Tag: ಮಾಡಾಳ್ ವಿರೂಪಾಕ್ಷಪ್ಪ

  • ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ಜಾಮೀನು

    ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ಜಾಮೀನು

    ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ಅಧ್ಯಕ್ಷರಾಗಿದ್ದಾಗ ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್‌ ವಿರೂಪಾಕ್ಷಪ್ಪಗೆ (Madal Virupakshappa) ಜಾಮೀನು ಮಂಜೂರಾಗಿದೆ.

    ಶಾಸಕ ವಿರೂಪಾಕ್ಷಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. 5 ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ. ಇದನ್ನೂ ಓದಿ: ಶೆಟ್ಟರ್‌ಗೆ ಟಿಕೆಟ್ ತಪ್ಪಲು ನಾನೇ ಕಾರಣ ಅನ್ನೋದು ಸುಳ್ಳು: ಬೊಮ್ಮಾಯಿ

    ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಬಂಧಿಸಿದ್ದರು. ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ವಿರೂಪಾಕ್ಷಪ್ಪ ಜೊತೆ ಅವರ ಪುತ್ರ ಪ್ರಶಾಂತ್‌ ಮಾಡಾಳ್‌, ಅವರ ಖಾಸಗಿ ಕಚೇರಿಯ ಅಕೌಂಟೆಂಟ್‌ ಸುರೇಂದ್ರ, ಚಿತ್ರದುರ್ಗದ ಭೀಮಸಂದ್ರ ನಿವಾಸಿ ಸಿದ್ದೇಶ್‌, ಬೆಂಗಳೂರಿನ ಕರ್ನಾಟಕ ಅರೋಮಾಸ್‌ ಕಂಪನಿಯ ನೌಕರರಾದ ಆಲ್ಬರ್ಟ್‌ ನಿಕೋಲಸ್‌ ಮತ್ತು ಗಂಗಾಧರ ಅವರನ್ನು ಕೆಎಸ್‌ಡಿಎಲ್‌ ಕಚ್ಚಾವಸ್ತು ಪೂರೈಕೆಯಲ್ಲಿನ ಲಂಚ ಪ್ರಕರಣದಲ್ಲಿ ಮಾರ್ಚ್‌ 2ರಂದು ಬಂಧಿಸಲಾಗಿತ್ತು. ಅವರೆಲ್ಲರೂ ಈವರೆಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

    ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ದಾಳಿ ನಡೆಸಿ ಪ್ರಶಾಂತ್‌ ಮಾಡಾಳ್‌ರನ್ನು ಬಂಧಿಸಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ತಲೆಮರೆಸಿಕೊಂಡಿದ್ದರು. ನಂತರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದನ್ನೂ ಓದಿ: ಬಿಜೆಪಿ ಶಾಸಕ ಅನಿಲ್ ಬೆನಕೆಗೆ ಬಿ.ಎಲ್ ಸಂತೋಷ್ ಬುಲಾವ್

  • ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಮಾಡಾಳ್‌ ವಿರೂಪಾಕ್ಷಪ್ಪನನ್ನ ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು (Lokayukta Police) 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದಿದ್ದರು. ಪೊಲೀಸ್‌ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಈ ವೇಳೆ ಮಾಡಾಳ್‌ ಪರ ವಕೀಲರು ಅವರಿಗೆ ಮನೆಯ ಊಟವನ್ನೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಅನುಮತಿ ನೀಡದ ಕೋರ್ಟ್‌ (Court) ಜೈಲಿನ ಪ್ರಕಾರವೇ ಊಟ ನೀಡುವಂತೆ ಸೂಚಿಸಿದೆ. ಅಲ್ಲದೇ ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಂದು ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿದೆ.

    ವಿಚಾರಣೆ ವೇಳೆ ಮಾಡಾಳ್‌ ವಿರೂಪಾಕ್ಷಪ್ಪ ಆರೋಗ್ಯ ಸಮಸ್ಯೆ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿಕೊಂಡರು. ನಿನ್ನೆ ಆರೋಗ್ಯ ತಪಾಸಣೆ ನಡೆಸಿದ್ದಾರೆ ಅದರ ವರದಿ ನೋಡುವಂತೆಯೂ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌ ಅನಾರೋಗ್ಯ ಸಮಸ್ಯೆ ಬಂದರೆ, ಜೈಲಿನಲ್ಲೇ ಆಸ್ಪತ್ರೆ ಇದೆ ಎಂದು ತಿಳಿಸಿತು. ಇದನ್ನೂ ಓದಿ: ಲೋಕಾಯುಕ್ತ ಕಚೇರಿಯಲ್ಲಿ ಕೋಟಿ ಕುಬೇರ ಮಾಡಾಳ್‍ ವಾಸ್ತವ್ಯ!

    ಕಳೆದ ಐದು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದರು. ಮರುದಿನ ಕೋರ್ಟ್‌ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

    ನಂತರ ಲೋಕಾಯುಕ್ತ ಪೊಲೀಸರು 10ದಿನ ಕಸ್ಟಡಿಗೆ ಕೇಳಿದ್ದರು. ಆದರೆ ಮಾಡಾಳ್ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಬಂದಿದ್ದಾರೆ. ಈಗ ಮತ್ತೆ 10 ದಿನ ಅವಶ್ಯಕತೆ ಇಲ್ಲ ಎಂದು ವಾದ ಮಂಡಿಸಿದ್ದರು. 10 ದಿನ ಕಸ್ಟಡಿ ಅತ್ಯವಶ್ಯಕವಾಗಿದೆ. ಇದುವರೆಗೆ ವಿಚಾರಣೆಗೆ ಸಹಕರಿಸಿಲ್ಲ ಎಂದು ಲೋಕಾಯುಕ್ತ ಮರು ಮನವಿ ಮಾಡಿದ್ದರು. ಇಬ್ಬರ ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು.

  • ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಲಂಚ ಪಡೆದ ಆರೋಪದಲ್ಲಿ ಲೋಕಾ ಕಸ್ಟಡಿಯಲ್ಲಿದ್ದು, ಇದೀಗ ಅವರನ್ನು ಮೇಂಟೈನ್ ಮಾಡೋದು ಲೋಕಾಯುಕ್ತ (Lokayukta Police) ಪೊಲೀಸರಿಗೆ ದೊಡ್ಡ ಸವಾಲಾಗಿದೆ ಎಂಬ ಮಾಹಿತಿ ಲಭಿಸಿದೆ.

    ಹೌದು. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಬೆಡ್ ರೂಂನಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣದಲ್ಲಿ ಲೋಕಾಯಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧನ ಮಾಡಿದ್ದಾರೆ. ಕಳೆದ ನಾಲ್ಕು ದಿನದಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರ ಕಸ್ಟಡಿಯಲ್ಲಿದ್ದು, ಕೋಟಿ ಕೋಟಿ ಹಣದ ತನಿಖೆ ಎದುರಿಸುತ್ತಿದ್ದಾರೆ. ದಿನಕ್ಕೆ ನಾಲ್ಕಾರು ಗಂಟೆ ವಿಚಾರಣೆ ಎದುರಿಸುತ್ತಿದ್ದಾರೆ. ಇದನ್ನೂ ಓದಿ: Mood Of Karnataka – `ಪಬ್ಲಿಕ್’ ಸರ್ವೆಯಲ್ಲಿ ಕರ್ನಾಟಕ ಕುರುಕ್ಷೇತ್ರ ಅತಂತ್ರ

    ತನಿಖೆ ಬಳಿಕ ಲೋಕಾಯುಕ್ತ ಕಸ್ಟಡಿಯಲ್ಲಿರೋ ಮಾಡಾಳ್ ವಿರೂಪಾಕ್ಷಪ್ಪ ಲೋಕಾ ಕಚೇರಿಯಲ್ಲಿ ರಾತ್ರಿ ಕಳೆಯಲು ಸಾಕಷ್ಟು ಹೆಣಗಾಡುತ್ತಿದ್ದಾರಂತೆ. ಇದ್ದಕ್ಕಿದ್ದಂತೆ ಮೌನಕ್ಕೆ ಜಾರಿ ಹೋಗೋದು ಗಂಟೆಗಟ್ಟಲೆ ಯಾರ ಜೊತೆ ಮಾತನಾಡದೇ ಸುಮ್ಮನಾಗೋದು. ಕೆಲವು ವೇಳೆ ಗಳಗಳ ಅಳಲು ಶುರು ಮಾಡ್ಕೊಳ್ತಾರಂತೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಈ ನಡೆ ಲೋಕಾಯುಕ್ತ ಪೊಲೀಸರಿಗೆ ದೊಡ್ಡ ಸವಾಲಾಗಿದೆ ಅಂತೆ.

    ಮಾಡಾಳ್ ವಿರೂಪಾಕ್ಷಕ್ಕೆ ಏಕಾಂಗಿತನ ಕಾಡುತ್ತಿರುಬಹುದೆಂದು ಪೊಲೀಸರೇ ಮಾಡಾಳ್ ವಿರೂಪಾಕ್ಷಪ್ಪಗೆ ಮೋಟಿವೇಷನ್ ಮಾಡಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರಂತೆ. ಏನು ಆಗೋದಿಲ್ಲ ನೀವು ಧೈರ್ಯವಾಗಿರಬೇಕು. ಈ ರೀತಿಯ ನಡವಳಿಕೆ ನಿಮ್ಮನ್ನ ಕುಗ್ಗಿಸುತ್ತೆ. ಹಾಗಾಗಿ ಹೆಚ್ಚಾಗಿ ತಲೆಗೆ ಹಾಕಿಕೊಳ್ಳದೆ ಹಾಯಾಗಿ ಇರಿ ಎಂದು ನಿತ್ಯ ಮಾಡಾಳ್ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಪೊಲೀಸರು ಮೋಟಿವೇಷನ್ ಮಾಡುತ್ತಿದ್ದಾರಂತೆ.

    ಲೋಕಾಯುಕ್ತ ಕಸ್ಟಡಿಯಲ್ಲಿರೋ ಮಾಡಾಳ್ ವಿರೂಪಾಕ್ಷಪ್ಪ ಅವರ ಕಸ್ಟಡಿ ಇಂದಿಗೆ ಅಂತ್ಯವಾಗುತ್ತಿದೆ. ಕಸ್ಟಡಿ ಮುಗಿದ ಬಳಿಕ ಬಹುತೇಕ ಜೈಲಿಗೆ ಕಳಿಸಿಕೊಡುವ ಸಾಧ್ಯತೆ ಹೆಚ್ಚಾಗಿದ್ದರಿಂದ ಹೆಚ್ಚು ಚಿಂತೆಗೆ ಜಾರಿರೋ ಸಾಧ್ಯತೆ ಇದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

  • ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 5 ದಿನ ಪೊಲೀಸ್ ಕಸ್ಟಡಿಗೆ

    ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 5 ದಿನ ಪೊಲೀಸ್ ಕಸ್ಟಡಿಗೆ

    – ಕೋರ್ಟ್ ಹಾಲ್‌ನಲ್ಲಿ ತಲೆ ಸುತ್ತು ಎಂದ ಮಾಡಾಳ್

    ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರನ್ನು 5 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ (Police Custody) ಒಪ್ಪಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಮಾಡಿದೆ.

    ಲೋಕಾಯುಕ್ತ ಟ್ರ್ಯಾಪ್ ಹಾಗೂ ರೇಡ್ ವೇಳೆ ಕಚೇರಿ ಹಾಗೂ ಮನೆಯಲ್ಲಿ ಸಿಕ್ಕ 8 ಕೋಟಿ ಹಣದ ಸಂಬಂಧ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ (Court) ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಏಪ್ರಿಲ್ 1ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

    ಲೋಕಾಯುಕ್ತ 10ದಿನ ಕಸ್ಟಡಿಗೆ ಕೇಳಿತ್ತು. ಆದರೆ ಮಾಡಾಳ್ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಬಂದಿದ್ದಾರೆ. ಈಗ ಮತ್ತೆ 10 ದಿನ ಅವಶ್ಯಕತೆ ಇಲ್ಲ ಎಂದು ವಾದ ಮಂಡನೆ ಮಾಡಿದ್ದಾರೆ. 10 ದಿನ ಕಸ್ಟಡಿ ಅತ್ಯವಶ್ಯಕವಾಗಿದೆ. ಇದುವರೆಗೆ ವಿಚಾರಣೆಗೆ ಸಹಕರಿಸಿಲ್ಲ ಎಂದು ಲೋಕಾಯುಕ್ತ ಮನವಿ ಮಾಡಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರದವರೆಗೆ ಅಂದರೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ನನ್ನ ತಂದೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ – ಸಾರ್ವಜನಿಕ ವೇದಿಕೆಯಲ್ಲಿ ದರ್ಶನ್ ಧ್ರುವನಾರಾಯಣ ಮೊದಲ ಭಾಷಣ

    ಈ ವೇಳೆ ಕೋರ್ಟ್ ಹಾಲ್‌ನಲ್ಲಿ ನನಗೆ ತಲೆ ಸುತ್ತು ಎಂದು ಮಾಡಾಳ್ ಹೇಳಿದ್ದರು. ಕುಳಿತುಕೊಳ್ಳಲು ಮಾಡಾಳ್ ಮನವಿ ಮಾಡಿದ್ದಾರೆ. ಈ ವೇಳೆ ನ್ಯಾಯಾಧೀಶರ ಅನುಮತಿ ಮೇರೆಗೆ ಮಾಡಾಳ್ ಕುಳಿತುಕೊಂಡರು. ಇದನ್ನೂ ಓದಿ: ಕಾರ್ಮಿಕರನ್ನು ಸತಾಯಿಸಿ ಮನಬಂದಂತೆ ಕಿಟ್‌ಗಳನ್ನು ಎಸೆದ ಸಿಬ್ಬಂದಿ

  • ಲೋಕಾಯುಕ್ತ ಕಚೇರಿಯಲ್ಲಿ ಕೋಟಿ ಕುಬೇರ ಮಾಡಾಳ್‍ ವಾಸ್ತವ್ಯ!

    ಲೋಕಾಯುಕ್ತ ಕಚೇರಿಯಲ್ಲಿ ಕೋಟಿ ಕುಬೇರ ಮಾಡಾಳ್‍ ವಾಸ್ತವ್ಯ!

    ಬೆಂಗಳೂರು: ನೂರಾರು ಎಕರೆ ಜಮೀನಿನ ಒಡೆಯ, ಐಷಾರಾಮಿ ಮನೆಯಲ್ಲಿ ಬದುಕ್ತಿದ್ದ ಶಾಸಕ ಮಾಡಾಳ್ ಲೋಕಾಯುಕ್ತ (Lokayukta) ಕಚೇರಿಯಲ್ಲಿ ವಾಸ್ತವ್ಯ ಕಳೆಯಬೇಕಿದೆ.

    ಲೋಕಾ ಪೊಲೀಸರು ಕ್ಯಾತಸಂದ್ರ ಬಳಿ ಅರೆಸ್ಟ್ ಬೆನ್ನಲ್ಲೇ ಮಾಡಾಳ್‍ (Madal Virupakshappa) ರನ್ನ ಲೋಕಾ ಕಚೇರಿಗೆ ಕರೆತಂದ ಬಳಿಕ ತನಿಖಾಧಿಕಾರಿ ಆಂಥೋನಿ ಜಾನ್ ಕೆಲ ಹೊತ್ತು ವಿಚಾರಣೆ ನಡೆಸಿದ್ದಾರೆ. ಆ ಬಳಿಕ ವಿಶ್ರಾಂತಿ ಮಾಡಲು ಸೂಚಿಸಿದ್ದು, ಮಲಗಲು ಹಾಸಿಗೆ ದಿಂಬಿನ ವ್ಯವಸ್ಥೆ ಮಾಡಿದ್ದಾರೆ. ಮಂಗಳವಾರ ಮಧ್ಯಾಹ್ನದ ವೇಳೆಗೆ ಮಾಡಾಳ್ ರನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಕೇಳಲು ಲೋಕಾ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

    ವಯೋಸಹಜ ಕಾಯಿಲೆಗಳ ಜೊತೆಗೆ ಹಾರ್ಟ್ ಪ್ರಾಬ್ಲಂ (Heart Problem) ಇರೋದ್ರಿಂದ ರಾತ್ರಿ ಕಣ್ಣಿಟ್ಟು ಕಾಯುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ. ಏನಾದ್ರು ತೊಂದರೆ ಆದಲ್ಲಿ ಕೂಡಲೆ ತಿಳಿಸುವಂತೆ ಸೂಚಿಸಿದ್ದು, ತಡರಾತ್ರಿ ನಂತ್ರ ಮಾಡಾಳ್ ನಿದ್ದೆಗೆ ಜಾರಿದ್ದು, ಇಂದಿನಿಂದ ಅಧಿಕೃತವಾಗಿ 8 ಕೋಟಿ ಹಣದ ಮೂಲದ ವಿಚಾರಣೆ ಆರಂಭವಾಗಲಿದೆ. ಇದನ್ನೂ ಓದಿ: ಜೆಡಿಎಸ್‌ ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ರಾಜೀನಾಮೆ – ಕಾಂಗ್ರೆಸ್ ಸೇರಲು ರೆಡಿ

    ಮಾಡಾಳ್ ಅರೆಸ್ಟ್: ಲೋಕಾಯುಕ್ತ ಟ್ರ್ಯಾಪ್ ಹಾಗೂ ರೇಡ್ ವೇಳೆ ಕಚೇರಿ ಹಾಗೂ ಮನೆಯಲ್ಲಿ ಸಿಕ್ಕ 8 ಕೋಟಿ ಹಣದ ಸಂಬಂಧ ಕೊನೆಗೂ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್ ಆಗಿದ್ದಾರೆ. ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೆ ಲೋಕಾ ಪೊಲೀಸ್ರು ಮಾಡಾಳ್ ಗಾಗಿ ಹುಡುಕಾಟ ಆರಂಭಿಸಿದ್ದರು. ಬೆಂಗಳೂರು ಕಡೆ ಬರುತ್ತಿದ್ದ ಮಾಡಾಳ್ ರನ್ನ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಸಂಜೆ 7 ಗಂಟೆ ವೇಳೆಗೆ ನಡುರಸ್ತೆಯಲ್ಲೇ ಅರೆಸ್ಟ್ ಮಾಡಿದ್ದಾರೆ.

    ತುಮಕೂರಿನಿಂದ ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತಂದ ಲೋಕಾ ಪೊಲೀಸ್ರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿದ್ರು. ಹಾರ್ಟ್ ಪೇಷೆಂಟ್ ಹಿನ್ನೆಲೆ ಇಸಿಜಿ, ಎಕೊ, ಶುಗರ್, ಬಿಪಿ ಮತ್ತು ಜನರಲ್ ಚೆಕಪ್ ನಡೆಸಿದ್ದಾರೆ. ಆರೋಗ್ಯ ನಾರ್ಮಲ್ ಇರೋದಾಗಿ ಬೌರಿಂಗ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲೇ ಊಟ ಮುಗಿಸಿ ದಿನನಿತ್ಯದ ಬಿಪಿ ಶುಗರ್ ಮಾತ್ರೆ ಸೇವಿಸಿದ್ದಾರೆ ವಿರೂಪಾಕ್ಷಪ್ಪ. ಆ ಬಳಿಕ ರಾತ್ರಿ 9-45 ರ ಸುಮಾರಿಗೆ ಮಾಡಾಳ್ ರನ್ನ ಲೋಕಾಯುಕ್ತ ಕಚೇರಿಗೆ ಕರೆತರಲಾಯ್ತು.

  • ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

    ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ

    ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್‌ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

    ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಅದಾನಿ ಕಂಪನಿ ವಿರುದ್ಧ JPC ತನಿಖೆಗೆ ಆಗ್ರಹ – ಸಂಸತ್‌ನಲ್ಲಿ ಕಪ್ಪು ಬಟ್ಟೆ ಧರಿಸಿ ವಿಪಕ್ಷಗಳ ಪ್ರತಿಭಟನೆ

  • ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

    ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

    ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

    ಇಂದು ಹೈಕೋರ್ಟ್‌ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.  ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.

    ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

  • ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್

    ನವದೆಹಲಿ: ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಸುಪ್ರೀಂಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಲೋಕಾಯುಕ್ತ (Lokayukta)ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.

    ಭ್ರಷ್ಟಾಚಾರ, ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಈ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅನಿರುದ್ಧ ಬೋಸ್ (Aniruddha Bose) ನೇತೃತ್ವದ ಪೀಠ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿತು. ಇದನ್ನೂ ಓದಿ: ನಾಡಬಾಂಬ್ ಎಸೆದು BJP ಮುಖಂಡನ ಕೊಲೆ 

    ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಮಧ್ಯಂತರ ಜಾಮೀನು ರದ್ದು ಮಾಡಿ ಹೈಕೋರ್ಟ್ ವಿಚಾರಣೆಗೂ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಕೋರ್ಟ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಹೊರಗಿನ ಅಭ್ಯರ್ಥಿಗಳಿಗೆ ಮಣೆ ಹಾಕುವ ಕನಕಗಿರಿ ಮತದಾರರು

  • ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಮಾಡುವಂತೆ ಹೈಕೋರ್ಟ್ (HighCourt) ಗೆ ಲೋಕಾಯುಕ್ತ ಆಕ್ಷೇಪಣೆ ಸಲ್ಲಿಸಿ ವಾದ ಮಂಡನೆ ಮಾಡಿತು.

    ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ರೂ ಕೂಡ ತನಿಖೆಗೆ ಸಹಕಾರವನ್ನು ನೀಡುತ್ತಿಲ್ಲ. ದಿನಾ ವಿಚಾರಣೆಗೆ ಬರುತ್ತಾರೆ, ತನಿಖಾಧಿಕಾರಿಗೆ ಯಾವುದೇ ಹೇಳಿಕೆ ನೀಡುತ್ತಾ ಇಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಎಂದು ವಾದ ಮಂಡಿಸಿದ್ರು. ಇದನ್ನೂ ಓದಿ: ಶಾಸಕ ಮಾಡಾಳ್‌ ಜಾಮೀನಿಗೆ ಆಕ್ಷೇಪ – ತುರ್ತು ವಿಚಾರಣೆಗೆ ಸುಪ್ರೀಂ ನಕಾರ

    ಇತ್ತ ವಿರೂಪಾಕ್ಷಪ್ಪ ತನಿಖೆಗೆ ಸಹಕಾರ ನೀಡುತ್ತಾ ಇದ್ದಾರೆ, ಪ್ರತಿದಿನ 6 ಗಂಟೆಗಳ ಕಾಲ ವಿಚಾರಣೆ ಎದುರಿಸ್ತಾ ಇದ್ದಾರೆ ಎಂದು ವಿರೂಪಾಕ್ಷಪ್ಪ ಪರ ವಾದ ಮಂಡನೆ ಮಾಡಿದ್ರು. ಎರಡೂ ಕಡೆ ವಾದ – ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

  • ಶಾಸಕ ಮಾಡಾಳ್‌ ಜಾಮೀನಿಗೆ ಆಕ್ಷೇಪ – ತುರ್ತು ವಿಚಾರಣೆಗೆ ಸುಪ್ರೀಂ ನಕಾರ

    ಶಾಸಕ ಮಾಡಾಳ್‌ ಜಾಮೀನಿಗೆ ಆಕ್ಷೇಪ – ತುರ್ತು ವಿಚಾರಣೆಗೆ ಸುಪ್ರೀಂ ನಕಾರ

    ನವದೆಹಲಿ: ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಲೋಕಾಯುಕ್ತ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಎರಡು ಬಾರಿ ವಕೀಲರು ಮಂಗಳವಾರ ಮನವಿ ಮಾಡಿದರು.

    ಲೋಕಾಯುಕ್ತ (Lokayukta) ಪರ ವಕೀಲರು ಮೊದಲು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಸಾಂವಿಧಾನಿಕ ಪೀಠದಲ್ಲಿ ಭಾಗಿಯಾಗುತ್ತಿದ್ದು ತುರ್ತು ವಿಚಾರಣೆ ಸಾಧ್ಯವಿಲ್ಲ, ಕಲಾಪ ಅಂತ್ಯದ ವೇಳೆ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದರು. ಒಂದು ವೇಳೆ ತುರ್ತು ವಿಚಾರಣೆಯ ಅಗತ್ಯವಿದ್ದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದಲ್ಲಿ ಪ್ರಸ್ತಾಪಿಸಲು ಸೂಚನೆ ನೀಡಿದರು.

    ಸಿಜೆಐ ಸೂಚನೆ ಮೇರೆಗೆ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದ ಮುಂದೆ ಲೋಕಾಯುಕ್ತ ಪರ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದರು. ಆದರೆ ನ್ಯಾ. ಕೌಲ್ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದರು. ಅರ್ಜಿಯಲ್ಲಿ ತುರ್ತು ವಿಚಾರಣೆ ಮಾಡುವಂತದ್ದು ಏನಿದೆ? ಮಧ್ಯಂತರ ಜಾಮೀನು ರದ್ದುಗೊಳಿಸಬೇಕಾ? ಹೈಕೋರ್ಟ್ ತನ್ನ ವಿವೇಚನೆಯಲ್ಲಿ ಜಾಮೀನು ನೀಡಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು ಆರೋಪಿ ಹಾಲಿ ಶಾಸಕರಾಗಿದ್ದು, ಅಪಾರ ಪ್ರಮಾಣದ ಹಣ ವಶಪಡಿಸಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸಿ.ಟಿ ರವಿಗೆ 20 ವರ್ಷ ಸಾಕಾಗಿಲ್ವಾ, ಏನು ಮಾಡಿದ್ದಾರೆ?- ಮತದಾರರಿಂದ ಕ್ಲಾಸ್

    ವಾದ ಆಲಿಸಿದ ಬಳಿಕ ಪ್ರಕರಣವನ್ನು ಸಾಧ್ಯವಾದಷ್ಟು ಬೇಗ ವಿಚಾರಣೆ ಪಟ್ಟಿ ಮಾಡಲು ಸೂಚನೆ ನೀಡಿದರು. ಇದಾದ ಬಳಿಕವೂ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದ ವಕೀಲರಿಗೆ ತರಾಟೆಗೆ ತೆಗೆದುಕೊಂಡ ನ್ಯಾ.ಕೌಲ್ ಹಿಂದಿನ ಆದೇಶವನ್ನು ವಾಪಸ್ ಪಡೆಯವುದಾಗಿ ಎಚ್ಚರಿಸಿದರು. ಇದನ್ನೂ ಓದಿ: ಬಿಜೆಪಿ ವಕ್ರದೃಷ್ಟಿ – ಮೋದಿ ರೋಡ್‌ಶೋಗೆ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ