Tag: ಮಹಿಳೆ ಸಾವು

  • ರಾಯಚೂರಿನಲ್ಲಿ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ರಾಯಚೂರಿನಲ್ಲಿ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ರಾಯಚೂರು: ದೇವಾಲಯದ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಡೊಂಗರಾಂಪೂರ (Dongarampura) ಗ್ರಾಮದಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು 42 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

    ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

    ಸದ್ಯ ಯಾಪಲದಿನ್ನಿ (Yapaladinni) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು

  • ಮಗನ ಬರ್ತ್‌ಡೇ ಪಾರ್ಟಿ ವೇಳೆ ಹಾರಿಸಿದ ಗುಂಡು ತಗುಲಿ ತಾಯಿ ಸಾವು

    ಮಗನ ಬರ್ತ್‌ಡೇ ಪಾರ್ಟಿ ವೇಳೆ ಹಾರಿಸಿದ ಗುಂಡು ತಗುಲಿ ತಾಯಿ ಸಾವು

    ಲಕ್ನೋ: ಪುತ್ರನ ಬರ್ತ್‌ಡೇ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡು ತಗುಲಿ ತಾಯಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ.

    ಅನಿತಾ ವರ್ಮಾ ಮೃತಪಟ್ಟ ಮಹಿಳೆ. ಬುಧವಾರ ರಾತ್ರಿ ಮೂರು ವರ್ಷದ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದರು. ಈ ವೇಳೆ ಸಂಭ್ರಮಕ್ಕಾಗಿ ಹಾರಿಸಿದ ಗುಂಡು ಮಹಿಳೆಗೆ ತಗುಲಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    ಅನಿತಾ ಅವರು ಪ್ರದೀಪ್‌ ವರ್ಮಾ ಎಂಬವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮಗನ ಹುಟ್ಟುಹಬ್ಬ ಸಂಭ್ರಮಕ್ಕೆ 100 ಕ್ಕೂ ಹೆಚ್ಚು ಅತಿಥಿಗಳನ್ನು ಆಹ್ವಾನಿಸಿದ್ದರು. ಅನಿತಾ ಕುಟುಂಬಕ್ಕೆ ಹತ್ತಿರದವರೇ ಆಗಿದ್ದ ಜೈರಾಮ್‌ ವರ್ಮಾ ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿದ್ದರು. ಸಂಭ್ರಮಕ್ಕೆ ಜೈರಾಮ್‌ ಹಾರಿಸಿದ ಗುಂಡು ಅನಿತಾಗೆ ತಗುಲಿ ಮೃತಪಟ್ಟಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜೈರಾಮ್‌ ವರ್ಮಾನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಯನ್ನು ಬಚಾವ್ ಮಾಡಲು ಖತರ್ನಾಕ್ ಪ್ಲಾನ್ ಮಾಡಿದ್ದ ತಂದೆ ಅರೆಸ್ಟ್!

  • ಟಯರ್ ಸ್ಪೋಟಗೊಂಡು ಪಲ್ಟಿಯಾದ ಕಾರು – ಅಪಘಾತದಲ್ಲಿ ಮಹಿಳೆ ಸಾವು

    ಟಯರ್ ಸ್ಪೋಟಗೊಂಡು ಪಲ್ಟಿಯಾದ ಕಾರು – ಅಪಘಾತದಲ್ಲಿ ಮಹಿಳೆ ಸಾವು

    ವಿಜಯನಗರ: ವೇಗವಾಗಿ ಚಲಿಸುತ್ತಿದ್ದಾಗ ಟಯರ್ ಸ್ಪೋಟಗೊಂಡಿದ್ದರಿಂದ ಕಾರು ಪಲ್ಟಿಯಾಗಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

    ಕೂಡ್ಲಿಗಿ ತಾಲೂಕಿನ ಬಣಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಹೊಸಪೇಟೆಯಿಂದ ಬೆಂಗಳೂರಿನ ಕಡೆ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಕಾರಿನ ಮುಂದಿನ ಟಯರ್ ಸ್ಫೋಟವಾಗಿ ಕಾರು ಪಲ್ಟಿಯಾಗಿದೆ. ಏಕಾಏಕಿ ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದ ಮಹಿಳೆ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

    ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಮಹಿಳೆಯನ್ನು ಪದ್ಮಾವತಿ(43) ಎಂದು ಗುರುತಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಶಂಕರ್ ಪಾಟೀಲ್ ಮುನೇನಕೊಪ್ಪ

    ಈ ಸಂಬಂಧ ಕೂಡ್ಲಿಗಿ ತಾಲೂಕಿನ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೊಳಗಾದ ಈ ಶಿಫ್ಟ್ ಕಾರು ಬೆಂಗಳೂರು ಮೂಲದ್ದು ಎಂದು ತಿಳಿದುಬಂದಿದೆ.

  • ರಾಯಚೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ- ಸಿಡಿಲಿಗೆ ಓರ್ವ ಮಹಿಳೆ ಸಾವು

    ರಾಯಚೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ- ಸಿಡಿಲಿಗೆ ಓರ್ವ ಮಹಿಳೆ ಸಾವು

    ರಾಯಚೂರು: ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ಕೃಷಿ ಕೆಲಸಕ್ಕೆ ಹೋಗಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಪುಚ್ಚಲದಿನ್ನಿಯಲ್ಲಿ ನಡೆದಿದೆ.

    30 ವರ್ಷದ ಚಂದ್ರಮ್ಮ ಸಿಡಿಲ ಹೊಡೆತಕ್ಕೆ ಮೃತಪಟ್ಟ ದುರ್ದೈವಿ. ಕೃಷಿ ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದ ವೇಳೆ ಮಳೆ ಬರಲು ಶುರುವಾಗಿದೆ. ಮಳೆಯಿಂದಾಗಿ ಚಂದ್ರಮ್ಮ ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಮರಕ್ಕೆ ಸಿಡಿಲು ಬಡಿದಿದ್ದು, ಮರದ ಕೆಳಗೆ ಇದ್ದ ಚಂದ್ರಮ್ಮಗೂ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಇನ್ನು ರಾಯಚೂರಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಲವೆಡೆ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಕೆಲವೆಡೆ ಹಳ್ಳ ಕೊಳ್ಳಗಳು ತುಂಬಿವೆ. ಇದರಿಂದ ಹಳ್ಳದಲ್ಲಿ ಎಮ್ಮೆ ಕೊಚ್ಚಿ ಹೋಗಿರುವ ಘಟನೆಗಳು ನಡೆದಿದ್ದು, ಮಳೆಯ ಅಬ್ಬರದಿಂದ ಹಲವು ಜಾನುವಾರಗಳು ಸಾವನ್ನಪ್ಪಿವೆ.

    ನಗರದಲ್ಲೂ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಅಲ್ಲದೇ ರಸ್ತೆಗಳು ನೀರಿನಿಂದ ಆವೃತಗೊಂಡಿದ್ದು ಕೆಲ ಸಮಯ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು. ಜೊತೆಗೆ ವಿದ್ಯುತ್ ವ್ಯವಸ್ಥೆಯೂ ಕೂಡ ಸ್ಥಗಿತಗೊಂಡಿತ್ತು.