Tag: ಮಾಂಸ ಮಾರಾಟ

  • ಏ.10 ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ನಿಷೇಧ

    ಏ.10 ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ನಿಷೇಧ

    ಬೆಂಗಳೂರು: ಇದೇ ಏಪ್ರಿಲ್‌ 10ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

    ಅಂದು ʻಮಹಾವೀರ ಜಯಂತಿʼ (MahavirJ ayanti) ಇರುವ ಕಾರಣ ಕಸಾಯಿಖಾನೆಯಲ್ಲಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ (Meat Sale) ನಿಷೇಧಿಸಿ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 2024ರಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಿಂದ ಹೊಸ ಮೈಲಿಗಲ್ಲು – 41 ದಶಲಕ್ಷ ಮಂದಿ ಪ್ರಯಾಣ

    ಏಪ್ರಿಲ್‌ 10ರಂದು ಮಹಾವೀರ ಜಯಂತಿ
    ಜೈನ ಧರ್ಮದ ಅನುಯಾಯಿಗಳಿಗೆ ಮಹಾವೀರ ಜಯಂತಿ ಬಹಳ ವಿಶೇಷವಾದ ಹಬ್ಬ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲಪಕ್ಷದ ತ್ರಯೋದಶಿ ದಿನದಂದು ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಏ.10 ರಂದು ಆಚರಣೆ ಮಾಡಲಾಗುತ್ತದೆ. ಆಚರಣೆ ಹೇಗೆ? ಆಚರಣೆಯ ಮಹತ್ವ ಏನು ಎಂಬುದರ ಬಗ್ಗೆ ಇಲ್ಲಿ ವಿವರಿಸಲಾಗಿದೆ.  ಇದನ್ನೂ ಓದಿ: ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಮರುಜೀವ ನೀಡುವಂತೆ ಡಾ. ಮಂಜುನಾಥ್ ಮನವಿಗೆ ಸ್ಮಂದಿಸಿದ ಕೇಂದ್ರ

    ಹಿಂದೂ ಕ್ಯಾಲೆಂಡರ್ ಪ್ರಕಾರ, ಮಹಾವೀರ ಸ್ವಾಮಿಯು ಕ್ರಿ.ಪೂ 599 ರಲ್ಲಿ ಚೈತ್ರ ಮಾಸದ 13ನೇ ದಿನ ಬಿಹಾರದ ಕುಂದಾಗ್ರಾಮದಲ್ಲಿ ರಾಜಮನೆತನದಲ್ಲಿ ಜನಿಸಿದರು ಎಂದು ಹೇಳಲಾಗುತ್ತದೆ. ಅವರ ಬಾಲ್ಯದ ಹೆಸರು ವರ್ಧಮಾನ್. ಅವರು 30ನೇ ವಯಸ್ಸಿನಲ್ಲಿ, ಸಿಂಹಾಸನವನ್ನು ತ್ಯಜಿಸಿ ಆಧ್ಯಾತ್ಮಿಕತೆಯ ಮಾರ್ಗವನ್ನು ಆರಿಸಿಕೊಂಡರು. ಇನ್ನೂ ಮಹಾವೀರ ಜಯಂತಿಯನ್ನು ಭಾರತದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ಇರುವ ಜೈನ ಸಮುದಾಯವರು ಆಚರಿಸುತ್ತಾರೆ.  ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಸ್ಫೋಟಕ ಶತಕ – ಎಬಿಡಿ, ಕೊಹ್ಲಿ ದಾಖಲೆ ಪುಡಿಗಟ್ಟಿದ 24ರ ಯುವಕ

  • ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ

    ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ

    – ಮಾಂಸ ಮಾರಾಟಕ್ಕೆ ಅವಕಾಶ ಕೋರಿ ಸಿಎಂಗೆ ಸಂಘಟನೆಗಳ ಮನವಿ

    ಬೆಂಗಳೂರು: ಈ ಬಾರಿ ಪಿತೃಪಕ್ಷ (Pitrupaksha) ಮಾಡಿ ಎಡೆ ಇಡುವವರಿಗೆ ಧರ್ಮ ಸಂಕಟ ಎದುರಾಗಿದೆ. ಗಾಂಧಿ ಜಯಂತಿ (Gandhi Jayanthi) ಮತ್ತು ಮಹಾಲಯ ಅಮಾವಾಸ್ಯೆ (Mahalaya Amavasya) ಒಂದೇ ದಿನ ಬಂದಿದೆ. ಗಾಂಧಿಜಯಂತಿ ದಿನ ಮಾಂಸ ಮಾರಾಟ (Meat Sale) ನಿಷೇಧ ಇರಲಿದೆ. ಹೀಗಾಗಿ ಮಹಾಲಯ ಅಮಾವಾಸ್ಯೆ ಇರುವುದರಿಂದ ಪಿತೃಪಕ್ಷ ಮಾಡೋರಿಗೆ ಮಾಂಸದ ಕೊರತೆ ಎದುರಾಗಲಿದೆ.

    ಮಾಂಸ ಮಾರಾಟ ನಿಷೇಧ ಮಾಡಿದರೆ ಮಾಂಸ ಸಿಗಲ್ಲ. ಅದಕ್ಕಾಗಿ ಗಾಂಧಿ ಜಯಂತಿ ದಿನ ಮಾಂಸ ಮಾರಾಟಕ್ಕೆ ಅವಕಾಶ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಘಟನೆಗಳು, ಸಮಿತಿಗಳು ಮನವಿ ಮಾಡಿಕೊಂಡಿದೆ. ಈ ಸಂಬಂಧ ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ವಿ.ವಿ ಸತ್ಯನಾರಾಯಣ ಹಾಗೂ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕಯ ಅಧ್ಯಕ್ಷ ಬಿ.ಎಂ ಶಿವಕುಮಾರ್ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ಕಾಕತಾಳಿಯವಾಗಿ ಒಂದೇ ದಿನ ಎರಡು ಆಚರಣೆ ಬಂದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಪಿತೃಪಕ್ಷ ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಪತ್ರ ಸಲ್ಲಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪಟಾಕಿ ಬ್ಯಾನ್‌ ಯಾಕೆ?

    ಹಳ್ಳಿಗಳ ಕಡೆ ಏನಾಗಲಿದೆಯೋ ಗೊತ್ತಿಲ್ಲ. ಹಲವು ಮಂದಿ ಮಾಂಸಾಹಾರವನ್ನು ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಇಟ್ಟು ಪೂಜೆ ಸಲ್ಲಿಸುತ್ತಾರೆ. ಈ ಹಿನ್ನೆಲೆ ಬೆಂಗಳೂರಿನಂತಹ ಸಿಟಿಗಳಲ್ಲಿ ಮಾಂಸ ಮಾರಾಟ ನಿಷೇಧ ಆದರೆ ಸಮಸ್ಯೆ ಆಗುತ್ತೆ. ತಲಾತಲಾಂತರದಿಂದ ಪಿತೃಪಕ್ಷದ ದಿನ ಎಡೆ ಇಟ್ಟುಕೊಂಡು ಬರುತ್ತಿದ್ದೇವೆ. ಈ ಬಾರಿಯು ಸಂಪ್ರದಾಯ ಪಾಲಿಸಬೇಕು. ಮಾಂಸ ಮಾರಾಟಕ್ಕೆ ಅವಕಾಶ ಕೊಡಿ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಕ್ರಮ ಮದ್ಯ ನಾಶದ ವೇಳೆ ಬಾಟಲಿ ದೋಚಿ ಓಡಿದ್ರು!

  • ಗಣೇಶ ಚತುರ್ಥಿ – ಆ.31ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

    ಗಣೇಶ ಚತುರ್ಥಿ – ಆ.31ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

    ಬೆಂಗಳೂರು: ಕೊರೊನಾ ನಂತರ ಮೊದಲ ಬಾರಿಗೆ ಗಣೇಶ ಹಬ್ಬವನ್ನು ಆಚರಿಸಲು ಜನ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ.

    BBMP

    ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ.ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪಶುಪಾಲನೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, 2022ರ ಆಗಸ್ಟ್ 31ರ ಬುಧವಾರದಂದು ‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಠಕ್ಕೆ ಮುರುಘಾ ಶ್ರೀಗಳು ವಾಪಸ್- ಶಾಂತಿ, ಸಹನೆಯಿಂದ ಇರುವಂತೆ ಮನವಿ

    ಈ ಮುನ್ನ ಈ ತಿಂಗಳ ಆರಂಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ನಾಗರಿಕ ಸಂಸ್ಥೆ ಸುತ್ತೋಲೆ ಹೊರಡಿಸಿತ್ತು. ಇದನ್ನೂ ಓದಿ: ಟ್ರೂ ಕಾಲರ್ ವಿರುದ್ಧ ಅರ್ಜಿ – ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್

    Live Tv
    [brid partner=56869869 player=32851 video=960834 autoplay=true]

  • ಭಾನುವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

    ಭಾನುವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

    ಬೆಂಗಳೂರು: ರಾಮನವಮಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು (ಭಾನುವಾರ) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

    ಮಾಂಸ ಮಾರಾಟ ನಿಷೇಧ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದ್ದು, ಹಿಂದೂ ಧಾರ್ಮಿಕ ಹಬ್ಬ ರಾಮನವಮಿ ಏಪ್ರಿಲ್ 10ರಂದು ಬಂದಿದೆ. ಭಾನುವಾರ ರಾಮನವಮಿ ಹಬ್ಬದ ಆಚರಣೆ ಹಿನ್ನೆಲೆ ಈ ಆದೇಶವನ್ನು ಬಿಬಿಎಂಪಿ ಜಾರಿಗೆ ತಂದಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ, ಯಾವುದೇ ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

    ಶ್ರೀರಾಮನವಮಿಯಂದು ಪ್ರಾಣಿ, ವಧೆ ಮತ್ತು ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಕಸಾಯಿಖಾನೆಯಲ್ಲೂ ಪಾಣಿವಧೆ, ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಈ ನಿಯಮಗಳ ವಿರುದ್ಧ ಬಿಬಿಎಂಪಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಜಂಟಿ ನಿರ್ದೇಶಕ ಪಶುಪಾಲನಾ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.

  • ಕೋವಿಡ್ ಭೀತಿ ಮರೆತು ಕೋಟೆನಾಡಲ್ಲಿ ಮಟನ್ ಖರೀದಿಸಲು ಮುಗಿಬಿದ್ದ ಮಾಂಸ ಪ್ರಿಯರು

    ಕೋವಿಡ್ ಭೀತಿ ಮರೆತು ಕೋಟೆನಾಡಲ್ಲಿ ಮಟನ್ ಖರೀದಿಸಲು ಮುಗಿಬಿದ್ದ ಮಾಂಸ ಪ್ರಿಯರು

    ಚಿತ್ರದುರ್ಗ: ಶ್ರಾವಣ ಮಾಸದ ಬಳಿಕ ಮೊದಲ ಭಾನುವಾರದ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಮಾಂಸದ ಅಂಗಡಿಗಳ ಮುಂದೆ ಜನಸಂದಣಿ ಜಮಾಯಿಸಿದೆ.

    ಕೋವಿಡ್ ಭೀತಿ ಮರೆತು ಮಾಂಸ ಖರೀದಿಸಲು ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ಸೇರಿದಂತೆ ವಿವಿಧ ಸ್ಥಳಗಳಲ್ಲಿರುವ ಮಾಂಸದಂಗಡಿಗಳ ಬಳಿ ಜನರು ಮುಗಿಬಿದ್ದಿದ್ದಾರೆ. ಚಿಕನ್ ಹಾಗೂ ಮಟನ್ ಖರೀದಿ ಭರಾಟೆಯಲ್ಲಿ ಮಾಸ್ಕ್ ಸರಿಯಾಗಿ ಧರಿಸದೇ ದೈಹಿಕ ಅಂತರ ಮರೆತು ಜನರು ಜಮಾಯಿಸಿದ್ದಾರೆ. ಇದನ್ನು ನೋಡಿದರೆ ಮತ್ತೆ ಕೋಟೆನಾಡಲ್ಲಿ ಕೊರೊನಾ ಹರಡುವುದೋ ಎಂಬ ಭೀತಿ ಶುರುವಾಗಿದೆ. ಇದನ್ನೂ ಓದಿ:  ಸೈಕ್ಲಿಂಗ್ ವೇಳೆ ಹೃದಯಾಘಾತ – ಸೈಕ್ಲಿಸ್ಟ್ ಸಾವು!

    ಸತತ ಒಂದು ತಿಂಗಳಿಂದ ಮಾಂಸಾಹಾರ ಸೇವಿಸದೇ ಶ್ರಾವಣ ಮಾಸದ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದ್ದ ಕೋಟೆನಾಡಿನ ಜನರು ಇಂದು ಬೆಳಿಗ್ಗೆಯಿಂದಲೇ ಮಾಂಸ ಖರೀದಿಸಲು ಮುಂದಾಗಿದ್ದರು. ನಾಟಿಪಟ್ಲಿ, ನಾಟಿಕೋಳಿ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿತ್ತು. ಕಳೆದ ತಿಂಗಳು ಕೇವಲ 450 ರೂ.ಗೆ ಸಿಗುತ್ತಿದ್ದ ಪಟ್ಲಿ ಮಾಂಸವು, 650ರಿಂದ 750 ರೂಪಾಯಿವರೆಗೆ ದರ ಏರಿಕೆಯಾಗಿದೆ. ಆದರೂ ಜನರು ಇದ್ಯಾವುದನ್ನೂ ಲೆಕ್ಕಿಸದೇ ಗಂಡುಕುರಿಯ ಮಾಂಸಕ್ಕಾಗಿ ಮುಗಿಬಿದ್ದಿದ್ದಾರೆ. ಇದನ್ನೂ ಓದಿ:  ಹದಗೆಟ್ಟ ರಸ್ತೆಯ ತಾತ್ಕಾಲಿಕ ದುರಸ್ತಿಗೆ ಗ್ರಾಮದ ಯುವಕರ ಶ್ರಮದಾನ

    ಮಾಂಸದ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಕೆಲವರು ಚಿಕನ್ ಮೊರೆ ಹೋಗುವುದು ಸಾಮಾನ್ಯವಾಗಿತ್ತು. ನಾಟಿ ಚಿಕನ್ ದರವೂ ಏರಿಕೆಯಾಗಿದ್ದು, ಅನಿವಾರ್ಯವಾಗಿ ಮಾಂಸಪ್ರಿಯರು ಚಿಕನ್ ಖರೀದಿಸಿದರು. ಮಾಂಸ ಮಾರಾಟದ ಸ್ಥಳಗಳು ಇಂದು ತರಕಾರಿ ಮಾರುಕಟ್ಟೆಗಿಂತ ಕೊಂಚ ಬ್ಯುಸಿಯಾಗಿತ್ತು. ಇದನ್ನೂ ಓದಿ:  ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!

  • ಬಿಬಿಎಂಪಿಯಿಂದ ಮಾಂಸ ಮಾರಾಟಕ್ಕೆ ದರ ಫಿಕ್ಸ್

    ಬಿಬಿಎಂಪಿಯಿಂದ ಮಾಂಸ ಮಾರಾಟಕ್ಕೆ ದರ ಫಿಕ್ಸ್

    -ತಪ್ಪಿದ್ರೆ ದಂಡ, ಲೈಸನ್ಸ್ ರದ್ದು

    ಬೆಂಗಳೂರು: ಕುರಿ, ಕೋಳಿ ಮಾಂಸ ಮಾರಾಟಕ್ಕೆ ಬಿಬಿಎಂಪಿ ದರ ನಿಗದಿ ಮಾಡಿದೆ.

    ಲಾಕ್‍ಡೌನ್ ಲಾಭವನ್ನಾಗಿ ಮಾಡಿಕೊಂಡಿದ್ದ ಮಾಂಸ ಮಾರಾಟಗಾರರು ಸಾರ್ವಜನಿಕರಿಂದ ಡಬಲ್ ಹಣ ಪಡೆಯುತ್ತಿದ್ದರು. ದಿನಾಂಕ 23-03-2020 ರಿಂದ ರಾಜ್ಯ ವ್ಯಾಪಿ ಕೋವಿಡ್ – 19 ಲಾಕ್ ಡೌನ್‍ನ ಹಿನ್ನೆಲೆಯಲ್ಲಿ ಕುರಿ/ಮೇಕೆ/ಕೋಳಿ ಮಾಂಸ ಮಾರಾಟದ ಮಳಿಗೆಗಳಲ್ಲಿ ಮಾಂಸವನ್ನು ದುಬಾರಿ ದರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ರೀತಿಯಾಗಿ ದರವನ್ನು ಏಕಾಏಕಿ ಹೆಚ್ಚಿಸುತ್ತಿರುವುದು ಸಾರ್ವಜನಿಕರಿಗೆ ಅನಗತ್ಯ ಆರ್ಥಿಕ ಹೊರೆಯಾಗಿತ್ತು ಎಂದು ಬಿಬಿಎಂಪಿ ಹೇಳಿದೆ.

    ಹೀಗಾಗಿ ಮಾಂಸ ಮಾರಾಟಕ್ಕೆ ದರ ನಿಗದಿ ಮಾಡಿದ ಬಿಬಿಎಂಪಿ ಕೋಳಿ ಕೆಜಿಗೆ 125 ರಿಂದ 180ಕ್ಕೆ ಮಾರಾಟ ಮಾಡಬೇಕು. ಕುರಿ ಮಾಂಸ ಕೆಜಿಗೆ 700 ರೂಪಾಯಿ ಇದಕ್ಕಿಂತ ಹೆಚ್ಚಿನ ದರಕ್ಕೆ ಮಾರಟ ಮಾಡಿದ್ರೆ ದಂಡ ವಿಧಿಸುವ ಹಾಗೂ ಲೈಸನ್ಸ್ ರದ್ದು ಪಡಿಸುವದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ.

    ಅದೇ ರೀತಿ ಮಾಂಸದಂಗಡಿಗಳು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ. ಮೊದಲ ಬಾರಿ ಬಿಸಾಡಿದರೆ 2 ಸಾವಿರ ರೂ. ದಂಡ ಹಾಕಲಾಗುವುದು. ದಂಡ ಹಾಕಿದ್ರೂ ಮತ್ತೆ ಪ್ರಾಣಿ ಮಾಂಸ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡಿದರೆ ದುಬಾರಿ ದಂಡ ಪಾವತಿಸಬೇಕು.