Tag: ಮಾಂಜರಿ ಸೇತುವೆ

  • ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ ಕಿಡಿ

    ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ ಕಿಡಿ

    ಚಿಕ್ಕೋಡಿ: ಕಾಂಗ್ರೆಸ್ ಪಕ್ಷದವರು ಎಂದೂ ಸತ್ಯ ಹೇಳುವುದಿಲ್ಲ. ಅವರು ಸತ್ಯ ಮಾತನಾಡಿದ ದಿನ ಅವರಿಗೆ ಸಾವು ಬರುತ್ತದೆ ಎಂದು ಸಚಿವ ಗೋವಿಂದ ಕಾರಜೋಳ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಚಿಕ್ಕೋಡಿಯಲ್ಲಿ ಪ್ರವಾಹ ಕುರಿತು ಅಧಿಕಾರಿಗಳೊಂದಿಗೆ ಮುಂಜಾಗೃತಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಬಾಂಬ್ ಹಾರಿಸಿ ಪಾಕಿಸ್ತಾನ ಹೆಸರು ಹೇಳುತ್ತಾರೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಸಿದ್ದರಾಮಯ್ಯ ಅವರು 7 ಕೆಜಿ ಅಕ್ಕಿ ನೀಡಿದ್ದಾರೆ. ಆದರೆ ನರೇಂದ್ರ ಮೋದಿ ಅವರು 10 ಕೆಜಿ ಅಕ್ಕಿ ನೀಡಿದರೂ ಪ್ರಚಾರ ಪಡೆದಿಲ್ಲ. ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಬೊಮ್ಮಾಯಿ ಅಲ್ಲ, ಮೋದಿ ನಿತ್ಕೊಂಡ್ರು ನಾನು ಸ್ಪರ್ಧೆ ಮಾಡ್ತೀನಿ: ಮಲ್ಲಿಕಾರ್ಜುನ್ 

    ಇತ್ತೀಚಿನ ಮಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ಹಾಗೂ ಮನೆಹಾನಿ ಬಗ್ಗೆ ನಿಖರವಾಗಿ ಸಮೀಕ್ಷೆ ನಡೆಸಿ ತಕ್ಷಣವೇ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು. ಇತ್ತೀಚಿನ ಮಳೆಯಿಂದ 877 ಹೆಕ್ಟೇರ್ ಪ್ರದೇಶ ಜಲಾವೃತ ಹೊಂದಿರುವುದರಿಂದ ನೀರು ಸರಿದ ಬಳಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಸೂಚಿಸಿದರು.

    ಹಾನಿಗೊಳಗಾಗಿರುವ ಒಟ್ಟಾರೆ 775 ಮನೆಗಳಿಗೂ ಕೂಡ ಮಾರ್ಗಸೂಚಿ ಪ್ರಕಾರ ತಕ್ಷಣವೇ ಪರಿಹಾರವನ್ನು ನೀಡಬೇಕು. ನೋಡಲ್ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಯಾವುದೇ ಅಧಿಕಾರಿಗಳಿಗೂ ರಜೆ ನೀಡಬಾರದು ಎಂದು ತಿಳಿಸಿದರು.

    ಯಾವುದೇ ಪ್ರವಾಹದ ಆತಂಕವಿಲ್ಲ. ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದೇನೆ. ಸಂಭವನೀಯ ಪ್ರವಾಹ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಭರಚುಕ್ಕಿಯಲ್ಲಿ ಪ್ರವಾಸಿಗರ ಹುಚ್ಚಾಟ – ಸಾವಿನ ದವಡೆಯಲ್ಲಿ ಮೋಜು-ಮಸ್ತಿ 

    ಬಳಿಕ ಮಾಂಜರಿ ಸೇತುವೆಗೆ ತೆರಳಿ ಕೃಷ್ಣಾ ನದಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.

    Live Tv
    [brid partner=56869869 player=32851 video=960834 autoplay=true]