Tag: ಮಾಜಿ ಸಂಸದ

  • ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್

    ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್

    ಬೆಂಗಳೂರು: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ (L.R Shivarame Gowda) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಎಫ್‍ಐಆರ್ ದಾಖಲಿಸಿದೆ.

    ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಲೋನ್ (Loan Cheating) ಪಡೆದು ವಂಚನೆ ಮಾಡಿರುವ ಆರೋಪದ ಎಲ್ ಆರ್ ಶಿವರಾಮೇಗೌಡ ಸೇರಿ ಏಳು ಮಂದಿ ವಿರುದ್ಧ ಕೇಸ್ ಹಾಕಲಾಗಿದೆ. ಇದನ್ನೂ ಓದಿ: ಬಿಗ್‍ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್‍ಗೆ ಸಂಕಷ್ಟ..!

    ಎಂಜಿ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಶಿವರಾಮೇ ಗೌಡರು ಲೋನ್ ಪಡೆದಿದ್ದರು. ಇದೀಗ ಈ ಸಾಲದ ಹಣ ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವ ಕುರಿತು ಬ್ಯಾಂಕ್ ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಶಿವರಾಮೇಗೌಡ, ಪತ್ನಿ ಸುಧಾ, ಮಗ ಚೇತನ್ ಗೌಡ, ಶಿವರಾಮೇಗೌಡ ಸೊಸೆ ಹಾಗೂ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ.

    ಐಪಿಸಿ ಸೆಕ್ಷನ್ 120b (ಕ್ರಿಮಿನಲ್‌ ಪಿತೂರಿ), 420 (ವಂಚನೆ), 468 (ಮೋಸ ಮಾಡುವ ಉದ್ದೇಶದಿಂದ ಫೋರ್ಜರಿ) ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸಿಬಿಐ ಇನ್ಸ್ ಪೆಕ್ಟರ್ ಸಿದ್ದಪ್ಪ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

  • ಆಸ್ಪತ್ರೆಯಲ್ಲಿ ಬೆಡ್ ಕೊರತೆ- ಪುತ್ರನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ

    ಆಸ್ಪತ್ರೆಯಲ್ಲಿ ಬೆಡ್ ಕೊರತೆ- ಪುತ್ರನನ್ನು ಕಳೆದುಕೊಂಡ ಬಿಜೆಪಿಯ ಮಾಜಿ ಸಂಸದ

    ಲಕ್ನೋ: ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ (BJP Former MP) ಪುತ್ರನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.

    ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ (BJP) ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ (Bhairon Prasad Mishra) ಪುತ್ರ.

    ಮೂತ್ರಪಿಂಡದ (Kidney) ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದರು.

    ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ ಎಂದು ಪ್ರಸಾದ್ ಮಿಶ್ರಾ ಗೋಳಾಡಿದರು. ನನ್ನ ನಂತರ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬೃಹತ್‌ ಜಯದ ನಿರೀಕ್ಷೆಯಲ್ಲಿ ಪಾಕಿಸ್ತಾನ – ಸೆಮಿಸ್‌ ಹಾದಿಯ ಲೆಕ್ಕಾಚಾರ ಏನು?

    ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಧಿಮಾನ್ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದಾಗ ರೋಗಿಯನ್ನು ಐಸಿಯುಗೆ ಕರೆದೊಯ್ಯಲು ವೈದ್ಯರು ಹೇಳಿದರು. ಆದರೆ ಅಲ್ಲಿ ಬೆಡ್‍ಗಳು ಲಭ್ಯವಿಲ್ಲ ಎಂದು ರೋಗಿ ಕಡೆಯವರಿಗೆ ತಿಳಿಸಿದ್ದಾರೆ. ಯಾಕೆ ಬೆಡ್ ಇಲ್ಲ ಎಂದು ಹೇಳಿದರು ತಿಳಿದಿಲ್ಲ. ಈ ಸಂಬಂಧ ನಾವು ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

    ಘಟನೆಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಆಸ್ಪತ್ರೆಯ ತಪ್ಪಲ್ಲ. ಆದರೆ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಪ್ಪು. ಆಸ್ಪತ್ರೆಗೆ ಏಕೆ ಬಜೆಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

    ಘಟನೆ ಸಂಬಂಧ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಸಂಸದನ ಮನೆಗೆ ಭೇಟಿ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಈ ಸಂಬಂಧ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಸಂಸದನ ಮೇಲೆ ಅರ್ಚಕನ ವೇಷ ಧರಿಸಿದ್ದ ವ್ಯಕ್ತಿಯಿಂದ ಹಲ್ಲೆ

    ಮಾಜಿ ಸಂಸದನ ಮೇಲೆ ಅರ್ಚಕನ ವೇಷ ಧರಿಸಿದ್ದ ವ್ಯಕ್ತಿಯಿಂದ ಹಲ್ಲೆ

    ಅಮರಾವತಿ: ಅರ್ಚಕನ (Priest) ವೇಷ ಧರಿಸಿದ್ದ ವ್ಯಕ್ತಿಯೊಬ್ಬ ತೆಲಗು ದೇಶಂ ಪಕ್ಷದ ಮುಖಂಡ (TDP leader) ಹಾಗೂ ಮಾಜಿ ಸಂಸದ ಶೇಷಗಿರಿ ರಾವ್ ಪೋಲ್ನಾಟಿ (Seshagiri Rao Polnati) ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಆಂಧ್ರ ಪ್ರದೇಶದಲ್ಲಿ (Andhra Pradesh) ನಡೆದಿದೆ.

    ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ತುನಿ ನಗರದ ಶೇಷಗಿರಿ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ದಾಳಿಕೋರನ ಗುರುತು ಪತ್ತೆ ಹಚ್ಚಿಲ್ಲ. ಹಾಗೂ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮತ ಕನ್ನ ಆರೋಪ- ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾದ ಬಿಬಿಎಂಪಿ

    crime

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಅರ್ಚಕನ ವೇಷ ಧರಿಸಿದ್ದ ವ್ಯಕ್ತಿಯೊಬ್ಬರು ಟಿಡಿಪಿ ಮುಖಂಡ ಮತ್ತು ಮಾಜಿ ಸಂಸದ ಶೇಷಗಿರಿರಾವ್ ಪೋಲ್ನಾಟಿ ಅವರ ಮನೆಗೆ ನುಗ್ಗಿ ಹರಿತವಾದ ಕತ್ತಿಯಿಂದ ದಾಳಿ ನಡೆಸಿ ಗಾಯಗೊಳಿಸಿದ್ದಾರೆ. ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ತಲೆಮರೆಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್‌ ಸಿಂಹ

    Live Tv
    [brid partner=56869869 player=32851 video=960834 autoplay=true]

  • ಮಾಜಿ ಸಂಸದ, ಕಾವೇರಿ ಹೋರಾಟಗಾರ ಮಾದೇಗೌಡ ವಿಧಿವಶ

    ಮಾಜಿ ಸಂಸದ, ಕಾವೇರಿ ಹೋರಾಟಗಾರ ಮಾದೇಗೌಡ ವಿಧಿವಶ

    ಮಂಡ್ಯ: ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಂಸದ ಜಿ.ಮಾದೇಗೌಡ (92) ವಿಧಿವಶರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮಾದೇಗೌಡರು ಇಂದು ನಿಧನರಾಗಿದ್ದಾರೆ.

    ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು, ಕಾವೇರಿ ಹೋರಾಟಗಾರರು, ಮಾಜಿ ಲೋಕಸಭಾ ಸದಸ್ಯರು ಹಾಗು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರವರು ತೀವ್ರ ಅನಾರೋಗ್ಯದಿಂದ ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಶಾಸನಸಭೆ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ರವರ ಜೊತೆ ಶ್ರಮಿಸಿದವರು. ಮಂಡ್ಯದಲ್ಲಿ ಗಾಂಧಿ ಭವನ ನಿರ್ಮಿಸಿದ್ದರು. ಈ ಹಿಂದೆ ಮಾದೇಗೌಡರೊಂದಿಗೆ ಪ್ರಥಮ ಬಾರಿಗೆ ಶಾಸನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದ ಎಸ್.ಎಂ.ಕೃಷ್ಣ ರವರು ತಮ್ಮ ಬಹುಕಾಲದ ಒಡನಾಡಿಯ ಆರೋಗ್ಯ ವಿಚಾರಿಸಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದರು.

  • ಮಾಜಿ ಸಂಸದ ರಾಜಾರಂಗಪ್ಪ ನಾಯಕ ಇನ್ನಿಲ್ಲ

    ಮಾಜಿ ಸಂಸದ ರಾಜಾರಂಗಪ್ಪ ನಾಯಕ ಇನ್ನಿಲ್ಲ

    ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

    1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

    ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

  • ಮಾಜಿ ಸಂಸದ ಮುದ್ದಹನುಮೇಗೌಡರ ಆಪ್ತನ ಮನೆ ಮೇಲೆ ಐಟಿ ದಾಳಿ

    ಮಾಜಿ ಸಂಸದ ಮುದ್ದಹನುಮೇಗೌಡರ ಆಪ್ತನ ಮನೆ ಮೇಲೆ ಐಟಿ ದಾಳಿ

    ತುಮಕೂರು: ಮಾಜಿ ಸಂಸದ ಮುದ್ದಹನುಮೇಗೌಡರ ಆಪ್ತ ಹಾಗೂ ಕ್ಲಾಸ್ ಒನ್ ಗುತ್ತಿಗೆದಾರರೂ ಆದ ರಾಯಸಂದ್ರ ರವಿಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದಿದೆ.

    ಸೋಮವಾರ ಸಂಜೆಯಿಂದ ತಡರಾತ್ರಿ 12 ಗಂಟೆವರೆಗೂ ತುಮಕೂರು ನಗರದ ಎಸ್‍ಐಟಿಯಲ್ಲಿರುವ ರವಿಕುಮಾರ್ ಬಾಡಿಗೆ ಮನೆಯಲ್ಲಿ ಶೋಧ ಕಾರ್ಯ ನಡೆಸಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡು ವಾಪಸ್ ಆಗಿದ್ದಾರೆ.

    ತುಮಕೂರು ನಗರದ ಎಸ್‍ಐಟಿಯಲ್ಲಿರುವ ಬಾಡಿಗೆ ಮನೆ, ತುರುವೇಕೆರೆ ತಾಲೂಕಿನ ರಾಯಸಂದ್ರದ ಮನೆ ಹಾಗೂ ರವಿಕುಮಾರ್ ಅವರ ಸಹೋದರಿ ಮನೆ ಮೇಲೆ ಏಕಕಾಲಕ್ಕೆ ಸುಮಾರು 15 ಜನ ಅಧಿಕಾರಿಗಳಿಂದ ದಾಳಿ ನಡೆದಿದೆ.

    ರಾಯಸಂದ್ರ ರವಿ ಕಳೆದ ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕ್ಲಾಸ್ ಒನ್ ಗುತ್ತಿಗೆದಾರರಾಗಿರುವ ರವಿಕುಮಾರ್ ಹಲವು ವ್ಯವಹಾರಗಳನ್ನು ಹೊಂದಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ಹಲವು ದಾಖಲೆಗಳನ್ನು, ಬ್ಯಾಂಕ್ ವ್ಯವಹಾರಗಳನ್ನು ಪರಿಶೀಲನೆ ನಡೆಸಿದ್ದಾರೆ.

    ಇಂದು ಬೆಳಗ್ಗೆ 11 ಗಂಟೆಗೆ ತುಮಕೂರು ಐಟಿ ಕಚೇರಿಗೆ ಬರುವಂತೆ ನೋಟಿಸ್ ನೀಡಿದ್ದಾರೆ. ವೃತ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಅನಾಮಧೇಯ ದೂರು ಐಟಿ ಇಲಾಖೆಗೆ ತಲುಪಿರುವ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

  • ಬಾಲ್ಯದಲ್ಲಿ ಅಸ್ಪೃಶ್ಯತೆಯ ನೋವುಂಡಿದ್ದೇನೆ: ಧೃವನಾರಾಯಣ್

    ಬಾಲ್ಯದಲ್ಲಿ ಅಸ್ಪೃಶ್ಯತೆಯ ನೋವುಂಡಿದ್ದೇನೆ: ಧೃವನಾರಾಯಣ್

    ಮೈಸೂರು: ಏಸು ಪ್ರತಿಮೆ ಸ್ಥಾಪನೆಗೆ ಕನಕಪುರ ಹಾರೋಬೆಲೆಯಲ್ಲಿ ಜಮೀನು ನೀಡಿರುವ ವಿಚಾರಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಡೆಗೆ ಮಾಜಿ ಸಂಸದ ಧೃವನಾರಾಯಣ್ ಬೆಂಬಲ ನೀಡಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧೃವನಾರಾಯಣ್, ತಾವು ಬಾಲ್ಯದಲ್ಲಿ ಅಸ್ಪೃಶ್ಯತೆ ವಿಚಾರದಲ್ಲಿ ಅನುಭವಿಸಿದ ನೋವಿನ ಬಗ್ಗೆ ಬೇಸರದಿಂದ ಮಾತನಾಡಿದರು. ಅಸ್ಪೃಶ್ಯತೆ ನೋವುಂಡವರಿಗೆ ಮಾತ್ರ ಅದರ ನೋವು ಗೊತ್ತು. ನಾನು ಬಾಲ್ಯದಲ್ಲಿ ಅಸ್ಪೃಶ್ಯತೆಗೆ ಒಳಗಾಗಿದ್ದೆ ಎಂದು ತಮ್ಮ ನೋವನ್ನು ಬಿಚ್ಚಿಟ್ಟರು.

    ನಾನು ಸೆಂಟ್‍ಫಿಲೋಮಿನ ಬೋರ್ಡಿಂಗ್ ಶಾಲೆಯಲ್ಲಿ ಓದುತ್ತಿದ್ದಾಗ ಅಸ್ಪೃಶ್ಯತೆ ನೋವಿಗೆ ಒಳಗಾಗಿದ್ದೆ. 5ನೇ ತರಗತಿ ಓದುತ್ತಿದ್ದ ನಾನು ಹಾಸ್ಟೆಲ್‍ಗೆ ಹೋದ ಮೊದಲ ದಿನವೇ ಸಹಪಾಠಿಯೊಬ್ಬ ನನ್ನ ಜಾತಿ ಕೇಳಿದ್ದರು. ಹಾಸ್ಟೆಲ್ ಕೋಣೆಯಲ್ಲಿ ಬ್ಯಾಗ್ ಇಟ್ಟು ಬರುತ್ತಿದ್ದ ನನಗೆ ವಿದ್ಯಾರ್ಥಿಯೊಬ್ಬ ನೀನು ಯಾವ ಜಾತಿಯವ ಎಂದು ಕೇಳಿದ್ದ. ಆ ಸಂದರ್ಭದಲ್ಲಿ ಶಾಲೆಯಲ್ಲಿ ಇದ್ದ ಏಕೈಕ ದಲಿತ ವಿದ್ಯಾರ್ಥಿ ನಾನಾಗಿದ್ದೆ. ಈ ರೀತಿ ಯಾರು ಅಸ್ಪೃಶ್ಯತೆಗೆ ಒಳಗಾಗಿಲ್ಲವೋ ಅವರಿಗೆ ಅದು ಗೊತ್ತಾಗುವುದಿಲ್ಲ ಎಂದು ಜಾತಿ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.

    ಹಬ್ಬದ ಸಂದರ್ಭದಲ್ಲಿ ಸಮುದಾಯಕ್ಕೆ ನೋವುಂಟು ಮಾಡುವುದು ಸಮಂಜಸವಲ್ಲ. ಆದ್ದರಿಂದ ನಾನು ಬಿಜೆಪಿ ನಾಯಕರಿಗೆ ಸಲಹೆ ನೀಡುತ್ತಿದ್ದೇನೆ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದು, ಉತ್ತಮ ಆಡಳಿತ ನೀಡುವ ಅವಕಾಶ ಲಭಿಸಿದೆ. ಆದ್ದರಿಂದ ಇಂತಹ ಸಂಗತಿಗಳನ್ನು ರಾಜಕೀಯ ಮಾಡುವುದನ್ನು ಬಿಡಬೇಕು. ಆ ಗ್ರಾಮದಲ್ಲಿ ಶೇ.90 ರಷ್ಟು ಒಂದೇ ಧರ್ಮದವರಿದ್ದು, ಅವರ ಬೇಡಿಕೆಯಂತೆ ಸ್ಥಳೀಯ ಶಾಸಕರು ಕಾನೂನಿನ ಅಡಿ ಜಮೀನು ಮಂಜೂರು ಮಾಡಿದ್ದಾರೆ. ಒಂದು ಧರ್ಮದ ವಿರುದ್ಧ ವೈಷಮ್ಯ ಮೂಡಿಸುವ ಮೂಲಕ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

  • ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರುತ್ತೇನೆ: ವಿಜಯಶಂಕರ್

    ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರುತ್ತೇನೆ: ವಿಜಯಶಂಕರ್

    – ಹುಣಸೂರು ಕ್ಷೇತ್ರದಲ್ಲಿ ಕಮಲ ಅರಳಿಸುವುದು ನನ್ನ ಗುರಿ

    ಮೈಸೂರು: ಬಿಜೆಪಿ ಸೇರುವ ಊಹಾಪೋಹಗಳಿಗೆ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಸಿ.ಎಚ್ ವಿಜಯಶಂಕರ್ ತೆರೆ ಎಳೆದಿದ್ದಾರೆ.

    ಮೈಸೂರಿನಲ್ಲಿ ಅರ್ಜುನ ಅವಧೂತರನ್ನು ಭೇಟಿ ಮಾಡಿ ಬಳಿಕ ಮಾತನಾಡಿದ ಮಾಜಿ ಸಂಸದರು, ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮರಳಿ ಪಕ್ಷಕ್ಕೆ ಸೇರುತ್ತಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವೆ ಎಂದು ತಿಳಿಸಿದ್ದಾರೆ.

    ಜಿಲ್ಲೆಗೆ ಹಾಗೂ ರಾಜ್ಯಕ್ಕೆ ನಿಮ್ಮಿಂದ ಅನೇಕ ಕಾರ್ಯಗಳು ಆಗಬೇಕಿದೆ. ಹೀಗಾಗಿ ನೀವು ರಾಜಕೀಯದಲ್ಲಿ ಮುಂದುವರಿಯಬೇಕು ಎಂದು ಅವಧೂತರು ಆಶೀರ್ವಾದ ಮಾಡಿದ್ದಾರೆ. ಅವರ ಸಲಹೆಯಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇನೆ. ಅವರ ಹಾರೈಕೆಯಲ್ಲಿ ನಂಬಿಕೆ ಇದೆ ಎಂದ ಹೇಳಿದರು.

    ಸಿಎಂ ಯಡಿಯೂರಪ್ಪ ಅವರು ಮೊನ್ನೆಯಷ್ಟೇ ನನ್ನನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದರು. ಇಬ್ಬರ ಮಧ್ಯೆ ಸುದೀರ್ಘ ಚರ್ಚೆ ನಡೆಯಿತು.  ಆಗ ಸಿಎಂ, ರಾಜಕೀಯದಲ್ಲಿ ವ್ಯತ್ಯಾಸಗಳು ಆಗುವುದು ಸಹಜ. ಅದನ್ನು ಬಿಟ್ಟು ಪಕ್ಷಕ್ಕೆ ಬನ್ನಿ ಎಂದು ಸಲಹೆ ಕೊಟ್ಟಿದ್ದರು. ಅಷ್ಟೇ ಅಲ್ಲದೆ ನಳಿನ್ ಕುಮಾರ್ ಕಟೀಲ್ ಮೈಸೂರಿಗೆ ಬಂದಿದ್ದಾಗ ಪಕ್ಷಕ್ಕೆ ಬನ್ನಿ ಅಂತ ಆಹ್ವಾನ ನೀಡಿದ್ದರು. ಹೀಗಾಗಿ ಮರಳಿ ಬಿಜೆಪಿಗೆ ಸೇರಲು ಮುಂದಾಗಿದ್ದೇನೆ ಎಂದರು.

    ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ. ಹುಣಸೂರು ಉಪ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವುದು ನನ್ನ ಗುರಿ. ಹುಣಸೂರು ಉಪ ಚುನಾವಣೆ ನನ್ನ ಪ್ರತಿಷ್ಠೆಯ ವಿಚಾರವಾಗಿದೆ. ಏಕೆಂದರೆ ಅದು ನನ್ನ ತಾಲೂಕು. ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

    ಕಾಂಗ್ರೆಸ್‌ನಲ್ಲಿ ಪರಿಸ್ಥಿತಿ ನಿಭಾಯಿಸಲು ನನಗೆ ಸಾಧ್ಯವಾಗಲಿಲ್ಲ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಅದೇ ಪರಿಸ್ಥಿತಿ ಇದೆ. ಆದರೆ ಅವರು ಸಮರ್ಥರಿದ್ದಾರೆ. ಅದೆಲ್ಲವನ್ನೂ ಎದುರಿಸುವ ಶಕ್ತಿ ಅವರಿಗಿದೆ. ಪಕ್ಷ ನನಗೆ ಎರಡು ವರ್ಷದಲ್ಲಿ ಯಾವುದೇ ಜವಾಬ್ದಾರಿ ನೀಡಲಿಲ್ಲ. ಚುನಾವಣೆ ಸೋತ ನಂತರ ಮಾತನಾಡಿಸಲಿಲ್ಲ. ಜನರ ಮಧ್ಯೆ ಉಳಿಯಲು ಬಿಜೆಪಿಗೆ ಸೇರುವ ನಿರ್ಧಾರ ತಗೆದುಕೊಂಡಿದ್ದೇನೆ. ಈ  ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಕ್ಕೆ ಯಾವುದೇ ಪಶ್ಚಾತ್ತಾಪವಿಲ್ಲ. ಆ ಕಾಲಘಟ್ಟಕ್ಕೆ ಅದು ಸರಿ ಇತ್ತು. ಈಗ ಈ ನಿರ್ಧಾರ ಸರಿ ಇದೆ ಎಂದು ಸಿ.ಎಚ್. ವಿಜಯಶಂಕರ್ ಸ್ಪಷ್ಟನೆ ನೀಡಿದರು.

  • ಹಸಿರು ಟವಲ್ ಹಾಕ್ಕೊಂಡು ಬಿಎಸ್‍ವೈರಿಂದ ಗೋಸುಂಬೆ ರಾಜಕಾರಣ: ಉಗ್ರಪ್ಪ ವಾಗ್ದಾಳಿ

    ಹಸಿರು ಟವಲ್ ಹಾಕ್ಕೊಂಡು ಬಿಎಸ್‍ವೈರಿಂದ ಗೋಸುಂಬೆ ರಾಜಕಾರಣ: ಉಗ್ರಪ್ಪ ವಾಗ್ದಾಳಿ

    – ಬಿಎಸ್‍ವೈಗೆ ತಾಕತ್ ಇದ್ರೆ ಸರ್ಕಾರ ವಿಸರ್ಜಿಸಿ ಜನಾದೇಶಕ್ಕೆ ಬರಲಿ

    ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸಿರು ಟವಲ್ ಹಾಕಿಕೊಂಡು ಗೋಸುಂಬೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಮಾಜಿ ಸಂಸದರು, ಬಿ.ಎಸ್.ಯಡಿಯೂರಪ್ಪನವರು ಮೊದಲ ಬಾರಿ ಸಿಎಂ ಆಗಿದ್ದಾಗ ರೈತರ ಸಾವಿಗೆ ಕಾರಣವಾಗಿದ್ದರು. ಹಾವೇರಿಯಲ್ಲಿ ಗೋಲಿಬಾರ್ ಮಾಡಿಸಿ ರೈತ ಸಿದ್ದಲಿಂಗಪ್ಪ ಚೂರಿ ಸಾವಿಗೆ ಕಾರಣವಾಗಿದ್ದರು ಎಂದು ಆರೋಪಿಸಿದರು.

    ರಾಜ್ಯದಲ್ಲಿ ಪ್ರವಾಹ ಎದುರಾದಾಗ ಗದಗನಲ್ಲಿ ಲಾಠಿ ಚಾರ್ಜ್ ಮಾಡಿಸಿದ್ದರು. ಬೆಳಗಾವಿಯಲ್ಲಿ ಪರಿಹಾರ ಕೇಳಿದ್ದಕ್ಕೆ ಅರೆಸ್ಟ್ ಮಾಡಿಸಿದ್ದರು. ಸಿಎಂ ಯಡಿಯೂರಪ್ಪ ಅವರು ಗೋಸುಂಬೆ ರಾಜಕಾರಣಿಯಾಗಿದ್ದಾರೆ. ಜನರ ಜೊತೆಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಕೆಲಸ ಮಾಡಲಿ. ಬರ ಮತ್ತು ಪ್ರವಾಹದಿಂದ ನಷ್ಟ ಅನುಭವಿಸಿದ ರೈತರ ಸಾಲ ಮನ್ನಾ ಮಾಡಲಿ ಎಂದು ಹೇಳಿದರು.

    ಸಿಎಂ ಯಡಿಯೂರಪ್ಪ ಸತ್ಯ ಹರಿಶ್ಚಂದ್ರನ ಮೊಮ್ಮಗ ಅಲ್ಲ. ಜನರನ್ನು ಬೇರೆಡೆ ಸೆಳೆದು ಸುಳ್ಳು ಹೇಳುವ ನಾಯಕ. ಅವರು ಸುಳ್ಳಿನ ಕಂತೆಯಲ್ಲಿ ಸರ್ಕಾರ ರಚಿಸಿದ್ದಾರೆ. ಅವರಿಗೆ ತಾಕತ್ ಇದ್ದರೆ ಸರ್ಕಾರ ವಿಸರ್ಜಿಸಿ, ಮತ್ತೆ ಜನಾದೇಶಕ್ಕೆ ಬರಲಿ. ನಾವು ಎಲ್ಲಿ ಇರಬೇಕು ಎನ್ನುವುದನ್ನು ಜನ ತೀರ್ಮಾನಿಸುತ್ತಾರೆ ಎಂದು ಸವಾಲು ಹಾಕಿದರು.

    ಬಳ್ಳಾರಿ ವಿಭಜನೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಂಸದರು, ಯಾವತ್ತೂ ಇರಲಾರದ ವಿಭಜನೆ ವಿಚಾರ ಈಗ ಅನರ್ಹ ಸಿಂಗ್ ಆನಂದ್ ಸಿಂಗ್ ಅವರಿಗೆ ಬಂದಿದೆ. ಮೂರು ಬಾರಿ ಶಾಸಕರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಏನು ಮಾಡಿದ್ದಾರೆ? ಉಪ ಚುನಾವಣೆಗಾಗಿ ಜನರ ಭಾವನೆಗಳ ಜೊತೆ ಆಟ ಆಡುತ್ತಿದ್ದಾರೆ. ಅವರ ಮನೆ ಪಕ್ಕದ ಜಲಾಶಯ ಹೂಳು ತುಂಬಿದ್ದರೂ ಅದರ ಬಗ್ಗೆ ಯೋಚನೆ ಮಾಡಲಿಲ್ಲ. ಆನಂದ್ ಸಿಂಗ್ ಏನೂ ಮಾಡಿಲ್ಲ, ಎನ್ನುವುದು ಜನರಿಗೆ ಗೊತ್ತಿದೆ. ಅವರ ಸಾಧನೆ ಅಂದರೆ ಮಾಲ್‍ಗಳು ಎಂದು ವಾಗ್ದಾಳಿ ನಡೆಸಿದರು.

    ಬಳ್ಳಾರಿ ಹಲವು ತ್ಯಾಗ ಬಲಿದಾನದಿಂದ ರೂಪುಗೊಂಡ ಜಿಲ್ಲೆಯಾಗಿದೆ. 1955 -56ರ ಜನಾಭಿಪ್ರಾಯದ ಮೂಲಕ ರೂಪುಗೊಂಡ ಜಿಲ್ಲೆಯಾಗಿದ್ದು, ತುಂಗಭದ್ರಾ ಜಲಾಶಯ ಹಾಗೂ ಹಂಪಿಯನ್ನು ಬಿಟ್ಟು ಬಳ್ಳಾರಿ ಊಹಿಸಿಕೊಳ್ಳಲು ಸಾಧ್ಯವಿಲ್ಲ. ನಾಲ್ಕು ಜನ ರಾಜಕಾರಣಿಗಳಿಂದ ಬಳ್ಳಾರಿ ವಿಭಜನೆ ಆಗಲ್ಲ. ಜನರ ಅಭಿಪ್ರಾಯದಿಂದ ಬಳ್ಳಾರಿ ವಿಭಜನೆ ಆಗಬೇಕು ಎಂದರು.

    ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ವಿಷಯ ಕೈ ಬಿಡುವ ಸಿಎಂ ನಿರ್ಧಾರಕ್ಕೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ. ಟಿಪ್ಪು ಸುಲ್ತಾನ್ ಬಗ್ಗೆ ದೇಶದ ಮೊದಲ ಪ್ರಜೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭಾಷಣ ಮಾಡಿದ್ದರು. ಆ ಭಾಷಣ ಬಿಜೆಪಿಯವರು ಮೊದಲು ಕೇಳಲಿ. ರಾಷ್ಟ್ರಪತಿಗಳು ಬೆಂಗಳೂರಿಗೆ ಬಂದಾಗ ಟಿಪ್ಪು ಸುಲ್ತಾನ್ ದೇಶಪ್ರೇಮಿ ಎಂದು ಹೇಳಿದ್ದರು. ಹಾಗಾದರೆ ಆ ಭಾಷಣ ಸತ್ಯವೋ ಅಥವಾ ಸುಳ್ಳೋ ಎಂದು ಬಿಜೆಪಿ ಮೊದಲು ಸ್ಪಷ್ಟಪಡಿಸಲಿ ಎಂದರು.

    ಸಿಎಂ ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಒಂದು ನಿಲುವು, ಇಗೊಂದು ನಿಲುವು. ಏಕೆಂದರೆ ಕೆಜೆಪಿ ಕಟ್ಟಿದಾಗ ಟಿಪ್ಪು ಜಯಂತಿ ಮಾಡುವುದು ನನ್ನ ಗುರಿ ಎಂದಿದ್ದರು. ಈಗ್ಯಾಕೆ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ವಿಷಯವನ್ನು ಕೈಬಿಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ಪ್ರಶ್ನಿಸಿದರು.

  • ಅಧಿಕಾರಿಗಳಿಗೆ ಮಾಜಿ ಸಂಸದ ಉಗ್ರಪ್ಪ ಆವಾಜ್

    ಅಧಿಕಾರಿಗಳಿಗೆ ಮಾಜಿ ಸಂಸದ ಉಗ್ರಪ್ಪ ಆವಾಜ್

    ಬಳ್ಳಾರಿ: ಮಾಜಿ ಸಂಸದರಾದ ವಿ.ಎಸ್ ಉಗ್ರಪ್ಪ ಅಧಿಕಾರಿಗಳಿಗೆ ನಾನ್ ಸೆನ್ಸ್ ಎಂದು ಹೇಳುವ ಮೂಲಕ ಆವಾಜ್ ಹಾಕಿದ್ದಾರೆ

    ಇಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಜೊತೆ ಅಲ್ಲಿಪುರ ಕೆರೆ ವೀಕ್ಷಣೆ ಅಗಮಿಸಿದ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಪಾಲಿಕೆ ಮುಖ್ಯ ಎಂಜಿನಿಯರ್ ದಿನೇಶ್ ಅವರಿಗೆ ಕ್ಲಾಸ್ ತೆಗೆದುಕೊಂಡರು.

    ಅಲ್ಲದೇ ಅಧಿಕಾರಿಗಳ ಮೇಲೆ ನಾನ್‍ಸೆನ್ಸ್ ಎನ್ನುವ ಪದ ಬಳಕೆ ಮಾಡಿದ್ದಾರೆ. ತುಂಗಾಭದ್ರಾ ನದಿಯ ನೀರನ್ನು ಬಳ್ಳಾರಿ ನಗರಕ್ಕೆ ಕುಡಿಯಲು ಬಳಸುವುದಕ್ಕೆ ನೀಡುವ ಉದ್ದೇಶದಿಂದ ನೀರನ್ನು ಕೆರೆಗೆ ಡಂಪ್ ಮಾಡಲಾಗುತ್ತಿದೆ. ಈ ಯೋಜನೆಯನ್ನು ವೀಕ್ಷಿಸಲು ಆಗಮಿಸಿದಾಗ ಸರಿಯಾಗಿ ಕೆಲಸ ಮಾಡಿ, ಏನ್ ಮಾತಾಡ್ತಿರಾ ನಾನ್‍ಸೆನ್ಸ್ ಎನ್ನುವ ಮೂಲಕ ಅಧಿಕಾರಿಗಳನ್ನು ಜಾಡಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]