Tag: ಮಹಾಲಿಂಗಪುರ

  • ಬಾಗಲಕೋಟೆಯಲ್ಲಿ ನಿರಂತರ ಮಳೆ – ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಬಾಲಕ ಸಾವು

    ಬಾಗಲಕೋಟೆಯಲ್ಲಿ ನಿರಂತರ ಮಳೆ – ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಬಾಲಕ ಸಾವು

    ಬಾಗಲಕೋಟೆ: ಶುಕ್ರವಾರ ರಾತ್ರಿ ಸುರಿದ ನಿರಂತರ ಮಳೆಗೆ (Rain) ಮನೆಯ ತಗಡಿನ ಮೇಲ್ಛಾವಣಿ ಹಾಗೂ ಗೋಡೆ ಕುಸಿದು (Wall Collapse) ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ (Mahalingapura) ಪಟ್ಟಣದಲ್ಲಿ ನಡೆದಿದೆ.

    ನಾಗಪ್ಪ ಲಾತೂರ್ ಮಗ ದರ್ಶನ್ ಲಾತೂರ್ (11) ಮೃತ ಬಾಲಕ. ಘಟನೆಯಲ್ಲಿ ಇನ್ನೊಬ್ಬ ಬಾಲಕ ಶ್ರೀಶೈಲ ಗಾಯಗೊಂಡಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಿರಂತರ ಮಳೆ – ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

    ಮನೆಯಲ್ಲಿ ಕೋಣೆಯೊಂದರಲ್ಲಿ ಮಕ್ಕಳು ತಾಯಿಯೊಂದಿಗೆ ಮಲಗಿದ್ದರು. ಬೆಳಗ್ಗೆ ತಾಯಿ ಎದ್ದು ಬೇರೆ ಕೊಠಡಿಗೆ ಬರುತ್ತಲೇ ಮನೆಯ ಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

  • ಹಿಡಿದು, ಎಳೆದಾಡಿ, ಮೆಟ್ಟಿಲಿನಿಂದ ತಳ್ಳಿದ್ರು- ಪುರಸಭೆ ಸದಸ್ಯೆ ಕಣ್ಣೀರು

    ಹಿಡಿದು, ಎಳೆದಾಡಿ, ಮೆಟ್ಟಿಲಿನಿಂದ ತಳ್ಳಿದ್ರು- ಪುರಸಭೆ ಸದಸ್ಯೆ ಕಣ್ಣೀರು

    – ಮೋದಿ ಭೇಟಿ ಬಚಾವೋ ಅಂತಾರೇ, ಶಾಸಕರ ವರ್ತನೆ ಸರಿನಾ?
    – ದಲಿತ ಹೆಣ್ಣು ಮಗಳಿಗೆ ಹೀಗಾದ್ರೆ ಮುಂದೆ ಗತಿ ಏನು?

    ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಸದಸ್ಯೆರನ್ನು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ವಿರುದ್ಧ ಸದಸ್ಯೆ ಚಾಂದಿನಿ ನಾಯ್ಕ್ ಕಣ್ಣೀರಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ ಘಟನೆ ಕುರಿತು ಮಾಹಿತಿ ನೀಡಿದ ಸದಸ್ಯೆ ಚಾಂದಿನಿ ನಾಯ್ಕ್, ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ತೆರಳಿದ್ದೆವು. ಈ ವೇಳೆ ನಮಗೆ ಮತ ಚಲಾಯಿಸಲು ಅವಕಾಶ ನೀಡದೆ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಘಟನೆ ನಡೆಯುವ ಮುನ್ನವೇ ನಮಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೆವು. ಆದರೆ ಅವರು ಯಾವುದೇ ರಕ್ಷಣೆ ನೀಡಲು ಮುಂದಾಗಲಿಲ್ಲ. ಶಾಸಕರು ಹಾಗೂ ಅವರ ಬೆಂಬಲಿಗರು ನಮ್ಮನ್ನು ಹಿಡಿದು ಎಳೆದಾಡಿ, ಮೆಟ್ಟಿಲು ಮೇಲಿನಿಂದ ತಳ್ಳಿ ತುಳಿದಾಡಿದ್ದರು. ಘಟನೆಯಿಂದ ಮಾಸಿಕವಾಗಿ, ದೈಹಿಕವಾಗಿ ನೋವಾಗಿದ್ದು, ನಮ್ಮ ಮೇಲೆ ನಡೆದಿರುವ ದೌರ್ಜನ್ಯಕ್ಕೆ ನ್ಯಾಯ ಬೇಕಿದೆ ಎಂದರು.

    ಪ್ರಧಾನಿ ಮೋದಿ ಅವರು ಮೋದಿ ಭೇಟಿ ಬಚಾವೋ ಎಂದು ಹೇಳುತ್ತಾರೆ. ಆದರೆ ಈ ರೀತಿ ಶಾಸಕರು ನಡೆದುಕೊಳ್ಳುತ್ತಾರಾ? ಚುನಾವಣೆಯ ಸಂದರ್ಭದಲ್ಲಿ ನಮ್ಮನ್ನು ಯಾರು ಕಿಡ್ನಾಪ್ ಮಾಡಿಲ್ಲ. ದಲಿತ ಸದಸ್ಯೆಯಾಗಿ ನನಗೆ ಅನ್ಯಾಯವಾಗಿತ್ತು. ಆದ್ದರಿಂದಲೇ ನಾನು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರಿಗೆ ಬೆಂಬಲ ನೀಡಲು ಮುಂದಾಗಿದ್ದೆ. ಆದರೆ ನಮಗೆ ಮತ ಚಲಾಯಿಸಲು ಅವಕಾಶ ನೀಡದೆ ಚುನಾವಣೆ ನಡೆಸಿದ್ದಾರೆ. ಜನರು ನಮ್ಮನ್ನು ಆಯ್ಕೆ ಮಾಡಿದ್ದರು ನಮಗೆ ಯಾವುದೇ ಅವಕಾಶ ಲಭಿಸಿಲ್ಲ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: ನಾನು ಮಹಿಳೆಯ ರಕ್ಷಣೆಗೆ ಮುಂದಾಗಿದ್ದೆ- ಅಸಭ್ಯ ವರ್ತನೆಗೆ ಸಿದ್ದು ಸವದಿ ಸಮರ್ಥನೆ

    ಸವದಿ ಅವರೇ ನಮ್ಮ ಮೇಲೆ ಜನರನ್ನು ನುಗ್ಗಿಸಿದ್ದರು. ಇದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ. ಯಾರು ದೌರ್ಜನ್ಯ ನಡೆಸಿದ್ದಾರೆ ಎಂಬುವುದು ಸ್ಪಷ್ಟವಾಗಿ ಕಾಣಿಸುತ್ತದೆ. ನಮ್ಮ ಮೇಲೆ ಇಷ್ಟು ನಡೆದರು ಪೊಲೀಸರು ರಕ್ಷಣೆ ನೀಡಲು ಮುಂದಾಗದೇ ಕೈಕಟ್ಟಿ ನಿಂತಿದ್ದರು. ಈಗ ನಮ್ಮ ಮೇಲಿನ ದೌರ್ಜನ್ಯ ನಡೆಸಿದವರ ವಿರುದ್ಧ ಪೊಲೀಸ್ ದೂರು ದಾಖಲಿಸುತ್ತೇವೆ. ಅಲ್ಲದೇ ಮರು ಚುನಾವಣೆ ಮಾಡಲು ಒತ್ತಾಯ ಮಾಡುತ್ತೇವೆ. ಪುರಸಭೆಯ ಮಹಿಳಾ ಸದಸ್ಯಯೇ ಮೇಲೆಯೇ ಈ ರೀತಿ ನಡೆದರೆ ಸಾಮಾನ್ಯ ಮಹಿಳೆಯ ಸ್ಥಿತಿ ಏನು ಎಂದು ಪ್ರಶ್ನೆ ಮಾಡಿದರು.

    ನಡೆದಿದ್ದೇನು?
    ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ, ಚಾಂದಿನಿ ನಾಯ್ಕ್ ಸೇರಿದಂತೆ ಮೂವರು ಮಹಿಳಾ ಸದಸ್ಯೆಯರು ತೆರಳುತ್ತಿದ್ದರು. ಈ ವೇಳೆ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದರು. ಶಾಸಕರು ದೌರ್ಜನ್ಯ ನಡೆಸಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯನ್ನು ಎಳೆದಾಡಿ ಮೈ, ಕೈ ಮುಟ್ಟಿ ಅಮಾನವೀವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿತ್ತು. ಪೊಲೀಸರ ಸಮ್ಮುಖದಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆದಿದ್ದು, ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುರಸಭೆ ಸದಸ್ಯೆಯೊಂದಿಗೆ ಅಮಾನವೀಯತೆಯಿಂದ ವರ್ತನೆ ಮಾಡಲಾಗಿತ್ತು. ಶಾಸಕರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

  • ನಾನು ಮಹಿಳೆಯ ರಕ್ಷಣೆಗೆ ಮುಂದಾಗಿದ್ದೆ- ಅಸಭ್ಯ ವರ್ತನೆಗೆ ಸಿದ್ದು ಸವದಿ ಸಮರ್ಥನೆ

    ನಾನು ಮಹಿಳೆಯ ರಕ್ಷಣೆಗೆ ಮುಂದಾಗಿದ್ದೆ- ಅಸಭ್ಯ ವರ್ತನೆಗೆ ಸಿದ್ದು ಸವದಿ ಸಮರ್ಥನೆ

    – ಕಾಂಗ್ರೆಸ್‍ನವರು ನಮ್ಮ ಸದಸ್ಯೆಯನ್ನ ಕಿಡ್ನಾಪ್ ಮಾಡಿದ್ದರು

    ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂದರ್ಭದಲ್ಲಿ ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ತಮ್ಮ ಮೇಲಿನ ಆರೋಪವನ್ನು ಅಲ್ಲಗೆಳೆದಿದ್ದಾರೆ. ಅಲ್ಲದೇ ಮಹಿಳಾ ಸದಸ್ಯೆಯ ರಕ್ಷಣೆಗೆ ನಾನು ಮುಂದಾಗಿದ್ದೆ ಎಂದು ತಿಳಿಸಿದ್ದಾರೆ.

    ಘಟನೆ ಕುರಿತಂತೆ ಪಬ್ಲಿಕ್ ಟಿವಿಯೊಂದಿಗೆ ಮಾಹಿತಿ ನೀಡಿದ ಮಾತನಾಡಿದ ಶಾಸಕ ಸಿದ್ದು ಸವದಿ, ನಮ್ಮ ಮಹಿಳಾ ಸಮಸ್ಯೆಯನ್ನು ಕಾಂಗ್ರೆಸ್ ನಾಯಕರು ಕಿಡ್ನಾಪ್ ಮಾಡಿದ್ದರು. ಈ ವೇಳೆ ಅವರು ಚುನಾವಣೆಯಲ್ಲಿ ಮತ ಚಲಾಯಿಸಲು ಆಗಮಿಸಿದ್ದರು. ಈ ಹಂತದಲ್ಲಿ ಸದಸ್ಯೆ ಸವಿತಾ ಅವರನ್ನು ಕೆಲವರು ಹಿಡಿದು ಎಳೆದುಕೊಂಡು ಬರುತ್ತಿದ್ದರು. ನಾನು ಅವರ ಅಲ್ಲೇ ನಿಂತಿದ್ದರ ಕಾರಣ ಅವರ ರಕ್ಷಣೆಗೆ ಮುಂದಾಗಿದ್ದೆ. ಆದರೆ ಅಲ್ಲಿ ಕೆಲವರು ನನ್ನ ಮೇಲೆ ಬಿದ್ದು ಗದ್ದಲ ಮಾಡಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.

    ನಾನು ಯಾವುದೇ ಅಸಭ್ಯ ವರ್ತನೆ ಮಾಡಿಲ್ಲ. ಇದನ್ನು ನಾನು ಕಾಂಗ್ರೆಸ್ ಅವರು ಕ್ರಿಯೇಟ್ ಮಾಡಿದ್ದಾರೆ. ನಮ್ಮ ನಾಲ್ವರು ಸದಸ್ಯರು ಮತ ಚಲಾಯಿಸಲು ಬರುತ್ತಿದ್ದರು. ಪುರಸಭೆ ಮಹಿಳಾ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಎಳೆದಾಡುತ್ತಿದ್ದರು. ಆಗ ನಾನು ಅವರನ್ನ ರಕ್ಷಣೆ ಮಾಡಲು ಮುಂದಾದೆ. ಸದಸ್ಯೆಯನ್ನು ಹಿಡಿದು ಎಳೆದಾಡುತ್ತಿದ್ದ ಜನರ ಕೈಯಿಂದ ಅವರನ್ನು ಬಿಡಿಸಲು ನಾನು ಮುಂದಾದೆ. ಮೆಟ್ಟಿಲುಗಳ ಮೇಲಿಂದ ಅವರು ಜಾರಿ ಬಿದ್ದರು. ನಾನು ನಮ್ಮ ಪಕ್ಷದ ಸದಸ್ಯೆಯನ್ನು 3 ಗಂಟೆಗೆ ಕಾಂಗ್ರೆಸ್ ಅವರು ಕಿಡ್ನಾಪ್ ಮಾಡಿದ್ದರು. ಆಕೆಯ ಪತಿ ನಮ್ಮೊಂದಿಗೆ ಇದ್ದರು. ಈ ಹಿಂದೆಯೂ ಮೂರು ಬಾರಿ ಕಾಂಗ್ರೆಸ್ ಅವರು ಇದೇ ರೀತಿ ಮಾಡಿದ್ದಾರೆ. ನಮ್ಮ ಪಕ್ಷಕ್ಕೆ ಮಾತ ನೀಡಿ ಎಂಬುವುದು ತಪ್ಪಾ ಎಂದು ಪ್ರಶ್ನಿಸಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು.

    ನಡೆದಿದ್ದೇನು?
    ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದರು. ಶಾಸಕರು ದೌರ್ಜನ್ಯ ನಡೆಸಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯನ್ನು ಎಳೆದಾಡಿ ಮೈ, ಕೈ ಮುಟ್ಟಿ ಅಮಾನವೀವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿತ್ತು. ಪೊಲೀಸರ ಸಮ್ಮುಖದಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆದಿದ್ದು, ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುರಸಭೆ ಸದಸ್ಯೆಯೊಂದಿಗೆ ಅಮಾನವೀಯತೆಯಿಂದ ವರ್ತನೆ ಮಾಡಲಾಗಿತ್ತು. ಶಾಸಕರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

  • ಪುರಸಭೆಯ ಮಹಿಳಾ ಸದಸ್ಯೆಯನ್ನು ಎಳೆದಾಡಿ ಬಿಜೆಪಿ ಶಾಸಕ, ಬೆಂಬಲಿಗರ ಅಸಭ್ಯ ವರ್ತನೆ

    ಪುರಸಭೆಯ ಮಹಿಳಾ ಸದಸ್ಯೆಯನ್ನು ಎಳೆದಾಡಿ ಬಿಜೆಪಿ ಶಾಸಕ, ಬೆಂಬಲಿಗರ ಅಸಭ್ಯ ವರ್ತನೆ

    – ಸದಸ್ಯೆಯನ್ನು ಹೊತ್ತೊಯ್ದ ಬೆಂಬಲಿಗರು

    ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂಬಂಧ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದಾರೆ. ಮಹಾಲಿಂಗಪುರ ಪುರಸಭೆ ಸಂಬಂಧ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

    ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಮಹಿಳೆಯೊಂದಿಗೆ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ. ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ಮತ ಚಲಾವಣೆ ಮಾಡಲು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕರು, ಸದಸ್ಯೆಯನ್ನು ಎಳೆದಾಡಿ ಗೂಂಡಾ ವರ್ತನೆ ತೋರಿದ್ದಾರೆ.

    ಈ ಕುರಿತಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸವಿತಾ, ನಾನು ಈಗ ತಾನೇ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದೇನೆ. ನಮ್ಮ ಮನೆಯ ಮಕ್ಕಳು ಭಯಗೊಂಡಿದ್ದಾರೆ. ಪಾಲಿಕೆ ಸದಸ್ಯೆಯಾದ ನನಗೆ ಮತ ಚಲಾವಣೆ ಮಾಡಲು ಅವಕಾಶವೇ ನೀಡಲಿಲ್ಲ. ಅಲ್ಲದೇ ನನ್ನನ್ನು ಹಿಡಿದು ಎಳೆದಾಡಿದರು. ನನಗೆ ಅನ್ಯಾಯವಾಗಿದೆ. ಶಾಸಕರು, ಬೆಂಬಲಿಗರು ನಮ್ಮ ಮೇಲೆ ದೌರ್ಜನ್ಯ ಮಾಡಿದ್ದಾರೆ.

    ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ನನ್ನ ಪತಿ, ನಾನು ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತಿದ್ದು, ಶಾಸಕರನ್ನೇ ನಾವು ತಂದೆಯಂತೆ ತಿಳಿದು ಕಾರ್ಯ ಮಾಡುತ್ತಿದ್ದೆವು. ಆದರೆ ಶಾಸಕರು ಯಾವುದೇ ರೀತಿಯ ಕೆಲಸವನ್ನು ಜನರಿಗೆ ಮಾಡಲಿಲ್ಲ. ನಮಗೂ ಅನ್ಯಾಯ ಮಾಡಿದ್ದಾರೆ. ಪಕ್ಷದಲ್ಲಿ ನಮಗೆ ಬೆಲೆಯೇ ಇಲ್ಲವಾಗಿತ್ತು ಎಂದು ಆರೋಪಿಸಿದ್ದಾರೆ.

    ಮಹಾಲಿಂಗಪುರ ಪುರಸಭೆ ಸಂಬಂಧ ನಡೆದ ಚುನಾವಣೆ ಸಂದರ್ಭದಲ್ಲಿ ಸೋಮವಾರ ನಡೆದಿದ್ದು, ಈಗ ಶಾಸಕರು ದೌರ್ಜನ್ಯ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಎಳೆದಾಡಿ ಮೈ, ಕೈ ಮುಟ್ಟಿ ಅಮಾನವೀವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಇಂತಹ ಅಮಾನವೀಯ ಘಟನೆ ನಡೆದಿದ್ದು, ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಪುರಸಭೆ ಸದಸ್ಯೆಯೊಂದಿಗೆ ಅಮಾನವೀಯತೆ ಮಾಡಲಾಗಿದೆ. ಶಾಸಕರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ಮಹಾಲಿಂಗಪುರ ಪುರಸಭೆಯಲ್ಲಿ ಬಿಜೆಪಿ 13 ಸದಸ್ಯರು, ಕಾಂಗ್ರೆಸ್ 10 ಸದಸ್ಯರ ಸಂಖ್ಯಾಬಲ ಹೊಂದಿದ್ದು, ಚುನಾವಣೆಯ ಸಂದರ್ಭದಲ್ಲಿ ಮೂವರು ಬಿಜೆಪಿ ಸದಸ್ಯರು ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದಾರೆ ಎಂಬ ವಿಷಯ ತಿಳಿದು ಅಮಾನವೀಯ ವರ್ತಿಸಲಾಗಿದೆ. ಘಟನೆ ಕುರಿತಂತೆ ಇದುವರೆಗೂ ಪೊಲೀಸರು ಯಾವುದೇ ಪ್ರಕರಣವನ್ನು ದಾಖಲಿಸಿಕೊಂಡಿಲ್ಲ.