Tag: ಮಾಜಿ ಶಾಸಕ

  • ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ದುರ್ಮರಣ

    ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ದುರ್ಮರಣ

    ಬೆಂಗಳೂರು: ಸೋಮವಾರ ರಾತ್ರಿ ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ರೈಲಿನಿಂದ ಬಿದ್ದು ಮೃತಪಟ್ಟಿದ್ದಾರೆ.

    ಸಾಗರ್ ಸಾಂಬಾಜಿ ಪಾಟೀಲ್ (38) ಸಾವನ್ನಪ್ಪಿದ ದುರ್ದೈವಿ. ಸಾಗರ್ ಸಾಂಬಾಜಿ ಪಾಟೀಲ್ ಸೋಮವಾರ ರಾತ್ರಿ ಸ್ನೇಹಿತರ ಜೊತೆ ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದರು. ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಳಗಾವಿಗೆ ಹೊರಟಿದ್ದ ಸಾಗರ್, ರೈಲು ಶ್ರೀರಾಮಪುರದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ.

    ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸಾಗರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಟಿ ರೈಲ್ವೆ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಶಾಸಕ ಎಂ. ಭಕ್ತವತ್ಸಲಂ ನಿಧನ

    ಮಾಜಿ ಶಾಸಕ ಎಂ. ಭಕ್ತವತ್ಸಲಂ ನಿಧನ

    ಕೋಲಾರ: ಜಿಲ್ಲೆಯ ಕೆಜಿಎಫ್ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಭಕ್ತವತ್ಸಲಂ(70) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

    ಕೆಜಿಎಫ್‍ನ ರಾಬರ್ಟ್ ಸನ್ ಪೇಟೆಯಲ್ಲಿ ವಾಸವಿದ್ದ ಅವರಿಗೆ ಮನೆಯಲ್ಲಿ ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ನಂತರ ಕುಟುಂಬ ಸದಸ್ಯರು ಅವರನ್ನು ಜಿಲ್ಲಾ ಕೇಂದ್ರದ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

    ಕೆಜಿಎಫ್ ನಗರಸಭಾ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಭಕ್ತವತ್ಸಲಂ 1983ರಲ್ಲಿ ಎಐಎಡಿಎಂಕೆ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. 1985ರ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಪುನಃ 1989ರಲ್ಲಿ ಎಐಎಡಿಎಂಕೆ ಪಕ್ಷದಿಂದ 2ನೇ ಬಾರಿಗೆ ಮತ್ತು 1999ರಲ್ಲಿ 3ನೇ ಬಾರಿಗೆ ಶಾಸಕರಾದರು.

    ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಎಐಎಡಿಎಂಕೆ ತೊರೆದು ಜೆಡಿಎಸ್ ಸೇರಿದ ಅವರು 2008, 2013 ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದರು. 5 ಬಾರಿ ನಗರಸಭೆ ಅಧ್ಯಕ್ಷರಾಗಿ ಮತ್ತು ಒಂದು ಬಾರಿ ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಜೆಡಿಎಸ್ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ವಿಧಿವಶ

    ಜೆಡಿಎಸ್ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ವಿಧಿವಶ

    ಹಾಸನ: ಜೆಡಿಎಸ್ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.

    ಎಚ್.ಎಸ್ ಪ್ರಕಾಶ್ ಇತ್ತೀಚೆಗೆ ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕಾಶ್ ಕೃತಕ ಉಸಿರಾಟದಲ್ಲಿದ್ದರು. ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಪ್ರಕಾಶ್ ಅವರು ಆಪ್ತರಾಗಿದ್ದರು. ಪ್ರಕಾಶ್ 4 ಬಾರಿ ಹಾಸನ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೇ ಕಳೆದ ಬಾರಿ ವಿಧಾನಸಭಾ ಚುಣಾವಣೆಯಲ್ಲಿ ಸೋಲು ಅನುಭವಿಸಿದ್ದರು. ಪ್ರಕಾಶ್ ಅವರು ಜೆಡಿಎಸ್ ಪಕ್ಷದಿಂದ ಸತತವಾಗಿ ಆಯ್ಕೆಯಾಗಿದ್ದರು. ಪ್ರಕಾಶ್ ಅವರು 1994, 2004, 2008 ಹಾಗೂ 2013ರಲ್ಲಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ನಂತರ 2018ರಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ವಿರುದ್ಧ ಸೋಲು ಅನುಭವಿಸಿದ್ದಾರೆ.

    ಎಚ್.ಎಸ್ ಪ್ರಕಾಶ್ ಅವರ ಮೃತದೇಹ ಇಂದು ಹಾಸನಕ್ಕೆ ರವಾನಿಸುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನ

    ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನ

    ಬಾಗಲಕೋಟೆ: ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ(85) ಇಂದು ಮುಂಜಾನೆ ನಿಧನರಾಗಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಬಾಬುರೆಡ್ಡಿ ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ವಿಧಿವಶರಾಗಿದ್ದಾರೆ.

    1985 ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ ಬಾಬುರೆಡ್ಡಿ ತುಂಗಳ ಅವರು ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಆಗಿದ್ದರು. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸ್ವಗ್ರಾಮ ಬಿದರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.

    ಬಾಬುರೆಡ್ಡಿ ತುಂಗಳ ಅವರು ಹುಟ್ಟು ಹೋರಾಟಗಾರರಾಗಿದ್ದರು. ಅಲ್ಲದೇ ಅತ್ಯುತ್ತಮ ವಾಗ್ಮಿ ಕೂಡ ಆಗಿದ್ದರು. ಬಾಬುರೆಡ್ಡಿ ಅವರ ಭಾಷಣ ಆಲಿಸಲೆಂದು ಸಾಕಷ್ಟು ಜನರು ಬರುತ್ತಿದ್ದರು. ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಇರುವ ಶ್ರಮಬಿಂದು ಸಾಗರ ಬ್ಯಾರೇಜನ್ನು ದಿವಂಗತ ಶಾಸಕ ಸಿದ್ದು ನ್ಯಾಮಗೌಡರ ನೇತೃತ್ವದಲ್ಲಿ ನಿರ್ಮಾಣ ಮಾಡಲಾಗಿತ್ತು. ಬಾಬುರೆಡ್ಡಿ ತುಂಗಳ ಅವರು ಈ ಬ್ಯಾರೇಜ್ ನಿರ್ಮಾಣದ ಹೊಣೆ ಹೊತ್ತಿದ್ದ ಕೃಷ್ಣಾ ತೀರದ ರೈತ ಸಂಘದ ಮೊದಲ ಅಧ್ಯಕ್ಷರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಇಂದು ಬಳ್ಳಾರಿಯಲ್ಲಿ  ಎಂ.ಪಿ ರವೀಂದ್ರ ಅಂತ್ಯಕ್ರಿಯೆ- ಅಪ್ಪನ ಸಮಾಧಿ ಪಕ್ಕದಲ್ಲೇ ಮಗನ ಸಮಾಧಿ

    ಇಂದು ಬಳ್ಳಾರಿಯಲ್ಲಿ ಎಂ.ಪಿ ರವೀಂದ್ರ ಅಂತ್ಯಕ್ರಿಯೆ- ಅಪ್ಪನ ಸಮಾಧಿ ಪಕ್ಕದಲ್ಲೇ ಮಗನ ಸಮಾಧಿ

    ದಾವಣಗೆರೆ/ಬಳ್ಳಾರಿ: ಸಜ್ಜನ ರಾಜಕಾರಣಿ ಅಂತಾನೇ ಗುರುತಿಸಿಕೊಂಡಿದ್ದ ಮಾಜಿ ಡಿಸಿಎಂ ಎಂಪಿ ಪ್ರಕಾಶ್ ಪುತ್ರ ಹರಪನಹಳ್ಳಿಯ ಮಾಜಿ ಶಾಸಕ ಎಂ.ಪಿ ರವೀಂದ್ರ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸರಳ ಸಜ್ಜನಿಕೆಯ ರವೀಂದ್ರ ಅವರ ಅಂತ್ಯಸಂಸ್ಕಾರ ಇಂದು ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.

    ಮೃತರ ಪಾರ್ಥಿವ ಶರೀರವನ್ನು ಶನಿವಾರ ದಾವಣಗೆರೆ ಮತ್ತು ಹರಪನಹಳ್ಳಿಯಲ್ಲಿ ದರ್ಶನಕ್ಕೆ ಇಡಲಾಗಿತ್ತು. ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಸೇರಿದಂತೆ ರಾಜಕೀಯ ಮುಖಂಡರು, ಗಣ್ಯಾತಿಗಣ್ಯರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು. ಮೆಚ್ಚಿನ ನಾಯಕನ ಅಗಲಿಕೆಗೆ ಕಂಬನಿ ಮಿಡಿದ್ರು.

    ಲಿಂಗಾಯತ ಸಂಪ್ರದಾಯದಂತೆ ಬಳ್ಳಾರಿ ಜಿಲ್ಲೆಯ ಹಡಗಲಿಯ ತೋಟದಲ್ಲಿ ಎಂ.ಪಿ ರವೀಂದ್ರರವರ ಅಂತ್ಯಸಂಸ್ಕಾರ ನೆರವೇರಲಿದೆ. ರವೀಂದ್ರ ಅವರ ತಂದೆ ಎಂ.ಪಿ ಪ್ರಕಾಶ್ ಅವರ ಸಮಾಧಿ ಪಕ್ಕದಲ್ಲೇ ರವೀಂದ್ರ ಅವರ ಅಂತ್ಯಸಂಸ್ಕಾರ ನಡೆಯಲಿದೆ.

    ಎಂ.ಪಿ ರವೀಂದ್ರರವರು ಹರಪನಹಳ್ಳಿ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿ ಆಯ್ಕೆಯಾದ ಮೇಲೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರು. ಹರಪನಹಳ್ಳಿ ತಾಲೂಕನ್ನು ಕಲಂ 371 ಜೆ ಗೆ ಸೇರ್ಪಡೆ ಮಾಡುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು. ಅಲ್ಲದೇ ಸರಳತೆಯಿಂದ ಜನಮನ ಗೆದ್ದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದರಾಮಯ್ಯರಿಂದ್ಲೇ ಮಾಜಿ ಶಾಸಕ ಮಧು ಬಂಗಾರಪ್ಪ ಅಖಾಡಕ್ಕೆ!

    ಸಿದ್ದರಾಮಯ್ಯರಿಂದ್ಲೇ ಮಾಜಿ ಶಾಸಕ ಮಧು ಬಂಗಾರಪ್ಪ ಅಖಾಡಕ್ಕೆ!

    ಬೆಂಗಳೂರು: ಮಾಜಿ ಶಾಸಕ ಮಧು ಬಂಗಾರಪ್ಪ ಅಖಾಡಕ್ಕಿಳಿಯಲು ಸಿದ್ದರಾಮಯ್ಯ ಅವರು ಕಾರಣರಾಗಿದ್ದು, ಮಾಜಿ ಮುಖ್ಯಮಂತ್ರಿಯ ಈ ನಡೆಯ ಹಿಂದಿದೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳಿವೆ.

    ಕೈ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕ್ತಿದ್ದಂತೆ ಸಿದ್ದರಾಮಯ್ಯ ಆಕ್ಟೀವ್ ಆಗಿದ್ದಾರೆ. ತಮ್ಮ ಹಳೆಯ ಸಿಟ್ಟು ಮರೆತು ಎಚ್‍ಡಿಡಿ, ಎಚ್‍ಡಿಕೆಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಶಿವಮೊಗ್ಗ ಗೆಲ್ಲಬೇಕಾದರೆ ಮಧು ಬಂಗಾರಪ್ಪ ಅಭ್ಯರ್ಥಿಯಾದರೆ ಮಾತ್ರ ಸಾಧ್ಯ ಅಂತ ಮಧು ಸ್ಪರ್ಧೆಯ ಲಾಭ ನಷ್ಟದ ಲೆಕ್ಕಾಚಾರವನ್ನ ಎಳೆ ಎಳೆಯಾಗಿ ಸಿದ್ದರಾಮಯ್ಯ ಅವರು ಬಿಡಿಸಿಟ್ಟಿದ್ದ ಎಚ್‍ಡಿ ದೇವೇ ಗೌಡ ಹಾಗೂ ಎಚ್‍ಡಿ ಕುಮಾರಸ್ವಾಮಿ ಮುಂದೆ ಬಿಚ್ಚಿಟ್ಟಿದ್ದಾರೆ. ಇಷ್ಟು ಮಾತ್ರವಲ್ಲದೇ ಈ ಬಗ್ಗೆ ಸಚಿವ ಡಿಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ಮನವೊಲಿಸಿದ್ದಾರೆ ಎನ್ನಲಾಗಿದೆ.

    ಈ ಎಲ್ಲ ಮಾತುಕತೆಗಳ ಬಳಿಕ ಸಿಎಂ ಅವರು ವಿದೇಶ ಪ್ರವಾಸದಲ್ಲಿದ್ದ ಮಧುಬಂಗಾರಪ್ಪಗೆ ವಾಪಸ್ ಬರುವಂತೆ ಸೂಚನೆ ನೀಡಿದ್ದು, ನೇರವಾಗಿ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಬರುವಂತೆ ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಗೀತಾ ಶಿವರಾಜ್‍ಕುಮಾರ್ ಸಮ್ಮುಖದಲ್ಲೇ ನಡೆಯಿತು. ಒಟ್ಟಿನಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಸಿದ್ದರಾಮಯ್ಯ ಅವರು ಒಂದೂವರೆ ದಶಕದ ಮುನಿಸು ಬಿಟ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೊಲೀಸ್ ಠಾಣೆಗೆ ಬೆಂಕಿ ಹಚ್ಚತ್ತೀನಿ-ಮಾಜಿ ಶಾಸಕನ ಅವಾಜ್

    ಪೊಲೀಸ್ ಠಾಣೆಗೆ ಬೆಂಕಿ ಹಚ್ಚತ್ತೀನಿ-ಮಾಜಿ ಶಾಸಕನ ಅವಾಜ್

    ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಪೊಲೀಸರ ಮೇಲೆ ದರ್ಪ ಮೆರೆದಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಶಾಸಕರು ಸೇರಿದಂತೆ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಶುಕ್ರವಾರ ಬೆಳಗ್ಗೆ ಠಾಣೆಗೆ ಮಾಜಿ ಶಾಸಕರ ಪುತ್ರ ರಾಜಾ ವೇಣುಗೋಪಾಲ ನಾಯಕ ಹಾಗು ಸಂಗಡಿಗರು ಕರ್ತವ್ಯ ನಿರತ ಶಂಭುರಾವ್, ಬಸವರಾಜ್ ಮತ್ತು ಶರಣಗೌಡ ಎಂಬವರಿಗೆ ಅವಾಚ್ಯಪದಗಳಿಂದ ನಿಂದಿಸಿದ್ದಾರೆ. ಕೆಲ ಸಮಯದ ಬಳಿಕ ಠಾಣೆಗೆ ಬಂದ ರಾಜಾ ವೆಂಕಟಪ್ಪ ನಾಯಕ, ಡಿಎಸ್‍ಪಿ ಮತ್ತು ಸಿಪಿಐ ಎಲ್ಲಿ? ಅವರನ್ನು ಕರೆಸಿ ಎಂದು ಅವಾಚ್ಯಪದಗಳನ್ನು ಬಳಕೆ ಮಾಡಿ ಬೈದಿದ್ದಾರೆ. ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ ಎಂದು ಕರ್ತವ್ಯ ನಿರತ ಪೊಲೀಸರಿಗೆ ಅವಾಜ್ ಹಾಕಿ ಎಲ್ಲರೂ ಹಿಂದಿರುಗಿದ್ದಾರೆ.

    ಘಟನೆ ಬಳಿಕ ಪೊಲೀಸ್ ಸಿಬ್ಬಂದಿ ಮೇಲಾಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಜೀವಬೆದರಿಕೆ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಸೇರಿದಂತೆ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾರ್ ಅಪಘಾತಕ್ಕೀಡಾಗಿ ತಲೆ, ಬಲಗಣ್ಣಿಗೆ ಗಾಯ- ದೂರು ದಾಖಲಾದ್ರೂ ಕ್ರಮ ಕೈಗೊಳ್ಳದ ಪೊಲೀಸ್ರು

    ಕಾರ್ ಅಪಘಾತಕ್ಕೀಡಾಗಿ ತಲೆ, ಬಲಗಣ್ಣಿಗೆ ಗಾಯ- ದೂರು ದಾಖಲಾದ್ರೂ ಕ್ರಮ ಕೈಗೊಳ್ಳದ ಪೊಲೀಸ್ರು

    – ಮಾಜಿ ಶಾಸಕರ ಒತ್ತಡಕ್ಕೆ ಮಣಿಯಿತಾ ಖಾಕಿ?

    ಬೆಂಗಳೂರು: ಮಾಜಿ ಶಾಸಕ ವರ್ತೂರು ಪ್ರಕಾಶ್ ಅಣ್ಣನ ಮಗನಿಂದ ಕಾರು ಅಪಘಾತವಾಗಿ, ಯುವಕನೊಬ್ಬ ಗಂಭೀರ ಗಾಯಗೊಂಡು ದೂರು ದಾಖಲಾದ್ರೂ ಪೊಲೀಸರು ಯಾವುದೇ ಕ್ರಮ ಜರುಗಿಸದ ಘಟನೆ ಸಿಲಿಕಾನ್ ಸಿಸಿಟಿಲ್ಲಿ ನಡೆದಿದೆ.

    ಬೆಂಗಳೂರಿನ ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿ ಆಗಸ್ಟ್ 10 ರಂದು ಕಾರ್ ಅಪಘಾತ ನಡೆದಿತ್ತು. ಆದ್ರೆ ಇದೂವರೆಗೂ ಆರೋಪಿ ವಿರುದ್ಧ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳದಿದ್ದುದರಿಂದ ಮಾಜಿ ಶಾಸಕ ವರ್ತೂರ್ ಪ್ರಕಾಶ್ ಒತ್ತಡಕ್ಕೆ ಪೊಲೀಸರು ಮಣಿದ್ರಾ ಎಂಬ ಅನುಮಾನವೊಂದು ಮೂಡಿದೆ.

    ವರ್ತೂರು ಪ್ರಕಾಶ್ ಅಣ್ಣನ ಮಗ ರಕ್ಷಿತ್ ಕಾರ್ ಚಲಾಯಿಸುತ್ತಿದ್ದು, ದೇವನಹಳ್ಳಿಯಿಂದ ಬೆಂಗಳೂರಿನ ಕಡೆಗೆ ಕಾರ್ ಅತಿ ವೇಗವಾಗಿ ಬರುತ್ತಿತ್ತು. ಈ ವೇಳೆ ಸರ್ವಿಸ್ ರೋಡ್‍ನಲ್ಲಿ ನಡೆದು ಬರ್ತಿದ್ದ ಸೈಯದ್ ಸಾದ್ವಿಕ್ ಪಾಷ ಎಂಬವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಾದ್ವಿಕ್ ತಲೆಗೆ ಪೆಟ್ಟು, ಬಲಗಣ್ಣಿಗೂ ಹಾನಿ ಹಾನಿಯಾಗಿತ್ತು.

    ಮನೆಗೆ ಆಧಾರ ಸ್ತಂಭವಾಗಿದ್ದ ಸಾದ್ವಿಕ್ ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಚಿಕಿತ್ಸೆಗಾಗಿ 9 ಲಕ್ಚ ಖರ್ಚು ಮಾಡಿದ್ದು, ಇನ್ನೂ ಚಿಕಿತ್ಸೆ ಕೊಡಿಸಲು ಹಣವಿಲ್ಲದೇ ಮನೆಗೆ ವಾಪಸ್ ಕರೆ ತಂದಿದ್ದೇವೆ. ಒಟ್ಟಿನಲ್ಲಿ ದೂರು ದಾಖಲಾಗಿ ಒಂದು ತಿಂಗಳಾದ್ರು ಪೊಲೀಸರು ಕ್ರಮ ಜರುಗಿಸದೇ ಇರುವುದರಿಂದ ಪಾಷಾ ಪೋಷಕರು ನಮಗೆ ನ್ಯಾಯ ಕೊಡಿಸಿ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

    ಇದೀಗ ಪಾಷಾ ಪೋಷಕರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ನಿಂತಿದ್ದು, ಅಪಘಾತ ಮಾಡಿದರವರನ್ನು ಕೂಡಲೇ ಬಂಧಿಸಬೇಕು ಅಂತ ಆರೋಪಿ ಪರ ರಕ್ಷಣೆ ನಿಂತಿರುವ ಪೊಲೀಸರ ವಿರುದ್ಧ ಕರವೇ ಆಕ್ರೋಶ ಹೊರಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಿಜವಾದ ಪಾಕಿಸ್ತಾನಿಗಳು ಬಿಜೆಪಿಗರೇ: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ

    ನಿಜವಾದ ಪಾಕಿಸ್ತಾನಿಗಳು ಬಿಜೆಪಿಗರೇ: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ

    ಕೊಪ್ಪಳ: ನಿಜವಾದ ಪಾಕಿಸ್ತಾನಿಗಳು ಬಿಜೆಪಿಯವರು. ನಾವುಗಳ ನಿಜವಾದ ಭಾರತೀಯರು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ಸಿನ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದ ವೇಳೆ ಬಿಜೆಪಿಯನ್ನು ಹರಿಹಾಯ್ದಿರುವ ಅನ್ಸಾರಿ, ಭಾರತದಲ್ಲಿ ನಿಜವಾದ ದೇಶದ್ರೋಹಿಗಳು ಹಿಂದೂಗಳೂ ಅಲ್ಲ, ಮುಸ್ಲಿಮರೂ ಅಲ್ಲ. ಬಿಜೆಪಿಯವರ ದೇಶದ್ರೋಹಿಗಳು. ಅವರು ಪಾಕಿಸ್ತಾನಿಗಳು. ನಾವು ನಿಜವಾದ ಭಾರತೀಯರು. ಭಾರತಕ್ಕಾಗಿ ನಾವು ತಲೆ ತಗ್ಗಿಸುವುದಕ್ಕೂ ಸಿದ್ಧ. ರುಂಡ ಕತ್ತರಿಸಲು ಸಿದ್ಧರಿದ್ದೇವೆ. ಆದರೆ ಕೆಲವು ಬಿಜೆಪಿ ನಾಯಕರು, ನನ್ನನ್ನು ಗೆಲ್ಲಿಸಿದರೆ ಗಂಗಾವತಿಯನ್ನು ಪಾಕಿಸ್ತಾನ ಮಾಡುತ್ತಾನೆಂದು ಟೀಕಿಸುತ್ತಾರೆ. ನನಗೇನು ಬೇರೆ ಕೆಲಸವಿಲ್ಲವೇನು? ಅವರಿಗೆ ಮಾನ ಮರ್ಯಾದೆ ಇದ್ದರೆ ಅವರೇ ಪಾಕಿಸ್ತಾನಕ್ಕೆ ಹೋಗಲಿ ಎನ್ನುವ ಮೂಲಕ ಮತ್ತೊಮ್ಮೆ ತಮ್ಮ ನಾಲಿಗೆಯನ್ನು ಹರಿಯಬಿಟ್ಟಿದ್ದಾರೆ. ಇದನ್ನೂ ಓದಿ: ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ ಗೂಂಡಾಗಿರಿ – ಆ ನನ್ಮಗನಿಗೆ ಒದಿರಲೇ ಎಂದ ಕೈ ಮಾಜಿ ಶಾಸಕ

    ಇದೇ ವೇಳೆ ಶಾಸಕ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಗ್ಗೆ ಏಕವಚನದಲ್ಲೇ ಮಾತನಾಡಿದ ಅವರು, ಪರಣ್ಣ ಈಶ್ವರಪ್ಪ ಮುನವಳ್ಳಿ ಬೆಳಗ್ಗೆ 5 ಗಂಟೆಯಿಂದಲೇ ಲಂಚ ತೆಗೆದುಕೊಳ್ಳುತ್ತಾನೆ. ಇಂತಹವರನ್ನು ನಮ್ಮ ಗಂಗಾವತಿ ಜನ ಗೆಲ್ಲಿಸುತ್ತಿದ್ದಾರೆ. ಪರಿಹಾರ ಹಣದಲ್ಲೂ ಪರ್ಸೆಂಟೇಜ್ ತೆಗೆದುಕೊಳ್ತಾನೆ. ಜನರಿಗೆ ಖೋಟಾ ನೋಟು ಕೊಟ್ಟು ವೋಟ್ ಹಾಕಿಸಿಕೊಂಡಿದ್ದಾನೆ. ಖೋಟಾ ನೋಟು ದಂಧೆಯಲ್ಲಿ ಸ್ವತಃ ಶಾಸಕನೇ ಭಾಗಿಯಾಗಿದ್ದಾನೆ. ಅವನನ್ನು ಎಸ್ಪಿ ಮಹಾಶಯ ಡಾ.ಅನೂಪ್ ಶೆಟ್ಟಿ ಬಚಾವ್ ಮಾಡುತ್ತಿದ್ದಾನೆ. ಎಸ್ಪಿ ಆರ್‍ಎಸ್‍ಎಸ್ ನವನು ಆಗಿದ್ದಾನೆ. ಅವನು ಸಂಬಂಧಪಡದವರನ್ನು ಒಳಗೆ ಹಾಕಿದ್ದಾನೆ ಅಷ್ಟೇ. ಇಂಥ ಪೊಲೀಸ್ ಗಿರಿ ಮಾಡುವ ಪೊಲೀಸರಿಗೆ ನಾನು ಹೆದರುವುದಿಲ್ಲ. ಮೊದಲು ಶಾಸಕ ಪರಣ್ಣನನ್ನು ಮತ್ತು ಆ ಎಸ್ಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಅಲ್ಲದೇ ಆತನ ಹಿಂಬಾಲಕರನ್ನು ವಿಚಾರಣೆಗೆ ಒಳಪಡಿಸಬೇಕು. ಆವಾಗ ಸತ್ಯ ತಿಳಿಯುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ರಾಮಯ್ಯ ಒಂಟಿಯಲ್ಲ, ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಜೆಡಿಎಸ್ ಟಾರ್ಗೆಟ್: ಚೆಲುವರಾಯಸ್ವಾಮಿ

    ಸಿದ್ರಾಮಯ್ಯ ಒಂಟಿಯಲ್ಲ, ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಜೆಡಿಎಸ್ ಟಾರ್ಗೆಟ್: ಚೆಲುವರಾಯಸ್ವಾಮಿ

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಒಂಟಿಯಲ್ಲ ಎಂದು ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ.

    ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಒಂಟಿಯಲ್ಲ. ಒಂಟಿ ಅಂತಾ ಯಾರಾದ್ರೂ ಅನ್ಕೊಂಡ್ರೆ ಅವರಷ್ಟು ದಡ್ಡರು ಮತ್ಯಾರು ಇಲ್ಲ. ಎಲ್ಲ ಶಾಸಕರು, ಮಾಜಿ ಶಾಸಕರು, ಸಚಿವರು, ಸಂಸದರು ಸಿದ್ದರಾಮಯ್ಯ ಜೊತೆಗಿದ್ದಾರೆ ಅಂದ್ರು.

    ನಾನು ಯಾವುದೇ ಕಾರಣಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ. ಎಂಪಿಗೆ ನಾನು ಸ್ಪರ್ಧಿಸಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನ ಜೆಡಿಎಸ್ ನವರು ಟಾರ್ಗೆಟ್ ಮಾಡಿದ್ದಾರೆ ಇದು ಸತ್ಯ. ಇದು ಎಲ್ಲ ನಾಯಕರಿಗೂ ಗೊತ್ತಿರೋ ವಿಚಾರವಾಗಿದೆ. ಆದರೂ ನಾವು ಸಹಿಸ್ಕೊಂಡು ಇರಬೇಕಾಗಿದೆ ಅಂದ್ರು. ಇದನ್ನೂ ಓದಿ: ಸಿದ್ದರಾಮಯ್ಯ ಏಕಾಂಗಿ ಅಲ್ಲ, ಅವರು ಮಾಸ್ ಲೀಡರ್: ಹೆಚ್.ಎಂ.ರೇವಣ್ಣ

    ಸಿದ್ದರಾಮಯ್ಯ ಮತ್ತೆ ಸಿಎಂ ಅನ್ನೋ ಹೇಳಿಕೆ ವಿಚಾರದ ಕುರಿತು ಮಾತನಾಡಿದ ಅವರು, ಅವರು ಬೇರೆ ಅರ್ಥದಲ್ಲಿ ಹೇಳಿದ್ದಾರೆ ನೀವು ಬೇರೆಯದಾಗೇ ತಿಳಿದುಕೊಂಡಿದ್ದೀರಿ. ಸರ್ಕಾರದಲ್ಲಿ ಪಕ್ಷದ ಪರವಾಗಿ ಡಿಸಿಎಂ ಪರಮೇಶ್ವರ್, ಸಚಿವ ಡಿಕೆ ಶಿವಕುಮಾರ್ ಇದ್ದಾರೆ. ಎಲ್ಲದರ ಬಗ್ಗೆ ಅವರೇ ಮಾತಾಡ್ತಾರೆ. ಲೋಕಸಭೆಯಲ್ಲಿ ಮೈತ್ರಿ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಅಂತ ತಿಳಿಸಿದ್ರು. ಇದನ್ನೂ ಓದಿ: ನಾನು ಮತ್ತೆ ಮುಖ್ಯಮಂತ್ರಿ ಆಗ್ತೀನಿ-ಸಿದ್ದರಾಮಯ್ಯ

    ಕಾಂಗ್ರೆಸ್‍ನಲ್ಲಿದ್ದೀವಿ. ಸೋತಿದ್ದೀವಿ, ಅವರು ಗೆದ್ದಿದ್ದಾರೆ. ಮುಂದೆ ನಾವು ಗೆಲ್ತೀವಿ, ಅವರು ಸೋಲ್ತಾರೆ ನೋಡೋಣ ಅಂದ ಮಾಗಡಿ ಕ್ಷೇತ್ರದಲ್ಲಿ ಜೆಡಿಎಸ್ ದಬ್ಬಾಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಮಾಜಿ ಶಾಸಕ ಬಾಲಕೃಷ್ಣ, ಕಾಲಚಕ್ರ ಉರುಳುತ್ತದೆ. ನಾನು ನಾಲ್ಕು ಬಾರಿ ಗೆದ್ದಿದ್ದೇನೆ. ಈ ಬಾರಿ ಸೋತಿದ್ದೇನೆ, ಗೆದ್ದವರು ಸೋಲ್ತಾರೆ, ಸೋತೋರು ಗೆಲ್ತಾರೆ ಅಂದ್ರು. ಇದನ್ನೂ ಓದಿ: ನಾನು ಸಿಎಂ ಆಗ್ಬೇಕು ಅನ್ನೋದು ಜನರ ಇಚ್ಛೆ, ನನ್ನ ಆಸೆ ಅಲ್ಲ: ಸಿದ್ದರಾಮಯ್ಯ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv