಾರ್ ಜೈಲಿನಲ್ಲಿ ಅಜಯ್ ಚೌಟಾಲಾರಿಗೆ ಫೋನ್ ನೀಡಿದ್ದು ಯಾರು ಎಂಬುದರ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿದ್ದವು.
ನವದೆಹಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಅಂತ್ಯವಾಗಿದ್ದು, ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಗುಟ್ಟು ಇವಿಯಂ ಯಂತ್ರದಲ್ಲಿ ಲಾಕ್ ಆಗಿದೆ. ಅಕ್ಟೋಬರ್ 24ರಂದು ಎರಡು ರಾಜ್ಯಗಳ ಚುಣಾವಣೆ ಫಲಿತಾಂಶ ಹೊರ ಬೀಳಲಿದೆ. ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದಿದ್ದು, ಎರಡು ರಾಜ್ಯಗಳಲ್ಲಿ ಮತ್ತೊಮ್ಮೆ ಕೇಸರಿ ರಣ ಕಹಳೆ ಮೊಳಗಲಿದೆ ಎಂದು ಸಮೀಕ್ಷೆಗಳು ಸ್ಪಷ್ಟವಾಗಿ ಹೇಳುತ್ತಿವೆ.
ಲೋಕಸಭಾ ಚುನಾವಣೆ ಬಳಿಕ ಮೊದಲ ವಿಧಾನಸಭಾ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪ್ರತಿಷ್ಠೆಯ ಕಣವಾಗಿತ್ತು. ಇತ್ತ ಕಾಂಗ್ರೆಸ್ ಗೆ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಶ್ನೆ ಎದುರಾಗಿತ್ತು. ಎರಡು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಮಾಡಿದ್ದವು. ಸಮೀಕ್ಷೆಗಳು ಮಾತ್ರ ಮತ್ತೊಮ್ಮೆ ಮೋದಿ- ಅಮಿತಾ ಶಾ ಜೋಡಿಯೇ ಮೇಲುಗೈ ಸಾಧಿಸಲಿವೆ ವಿಚಾರವನ್ನು ಸಮೀಕ್ಷೆಗಳ ಅಂಕಿಗಳು ಸ್ಪಷ್ಟಪಡಿಸುತ್ತಿವೆ.
ಇಂಡಿಯಾ ಟುಡೇ:
ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕಾರ ಹಿಡಿಯಲಿದೆ. ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 109-124, ಶಿವಸೇನೆ 57-40, ಕಾಂಗ್ರೆಸ್ 32-40, ಎನ್‍ಸಿಪಿ 40-50, ವಿಬಿಎ 0-2 ಮತ್ತು ಇತರರು 22-32 ಕ್ಷೇತ್ರಗಳಲ್ಲಿ ಗೆಲುವನ್ನು ದಾಖಲಿಸಬಹುದು ಇಂಡಿಯಾ ಟುಡೇ ಸಮೀಕ್ಷೆ ಹೇಳಿದೆ. ಇಂಡಿಯಾ ಟುಡೇ ಪ್ರಕಾರ ಹರ್ಯಾಣದಲ್ಲಿ ಬಿಜೆಪಿ 77, ಕಾಂಗ್ರೆಸ್ 11 ಮತ್ತು ಇತರರು 1 ಕ್ಷೇತ್ರದಲ್ಲಿ ಗೆಲುವು ದಾಖಲಿಸುವ ಸಾಧ್ಯತೆಗಳಿವೆ.
2014ರಲ್ಲಿ ನಡೆದ ಚುನಾವಣೆ ವೇಳೆ ಬಿಜೆಪಿ ಮತ್ತು ಶಿವಸೇನೆ 185 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ ಸರ್ಕಾರ ರಚನೆ ಮಾಡಿದ್ದವು. ಕಾಂಗ್ರೆಸ್ 83 ಮತ್ತು ಪಕ್ಷೇತರ ಅಭ್ಯರ್ಥಿಗಳು 20 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರು. ಹರ್ಯಾಣದಲ್ಲಿ ನಡೆದ 2014ರ ಚುನಾವಣೆಯಲ್ಲಿ ಬಿಜೆಪಿ 47, ಕಾಂಗ್ರೆಸ್ 15 ಮತ್ತು ಇತರರು 28 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.
ಇಂದು ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.55.31 ಮತ್ತು ಹರ್ಯಾಣದಲ್ಲಿ ಶೇ.61.62ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದ 288, ಹರ್ಯಾಣದ 90 ಮತ್ತು ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಬಹುತೇಕ ಎಲ್ಲ ಕಡೆಯೂ ಶಾಂತಿಯುತ ಮತದಾನವಾಗಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. ಸಂಜೆ ಆರು ಗಂಟೆಗೆ ಒಟ್ಟು ಶೇ.55.31 ರಷ್ಟು ಮತದಾನವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮೈತ್ರಿ ಮತ್ತು ಕಾಂಗ್ರೆಸ್,ಎನ್‍ಸಿಪಿ ಮೈತ್ರಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಎಲ್ಲ ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಭದ್ರವಾಗಿದೆ.
ದೇಶದ ವಿವಿಧ ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇಂದು ಉಪ ಚುನಾವಣೆ ನಡೆದಿದೆ. ಗುಜರಾತ-6, ಅಸ್ಸಾಂ-4, ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ ಎರಡು, ಉತ್ತರ ಪ್ರದೇಶದ 11 ಕ್ಷೇತ್ರಗಳಲ್ಲಿ ಇಂದು ಉಪ ಚುನಾವಣೆ ನಡೆದಿದೆ. ಪಂಜಾಬ್-4, ಕೇರಳ-5, ಸಿಕ್ಕಿಂ-3, ರಾಜಸ್ಥಾನ-2, ಮಧ್ಯ ಪ್ರದೇಶ, ಓಡಿಸ್ಸಾ, ಛತ್ತೀಸಗಢ, ಪುದುಚೇರಿ, ಮೇಘಾಲಯ ಮತ್ತು ತೆಲಂಗಾಣದಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿದೆ.
ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಚುನಾವಣೆ ನಡೆದಿದ್ದು, ಸಂಜೆ 6ಗಂಟೆವರೆಗೆ ಶೇ.61.62ರಷ್ಟು ಮತದಾನವಾಗಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಇಂಡಿಯನ್ ನ್ಯಾಶನಲ್ ಲೋಕ್ ದಳದಿಂದ ಬೇರೆಯಾಗಿರುವ ಜೆಜೆಪಿ ಅಭ್ಯರ್ಥಿಗಳು ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ನೀಡಲಿದ್ದಾರೆ. ಒಂದು ಹರ್ಯಾಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.