Tag: ಮಹಿಳಾ ಮತ್ತು ಮಕ್ಕಳ ಇಲಾಖೆ

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅಂಗನವಾಡಿಗೆ ಹಾಕಿದ್ದ ಬೀಗ ತೆಗೆದ ಅಧಿಕಾರಿಗಳು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅಂಗನವಾಡಿಗೆ ಹಾಕಿದ್ದ ಬೀಗ ತೆಗೆದ ಅಧಿಕಾರಿಗಳು

    ನೆಲಮಂಗಲ: ಕಳೆದ ನಾಲ್ಕು ದಿನಗಳಿಂದ ವ್ಯಕ್ತಿಯೊಬ್ಬರು ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿದ್ದ ವರದಿ ಪಬ್ಲಿಕ್ ಟಿಯಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಅಂಗನವಾಡಿ ಕೇಂದ್ರಕ್ಕೆ ಹಾಕಿದ್ದ ಬೀಗ ಓಪನ್ ಮಾಡಿದ್ದಾರೆ.

    ಕಳೆದ ಐದು ದಿನಗಳ ಹಿಂದೆ ವ್ಯಕ್ತಿಯೊಬ್ಬರು ತಮ್ಮ ಜಾಗವೆಂದುನ ಬೆಂಗಳೂರಿನ ಹೊರವಲಯದ ನೆಲಮಂಗಲ ತಾಲೂಕಿನ ಓಬಳಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿ, ಸಾಕಷ್ಟು ಸಮಸ್ಯೆ ಎದುರಾಗಿತ್ತು. ಈ ಬಗ್ಗೆ ಸಾಮಾಜಿಕ ಕಳಕಳಿಯಿಂದ ಇಂದು ಬೆಳಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿಯಾಗಿತ್ತು. ಇದನ್ನೂ ಓದಿ: ಪ್ರತಿಷ್ಠೆಗಾಗಿ ಅಂಗನವಾಡಿ ಕೇಂದ್ರಕ್ಕೆ ಬೀಗ- ಪುಟಾಣಿಗಳು ಕಂಗಾಲು

    ಐದು ದಿನಗಳಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿದ ಹಿನ್ನೆಲೆಯಲ್ಲಿ ಪುಟಾಣಿಗಳು ಕಂಗಾಲಾಗಿದ್ದರು. ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಹುಟ್ಟೂರಿನಲ್ಲಿ ನಡೆದಿರುವ ಘಟನೆಯಾಗಿತ್ತು. ವರದಿಯಾಗುತಿದಂತೆ ಅಂಗನವಾಡಿಗೆ ಹಾಕಿದ್ದ ಬೀಗ ಓಪನ್ ಮಾಡಲಾಗಿದೆ. ಈ ಬಗ್ಗೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಓಪನ್ ಮಾಡಿಸಿದ್ದಾರೆ. ಅಂಗನವಾಡಿ ಓಪನ್‍ನಿಂದ ಪಬ್ಲಿಕ್ ಟಿವಿಯ ವರದಿಗೆ ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ. ಇದನ್ನೂ ಓದಿ: ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ

  • ಪ್ರತಿಷ್ಠೆಗಾಗಿ ಅಂಗನವಾಡಿ ಕೇಂದ್ರಕ್ಕೆ ಬೀಗ- ಪುಟಾಣಿಗಳು ಕಂಗಾಲು

    ಪ್ರತಿಷ್ಠೆಗಾಗಿ ಅಂಗನವಾಡಿ ಕೇಂದ್ರಕ್ಕೆ ಬೀಗ- ಪುಟಾಣಿಗಳು ಕಂಗಾಲು

    ನೆಲಮಂಗಲ: ರಿಯಲ್ ಎಸ್ಟೇಟ್ ಮಾಫಿಯಾದ ವ್ಯಕ್ತಿಯೊಬ್ಬರು ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವುದರಿಂದ ಪುಟಾಣಿಗಳು ಕಂಗಾಲಾಗಿರುವ ಘಟನೆ ನೆಲಮಂಗಲ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಹುಟ್ಟೂರಿನಲ್ಲಿ ನಡೆದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿದ್ದು, 30 ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಶಾಸಕರ ಬೆಂಬಲಿಗ ವ್ಯಕ್ತಿಯಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಶಾಸಕರ ಕುಮ್ಮಕ್ಕು ಇದೆ ಎಂಬ ಗಂಭೀರವಾದ ಆರೋಪವನ್ನು ಸಾರ್ವಜನಿಕರು ಮಾಡುತ್ತಿದ್ದಾರೆ.

    ಅಂಗನವಾಡಿ ಕೇಂದ್ರದ ಜಾಗ ವಿವಾದ ಎಂದು ಬೀಗ ಹಾಕಲಾಗಿದೆ. ಎಲ್ಲಾ ದಾಖಲೆಗಳು ಸರಿಯಿದ್ದರು ಅಂಗನವಾಡಿ ಕೇಂದ್ರವನ್ನು ತೆರೆಯಲು ಅಧಿಕಾರಿಗಳ ಮೀನಾಮೇಷ ಮಾಡುತ್ತಿದ್ದಾರೆ. ಅಧಿಕಾರಿಗಳು ಶಾಸಕರ ಒತ್ತಡಕ್ಕೆ ಮಣಿದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ನೆಲಮಂಗಲ ಮಹಿಳಾ ಮತ್ತು ಮಕ್ಕಳ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾರ್ಚ್ 25ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ- ಪ್ರಧಾನಿ ಭಾಗಿ

    ನೆಲಮಂಗಲ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳ ನಡೆಯಿಂದ ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ಇದ್ದರೂ, ಮಕ್ಕಳ ಶಾಲೆ ತೆರೆಯಲು ಮೀನಾಮೇಷ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡ್ತೀವಿ: ಗುಲಾಂ ನಬಿ ಅಜಾದ್