Tag: ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್

  • ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ನವದೆಹಲಿ: ಟರ್ಕಿಯ ಇಸ್ತಾನ್‍ಬುಲ್‍ನಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ ಫೈನಲ್‍ನಲ್ಲಿ ಭಾರತದ ಬಾಕ್ಸರ್ ನಿಖತ್ ಜರೀನ್ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದರು. ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದರು. ಇದು ನನಗೆ ತುಂಬಾ ಹೆಮ್ಮೆ ಎನಿಸಿತು ಎಂದು ನಿಖತ್ ಜರೀನ್ ತಿಳಿಸಿದ್ದಾರೆ.


    ಫೈನಲ್‍ನಲ್ಲಿ ಥಾಯ್ಲೆಂಡ್‍ನ ಜಿಟ್‍ಪಾಂಗ್ ಜುಟಾಮಾಸ್ ವಿರುದ್ಧ 5-0 ಅಂತರದಲ್ಲಿ ಜಯಗಳಿಸುವ ಮೂಲಕ ನಿಖತ್ ಜರೀನ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿದೆ. ಪ್ರಧಾನಿ ಅಭಿನಂದನೆ ತುಂಬಾ ವಿಶೇಷ ಎಂದರು. ಇದನ್ನೂ ಓದಿ: ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ – ಚಿನ್ನದ ಪದಕ ಗೆದ್ದ ಭಾರತದ ಬಾಕ್ಸರ್ ನಿಖತ್ ಜರೀನ್

    ನಿಮ್ಮ ಹೆಸರು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‍ನಲ್ಲಿದೆ ಎಂದು ಪತ್ರಕರ್ತರು ಹೇಳಿದ್ದಕ್ಕೆ ಇದು ನನಗೆ ತುಂಬಾ ಖುಷಿ ವಿಚಾರ. ಇದೆಲ್ಲಕ್ಕಿಂತ ಮಿಗಿಲಾಗಿ ನನ್ನ ಕನಸು ನನಸಾಗಿದೆ ನಾನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದೇನೆ. ಇದು ನನ್ನ ಒಂದು ಕನಸಾಗಿತ್ತು ಎಂದು ಸಂಭ್ರಮ ಪಟ್ಟರು.

    ಹೈದರಾಬಾದ್ ಮೂಲದ ಜರೀನ್ ಅವರು ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌ಎಲ್‌ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಅಂಪೈರ್ ಎಡವಟ್ಟು – ಡ್ರೆಸ್ಸಿಂಗ್ ರೂಮ್‍ನಲ್ಲಿ ರೊಚ್ಚಿಗೆದ್ದ ಮ್ಯಾಥ್ಯೂ ವೇಡ್

    ನಿಖತ್ ಜರೀನ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ಈ ಚಾಂಪಿಯನ್‍ಶಿಪ್‍ನಲ್ಲಿ 1 ಚಿನ್ನದ ಪದಕ ತಂದುಕೊಟ್ಟರೆ, ಮನೀಶಾ ಮೌನ್ 57 ಕೆಜಿ ವಿಭಾಗ ಮತ್ತು ಪರ್ವೀನ್ ಹೂಡಾ 63 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಸಾಧನೆಗೈದಿದ್ದಾರೆ.

  • ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ – ಚಿನ್ನದ ಪದಕ ಗೆದ್ದ ಭಾರತದ ಬಾಕ್ಸರ್ ನಿಖತ್ ಜರೀನ್

    ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ – ಚಿನ್ನದ ಪದಕ ಗೆದ್ದ ಭಾರತದ ಬಾಕ್ಸರ್ ನಿಖತ್ ಜರೀನ್

    ಅಂಕಾರಾ: ಟರ್ಕಿಯ ಇಸ್ತಾನ್‍ಬುಲ್‍ನಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ ಫೈನಲ್‍ನಲ್ಲಿ ಭಾರತದ ನಿಖತ್ ಜರೀನ್ 52 ಕೆಜಿ ವಿಭಾಗದಲ್ಲಿ ಥಾಯ್ಲೆಂಡ್‍ನ ಜಿಟ್‍ಪಾಂಗ್ ಜುಟಾಮಾಸ್ ವಿರುದ್ಧ ಜಯಗಳಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

    ಚಿನ್ನದ ಪದಕಕ್ಕಾಗಿ ನಡೆದ ಈ ಹೋರಾಟದಲ್ಲಿ ಎದುರಾಳಿ ಜುಟಮಾಸ್ ಜಿಟ್‍ಪಾಂಗ್ ಅವರನ್ನು ಜರೀನ್ 5-0 ಅಂತರದಿಂದ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

    ಈ ಮೂಲಕ ಹೈದರಾಬಾದ್ ಮೂಲದ ಜರೀನ್ ಅವರು ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌ಎಲ್‌ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎನಿಸಿಕೊಂಡಿದ್ದಾರೆ.

    ನಿಖತ್ ಜರೀನ್ ಅವರಿಗಿಂತ ಮುನ್ನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ ಭಾರತೀಯರ ಪೈಕಿ ಮೇರಿ ಕೋಮ್ ಅಗ್ರಸ್ಥಾನದಲ್ಲಿದ್ದು, ಆರು ಬಾರಿ ಚಿನ್ನದ ಪದಕ ಗೆದ್ದಿದ್ದರು. ಸರಿತಾ ದೇವಿ, ಜೆನ್ನಿ ಆರ್‌ಎಲ್‌ ಮತ್ತು ಲೇಖಾ ಕೆಸಿ ಕೂಡ ಚಿನ್ನದ ಪದಕ ಗೆದ್ದಿರುವ ಭಾರತೀಯ ಮಹಿಳಾ ಬಾಕ್ಸರ್‌ಗಳಾಗಿದ್ದಾರೆ.

    ನಿಖತ್ ಜರೀನ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ಈ ಚಾಂಪಿಯನ್‍ಶಿಪ್‍ನಲ್ಲಿ 1 ಚಿನ್ನದ ಪದಕದೊಂದಿಗೆ ಪಂದ್ಯಾವಳಿಯನ್ನು ಪೂರ್ಣಗೊಳಿಸಿದ್ದಾರೆ. ಮನೀಶಾ ಮೌನ್ 57 ಕೆಜಿಯಲ್ಲಿ ಕಂಚು ಗೆದ್ದಿದ್ದರೆ, ಪರ್ವೀನ್ ಹೂಡಾ ಕೂಡ 63 ಕೆಜಿಯಲ್ಲಿ ಭಾರತಕ್ಕೆ ಎರಡನೇ ಕಂಚಿನ ಪದಕವನ್ನು ಗೆದ್ದಿದ್ದಾರೆ.