Tag: ಮಾಜಿ ಶಾಸಕ ತಿಪ್ಪೇಸ್ವಾಮಿ

  • ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಅಂದ್ರೆ ಜನ ನಂಬಲ್ಲ : ತಿಪ್ಪೇಸ್ವಾಮಿ ಟಾಂಗ್

    ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಅಂದ್ರೆ ಜನ ನಂಬಲ್ಲ : ತಿಪ್ಪೇಸ್ವಾಮಿ ಟಾಂಗ್

    ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೈ ತಪ್ಪಿಸಿದ್ದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು. ಆದರೆ ಇಂದು ಜನಾರ್ದನ ರೆಡ್ಡಿ ಅವರಿಗೂ ಬಿಜೆಪಿಗೆ ಸಂಬಂಧವಿಲ್ಲ ಎಂದರೆ ಜನ ನಂಬಲ್ಲ ಎಂದು ಮಾಜಿ ಶಾಸಕ ತಿಪ್ಪೇಸ್ವಾಮಿ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಭಾಗಿಯಾಗಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಆದರೆ ಶಾಸಕನಾಗಿದ್ದ ನನಗೆ ಮೊಳಕಾಲ್ಮೂರು ಟಿಕೆಟ್ ನೀಡದೆ ಮೋಸ ಮಾಡಿದ್ದರು. ಬಳಿಕ ಶ್ರೀರಾಮುಲು ಪರ ಬಿಜೆಪಿ ನಾಯಕರು ಹಾಗು ಜನಾರ್ದನರೆಡ್ಡಿ ಸಾಮೂಹಿಕವಾಗಿ ನನ್ನ ವಿರುದ್ಧ ಚುನಾವಣಾ ಪ್ರಚಾರ ನಡೆಸಿ ಗೆದ್ದರು. ಆದರೆ ಇಂದು ಬಿಜೆಪಿಗೂ ರೆಡ್ಡಿ ಅವರಿಗೂ ಸಂಬಂಧವಿಲ್ಲ ಎಂದು ಹೇಳುತ್ತಾರೆ. ಆದರೆ ಇದನ್ನು ರಾಜ್ಯದ ಜನರು ನಂಬಲ್ಲ ಎಂದರು.

    ಇದೇ ವೇಳೆ ಶ್ರೀರಾಮುಲು ಅವರ ವಿರುದ್ಧ ವಾಗ್ದಾಳಿ ನಡೆಸಿದ ತಿಪ್ಪೇಸ್ವಾಮಿ ಅವರು, ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಶ್ರೀರಾಮುಲುನ ಗೆಲ್ಲಿಸಿದ್ದಾರೆ. ಶ್ರೀರಾಮುಲು ಮೂಲತಃ ಆಂಧ್ರಪ್ರದೇಶ ರಾಜ್ಯದವರು. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಇಂದು ಚುನಾವಣೆಯಲ್ಲಿ ಜಯ ಪಡೆದಿದ್ದಾರೆ. ಈ ಮೂಲಕ ರಾಜ್ಯದ ನಾಯಕ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ನನಗೆ ಟಿಕೆಟ್ ನೀಡಿ ವಂಚನೆ ಮಾಡಿ ಮೋಸ ಮಾಡಿದ್ದ ಘಟನೆ ರಾಜ್ಯ ನಾಯಕರಿಗೆ ಗೊತ್ತಿರಲಿಲ್ವಾ ಎಂದು ಪ್ರಶ್ನೆ ಮಾಡುವ ಮೂಲಕ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv