Tag: ಮಾಜಿ ಸಚಿವ ಸತೀಶ್ ಜಾರಕಿಹೊಳಿ

  • ಮುಂದೆ ಶಾಸಕರನ್ನು ಕರೆದೊಯ್ಯುವ ಉದ್ದೇಶದಿಂದ ರೆಸಾರ್ಟ್ ಗೆ ಭೇಟಿ – ಸತೀಶ್ ಜಾರಕಿಹೊಳಿ

    ಮುಂದೆ ಶಾಸಕರನ್ನು ಕರೆದೊಯ್ಯುವ ಉದ್ದೇಶದಿಂದ ರೆಸಾರ್ಟ್ ಗೆ ಭೇಟಿ – ಸತೀಶ್ ಜಾರಕಿಹೊಳಿ

    ಬೆಳಗಾವಿ: ಸಮ್ಮಿಶ್ರ ಸರ್ಕಾರವನ್ನು ಕೆಡವಲು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಅವರು, ಬೆಳಗಾವಿ ರೆಸಾರ್ಟ್ ಗೆ ಭೇಟಿ ನೀಡಿದ್ದು ನಿಜ. ಮುಂದಿನ ದಿನಗಳಲ್ಲಿ ನಮ್ಮ ಶಾಸಕರನ್ನು ಕರೆದ್ಯೊಯವ ಉದ್ದೇಶದಿಂದ ಭೇಟಿ ನೀಡಲಾಗಿತ್ತು ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.

    ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅಪರೇಷನ್ ಕಮಲದ ಬಗ್ಗೆ ನಮಗೆ ಮಾಹಿತಿ ಇಲ್ಲ. ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ಸಾಮಾನ್ಯ. ಇದು ಎಲ್ಲಾ ಮುಖ್ಯಮಂತ್ರಿಗಳ ಸಮಯದಲ್ಲೂ ಇರುತ್ತದೆ ಅಷ್ಟೇ. ಆದರೆ ಸಿದ್ದರಾಮಯ್ಯ ಅವರ ಮೇಲೆ ಹೈಕಮಾಂಡ್ ಗೆ ದೂರು ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

    ಇದೇ ವೇಳೆ ಬೆಳಗಾವಿಯ ಸಾತೇರಿ ರೆಸಾರ್ಟ್ ಭೇಟಿ ಮಾಡಿ ಪರಿಶೀಲನೆ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸ್ನೇಹಿತ ಮಗನ ಮದುವೆಗೆ ಭೇಟಿ ನೀಡಿದ್ದೆ. ಈ ವೇಳೆ ಬೆಳಗಾವಿಯ ಸಾತೇರಿ ರೆಸಾರ್ಟ್ ಗೂ ಕೂಡ ಹೋಗಿದ್ದೆ. ಮುಂದೇ ನಮ್ಮ ಶಾಸಕರನ್ನು ಕರೆದುಕೊಂಡು ಹೋಗಲು ನೆರವಾಗಲಿದೆ. ಮುಂದೆ ಶಾಸಕರನ್ನು ಟೂರ್ ಮಾಡಲಿಕ್ಕೆ ರೆಸಾರ್ಟ್ ನೋಡಿಕೊಂಡು ಬಂದಿದ್ದೆನೆ ವಿನಾಃ ಪಕ್ಷಾಂತರ ಮಾಡಲು ಕರೆದುಕೊಂಡು ಹೋಗುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

    ನಾನು ಯಾವುದೇ ಆತೃಪ್ತರ ಸಂಪರ್ಕದಲ್ಲಿ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಮ್ಮ ಬೇಡಿಕೆಗಳನ್ನು ಹೈಕಮಾಂಡ್ ಅವರಿಗೆ ತಿಳಿಸಿದ್ದೇವೆ. ಸಂಪುಟ ವಿಸ್ತರಣೆ ಮಾಡಿದರೆ ಒಳ್ಳೇಯದು. ಶೀಘ್ರವೇ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಮಾಡುವುದರಿಂದ ಸರ್ಕಾರದ ಆಡಳಿತ ಸುಗಮವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನು ಓದಿ : ರಾಜ್ಯದ ದೋಸ್ತಿ ಸರ್ಕಾರವೇ ಬೆಚ್ಚಿ ಬೀಳುವಂತಹ ಬೆಳವಣಿಗೆ – ಗುಪ್ತಚರ ಇಲಾಖೆ ನೀಡಿದ್ದ ಆಡಿಯೋ ಔಟ್

    ಕಳೆದ ಕೆಲ ದಿನಗಳಿಂದ ಸತೀಶ್ ಜಾರಕಿಹೊಳಿ ಅವರ ಸಹೋದರ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಕಳೆದ ಕೆಲ ದಿನಗಳಿಂದ ಮಾಧ್ಯಮಗಳಿಂದ ದೂರವೇ ಉಳಿದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ರಮೇಶ್ ಜಾರಕಿಹೊಳಿ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದ್ದು, ಪಕ್ಷಾಂತರದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬ ಅಂಶ ಬೆಳಗಾವಿ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರ ಟೇಕಾಫ್ ಆಗಿಲ್ಲ – ಶಾಸಕರಲ್ಲಿ ಅಸಮಾಧಾನ ಇರೋದು ನಿಜ: ಸತೀಶ್ ಜಾರಕಿಹೊಳಿ

    ಸರ್ಕಾರ ಟೇಕಾಫ್ ಆಗಿಲ್ಲ – ಶಾಸಕರಲ್ಲಿ ಅಸಮಾಧಾನ ಇರೋದು ನಿಜ: ಸತೀಶ್ ಜಾರಕಿಹೊಳಿ

    ಬೆಂಗಳೂರು: ಪಕ್ಷದ ಶಾಸಕರದಲ್ಲಿ ಅಸಮಾಧಾನ ಇರುವುದು ನಿಜ, ನನ್ನ ಬಳಿಯೂ ಕೆಲ ಶಾಸಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ, ಕೆಲ ಇಲಾಖೆಗಳು ಮಾತ್ರ ಕೆಲಸ ಮಾಡುತ್ತಿದ್ದು. ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಲು ಮತ್ತಷ್ಟು ಸಮಯ ಬೇಕಿದೆ. ಹಾಗೆಯೇ ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಆಗುವುದು ಅನುಮಾನ. ಎಲ್ಲಾ ಸರ್ಕಾರದ ವೇಳೆಯಲ್ಲೂ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಸಿದ್ದರಾಮಯ್ಯ ಅವರು ಕೂಡ ಸಿಎಂ ಆಗಿದ್ದಾಗ ಈ ಸಮಸ್ಯೆ ಇತ್ತು. ಆದರೆ ಏನೇ ಸಮಸ್ಯೆಗಳಿದ್ದರೂ ಪಕ್ಷದ ಆಂತರಿಕ ಸಭೆಯಲ್ಲಿ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದರು.

    ಸಮ್ಮಿಶ್ರ ಸರ್ಕಾರ ಕೈಗೊಂಡ ಸಾಲಮನ್ನಾದಿಂದ ಇತರೇ ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಆದ್ದರಿಂದ ಇಂತಹ ಕಾರ್ಯಗಳಿಗೆ ಹಣ ಸರಿಯಾಗಿ ಒದಗಿಸುತ್ತಿಲ್ಲ. ಬಿಜೆಪಿಯವರು ಪಕ್ಷ ಏನೇ ಹೇಳಬಹುದು. ಶಾಸಕರು ಕೂಡ ಬೇಸರ ವ್ಯಕ್ತಪಡಿಸಿರಬಹುದು. ಆದರೆ ನಾವು ಯಾವುದೇ ರೀತಿಯಲ್ಲಿ ಶಾಸಕರ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಡಿಕೆಶಿ ಬಳ್ಳಾರಿ ಭೇಟಿ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಭೇಟಿ ನೀಡಿದ್ದಾರೆ. ಅಲ್ಲದೇ ಸಿಎಂ ಕುಮಾರಸ್ವಾಮಿ ಅವರು ಸರ್ಕಾರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದ್ದಾರೆ. ಇದರ ಅನ್ವಯ ಜಿಲ್ಲೆಯಲ್ಲಿ ಬೆಳೆಗಾರರು ಹೋರಾಟ ನಡೆಸುತ್ತಿರುವ ಕಾರಣ ಅವರ ಮನವೊಲಿಸಲು ಭೇಟಿ ನೀಡಿರಬಹುದು ಅಷ್ಟೇ. ಡಿಕೆ ಶಿವಕುಮಾರ್ ನಾನು ಕಳೆದ 20 ವರ್ಷದಿಂದ ಬಹಳ ಆತ್ಮೀಯ ಸ್ನೇಹಿತರು. ಜಿಲ್ಲೆಗೆ ಬೇಕಾದ ಪ್ರಮುಖ ಕೆಲಸಗಳನ್ನು ಅವರು ಮಾಡಿದ್ದಾರೆ ಎಂದರು. ಇದನ್ನು ಓದಿ: ಬಳ್ಳಾರಿ ಆಯ್ತು ಈಗ ಜಾರಕಿಹೊಳಿ ಕೋಟೆಯಲ್ಲಿ ಹವಾ – ರೈತರ ಜೊತೆ ಡಿಕೆಶಿ ಸಂಧಾನ ಯಶಸ್ವಿ

    ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾತನಾಡಿದ್ದು, ಕೆಲ ಮೀಸಲಾತಿ ವಿಚಾರವಾಗಿ ಹಾಗೂ ವರ್ಗಾವಣೆ ಕುರಿತು ಮಾತನಾಡಬೇಕಿತ್ತು ಅಷ್ಟೇ. ಕ್ಷೇತ್ರಕ್ಕೆ ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಸಾಕಷ್ಟು ಅನುದಾನ ಬರುತ್ತಿತ್ತು. ಆದ್ರೆ ಈಗ ಅನುದಾನ ಕಡಿಮೆ ಆಗಿದೆ. ಮೈತ್ರಿ ಸರ್ಕಾರದಲ್ಲಿ ಸಮರ್ಪಕ ಅನುದಾನ ಶಾಸಕರ ಕ್ಷೇತ್ರಗಳಿಗೆ ಬರುತ್ತಿಲ್ಲ. ಮುಂದಿನ ವರ್ಷದಲ್ಲಿ ಈ ಹಣ ಹೆಚ್ಚಳ ಆಗುವ ನಿರೀಕ್ಷೆ ಇದೆ. ಆದ್ದರಿಂದ ತಾಳ್ಮೆ ವಹಿಸಿ ಕೆಲಸ ಮಾಡುತ್ತಿದ್ದೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv