Tag: ಮಾಜಿ ಪ್ರಧಾನಿ

  • ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸ್ಥಳ ಪರಿಶೀಲನೆ

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸ್ಥಳ ಪರಿಶೀಲನೆ

    ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Former PM Manmohan Singh) ಅವರ ಸ್ಮಾರಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress), ಬಿಜೆಪಿ (BJP) ನಡುವೆ ರಾಜಕೀಯ ಜಟಾಪಟಿ ನಡೆಯುತ್ತಿರುವ ಹೊತ್ತಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ರಾಜ್‌ಘಾಟ್‌ನಲ್ಲಿರುವ ಸಮಾಧಿ ಸ್ಥಳಗಳಿಗೆ ಭೇಟಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

    ರಾಷ್ಟ್ರೀಯ ಸ್ಮೃತಿಸ್ಥಳ, ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಗೆ ಗೊತ್ತುಪಡಿಸಿದ ಸ್ಥಳ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಸ್ಮಾರಕ ಕಿಸಾನ್ ಘಾಟ್, ಸಂಜಯ್ ಗಾಂಧಿ ಸಮಾಧಿ, ಪಿ.ವಿ.ನರಸಿಂಹರಾವ್ ಸಮಾಧಿ ಏಕತಾ ಸ್ಥಳದ ಬಳಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಬಗ್ಗೆ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.ಇದನ್ನೂ ಓದಿ: ಕೈಯಲ್ಲಿ ಡೆತ್‌ನೋಟ್‌ ಹಿಡ್ಕೊಂಡು KSDL ಅಧಿಕಾರಿ ಆತ್ಮಹತ್ಯೆ

    ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರಕ್ಕೆ ಕೇಂದ್ರ ಸರ್ಕಾರ ಸರಿಯಾದ ಮತ್ತು ಗೌರವಾನ್ವಿತ ಸ್ಥಳವನ್ನು ಒದಗಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಅವರ ಸ್ಮಾರಕವನ್ನು ನಿರ್ಮಿಸುವ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಅದಾಗ್ಯೂ ಕೇಂದ್ರ ಸರ್ಕಾರ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಸಿತ್ತು.

    ಈ ನಡುವೆ ಕೇಂದ್ರ ಸರ್ಕಾರ ಸ್ಮಾರಕಕ್ಕೆ ಸ್ಥಳ ನೀಡುವ ಭರವಸೆ ನೀಡಿದ್ದು, ಈ ಹಿನ್ನೆಲೆ ಸ್ಥಳ ಪರಿಶೀಲನೆ ಆರಂಭವಾಗಿದೆ. ಈ ನಡುವೆ 2000ನೇ ಇಸವಿಯಲ್ಲಿ ಯುಪಿಎ ಸರ್ಕಾರವು ರಾಜಧಾನಿಯಲ್ಲಿ ಭೂಮಿ ಕೊರತೆ ಹಿನ್ನೆಲೆ ಕಳವಳ ವ್ಯಕ್ತಪಡಿಸಿತ್ತು. ಇದರೊಂದಿಗೆ ಹೊಸ ಸ್ಮಾರಕಗಳನ್ನು ನಿರ್ಮಿಸದಿರಲು ನಿರ್ಧರಿಸಲಾಗಿತ್ತು. ಈ ನಿರ್ಧಾರ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಅಡ್ಡಿಯಾಗಬಹುದು ಎನ್ನಲಾಗುತ್ತಿದೆ.ಇದನ್ನೂ ಓದಿ: ಅರ್ಚಕರಿಗೆ ಪ್ರತಿ ತಿಂಗಳು 18 ಸಾವಿರ ಸಹಾಯಧನ: ಕೇಜ್ರಿವಾಲ್‌ ಘೋಷಣೆ

  • ಮಾಜಿ ಪ್ರಧಾನಿ ಹೆಚ್‌ಡಿಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    ಮಾಜಿ ಪ್ರಧಾನಿ ಹೆಚ್‌ಡಿಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

    ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹೆಚ್‌ಡಿಡಿ ಅವರು ಮಣಿಪಾಲ್ ಆಸ್ಪತ್ರೆ ಗೆ ದಾಖಲಾಗಿದ್ದರು. ಕಳೆದ ಎರಡು ದಿನಗಳಿಂದ ಹೆಚ್‌ಡಿಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ತಂಡದಿಂದ ದೇವೇಗೌಡರಿಗೆ ಚಿಕಿತ್ಸೆ ನೀಡಿದೆ.

    ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ ಪದ್ಮನಾಭನಗರದ ಮನೆಗೆ ಹೆಚ್‌ಡಿಡಿ ತೆರಳಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

  • ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಖುರೇಷಿಗೆ 10 ವರ್ಷ ಜೈಲು

    ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಖುರೇಷಿಗೆ 10 ವರ್ಷ ಜೈಲು

    ಇಸ್ಲಾಮಾಬಾದ್:‌ ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥ ಇಮ್ರಾನ್ ಖಾನ್ (Imran Khan) ಮತ್ತು ಶಾ ಮೊಹಮ್ಮದ್‌ ಖುರೇಷಿಗೆ (Shah Mahmood Qureshi) ಪಾಕಿಸ್ತಾನ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಸೈಫರ್ ಪ್ರಕರಣಕ್ಕೆ (Cipher case) ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಬುವಲ್ ಹಸ್ನಾತ್ ಮುಹಮ್ಮದ್ ಜುಲ್ಕರ್ನೈನ್ ಅವರು ಮಂಗಳವಾರ ಈ ಆದೇಶವನ್ನು ನೀಡಿದ್ದಾರೆ ಎಂದು ಇಮ್ರಾನ್ ಖಾನ್ ಅವರ ವಕೀಲ ಶೋಯೆಬ್ ಶಾಹೀನ್ ಅವರು ತಿಳಿಸಿದ್ದಾರೆ. ಇಮ್ರಾನ್‌ ಖಾನ್‌ ಜೊತೆಗೆ ಮಾಜಿ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಕೂಡ ಇದೇ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆ ಅನುಭವಿಸಲಿದ್ದಾರೆ ಎಂದಿದ್ದಾರೆ.   ಇದನ್ನೂ ಓದಿ: ಮಾಜಿ ಪ್ರಧಾನಿಯೊಬ್ಬರ ಮಗ ಜಿಲ್ಲೆಗೆ ಬಂದು ಶಾಂತಿ ಕದಡುವ ನಿರ್ಧಾರ ಮಾಡಿರೋದು ಸರಿಯಲ್ಲ: ಚಲುವರಾಯಸ್ವಾಮಿ

    ಪಾಕಿಸ್ತಾನದ ವಿಶೇಷ ನ್ಯಾಯಾಲಯವು ಕಳೆದ ತಿಂಗಳು ಅಡಿಯಾಲಾ ಜಿಲ್ಲಾ ಜೈಲಿನಲ್ಲಿ ಸೈಫರ್ ಪ್ರಕರಣದ ಹೊಸ ವಿಚಾರಣೆಯನ್ನು ಪ್ರಾರಂಭಿಸಿತ್ತು. ಡಿಸೆಂಬರ್ 13 ರಂದು ಈ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ಎರಡನೇ ಬಾರಿಗೆ ಶಿಕ್ಷೆಗೊಳಗಾಗಿದ್ದರು. ಪ್ರಸ್ತುತ ಜೈಲಿನಲ್ಲಿರುವ  ಇಮ್ರಾನ್ ಖಾನ್ ಮತ್ತು  ಮೊಹಮ್ಮದ್ ಖುರೇಷಿ ಅಕ್ಟೋಬರ್‌ನಲ್ಲಿ ಈ ಪ್ರಕರಣದಲ್ಲಿ ಪ್ರಾಥಮಿಕ ಆರೋಪಗಳನ್ನು ಎದುರಿಸಿದ್ದರು. ಅಲ್ಲದೇ ಆಗ ತಾವು ನಿರಪರಾಧಿ ಎಂದು ಘೋಷಿಸಿಕೊಂಡಿದ್ದರು.

  • ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ನಿಧನ

    ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ ನಿಧನ

    ರೋಮ್: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕೋನಿ (86) (Silvio Berlusconi) ನಿಧನರಾಗಿದ್ದಾರೆ.

    ಸಿಲ್ವಿಯೊ ಬೆರ್ಲುಸ್ಕೋನಿ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2016 ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 2020ರಲ್ಲಿ ಕೊರೊನಾ ವೈರಸ್‍ (Corona Virus) ನಿಂದ ಆಸ್ಪತ್ರೆಗೆ ದಾಖಲಾಗಿದ್ದರು. 6 ವಾರಗಳ ಹಿಂದೊಮ್ಮೆ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕಳೆದ ಶುಕ್ರವಾರ ಮಾಜಿ ಪ್ರಧಾನಿಯನ್ನು ಮಿಲನ್ ಆಸ್ಪತ್ರೆ (Milan Hospital) ಗೆ ದಾಖಲಿಸಲಾಗಿತ್ತು. ಈ ವೇಳೆ ಅಪರೂಪದ ರಕ್ತದ ಕ್ಯಾನ್ಸರ್ (Blood Cancer) ಇದೆ ಎಂದು ವೈದ್ಯರು ಬಹಿರಂಗಪಡಿಸಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    1994 ಮತ್ತು 2011 ರ ನಡುವೆ ಒಟ್ಟು 9 ವರ್ಷಗಳ ಕಾಲ ಮೂರು ಬಾರಿ ಇಟಲಿಯ ಪ್ರಧಾನ ಮಂತ್ರಿಯಾದರು. ಆದರೆ ಲೈಂಗಿಕ ಹಗರಣಗಳು ಮತ್ತು ಭ್ರಷ್ಟಾಚಾರ ಆರೋಪಗಳಿಂದಾಗಿ ಪ್ರಧಾನಿ ಹುದ್ದೆಯಿಂದ ಹಿಂದೆ ಸರಿದಿದ್ದರು. ಸದ್ಯ ಅವರು ತಮ್ಮ 33 ವರ್ಷದ ಗೆಳತಿ ಮಾರ್ಟಾ ಫಾಸಿನಾ, ಇಬ್ಬರು ಮಾಜಿ ಪತ್ನಿಯರು ಮತ್ತು ಐದು ಮಕ್ಕಳನ್ನು ಅಗಲಿದ್ದಾರೆ.

    ಸಿಲ್ವಿಯೊ ಬೆರ್ಲುಸ್ಕೋನಿ ಅವರ ಸಾವು ದೊಡ್ಡ ನಷ್ಟವನ್ನು ಉಂಟುಮಾಡಿದೆ. ಅವರು ಒಬ್ಬ ಮಹಾನ್ ವ್ಯಕ್ತಿ. ನಾನು ಅವರನ್ನು ತುಂಬಾ ಪ್ರೀತಿಸುತ್ತೇನೆ ಎಂದು ಇಟಾಲಿಯನ್ ರಕ್ಷಣಾ ಸಚಿವ ಗಿಡೋ ಕ್ರೊಸೆಟ್ಟೊ ಟ್ವಿಟರ್‍ನಲ್ಲಿ ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಪ್ರಜೆ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿದ್ದ ಪುಂಡ ಅರೆಸ್ಟ್‌

     

  • ಆಫ್ಘನ್ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಪ್, ಒಬ್ಬ ಸಾವು

    ಆಫ್ಘನ್ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಪ್, ಒಬ್ಬ ಸಾವು

    ಕಾಬೂಲ್‌: ಅಫ್ಘಾನಿಸ್ತಾನದ (Afghanistan) ಮಾಜಿ ಪ್ರಧಾನಿ ಗುಲ್ಬುದ್ದೀನ್ ಹೆಕ್ಮತ್ಯಾರ್ (Gulbuddin Hekmatyar) ಕಟ್ಟಡದ ಮೇಲೆ ದಾಳಿ ನಡೆಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

    ಹೆಕ್ಮತ್ಯಾರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಶುಕ್ರವಾರದ ಪ್ರಾರ್ಥನೆಗಾಗಿ ಹೆಕ್ಮತ್ಯಾರ್ ಮತ್ತು ಅವರ ಬೆಂಬಲಿಗರು ಹೋಗಿದ್ದ ಮಸೀದಿಯೊಂದಕ್ಕೆ ಪ್ರವೇಶಿಸಲು ಯತ್ನಿಸಿದ ಇಬ್ಬರು ದಾಳಿಕೋರರನ್ನು ಭದ್ರತಾ ಸಿಬ್ಬಂದಿ ಕೊಂದಿದ್ದಾರೆ ಎಂದು ಅಲ್ ಜಜೀರಾ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ವಿವಾಹಪೂರ್ವ ಸೆಕ್ಸ್ ಮಾಡಿದ್ರೆ 1 ವರ್ಷ ಜೈಲು – ಹೊಸ ಕಾನೂನು ಜಾರಿಗೆ ಇಂಡೋನೇಷ್ಯಾ ಸಜ್ಜು

    ಕಾಬೂಲ್‌ನ ದಾರುಲಾಮನ್ ಪ್ರದೇಶದಲ್ಲಿ ಹಿಜ್ಬ್-ಎ-ಇಸ್ಲಾಮಿ ಪಕ್ಷದ ಹೆಕ್ಮತ್ಯಾರ್ ಕಟ್ಟಡದ ಮೇಲೆ ದಾಳಿ ನಡೆದಿದೆ. ದಾಳಿಕೋರರು ಮಹಿಳಾ ಬುರ್ಕಾಗಳನ್ನು ಧರಿಸಿ ಬಂದ ಆತ್ಮಹತ್ಯಾ ಬಾಂಬರ್‌ಗಳಾಗಿದ್ದರು. ಮಾಜಿ ಪ್ರಧಾನಿಯನ್ನು ಹತ್ಯೆ ಮಾಡುವ ಉದ್ದೇಶ ಹೊಂದಿದ್ದರು ಎಂದು ಅಲ್ ಜಜೀರಾ ವರದಿ ಮಾಡಿದೆ.

    “ನನ್ನ ದೇಶವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ. ನನಗೆ ಏನೂ ಆಗಿಲ್ಲ. ಅವರು ವಿಫಲ ಪ್ರಯತ್ನ ಮಾಡಿದ್ದಾರೆ” ಎಂದು ಹೆಕ್ಮತ್ಯಾರ್ ತಮ್ಮ ಹತ್ಯೆ ಸಂಚು ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾಬೂಲ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ. ಇದನ್ನೂ ಓದಿ: ವಿದ್ಯಾರ್ಥಿನಿ ಶೂಟ್‌ ಮಾಡಿ ಅತ್ಯಾಚಾರವೆಸಗಿ ಕೊಂದ – ಮೃತದೇಹ ಪೀಸ್‌ ಮಾಡಿ ತಿಂದಿದ್ದ ವ್ಯಕ್ತಿ ನಿಧನ

    ಕಳೆದ ವರ್ಷ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅಶ್ರಫ್‌ ಘನಿ ಮತ್ತು ಇತರ ಮಾಜಿ ನಾಯಕರು ಪಲಾಯನವಾಗಿದ್ದರು. ಆದರೆ ಹೆಕ್ಮತ್ಯಾರ್ ಮಾತ್ರ ಕಾಬೂಲ್‌ನಲ್ಲಿಯೇ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು ಆರೋಗ್ಯವಾಗಿದ್ದೇನೆ, ಕಾರ್ಯಕರ್ತರು ಆತಂಕ ಪಡೋ ಅಗತ್ಯವಿಲ್ಲ: ಹೆಚ್.ಡಿ ದೇವೇಗೌಡ

    ನಾನು ಆರೋಗ್ಯವಾಗಿದ್ದೇನೆ, ಕಾರ್ಯಕರ್ತರು ಆತಂಕ ಪಡೋ ಅಗತ್ಯವಿಲ್ಲ: ಹೆಚ್.ಡಿ ದೇವೇಗೌಡ

    ಬೆಂಗಳೂರು: ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (H.D Devegowda) ಅವರು ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಆದಕಾರಣ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದೇವೇಗೌಡ್ರ ಮನೆಗೆ ಬೊಮ್ಮಾಯಿ ಭೇಟಿ – ಆರೋಗ್ಯ ವಿಚಾರಿಸಿ, ಈಗ್ಲೂ ಮುದ್ದೆ ತಿಂತೀರಾ ಸರ್ ಎಂದ ಸಿಎಂ

    ಕೆಲ ದಿನಗಳ ನಂತರ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜೊತೆಗೆ, ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಲಿದ್ದೆನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ. ಅಲ್ಲದೆ ನನ್ನ ನಿವಾಸಕ್ಕೆ ಭೇಟಿ ನೀಡಿ ನನ್ನ ಆರೋಗ್ಯ (Health) ವಿಚಾರಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಂದಾಯ ಸಚಿವ ಅಶೋಕ್ ಸೇರಿದಂತೆ ಇತರೆ ಎಲ್ಲಾ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ. ಅವರೆಲ್ಲರಿಗೂ ನನ್ನ ಶುಭ ಹಾರೈಕೆಗಳು ಎಂದು ಹೆಚ್‍ಡಿಡಿ ಹೇಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಅವರೇ ವಯಸ್ಸು‌ ಆಗೋಯ್ತಲ್ಲ ನಮ್ಗೆ: ಎದುರಿಗೆ ಸಿಕ್ಕ ಸಿದ್ದರಾಮಯ್ಯರಿಂದ ಜೋಕ್

    Live Tv
    [brid partner=56869869 player=32851 video=960834 autoplay=true]

  • ರಾಜೀವ್‌ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಳಿನಿ

    ರಾಜೀವ್‌ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಳಿನಿ

    ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ ಅವರು ಗುರುವಾರ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದಾರೆ. ಎ.ಜಿ.ಪೆರಾರಿವಾಲನ್ ಅವರಂತೆ ತನ್ನನ್ನೂ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

    ಸಹ ಅಪರಾಧಿಯಾಗಿದ್ದ ಎ.ಜಿ.ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪನ್ನು ನಳಿನಿ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೂ ಮೊದಲು ನಳಿನಿ ಅವರು ಬಿಡುಗಡೆ ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿತ್ತು. ಇದನ್ನೂ ಓದಿ: ಎಲ್ಲರೂ ಮನುಷ್ಯರೇ: ರಾಜೀವ್ ಗಾಂಧಿ ಹಂತಕನ ಪ್ರತಿಕ್ರಿಯೆ

    ಅರ್ಜಿಯನ್ನು ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್, ಸಂವಿಧಾನದ 142ನೇ ಪರಿಚ್ಛೇದದ ಅಡಿಯಲ್ಲಿ ಸುಪ್ರೀಂ ಕೋರ್ಟ್ ಹೊಂದಿರುವ ವಿಶೇಷ ಅಧಿಕಾರಗಳನ್ನು ತಾನು ಹೊಂದಿಲ್ಲ. ಆದ್ದರಿಂದ 2022ರ ಮೇ ತಿಂಗಳಲ್ಲಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್‌ನಂತೆ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

    ಈ ಹಿಂದೆ, ಮತ್ತೊಬ್ಬ ಸಹ ಅಪರಾಧಿ ಪಿ.ರವಿಚಂದ್ರನ್ ಕೂಡ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಇದೀಗ 30 ವರ್ಷಗಳಿಂದ ಜೈಲಿನಲ್ಲಿರುವ ರವಿಚಂದ್ರನ್ ಅವರು ಔಪಚಾರಿಕ ಬಿಡುಗಡೆಗಾಗಿ ತಮ್ಮ ಪ್ರಕರಣವು ಮುಕ್ತಾಯಗೊಳ್ಳುವವರೆಗೆ ಮಧ್ಯಂತರ ಜಾಮೀನು ಕೋರಿದ್ದಾರೆ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆಪ್ರಕರಣ: ನನ್ನ ಮಗಳೂ ಬಿಡುಗಡೆ ಆಗ್ತಾಳೆಂಬ ನಂಬಿಕೆಯಿದೆ ಎಂದ ನಳಿನಿ ತಾಯಿ

    ಪೆರಾರಿವಾಲನ್ ಬಿಡುಗಡೆಯನ್ನು ಉಲ್ಲೇಖಿಸಿ ತಮ್ಮ ಮನವಿ ಸಲ್ಲಿಸುವುದಾದರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಹೈಕೋರ್ಟ್ ಹೇಳಿತ್ತು. ಮೇ 18 ರಂದು, ಹತ್ಯೆ ಪ್ರಕರಣದ ಏಳು ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ.ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ ತನಗೆ ನೀಡಿರುವ ಪರಮಾಧಿಕಾರವನ್ನು ಚಲಾಯಿಸಿ ಆದೇಶ ಹೊರಡಿಸಿತ್ತು.

    ಪೆರಾರಿವಾಲನ್ ಬಿಡುಗಡೆಯ ನಂತರ, ರವಿಚಂದ್ರನ್ ಅವರು ತನ್ನನ್ನೂ ಸೇರಿದಂತೆ ಉಳಿದ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಪತ್ರ ಕಳುಹಿಸಿದ್ದರು. ರಾಜ್ಯಪಾಲರು ಮೂರು ವರ್ಷಗಳಿಂದ ಬಿಡುಗಡೆಯ ಕಡತಗಳನ್ನು ಪರಿಗಣಿಸದೆ ಇರಿಸಿದ್ದಾರೆ. ಇದು ಸಂವಿಧಾನ ವಿರೋಧಿ ನಡೆ ಎಂದು ಖಂಡಿಸಿದ್ದರು. ಇದನ್ನೂ ಓದಿ: ವಿಮಾನದೊಳಗೆ ಸಿಗರೇಟ್ ಸೇದುತ್ತಾ ಪೋಸ್ ಕೊಟ್ಟ ವ್ಯಕ್ತಿ – ಸಿಂಧಿಯಾಗೆ ಬೆಂಡೆತ್ತಿದ ನೆಟ್ಟಿಗರು!

    ಸೆಪ್ಟೆಂಬರ್ 2018ರಲ್ಲಿ ತಮಿಳುನಾಡು ಸರ್ಕಾರ ಮಾಡಿದ ಶಿಫಾರಸಿನ ಆಧಾರದ ಮೇಲೆ ಜೈಲಿನಿಂದ ಅವಧಿಪೂರ್ವ ಬಿಡುಗಡೆಗಾಗಿ ಪೆರಾರಿವಾಲನ್ ಅವರ ಮನವಿಯನ್ನು ಪುರಸ್ಕರಿಸಿ, ಸುಪ್ರೀಂ ಕೋರ್ಟ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು. ಆದರೆ ಇತರ ಆರು ಅಪರಾಧಿಗಳು ಜೈಲಿನಲ್ಲಿದ್ದಾರೆ.

    ರವಿಚಂದ್ರನ್ ಅವರು ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ ಮೇಲ್ಮನವಿಯಲ್ಲಿ ಪೆರಾರಿವಾಲನ್ ಅವರ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದಾರೆ. ಮೇ 21, 1991ರ ರಾತ್ರಿ ತಮಿಳುನಾಡಿನ ಪೆರಂಬದೂರಿನಲ್ಲಿ ಚುನಾವಣಾ ರ‍್ಯಾಲಿ ವೇಳೆ ಧನು ಎಂದು ಗುರುತಿಸಲ್ಪಟ್ಟ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಯಿಂದ ಮಾಜಿ ಪ್ರಧಾನಿ ಹೆಚ್‍ಡಿಡಿ ಡಿಸ್ಚಾರ್ಜ್

    ಆಸ್ಪತ್ರೆಯಿಂದ ಮಾಜಿ ಪ್ರಧಾನಿ ಹೆಚ್‍ಡಿಡಿ ಡಿಸ್ಚಾರ್ಜ್

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಕಳೆದ 5 ದಿನಗಳಿಂದ ದೇವೇಗೌಡರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರನ್ನು ಆಸ್ಪತ್ರೆ ಸಿಬ್ಬಂದಿ ಹೂಗುಚ್ಛ ನೀಡಿ ಬೀಳ್ಕೊಟ್ಟರು.

    ಮಾರ್ಚ್ 31ರಂದು ಟ್ವೀಟ್ ಮಾಡಿದ್ದ ಮಾಜಿ ಪ್ರಧಾನಿ, ನನಗೆ ಹಾಗೂ ಪತ್ನಿ ಚೆನ್ನಮ್ಮಗೆ ಕೋವಿಡ್ ಪಾಸಿಟಿವ್ ಬಂದಿದೆ. ಜೊತೆಗೆ ನಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದರು. ಆದರೆ ಈ ಬಗ್ಗೆ ಸಂಜೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಕೊರೊನಾ ನೆಗೆಟಿವ್ ಇದೆ. ಜ್ವರ ಇರುವುದಕ್ಕೆ ಮಾತ್ರ ಅಡ್ಮಿಟ್ ಆಗಿದ್ದಾರೆ. ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಾತ್ರ ಪಾಸಿಟಿವ್ ಇದೆ. ಮಣಿಪಾಲ್ ಆಸ್ಪತ್ರೆಯಲ್ಲೇ ಹೆಚ್‍ಡಿಡಿ, ಚೆನ್ನಮ್ಮ ಅವರಿಗೆ ಚಿಕಿತ್ಸೆ ನೀಡಲಾಗುವುದು. ಜ್ವರದಿಂದ ಬಳಲುತ್ತಿರುವ ಹೆಚ್‍ಡಿಡಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದರು.

    ದೇವೇಗೌಡರ ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದು, ಸಿಟಿ ಸ್ಕ್ಯಾನ್‍ನಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ಸಿಟಿ ಸ್ಕ್ಯಾನಿಂಗ್‍ನಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಕೋವಿಡ್ ಚಿಕಿತ್ಸೆ ಕೊಡಬೇಕಾಗುತ್ತದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದರು.

  • ಮನೆಯವರ ವಿರುದ್ಧವೇ ಮಾತಾಡಲಾಗದೆ ಹೆಚ್‍ಡಿಡಿ ಸುಮ್ಮನಾಗಿದ್ದಾರೆ: ಸಿಎಸ್.ಪುಟ್ಟೇಗೌಡ

    ಮನೆಯವರ ವಿರುದ್ಧವೇ ಮಾತಾಡಲಾಗದೆ ಹೆಚ್‍ಡಿಡಿ ಸುಮ್ಮನಾಗಿದ್ದಾರೆ: ಸಿಎಸ್.ಪುಟ್ಟೇಗೌಡ

    ಹಾಸನ: ಜಿಲ್ಲೆಯ ಕೀಲಿಕೈ ಯಾರೋ ಒಬ್ಬರ ಕೈಲಿದ್ದು, ಆ ಕೀಲಿಕೈ ಕಿತ್ತುಕೊಂಡರೆ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಂತೆ ಹಾಸನ ಜಿಲ್ಲೆಗೆ ಸ್ವಾತಂತ್ರ್ಯ ಸಿಗಲಿದೆ ಎಂದು ಮಾಜಿ ಶಾಸಕ ಪುಟ್ಟೇಗೌಡ ಮಾಜಿ ಸಚಿವ ರೇವಣ್ಣ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಶ್ರೀನಿವಾಸಪುರದಲ್ಲಿರುವ ಹೇಮಾವತಿ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಮಾಜಿ ಶಾಸಕ ಪುಟ್ಟೇಗೌಡ, ಮಾಜಿ ಪ್ರಧಾನಿ ದೇವೇಗೌಡರು ಮತ್ತು ಹಾಸನ ಜಿಲ್ಲೆಯ ಈ ಸ್ಥಿತಿಗೆ ಅವರ ಮನೆಯವರೇ ಕಾರಣ ಎಂದು ವಾಗ್ದಾಳಿ ನಡೆಸಿದ್ರು.

    ಈ ಕೀಲಿಕೈ ಅವರಿಗೆ ಕೊಟ್ಟು ಜಿಲ್ಲೆಯ ಜನ ಶಿಕ್ಷೆ ತಗೊಂಡ್ರು. ಎಲ್ಲರಿಗಿಂತ ಮೊದಲು ದೇವೇಗೌಡರೇ ಶಿಕ್ಷೆ ತಗೊಂಡ್ರು. ಈ ವಯಸ್ಸಲ್ಲಿ ಅವರ ಮನೆಯವರ ವಿರುದ್ಧ ಅವರೇ ಮಾತನಾಡಲಾಗದೇ ದೇವೇಗೌಡರು ಸುಮ್ಮನಾಗಿದ್ದಾರೆ. ಕೈ ಮದ್ದು ಹಾಕುವವರು ಬೇರೆಯವರು ಸಿಗದಿದ್ರೆ ತಮ್ಮ ಮನೆಯವರಿಗೇ ಹಾಕುತ್ತಾರೆ. ಅದರಂತೆ ಈ ಜಿಲ್ಲೆಯಲ್ಲಿ ನಿಮ್ಮನ್ನು ಸೋಲಿಸಲು ಯಾರಿದ್ದರು ದೇವೇಗೌಡರೇ. ಈ ಕೀ ಪಿನ್‍ನಿಂದ ಸಣ್ಣಪುಟ್ಟ ಹುಡುಗರಿಗೆಲ್ಲ ಅಧಿಕಾರ ಸಿಕ್ಕಿದೆ. ಆದರೆ ಕೀ ಪಿನ್ ನಿಯಂತ್ರಿಸಲಾಗದೆ ದೇವೇಗೌಡರು ತುಮಕೂರಿಗೆ ಹೋಗುವ ಕೆಟ್ಟ ಪರಿಸ್ಥಿತಿ ನಿರ್ಮಾಣವಾಯ್ತು ಎಂದು ವ್ಯಂಗ್ಯವಾಡಿದ್ರು.

    ಈ ಕೀ ಪಿನ್ನನ್ನು ಸಿಂಹದ ಮರಿಗಳಾದ ಸಿದ್ಧರಾಮಯ್ಯ, ಡಿಕೆ.ಶಿವಕುಮಾರ್, ಖರ್ಗೆಗೆ ಕೊಡಲು ಹಾಸನ ಜಿಲ್ಲೆಯ ಜನ ಸಿದ್ಧರಾಗಿದ್ದಾರೆ. ಅವರುಗಳು ಬಂದು ಹಾಸನ ಜಿಲ್ಲೆಯನ್ನು ಶುದ್ಧಿ ಮಾಡಲಿದ್ದಾರೆ ಎಂದು ಪುಟ್ಟೇಗೌಡ ಆಕ್ರೋಶ ಹೊರಹಾಕಿದ್ದಾರೆ.

  • ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ನೆನೆದು ‘ಕೈ’ ಕುಟುಕಿದ ಪ್ರಧಾನಿ ಮೋದಿ, ಶಾ

    ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ನೆನೆದು ‘ಕೈ’ ಕುಟುಕಿದ ಪ್ರಧಾನಿ ಮೋದಿ, ಶಾ

    ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ನೇತೃತ್ವದ ಸರ್ಕಾರ 1975ರಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿ ಇಂದಿಗೆ 45 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಅನ್ನು ಕುಟುಕಿದ್ದಾರೆ.

    ಪ್ರಧಾನಿ ಮೋದಿ ಟ್ವೀಟ್ ಮಾಡಿ, “ನಿಖರವಾಗಿ 45 ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಆ ಸಮಯದಲ್ಲಿ ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ, ಚಿತ್ರಹಿಂಸೆ ಅನುಭವಿಸಿದವರಿಗೆ ನಮಸ್ಕರಿಸುತ್ತೇನೆ. ಅವರ ತ್ಯಾಗ ಮತ್ತು ಹೋರಾಟವನ್ನು ದೇಶ ಎಂದಿಗೂ ಮರೆಯುವುದಿಲ್ಲ” ಎಂದು ಹೇಳಿದ್ದಾರೆ.

    ಇದಕ್ಕೂ ಮುನ್ನ ಗೃಹ ಸಚಿವ ಅಮಿತ್ ಶಾ ಅವರು ಇಂದಿರಾ ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡಿದ್ದರು. ಅಧಿಕಾರದ ದುರಾಸೆಯಲ್ಲಿ ಒಂದು ಕುಟುಂಬವು ದೇಶವನ್ನು ತುರ್ತು ಪರಿಸ್ಥಿತಿಗೆ ಆಮಿಷವೊಡ್ಡಿತ್ತು. ರಾತ್ರೋರಾತ್ರಿ ಇಡೀ ದೇಶವನ್ನು ತುರ್ತು ಪರಿಸ್ಥಿತಿಗೆ ತಳ್ಳಿಬಿಟ್ಟಿತು. ಪತ್ರಿಕಾ ಸ್ವಾತಂತ್ರ್ಯ, ನ್ಯಾಯಾಲಯ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿತ್ತು. ಆ ಸಮಯದಲ್ಲಿ ಬಡವರನ್ನು ಹಿಂಸಿಸಲಾಯಿತು ಎಂದು ಕುಟುಕಿದ್ದಾರೆ.

    ಮಾಧ್ಯಮ ವರದಿಯನ್ನು ಟ್ವೀಟ್ ಮಾಡಿದ ಅಮಿತ್ ಶಾ, ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರು ಕೆಲವು ವಿಷಯಗಳನ್ನು ಎತ್ತಿದ್ದರು. ಆದರೆ ಅವರ ಮಾತುಗಳನ್ನು ಕೇಳಲೇ ಇಲ್ಲ. ಪಕ್ಷದ ವಕ್ತಾರರನ್ನು ಸಭೆಯಿಂದ ಹೊರಗೆ ಹಾಕಲಾಗಿತ್ತು. ಸತ್ಯವೆಂದರೆ ಅಂದಿನ ಪರಿಸ್ಥಿತಿ ಕಾಂಗ್ರೆಸ್ ನಾಯಕರನ್ನು ಉಸಿರುಗಟ್ಟಿಸಿತ್ತು ಎಂದು ಹೇಳಿದ್ದಾರೆ.

    ಮತ್ತೊಂದು ಟ್ವಿಟ್ ಮಾಡಿವ ಅಮಿತ್ ಶಾ, “ಸದ್ಯ ಪ್ರತಿಪಕ್ಷಗಳಲ್ಲಿ ಒಂದಾಗಿರುವ ಕಾಂಗ್ರೆಸ್ ತುರ್ತು ಪರಿಸ್ಥಿತಿ ಕುರಿತು ಕೆಲ ವಿಚಾರವಾಗಿ ತಾನೇ ವಿಮರ್ಶೆ ಮಾಡಿಕೊಳ್ಳುವ ಅಗತ್ಯವಿದೆ. ತುರ್ತು ಮನಸ್ಥಿತಿ ಏಕೆ ಉಳಿದಿದೆ? ಒಂದು ಕುಟುಂಬ ಜನರನ್ನು ಹೊರತುಪಡಿಸಿ ನಾಯಕರಿಗೆ ಏಕೆ ಮಾತನಾಡಲು ಅವಕಾಶವಿಲ್ಲ? ಕಾಂಗ್ರೆಸ್‍ನಲ್ಲಿ ನಾಯಕರು ಏಕೆ ನಿರಾಶರಾಗುತ್ತಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

    ಅಮಿತ್ ಶಾ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ, ಆಡಳಿತ ಪಕ್ಷವಾಗಿರುವುದರಿಂದ ಬಿಜೆಪಿ ಇದಕ್ಕೆ ಕೊಡುವುದು ಅಗತ್ಯವಿದೆ. ಪ್ರಧಾನಿ ಮೋದಿ ಸರ್ಕಾರವನ್ನು ಕೇವಲ ಎರಡು ಜನರ ಸರ್ಕಾರ ಎಂದು ಏಕೆ ಕರೆಯುತ್ತಾರೆ? ಇತರ ಜನರನ್ನು ಏಕೆ ಹೊರಗಿಡಲಾಗಿದೆ? ಕುದುರೆ ವ್ಯಾಪಾರ ಏಕೆ ನಡೆಯುತ್ತಿದೆ? ನೆಹರೂ-ಗಾಂಧಿ ಅವರನ್ನು ಏಕೆ ದ್ವೇಷಿಸುತ್ತಾರೆ ಎಂದು ಮರು ಪ್ರಶ್ನೆ ಹಾಕಿದ್ದಾರೆ.