Tag: ಮಹಿಳಾ ಕಾರ್ಮಿಕರು

  • ಮಹಿಳಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಾಯ

    ಮಹಿಳಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಾಯ

    ಹಾಸನ: ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ.

    ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಹಾರ್ಲೆ ಕಾಫಿ ತೋಟದ ಕೆಲಸಕ್ಕೆ ಪಿಕ್‌ಅಪ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು

    ಪಿಕ್‌ಅಪ್ ವಾಹನದಲ್ಲಿ 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರ ಹಾಗೂ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಗೇ ಡೇಟಿಂಗ್ ಆ್ಯಪ್‌ನಲ್ಲಿ ಯುವಕರಿಗೆ ವಂಚನೆ- 6 ಮಂದಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣ್ಣಿನ ದಿಬ್ಬ ಕುಸಿತ – 10 ಮಹಿಳಾ ಕಾರ್ಮಿಕರ ದುರ್ಮರಣ

    ಮಣ್ಣಿನ ದಿಬ್ಬ ಕುಸಿತ – 10 ಮಹಿಳಾ ಕಾರ್ಮಿಕರ ದುರ್ಮರಣ

    ಹೈದರಾಬಾದ್: ಕೆಲಸ ಮಾಡುತ್ತಿದ್ದಾಗ ಮಣ್ಣಿನ ದಿಬ್ಬ ಕುಸಿದ ಪರಿಣಾಮ ಹತ್ತು ಮಂದಿ ಮಹಿಳಾ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾರಾಯಣಪೇಟ್‍ ನಲ್ಲಿ ನಡೆದಿದೆ.

    ಬುಧವಾರ ಬೆಳಗ್ಗೆ ಮರಿಕಲ್ ಮಂಡಲದ ತಿಲೆರು ಗ್ರಾಮದಲ್ಲಿ ಈ ದುರಂತ ನಡೆದಿದ್ದು, ಮೃತ ಮಹಿಳೆಯರನ್ನು ಅನುರಾಧಾ(30), ಭೀಮಮ್ಮ(40), ಬುಡಮ್ಣ(20), ಬಿ.ಲಕ್ಷ್ಮೀ(28), ಕೆ.ಲಕ್ಷ್ಮಿ(30), ಮಂಗಮ್ಮ(32), ಅನಂತಮ್ಮ(45), ಕೇಶಮ್ಮ(40), ಬಿ.ಅನಂತಮ್ಮ(35) ಹಾಗೂ ಲಕ್ಷ್ಮಿ(28) ಎಂದು ಗುರುತಿಸಲಾಗಿದೆ.

    ತಿಲೆರು ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಮಣ್ಣಿನ ದಿಬ್ಬವನ್ನು ಅಗೆಯುವ ಕಾರ್ಯ ನಡೆಯುತಿತ್ತು. ಇಲ್ಲಿ ಅನೇಕ ಸ್ಥಳೀಯ ಜನರು ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಮಣ್ಣಿನ ದಿಬ್ಬ ಕುಸಿದು ಬಿದ್ದಿದೆ. ಪರಿಣಾಮ ಯಾರು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಹೀಗಾಗಿ ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಮರಿಕಲ್ ಪೊಲೀಸರು ತಿಳಿಸಿದ್ದಾರೆ.

    ಈ ಘಟನೆಯಲ್ಲಿ ಐವರು ಕಾರ್ಮಿಕರು ಪಾರಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು, ಸ್ಥಳೀಯರ ಸಹಾಯದಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳದಲ್ಲಿ ಮೃತ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.

    ಈ ದಾರುಣ ಘಟನೆಯ ಬಗ್ಗೆ ಮಾಹಿತಿ ತಿಳಿದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆ ಅಧಿಕಾರಿಗೆ ಮತ್ತೆ ಈ ರೀತಿ ಆಗದಂತೆ ಮುಂಜಾಗೃತ ಕ್ರಮವಹಿಸುವಂತೆ ತಿಳಿಸಿದ್ದಾರೆ.