Tag: ಮಾಜಿ ಶಾಸಕ

  • ಉಡುಪಿ ಡಿಸಿ ವಿರುದ್ಧ ಮಾಜಿ ಶಾಸಕ ಮಧ್ವರಾಜ್ ಸಿಎಂಗೆ ದೂರು

    ಉಡುಪಿ ಡಿಸಿ ವಿರುದ್ಧ ಮಾಜಿ ಶಾಸಕ ಮಧ್ವರಾಜ್ ಸಿಎಂಗೆ ದೂರು

    ಉಡುಪಿ: ದುಬೈನಿಂದ ಉಡುಪಿಗೆ ಬಂದ ಗರ್ಭಿಣಿಗೆ ಕ್ವಾರಂಟೈನ್ ಅವಧಿ ಮುಗಿದಿದ್ದರೂ ಅವರನ್ನು ಮನೆಗೆ ಕಳುಹಿಸಲಿಲ್ಲ. ಉಡುಪಿ ಡಿಸಿ ಜಿ ಜಗದೀಶ್ ಬೇಜವಾವ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ.

    ಗರ್ಭಿಣಿ ಉಡುಪಿಯ ಲಾಡ್ಜ್‍ನಲ್ಲಿ 15 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ. ಅವಧಿ ಮುಗಿದರೂ ಅವರನ್ನು ಇನ್ನೂ ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾಡಳಿತ ಸರ್ಕಾರಿ ನಿಯಮ ಪಾಲಿಸಿಲ್ಲ. ಒಂದೆಡೆ ಮನೆಗೆ ಕಳುಹಿಸಿಲ್ಲ. ಇನ್ನೊಂದೆಡೆ ಮನೆಯ ಅಹಾರಕ್ಕೂ ತಡೆ ನೀಡಿದೆ. ಇದರ ವಿರುದ್ಧ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

    ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಡಳಿತದ, ಆರೋಗ್ಯ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವಿಟ್ಟರ್ ನಲ್ಲಿ ಗುಡುಗಿದ್ದಾರೆ.

  • ಬಡ ರೈತರ ಬೆನ್ನಿಗೆ ನಿಂತ ಮಾಜಿ ಶಾಸಕ- ತರಕಾರಿ, ಅಕ್ಕಿ, ಜೋಳ ಖರೀದಿಸಿ ಹಂಚಿಕೆ

    ಬಡ ರೈತರ ಬೆನ್ನಿಗೆ ನಿಂತ ಮಾಜಿ ಶಾಸಕ- ತರಕಾರಿ, ಅಕ್ಕಿ, ಜೋಳ ಖರೀದಿಸಿ ಹಂಚಿಕೆ

    ಬಳ್ಳಾರಿ: ಕೊರೊನಾ ವೈರಸ್ ನಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಈ ವರ್ಷ ಉತ್ತಮ ಇಳುವರಿ ಬಂದರೂ ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲು ಸಾಧ್ಯವಾಗದೇ ತಾವೇ ಸ್ವತಃ ತಮ್ಮ ಕೈಯಾರೆ ನಾಶಮಾಡುವ ಸ್ಥಿತಿ ಬಂದೊದಗಿದೆ.

    ಸರಿಯಾದ ಬೆಲೆ ಸಿಗದೆ ಬೆಳೆಗಳನ್ನು ನಾಶ ಮಾಡುತ್ತಿರುವ ಬಡ ರೈತರ ಬೆನ್ನಿಗೆ ಕಾಂಗ್ರೆಸ್ ಮುಖಂಡ ಸಿರಾಜ್ ಶೇಕ್ ನಿಂತಿದ್ದಾರೆ. ಬಳ್ಳಾರಿ ಜಿಲ್ಲೆಯ ಬಹುತೇಕ ರೈತರು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಾಧ್ಯವಾಗದೆ ಬೆಳೆಗಳನ್ನು ನಾಶ ಮಾಡುತ್ತಿದ್ದಾರೆ. ಇದರಿಂದ ಬೇಸರಗೊಂಡ ಮಾಜಿ ಶಾಸಕರು ಬಡ ರೈತರ ತೋಟಕ್ಕೆ ತಾವೇ ಸ್ವತಃ ತೆರಳಿ ಅವುಗಳನ್ನು ಖರೀದಿ ಮಾಡಿ ಮಾರುಕಟ್ಟೆಯ ಬೆಲೆ ನೀಡುತ್ತಿದ್ದಾರೆ. ಬಳಿಕ ಖರೀದಿ ಮಾಡಿದ್ದನ್ನು ಜಿಲ್ಲೆಯ ಬಡ ಜನರಿಗೆ ಹಂಚಿದ್ದಾರೆ.

    ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಸುತ್ತಮುತ್ತಲಿನ ಬಡ ರೈತರನ್ನು ಆಯ್ಕೆ ಮಾಡಿ ಅವರ ತೋಟಕ್ಕೆ ತೆರಳಿ ಅವರು ಬೆಳೆದ ಈರುಳ್ಳಿ, ತರಕಾರಿಗಳನ್ನು ಕೊಂಡುಕೊಂಡು ಸೂಕ್ತ ಹಣ ನೀಡುತ್ತಿದ್ದಾರೆ. ಇದರಿಂದಾಗಿ ಬಡ ರೈತರಿಗೂ ಹಾಗೂ ಆಹಾರ ಇಲ್ಲದೇ ಹಸಿವಿನಿಂದ ಇರುವ ಜನರಿಗೆ ಸಾಕಷ್ಟು ಅನುಕೂಲ ಆಗಿದೆ. ಇದೇ ರೀತಿಯಲ್ಲಿ ಸ್ಥಳೀಯ ನಾಯಕರು ಬಡ ರೈತರ ಬೆಳೆಗಳನ್ನು ಖರೀದಿ ಮಾಡಿ ಬಡ ಜನರಿಗೆ ಹಂಚಿದ್ರೆ ಇಬ್ಬರಿಗೂ ಅನುಕೂಲವಾಗಲಿದೆ ಎಂದಿದ್ದಾರೆ. ಸರ್ಕಾರ ಸಹ ಇದೇ ರೀತಿಯಲ್ಲಿ ಯೋಜನೆ ಜಾರಿ ಮಾಡಲಿ ಎಂದು ಒತ್ತಾಯ ಮಾಡಿದ್ದಾರೆ.

  • ಬಲವಂತ ವಿವಾಹಕ್ಕೆ ಅಪ್ಪನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಮಾಜಿ ಶಾಸಕನ ಪುತ್ರಿ

    ಬಲವಂತ ವಿವಾಹಕ್ಕೆ ಅಪ್ಪನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಮಾಜಿ ಶಾಸಕನ ಪುತ್ರಿ

    ಭೋಪಾಲ್: ಬಲವಂತವಾಗಿ ವಿವಾಹ ಮಾಡಿಸಲು ಮುಂದಾದ ತಂದೆ ವಿರುದ್ಧವೇ ಬಿಜೆಪಿ ಮಾಜಿ ಶಾಸಕರ ಪುತ್ರಿ ದೂರು ದಾಖಲಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ.

    ಭೋಪಾಲ್ ಕೇಂದ್ರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಂದ್ರ ನಾಥ್ ಸಿಂಗ್, ರಾಜಕಾರಣಿಯೊಬ್ಬರ ಮಗನೊಂದಿಗೆ ವಿವಾಹವಾಗುವಂತೆ ತಮ್ಮ ಪುತ್ರಿ ಭಾರತಿ ಸಿಂಗ್ ಅವರಿಗೆ ಕಿರುಕುಳ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಡ್ರಗ್ಸ್ ಇಂಜೆಕ್ಷನ್‍ಗಳನ್ನು ನೀಡಿ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.

    ನಾನು ಮಾನಸಿಕವಾಗಿ ಸದೃಢವಾಗಿರುವೆ. ಆದರೆ ನನ್ನ ಕುಟುಂಬದವರು ನಾನು ಮಾನಸಿಕವಾಗಿ ಅಸ್ವಸ್ಥಳಾಗಿರುವೆ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಯಾವುದೇ ಕಾರಣಕ್ಕೂ ಮನೆಗೆ ವಾಪಸ್ ಹೋಗುವುದಿಲ್ಲ. ಮನೆಯಲ್ಲಿ ಸೋದರ ಸಂಬಂಧಿ ನನಗೆ ಹಿಗ್ಗಾಮುಗ್ಗಾ ಥಳಿಸುತ್ತಾಳೆ ಎಂದು ಭಾರತಿ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ.

    ಈ ಸಂಬಂಧ ಭಾರತಿ ಸಿಂಗ್ ಆಪ್ತ ಅಂಕಿತ್ ಸಕ್ಸೇನಾ ಪ್ರತಿಕ್ರಿಯಿಸಿ, ಭಾರತಿ ಕಳೆದ ಕೆಲವು ದಿನಗಳಲ್ಲಿ ಸುಮಾರು 10ರಿಂದ 20 ಬಾರಿ ಮನೆ ಬಿಟ್ಟು ಬಂದಿದ್ದಾಳೆ. ಅಷ್ಟೇ ಅಲ್ಲದೆ ಅವಳ ಕೋರಿಕೆ ಮೇರೆಗೆ ಆಕೆಯ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ವಿಡಿಯೋ ಮಾಡಿದ್ದೇನೆ. ಭಾರತಿ ಸಿಂಗ್‍ಗೆ ರಕ್ಷಣೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

    ಭಾರತಿ ಸಿಂಗ್ ನೆರೆ ರಾಜ್ಯ ಮಹಾರಾಷ್ಟ್ರದ ಯುವಕನನ್ನು ಪ್ರೀತಿಸುತ್ತಿದ್ದಾಳೆ. ಇಬ್ಬರು ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ ಭಾರತಿ ತಂದೆ ಮಾಜಿ ಶಾಸಕ ಸುರೇಂದ್ರ ನಾಥ್ ಸಿಂಗ್ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಬಿಜೆಪಿ ಮುಂಖಡರೊಬ್ಬರ ಮಗನೊಂದಿಗೆ ಮದುವೆ ಮಾಡಲು ಮುಂದಾಗಿದ್ದಾರೆ ಎಂದು ಅಂಕಿತ್ ದೂರಿದರು.

    ಭಾರತಿ ಸಿಂಗ್ ಪರ ವಕೀಲ ಪ್ರತಿಕ್ರಿಯಿಸಿ, ನನ್ನ ಕಕ್ಷಿದಾರರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಾರೆ. ಅವರು ಮಾನಸಿಕ ಅಸ್ವಸ್ಥರಲ್ಲ ಎಂದು ತಿಳಿಸಿದರು.

    ಮಾಜಿ ಶಾಸಕ ಸುರೇಂದ್ರ ನಾಥ್ ಸಿಂಗ್, ತಮ್ಮ ಪುತ್ರಿ ಕಾಣೆಯಾಗಿದ್ದಾಳೆ. ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದು, ಆದಷ್ಟು ಬೇಗ ಪತ್ತೆ ಹಚ್ಚುವಂತೆ ಭೋಪಾಲ್‍ನ ಕಮಲಾ ನಗರದ ಪೊಲೀಸ್ ಠಾಣೆಗೆ ಅಕ್ಟೋಬರ್ 16ರಂದು ದೂರು ನೀಡಿದ್ದರು.

  • ಒಳ ಉಡುಪು ನೇತುಹಾಕಿದ್ದಕ್ಕೆ ಶಿಕ್ಷಕನ ಮೇಲೆ ಬಿತ್ತು ಕೇಸ್

    ಒಳ ಉಡುಪು ನೇತುಹಾಕಿದ್ದಕ್ಕೆ ಶಿಕ್ಷಕನ ಮೇಲೆ ಬಿತ್ತು ಕೇಸ್

    ಲಕ್ನೋ: ಪ್ರತಿಭಟನಾ ನಿರತ ಶಿಕ್ಷಕರೊಬ್ಬರು ತಮ್ಮ ಒಳಉಡುಪನ್ನು ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಒಣಗಿಸಲು ನೇತುಹಾಕಿದ್ದಕ್ಕೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಮಾಜಿ ಶಾಸಕರೊಬ್ಬರು ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಶಿಕ್ಷಕರೊಬ್ಬರು ಜಿಲ್ಲಾಧಿಕಾರಿ ಕಚೇರಿಯ ಬಳಿ 23ಕ್ಕೂ ಹೆಚ್ಚು ವರ್ಷಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಕಚೇರಿಯ ಹೊರಗಡೆಯೇ ತಮ್ಮ ಒಳ ಉಡುಪನ್ನು ನೇತುಹಾಕಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

    ಐಪಿಸಿ ಸೆಕ್ಷನ್ 509(ಮಹಿಳೆಯ ಗೌರವಕ್ಕೆ ಧಕ್ಕೆ) ಅಡಿ ಶಿಕ್ಷಕ ವಿಜಯ್ ಸಿಂಗ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಉಸ್ತುವಾರಿ ನಜರತ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ಸಮೀಪಾಲ್ ಅತ್ರಿ ತಿಳಿಸಿದ್ದಾರೆ.

    ಪ್ರತಿಭಟನೆಯನ್ನು ಹಿಂಪಡೆಯುವಂತೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ದೂರ ಹೋಗುವಂತೆ ಅಧಿಕಾರಿಗಳು ಹೇಳಿದ ನಂತರ ಸಿಂಗ್ ತಮ್ಮ ಧರಣಿಯ ಸ್ಥಳವನ್ನು ಬದಲಾಯಿಸಿದ್ದಾರೆ ಎಂದು ಸಹ ವರದಿಯಾಗಿದೆ. ಮಾಜಿ ಶಾಸಕರು ಭೂ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಇವರು ಫೆಬ್ರವರಿ 26, 1996ರಂದು ಈ ಸ್ಥಳದಲ್ಲಿ ಧರಣಿ ಪ್ರಾರಂಭಿಸಿದ್ದರು ಎಂದು ತಿಳಿದು ಬಂದಿದೆ.

  • ಸೊಸೆಯನ್ನೇ ರೇಪ್‍ಗೈದ ಆರೋಪ: ಬಿಜೆಪಿಯ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್

    ಸೊಸೆಯನ್ನೇ ರೇಪ್‍ಗೈದ ಆರೋಪ: ಬಿಜೆಪಿಯ ಮಾಜಿ ಶಾಸಕನ ವಿರುದ್ಧ ಎಫ್‍ಐಆರ್

    ನವದೆಹಲಿ: ಮದ್ಯದ ಅಮಲಿನಲ್ಲಿ ಸೊಸೆಯನ್ನೇ ಅತ್ಯಾಚಾರಗೈದ ಆರೋಪದ ಅಡಿ ಬಿಜೆಪಿಯ ಮಾಜಿ ಶಾಸಕ ಮನೋಜ್ ಶೊಕೀನ್ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿ ಮನೋಜ್ ಶೊಕೀನ್ ಅವರು ದೆಹಲಿಯ ನಂಗ್ಲೋಯಿ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ 2015ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಮಾಜಿ ಶಾಸಕರ ವಿರುದ್ಧ ಸಂತ್ರಸ್ತೆಯು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಮನೋಜ್ ಶೊಕೀನ್ ಅವರು ಕಳೆದ ಡಿಸೆಂಬರ್ 31ರ ಮಧ್ಯರಾತ್ರಿ ಗನ್ ತೋರಿಸಿ, ಬೆದರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆಯು ದೂರು ನೀಡಿದ್ದಾರೆ. ಈ ಸಂಬಂಧ ಮಾಜಿ ಶಾಸಕರ ವಿರುದ್ಧ ಅತ್ಯಾಚಾರ ಆರೋಪದ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ದೂರಿನಲ್ಲಿ ಏನಿದೆ?:
    2018 ಡಿಸೆಂಬರ್ 31ರಂದು ರಾತ್ರಿ ನಾನು, ಪತಿ, ಸಹೋದರ ಹಾಗೂ ಸಹೋದರ ಸಂಬಂಧಿ ಎಲ್ಲರೂ ಸೇರಿ ಮೀರ ಬಾಘ್ ಪ್ರದೇಶದಲ್ಲಿರುವ ಪತಿಯ ಮನೆಗೆ ಹೊರಡಿದ್ದೇವು. ಆದರೆ ಹೊಸ ವರ್ಷಾಚರಣೆಗೆ ಪತಿ ನನ್ನನ್ನು ಪಾಶ್ಚಿಮ್ ವಿಹಾರ ಪ್ರದೇಶದಲ್ಲಿರುವ ಹೊಟೇಲ್‍ವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿಗೆ ನಮ್ಮ ಅನೇಕ ಸಂಬಂಧಿಕರು ಬಂದಿದ್ದರು. ಸುಮಾರು ಮಧ್ಯ ರಾತ್ರಿ 12:30ಕ್ಕೆ ಪಾರ್ಟಿ ಮುಗಿಸಿ ಮಗೆ ಬಂದಿದ್ದೇವು. ಆದರೆ ಪತಿ ನನ್ನನ್ನು ಮನೆಯಲ್ಲಿ ಬಿಟ್ಟು ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಹೋಗಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

    ಮನೆಯಲ್ಲಿ ನಾನು ಒಬ್ಬಳೆ ಮಲಗಿದ್ದಾಗ ಮಧ್ಯರಾತ್ರಿ 1:30 ಗಂಟೆ ಸುಮಾರು ಮನೆಗೆ ಬಂದ ನನ್ನ ಮಾವ ಮನೋಜ್ ಶೊಕೀನ್, ನಿನ್ನ ಜೊತೆ ಮಾತನಾಡಬೇಕು ಎಂದು ಹೇಳಿ ರೂಂ ಒಳಗೆ ಬಂದರು. ಬಳಿಕ ಅಸಭ್ಯವಾಗಿ ವರ್ತಿಸಲು ಆರಂಭಿಸಿದರು. ಇದನ್ನು ವಿರೋಧಿಸಿದ್ದಕ್ಕೆ ಗನ್ ತೋರಿಸಿ, ಬೊಬ್ಬಿಟ್ಟರೆ ನಿನ್ನ ಸಹೋದರನನ್ನು ಗುಂಡಿಟ್ಟು ಹತ್ಯೆ ಮಾಡುತ್ತೇನೆ ಎಂದು ಬೆದರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಸಂಬಂಧ ಆರೋಪಿ ಮನೋಜ್ ಶೊಕೀನ್ ಅವರ ಐಪಿಸಿ ಸೆಕ್ಷನ್ 376 (ಬಲಾತ್ ಸಂಭೋಗಕ್ಕೆ ದಂಡನೆ) ಹಾಗೂ 506 (ಕೊಲೆ ಬೆದರಿಕೆ) ಅಡಿ ಪ್ರಕರಣದ ದಾಖಲಾಗಿದೆ. ಪ್ರಕರಣ ಕುರಿತು ತನಿಖೆ ಆರಂಭಿಸಲಾಗಿದ್ದು, ಆರೋಪಿಯ ವಿರುದ್ಧ ಸೂಕ್ತಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ ಸೆಜು ಪಿ ಕುರುವಿಲ್ಲಾ ಹೇಳಿದ್ದಾರೆ.

  • ಸಿಎಂರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ – ಕೆ.ಎನ್.ರಾಜಣ್ಣ

    ಸಿಎಂರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ – ಕೆ.ಎನ್.ರಾಜಣ್ಣ

    – ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ

    ತುಮಕೂರು: ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ನಾವು ನೆಲಕಚ್ಚಿದ್ದೇವೆ. ಹೀಗಿರುವಾಗ ಸಿಎಂ ಅವರನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ, ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಶಾಸನ ಸಭೆಯಲ್ಲಿ ಮಾತನಾಡುವುದು ಶಾಸಕರ ಹಕ್ಕು. ಹಾಗಂತ ಸುಖಾಸುಮ್ಮನೆ ಕಾಲ ಹರಣ ಮಾಡಬಾರದು. ಈಗ ಶಾಸಕರು ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಸರ್ಕಾರ ಉಳಿಯಬಾರದು. ಸರ್ಕಾರ ಉರುಳಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.

    ಬಿಜೆಪಿಯವರಿಗೆ ಬೈದರೇ ಮಾತ್ರ ಮುಸ್ಲಿಮರು ಕಾಂಗ್ರೆಸ್‍ಗೆ ವೋಟ್ ಹಾಕುತ್ತಾರೆ. ಹಾಗಾಗಿ ಕಾಂಗ್ರೆಸ್-ಜೆಡಿಎಸ್ ಜಗಳ ಇದಾಗಿದ್ದರೂ ಬಿಜೆಪಿಗೆ ಬೈಯೋದು. ಯಾವುದೇ ಕಾರಣಕ್ಕೂ ಬಹುಮತ ಬರುವುದಿಲ್ಲ. ಈ ಸರ್ಕಾರ ಕಾಂಗ್ರೆಸ್‍ನ ಒಂದಿಬ್ಬರು ಶಾಸಕರು ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದವರಿಗೆ ಮಾತ್ರ ಬೇಕಾಗಿದೆ. ಇನ್ನೂ ಕೆಲವು ದೋಸ್ತಿ ಶಾಸಕರು ರಾಜೀನಾಮೆ ನೀಡಲಿದ್ದಾರೆ. ಹೆಸರು ಹೇಳಿದರೆ ಅವರು ಅಲರ್ಟ ಆಗುತ್ತಾರೆ. ಹೀಗಾಗಿ ಅವರ ಹೆಸರು ಹೇಳುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

    1989ರಲ್ಲಿ 20 ಜನ ಶಾಸಕರಿಗೆ ರಾಜೀನಾಮೆ ಕೊಡಿಸಿ ಎಚ್.ಡಿ.ದೇವೇಗೌಡ ಅವರು ಎಸ್.ಆರ್. ಬೊಮ್ಮಯಿಯವರ ಸರ್ಕಾರ ಉರುಳಿಸಿದರು. ಆಗ ದೇವೇಗೌಡರಿಗೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿರಲಿಲ್ಲ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.

  • ಸ್ವಾತಂತ್ರ ಹೋರಾಟಗಾರ, ಮಾಜಿ ಶಾಸಕ ಶಿವಲಿಂಗೇಗೌಡ ನಿಧನ

    ಸ್ವಾತಂತ್ರ ಹೋರಾಟಗಾರ, ಮಾಜಿ ಶಾಸಕ ಶಿವಲಿಂಗೇಗೌಡ ನಿಧನ

    ರಾಮನಗರ: ಅನಾರೋಗ್ಯ ಹಿನ್ನೆಲೆಯಲ್ಲಿ ಸ್ವಾತಂತ್ರ ಹೋರಾಟಗಾರ ಹಾಗೂ ಮಾಜಿ ಶಾಸಕ ಕಾಡಹಳ್ಳಿ ಶಿವಲಿಂಗೇಗೌಡರು ನಿಧನರಾಗಿದ್ದಾರೆ.

    ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಮೂಲತಃ ಕನಕಪುರ ತಾಲೂಕಿನ ಕಾಡಹಳ್ಳಿ ಗ್ರಾಮದವರು ಶಿವಲಿಂಗೇಗೌಡರು, ಬೆಂಗಳೂರಿನ ಜಯನಗರದಲ್ಲಿ ನೆಲೆಸಿದ್ದರು ಮತ್ತು ಇವರು ಸ್ವಾತಂತ್ರ್ಯ ಹೋರಾಟದಲ್ಲಿ ಸೆರೆವಾಸವನ್ನು ಅನುಭವಿಸಿದ್ದರು.

    ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ 1962-67 ರ ಅವಧಿಯಲ್ಲಿ ವಿರುಪಾಕ್ಷಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಶಿವಲಿಂಗೇಗೌಡರು ನಂತರ ಕಾಂಗ್ರೆಸ್ ಪಕ್ಷ ತೊರೆದು ಜನತಾ ಪಾರ್ಟಿ ಸೇರಿದ್ದರು. 1978-83 ಮತ್ತು 1985-89 ರ ಅವಧಿಯಲ್ಲಿ ಸಾತನೂರು ಕ್ಷೇತ್ರದಲ್ಲಿ ಜನತಾ ಪಾರ್ಟಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಇಂದು ಸ್ವಗ್ರಾಮ ಕಾಡಹಳ್ಳಿಯಲ್ಲಿ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ನಡೆಯಲಿದೆ.

  • ಮಾಜಿ ಶಾಸಕ ಗೋಪಾಲ ಭಂಡಾರಿ ಪಂಚಭೂತಗಳಲ್ಲಿ ಲೀನ

    ಮಾಜಿ ಶಾಸಕ ಗೋಪಾಲ ಭಂಡಾರಿ ಪಂಚಭೂತಗಳಲ್ಲಿ ಲೀನ

    ಉಡುಪಿ: ಹೃದಯಾಘಾತದಿಂದ ಮೃತಪಟ್ಟಿದ್ದ ಮಾಜಿ ಶಾಸಕ ಗೋಪಾಲ ಭಂಡಾರಿ (66) ಅವರ ಅಂತ್ಯ ಸಂಸ್ಕಾರ ಶುಕ್ರವಾರ ಹೆಬ್ರಿಯ ಸ್ವಗೃಹದ ಸಮೀಪದಲ್ಲಿ ನೆರವೇರಿತು.

    ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಯಿತು. ಈ ವೇಳೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವೆ ಜಯಮಾಲಾ, ಶಾಸಕ ಸುನೀಲ್ ಕುಮಾರ್ ಭಾಗಿಯಾಗಿದ್ದರು.

    ಮಾಜಿ ಸಿಎಂ ವೀರಪ್ಪ ಮೋಯ್ಲಿ ಆಪ್ತ, ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಗೋಪಾಲ ಭಂಡಾರಿ ಅವರು ಬೆಂಗಳೂರಿಂದ ಮಂಗಳೂರಿಗೆ ಕೆಎಸ್‍ಆರ್ ಟಿಸಿ ವೋಲ್ವೋ ಬಸ್‍ನಲ್ಲಿ ಗುರುವಾರ ಪ್ರಯಾಣಿಸುತ್ತಿದ್ದರು. ರಾತ್ರಿ 10.40ರ ವೇಳೆಗೆ ಮಂಗಳೂರು ಬಸ್ ನಿಲ್ದಾಣ ತಲುಪಿದ ಬಳಿಕವೂ ಅವರು ಸೀಟಿನಲ್ಲೇ ನಿದ್ದೆ ಮಾಡಿದ ರೀತಿ ಕುಳಿತಿದ್ದರು. ಎಷ್ಟು ಕರೆದರೂ ಎಚ್ಚರಗೊಳ್ಳದ ಪರಿಣಾಮ ಸಿಬ್ಬಂದಿ ಬಸ್ಸಿನಲ್ಲೇ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹವನ್ನು ಕರೆದೊಯ್ಯಲಾಗಿತ್ತು.

    ಹೆಬ್ರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಯಾವುದೇ ಜಾತಿ ಬಲ, ಹಣ ಬಲ ಇಲ್ಲದೆ 1998 ಮತ್ತು 2008ರಲ್ಲಿ ಕಾರ್ಕಳದಲ್ಲಿ ಎರಡು ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ವಿರುದ್ಧ ಸೋಲು ಕಂಡಿದ್ದರು. ಒಂದು ಅವಧಿಗೆ ಹೆಬ್ರಿ ಬ್ಲಾಕ್ ಅಧ್ಯಕ್ಷರಾಗಿದ್ದರು. ಸದ್ಯ ಕೆಪಿಸಿಸಿ ಕಾರ್ಯದರ್ಶಿ ಆಗಿದ್ದರು.

    ಗೋಪಾಲ ಭಂಡಾರಿ ಅವರು ಶಾಸಕರಾಗಿದ್ದಾಗಲೂ ಬಸ್ಸಿನಲ್ಲೇ ಓಡಾಡುತ್ತಿದ್ದರು. ವೆನ್‍ಲಾಕ್ ಆಸ್ಪತ್ರೆಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಸುನಿಲ್ ಕುಮಾರ್, ನಗರಾಭಿವೃದ್ದಿ ಸಚಿವ ಯುಟಿ ಖಾದರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದರು. ಗೋಪಾಲ ಭಂಡಾರಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಗೆ ಹುಟ್ಟೂರು ಹೆಬ್ರಿಗೆ ತರಲಾಗಿತ್ತು. ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಮುಖಂಡರು ಅಂತಿಮ ದರ್ಶನ ಪಡೆದರು.

  • ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಾಜಿ ಶಾಸಕರಿದ್ದ ಕಾರ್- ಸವಾರ ಸಾವು

    ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಾಜಿ ಶಾಸಕರಿದ್ದ ಕಾರ್- ಸವಾರ ಸಾವು

    ಚಿಕ್ಕೋಡಿ(ಬೆಳಗಾವಿ): ಮಾಜಿ ಶಾಸಕರ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಬಾಗ ತಾಲೂಕಿನ ಮಾಡಲಗಿ ಗ್ರಾಮದ ಬಳಿ ನಡೆದಿದೆ.

    ರಾಮು ನಾಯಕ್ (50) ಮೃತ ಸವಾರ. ಬೈಕ್‍ನಲ್ಲಿದ್ದ ರಾಮು ಪತ್ನಿ ಪ್ರಭಾವತಿ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಖಾನಾಪುರದ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

    ಖಾನಾಪುರದ ಎಂಇಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ ಅವರಿಗೆ ಸೇರಿದ ಕೆಎ 22, ಝೆಡ್ 2888 ಸಂಖ್ಯೆಯ ಇನ್ನೋವಾ ಕಾರು ಇಂದು ಚಿಕ್ಕೋಡಿ ಮಾರ್ಗವಾಗಿ ರಾಯಬಾಗಕ್ಕೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದೆ. ಬಳಿಕ ಸವಾರ ರಾಮು ಕಾಲುಗಳ ಮೇಲೆ ಹರಿದಿದೆ. ಹೀಗಾಗಿ ರಾಮು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಪ್ರಭಾವತಿ ಬೈಕ್‍ನಿಂದ ಹಾರಿ ನೆಲಕ್ಕೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

    ವೇಗವಾಗಿದ್ದ ಕಾರು ಕೂಡ ಪಲ್ಟಿ ಹೊಡೆದು ಬಿದ್ದಿದೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಅರವಿಂದ್ ಪಾಟೀಲ್ ದಂಪತಿ ಕಾರಿನಲ್ಲಿ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದರು. ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಅಸು ನೀಗಿದರೂ ಮಾಜಿ ಶಾಸಕ ಅರವಿಂದ ಪಾಟೀಲ್ ಬೇರೊಂದು ವಾಹನ ವ್ಯವಸ್ಥೆ ಮಾಡಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸಣ್ಣ ಪುಟ್ಟ ಗಾಯಗಳಿಂದ ಅರವಿಂದ್ ಪಾಟೀಲ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಸಕರ ಗುರುತಿನ ಪತ್ರ ಅಪಘಾತದ ಸಂಭವಿಸಿದ ಸ್ಥಳದಲ್ಲಿ ಸಿಕ್ಕಿದೆ. ಹೀಗಾಗಿ ಶಾಸಕರು ಘಟನಾ ಸ್ಥಳದಲ್ಲೇ ಇದ್ದರು ಎನ್ನಲಾಗುತ್ತಿದೆ. ಆದರೆ ಖಚಿತ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಈ ಸಂಬಂಧ ರಾಯಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ.

  • ಮಾಜಿ ಶಾಸಕ ಎಂ.ಸತ್ಯನಾರಾಯಣ ನಿಧನ

    ಮಾಜಿ ಶಾಸಕ ಎಂ.ಸತ್ಯನಾರಾಯಣ ನಿಧನ

    ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ (75) ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ.

    ಸತ್ಯನಾರಾಯಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ದಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಹುಟ್ಟೂರು ಮೈಸೂರು ತಾಲೂಕಿನ ಗುಂಜ್ರಾಲ್ ಛತ್ರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ವಿಶ್ವನಾಥ್, ಸಚಿವರಾದ ಜಿ.ಟಿ.ದೇವೆಗೌಡ ಮತ್ತು ಪುಟ್ಟರಂಗಶೆಟ್ಟಿ ಅವರು ಸತ್ಯನಾರಾಯಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಸತ್ಯನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದರು.

    ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಹೋದ ನಂತರ 2008ರಲ್ಲಿ ಚುನಾವಣೆಯಲ್ಲಿ ಸ್ಫರ್ಧೆ ಮಾಡಿ ಗೆಲವು ಸಾಧಿಸಿದ್ದರು. 2014ರಲ್ಲಿ ಮತ್ತೆ ಸತ್ಯನಾರಾಯಣ ಅವರು ಸಚಿವ ಜಿ.ಟಿ.ದೇವೇಗೌಡರ ಪ್ರತಿಸ್ಪರ್ಧಿಯಾಗಿ ಚುನಾವಣೆಯಲ್ಲಿ ನಿಂತು ಸೋತಿದ್ದರು.