Tag: ಮಹಾ ಕುಂಭ ಮೇಳ

  • ನಟಿ ಮಾಡೋದಾಗಿ ಹೇಳಿ ರೇಪ್‌ – ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌

    ನಟಿ ಮಾಡೋದಾಗಿ ಹೇಳಿ ರೇಪ್‌ – ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌

    ನವದೆಹಲಿ: ಮಹಾ ಕುಂಭ ಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾಗೆ (Maha Kumbh Viral Girl Monalisa) ಚಿತ್ರದಲ್ಲಿ ಅವಕಾಶ ನೀಡಿದ್ದ ನಿರ್ದೇಶಕ ಸನೋಜ್‌ ಮಿಶ್ರಾ (Sanoj Mishra) ಅವರನ್ನು ಅತ್ಯಾಚಾರ (Rape) ಆರೋಪದ ಅಡಿ ಬಂಧಿಸಲಾಗಿದೆ.

    ತನ್ನನ್ನು ಚಿತ್ರನಟಿ (Actress) ಮಾಡುವುದಾಗಿ ಹೇಳಿ ಸನೋಜ್‌ ಸುಳ್ಳು ಭರವಸೆ ನೀಡಿ ಶೋಷಣೆ ಮಾಡಿದ್ದಾರೆ ಎಂದು ಯುವತಿ ದೂರು ನೀಡಿದ ಆರೋಪದ ಅಡಿ ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ ಎಂದು ವರದಿಯಾಗಿದೆ.

    ಯುವತಿಯ ದೂರಿನಲ್ಲಿ ಏನಿದೆ?
    2020 ರಲ್ಲಿ ಝಾನ್ಸಿಯಲ್ಲಿ ವಾಸಿಸುತ್ತಿದ್ದಾಗ ಟಿಕ್‌ಟಾಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದೆ. ನನ್ನ ವಿಡಿಯೋ ನೋಡಿ ಸನೋಜ್‌ ಮಿಶ್ರ ಸಂಪರ್ಕಿಸಿದ್ದರು. ನಂತರ ನಾವು ನಿರಂತರ ಸಂಪರ್ಕದಲ್ಲಿದ್ದೆವು.

    ಜೂನ್‌ 2021 ರಲ್ಲಿ ನಾನು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಇದ್ದೇನೆ. ಭೇಟಿಯಾಗಲು ಬಾ ಎಂದು ಕರೆದರು. ನಾನು ಬರಲು ನಿರಾಕರಿಸಿದಾಗ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಕುಂಭಮೇಳದ ಬ್ಯೂಟಿ ಮೊನಾಲಿಸಾ ಈಗ ಚಿನ್ನದ ಆಭರಣ ರಾಯಭಾರಿ – ಸಂಭಾವನೆ ಎಷ್ಟು ಗೊತ್ತಾ?

    ಬೆದರಿಕೆಗೆ ಹೆದರಿ ಮರುದಿನ ನಾನು ಅವರನ್ನು ಭೇಟಿಯಾಗಲು ಒಪ್ಪಿಕೊಂಡೆ. ಮಿಶ್ರಾ ಅವರು ರೆಸಾರ್ಟ್‌ಗೆ ಕರೆದೊಯ್ದು ಮಾದಕ ದ್ರವ್ಯ ನೀಡಿ ಹಲ್ಲೆ ನಡೆಸಿದರು. ಅಷ್ಟೇ ಅಲ್ಲದೇ ನನ್ನ ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದರು. ಕರೆದಾಗ ಬರದೇ ಇದ್ದರೆ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದರು.

    ಮಿಶ್ರಾ ಹಲವು ಬಾರಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ. ಮದುವೆಯ ಸುಳ್ಳು ಭರವಸೆಗಳನ್ನು ನೀಡಿ ಸಿನಿಮಾಗಳಲ್ಲಿ ಪಾತ್ರಗಳನ್ನು ನೀಡುವುದಾಗಿ ಹೇಳಿದ್ದರು ಎಂದು ದೂರಿದ್ದಾಳೆ. ಇದನ್ನೂ ಓದಿ: ಮೊನಾಲಿಸಾ ಹಾಟ್‌ ಸಾಂಗ್‌ ರಿಲೀಸ್‌ – ವಿಡಿಯೋ ವೈರಲ್‌!

    ಮಹಾ ಕುಂಭಮೇಳದ ಸಮಯದಲ್ಲಿ ಮೊನಾಲಿಸಾ ಫೋಟೋ ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. ಕೆಲವು ದಿನಗಳ ನಂತರ ಸನೋಜ್ ಮಿಶ್ರಾ ʼದಿ ಡೈರಿ ಆಫ್ ಮಣಿಪುರʼ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲದೇ ಮೊನಾಲಿಸಾಗೆ ನಟನಾ ಪಾಠಗಳನ್ನು ನೀಡಲು ಪ್ರಾರಂಭಿಸಿದ್ದರು.

    ಮಿಶ್ರಾ ಅವರು ಗಾಂಧಿಗಿರಿ, ರಾಮ್ ಕಿ ಜನ್ಮಭೂಮಿ, ಲಫಂಗೆ ನವಾಬ್, ಧರ್ಮ್ ಕೆ ಸೌದಾಗರ್ ಮತ್ತು ಕಾಶಿ ಟು ಕಾಶ್ಮೀರ್ ಸೇರಿದಂತೆ ಹಲವಾರು ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.

     

  • ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ

    ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ

    – ಕೃತ್ಯ ಎಸಗಿ ಪೋರ್ಚುಗಲ್‌ಗೆ ಪರಾರಿಯಾಗಲು ಪ್ಲ್ಯಾನ್‌
    – ಗುಪ್ತಚರ ಇಲಾಖೆಯ ಖಚಿತ ಮಾಹಿತಿಯಿಂದ ಇಂದು ಅರೆಸ್ಟ್‌

    ಲಕ್ನೋ: ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ (Maha Kumbh Mela) ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

    ಬಂಧನಕ್ಕೆ ಒಳಗಾಗಿರುವ ಉಗ್ರ ಮಸಿಹ್ ಕುಂಭ ಮೇಳದಲ್ಲಿ ಕೃತ್ಯ ಎಸಗಲು ಮುಂದಾಗಿದ್ದ. ಆದರೆ ತೀವ್ರ ಭದ್ರತಾ ತಪಾಸಣೆಯಿಂದಾಗಿ ಈತ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದು ಉತ್ತರ ಪ್ರದೇಶ (Uttar Pradesh) ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

     

    ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮಹಾಕುಂಭದ ಸಮಯದಲ್ಲಿ ದಾಳಿ ನಡೆಸಿದ ನಂತರ ಪೋರ್ಚುಗಲ್‌ಗೆ ಪಲಾಯನ ಮಾಡುವ ಉದ್ದೇಶ ಹೊಂದಿದ್ದ. ಆದರೆ ಪೊಲೀಸರ ಜಾಗರೂಕತೆಯಿಂದಾಗಿ ಆತನ ಯೋಜನೆಗಳು ವಿಫವಾಗಿತ್ತು. ಮಹಾಕುಂಭದ ಸಿದ್ಧತೆಗಳ ಸಮಯದಲ್ಲಿ ಮಸಿಹ್ ಲಕ್ನೋ ಮತ್ತು ಕಾನ್ಪುರಕ್ಕೆ ಭೇಟಿ ನೀಡಿದ್ದ ಎಂದು ಹೇಳಿದರು.

    ಮಹಾಕುಂಭ ಪ್ರಾರಂಭವಾಗುವ ಮೊದಲು ಶಾಂತಿಯನ್ನು ಭಂಗಗೊಳಿಸುವ ಪ್ರಯತ್ನಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಮಾಹಿತಿಯ ಮೇರೆಗೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಮತ್ತು ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಮಸಿಹ್‌ನನ್ನು ಇಂದು ಕೌಶಂಬಿಯಿಂದ ಬಂಧಿಸಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಯುಪಿಯಲ್ಲಿ ಅರೆಸ್ಟ್

    ಭಯೋತ್ಪಾದಕ ಮಸಿಹ್ ಪಾಕಿಸ್ತಾನದ ಐಎಸ್‌ಐ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಗಡಿಯಾಚೆಗಿನ ಹ್ಯಾಂಡ್ಲರ್‌ಗಳಿಂದ ಡ್ರೋನ್‌ಗಳ ಮೂಲಕ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ಪಡೆಯುತ್ತಿದ್ದ. ಮಾಹಿತಿಯ ಪ್ರಕಾರ ಮಸಿಹ್‌ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ನ ಜರ್ಮನಿ ಮೂಲದ ಮಾಡ್ಯೂಲ್‌ನ ಮುಖ್ಯಸ್ಥ ಸ್ವರ್ಣ್ ಸಿಂಗ್ ಅಲಿಯಾಸ್ ಜೀವನ್ ಫೌಜಿಗಾಗಿ ಕೆಲಸ ಮಾಡುತ್ತಿದ್ದ.

    ಬಂಧನಕ್ಕೆ ಒಳಗಾದ ಉಗ್ರನಿಂದ 3 ಸಕ್ರಿಯ ಹ್ಯಾಂಡ್ ಗ್ರೆನೇಡ್‌ಗಳು, 2 ಸಕ್ರಿಯ ಡಿಟೋನೇಟರ್‌ಗಳು, 13 ಕಾರ್ಟ್ರಿಡ್ಜ್‌ಗಳು ಮತ್ತು 1 ವಿದೇಶಿ ನಿರ್ಮಿತ ಪಿಸ್ತೂಲ್ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಉತ್ತರ ಪ್ರದೇಶ ಎಸ್‌ಟಿಎಫ್ ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಗುರುವಾರ ಮುಂಜಾನೆ ಕೌಶಂಬಿ (Kaushambi) ಜಿಲ್ಲೆಯಲ್ಲಿ ಉಗ್ರನನ್ನು ಬಂಧಿಸಿದ್ದರು.

  • ಪ್ರಯಾಗ್‌ರಾಜ್ ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ

    ಪ್ರಯಾಗ್‌ರಾಜ್ ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ

    – ಸಂಗಮದಲ್ಲಿ ಖಾಸಗಿ ವಾಹನಗಳಿಗೆ ನೋ ಎಂಟ್ರಿ

    ಪ್ರಯಾಗ್‌ರಾಜ್: 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbh Mela) ನಾಳೆ ತೆರೆಬೀಳಲಿದೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ.

    ಕೊನೆಯ ಪುಣ್ಯಸ್ನಾನದ ಹಿನ್ನೆಲೆ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝೋನ್ ಎಂದು ಘೋಷಿಸಲಾಗಿದೆ. ಇಂದು ಮತ್ತು ನಾಳೆ ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸ್ಥಳೀಯ ಆಡಳಿತ ಮತ್ತು ವೈದ್ಯಕೀಯ ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ಪ್ರವೇಶವಿರುವುದು ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಇದನ್ನೂ ಓದಿ: Exclusive| ಬೆಳಗಾವಿ ಕಂಡಕ್ಟರ್ ಮೇಲೆ ದಾಖಲಿಸಿದ್ದ ಪೋಕ್ಸೋ ಕೇಸ್ ಹಿಂಪಡೆದ ದೂರುದಾರೆ

    ಈವರೆಗೂ 63 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ ಮಾಡಿದ್ದು, ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದಾರೆ. ವಿಶ್ವವಿಖ್ಯಾತ ಮಹಾ ಕುಂಭಮೇಳ ಫೆ.26 ರಂದು ಅಂತ್ಯಗೊಳ್ಳಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ದರ್ಶನ್ & ಗ್ಯಾಂಗ್

  • ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ

    ಬೀದರ್ ಯಾತ್ರಿಕರ ದುರ್ಮರಣ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಖಂಡ್ರೆ

    ಬೆಂಗಳೂರು: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳುತ್ತಿದ್ದ ವೇಳೆ ಉತ್ತರ ಪ್ರದೇಶದ (Uttar Pradesh) ಬಳಿ ಅಪಘಾತದಲ್ಲಿ ಬೀದರ್‌ನ (Bidar) ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 8 ಜನರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್‌ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ಗ್ಯಾಂಗ್ ರೇಪ್

    ಉತ್ತರಪ್ರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ.. ಅದರ ಸಂಪರ್ಕದಿಂದ ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

  • ಕೊರಳಿನಲ್ಲಿ ರುದ್ರಾಕ್ಷಿ ಮಾಲೆ, ಹಣೆಯಲ್ಲಿ ಶ್ರೀರಾಮ್‌ – ಕುಂಭಮೇಳದಲ್ಲಿ ಭಾಗಿಯಾದ ರಾಜ್‌ ಬಿ ಶೆಟ್ಟಿ

    ಕೊರಳಿನಲ್ಲಿ ರುದ್ರಾಕ್ಷಿ ಮಾಲೆ, ಹಣೆಯಲ್ಲಿ ಶ್ರೀರಾಮ್‌ – ಕುಂಭಮೇಳದಲ್ಲಿ ಭಾಗಿಯಾದ ರಾಜ್‌ ಬಿ ಶೆಟ್ಟಿ

    ಪ್ರಯಾಗ್‌ರಾಜ್‌: ಮಹಾ ಕುಂಭಮೇಳದಲ್ಲಿ (Maha Kumbh Mela) ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ (Raj B Shetty), ನಟಿ, ನಿರೂಪಕಿ ಅನುಶ್ರೀ (Anushree) ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್ (Kiran Raj) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    ರಾಜ್‌ ಬಿ ಶೆಟ್ಟಿ ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ಹಣೆಯಲ್ಲಿ  ಶ್ರೀರಾಮ್‌ ಎಂದು ಬರೆದುಕೊಂಡಿದ್ದಾರೆ.

    ಕುಂಭಮೇಳದಲ್ಲಿ ಭಾಗಿಯಾದ ಬಗ್ಗೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ರಾಜ್‌ ಬಿ ಶೆಟ್ಟಿ, ನಾವು ಬೆಂಗಳೂರಿನ ಸ್ನೇಹಿತರ ಜೊತೆ ಕುಂಭಮೇಳಕ್ಕೆ ಆಗಮಿಸಿದ್ದೇವೆ. ನಿನ್ನೆ ನಾವು ಪವಿತ್ರ ಸ್ನಾನ ಮಾಡಿದೆವು ಎಂದು ತಿಳಿಸಿದರು.

    ಮೌನಿ ಅಮಾವಾಸ್ಯೆಯಂದೇ ನೀವು ಸ್ನಾನ ಮಾಡಲು ತೆರಳಿದ್ದೀರಾ ಎಂಬ ಪ್ರಶ್ನೆಗೆ, ನಾವು ಹಾಗೆ ಯಾವುದೇ ಪ್ಲ್ಯಾನ್‌ ಮಾಡಿ ಬಂದಿಲ್ಲ. 144 ವರ್ಷಗಳಿಗೊಮ್ಮೆ ನಡೆಯುವ ಈ ಕುಂಭ ಮೇಳದಲ್ಲಿ ಭಾಗವಹಿಸುವ ಸಲುವಾಗಿ ಬಂದಿದ್ದೇವೆ. ನಮ್ಮ ಅದೃಷ್ಟ ಎಂಬಂತೆ ಮೌನಿ ಅಮವಾಸ್ಯೆಯಂದೇ ನಮಗೆ ಸ್ನಾನ ಮಾಡುವ ಅದೃಷ್ಟ ಸಿಕ್ಕಿತು ಎಂದು ಸಂತಸ ವ್ಯಕ್ತಪಡಿಸಿದರು.  ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ

    ಕೋಟ್ಯಂತರ ಜನರು ಇಲ್ಲಿ ಭಾಗವಹಿಸುತ್ತಿದ್ದಾರೆ. ಇಷ್ಟೊಂದು ಜನರನ್ನು ನಿರ್ವಹಣೆ ಮಾಡುವುದು ಬಹಳ ಕಷ್ಟ. ಪೊಲೀಸರು ಬಹಳ ಚೆನ್ನಾಗಿ ಕೆಲಸ ಮಾಡಿ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

     

    ಬಹಳ ದೂರ ನಡೆದುಕೊಂಡೇ ಪವಿತ್ರ ಸ್ನಾನ ಮಾಡಲು ಬರಬೇಕು. ಆಧ್ಯಾತ್ಮಿಕವಾಗಿ ಇದೊಂದು ಪವಿತ್ರ ಕಾರ್ಯಕ್ರಮ. ಇಂದು ನಾವು ಅಖಾಡಗಳಿಗೆ ಭೇಟಿ ನೀಡಲಿದ್ದೇವೆ ಎಂದು ಹೇಳಿದರು.

     

  • 32 ವರ್ಷಗಳಿಂದ ಸ್ನಾನವನ್ನೇ ಮಾಡದ ಛೋಟಾ ಬಾಬಾ – ‘ಕುಂಭ ಮೇಳ’ದ ಆಕರ್ಷಣೆ ಕೇಂದ್ರಬಿಂದು ಇವರೇ!

    32 ವರ್ಷಗಳಿಂದ ಸ್ನಾನವನ್ನೇ ಮಾಡದ ಛೋಟಾ ಬಾಬಾ – ‘ಕುಂಭ ಮೇಳ’ದ ಆಕರ್ಷಣೆ ಕೇಂದ್ರಬಿಂದು ಇವರೇ!

    – 3 ಅಡಿ ಎತ್ತರದ ಬಾಬಾಗೆ 57 ವರ್ಷ ವಯಸ್ಸು
    – 12 ವರ್ಷಗಳಿಗೊಮ್ಮೆ ನಡೆಯೋ ಕುಂಭ ಮೇಳಕ್ಕೆ ಸಿದ್ಧತೆ ಹೇಗಿದೆ?

    ಲಕ್ನೋ: ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವ ಎನಿಸಿರುವ ಕುಂಭ ಮೇಳಕ್ಕೆ (Kumbh Mela) ಉತ್ತರ ಪ್ರದೇಶ ಸಜ್ಜಾಗಿದೆ. ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು, ಯಾತ್ರಿಕರು ಆಗಮಿಸುತ್ತಿದ್ದಾರೆ. ಸಾಧು-ಸಂತರು ಕುಂಭ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇಳಕ್ಕೆ ಸಕಲ ಸಿದ್ಧತೆ ನಡೆದಿದೆ. ಕುಂಭ ಮೇಳಕ್ಕೆ ಛೋಟು ಬಾಬಾ (Chhotu Baba) ಅವರು ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ.

    32 ವರ್ಷಗಳಿಂದ ಸ್ನಾನ ಮಾಡದ ಗಂಗಾಪುರಿ ಮಹಾರಾಜರು ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಗಂಗಾಪುರಿ ಮಹಾರಾಜ್ ಅವರು ಛೋಟು ಬಾಬಾ ಅಸ್ಸಾಂನ ಕಾಮಾಖ್ಯ ಪೀಠದವರಾಗಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮಹಾಕುಂಭ ಮೇಳ – 5,500 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿಯಿಂದ ಚಾಲನೆ

    ‘ಇದು ಮಿಲನ ಮೇಳ. ಆತ್ಮಕ್ಕೆ ಆತ್ಮದ ಸಂಪರ್ಕವಿರಬೇಕು. ಅದಕ್ಕಾಗಿಯೇ ನಾನು ಇಲ್ಲಿದ್ದೇನೆ’ ಎಂದು ಬಾಬಾ ತಿಳಿಸಿದ್ದಾರೆ. 57 ವರ್ಷ ವಯಸ್ಸಿನ ಬಾಬಾ ಅವರು ಮೂರು ಅಡಿ ಎತ್ತರವಿದ್ದಾರೆ. ‘ನಾನು 3 ಅಡಿ 8 ಇಂಚು ಎತ್ತರ ಇದ್ದೇನೆ. ನನಗೆ 57 ವರ್ಷ. ಇಲ್ಲಿಗೆ ಬರಲು ನನಗೆ ತುಂಬಾ ಸಂತೋಷವಾಗಿದೆ. ನೀವು ಸಹ ಇಲ್ಲಿದ್ದೀರಿ, ಅದರಲ್ಲಿಯೂ ನಾನು ಸಂತೋಷವಾಗಿದ್ದೇನೆ’ ಎಂದು ಬಾಬಾ ಖುಷಿ ವ್ಯಕ್ತಪಡಿಸಿದ್ದಾರೆ.

    ಗಂಗಾಪುರಿ ಮಹಾರಾಜರು ಕಳೆದ 32 ವರ್ಷಗಳಿಂದ ಸ್ನಾನ ಮಾಡಿಲ್ಲ. ಕಳೆದ 32 ವರ್ಷಗಳಿಂದ ಈಡೇರದ ಬಯಕೆ ನನ್ನಲ್ಲಿದೆ ಎಂಬ ಕಾರಣಕ್ಕೆ ನಾನು ಸ್ನಾನ ಮಾಡುವುದಿಲ್ಲ. ಗಂಗಾಸ್ನಾನ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    12 ವರ್ಷಗಳಿಗೊಮ್ಮೆ ಕುಂಭ ಮೇಳ ನಡೆಯುತ್ತದೆ. ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಪ್ರಯಾಗ್‌ರಾಜ್‌ನಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಅನಾಹುತಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಿಶೇಷವಾಗಿ ಜನಸಂದಣಿ ನಿರ್ವಹಣೆಗಾಗಿ ಮತ್ತು ಬೆಂಕಿಯ ಅವಘಡಗಳನ್ನು ತಪ್ಪಿಸಲು ಸುರಕ್ಷತೆ ಕ್ರಮವಹಿಸಿದೆ. ಇದನ್ನೂ ಓದಿ: ಕೆಲವರು ಗ್ರಾಮೀಣ ಭಾಗದಲ್ಲಿ ಜಾತಿ ರಾಜಕಾರಣದ ಹೆಸರಿನಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಮೋದಿ

    ಈ ಬಾರಿ ಮಹಾಕುಂಭಕ್ಕೆ ಭಕ್ತಾದಿಗಳ ಸುರಕ್ಷತೆಗೆ ಸಿಬ್ಬಂದಿ ನಿಯೋಜನೆ ಜೊತೆಗೆ ತಾಂತ್ರಿಕ ಪರಿಕರಗಳನ್ನು ಆಡಳಿತ ಮಂಡಳಿ ಆಯ್ಕೆ ಮಾಡಿದೆ. ಕ್ವಿಕ್ ರೆಸ್ಪಾನ್ಸ್ ವೆಹಿಕಲ್‌ಗಳು, ಯಾವುದೇ ರೀತಿಯ ಭೂಪ್ರದೇಶದಲ್ಲಿ ಚಲಿಸಬಲ್ಲ ಎಲ್ಲಾ ಭೂಪ್ರದೇಶ ವಾಹನಗಳು (ಎಟಿವಿಗಳು), ಅಗ್ನಿಶಾಮಕ ರೋಬೋಟ್‌ಗಳು ಮತ್ತು ಫೈರ್ ಮಿಸ್ಟ್ ಬೈಕ್‌ಗಳನ್ನು ನಿಯೋಜಿಸಿದೆ. ಅಗ್ನಿಶಾಮಕ ದೋಣಿಗಳನ್ನು ತರಲಾಗಿದೆ. ದೋಣಿಗಳು ಬೆಂಕಿಯನ್ನು ನಂದಿಸಲು ನದಿಯ ನೀರನ್ನು ಬಳಸುತ್ತವೆ.

    ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. UTS (ಅನ್ ರಿಸರ್ವ್ಡ್ ಟಿಕೆಟಿಂಗ್ ಸಿಸ್ಟಮ್) ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಯಾತ್ರಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು QR ಕೋಡ್ ಅನ್ನು ಸರಳವಾಗಿ ಸ್ಕ್ಯಾನ್ ಮಾಡಬಹುದು. ಈ ಅಪ್ಲಿಕೇಶನ್ ಪ್ರಯಾಣಿಕರು ದೀರ್ಘ ಸರತಿ ಸಾಲಿನಲ್ಲಿ ನಿಲ್ಲದೆ ಕಾಯ್ದಿರಿಸದ ಟಿಕೆಟ್‌ಗಳನ್ನು ಬುಕ್ ಮಾಡಲು ಅನುಮತಿಸುತ್ತದೆ.

    ಶಾಹಿ ಸ್ನಾನ (ರಾಜಮನೆತನದ ಸ್ನಾನ) ಎಂದು ಕರೆಯಲ್ಪಡುವ ಪ್ರಮುಖ ಸ್ನಾನದ ಆಚರಣೆಗಳು ಜನವರಿ 14 (ಮಕರ ಸಂಕ್ರಾಂತಿ), ಜನವರಿ 29 (ಮೌನಿ ಅಮಾವಾಸ್ಯೆ), ಮತ್ತು ಫೆಬ್ರವರಿ 3 (ಬಸಂತ್ ಪಂಚಮಿ) ರಂದು ನಡೆಯುತ್ತವೆ. ಇದನ್ನೂ ಓದಿ: ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ?

  • Uttar Pradesh| ಮಹಾ ಕುಂಭಮೇಳ ನಡೆಯುವ ಪ್ರದೇಶ ಹೊಸ ಜಿಲ್ಲೆಯಾಗಿ ಘೋಷಣೆ

    Uttar Pradesh| ಮಹಾ ಕುಂಭಮೇಳ ನಡೆಯುವ ಪ್ರದೇಶ ಹೊಸ ಜಿಲ್ಲೆಯಾಗಿ ಘೋಷಣೆ

    ಲಕ್ನೋ: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ (Maha Kumbh Mela) ನಡೆಯುವ ಪ್ರದೇಶವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರ ಹೊಸ ಜಿಲ್ಲೆಯನ್ನಾಗಿ ಘೋಷಿಸಿದೆ. 2025ರ ಜನವರಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೂ ಮೊದಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಹೊಸ ಜಿಲ್ಲೆಯನ್ನು ಮಹಾ ಕುಂಭಮೇಳ ಜಿಲ್ಲೆ ಎಂದು ಕರೆಯಲಾಗುತ್ತದೆ. ಮುಂದಿನ ವರ್ಷ ನಡೆಯುವ ಮಹಾ ಕುಂಭಮೇಳವನ್ನು ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ. ಭಕ್ತಾದಿಗಳಿಗೆ ಅನುಭವವನ್ನು ಹೆಚ್ಚಿಸುವ ಮತ್ತು ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸರ್ಕಾರದ ಬದ್ಧತೆಯನ್ನು ಈ ಕ್ರಮವು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ – 100ಕ್ಕೂ ಹೆಚ್ಚು ಮಂದಿ ಸಾವು

    ಮಹಾ ಕುಂಭಮೇಳ ಜಿಲ್ಲೆಯು ಸಂಪೂರ್ಣ ಮೆರವಣಿಗೆ ಮತ್ತು ನಾಲ್ಕು ತಹಸಿಲ್‌ಗಳ ಸದರ್, ಸೊರಾನ್, ಫುಲ್‌ಪುರ್ ಮತ್ತು ಕರ್ಚನಾಗಳ 67 ಗ್ರಾಮಗಳನ್ನು ಒಳಗೊಂಡಿದೆ. ಮಹಾಕುಂಭಮೇಳವನ್ನು 2025ರಲ್ಲಿ ಆಯೋಜಿಸಲಾಗಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿದೆ. ಮಹಾಕುಂಭ 2025ರ ಸಿದ್ಧತೆಗಳನ್ನು ಪರಿಶೀಲಿಸಲು, ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯಲಿದೆ. ಇದನ್ನೂ ಓದಿ: ಯತ್ನಾಳ್‌ಗೆ ಶಾಕ್ – ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಶೋಕಾಸ್ ನೋಟಿಸ್