Tag: ಮಹಿಳಾ ಮೀಸಲಾತಿ ಮಸೂದೆ

  • ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

    ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

    ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ಅನುಮೋದನೆಗೊಂಡಿದ್ದ‌ ಮಹಿಳಾ‌ ಮೀಸಲಾತಿ ಮಸೂದೆಗೆ (Women Reservation Bill) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರ ಶುಕ್ರವಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

    ಮಸೂದೆಗೆ ಕಾನೂನು ರೂಪ ಸಿಕ್ಕಿದ್ದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹಿಳೆಯರಿಗೆ 33% ರಾಜಕೀಯ ಮೀಸಲಾತಿ ನೀಡಲಿದೆ. ಮುಂದಿನ ಜಾತಿಗಣತಿ‌ ಬಳಿಕ ಕ್ಷೇತ್ರ ಪುನರ್ ವಿಂಗಡಣೆಯಾಗಲಿದ್ದು, ಆ ಬಳಿಕವಷ್ಟೆ ಈ ಕಾನೂನು ಜಾರಿಗೆ ಬರಲಿದೆ ಎಂದು ಗೆಜೆಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ

    ಸೆಪ್ಟೆಂಬರ್ 20 ರಂದು ಮಸೂದೆಯನ್ನು ಅಂಗೀಕರಿಸಲಾಯಿತು. 454 ಸದಸ್ಯರು ಮಸೂದೆ ಪರವಾಗಿ ಮತ ಚಲಾಯಿಸಿದರು. ಮಸೂದೆ ವಿರುದ್ಧ ಇಬ್ಬರು ಮತ ಚಲಾಯಿಸಿದ್ದರು. ಸೆಪ್ಟೆಂಬರ್ 21 ರಂದು, ನಾರಿ ಶಕ್ತಿ ವಂದನ್ ಅಧಿನಿಯಮವನ್ನು ರಾಜ್ಯಸಭೆಯಲ್ಲಿ ಅವಿರೋಧವಾಗಿ ಅಂಗೀಕರಿಸಲಾಯಿತು.

    ಮಹಿಳೆಯರಿಗೆ ರಾಜಕೀಯ ಮೀಸಲಾತಿ‌ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ (Narendra Modi) ಈ ಮಸೂದೆಯನ್ನು ವಿಶೇಷ ಅಧಿವೇಶನ ಕರೆದು ಮಂಡಿಸಿತ್ತು. ಹೊಸ ಸಂಸತ್ ಭವನದಲ್ಲಿ ಮಂಡನೆಯಾದ ಈ ಮೊದಲ ಮಸೂದೆಗೆ ಬಹುತೇಕ ವಿರೋಧ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆ ಯಾವುದೇ ತಕರಾರು ಇಲ್ಲದೇ ಇದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿತ್ತು.

    ಮಸೂದೆಯ ಚರ್ಚೆಯ ಸಮಯದಲ್ಲಿ ಜಾತಿ ಗಣತಿ, ಕ್ಷೇತ್ರ ಪುನರ್ ವಿಂಗಡಣೆ ವರೆಗೂ ಕಾಯದೇ ಶೀಘ್ರವಾಗಿ ಅನುಷ್ಠಾನಗೊಳಿಸಲು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಎಲ್ಲ‌ ವಿಪಕ್ಷಗಳು ಮನವಿ ಮಾಡಿದ್ದವು. ಆದರೆ ಇದಕ್ಕೆ ಉತ್ತರಿಸಿದ್ದ ಸರ್ಕಾರ ಆರ್ಟಿಕಲ್ 334 ಎ ಪ್ರಕಾರ ಜನಗಣತಿ ಬಳಿಕ ಕ್ಷೇತ್ರ ಪುನರ್ ವಿಂಗಡನೆಯಾಗಲಿದ್ದು, ಬಳಿಕವೇ ಕಾನೂನು ಜಾರಿಗೆ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿತ್ತು.

    ಐತಿಹಾಸಿಕ ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರವಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಿ.ಟಿ. ಉಷಾ ಸೇರಿದಂತೆ ಸಂಸತ್ತಿನ ಉಭಯ ಸದನಗಳ ಮಹಿಳಾ ಸದಸ್ಯರು ಮತ್ತು ಕೇಂದ್ರ ಸಚಿವರಾದ ಮೀನಕಾಶಿ ಲೇಖಿ, ಸ್ಮೃತಿ ಇರಾನಿ ಹೂಗುಚ್ಛ ನೀಡಿ ಸಂತಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಐತಿಹಾಸಿಕ ನಿರ್ಣಯ – ಸರ್ವಾನುಮತದಿಂದ ಮಹಿಳಾ ಮೀಸಲಾತಿ ಬಿಲ್‌ ಪಾಸ್‌

    ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 2010 ರಲ್ಲಿ ರಾಜ್ಯಸಭೆಯು ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿತ್ತು. ಆದರೆ ಅದು ಲೋಕಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ಮೀಸಲಾತಿ ಕ್ರಾಂತಿಕಾರಿ ನಿರ್ಧಾರ: ಬೊಮ್ಮಾಯಿ

    ಮಹಿಳಾ ಮೀಸಲಾತಿ ಕ್ರಾಂತಿಕಾರಿ ನಿರ್ಧಾರ: ಬೊಮ್ಮಾಯಿ

    ಬೆಂಗಳೂರು: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಧೇಯಕ್ಕೆ (Women’s Reservation Bill)  ಒಪ್ಪಿಗೆ ನೀಡಿರುವುದು ಒಂದು ಕ್ರಾಂತಿಕಾರಿ ನಿರ್ಣಯ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯ ಪಟ್ಟಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, 2009ರಲ್ಲಿ ಯುಪಿಎ (UPA) ಅವಧಿಯಲ್ಲಿ ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಿತ್ತು. ಆದರೆ ಲೋಕಸಭೆಯಲ್ಲಿ ಯುಪಿಎ ಸದಸ್ಯ ಪಕ್ಷಗಳೇ ಒಪ್ಪಿರಲಿಲ್ಲ ಎಂದರು. ಇದನ್ನೂ ಓದಿ: ಆಸ್ತಿ ನೋಂದಣಿ ಮಾರ್ಗಸೂಚಿ ದರ ಹೆಚ್ಚಳ – ಅಕ್ಟೋಬರ್‌ 1 ರಿಂದ ಜಾರಿ: ಕೃಷ್ಣಭೈರೇಗೌಡ

    ಇನ್ನು ಜನಸಂಖ್ಯೆಯಲ್ಲಿ 50%ರಷ್ಟಿರುವ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗುತ್ತಿರುವುದು ಒಂದು ಕ್ರಾಂತಿಕಾರಕ ನಡೆ. ಕಾಂಗ್ರೆಸ್ (Congress) ಇದರ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿರುವುದು ವಿಪರ್ಯಾಸ. ಕೇವಲ ಮಸೂದೆ ಸಿದ್ಧಪಡಿಸುವುದು ಮಾತ್ರವಲ್ಲ. ಎಲ್ಲಾ ಪಕ್ಷಗಳನ್ನು ಒಪ್ಪಿಸಿ ಬಿಲ್ ಪಾಸ್ ಮಾಡುವುದು ಮುಖ್ಯ. ಕೇಂದ್ರ ಸರ್ಕಾರ ಈಗ ಎಲ್ಲರ ಒಪ್ಪಿಗೆ ಪಡೆದು ಕಾಯ್ದೆಯಾಗಿ ಜಾರಿಗೆ ತರುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Women’s Reservation Bill: ಹಲವು ವರ್ಷಗಳಿಂದ ಚರ್ಚೆ ನಡೆದಿದೆ, ನಾವು ಇತಿಹಾಸ ನಿರ್ಮಿಸಿದ್ದೇವೆ: ಮೋದಿ

    Women’s Reservation Bill: ಹಲವು ವರ್ಷಗಳಿಂದ ಚರ್ಚೆ ನಡೆದಿದೆ, ನಾವು ಇತಿಹಾಸ ನಿರ್ಮಿಸಿದ್ದೇವೆ: ಮೋದಿ

    ನವದೆಹಲಿ: ಹೊಸ ಸಂಸತ್ ಭವನದ (New Parliament House) ಲೋಕಸಭೆಯಲ್ಲಿ (Lok Sabha) ಮೊದಲ ದಿನದ ವಿಶೇಷ ಅಧಿವೇಶನ (Special Session) ಆರಂಭವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಮಹಿಳಾ ನೇತೃತ್ವದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಕರೆ ನೀಡಿದರು.

    ಮಂಗಳವಾರ ಹೊಸ ಸಂಸತ್ ಭವನದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಪ್ರಕಟಿಸಿದರು. ಅಲ್ಲದೇ ಮಸೂದೆಯನ್ನು ಅಂಗೀಕರಿಸಲು ಮತ್ತು ನಾರಿಶಕ್ತಿ ಪ್ರಾತಿನಿಧ್ಯವನ್ನು ಖಾತ್ರಿಪಡಿಸಿಕೊಳ್ಳಲು ಸಹಾಯ ಮಾಡುವಂತೆ ಎಲ್ಲಾ ಸದಸ್ಯರನ್ನು ಒತ್ತಾಯಿಸಿದರು. ಇದನ್ನೂ ಓದಿ: 5 ದಿನ ಒಳಗಡೆ ದೇಶ ತೊರೆಯಿರಿ – ಕೆನಡಾ ರಾಯಭಾರಿಗೆ ಭಾರತ ಕಟು ಸಂದೇಶ

    ನಾರಿಶಕ್ತಿ ವಂದನ್ ಅಧಿನಿಯಮ್ ಹೆಚ್ಚು ಮಹಿಳೆಯರು ಸಂಸತ್ತು, ಅಸೆಂಬ್ಲಿಗಳ ಸದಸ್ಯರಾಗುವುದನ್ನು ಖಚಿತಪಡಿಸುತ್ತದೆ ಎಂದು ಮೋದಿ ತಿಳಿಸಿದರು. ಈ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹಿಂದಿನ ಸರ್ಕಾರಗಳು ಈ ಮಸೂದೆಯನ್ನು ಅಂಗೀಕರಿಸಲು ವಿಫಲವಾಗಿದೆ ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ

    ಈ ಹಿಂದೆಯೂ ಸಂಸತ್ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದೆ. ವರ್ಷಗಳಿಂದ ಮಹಿಳಾ ಮೀಸಲಾತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾವು ಇತಿಹಾಸವನ್ನು ಸ್ಕ್ರಿಪ್ಟ್‌ ಮಾಡಿದ್ದೇವೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಇದು ಅಸಂಬದ್ಧ, ಪ್ರೇರಿತ- ಕೆನಡಾ ಆರೋಪ ತಿರಸ್ಕರಿಸಿದ ಭಾರತ

    ವಾಜಪೇಯಿ (Atal Bihari Vajpayee) ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಯಿತು. ಆದರೆ ಮಸೂದೆಯನ್ನು ಅಂಗೀಕರಿಸಲು ಸಾಕಷ್ಟು ಬಹುಮತ ಇರದ ಕಾರಣ ಈ ಕನಸು ಅಪೂರ್ಣವಾಯಿತು. ಇದನ್ನು ಮುಂದಕ್ಕೆ ಕೊಂಡೊಯ್ಯಲು ದೇವರು ನನಗೆ ಅವಕಾಶ ನೀಡಿದ್ದಾನೆ. ನಮ್ಮ ಸರ್ಕಾರ ಇಂದು ಉಭಯ ಸದನಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಕುರಿತು ಹೊಸ ಮಸೂದೆಯನ್ನು ತರುತ್ತಿರುವುದಕ್ಕೆ ನಮಗೆ ಸಂತಸವಾಗುತ್ತಿದೆ ಎಂದರು. ಇದನ್ನೂ ಓದಿ: ಹಳೆ ಸಂಸತ್‌ ಭವನದಲ್ಲಿ ಸಂಸದರ ಮೆಗಾ ಫೋಟೋಶೂಟ್‌ – ಸುಂದರ ನೆನಪುಗಳೊಂದಿಗೆ ವಿದಾಯ

    ನಾಳೆ ಸಂಸತ್ತಿನಲ್ಲಿ ಚರ್ಚೆ:
    ಕೇಂದ್ರ ಸಚಿವ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ್ ಅಠಾವಳೆ ಈ ಕುರಿತು ಮಾತನಾಡಿ, ನಾಳೆ ಈ ಮಸೂದೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿದೆ ಎಂದರು. ಸುಮಾರು 27 ವರ್ಷಗಳ ಕಾಯುವಿಕೆಯ ನಂತರ ಮಹತ್ವದ ಬೆಳವಣಿಗೆಯನ್ನು ಗುರುತಿಸುವ ಮೂಲಕ ದೀರ್ಘಾವಧಿಯಿಂದ ಬಾಕಿ ಉಳಿದಿರುವ ಮಸೂದೆ ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಿದೆ. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ

    ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಅನುಮೋದನೆ ದೊರೆತಿದೆ. ಹೊಸ ಸಂಸತ್‌ ಭವನದಲ್ಲಿ ನಡೆಯುವ ಇಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ ಎಂಬುದು ತಿಳಿದುಬಂದಿದೆ.

    ಈ ನಡುವೆಯೇ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi), ಮಹಿಳಾ ಮೀಸಲಾತಿ ಮಸೂದೆ ನಮ್ಮದು ಎಂದಿದ್ದಾರೆ. ಸಂಸತ್ತಿಗೆ ಪ್ರವೇಶಿಸುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಹಿಳಾ ಮೀಸಲಾತಿ ಬಿಲ್‌ ನಮ್ಮದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್

    ಈ ಕುರಿತು ಮಾತನಾಡಿರುವ ರಾಷ್ಟ್ರೀಯ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ನಾವು ಕೇಂದ್ರ ಸಚಿವ ಸಂಪುಟದ ವರದಿಯ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಮಸೂದೆಯ ವಿವರಗಳಿಗಾಗಿ ಕಾಯುತ್ತಿದ್ದೇವೆ. ವಿಶೇಷ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷಗಳ ಸಭೆಯಲ್ಲೇ ಈ ಬಗ್ಗೆ ಚೆನ್ನಾಗಿ ಚರ್ಚಿಸಬಹುದಿತ್ತು. ಗೌಪ್ಯತೆಯೊಂದಿಗೆ ಕೆಲಸ ಮಾಡುವ ಬದಲು ಒಮ್ಮತದ ನಿರ್ಧಾರ ಕೈಗೊಳ್ಳಬಹುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್‌ ಮತ್ತೊಬ್ಬ ನಾಯಕ ಪಿ.ಚಿದಂಬರಂ ಮಾತನಾಡಿ, ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ಜಯ ಸಿಕ್ಕಂತಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವರುಣಾ ಕ್ಷೇತ್ರದ ಮತದಾರರಿಗೆ ಎಲೆಕ್ಷನ್ ವೇಳೆ ಉಡುಗೊರೆ ಕೊಟ್ಟಿದ್ರು ಸಿದ್ದು – ತಂದೆ ಗಿಫ್ಟ್‌ ಬಗ್ಗೆ ಯತೀಂದ್ರ ಮಾಹಿತಿ

    ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ. ಈ ಮಸೂದೆಯನ್ನು ಆರಂಭದಲ್ಲಿ ಸೆಪ್ಟೆಂಬರ್ 12, 1996 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು. ಆ ನಂತರ 2010ರ ಮಾರ್ಚ್‌ 9 ರಂದು ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಸಭೆಯಲ್ಲಿ ಈ ಮಸೂದೆಯನ್ನ ಅಂಗೀಕರಿಸಲಾಗಿತ್ತು. ಆದ್ರೆ ಲೋಕಸಭೆಯಲ್ಲಿ ಕೈಬಿಡಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]