Tag: ಮಹಿಳಾ ಮೀಸಲಾತಿ ವಿಧೇಯಕ

  • ಮಹಿಳಾ ಮೀಸಲಾತಿ ವಿಧೇಯಕ – ಮೋದಿಗೆ ರಾಹುಲ್ ಗಾಂಧಿ ಸವಾಲ್

    ಮಹಿಳಾ ಮೀಸಲಾತಿ ವಿಧೇಯಕ – ಮೋದಿಗೆ ರಾಹುಲ್ ಗಾಂಧಿ ಸವಾಲ್

    ನವದೆಹಲಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಬೇಷರತ್ ಬೆಂಬಲ ನೀಡುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

    ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಕುರಿತು ಟ್ವೀಟ್ ಮಾಡಿ ಈ ಕುರಿತು ಖಚಿತ ಪಡಿಸಿದ ರಾಹುಲ್ ಗಾಂಧಿ, ನಮ್ಮ ಪ್ರಧಾನಿಗಳು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡೋದಾಗಿ ಹೇಳಿಕೊಳ್ಳುತ್ತಾರೆ. ಅದಕ್ಕೆ ಈಗ ಸಮಯ ಬಂದಿದೆ. ಈ ಬಾರಿಯ ಮಾನ್ಸೂನ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡಿ ಎಂದು ಹೇಳಿದ್ದಾರೆ.

    ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅಂದ ಹಾಗೆ, 2010 ರಲ್ಲಿ ಈ ಮಸೂದೆ ರಾಜ್ಯಸಭೆಯಲ್ಲಿ ಪಾಸ್ ಆಗಿದ್ದರೂ 8 ವರ್ಷದಿಂದ ಲೋಕಸಭೆಯಲ್ಲಿ ನೆನೆಗುದಿಗೆ ಬಿದ್ದಿದೆ.

    ಕಳೆದ ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಅಜಂಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿದ್ದರೆ ಅದು ಅವರಿಗೆ ಬಿಟ್ಟಿದ್ದು. ಆದರೆ ಕಾಂಗ್ರೆಸ್ ಮುಸ್ಲಿಂ ಪುರುಷರಿಗೆ ಮಾತ್ರ ಸೀಮಿತವಾಗಿದೆಯಾ? ಏಕೆಂದರೆ ತ್ರಿವಳಿ ತಲಾಖ್, ನಿಖಾ ಹಲಾಲ ವಿರುದ್ಧ ಮುಸ್ಲಿಂ ಮಹಿಳೆಯರು ಹೋರಾಟ ನಡೆಸುವ ಸಂದರ್ಭದಲ್ಲಿ ನೀವು ಅವರ ಪರ ನಿಲ್ಲಲಿಲ್ಲ ಎಂದು ಆರೋಪಿಸಿದ್ದರು. ಸದ್ಯ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧದ ಟೀಕೆಗೆ ಉತ್ತರವಾಗಿ ಮಹಿಳಾ ಮೀಸಲಾತಿ ವಿಧೇಯಕ ಜಾರಿಗೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಹೇಳಿದೆ.