Tag: ಮಹಿಷಾ ದಸರಾ

  • ವಿರೋಧದ ನಡ್ವೆ ಮೈಸೂರಲ್ಲಿ ಮಹಿಷ ದಸರಾ ಆಚರಣೆ – ಜಿಲ್ಲಾಡಳಿತ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

    ವಿರೋಧದ ನಡ್ವೆ ಮೈಸೂರಲ್ಲಿ ಮಹಿಷ ದಸರಾ ಆಚರಣೆ – ಜಿಲ್ಲಾಡಳಿತ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

    ಮೈಸೂರು: ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ `ಮಹಿಷ ಮಂಡಲೋತ್ಸವ’ ಹೆಸರಿನಲ್ಲಿ ಮಹಿಷ ದಸರಾ (Mahisha Dasara) ಆಚರಣೆ ನಡೆದಿದೆ. ಮೈಸೂರಿನ ಟೌನ್‌ಹಾಲ್ (Mysuru TownHall) ಬಳಿ ಮಹಿಷ ಮಂಡಲೋತ್ಸವ ಹೆಸರಲ್ಲಿ ಕಾರ್ಯಕ್ರಮ ನಡೆಯಿತು. ಕೇವಲ ವೇದಿಕೆ ಕಾರ್ಯಕ್ರಮಕ್ಕಷ್ಟೇ ಅನುಮತಿ ನೀಡಿ ನಿಷೇಧಾಜ್ಞೆ ವಿಧಿಸಲಾಗಿತ್ತು.

    ಮಹಿಷಾ ದಸರಾ ಮಂಡಲೋತ್ಸವದ ವೇಳೆ ಗಲಾಟೆ-ಗದ್ದಲ ನಡೆಯಿತು. ಮಹಿಷ ಮೂರ್ತಿಗೆ ಮಾಲಾರ್ಪಣೆ ಮಾಡ್ಬೇಕು ಅಂತಾ ಸಮಿತಿಯವರು ಪಟ್ಟು ಹಿಡಿದಿದ್ರು. ಆದ್ರೆ, ಪ್ರತಿಭಟನಾಕಾರರನ್ನ ಮನವೊಲಿಸಿದ ಪೊಲೀಸರು (Mysuru Police) ಐವರಿಗೆ ಪುಪ್ಪಾರ್ಚನೆ ಮಾಡಲು ಅವಕಾಶ ನೀಡಿದ್ರು. ಇದೇ ವೇಳೆ ಸಾಹಿತಿ ಪ್ರೊ.ಕೆ.ಎಸ್ ಭಗವಾನ್ ಹಿಂದೂಗಳ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆ ಪ್ರಕರಣ – ಹತ್ಯೆ ಬಳಿಕ ಪಶ್ಚಾತ್ತಾಪ ಪಟ್ಟಿದ್ದ ಹಂತಕ

    ಮಹಿಷಾ ಮಂಡಲೋತ್ಸವ ಹೆಸರಿನಲ್ಲಿ ಮೈಸೂರಿನ ಪುರಭವನ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪೊಲೀಸರು ಟೌನ್‌ಹಾಲ್ ಹೊರತುಪಡಿಸಿ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ರು. ಕೇವಲ ವೇದಿಕೆ ಕಾರ್ಯಕ್ರಮಕ್ಕಷ್ಟೆ ಅನುಮತಿ ನೀಡಲಾಗಿತ್ತು. ಮೆರವಣಿಗೆ, ಬೈಕ್ ರ‍್ಯಾಲಿಗೆ ಅವಕಾಶ ನೀಡಿರಲಿಲ್ಲ. ಇದನ್ನೂ ಓದಿ: Kolara | ತಾಂತ್ರಿಕ ದೋಷ – ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ದುರಂತ

    ಮಹಿಷಾ ದಸರಾ ಆಚರಣೆ ಸ್ಥಳದಲ್ಲಿ ಹೈಡ್ರಾಮವೇ ನಡೆದು ಹೋಯಿತು. ಪೊಲೀಸರು ಹಾಗೂ ಜಿಲ್ಲಾಡಳಿತ ಮಹಿಷ ಮೂರ್ತಿ ಮಾಲಾರ್ಪಣೆ ಮಾಡಲು ಅವಕಾಶ ನೀಡ್ಲಿಲ್ಲ. ಇದ್ರಿಂದ ರೊಚ್ಚಿಗೆದ್ದ ಮಹಿಷಾ ದಸರಾ ಸಮಿತಿ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಬಳಿಕ ಎಚ್ಚೆತ್ತ ಪೊಲೀಸರು ಕೇವಲ ಐವರು ಮಾತ್ರ ಬೆಟ್ಟಕ್ಕೆ ತೆರಳಿ ಪುಪ್ಪಾರ್ಚನೆ ಮಾಡಲು ಅವಕಾಶ ಮಾಡಿಕೊಟ್ಟರು. ಪುಷ್ಪಾರ್ಚನೆ ಮಾಡಲು ಐವರನ್ನ ಪೊಲೀಸರು ತಮ್ಮ ಜೀಪ್‌ನಲ್ಲೇ ಕರೆದೊಯ್ದರು. ಈ ಮೂಲಕ ಪೊಲೀಸರೇ ನಿಷೇಧಾಜ್ಞೆಯನ್ನ ಉಲ್ಲಂಘನೆ ಮಾಡಿದ್ರು.

    ಈ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮಹಿಷ ದಸರಾ ಆಚರಣೆ ಸಮಿತಿ ನಡುವೆ ಮಾತಿನ ಜಟಾಪಟಿ ನಡೆಯಿತು. ಇದನ್ನೂ ಓದಿ: Mysuru | ಅನುಮತಿ ಪಡೆಯದೇ ಪಾರ್ಟಿ – 8 ಯುವತಿಯರು ಸೇರಿ 64 ಮಂದಿ ವಿರುದ್ಧ ಕೇಸ್‌ 

  • ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

    ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

    – ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ ಎಂದ ಚಿಂತಕ

    ಮೈಸೂರು: ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಸಾಹಿತಿ, ಚಿಂತಕ ಪ್ರೊ.ಕೆ.ಎಸ್.ಭಗವಾನ್ (K.S.Bhagavan) ಹೇಳಿಕೆ ನೀಡಿದ್ದಾರೆ.

    ಮಹಿಷ ದಸರಾದಲ್ಲಿ ಮಾತನಾಡಿದ ಅವರು, ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ. ಹಿಂದೂ ಧರ್ಮ ಅಂದ್ರೆ ಅದು ಹಿಂದೂಗಳ ಧರ್ಮ ಅಲ್ಲ. ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನಾ ಬ್ರಾಹ್ಮಣರು ಎನ್ನಲ್ಲಾ, ಅವರನ್ನು ಶೂದ್ರರು ಅಂತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನಂಬಿಕೆಗೆ ಧಕ್ಕೆಯಾಗದಂತೆ ಮಹಿಷ ದಸರಾ ಆಚರಿಸಿದ್ರೆ ನಮಗೂ ಸಂತೋಷ: ಯದುವೀರ್

    ದೇವಸ್ಥಾನ ಕಟ್ಟೋದು ಶೂದ್ರರು. ದೇವಸ್ಥಾನದ ಒಳಗೆ ಇರೋರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ. ನಾವು ಶೂದ್ರರಲ್ಲಾ ಎಂದು ಹೇಳಬೇಕು. ಶೂದ್ರರು ದೇವಸ್ಥಾನಗಳಿಗೆ ಹೋಗೋದನ್ನು ನಿಲ್ಲಸಬೇಕು. ನಾನು 50 ವರ್ಷ ಆಯ್ತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದ್ರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡ್ತಾರೆ ಅಷ್ಟೇ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.

    ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದು ನಂಬಿ ಅಂತಾ ಬುದ್ಧ ಹೇಳಲ್ಲ. ನಾನು ಹೇಳಿದ್ದು ಕೇಳಬೇಕು ಅಂತಾ ಏಸು ಹೇಳ್ತಾರೆ. ನಾನು ಹೇಳದ್ದು ಕೇಳದಿದ್ರೆ ನರಕ್ಕೆ ಹೋಗ್ತೀರಾ ಅಂತಾ ಕೃಷ್ಣ ಹೇಳ್ತಾನೆ. ನಾವು ಬುದ್ಧ ಧರ್ಮಕ್ಕೆ ಹೋಗಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು. ಯಾರು ಹೀನನಾಗಿದ್ದಾನೆ ಅವನು ಹಿಂದೂ. ಹಿಂದೂ ಎಂದರೆ ಹೀನಾ ಎಂದು ಅರ್ಥ. ಯಾರು ಹಿಂದೂ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

  • ಮಹಿಷಾ ದಸರಾ ಹಿಂದೂ ಸಂಸ್ಕೃತಿಗೆ ಅಪಮಾನಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ

    ಮಹಿಷಾ ದಸರಾ ಹಿಂದೂ ಸಂಸ್ಕೃತಿಗೆ ಅಪಮಾನಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ

    ಯಾದಗಿರಿ: ಮಹಿಷಾ ದಸರಾ (Mahisha Dasara) ಆಚರಣೆ ಭಾರತೀಯ ಹಾಗೂ ಹಿಂದೂ ಸಂಸ್ಕೃತಿಗೆ ಅಪಮಾನ ಮಾಡಲು ಷಡ್ಯಂತ್ರ ಮಾಡುವ ಹುನ್ನಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಿಡಿಕಾರಿದ್ದಾರೆ.

    ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸಂಸ್ಕೃತಿಯನ್ನು ಅವಮಾನಿಸಲು ಕೆಲವು ಸಂಘಟನೆಗಳು ಹುಟ್ಟಿಕೊಂಡಿವೆ. ಮೈಸೂರು (Mysuru) ನಾಡ ದೇವತೆ ಚಾಮುಂಡಿಯ ಪವಿತ್ರ ಸ್ಥಳ. ಹಿಂದೆ ಮಹಾರಾಜರ ಕಾಲದಲ್ಲಿ ಚಾಮುಂಡಿಯ ಆಶೀರ್ವಾದ ಪಡೆದು ದಸರಾ ಉತ್ಸವ ಆಚರಣೆ ಮಾಡುತ್ತಿದ್ದರು. ಅದೇ ಪರಂಪರೆಯನ್ನು ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಆಚರಣೆ ಮಾಡಿಕೊಂಡು ಬಂದಿವೆ. ಈಗ ಪಕ್ಷದ ವತಿಯಿಂದ ಯಾವುದು ನಡೆಯುತ್ತಿಲ್ಲ. ಸರ್ಕಾರದ ವತಿಯಿಂದ ನಡೆಯುತ್ತಿರುವುದು. ದಸರಾ ಉತ್ಸವವನ್ನು ಸಿಎಂ ಉದ್ಘಾಟನೆ ಮಾಡುತ್ತಾರೆ. ಇದಕ್ಕೆ ಸರ್ಕಾರ ಹಣ ನೀಡುತ್ತದೆ. ಇಂತಹ ಉತ್ಸವವನ್ನು ವಿಕೃತಿಯಾಗಿ ತೋರಿಸಲು ವ್ಯವಸ್ಥಿತ ವ್ಯಕ್ತಿಗಳು ಹಾಗೂ ಸಂಘಟನೆಗಳು ದೇಶದಾದ್ಯಂತ ಕೆಲಸ ಮಾಡುತ್ತಿವೆ. ಅದರಲ್ಲಿ ಮೈಸೂರಿನ ಮಹಿಷಾಸುರ ಉತ್ಸವವೂ ಒಂದಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮುರುಡೇಶ್ವರದ ಕಡಲಲ್ಲಿ ಅಲೆಗಳಿಗೆ ಸಿಲುಕಿದ್ದ ಮೂವರ ರಕ್ಷಣೆ

    ಮಹಿಷಾಸುರ ಉತ್ಸವಕ್ಕೆ ಯಾವ ರೀತಿ ಅನುಮತಿ ಕೊಟ್ಟಿದ್ದೀರಿ? ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಯಾವುದೇ ರೀತಿಯ ಬಿಗಿ ಕ್ರಮ ಇಲ್ಲದಂತಾಗಿದೆ. ಶಿವಮೊಗ್ಗದ ಘಟನೆಯನ್ನು ಉಲ್ಲೇಖಿಸಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಯಾರನ್ನು ವೈಭವಿಕರಿಸಿದ್ದರು? ಅಲ್ಲಿ ವೈಭವಿಕರಿಸಿದ್ದು ಔರಂಗಜೇಬ್ ಹಾಗೂ ಆತನ ಕತ್ತಿಯನ್ನು. ಹಿಂದೂಗಳ ರಕ್ತ ತೆಗೆದುಕೊಳ್ಳುತ್ತದೆ ಎಂಬ ಆ ಕತ್ತಿಯನ್ನು ಹಾಗೂ ಟಿಪ್ಪುವನ್ನು ವೈಭವಿಕರಿಸಿದ್ದರು. ಗಲಾಟೆಯಾದ ಸಂದರ್ಭದಲ್ಲಿ ಹಿಂದೂ ಹೆಣ್ಣುಮಕ್ಕಳ ಎದೆಗೆ ಕೈಹಾಕಿದ್ದರು. ಹೆಣ್ಣುಮಕ್ಕಳು ಕಣ್ಣೀರು ಹಾಕಿದ್ದರು. ಹಿಂದೂ ಹೆಣ್ಣು ಮಕ್ಕಳ ಮನೆ ಪುಡಿ ಮಾಡಿದ್ದರು. ಇದನ್ನು ಹೇಳಿಕೊಳ್ಳಲಾಗದೇ ಹೆಣ್ಣು ಮಕ್ಕಳು ಕಣ್ಣೀರು ಹಾಕಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಕೊಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ

    ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ

    ಮೈಸೂರು: ಮಹಿಷಾ ದಸರಾ (Mahisha Dasara) ಆಚರಣೆ ವಿಚಾರವಾಗಿ ಪರ ವಿರೋಧಗಳು ವ್ಯಕ್ತವಾಗುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೈಸೂರು (Mysuru) ನಗರ ಪೊಲೀಸ್ ಆಯುಕ್ತರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

    ಚಾಮುಂಡಿ ಬೆಟ್ಟ (Chamundi Hill) ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಪೊಲೀಸ್ ಕಮೀಷನರ್ ರಮೇಶ್.ಬಿ ಆದೇಶಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಅ.12ರಂದು ಮಧ್ಯರಾತ್ರಿ 12 ಗಂಟೆಯಿಂದ ಅ.14ರ ಬೆಳಗ್ಗೆ 06 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆ ಯಾವುದೇ ಸಭೆ-ಸಮಾರಂಭ, ರ‍್ಯಾಲಿ ನಡೆಸುವುದನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಭಾಷಣದ ವೇಳೆ Emergency Alert Message- ಬಿಜೆಪಿಯವ್ರೂ ಅಲರ್ಟ್ ಆಗ್ಲಿ ಅಂತಾ ನಕ್ಕ ಡಿಕೆಶಿ

    ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ‍್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ. ಇದನ್ನೂ ಓದಿ: ನಗರಸಭೆ ಕಚೇರಿಯಲ್ಲೇ ಕೈ ಕೈ ಮಿಲಾಯಿಸಿದ ಸದಸ್ಯರು

    ಯಾವುದೆಲ್ಲಾ ನಿಷೇಧ?
    1) ಯಾವುದೇ ಮೆರವಣಿಗೆ, ಪ್ರತಿಭಟನೆ, ಬೈಕ್ ರ‍್ಯಾಲಿ  ನಡೆಸುವುದು.
    2) ಪರ ವಿರೋಧ ಘೋಷಣೆ ಕೂಗುವುದು.
    3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು.
    4) 5 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು.
    5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು.
    6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ಧ್ವನಿವರ್ಧಕ ಬಳಸುವುದು, ಫ್ಲೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದು. ಇದನ್ನೂ ಓದಿ: ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ

    ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ

    ಮೈಸೂರು: ಮಹಿಷಾ ದಸರಾ (Mahisha Dasara) ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ.

    ಫೇಸ್ ಬುಕ್ ಲೈವ್‌ನಲ್ಲಿ ಮಹಿಷಾ ದಸರಾ ಆಚರಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ, ಬೆಟ್ಟಕ್ಕೆ ಬಂದು ಮಹಿಷಾ ಒಳ್ಳೆಯವನು ಅಂದಷ್ಟೇ ಹೇಳಿ ಹೋಗುವುದಿಲ್ಲ. ಚಾಮುಂಡಿಗೆ ರವಿಕೆ ಹಾಕೋನು ಗಂಡಸು, ಸೀರೆ ಉಡಿಸೋನು ಗಂಡಸು ಅಂತ ಕೆಟ್ಟದಾಗಿ ಮಾತನಾಡುತ್ತಾರೆ. ನಿಮ್ಮ ತಾಯಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಯಾರಾದರೂ ಒಪ್ಪಿಕೊಳ್ಳುತ್ತೀರಾ? ಮಹಿಷಾನನ್ನು ಒಳ್ಳೆಯವನನ್ನಾಗಿ ಮಾಡಲು ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಇಂತಹವರನ್ನು ತಡೆಯಲು ನಾನು ವಿರೋಧ ಮಾಡುತ್ತಿದ್ದೇನೆ ಎಂದರು.

    ಚಾಮುಂಡೇಶ್ವರಿಗೆ ಹೋಗಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾಕ್ಕೆ ವಿರೋಧ ಮಾಡಬೇಕು. ಇಲ್ಲದಿದ್ದರೆ ತಾಯಿ ಚಾಮುಂಡಿ ಮುಂದೆ ಬೇಡಿಕೊಳ್ಳಲು ನಿಮಗೆ ಯಾವ ನೈತಿಕ ಹಕ್ಕು ಇರುವುದಿಲ್ಲ. ನನ್ನ ದಲಿತ ವಿರೋಧಿ ಅಂತ ಹೇಳುತ್ತಾರೆ. ವಿಚಾರ ಇಲ್ಲದಾಗ ಈ ರೀತಿ ಉಗುಳುತ್ತಾರೆ. ಮಹಿಷಾನ ಬಗ್ಗೆ ಯಾವುದೇ ದಾಖಲೆ ಇಲ್ಲ. ಈಗ ದಲಿತ ಅಂತ ಬೋರ್ಡ್ ಹಾಕಿಕೊಂಡು ಓಡಾಡುತ್ತಿರೋರು ಯಾರು ಅಂತಾನು ಮೈಸೂರಿಗರಿಗೆ ಗೊತ್ತು ಎಂದು ಗುಡುಗಿದರು. ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಂಡ ವಿದ್ಯುತ್ ಅಭಾವ- ಸರ್ಕಾರದಿಂದ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್

    ಅಶೋಕ್ ಪುರಂನ ಪ್ರತಿಯೊಬ್ಬರ ಮನೆಯಲ್ಲಿರೋದು ಚಾಮುಂಡೇಶ್ವರಿ ಪೋಟೋ. ಮಹಿಷಾನ ಪೋಟೋ ಅಲ್ಲ. ದಲಿತರೆ ಚಾಮುಂಡಿ ಹಬ್ಬವನ್ನು ಜಾಸ್ತಿ ಮಾಡೋದು. ಈಗ ರಾಜಕೀಯಕ್ಕೆ ದಲಿತ ವಿರೋಧಿ ಅನ್ನುತ್ತಾರೆ. ಮಹಿಷಾ ಯಾವಾಗ ದಲಿತನಾದ? ಮಹಿಷಾ ಬೌದ್ಧ ಬಿಕ್ಕು ಆಗಿದ್ದ ಅಂತ ಹೇಳುತ್ತಾರೆ. ತಾಯಿ ಚಾಮುಂಡಿ ಉಲ್ಲೇಖ ಬರೋದು ಕೃತ ಯುಗದಲ್ಲಿ. ಬುದ್ಧ ಬಂದಿದ್ದು ಕಲಿಯುಗದಲ್ಲಿ. ಅಶೋಕ ಇದ್ದಿದ್ದು ಕ್ರಿ.ಪೂ. 3 ನೇ ಶತಮಾನದಲ್ಲಿ. ಇವರು ಹೇಳುವ ವಿಚಾರ ಸಮಯಕ್ಕೆ ತಾಳ ಮೇಳ ಇಲ್ಲ. ಇದೆಲ್ಲ ಕಪೋಲ ಕಲ್ಪಿತ ವಿಚಾರಗಳು ಎಂದರು.

    ಹಿಂದೂ ಧರ್ಮ ಒಡೆಯುವ ಪ್ರಯತ್ನಕ್ಕೆ ಇದೆಲ್ಲ ಮಾಡುತ್ತಿದ್ದಾರೆ. ಕೆಲವರು ನನ್ನ ಬಗ್ಗೆ ವಿರೋಧ ಮಾಡುತ್ತಿದ್ದಾರೆ. ಇದೆಲ್ಲ ವೈಯಕ್ತಿಕ ಲಾಭ ನಷ್ಟದಿಂದ ಆಗಿರೋದು. ನಿಜವಾದ ದಲಿತ ವಿರೋಧಿಗಳು ನೀವುಗಳು. ಲಲಿತ ನಾಯಕರಿಂದ ಉದ್ಘಾಟನೆ ಮಾಡಿಸಲು ಮುಂದಾದ್ರಿ. ಆಕೆಯ ಪುತ್ರ ಅಂಬೇಡ್ಕರ್ ಪುತ್ಥಳಿಗೆ ಮದ್ಯ ಕುಡಿಸಿದ್ದ. ನೀವು ಅಂಬೇಡ್ಕರ್ ವಾದಿಗಳು ಅಂತೀರಾ. ಆದರೆ ಅಂಬೇಡ್ಕರ್ ಪುತ್ಥಳಿಗೆ ಹೆಂಡ ಕುಡಿಸಿದ ತಾಯಿಯಿಂದ ಉದ್ಘಾಟನೆ ಮಾಡಿಸುತ್ತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: Breaking: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 15 ಕಡೆ IT ದಾಳಿ

    ಸುಮ್ಮನೆ ನನ್ನ ದಲಿತ ವಿರೋಧಿ ಅಂತ ಹೇಳೋದು ಬೇಡ. ಮೈಸೂರಿಗರ ಬಳಿ ಹೋರಾಟದ ಗುಣ ಇಲ್ಲ ಅಂತ ಅಂದುಕೊಳ್ಳಬೇಡಿ. ನಿಮ್ಮ ಮನೆಯಲ್ಲಿ ನಿಮ್ಮ ಹೆಂಡತಿ ಮಹಿಷಾ ಪೋಟೋ ಇಟ್ಟುಕೊಳ್ಳೊಕೆ ಬಿಡ್ತಾರ? ನಿಮ್ಮ ಮನೆಯಲ್ಲೇ ಬೇಕಾದರೆ ಮಹಿಷಾ ದಸರಾ ಮಾಡಿಕೊಳ್ಳಿ. ಬೆಟ್ಟಕ್ಕೆ ಹೋಗಿ ಚಾಮುಂಡಿಗೆ ಅಪಮಾನ ಮಾಡಬೇಕು ಅಂತ ನೀವು ಅಲ್ಲಿ ಹೋಗೋದು. ಕೆಲವರಿಗೆ ಅರ್ಥವಾಗಬೇಕು ಅಂತ ನಿಮ್ಮ ಭಾಷೆಯಲ್ಲಿ ಹೇಳಿರೋದು. ಇಂತಹವರನ್ನು ವಿರೋಧಿಸದಿದ್ದರೆ ಮುಂದೆ ಇಸ್ರೇಲ್ ಪರಿಸ್ಥಿತಿ ನಿರ್ಮಾಣ ವಾಗುತ್ತೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧಾರ್ಮಿಕ ಜಿಲ್ಲೆ ಉಡುಪಿಯಲ್ಲಿ ಮಹಿಷಾ ದಸರಾ ಯಾಕೆ?: ಶೋಭಾ ಕರಂದ್ಲಾಜೆ

    ಧಾರ್ಮಿಕ ಜಿಲ್ಲೆ ಉಡುಪಿಯಲ್ಲಿ ಮಹಿಷಾ ದಸರಾ ಯಾಕೆ?: ಶೋಭಾ ಕರಂದ್ಲಾಜೆ

    ಉಡುಪಿ: ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ (Shobha karandlaje) ಹೇಳಿದ್ದಾರೆ.

    ಉಡುಪಿಯಲ್ಲಿ (Udupi) ಮಾತನಾಡಿದ ಅವರು, ನಮ್ಮ ನಂಬಿಕೆ ನಮ್ಮದು ದೇಶದಲ್ಲಿ ಎಲ್ಲರಿಗೂ ಅವಕಾಶ ಇದೆ. ಆಸ್ತಿಕರಿಗೂ ನಾಸ್ತಿಕರಿಗೂ ನಮ್ಮ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಹುದು. ವಿಕೃತವಾದ ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗಯತ್ತದೆ ಎಂದರು. ಯಾವ ಆಧಾರದಲ್ಲಿ ಮಹಿಷಾ ದಸರಾ ಆಚರಣೆ ಮಾಡುತ್ತೀರಿ ಗೊತ್ತಿಲ್ಲ, ಇದರ ಹಿಂದೆ ಇರುವ ಶಕ್ತಿ ಯಾವುದು ಗೊತ್ತಿಲ್ಲ.. ಆದರೆ ಉಡುಪಿ ಎಂಬ ಧಾರ್ಮಿಕ ಜಿಲ್ಲೆಯಲ್ಲಿ ಮಹಿಷಾ ದಸರ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಾಲಿಗೆ ಬಿದ್ದ ಶಾಸಕ ಮುನಿರತ್ನ

    ಶ್ರೀ ಕೃಷ್ಣ, ಮಹಾಕಾಳಿ -ಕೊಲ್ಲೂರು ಮೂಕಾಂಬಿಕೆ ಇರುವ ನಾಡು ಉಡುಪಿ. ನಿಮ್ಮ ಮಾನಸಿಕತೆಯನ್ನು ಜಿಲ್ಲೆಯ ಜನ ಅರ್ಥ ಮಾಡಿಕೊಳ್ಳುತ್ತಾರೆ. ನಿಮ್ಮ ವಿಕೃತಿಯನ್ನು ನಿಲ್ಲಿಸಿ ಆಸ್ತಿಕರ ನಂಬಿಕೆಗೆ ಬೆಲೆಕೊಡಿ. ದೇವಿ ದುಷ್ಟರನ್ನು ರಾಕ್ಷಸರನ್ನು ಸಂಹಾರ ಮಾಡಿದವಳು ಎಂಬ ನಂಬಿಕೆಯಿದೆ. ದುಷ್ಟರ ಸಂಹಾರ ಮಾಡಲು ನಿಮಗೆ ಏನು ಸಮಸ್ಯೆ ಆಗಿದೆ ನನಗೆ ಅರ್ಥವಾಗುತ್ತಿಲ್ಲ. ಮಹಿಷಾ ದಸರ ಮಾಡುವವರು ಮರು ಚಿಂತನೆ ಮಾಡಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ – 5 ಸಾವಿರ ಮಂದಿ ಭಾಗಿ

    ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ – 5 ಸಾವಿರ ಮಂದಿ ಭಾಗಿ

    ಮೈಸೂರು: ಮಹಿಷಾ ದಸರಾ (Mahisha Dasara) ಒಂದು ರೀತಿ ಅಸಹ್ಯ, ಅನಾಚಾರ. ಮಹಿಷಾ ದಸರಾ ಮೂಲಕ ದೆವ್ವವನ್ನು ದೇವರು ಮಾಡಲು ಹೊರಟ್ಟಿದ್ದಾರೆ. ಮಹಿಷಾ ದಸರಾ ಆಸ್ತಿಕರ ಭಾವನೆಗೆ ನೋವು ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದ್ದಾರೆ.

    ನಾಡಹಬ್ಬದ ಹಿನ್ನೆಲೆ ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿ (Chamundi Hill) ಮಹಿಷಾಸುರನ ಪ್ರತಿಮೆ ಮುಂದೆ ಮಹಿಷಾ ದಸರಾ ಆಯೋಜನೆ ಮಾಡಲಾಗಿದೆ. ಇದಕ್ಕೆ ತಿರುಗೇಟಾಗಿ ಬಿಜೆಪಿ ಚಲೋ ಚಾಮುಂಡಿ ಬೆಟ್ಟ ಜಾಥಾ ಹಮ್ಮಿಕೊಂಡಿದೆ. ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ.

    ಮಹಿಷಾ ದಸರಾ ವಿರೋಧಿಸಿ ಮಾತನಾಡಿರುವ ಪ್ರತಾಪ್ ಸಿಂಹ, ಬಿಜೆಪಿ (BJP) ಸರ್ಕಾರದಲ್ಲಿ ಮಹಿಷಾ ದಸರಾ ಎಂಬ ಅಸಹ್ಯವನ್ನು ನಿಲ್ಲಿಸಿದ್ದೆವು. ಈಗ ಸಿದ್ದರಾಮಯ್ಯ ಸರ್ಕಾರ ಮತ್ತೆ ಮಹಿಷಾ ದಸರಾ ಮಾಡಲು ಹೊರಟಿದೆ. ಅಕ್ಟೋಬರ್ 13 ರಂದು ಚಲೋ ಚಾಮುಂಡಿ ಬೆಟ್ಟ ಮಾಡುತ್ತೇವೆ. ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಆರಂಭವಾಗುತ್ತದೆ. ಕನಿಷ್ಠ 5,000 ಜನ ಈ ಜಾಥಾದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಈದ್‌ ಮಿಲಾದ್‌ ಹಬ್ಬಕ್ಕೆ 5 ಕೋಟಿ ಸಂಗ್ರಹ – ಫಂಡಿಂಗ್‌ ಮಾಡಿದವರ ಹಿಂದೆ ಬಿದ್ದ ಖಾಕಿ

    ಇದು ಬಿಜೆಪಿ ಕಾರ್ಯಕ್ರಮವಲ್ಲ. ಇದು ಮೈಸೂರಿನ ಜನರ ಜಾಥಾ. ಅಕ್ಟೋಬರ್ 13 ರಂದು ಮಹಿಷಾ ದಸರಾ ತಡೆಯುವುದೇ ನಮ್ಮ ಜಾಥಾದ ಉದ್ದೇಶ. ಇದು ಪಕ್ಷಾತೀತ ಹೋರಾಟ. ನಾವು ಸಂಘರ್ಷಕ್ಕೂ ಸಿದ್ಧರಿದ್ದೇವೆ. ಅಕ್ಟೋಬರ್ 13 ರಂದು ಚಾಮುಂಡಿಗೆ ಅವಮಾನ ಮಾಡಿ, ಅಕ್ಟೋಬರ್ 15 ರಂದು ಚಾಮುಂಡಿ ತಾಯಿಗೆ ಪೂಜೆ ಮಾಡಿದರೆ ಅದು ಅನೈತಿಕ ಕೆಲಸ. ಮಹಿಷಾ ದಸರಾ ಎಂಬ ಅನಾಚಾರ ನಡೆಯಕೂಡದು ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. ಇದನ್ನೂ ಓದಿ: 34 ದಿನಗಳ ಬಳಿಕ 100 ಅಡಿಯ ಗಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]