Tag: ಮಹಾ ವಿಕಾಸ್ ಅಘಾಡಿ

  • ಇವಿಎಂನಲ್ಲಿ ಅಡ್ಜಸ್ಟ್‌ಮೆಂಟ್‌, Give & Take Policy ಮಾಡ್ತಿದ್ದಾರೆ: ಸತೀಶ್‌ ಜಾರಕಿಹೊಳಿ

    ಇವಿಎಂನಲ್ಲಿ ಅಡ್ಜಸ್ಟ್‌ಮೆಂಟ್‌, Give & Take Policy ಮಾಡ್ತಿದ್ದಾರೆ: ಸತೀಶ್‌ ಜಾರಕಿಹೊಳಿ

    ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಯವರು (Satish Jarkiholi) ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (Maha Vikas Aghadi) ಒಕ್ಕೂಟಕ್ಕೆ ಸೋಲಾದ ಬೆನ್ನಲ್ಲೇ ಇವಿಎಂ (EVM) ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿಯ ಕಾಂಗ್ರೆಸ್ (Congress) ಭವನದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಮಹಾ ವಿಕಾಸ್ ಅಘಾಡಿಗೆ ಸೋಲಾಗಿದೆ. ಇವಿಎಂ ಮಷೀನ್ ಇರುವವರೆಗೂ ಈ ರೀತಿ ಎಲ್ಲಾ ಆಗುತ್ತದೆ. ಇವಿಎಂ ಬಗ್ಗೆ ಸಾಕಷ್ಟು ಅನುಮಾನ ಇದೆ. ಸಾಕಷ್ಟು ಕಡೆಗಳಲ್ಲಿ ಇವಿಎಂ ಬಗ್ಗೆ ಚರ್ಚೆ ಆಗುತ್ತಿದೆ ಎಂದರು.

    ಒಂದು ಕಡೆ ಕೊಡ್ತಾರೆ, ಇನ್ನೊಂದು ಕಡೆ ಕಸಿದುಕೊಳ್ತಾರೆ. ಜಮ್ಮು ನಮಗೆ ಕೊಟ್ರೂ, ಹರಿಯಾಣವನ್ನು ಬಿಜೆಪಿಯವರು ತೆಗೆದುಕೊಂಡ್ರು. ಈ ರೀತಿ ಗೀವ್ & ಟೆಕ್ ಪಾಲಿಸಿ ಮಾಡ್ತಿದ್ದಾರೆ. ಅವರಿಗೆ ಬೇಕಾದದ್ದನ್ನು ತೆಗೆದುಕೊಳ್ತಾರೆ, ಬೇಡದ್ದನ್ನ ಬಿಡ್ತಾರೆ. ಇವಿಎಂನಲ್ಲೂ ಅಡ್ಜಸ್ಟ್ಮೆಂಟ್ ಇದೆ ಎಂದು ಅವರು ಗಂಭೀರ ಆರೋಪ ಮಾಡಿದರು.

    ಶಿಗ್ಗಾಂವಿಯಲ್ಲಿ ಐದು ಬಾರಿ ಸೋಲಲು ನಾಯಕತ್ವದ ಸಮಸ್ಯೆ ಇತ್ತು. ಹಿಂದೂ ಮುಸ್ಲಿಂ ಅನ್ನೋ ವಿಚಾರ ಅಲ್ಲಿ ಮುಖ್ಯ ಎನಿಸಿತ್ತು. ಶಿವಾನಂದ ಪಾಟೀಲ್, ಮಾನೆಯವರು ಮುನ್ನೆಲೆಗೆ ಬಂದಿದ್ದಕ್ಕೆ ಮುಸ್ಲಿಂ ಅನ್ನೋದನ್ನು ಬಿಟ್ಟು ಕಾಂಗ್ರೆಸ್ ಅಭ್ಯರ್ಥಿ ಎಂಬುದು ಮುಖ್ಯವಾಯ್ತು ಎಂದಿದ್ದಾರೆ.

    ಅಹಿಂದ ವರ್ಗಕ್ಕೆ ನ್ಯಾಯ ಕೊಡಬೇಕು ಎಂದು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದೆವು. ಅಹಿಂದ ವರ್ಗ ಒಂದಾಯಿತು ಇದರಿಂದ ಗೆಲುವಾಗಿದೆ. ಮಾಜಿ ಮುಖ್ಯಮಂತ್ರಿ, ಪ್ರಬಲ ರಾಜಕಾರಣಿ ವಿರುದ್ಧ ಚುನಾವಣೆ ಹೇಗೆ ಮಾಡ್ತಾರೆ ಎಂಬ ಪ್ರಶ್ನೆ ಇತ್ತು. ಕೆಲವು ತಂತ್ರಗಾರಿಕೆ ಮೂಲಕ ನಾವು ಹೇಗೆ ಚುನಾವಣೆ ಮಾಡುತ್ತೆವೆಯೋ ಅದೇ ಮಾದರಿಯಲ್ಲಿ ಚುನಾವಣೆ ಮಾಡಿದ್ದೇವೆ. ಈ ಸಾರಿ ಚುನಾವಣೆಯಿಂದ ಮುಸ್ಲಿಮರಿಗೆ ಟಿಕೆಟ್ ಕೊಟ್ಟರೆ ಗೆಲ್ತಾರೆ ಎಂಬ ಸಂದೇಶ ಹೋಗಿದೆ. ಶಿಗ್ಗಾಂವಿ ಗೆಲವು ನಮಗೆ ಡಬಲ್ ಪ್ರಮೋಷನ್ ಆಗಿದೆ. ಡಿಸಿಎಂ ಸ್ಥಾನ ಇಲ್ಲದೇ ನಾವು ಇಲ್ಲಿ ಗೆಲ್ಲಿಸಿಕೊಟ್ಟಿದ್ದೇವೆ ಎಂದಿದ್ದಾರೆ.

    ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ (By Election) ಕಾಂಗ್ರೆಸ್ ಗೆಲ್ಲಲು ಅಭಿವೃದ್ಧಿ, ಗ್ಯಾರಂಟಿ ಹಾಗೂ ಕಾರ್ಯಕರ್ತರು ಕಾರಣ. ಶಾಸಕರು, ಸಿಎಂ ಬೆಂಬಲದಿಂದ ಗೆಲ್ಲಲು ಸಾಧ್ಯವಾಗಿದೆ. ಗೆದ್ದ ಅಭ್ಯರ್ಥಿಗಳಿಗೆ, ನಮ್ಮ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

    ಸಿಎಂ ಬದಲಾವಣೆ ವಿಚಾರವಾಗಿ, ಐದು ವರ್ಷ ಅವರೇ ಇರ್ತಾರೆ. ಇನ್ನೂ ವಕ್ಫ್ ವಿಚಾರದಲ್ಲಿ ಜಾಸ್ತಿ ಪರಿಣಾಮ ಆಗಿದ್ದು ಮುಸ್ಲಿಮರಿಗೆ ಎಂದಿದ್ದಾರೆ.

  • Maharashtra Polls | 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್‌

    Maharashtra Polls | 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್‌

    ಮುಂಬೈ: ವಿಧಾನಸಭಾ ಚುನಾವಣೆ (Maharashtra Polls) ಹೊಸ್ತಿಲಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 7 ಬಂಡಾಯ ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ (Congress) ಸಮಿತಿ (ಎಂಪಿಸಿಸಿ) ಭಾನುವಾರ ರಾತ್ರಿ ಅಮಾನತುಗೊಳಿಸಿದೆ.

    ಅಮಾನತುಗೊಂಡಿರುವ ನಾಯಕರಲ್ಲಿ ಶಾಮಕಾಂತ್ ಸನೇರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಕಲ್ಯಾಣ್ ಬೋರಾಡೆ ಮತ್ತು ಚಂದ್ರಪಾಲ್ ಚೌಕ್ಸೆ ಸೇರಿದ್ದಾರೆ. ಶನಿವಾರ ಎಂಪಿಸಿಸಿ ಇತರ 21 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿತ್ತು. ಈ ಮೂಲಕ 22 ಕ್ಷೇತ್ರಗಳಲ್ಲಿ ಒಟ್ಟು ಅಮಾನತುಗೊಂಡವರ ಸಂಖ್ಯೆ 28 ಕ್ಕೆ ಏರಿದೆ.

    ಈ ಹಿಂದೆ ಅಮಾನತುಗೊಂಡಿರುವ ನಾಯಕರ ಪಟ್ಟಿಯಲ್ಲಿ ಆನಂದರಾವ್ ಗೆಡಂ, ಶಿಲು ಚಿಮುರ್ಕರ್, ಸೋನಾಲ್ ಕೋವೆ, ಭರತ್ ಯೆರೆಮೆ, ಅಭಿಲಾಶಾ ಗವಟೂರೆ, ಪ್ರೇಮಸಾಗರ್ ಗನ್ವೀರ್, ಅಜಯ್ ಲಾಂಜೇವರ್, ವಿಲಾಸ್ ಪಾಟೀಲ್, ಆಸ್ಮಾ ಜಾವದ್ ಚಿಖ್ಲೇಕರ್, ಹಂಸಕುಮಾರ್ ಪಾಂಡೆ, ಕಮಲ್ ವ್ಯಾವಹರೆ, ಮೋಹನ್ರಾವ್ ದಾಂಡೇಕರ್, ಮಂಗಲ್ ವಿಲಾಸ್, ಮಂಗಲ್ ವಿಲಾಸ್ ಮನೋಜ ಶಿಂಧೆ, ಸುರೇಶ ಪಾಟೀಲಖೇಡೆ, ವಿಜಯ ಖಡ್ಸೆ, ಶಬೀರ್ ಖಾನ್, ಅವಿನಾಶ್ ಲಾಡ್, ಯಗ್ವಾಲ್ಯ ಜಿಚ್ಕರ್, ರಾಜು ಜೋಡೆ ಮತ್ತು ರಾಜೇಂದ್ರ ಮುಕಾಹ್ ಸೇರಿದ್ದಾರೆ.

    ಅಮಾನತುಗೊಂಡ ಅಭ್ಯರ್ಥಿಗಳು ಮಹಾ ವಿಕಾಸ್ ಅಘಾಡಿ (MVA) ಅಧಿಕೃತ ನಾಮನಿರ್ದೇಶಿತರ ವಿರುದ್ಧ ಸ್ಪರ್ಧಿಸಲಿದ್ದಾರೆ. ಇದಕ್ಕೂ ಮೊದಲು, ಎಂವಿಎ (Maha Vikas Aghadi) ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುವ ಪಕ್ಷದ ಬಂಡಾಯ ಅಭ್ಯರ್ಥಿಗಳು ಆರು ವರ್ಷಗಳ ಅಮಾನತು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಎಚ್ಚರಿಸಿದ್ದರು.

    ನ.20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ.

  • ಪಕ್ಷ ಬಿಟ್ಟುಹೋದವರನ್ನ ಮತ್ತೆ ಸೇರಿಸಲ್ಲ – ಉದ್ಧವ್ ಠಾಕ್ರೆ ಗುಡುಗು

    ಪಕ್ಷ ಬಿಟ್ಟುಹೋದವರನ್ನ ಮತ್ತೆ ಸೇರಿಸಲ್ಲ – ಉದ್ಧವ್ ಠಾಕ್ರೆ ಗುಡುಗು

    ಮುಂಬೈ: ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಮಹಾ ವಿಕಾಸ್‌ ಅಘಾಡಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಲೋಕಸಭಾ ಚುನಾವಣೆಯಲ್ಲಿ ಎಂವಿಎ ಮೈತ್ರಿ ಕೂಟ (MVA Alliance) ಬೆಂಬಲಿಸಿದ್ದಕ್ಕಾಗಿ ಮಹಾರಾಷ್ಟ್ರ ಜನತೆಗೆ ಧನ್ಯವಾದ ಅರ್ಪಿಸಿದರು.

    ಜೊತೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ (Sharad Pawar,) ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸುವ ಸುಳಿವು ನೀಡಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಜಂಟಿಯಾಗಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಟ ದರ್ಶನ್‌, ಪವಿತ್ರಾ ಗೌಡ ಸೇರಿ 12 ಆರೋಪಿಗಳು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

    ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, 2022ರಲ್ಲಿ ತಮ್ಮ ಪಕ್ಷವನ್ನು ತೊರೆದು ಏಕನಾಥ್‌ ಶಿಂಧೆ ನೇತೃತ್ವದ ಪಾಳಯ ಸೇರಿ ಶಿವಸೇನೆ ಸರ್ಕಾರದ ವಿಭಜನೆಗೆ ಕಾರಣವಾದ ಶಾಸಕರನ್ನು ಪಕ್ಷಕ್ಕೆ ವಾಪಸ್ ತೆಗೆದುಕೊಳ್ಳುವುದಿಲ್ಲ. ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟ ವಿಧಾನ ಸಭೆಯಲ್ಲಿ ಒಟ್ಟಾಗಿ ಸ್ಪರ್ಧಿಸುತ್ತದೆ. ಬಿಜೆಪಿ ಎಷ್ಟು ಪೊಳ್ಳು ಎಂಬುದನ್ನು ರಾಜ್ಯದ ಜನರು ತೋರಿಸಿದ್ದಾರೆ. ಲೋಕಸಭಾ ಚುನಾವಣೆಯಿಂದ ಪ್ರಾರಂಭವಾಗಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ಕೂಟದ ಗೆಲುವು ಮುಂಬರುವ ಚುನಾವಣೆಗಳಲ್ಲೂ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

    ಇನ್ನೂ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮಾತನಾಡಿ, ಎನ್‌ಡಿಎ ಮೈತ್ರಿ ಕೂಟದ ಭಾಗವಾಗಿರುವ ತಮ್ಮ ಸೋದರಳಿಯ ಅಜಿತ್ ಪವಾರ್ ಅವರನ್ನು ಮತ್ತೆ ತಮ್ಮ ಪಕ್ಷಕ್ಕೆ ತೆಗೆದುಕೊಳ್ಳುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹೇಳಿದರು.

    ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಹಾ ವಿಕಾಸ್‌ ಅಘಾಡಿ ಕೂಟ ಎನ್‌ಡಿಎ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ನೀಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಕೂಟವನ್ನು ಎದುರಿಸುವ ವಿಶ್ವಾಸವಿದೆ ಎಂದು ಪವಾರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಿಜೆಪಿಗೆ ಮತ ಹಾಕಿದ್ದಕ್ಕೆ‌ ಕಾಂಗ್ರೆಸ್‌ ಸರ್ಕಾರ ಸೇಡು ತೀರಿಸಿಕೊಳ್ತಿದೆ – ಅಶೋಕ್‌

    ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಕೂಟವು 48 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿತು. ಈ ಪೈಕಿ ಕಾಂಗ್ರೆಸ್ 13, ಶಿವಸೇನೆ 9, ಎನ್‌ಸಿಪಿ 8 ಸ್ಥಾನಗಳನ್ನ ಗೆದ್ದುಕೊಂಡಿತು.

  • ಬಿಲ್ಲು-ಬಾಣಕ್ಕೆ 2000 ಕೋಟಿ ಡೀಲ್ – ಸಂಜಯ್ ರಾವತ್ ಬಾಂಬ್

    ಬಿಲ್ಲು-ಬಾಣಕ್ಕೆ 2000 ಕೋಟಿ ಡೀಲ್ – ಸಂಜಯ್ ರಾವತ್ ಬಾಂಬ್

    ಮುಂಬೈ: ಏಕನಾಥ್ ಶಿಂಧೆ (Eknath Shinde) ಬಣಕ್ಕೆ ಶಿವಸೇನೆ (Shiv Sena) ಹೆಸರು ಮತ್ತು ಚಿಹ್ನೆಯನ್ನು ಚುನಾವಣಾ ಆಯೋಗ (Election Commission) ನೀಡಿದ ಬೆನ್ನಲ್ಲೇ 2000 ಕೋಟಿ ರೂ.ಗಳ ಡೀಲ್ ನಡೆದಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ.

    ಹೆಸರು ಮತ್ತು ಚಿಹ್ನೆ ಖರೀದಿಸಲು 2000 ಕೋಟಿ ರೂ.ಗಳ ಒಳಒಪ್ಪಂದ ನಡೆದಿದೆ ಎಂದು ಸಂಜಯ್ ರಾವತ್ (Sanjay Raut) ಸರಣಿ ಟ್ವಿಟ್‍ಗಳ ಮೂಲಕ ಆರೋಪಿಸಿದ್ದಾರೆ. 2000 ಕೋಟಿ ರೂ. ಇದು ಪ್ರಾಥಮಿಕ ಅಂಕಿ ಅಂಶವಾಗಿದೆ. ಆರೋಪಕ್ಕೆ ಸೂಕ್ತ ದಾಖಲೆಗಳಿದ್ದು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಟರ್ಕಿ, ಸಿರಿಯಾ ಭೂಕಂಪ- ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ

    ಈ ಆರೋಪವನ್ನು ಶಿಂಧೆ ಬಣದ ಶಾಸಕ ಸದಾ ಸರ್ವಾಂಕರ್ ತಳ್ಳಿ ಹಾಕಿದ್ದು, ಸಂಜಯ್ ರಾವತ್ ಕ್ಯಾಶೀಯರ್ ಆಗಿದ್ದರೆ ಎಂದು ವ್ಯಂಗ್ಯ ಮಾಡಿದ್ದಾರೆ.

    ಇತ್ತೀಚೆಗೆ ಚುನಾವಣಾ ಆಯೋಗವು ಏಕ್‍ನಾಥ್ ಶಿಂಧೆ ಬಣವನ್ನು ಶಿವಸೇನೆ ಎಂದು ಗುರುತಿಸಿ ಅದಕ್ಕೆ ಬಿಲ್ಲು ಬಾಣವನ್ನು ಗುರುತಾಗಿ ಸೂಚಿಸಿ ಆದೇಶಿಸಿತ್ತು.

    2019ರಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳುವ ಭರವಸೆಯನ್ನು ತಳ್ಳಿಹಾಕಿ ಶಿವಸೇನೆ, ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿತ್ತು. ನಂತರ ನ್ಯಾಷಲಿಸ್ಟ್ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ್ ಅಘಾಡಿ (Maha Vikas Aghadi) ಸರ್ಕಾರ ಬಂದಿತ್ತು. ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಏಕನಾಥ್ ಶಿಂಧೆ ಬಣದ ಬಂಡಾಯದಿಂದ ಎನ್‍ಡಿಎ ಸರ್ಕಾರದ ಅಧಿಕಾರ ಹಿಡಿದಿತ್ತು. ಇದನ್ನೂ ಓದಿ: ನನ್ನ ಮೇಲೆ ಹಬ್ಬಿಸ್ತಿರೊ ಸುಳ್ಳು ಆಪಾದನೆಗಳೆಲ್ಲ ವ್ಯವಸ್ಥಿತ ಪಿತೂರಿ: ರೂಪಾಗೆ ರೋಹಿಣಿ ತಿರುಗೇಟು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಒಟ್ಟಾಗಿ ಸ್ಪರ್ಧೆ: ಶರದ್ ಪವಾರ್

    ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಒಟ್ಟಾಗಿ ಸ್ಪರ್ಧೆ: ಶರದ್ ಪವಾರ್

    ಮುಂಬೈ: ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷಗಳಾದ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುತ್ತೇವೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಭರವಸೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಎಂವಿಎ ಘಟಕಗಳು ಒಟ್ಟಾಗಿ ಸ್ಪರ್ಧಿಸಬೇಕು ಎಂಬುದು ನನ್ನ ವೈಯಕ್ತಿಕ ಆಶಯವಾಗಿದೆ. ಈ ಬಗ್ಗೆ ಮೊದಲು ನನ್ನ ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತೇನೆ. ನಂತರ ಮಿತ್ರ ಪಕ್ಷದೊಂದಿಗೆ ಮಾತುಕತೆ ನಡೆಸಿ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದರು.

    ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಜೂನ್ 29 ರಂದು ಪತನಗೊಂಡಿತು. ಶಿವಸೇನೆಯು ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತು. ಇದನ್ನೂ ಓದಿ:ಮೋದಿ ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ: ಕೆಸಿಆರ್

    ಜೂನ್ 30ರಂದು ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶಿಂಧೆ ಅವರು ಶಿವಸೇನೆಯ 40 ಬಂಡಾಯ ಶಾಸಕರ ಬೆಂಬಲವನ್ನು ಹೊಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ

    Live Tv
    [brid partner=56869869 player=32851 video=960834 autoplay=true]