Tag: ಮಾಜಿ ಲವ್ವರ್

  • ತನ್ನ ಪ್ರೀತಿ ಸಾಬೀತುಪಡಿಸಲು ಮಾಜಿ ಗೆಳತಿಯ ಕೊಂದ- ಪೊದೆಯಲ್ಲಿ ಅವಿತುಕೊಂಡ್ರೂ ಬಿಡ್ಲಿಲ್ಲ

    ತನ್ನ ಪ್ರೀತಿ ಸಾಬೀತುಪಡಿಸಲು ಮಾಜಿ ಗೆಳತಿಯ ಕೊಂದ- ಪೊದೆಯಲ್ಲಿ ಅವಿತುಕೊಂಡ್ರೂ ಬಿಡ್ಲಿಲ್ಲ

    – ಸ್ನೇಹಿತನಿಗೆ ಫೋನ್ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ಳು
    – ಕುಡಿದ ಮತ್ತಿನಲ್ಲಿ ತಮಾಷೆ ಮಾಡಿದ್ದಾಳೆ ಅಂದ್ಕೊಂಡ

    ಮಾಸ್ಕೋ: ಯುವಕನೊಬ್ಬ ಪ್ರಿಯತಮೆಗೆ ತನ್ನ ಪ್ರೀತಿಯನ್ನು ಸಾಬೀತುಪಡಿಸುವ ಸಲುವಾಗಿ ಮಾಜಿ ಗೆಳತಿಯನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ರಷ್ಯಾದಲ್ಲಿ ನಡೆದಿದೆ.

    ನೋವೊಸಿಬಿರ್ಸ್ಕ್ ಪ್ರದೇಶದ ಸುಜುನ್ ಗ್ರಾಮದ ಬಳಿ ಈ ಹತ್ಯೆ ನಡೆದಿದೆ. ಅನಸ್ತಾಸಿಯಾ ಪೊಸ್ಪೆಲೋವಾ ಕೊಲೆಯಾದ ಮಾಜಿ ಗೆಳತಿ. ಆರೋಪಿ ಅಲೆಕ್ಸೆ ಪೆಟ್ರೋವ್ (20) ತನ್ನ ಪ್ರೀತಿಯನ್ನು ಪ್ರಿಯತಮೆಯ ಮುಂದೆ ಸಾಬೀತು ಪಡಿಸಲು ಕಾಡಿನಲ್ಲಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿ ಪೆಟ್ರೋವ್ ಮತ್ತು ಮೃತ ಅನಸ್ತಾಸಿಯಾ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇಬ್ಬರು ಬ್ರೇಕಪ್ ಮಾಡಿಕೊಂಡಿದ್ದರು. ಇದಾದ ಬಳಿಕ ಆರೋಪಿ ಕಾರ್ಪೋವಾಳನ್ನು ಪ್ರೀತಿಸುತ್ತಿದ್ದನು. ಜೂನ್ 14 ರಂದು ಈ ಜೋಡಿ ಅನಸ್ತಾಸಿಯಾಳನ್ನು ಪಾರ್ಟಿಗೆ ಬರುವಂತೆ ಕರೆದಿದ್ದಾರೆ. ಅದಕ್ಕೆ ಅನಸ್ತಾಸಿಯಾ ಕೂಡ ಒಪ್ಪಿದ್ದು, ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಎಲ್ಲರೂ ಮದ್ಯಪಾನ ಮಾಡಲು ಪ್ರಾರಂಭಿಸಿದರು.

    ಇದೇ ವೇಳೆ ಆರೋಪಿ ಪೆಟ್ರೋವ್ ತನ್ನ ಜೇಬಿನಿಂದ ಚಾಕುವನ್ನು ತೆಗೆದು ಅನಸ್ತಾಸಿಯಾಳ ಕುತ್ತಿಗೆಗೆ ಹಲವಾರು ಬಾರಿ ಇರಿದಿದ್ದಾನೆ. ಇದರಿಂದ ಭಯಭೀತಳಾದ ಅನಸ್ತಾಸಿಯಾ ಆರೋಪಿ ಪೆಟ್ರೋವ್‍ನನ್ನು ತಳ್ಳಿ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. ಆದರೆ ಚಾಕುವಿನಿಂದ ಇರಿದಿದ್ದರಿಂದ ಗಾಯಗಳಾಗಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಆಕೆ ಕಾಡಿನಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಆಗ ಅನಸ್ತಾಸಿಯಾ ಸಹಾಯಕ್ಕಾಗಿ ತನ್ನ ಸ್ನೇಹಿತನಿಗೆ ಫೋನ್ ಮಾಡಿದ್ದು, ನನಗೆ ಸಹಾಯ ಮಾಡು, ನಾನು ಕಾಡಿನಲ್ಲಿದ್ದೇನೆ. ನನ್ನ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ. ಇವರು ನನ್ನನ್ನು ಕೊಲೆ ಮಾಡುತ್ತಾರೆ. ದಯವಿಟ್ಟು ನನಗೆ ಸಹಾಯ ಮಾಡು ಎಂದು ಅಂಗಲಾಚಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕುಡಿದ ಮತ್ತಿನಲ್ಲಿ ತಮಾಷೆ ಮಾಡುತ್ತಿದ್ದಾಳೆ ಎಂದು ಸ್ನೇಹಿತ ನಂಬಲಿಲ್ಲ. ಕೊನೆಗೆ ಅನಸ್ತಾಸಿಯಾ ಕಾಡಿನಲ್ಲಿ ಪೊದೆಯೊಳಗೆ ಅಡಗಿಕೊಂಡಳು. ಆದರೆ ಆರೋಪಿ ಪೆಟ್ರೋವ್ ಆಕೆಯನ್ನ ಪತ್ತೆ ಮಾಡಿ ಅವಳ ಕುತ್ತಿಗೆಯ ಮೇಲೆ ಕಾಲಿಟ್ಟು, ಚಾಕುವಿನಿಂದ ಎದೆಗೆ ಚುಚ್ಚಿ, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆರೋಪಿ ಮತ್ತು ಆಕೆಯ ಗೆಳತಿ ಕಾರ್ಪೋವಾ ಶವವನ್ನು ಪೊದೆಗಳಲ್ಲಿ ಅಡಗಿಸಿ ವಾಪಸ್ ಆಗಿದ್ದಾರೆ. ನಂತರ ಅವರೇ ಅನಸ್ತಾಸಿಯಾ ಕಾಣೆಯಾಗಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

    ತಮ್ಮ ಮೇಲೆ ಅನುಮಾನ ಬರಬಾರದೆಂದು ಪೊಲೀಸರ ಜೊತೆ ಅನಸ್ತಾಸಿಯಾಗಾಗಿ ಹುಡುಕಾಡಿದ್ದಾರೆ. ಇತ್ತೀಚೆಗೆ ನಂತರ ಗಾಯಗೊಂಡ ಮೃತಪಟ್ಟಿರುವ ಯುವತಿಯ ಶವ ಕಾಡಿನ ಪೊದೆಯಲ್ಲಿ ಪತ್ತೆಯಾಗಿದೆ. ಪೊಲೀಸರು ಅನುಮಾನದ ಮೇರೆಗೆ ಇಬ್ಬರನ್ನು ವಶಪಡಿಸಿಕೊಂಡು ವಿಚಾರಣೆ ಮಾಡಿದ್ದಾರೆ. ಆಗ ಇಬ್ಬರು ಈ ಕೊಲೆಯನ್ನು ತಾವೇ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

    ಆರೋಪಿ ಕಾರ್ಪೋವಾ, ಅನಸ್ತಾಸಿಯಾ ಮತ್ತು ಪೆಟ್ರೋವ್ ಸಂಬಂಧದ ಬಗ್ಗೆ ಅಸೂಯೆ ಪಟ್ಟಿದ್ದಳು. ಇದೇ ವಿಚಾರಕ್ಕೆ ಪೆಟ್ರೋವ್ ಜೊತೆ ಜಗಳ ಮಾಡುತ್ತಿದ್ದಳು. ಅಲ್ಲದೇ ಪೆಟ್ರೋವ್‍ಗೆ ತನ್ನ ಪ್ರೀತಿಯನ್ನು ಸಾಬೀತುಪಡಿಸಲು ಮತ್ತು ಈ ಜಗಳವನ್ನು ನಿಲ್ಲಿಸಲು ಅನಸ್ತಾಸಿಯಾಳನ್ನು ಕೊಲೆ ಮಾಡಬೇಕು ಎಂದು ಹೇಳಿದ್ದಾಳೆ. ಆಗ ಆರೋಪಿ ತನ್ನ ಪ್ರೀತಿಯನ್ನು ಸಾಬೀತು ಮಾಡಲು ಮಾಜಿ ಗೆಳತಿಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸದ್ಯಕ್ಕೆ ಆರೋಪಿ ಪೆಟ್ರೋವ್ ಮತ್ತು ಕಾರ್ಪೋವಾ ವಿರುದ್ಧ ಕ್ರಿಮಿನಲ್ ಕ್ರೇಸ್ ದಾಖಲಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ.

  • ಯುವತಿಯ ಬಟ್ಟೆ ಬಿಚ್ಚಿ ಖಾರದ ಪುಡಿ ಹಾಕಿದ ಮೂವರು ಮಹಿಳೆಯರು

    ಯುವತಿಯ ಬಟ್ಟೆ ಬಿಚ್ಚಿ ಖಾರದ ಪುಡಿ ಹಾಕಿದ ಮೂವರು ಮಹಿಳೆಯರು

    – ನೋವಿನಿಂದ ಅಳ್ತಿದ್ದಾಗ ವಿಡಿಯೋ ಮಾಡಿದ್ರು
    – ಮಾಜಿ ಪ್ರಿಯಕರನ ಜೊತೆ ಮತ್ತೆ ಮಾತಾಡಿದ್ದೆ ತಪ್ಪಾಯ್ತು

    ಗಾಂಧಿನಗರ: ಮೂವರು ಮಹಿಳೆಯರು ಯುವತಿಯೊಬ್ಬಳ ಖಾಸಗಿ ಭಾಗಕ್ಕೆ ಮೆಣಸಿನ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದಿದೆ.

    ಅಹಮದಾಬಾದ್‍ನ ವಡಾಜ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಸಂತ್ರಸ್ತೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾಳೆ. ಮೂವರು ಮಹಿಳೆಯರು ತನ್ನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬರು ನನ್ನ ಮಾಜಿ ಪ್ರಿಯತಮನ ಪತ್ನಿ ಸೇರಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಪೊಲೀಸರು ಈ ಕುರಿತು ಎಫ್‍ಐಆರ್ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಸಂತ್ರಸ್ತೆ ಸುಮಾರು ನಾಲ್ಕು ವರ್ಷಗಳ ಹಿಂದೆ ಆರೋಪಿಗಳಲ್ಲಿ ಮಹಿಳೆಯೊಬ್ಬಳ ಪತಿಯೊಂದಿಗೆ ಸಂಬಂಧ ಹೊಂದಿದ್ದಳು. ಜಾನು ಗೋಸ್ವಾಮಿಯ ಪತಿ ಗಿರೀಶ್ ಗೋಸ್ವಾಮಿಯ ಅಂಗಡಿಯಲ್ಲಿ ಸಂತ್ರಸ್ತೆ ಕೆಲಸ ಮಾಡುತ್ತಿದ್ದಳು. ಈ ವೇಳೆ ಯುವತಿ ಮತ್ತು ಗೋಸ್ವಾಮಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ವರ್ಷಗಳು ಕಾಲ ಸಂಬಂಧದಲ್ಲಿದ್ದರು. ನಂತರ ಯುವತಿ ಕೆಲಸ ಬಿಟ್ಟು ವಸ್ತ್ರಪುರದ ಮತ್ತೊಂದು ಗಾರ್ಮೆಂಟ್ ಅಂಗಡಿಯಲ್ಲಿ ಕೆಲಸಕ್ಕೆ ಸೇರಿದ್ದಳು.

    ಈ ಮಧ್ಯೆ ಗಿರೀಶ್‍ಗೆ ಜಾನು ಜೊತೆ ಮದುವೆಯಾಗಿತ್ತು. ಗಿರೀಶ್ ಎರಡು ತಿಂಗಳ ಹಿಂದೆ ಯುವತಿಯನ್ನು ಮತ್ತೆ ಸಂಪರ್ಕಿಸಿ ಇಬ್ಬರು ಮಾತನಾಡಲು ಶುರು ಮಾಡಿದ್ದರು. ಇದರ ಬಗ್ಗೆ ಗಿರೀಶ್ ಪತ್ನಿ ಜಾನುಗೆ ಗೊತ್ತಾಗಿದೆ. ಆಗ ಯುವತಿಗೆ ಪತಿಯ ಜೊತೆ ಮಾತನಾಡಬಾರದು ಎಂದು ಬೆದರಿಕೆ ಹಾಕಲು ಪ್ರಾರಂಭಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

    ನಾನು ವಡಾಜ್ ನಿವಾಸದಿಂದ ಪ್ರಗತಿನಗರಕ್ಕೆ ಹೋಗುತ್ತಿದ್ದೆ. ಆಗ ಸ್ಕೂಟಿಯಲ್ಲಿ ಜಾನು ಮತ್ತು ಆಕೆಯ ಸ್ನೇಹಿತೆ ನನ್ನನ್ನು ತಡೆದರು. ನಂತರ ನನ್ನನ್ನು ಅವರ ಜೊತೆ ಬಲವಂತವಾಗಿ ಇನ್ನೊಬ್ಬ ಮಹಿಳೆಯ ಮನೆಗೆ ಕರೆದುಕೊಂಡು ಹೋದರು. ಅಲ್ಲಿ ನನ್ನನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ನನ್ನ ಬಟ್ಟೆಗಳನ್ನು ಬಿಚ್ಚಿ ಮೆಣಸಿನ ಪುಡಿಯನ್ನು ನನ್ನ ಖಾಸಗಿ ಭಾಗಕ್ಕೆ ಹಾಕಿದರು. ನಾನು ನೋವಿನಿಂದ ಅಳುತ್ತಿದ್ದಾಗ ಮೂವರು ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    ಅಷ್ಟೇ ಅಲ್ಲದೇ ಗಿರೀಶ್‍ನನ್ನು ಮತ್ತೆ ಭೇಟಿಯಾದರೆ ಮುಖಕ್ಕೆ ಆಸಿಡ್ ಹಾಕುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಸದ್ಯಕ್ಕೆ ಪೊಲೀಸರು ಆರೋಪಿಗಳ ವಿರುದ್ಧ ಅಪಹರಣ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

  • ಡಾಕ್ಟರ್ ಯುವತಿಯ ಖಾಸಗಿ ಚಿತ್ರಗಳನ್ನು ವಾಟ್ಸಪ್‍ನಲ್ಲಿ ಹರಿಬಿಟ್ಟ ಮಾಜಿ ಲವ್ವರ್

    ಡಾಕ್ಟರ್ ಯುವತಿಯ ಖಾಸಗಿ ಚಿತ್ರಗಳನ್ನು ವಾಟ್ಸಪ್‍ನಲ್ಲಿ ಹರಿಬಿಟ್ಟ ಮಾಜಿ ಲವ್ವರ್

    ಮುಂಬೈ: ಬೇರೋಬ್ಬನ ಜೊತೆಗೆ ವಿವಾಹವಾಗಿದ್ದ ಮಾಜಿ ಪ್ರೇಯಸಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

    ಅಂದೇರಿನ ನಗರದ ನಿವಾಸಿ 30 ವರ್ಷದ ಯುವಕ ಬಂಧಿತ ಆರೋಪಿ. ಆರೋಪಿ ಯುವಕನನ್ನು ತಿಲಕ್‍ನಗರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

    ಏನಿದು ಪ್ರಕರಣ?:
    ಸಂತ್ರಸ್ತ ಯುವತಿ ವೈದ್ಯಕೀಯ ವ್ಯಾಸಂಗಕ್ಕೆಂದು ಮಧ್ಯಪ್ರದೇಶದ ಇಂದೋರ್ ನಿಂದ ಮುಂಬೈಗೆ ಬಂದಿದ್ದಳು. ಸ್ಥಳೀಯ ಆಸ್ಪತ್ರೆಯೊ0ದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಚಿಕಿತ್ಸೆ ಪಡೆಯಲು ಬಂದಿದ್ದ ಸಂಬಂಧಿ ಯುವಕನೊಬ್ಬ ಪರಿಚಯವಾಗಿದ್ದಾನೆ. ಈ ವೇಳೆ ಮೊಬೈಲ್ ನಂಬರ್ ಪಡೆದು ಇಬ್ಬರು ಸಂಪರ್ಕ ಹೊಂದಿದ್ದಾರೆ.

    ಕೆಲವು ದಿನಗಳ ನಂತರ ಇಬ್ಬರೂ ಆತ್ಮೀಯವಾಗಿ ಬೆರೆತು, ವಾಟ್ಸಪ್ ಹಾಗೂ ಫೋನ್ ಚಾಟಿಂಗ್ ಮಾಡಿದ್ದಾರೆ. ಇದನ್ನೇ ಉಪಯೋಗ ಪಡೆದುಕೊಂಡ ಯುವಕ 2016ರಲ್ಲಿ ಪ್ರೀತಿಯ ಪ್ರಸ್ತಾಪ ಮಾಡಿದ್ದು ಯುವತಿ ನಿರಾಕರಿಸಿದ್ದಾಳೆ. ಆದರೂ ಯುವತಿ ಯುವಕನ ಸಂಪರ್ಕದಲ್ಲಿದ್ದಳು. ಇದಾದ ಬಳಿಕ ಇಬ್ಬರ ನಡುವೆ ದೈಹಿಕ ಸಂಪರ್ಕ ಏರ್ಪಟ್ಟಿದ್ದು, ಆಗ ಆಕೆಗೆ ತಿಳಿಯದಂತೆ ಯುವಕ ಕೆಲವು ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.

    ಕ್ಲಿಕ್ಕಿಸಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ ಆತನ ನಡವಳಿಯಿಂದ ಬೇಸತ್ತ ಯುವತಿ ದೂರ ಉಳಿದಿದ್ದಾಳೆ. ಕಳೆದ ವರ್ಷ ಫೆಬ್ರುವರಿಯಲ್ಲಿ ಬೇರೋಬ್ಬರ ಜೊತೆಗೆ ಯುವತಿ ವಿವಾಹವಾಗಿದ್ದಾಳೆ. ಈ ಕುರಿತು ಮಾಹಿತಿ ಗೊತ್ತಾಗುತ್ತಿದ್ದಂತೆ ಯುವತಿಯ ಮಾಜಿ ಲವ್ವರ್ ಕೋಪಗೊಂಡಿದ್ದಾನೆ. ಯುವತಿಯು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ಸಹೋದ್ಯೋಗಿಗಳಿಗೆ ಆಕೆಯ ಜೊತೆಗಿದ್ದ ಖಾಸಗಿ ಚಿತ್ರಗಳನ್ನು ಕಳುಹಿಸಿದ್ದಾನೆ. ಈ ಕುರಿತು ಯುವತಿ ತಿಲಕ್‍ನಗರ ಠಾಣೆಯಲ್ಲಿ ದೂರು ನೀಡಿದ್ದಳು. ಪ್ರಕರಣದ ಕುರಿತು ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv