Tag: ಮಹಿಳೆ ಕೊಲೆ

  • ಡ್ಯಾಡಿನೇ ಮಮ್ಮಿನ ಕೊಂದಿದ್ದು – 4 ವರ್ಷದ ಮಗಳು ಬಿಡಿಸಿದ ಚಿತ್ರದಿಂದ ಬಯಲಾಯ್ತು ತಾಯಿಯ ಕೊಲೆ ರಹಸ್ಯ

    ಡ್ಯಾಡಿನೇ ಮಮ್ಮಿನ ಕೊಂದಿದ್ದು – 4 ವರ್ಷದ ಮಗಳು ಬಿಡಿಸಿದ ಚಿತ್ರದಿಂದ ಬಯಲಾಯ್ತು ತಾಯಿಯ ಕೊಲೆ ರಹಸ್ಯ

    ಲಕ್ನೋ: ಮಗಳು ಬಿಡಿಸಿದ ಚಿತ್ರದಿಂದ (Drawing) ತಾಯಿಯ ಕೊಲೆ (Murder) ರಹಸ್ಯ ಬಯಲಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಅಪ್ಪನೇ ಅಮ್ಮನನ್ನು ಕೊಲೆ ಮಾಡಿದ್ದು ಎಂದು ಪೊಲೀಸರ ಮುಂದೆ 4 ವರ್ಷದ ಮಗಳು (daughter) ಪೊಲೀಸರ ಮುಂದೆ ಸಾಕ್ಷಿ ಹೇಳಿದ್ದಾಳೆ.

    27 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ಉತ್ತರ ಪ್ರದೇಶದ ಶಿವ ಪರಿವಾರ್ ಕಾಲೋನಿಯ ಝಾನ್ಸಿ ಬಳಿಯ ಕೊಟ್ವಾಲಿ ಪ್ರದೇಶದಲ್ಲಿ ನಡೆದಿತ್ತು. ಮಹಿಳೆಯ 4 ವರ್ಷದ ಮಗಳು ಚಿತ್ರ ಬಿಡಿಸಿ ಆಕೆಯ ತಂದೆಯೆ ಕೊಲೆ ಮಾಡಿದ್ದಾನೆ ಎಂದು ಆರೋಪಿಸುವ ಮೂಲಕ ಕೊಲೆ ಪ್ರಕರಣಕ್ಕೆ ಮಹತ್ವದ ಸಾಕ್ಷಿ ನೀಡಿದ್ದಾಳೆ. ಇದನ್ನೂ ಓದಿ : ಎಲಾನ್ ಮಸ್ಕ್-ಮೋದಿ ಭೇಟಿ ಬೆನ್ನಲ್ಲೇ ಟೆಸ್ಲಾದಿಂದ ಭಾರತದಲ್ಲಿ ನೇಮಕಾತಿ ಶುರು

    ಪತಿ, ಅತ್ತೆ ಹಾಗೂ ಮಾವ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದರು. ಇದನ್ನೂ ಓದಿ : ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಬದಲಾಗಿದೆ: ಯೋಗಿ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಟೀಕೆ

    2019ರಲ್ಲಿ ಝಾನ್ಸಿ ನಿವಾಸಿಯಾದ ಸಂದೀಪ್ ಬುದೋಲಿನನ್ನು ಮೃತ ಮಹಿಳೆ ವಿವಾಹವಾಗಿದ್ದರು. ಮದುವೆಯ ಸಂದರ್ಭದಲ್ಲಿ 20 ಲಕ್ಷ ರೂ. ಹಣ ಹಾಗೂ ಇನ್ನಿತರ ಉಡುಗೊರೆಗಳನ್ನು ವರದಕ್ಷಿಣೆ ರೂಪದಲ್ಲಿ ಸಂದೀಪ್‌ಗೆ ನೀಡಲಾಗಿತ್ತು. ಸಂದೀಪ್ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ ಕಾರು ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಮೃತ ಮಹಿಳೆಯ ತಂದೆ ಸಂಜಯ್ ತ್ರಿಪಾಠಿ ದೂರಿದ್ದಾರೆ. ಇದನ್ನೂ ಓದಿ : ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿದ ರೈತ

    ಅವರ ಬೇಡಿಕೆಯನ್ನು ಪೂರೈಸದಿದ್ದಾಗ ಆಕೆಗೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಆ ಸಂದರ್ಭದಲ್ಲಿ ರಾಜಿ ಸಂದಾಯದ ಮೂಲಕ ಇತ್ಯರ್ಥವಾಗಿತ್ತು. ನಂತರ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಗಂಡು ಮಗುವಿಗೆ ಜನ್ಮ ನೀಡಿಲ್ಲ ಎಂದು ಸಂದೀಪ್ ಕುಟುಂಬಸ್ಥರು ಆಕೆಗೆ ಹಿಂಸೆ ನೀಡಲು ಪ್ರಾರಂಭಿಸಿದ್ದರು. ಹೆರಿಗೆಯ ಸಂದರ್ಭದಲ್ಲೂ ಸಂದೀಪ್ ಹಾಗೂ ಆತನ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಯಲ್ಲೇ ಬಿಟ್ಟು ತೆರಳಿದ್ದರು. ಬಳಿಕ ನಾನು ಆಸ್ಪತ್ರೆಯ ಬಿಲ್ ಪಾವತಿಸಿ ಮಗು ಹಾಗೂ ಆಕೆಯನ್ನು ಮನೆಗೆ ಕರೆದುಕೊಂಡು ಹೋದೆ ಎಂದು ಸಂಜಯ್ ಹೇಳಿದ್ದಾರೆ. ಇದಾದ ಬಳಿಕ ಮಹಿಳೆಯ ಕೊಲೆಯಾಗಿದೆ. ಇದನ್ನೂ ಓದಿ : ಡಬಲ್ ಟ್ಯಾಕ್ಸ್ ಕಟ್ಟಿ ಬಿ-ಖಾತಾ ಪಡೆಯಿರಿ: ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ

    ಅಪ್ಪ, ಅಮ್ಮನಿಗೆ ಹೊಡೆದು ನಂತರ ನೇಣಿಗೆ ಹಾಕಿದ್ದಾರೆ. ಅಮ್ಮನ ತಲೆಗೆ ಕಲ್ಲಿನಿಂದ ಹೊಡೆದು ಚೀಲದಲ್ಲಿ ಹಾಕಿ ಎಸೆದಿದ್ದಾನೆ. ಅಪ್ಪ ಅಮ್ಮನಿಗೆ ಹೊಡೆಯುತ್ತಿದ್ದರು. ಅಮ್ಮನಿಗೆ ಹೊಡೆದರೆ ನಿಮ್ಮ ಕೈ ಮುರಿಯುತ್ತೇನೆ ಎಂದಿದ್ದೆ. ಅಮ್ಮನಿಗೆ ಹೊಡೆದು ಆಕೆಯನ್ನು ಕೊಂದಿದ್ದಾರೆ. ನನಗೂ ಸಹ ಹೊಡೆಯುತ್ತಿದ್ದರು ಎಂದು ಮಗು ಪೊಲೀಸರ ಬಳಿ ಹೇಳಿದ್ದಾಳೆ. ಇದನ್ನೂ ಓದಿ : ಅಧಿಕಾರ ಹಂಚಿಕೆ – ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು: ಸಿದ್ದರಾಮಯ್ಯ

    ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪತಿ ಸಂದೀಪ್‌ನನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ : ಮಹಾಕುಂಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಪುಣ್ಯಸ್ನಾನ

  • ಬೆಂಗಳೂರಲ್ಲಿ ಮಹಿಳೆ ಭೀಕರ ಹತ್ಯೆ; ಅಶ್ರಫ್‌ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ

    ಬೆಂಗಳೂರಲ್ಲಿ ಮಹಿಳೆ ಭೀಕರ ಹತ್ಯೆ; ಅಶ್ರಫ್‌ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ

    – ಅಶ್ರಫ್‌ ಬಗ್ಗೆ ಮಹಾಲಕ್ಷ್ಮಿ ಪತಿ ಹೇಳಿದ್ದೇನು?

    ಬೆಂಗಳೂರು: ಮಲ್ಲೇಶ್ವರದ ವೈಯಾಲಿಕಾವಲ್‌ನಲ್ಲಿ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಫ್‌ ಸೇರಿದಂತೆ ನಾಲ್ವರ ಮೇಲೆ ಕೊಲೆಯಾದ ಮಹಿಳೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಅಶ್ರಫ್‌, ಮುಕ್ತ, ಶಶಿಧರ್, ಸುನೀಲ್ ನಾಲ್ವರ ಹೆಸರನ್ನು ಕೊಲೆಯಾದ ಮಹಿಳೆ ಕುಟುಂಬಸ್ಥರು ಹೇಳಿದ್ದಾರೆ. ಮುಕ್ತ, ಶಶಿಧರ್‌, ಸುನೀಲ್ ಮೂವರು ಮೃತ ಮಹಾಲಕ್ಷ್ಮಿ ಸಹೋದ್ಯೋಗಿಗಳು.‌ ಕೆಲಸ ಮಾಡುವ ಕಡೆಯಲ್ಲಿ ಮಹಾಲಕ್ಷ್ಮಿ ಜಗಳ ಮಾಡಿಕೊಂಡಿದ್ದಳು. ಇದನ್ನೂ ಓದಿ: ದೇಹವನ್ನ ಪೀಸ್‌ ಪೀಸ್‌ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್‌ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?

    ಮಹಾಲಕ್ಷ್ಮಿ ಜೊತೆ ಅಶ್ರಫ್‌ ಸಲುಗೆಯಿಂದ ಇದ್ದ. ಈತ ಉತ್ತರಾಖಂಡ ಮೂಲದವ. ಸಲೂನ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಈಗ ಮಹಾಲಕ್ಷ್ಮಿ ಕುಟುಂಬಸ್ಥರು ನಾಲ್ವರ ಮೇಲೆ ಅನುಮಾನ ಇದೆ ಎಂದಿದ್ದಾರೆ.

    ಮೃತ ಮಹಾಲಕ್ಷ್ಮಿ ಪತಿ ಹೇಳಿದ್ದೇನು?
    ಮಹಾಲಕ್ಷ್ಮಿ ಮತ್ತು ನಾನು ಮದುವೆಯಾಗಿ 6 ವರ್ಷ ಆಗಿತ್ತು. ನಾನು ಮೊಬೈಲ್‌ ಶಾಪ್‌ ಇಟ್ಟುಕೊಂಡಿದ್ದೇನೆ. 9 ತಿಂಗಳ ಹಿಂದಷ್ಟೇ ಇಬ್ಬರೂ ಬೇರೆ ಬೇರೆಯಾಗಿದ್ದೆವು. ಮೊನ್ನೆ ಮಹಾಲಕ್ಷ್ಮಿ ಇದ್ದ ಮನೆ ಮಾಲೀಕರು ಕರೆ ಮಾಡಿ, ಮನೆಯಲ್ಲಿ ವಾಸನೆ ಬರುತ್ತಿದೆ ಎಂದು ಹೇಳಿದ್ದರು. ಬಂದು ನೋಡಿದಾಗ ದೇಹವನ್ನು ಪೀಸ್‌ ಪೀಸ್‌ ಮಾಡಿ ಫ್ರಿಡ್ಜ್‌ನಲ್ಲಿಟ್ಟಿರುವುದು ಗೊತ್ತಾಗಿದೆ. ಇದನ್ನೂ ಓದಿ: Bengaluru | ಹೇಗೆ ನಡೆಯುತ್ತೆ ಭೀಕರ ಕೊಲೆಯ ಮರಣೋತ್ತರ ಪರೀಕ್ಷೆ?

    ಅಶ್ರಫ್‌ ಎಂಬಾತನ ಮೇಲೆ ಅನುಮಾನ ಇದೆ. ಅವನ ವಿರುದ್ಧ ನಾನು ನೆಲಮಂಗಲದಲ್ಲಿ ದೂರು ಕೊಟ್ಟಿದ್ದೇನೆ. ಆತನೊಂದಿಗೆ ಮಹಾಲಕ್ಷ್ಮಿ ಸ್ನೇಹ ಹೊಂದಿದ್ದಳು. ನಾನು ಎಲ್ಲವನ್ನೂ ಪತ್ತೆಹಚ್ಚಿದ್ದೆ. ಅಶ್ರಫ್‌ ವಿಚಾರವಾಗಿ ಈಗ ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ.

    ಮಹಾಲಕ್ಷ್ಮಿ ಮತ್ತು ನನಗೆ ಒಬ್ಬಳು ಹೆಣ್ಣುಮಗಳಿದ್ದಾಳೆ. ಮಗಳು ಈಗ ನನ್ನ ಜೊತೆಯಲ್ಲೇ ಇದ್ದಾಳೆ. ತಿಂಗಳಿಗೊಮ್ಮೆ ಮಗಳನ್ನು ನೋಡಲು ಮಹಾಲಕ್ಷ್ಮಿ ನನ್ನ ಮೊಬೈಲ್‌ ಶಾಪ್‌ಗೆ ಬರುತ್ತಿದ್ದಳು. ಹತ್ಯೆಗೂ ಮುನ್ನ ಕೊನೆಯದಾಗಿ 25 ದಿನಗಳ ಹಿಂದೆ ಬಂದಿದ್ದಳು ಎಂದು ಮಹಾಲಕ್ಷ್ಮಿ ಪತಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆ ಕಗ್ಗೊಲೆ; ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟಿದ್ಯಾಕೆ ಹಂತಕ?

  • ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದ ಮಹಿಳೆಯ ಶೂಟೌಟ್ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಶೂಟೌಟ್ ನಡೆಸಿ ಮಹಿಳೆಯನ್ನು ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

    ಸಂಕೇಶ್ವರ ವಾರ್ಡ್ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಎಂಬಾತನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಳೆದ ಜ.16ರಂದು ನಾಡ ಪಿಸ್ತೂಲ್‍ನಿಂದ ಶೈಲಾ ನಿರಂಜನ್ ಸುಭೇದಾರ್(56) ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

    POLICE JEEP

    ಪ್ರಕರಣದ ಬೆನ್ನತ್ತಿದ್ದ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಂಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ ಭೀಮಪ್ಪ ನಾಗನೂರೆ, ಬಸವರಾಜ ಕಪರಟ್ಟಿ ಅವರ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

    ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಮಹಿಳೆಯಿಂದ 25 ಲಕ್ಷ ರೂ. ಹಣವನ್ನು ಉಮೇಶ ಕಾಂಬಳೆ ಪಡೆದಿದ್ದ. ಬಡ್ಡಿ ಸಮೇತ ಹಣ ಹಿಂದಿರಿಗಿಸಲು ಮಹಿಳೆ ಪೀಡಿಸುತ್ತಿದ್ದ ಕಾರಣ ಮಹಾರಾಷ್ಟ್ರದ ಸಾಂಗ್ಲಿಯಿಂದ ಪಿಸ್ತೂಲ್‍ನ್ನು ತಂದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಇನ್ನೂ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಸಂಕೇಶ್ವರ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ಅನುಮಾನಾಸ್ಪದವಾಗಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

    ಅನುಮಾನಾಸ್ಪದವಾಗಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

    ಮುಂಬೈ: ಅನುಮಾನಾಸ್ಪದ ರೀತಿಯಲ್ಲಿ ರಸ್ತೆ ಬದಿ ಗೋಣಿ ಚೀಲದಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಯ ಸರಪಂಚ್ ಎಂದು ಗುರುತಿಸಲಾಗಿದ್ದು, ಈ ಘಟನೆ ಮಹಾಡ್ ತಾಲೂಕಿನ ಬೆಳೋಶಿ ಗ್ರಾಮದಲ್ಲಿ ನಡೆದಿದೆ. ರಸ್ತೆಬದಿ ಎಸೆದಿದ್ದ ಗೋಣಿಚೀಲ ಗಮನಿಸಿದ ಕೆಲ ಯುವಕರು ಪರಿಶೀಲಿಸಲು ಮುಂದಾದಾಗ ಮಹಿಳೆ ಬೆತ್ತಲೆಯಾಗಿದ್ದು, ಆಕೆಯ ದೇಹದ ಮೇಲೆ ಗಾಯದ ಗುರುತುಗಳನ್ನು ಕಂಡು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ಕೇವಲ ಊಹಾಪೋಹ: ನಳಿನ್‍ ಕುಮಾರ್ ಕಟೀಲ್

    ನಂತರ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಹಿಳೆಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದೀಗ ಪೊಲೀಸರು ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಮೃತ ಮಹಿಳೆಯ ಸಂಬಂಧಿಕರ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಲ್ಯಾಂಡಿಂಗ್ ಸಮಸ್ಯೆಯಾದ ಸಿಎಂ ಬೊಮ್ಮಾಯಿ ಇದ್ದ ವಿಮಾನ

    ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಎಫ್‍ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.

  • ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

    ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

    ಮಂಡ್ಯ: ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಪತಿಯನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

    ಸಂಧ್ಯಾ(23) ಗಂಡನಿಂದಲೇ ಕೊಲೆಯಾಗಿರುವ ಮಹಿಳೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕುಂದೂರು ಬಳಿ ಈ ಘಟನೆ ನಡೆದಿದ್ದು, ವಾರದ ಬಳಿಕ ಪೊಲೀಸರ ವಿಚಾರಣೆಯ ಬಳಿಕ ಪತ್ನಿಯನ್ನು ಕೊಂದಿರುವುದನ್ನು ಒಪ್ಪಿಕೊಂಡಿದ್ದಾನೆ.

    ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ನಿವಾಸಿ ಷಡಕ್ಷರಿಯನ್ನು ಒಂದೂವರೆ ವರ್ಷದ ಹಿಂದಷ್ಟೇ ಸಂಧ್ಯಾ ಮದುವೆಯಾಗಿದ್ದರು. ಆದರೆ ಇವರ ಸಂಸಾರದಲ್ಲಿ ಬಿರುಕು ಸೃಷ್ಟಿಯಾಗಿ ಇತ್ತೀಚೆಗೆ ಗಂಡ, ಹೆಂಡತಿ ದೂರವಾಗಿದ್ರು. ತಂದೆ ಮನೆಯಲ್ಲಿದ್ದುಕೊಂಡು ಸಂಧ್ಯಾ ಕಂಪ್ಯೂಟರ್ ತರಬೇತಿಗೆ ಪಡೆಯುತ್ತಿದ್ದರು. ಆದರೆ ನ.16ರಂದು ಕಂಪ್ಯೂಟರ್ ಕ್ಲಾಸ್ ಗೆ ಹೋಗಿದ್ದ ಸಂಧ್ಯಾ ನಾಪತ್ತೆಯಾಗಿದ್ದರು. ಇದನ್ನೂ ಓದಿ: ಕ್ರಿಸ್‍ಮಸ್ ಮೆರವಣೆಗೆಯಲ್ಲಿ ಭಾರೀ ಅಪಘಾತ – 20 ಜನರಿಗೆ ತೀವ್ರಗಾಯ

    ಈ ಹಿನ್ನೆಲೆ ಸಂಧ್ಯಾ ಪೋಷಕರು ಮನೆಗೆ ಮಗಳು ಬಾರದಿದ್ದಕ್ಕೆ ಬೆಳಕವಾಡಿ ಪೊಲೀಸ್ ಗೆ ನಾಪತ್ತೆ ದೂರು ನೀಡಿದ್ದರು. ಮತ್ತೊಂದೆಡೆ ಅಳಿಯ ಷಡಕ್ಷರಿ ವಿಷ ಸೇವಿಸಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸೇರಿದ್ದ. ಪರಿಣಾಮ ಪೊಲೀಸರು ಆತ ಆಸ್ಪತ್ರೆಯಿಂದ ಬಿಡುಗಡೆಯಾಗುವರೆಗೂ ಕಾದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಆರಂಭದಲ್ಲಿ ತನಗೇನು ಗೊತ್ತಿಲ್ಲ ಎನ್ನುತ್ತಿದ್ದ ಷಡಕ್ಷರಿ ಪೊಲೀಸರ ಟ್ರಿಟ್ಮೆಂಟ್ ಬಳಿಕ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ಷಡಕ್ಷರಿ ಕಂಪ್ಯೂಟರ್ ಕ್ಲಾಸ್ ನಿಂದ ಸಂಧ್ಯಾನನ್ನು ಕರೆದುಕೊಂಡು ಬಂದು ಕುಂದೂರು ಬಳಿಯ ನಾಲೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಕೊಲೆ ಬಳಿಕ ವಿಷ ಸೇವಿಸಿ ತಾನೇ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಮೂಲಕ ಪ್ರಕರಣದಿಂದ ತಪ್ಪಿಸಿಕೊಳ್ಳಬಹುದು ಎಂದು ಪ್ಲಾನ್ ಮಾಡಿ ಕೊನೆಗೂ ಸಿಕ್ಕಿ ಹಾಕಿಕೊಂಡಿದ್ದಾನೆ. ಪೊಲೀಸರು ಪ್ರಸ್ತುತ ಆರೋಪಿಯನ್ನು ಬಂಧಿಸಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.