Tag: ಮಾಜಿ ಪ್ರಧಾನಿ

  • ನನ್ನ ಉಪವಾಸವನ್ನು ನಿಲ್ಲಿಸಿದ್ದ ಅನಂತಕುಮಾರ್ ಸಾವನ್ನು ನಿರೀಕ್ಷಿಸಿರಲಿಲ್ಲ: ಎಚ್‍ಡಿಡಿ

    ನನ್ನ ಉಪವಾಸವನ್ನು ನಿಲ್ಲಿಸಿದ್ದ ಅನಂತಕುಮಾರ್ ಸಾವನ್ನು ನಿರೀಕ್ಷಿಸಿರಲಿಲ್ಲ: ಎಚ್‍ಡಿಡಿ

    ಬೆಂಗಳೂರು: ಕೇಂದ್ರ ಸಚಿವರ ಹಾಗೂ ಬಿಜೆಪಿ ಮುಖಂಡ ಅನಂತಕುಮಾರ್ ರವರ ಅಕಾಲಿಕ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ.

    ಅನಂತಕುಮಾರ್ ರವರ ಅಕಾಲಿಕ ಸಾವಿನ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನಾನು ಪ್ರಧಾನಿಮಂತ್ರಿಯಾಗಿದ್ದಾಗ ಅವರು ಮೊದಲನೇ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಯಾವಾಗಲೂ ಚತುರತೆಯಿಂದ ಕೆಲಸ ಮಾಡುತ್ತಿದ್ದರು. ಅವರು ಎಂದಿಗೂ ಹೆಚ್ಚಿಗೆ ಮಾತನಾಡುತ್ತಿರಲಿಲ್ಲ. ಅವರು ಇಷ್ಟು ಚಿಕ್ಕ ವಯಸ್ಸಿನಲ್ಲೇ ಹೋಗುತ್ತಾರೆಂದು ನಿರೀಕ್ಷಿಸಿರಲಿಲ್ಲ. ಅವರ ಸಾವಿನಿಂದಾಗಿ ಆಘಾತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಅವರು ವಿದೇಶದಿಂದ ಬಂದ ನಂತರ, ಮಗ ರೇವಣ್ಣ ಶಂಕರ ಆಸ್ಪತ್ರೆಗೆ ಹೋಗಿ ನೋಡಿಕೊಂಡು ಬಂದಿದ್ದರು. ನಾನು ಅವರನ್ನು ನೋಡಬೇಕೆಂದು ಅಂದುಕೊಂಡಿದ್ದೆ, ಆದರೆ ಆಸ್ಪತ್ರೆಯ ಸಿಬ್ಬಂದಿ ಯಾರನ್ನು ನೋಡಲು ಬಿಡುತ್ತಿಲ್ಲವೆಂದು ರೇವಣ್ಣ ಹೇಳಿದ್ದರು. ಅಲ್ಲದೇ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಮಾತ್ರ ನನಗೆ ಗೊತ್ತಿತ್ತು.

    ಕಾವೇರಿ ವಿವಾದ ಏರ್ಪಟ್ಟು ಅಟಾರ್ನಿ ಜನರಲ್ 4 ತಿಂಗಳಲ್ಲಿ ಕಾವೇರಿ ನಿಗಮ ಮಂಡಳಿಯನ್ನು ಪ್ರಾರಂಭಿಸುತ್ತೇವೆಂದು ಹೇಳಿದಾಗ, ನಾನು ಸಂಸತ್ತಿನ ಮುಂದಿರುವ ಗಾಂಧಿ ಪ್ರತಿಮೆಯ ಬಳಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದೆ. ಆಗ ಸಂಸದೀಯ ಸಚಿವರಾಗಿದ್ದ ಅವರು ಮೋದಿಯವರ ಮೇಲೆ ಪ್ರಭಾವ ಬೀರಿ, ಅದೇ ಅಟಾರ್ನಿ ಜನರಲ್ ಮೂಲಕ ಆದೇಶ ಹಿಂಪಡೆಯುವಂತೆ ಮಾಡಿದ್ದರು. ಅಲ್ಲದೇ ನಾನು ಉಪವಾಸ ನಡೆಸುತ್ತಿದ್ದ ಸ್ಥಳಕ್ಕೆ ಬಂದು, ನಿಮ್ಮ ಆರೋಗ್ಯ ಹಾಳಾಗುತ್ತದೆ. ದಯಮಾಡಿ ಉಪವಾಸ ನಿಲ್ಲಿಸಿ ಎಂದು ಹೇಳಿ ಉಪವಾಸ ಹೋರಾಟವನ್ನು ನಿಲ್ಲಿಸಿದ್ದರು. ಅವರ ಬಗ್ಗೆ ಹೇಳಬೇಕೆಂದರೆ ಬಹಳ ವಿಷಯಗಳು ಇವೆ ಎಂದರು.

    ಹತ್ತು ಹಲವಾರು ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಇದೂವರೆಗೂ ಯಾವೊಬ್ಬ ಇತರೆ ಪಕ್ಷದ ಮುಖಂಡರೊಂದಿಗೆ ಅವರು ವೈರತ್ವ ಬೆಳೆಸಿಕೊಂಡಿದ್ದವರಲ್ಲ. ಎಲ್ಲರೂ ಅವರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು.

    ಅವರ ಸಾವಿನಿಂದಾಗಿ ಲಕ್ಷಾಂತರ ಅಭಿಮಾನಿಗಳು ಹಾಗೂ ಅವರ ಕುಟುಂಬದವರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ದೇವರ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಕೊಡಲಿ. ಕಾರಣಾಂತರಗಳಿಂದ ಅವರ ಅಂತಿಮ ದರ್ಶನ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ

    ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ

    ರಾಮನಗರ: ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವನ್ನು ಬಯಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

    ಉಪಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಹಾಗೂ ಸೊಸೆ ಅನಿತಾ ಕುಮಾರಸ್ವಾಮಿ ಪರ ಹಳ್ಳಿಮಾಳ ಗ್ರಾಮದಲ್ಲಿ ದೇವೇಗೌಡರು ಬಹಿರಂಗ ಪ್ರಚಾರ ನಡೆಸಿದ್ದರು. ಇದೇ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ 38 ಸ್ಥಾನ ಮಾತ್ರ ಬಂದಿದ್ದರೂ ಸರ್ಕಾರ ಮಾಡಿದ್ದೇವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್‍ನವರು ಕೇಳಿದ್ದರು. ಎಚ್‍ಡಿಕೆ ಸಿಎಂ ಆಗೋದು ಅನಿವಾರ್ಯ ಆಗಿರಲಿಲ್ಲ. ಆದರೆ ದೇಶದ ಹಲವು ಪಕ್ಷಗಳು ಒಗ್ಗಟು ಪ್ರದರ್ಶನಕ್ಕಾಗಿ ನಾನು ಅನುಮತಿ ಕೊಟ್ಟೆ ಎಂದರು.

    ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋತಿದ್ದರೂ, ಕಾಂಗ್ರೆಸ್ ಗೆಲ್ಲಲ್ಲು ಅಭ್ಯರ್ಥಿ ಹಾಕದಂತೆ ಎಚ್‍ಡಿಕೆಗೆ ಈ ಹಿಂದೆಯೇ ತಿಳಿಸಿದ್ದೆ. ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವನ್ನು ಬಯಸುತ್ತೇನೆ. ಮಾಡಬೇಕಾದ ಕೆಲಸ ತುಂಬಾ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಆಗಿದೆ. ನಾವು ಅಧಿಕಾರಕ್ಕೆ ಬಂದಿದ್ದು ದೇವರ ಇಚ್ಛೆ. ನಮ್ಮ ನಡುವಿನ ವೈರತ್ವವನ್ನು ಮರೆಯೋದು ಹೇಗೆ ಎಂದು ಎಲ್ಲರೂ ಅಂದುಕೊಳ್ಳಬಹುದು, ಆದರೆ ನಾವು ಮರೆಯಬೇಕಿರುವುದು ನಮ್ಮ ಹಗೆತನವನ್ನು ಹಾಗೂ ಹೋರಾಟವನ್ನ, ಈ ಮೊದಲು ಹಳ್ಳಿಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದರು. ಆದರೆ ಈಗ ಎಲ್ಲವನ್ನೂ ಮರೆಯಬೇಕು. ಅದನ್ನು ಬಿಟ್ಟರೇ, ಬೇರೆ ದಾರಿಯಿಲ್ಲ. ನಾನು ಉದ್ವೇಗದ ಭಾಷಣ, ವ್ಯಕ್ತಿ ನಿಂದನೆ ಮಾಡಲು ಬಂದಿಲ್ಲ. ಕೇವಲ ದೋಸ್ತಿ ಸರ್ಕಾರದ ಬಗ್ಗೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ರು.

    ಅನಿತಾ ಕುಮಾರಸ್ವಾಮಿ ಮತ ಕೇಳಲು ಬಂದಾಗ ಕೆಲವು ಗ್ರಾಮಗಳಲ್ಲಿ ವಿರೋಧ ವ್ಯಕ್ತ ಆಗಿದ್ದನ್ನು, ನಾನು ಸಹ ಗಮನಿಸಿದ್ದೇನೆ. ಅದು ಸಹಜ, ಎರಡೂ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸೋಣ. ರಾಮನಗರ ಮತ್ತು ಚನ್ನಪಟ್ಟಣ ಎರಡೂ ಸಿಎಂ ಕುಮಾರಸ್ವಾಮಿ ಕಣ್ಣುಗಳಂತೆ. ಎರಡೂ ಕ್ಷೇತ್ರಗಳು ಬೆಳೆಯಬೇಕು. ಅಲ್ಲದೇ ಗ್ರಾಮಸ್ಥರು ಆರೋಪವನ್ನು ನಾನು ಸ್ವಾಗತಿಸುತ್ತೇನೆ. ರೇಷ್ಮೆ ಸೇರಿದಂತೆ ಕೆಲವು ಬೆಳೆಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಏರುಪೇರಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮತೆಗೆದುಕೊಳ್ಳುತ್ತದೆ. ಸಿಎಂ ಎಚ್‍ಡಿಕೆ ಯಾವುದೇ ಕಾರಣಕ್ಕೂ, ತಮ್ಮ ಕ್ಷೇತ್ರಗಳನ್ನು ಕೈ ಬಿಡುವುದಿಲ್ಲ. ಯಾರು ಏನೇ ಆರೋಪ ಮಾಡಿದರೂ, ನೀವು ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದ್ರು.

    ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಜವಾಬ್ದಾರಿಯನ್ನು ಸಿಎಂ ಕುಮಾರಸ್ವಾಮಿಯವರ ಮೇಲಿದೆ. ಅವರೂ ಸಹ ತಮ್ಮ ಜವಾಬ್ದಾರಿಯನ್ನು ಎಲ್ಲಾ ನಾಯಕರ ಹೆಗಲಿಗೆ ಹಾಕಿದ್ದಾರೆ. ಕೋಮುವಾದಿ ಪಕ್ಷ ಅಧಿಕಾರದಲ್ಲಿ ಇರಬಾರದು. ಈ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ನೀವು ಬೆಂಬಲ ನೀಡಬೇಕು. ಬಿಜೆಪಿಯವರು ತಮ್ಮ 225 ಸ್ಥಾನಗಳಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ಕೊಟ್ಟಿಲ್ಲ. ಅವರ ಉದ್ದೇಶ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವುದು. ಹಾಗಾದರೆ ಮುಸ್ಲಿಂ ಬಾಂಧವರು ಎಲ್ಲಿ ಹೋಗಬೇಕು. ಹಿಂದೂ-ಮುಸ್ಲಿಂ ಒಗ್ಗಟ್ಟಾಗಿ ಇರಬೇಕು. ಹೀಗಾಗಿ ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲಾ ಒಂದಾಗಿದ್ದೇವೆ.

    ಬಿಬಿಎಂಪಿ ಚುನಾವಣೆಯಲ್ಲಿ ನಾವು ಗೆದ್ದಿದ್ದು 14 ಸ್ಥಾನ ಮಾತ್ರ. ಆಗ ಮೇಯರ್ ಸ್ಥಾನವನ್ನು ನಿಮಗೆ ಕೊಡುತ್ತೀವಿ ಎಂದು ಬಿಜೆಪಿಯವರು ಬಂದಿದ್ದರು. ಬಿಜೆಪಿಯವರ ಪ್ರಸ್ತಾಪವನ್ನು ನಾನು ಒಪ್ಪಲಿಲ್ಲ. ನನಗೂ ಬದ್ಧತೆ ಇದೆ. ಇದೇ ತಿಂಗಳ 31 ಇಲ್ಲ, ನವೆಂಬರ್ 1 ರಂದು ದೊಡ್ಡ ಮಟ್ಟದ ಬಹಿರಂಗ ಸಭೆ ಮಾಡುವ ಆಸೆಯು ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‍ಗೆ ಶಾಕ್..!

    ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‍ಗೆ ಶಾಕ್..!

    ಬೆಂಗಳೂರು: ಉಪಚುನಾವಣೆ ಹೊತ್ತಲ್ಲಿಯೇ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಐದು ದಿನಗಳ ಕಾಲ ಲಂಡನ್ ಪ್ರವಾಸ ಕೈಗೊಂಡಿದ್ದಾರೆ. ಮೂರು ತಿಂಗಳ ಹಿಂದೆಯೇ ನಿಗದಿಯಾದ ಎನ್‍ಆರ್‍ಐ ವೆಲ್ ಫೇರ್ ಸೊಸೈಟಿ ಆಫ್ ಇಂಡಿಯಾದ ಕಾರ್ಯಕ್ರಮ ಇದಾಗಿದೆ.

    ಲಂಡನ್‍ನ ಪಾರ್ಲಿಮೆಂಟ್ ಹೌಸ್‍ನಲ್ಲಿ ಹೆಚ್.ಡಿ.ದೇವೇಗೌಡ ಭಾಷಣ ಮಾಡಲಿದ್ದಾರೆ. ನಂತರ ಅಕ್ಟೋಬರ್ 28ಕ್ಕೆ ವಾಪಸ್ ಆಗಲಿದ್ದಾರೆ. ಎಚ್‍ಡಿ.ದೇವೇಗೌಡರ ಈ ಲಂಡನ್ ಪ್ರವಾಸ ಉಪಚುನಾವಣೆ ಮೇಲೂ ಪ್ರಭಾವ ಬೀರಲಿದೆ ಎನ್ನಲಾಗ್ತಿದೆ.

    ಇತ್ತ ಸಿಎಂ ಕುಮಾರಸ್ವಾಮಿ ಇವತ್ತು ಧರ್ಮಸ್ಥಕ್ಕೆ ಭೇಟಿ ನೀಡಿ, ಮಂಜುನಾಥನಿಗೆ ಪೂಜೆ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿ ಇಂದು ಒಟ್ಟು 23.5 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ನವೀಕೃತ ಕಟ್ಟಡದ ಉದ್ಘಾಟನೆ ನಡೆಸಲಿದ್ದಾರೆ. 1 ಲಕ್ಷದ 4 ಸಾವಿರದ ಚದರಡಿ ವಿಸ್ತೀರ್ಣ ಹೊಂದಿರುವ ಈ ಮ್ಯೂಸಿಯಂ ಹೈದ್ರಾಬಾದ್ ಸಾಲಾರ್‍ಜಂಗ್ ಮ್ಯೂಸಿಯಂ ಮಾದರಿಯಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗನಿಂದಲೇ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಚ್‍ಡಿಡಿ

    ಮಗನಿಂದಲೇ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಚ್‍ಡಿಡಿ

    ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಸ್ವತಃ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

    ಹೌದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಮಾಡಲು ಶಿಫಾರಸ್ಸು ಮಾಡಿತ್ತು. ಹೀಗಾಗಿ ಸಮಿತಿ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಮಾಜಿ ಪ್ರಧಾನಿಯವರ ಹೆಸರನ್ನು ಅಂತಿಮಗೊಳಿಸಿತ್ತು.

    ಬುಧವಾರ ವಿಧಾನಸೌಧದಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲ್ಲಾ ಸಾಧಕರಿಗೂ ಖುದ್ದು ಸಿಎಂ ಕುಮಾರಸ್ವಾಮಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮ ಪುತ್ರ ಸಿಎಂ ಕುಮಾರಸ್ವಾಮಿಯವರಿಂದ ಪ್ರಶಸ್ತಿ ಹಾಗೂ ಗೌರವ ಪಡೆದುಕೊಳ್ಳಲಿದ್ದಾರೆ.

    ಸಾಮಾನ್ಯವಾಗಿ ತಂದೆಯಿಂದ ಪುತ್ರನಿಗೆ ಪ್ರಶಸ್ತಿ ಸ್ವೀಕರಿಸುವುದನ್ನು ಕಾಣುತ್ತೇವೆ. ಆದರೆ ಬುಧವಾರ ನಡೆಯಲಿರುವ ಸಮಾರಂಭದಲ್ಲಿ ಪುತ್ರನ ಕೈಯಿಂದ ತಂದೆಯೊಬ್ಬರು ಪ್ರಶಸ್ತಿ ಸ್ವೀಕರಿಸುವ ಮೂಲಕ ವಿಶೇಷ ಹಾಗೂ ಅಪರೂಪದ ಸನ್ನಿವೇಶಕ್ಕೆ ವಿಧಾನಸೌದ ಸಜ್ಜಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಕಣಕ್ಕೆ- ಎಚ್‍ಡಿಡಿ

    ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಕಣಕ್ಕೆ- ಎಚ್‍ಡಿಡಿ

    ವಿಜಯಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

    ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಅಭ್ಯರ್ಥಿಯಾಗಲು ಒಪ್ಪದೇ ಇದ್ದರೆ ಕಾಂಗ್ರೆಸ್ ಜೊತೆ ಚರ್ಚೆ ಮಾಡಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುತ್ತದೆ ಅಂದ್ರು.

    ಮಂಡ್ಯ ಉಪ ಚುನಾವಣೆಯಲ್ಲಿ ಮೊಮ್ಮಕಳ್ಳನ್ನ ಕಣಕ್ಕೆ ಇಳಿಸಲ್ಲ. ಮಂಡ್ಯದಲ್ಲಿ ಸ್ಥಳಿಯರಿಗೆ ಅವಕಾಶ ಮಾಡಿ ಕೊಡಲಾಗುತ್ತದೆ. ರಾಜ್ಯದಲ್ಲಿ ನಡೆಯುವ ಐದು ಉಪ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಒಗ್ಗಟ್ಟಾಗಿ ಹೋಗಿ ಚುನಾವಣೆ ಎದುರಿಸುತ್ತೇವೆ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡುರಾವ್ ಜೊತೆ ಚರ್ಚಿಸಲಾಗಿದೆ ಅಂತ ಹೇಳಿದ್ರು.

    ಬಳ್ಳಾರಿಯಲ್ಲಿ ಕಾಂಗ್ರೆಸ್ ಜೊತೆ ಚರ್ಚಿಸಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುತ್ತದೆ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಅಂತ ಅವರು ಸ್ಪಷ್ಟಪಡಿಸಿದ್ರು.

    ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಅವರಿಂದ ತೆರವಾಗಿರುವ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದ್ದು, ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯ ಸರ್ಕಾರವನ್ನು ಕೇಂದ್ರ ಕಾಪಿ ಹೊಡೆದಿದೆ: ಎಚ್‍ಡಿಡಿ

    ರಾಜ್ಯ ಸರ್ಕಾರವನ್ನು ಕೇಂದ್ರ ಕಾಪಿ ಹೊಡೆದಿದೆ: ಎಚ್‍ಡಿಡಿ

    ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ದರವನ್ನು ಕಡಿತಗೊಳಿಸಲು ಮೂಲಕ ರಾಜ್ಯ ಸರ್ಕಾರ ಜಾರಿ ಮಾಡಿದ್ದ ನೀತಿಯನ್ನೇ ಕಾಪಿ ಹೊಡೆದಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

    ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕವನ್ನು ನೋಡಿಕೊಂಡು ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಕಾಪಿ ಹೊಡೆದಿದೆ. ಅಲ್ಲದೇ ಹಣಕಾಸು ಸಚಿವರು ರಾಜ್ಯ ಸರ್ಕಾರಗಳು ದರ ಇಳಿಕೆ ಮಾಡುವಂತೆ ಹೇಳಿದ್ದಾರೆ. ಆದರೆ ಈಗಾಗಲೇ ಕರ್ನಾಟಕ ಸರ್ಕಾರ ಬೆಲೆ ಇಳಿಕೆ ಮಾಡಿದ್ದು, ಇನ್ನೂ ಇಳಿಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಇಲ್ಲ: ಎಚ್‍ಡಿಕೆ

    ಕರ್ನಾಟಕ ಸರ್ಕಾರ ಸಾಲಮನ್ನಾ ಸೇರಿದಂತೆ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಹಾಕಿಕೊಂಡಿದೆ. ಸಾಲಮನ್ನಾ ಕುರಿತ ಸುಗ್ರಿವಾಜ್ಞೆಯನ್ನು ರಾಷ್ಟ್ರಪತಿ ಅಂಗೀಕಾರಕ್ಕೆ ಕಳುಹಿಸಲಾಗಿದೆ. ಶುಕ್ರವಾರ ಸಿಎಂ ಕುಮಾರಸ್ವಾಮಿ ಕೂಡಾ ದೆಹಲಿಯ ಬರಲಿದ್ದು, ಈ ಸಂಬಂಧ ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಿದರು.  ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ 2.50 ರೂ. ಇಳಿಕೆ

    ಇದಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಸಂಬಂಧ ದೇವೇಗೌಡರನ್ನು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾಗಿದ್ದರು. ಇವರಿಬ್ಬರು ಸುಮಾರು ಒಂದೂವರೆ ಗಂಟೆ ದೀರ್ಘಕಾಲ ಚರ್ಚೆ ನಡೆಸಿದ್ದರು. ಸಚಿವ ಸಂಪುಟಕ್ಕೆ ಒಟ್ಟು ಆರು ಖಾತೆಗಳನ್ನು ಭರ್ತಿ ಮಾಡಬೇಕಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಬೂದಿ ಮುಚ್ಚಿದ ಕೆಂಡದಂತಿದ್ದು ಎಲ್ಲರಿಗೂ ಸಮಧಾನ ಪಡಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಜೆಟ್ ನಂತ್ರ ಪೆಟ್ರೋಲ್, ಡೀಸೆಲ್ ಆದಾಯ ಭಾರೀ ಕುಸಿತ!

    ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಖಾತೆ ಹಂಚಿಕೆ ಮಾಡಿ, ಬಂಡಾಯ ಏಳುವ ಶಾಕಸರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ ವೇಣುಗೋಪಾಲ್ ಅವರಿಗೆ ದೇವೇಗೌಡರು ಸಲಹೆ ನೀಡಿದ್ದಾರೆ. ಇದೇ ವೇಳೆ ಲೋಕಸಭೆ ಸಂಬಂಧಿತ ಚರ್ಚೆ ನಡೆದಿದ್ದು, ರಾಜಸ್ಥಾನ ಹಾಗೂ ಮಧ್ಯ ಪ್ರದೇಶ ಚುನಾವಣೆಗಳಲ್ಲಿ ಬಿಎಸ್‍ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ಗೆ ಬೆಂಬಲ ನೀಡದಿರುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು, ಅತಿ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ಸಿಗೋ ನಗರಗಳು

    ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‍ರೊಂದಿಗೆ ಮಾತನಾಡಿದ್ದೇನೆ. ನಮ್ಮ ಭೇಟಿ ಕೇವಲ ಸೌಜನ್ಯಯುತವಾದದ್ದು. ವೇಣುಗೋಪಾಲ್‍ರವರು ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಪ್ರಮುಖ ನಾಯಕರ ಜೊತೆ ಮಾತನಾಡಿ ತೀರ್ಮಾನ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

    ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಎಸ್‍ಪಿ ರಾಜ್ಯದಲ್ಲಿ ಒಂದಾಗಿವೆ. ಸರ್ಕಾರದಲ್ಲಿ ಪ್ರಮುಖ ಖಾತೆಯೊಂದನ್ನ ಬಿಎಸ್‍ಪಿಗೆ ನೀಡಿದೆ. ಇದಕ್ಕೆ ಕಾಂಗ್ರೆಸ್ ಕೂಡಾ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಮಾಯಾವತಿಯವರ ಹೇಳಿಕೆ ಆಧರಿಸಿ ಮಹಾಮೈತ್ರಿಗೆ ಹಿನ್ನೆಡೆ ಎಂದು ಭಾವಿಸುವುದು ತಪ್ಪು. ರಾಜಕೀಯದಲ್ಲಿ ಯಾವುದು ಅಂತಿಮವಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪತ್ನಿಯನ್ನ ಕೂಸುಮರಿ ರೀತಿ ಹೊತ್ತು ನಡೆದ ಭೂತಾನ್ ಮಾಜಿ ಪ್ರಧಾನಿ -ಫೋಟೋ ವೈರಲ್

    ಪತ್ನಿಯನ್ನ ಕೂಸುಮರಿ ರೀತಿ ಹೊತ್ತು ನಡೆದ ಭೂತಾನ್ ಮಾಜಿ ಪ್ರಧಾನಿ -ಫೋಟೋ ವೈರಲ್

    ನವದೆಹಲಿ: ಭೂತಾನ್ ಮಾಜಿ ಪ್ರಧಾನಿ ತಮ್ಮ ಪತ್ನಿ ಟಾಶಿ ಡೋಮ ಅವರನ್ನು ಕೂಸುಮರಿ ಮಾಡಿ ಬೆನ್ನಮೇಲೆ ಹೊತ್ತು ನಡೆದಿರುವ ಫೋಟೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗೆ ಕಾರಣವಾಗಿದೆ.

    ಅಂದಹಾಗೇ ಮಾಜಿ ಪ್ರಧಾನಿ ಶೆರಿಂಗ್ ಟೋಬ್ಗೆ ತಮ್ಮ ಪತ್ನಿ ಜೊತೆ ಭೂತಾನ್ ಪ್ರದೇಶವೊಂದಕ್ಕೆ ಭೇಟಿ ನೀಡಿದ್ದ ವೇಳೆ ಘಟನೆ ನಡೆದ್ದು, ಈ ವೇಳೆ ಬೆಟ್ಟವೊಂದರ ರಸ್ತೆಯಲ್ಲಿ ಕೆಸರು ತುಂಬಿದ್ದರಿಂದ ಪತ್ನಿಯ ಕಾಲು ಕೊಳಕಾಗದಿರಲಿ ಎಂಬ ಉದ್ದೇಶದಿಂದ ಪತ್ನಿಯನ್ನು ಹೊತ್ತು ಸಾಗಿದ್ದಾರೆ.

    ಈ ಫೋಟೋವನ್ನು ಅವರೇ ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸ್ತ್ರೀ ನಿಷ್ಠ ಸೇವೆಗಾಗಿ ಜಗತ್ ಪ್ರಸಿದ್ಧಿಯಾದ ಇಂಗ್ಲೆಂಡ್ ಸರ್ ವಾಲ್ಟರ್ ರ‍್ಯಾಲೆ ಮಾಡಿದಂತಹ ತ್ಯಾಗವನ್ನೇನೂ ನಾನು ಮಾಡಿಲ್ಲ. ಅದರೂ, ಒಬ್ಬ ಪುರುಷ ತನ್ನ ಸಂಗಾತಿಗಾಗಿ ಏನನ್ನು ಮಾಡಬಹುದೋ ಅದನ್ನೇ ಮಾಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಟೋಬ್ಗೆ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ಬಾಹುಬಲಿ ಚಿತ್ರದಲ್ಲಿ ನಟ ಪ್ರಭಾಸ್ ಸ್ಕ್ರೀನ್ ಮೇಲೆ ಪತ್ನಿ ದೇವಸೇನಾ ಅನುಷ್ಕಾರ ತಮ್ಮ ಭುಜದ ಮೇಲೆ ನಡೆಸಿದ ಘಟನೆಯನ್ನು ನೆನಪು ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಇಲ್ಲಿ ಗಂಡನನ್ನ ಗುರಿ ಮಾಡಲಾಗಿದೆ ಎಂದು ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದರೆ ಕೆಲವರು ಪುರುಷನ ನಮ್ರತೆ ಎಂದು ಬರೆದು ಕೊಂಡಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್-ಜೆಡಿಎಸ್ ಮಾರಾಮಾರಿ- ಮೂವರು ಗಂಭೀರ

    ಕಾಂಗ್ರೆಸ್-ಜೆಡಿಎಸ್ ಮಾರಾಮಾರಿ- ಮೂವರು ಗಂಭೀರ

    ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇ ಗೌಡ ಅವರ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.

    ಹಾಸನದ ಚನ್ನರಾಯಪಟ್ಟಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿದರೂ ಕಾರ್ಯಕರ್ತರ ಮುನಿಸು ಮುಗಿದಿಲ್ಲ. ಪಟ್ಟಣದ 17ನೇ ವಾರ್ಡ್ ನಲ್ಲಿ ಶನಿವಾರ ರಾತ್ರಿ ಎರಡೂ ಪಕ್ಷದ ಕಾರ್ಯಕರ್ತರು ಕ್ಲುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

    ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಖಾಸಿಂ, ನಸ್ರುಲ್ಲಾ ಮತ್ತು ಮುಬಾರಕ್ ಅವರನ್ನು ಕೂಡಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

    ಘಟನೆಯಿಂದಾಗಿ ಬಾಗೂರು ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿರ್ಮಾಣವಾಗಿದ್ದು, ಚನ್ನರಾಯಪಟ್ಟಣ ನಗರ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಕಲೇಶಪುರದಲ್ಲಿ ಹಾನಿಯಾದ ಪ್ರದೇಶಗಳಿಗೆ ಎಚ್‍ಡಿಡಿ ಭೇಟಿ

    ಸಕಲೇಶಪುರದಲ್ಲಿ ಹಾನಿಯಾದ ಪ್ರದೇಶಗಳಿಗೆ ಎಚ್‍ಡಿಡಿ ಭೇಟಿ

    – ಸಭೆ ನಡೆಸಿ ಮಾಹಿತಿ ಪಡೆದು ಪ್ರಧಾನಿ ಭೇಟಿ

    ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ತಾಲೂಕಿನ ಮಾಗೇರಿ, ಹಿಜ್ಜನಹಳ್ಳಿ, ಮಾಗೇರಿ ಮೊದಲಾದ ಗ್ರಾಮಗಳಿಗೆ ಭೇಟಿ ನೀಡಿದ ಗೌಡರು, ಭೂ ಕುಸಿತದಿಂದ ಹಾನಿಯಾಗಿರುವ ಸಕಲೇಶಪುರ-ಸೋಮವಾರಪೇಟೆ ರಸ್ತೆ, ಮಣ್ಣುಪಾಲಾಗಿರುವ ನೂರಾರು ಎಕರೆ ಕಾಫಿ ತೋಟ ಹಾಗೂ ಬಿರುಕು ಬಿಟ್ಟಿರುವ ಮನೆಗಳು ಮತ್ತು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭೇಟಿ ಮಾಡಿ ನೋವು-ಸಂಕಷ್ಟ ಆಲಿಸಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು, ಜಿಲ್ಲೆಯಲ್ಲಿ ಬೆಳೆ ಸೇರಿದಂತೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಇದೇ ತಿಂಗಳ 25 ಮತ್ತು 26 ರಂದು ಜಿಲ್ಲೆಯಲ್ಲೇ ಉಳಿದು ನಷ್ಟದ ಎಲ್ಲಾ ಮಾಹಿತಿ ಪಡೆಯುವೆ. ಆಗಸ್ಟ್ 27 ರಂದು ಸಾಧ್ಯವಾದರೆ ಅಧಿಕಾರಿಗಳ ಸಭೆ ನಡೆಸಿ, ಎಲ್ಲಾ ಮಾಹಿತಿ ಪಡೆದ ನಂತರ ಪ್ರಧಾನಿ ಅವರನ್ನೂ ಭೇಟಿಯಾಗುವುದಾಗಿ ಹೇಳಿದರು.

    ಸ್ಥಳೀಯ ಸಂಸ್ಥೆ ಚುನಾವಣೆ ನೆಪವೊಡ್ಡಿ ಸಂತ್ರಸ್ಥರ ಪರಿಹಾರ ಕಾರ್ಯಕ್ಕೆ ಯಾರೂ ಹಿಂದೇಟು ಹಾಕಬಾರದು. ಈ ಸಂಬಂಧ ನಾನು ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಮಾತನಾಡುವೆ. ಇದೇ ರೀತಿ ಕೊಡಗಿನಲ್ಲೂ ಪರಿಹಾರ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು. ಮೊದಲು ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಈಗಾಗಲೇ ಸಿಎಂ ಹಾಗೂ ಅನೇಕ ಸಚಿವರು ಕೊಡಗಿಗೆ ಭೇಟಿ ನೀಡಿದ್ದಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇವರ ಮನೆಯಲ್ಲಿ ಫೋಟೋ ಇಟ್ಟು ಅಟಲ್ ಜೀ ಪೂಜಿಸುತ್ತಿದ್ದಾರೆ ದಾವಣಗೆರೆ ಅಭಿಮಾನಿ

    ದೇವರ ಮನೆಯಲ್ಲಿ ಫೋಟೋ ಇಟ್ಟು ಅಟಲ್ ಜೀ ಪೂಜಿಸುತ್ತಿದ್ದಾರೆ ದಾವಣಗೆರೆ ಅಭಿಮಾನಿ

    ದಾವಣಗೆರೆ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾದ ಹಿನ್ನೆಲೆಯಲ್ಲಿ ದಾವಣಗೆರೆಯ ಅಭಿಮಾನಿಯೊಬ್ಬ ದೇವರ ಮನೆಯಲ್ಲಿ ವಾಜಪೇಯಿ ಅವರ ಫೋಟೋ ಇಟ್ಟು ಪೂಜೆ ಸಲ್ಲಿಸಿದ್ರು.

    ದಾವಣಗೆರೆಯ ಬಿಜೆಪಿ ಕಾರ್ಯಕರ್ತ ಕಡ್ಲೆಬಾಳು ಧನಂಜಯ ತಮ್ಮ ಮನೆಯಲ್ಲಿ ಪೂಜೆ ಮಾಡುತ್ತಿದ್ದು, ಚಿಕ್ಕಂದಿನಿಂದಲೂ ವಾಜಪೇಯಿ ಜೀ ಅವರಿಗೆ ಅಪ್ಪಟ ಅಭಿಮಾನಿಯಾಗಿದ್ದಾರೆ. ಇದೀಗ ಅವರ ಸಾವಿನ ಸುದ್ದಿ ಕೇಳಿ ಬಹಳ ದುಃಖ ಪಟ್ಟಿದ್ದಾರೆ. ಇದರಿಂದ ವಾಜಪೇಯಿಯವರ ಫೋಟೋವನ್ನು ದೇವರ ಫೋಟೋಗಳ ಜೊತೆಗೆ ಇಟ್ಟು ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ವಾಜಪೇಯಿ  ಅವರನ್ನು ದೇವರಿಗೆ ಹೋಲಿಸಿ ಪೂಜೆ ಸಲ್ಲಿಸಿ ಅಭಿಮಾನಿಯೊಬ್ಬ ಕೃತಜ್ಞತೆ ಮೆರೆದಿದ್ದಾರೆ.

    ಭದ್ರಾವತಿಗೆ ಬಂದಿದ್ದರು ಅಟಲ್ ಜೀ:
    ಇಂದಿರಾ ಹತ್ಯೆ ಬಳಿಕ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದ್ದ ಸಂದರ್ಭದಲ್ಲಿ ವಾಜಪೇಯಿ ಸೋಲು ಅರಗಿಸಿಕೊಳ್ಳದ ಭದ್ರಾವತಿಯ ಲಕ್ಷ್ಮಿನಾರಾಯಣ ಆತ್ಮಹತ್ಯೆ ಮಾಡಿಕೊಂಡಿದ್ರು. ವಿಚಾರ ತಿಳಿದ ಕೂಡಲೇ ವಾಜಪೇಯಿ ಭದ್ರಾವತಿಗೆ ಬಂದು, ಲಕ್ಷ್ಮಿನಾರಾಯಣ ಕುಟುಂಬಕ್ಕೆ ಆರ್ಥಿಕ ನೆರವು ನೀಡಿ, ತಂಗಿ ತಮ್ಮನ ಓದಿಗೂ ನೆರವು ನೀಡಿದ್ದರು. ಅಲ್ಲದೇ ರಾಜ್ಯ ಬಿಜೆಪಿ ನಾಯಕರ ಕಣ್ಣೀರು ಕಂಡು ವಾಜಪೇಯಿ ನ ದೈನ್ಯಂ ನ ಪಲಾಯನಂ ಎಂದಿದ್ದರು.

    ದೇಶವೇ ಕಣ್ಣೀರು:
    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ವಿಧಿವಶರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ತಿಂಗಳ ಹಿಂದೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ನಂತರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟಿನಲ್ಲಿ 9 ವಾರ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅಟಲ್ ಜಿ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು.

    ಯುಮುನಾ ನದಿ ದಂಡೆಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದವರೆಗೆ ಅಂತಿಮ ಯಾತ್ರೆ ನಡೆಯಲಿದ್ದು, ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಇಂದು ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕವಿರುವ ವಿಜಯ್‍ಘಾಟ್ ಮತ್ತು ಶಾಂತಿವನದ ಪಕ್ಕದಲ್ಲೇ ಅಟಲ್ ಸ್ಮಾರಕ ನಿರ್ಮಾಣಕ್ಕೆ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಜಮೀನು ಮೀಸಲಿರಿಸಿದೆ. ಒಟ್ಟಿನಲ್ಲಿ ಅಜಾತ ಶತ್ರುವಿನ ನಿಧನಕ್ಕೆ ಇಡೀ ದೇಶವೇ ಕಣ್ಣೀರು ಹಾಕುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv