Tag: ಮಾಣಿಕ್ ಷಾ ಮೈದಾನ

  • 79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗ್ಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

    79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗ್ಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

    – ಮೊದಲ ಬಾರಿಗೆ ಇ-ಪಾಸ್ ಮೂಲಕ ಸಾರ್ವಜನಿಕರಿಗೆ ಪ್ರವೇಶ

    ಬೆಂಗಳೂರು: ಇಂದು ದೇಶದೆಲ್ಲೆಡೆ 79ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಧ್ವಜಾರೋಹಣ ನೆರವೇರಿಸಿದರು.ಇದನ್ನೂ ಓದಿ: ಶರಣರ ನಾಡಿನ ಆರಾಧ್ಯದೈವ ಲಿಂಗೈಕ್ಯ – ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

    ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕರಿಸಿದರು. ಈ ಬಾರಿಯ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು 3 ಸಾವಿರ ಜನರಿಗೆ ಅವಕಾಶ ನೀಡಲಾಗಿದ್ದು, ಮೊದಲ ಬಾರಿಗೆ ಇ-ಪಾಸ್ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ಪ್ರವೇಶ ನೀಡಲಾಗಿದೆ.

    ಇನ್ನೂ ಸಿಎಂ ಸಿದ್ದರಾಮಯ್ಯ ಭಾಷಣ ಬಳಿಕ ಮಾಣಿಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈಗಾಗಲೇ ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ 12ನೇ ಭಾರಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿದರು.ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

  • ಗಣರಾಜ್ಯೋತ್ಸವ ಸಂಭ್ರಮಕ್ಕೆ ಭರದ ಸಿದ್ಧತೆ- ರಸ್ತೆ ಮಾರ್ಗ ಬದಲು, ಪೊಲೀಸ್ ಸರ್ಪಗಾವಲು

    ಗಣರಾಜ್ಯೋತ್ಸವ ಸಂಭ್ರಮಕ್ಕೆ ಭರದ ಸಿದ್ಧತೆ- ರಸ್ತೆ ಮಾರ್ಗ ಬದಲು, ಪೊಲೀಸ್ ಸರ್ಪಗಾವಲು

    ಬೆಂಗಳೂರು: 71 ನೇ ಗಣರಾಜ್ಯೋತ್ಸವದ ಆಚರಣೆಗೆ ಮಾಣಿಕ್ ಷಾ ಪರೇಡ್ ಮೈದಾನ ಸಿದ್ಧವಾಗಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣವಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ವಿ.ಆರ್ ವಾಲಾ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಭಾರತೀಯ ವಾಯುಪಡೆಯಿಂದ ರಾಷ್ಟ್ರಧ್ವಜಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಬಳಿಕ ತೆರೆದ ವಾಹನದಲ್ಲಿ ರಾಜ್ಯಪಾಲರು ಪರೇಡ್ ವೀಕ್ಷಿಸಿ ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ.

    ಈ ವರ್ಷದ ಗಣರಾಜ್ಯೋತ್ಸವದಲ್ಲಿ 44 ತುಕಡಿಗಳ 1750 ವಿದ್ಯಾರ್ಥಿಗಳಿಂದ ಕವಾಯತು ಮತ್ತು ಪಥ ಸಂಚಲನ ನಡೆಸಲಿದ್ದಾರೆ. ಮೊದಲ ಬಾರಿಗೆ ಬಿಬಿಎಂಪಿ ಪೌರ ಕಾರ್ಮಿಕರಿಂದ ಸ್ವಚ್ಛ ಭಾರತ್ ಅಭಿಯಾನದ ಜಾಗೃತಿ ಕುರಿತು ಪಥ ಸಂಚಲನ ನಡೆಸಲಿದ್ದಾರೆ. ಸುಮಾರು 2 ಸಾವಿರ ಮಕ್ಕಳಿಂದ 3 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದಲ್ಲದೆ ಆಕರ್ಷಕ ಮೋಟಾರ್ ಸೈಕಲ್ ಪ್ರದರ್ಶನ, ರಾಜ್ಯ ಪೊಲೀಸ್ ಗರುಡ ಪಡೆಯಿಂದ ಅಣಕು ಪ್ರದರ್ಶನ ನಡೆಯಲಿದೆ. ಇದಾದ ಬಳಿಕ ರಾಜ್ಯಪಾಲರಿಂದ ಸರ್ವೋತ್ತಮ ಪ್ರಶಸ್ತಿ ಪ್ರದಾನವಾಗಲಿದೆ. ಕಾರ್ಯಕ್ರಮ ವೀಕ್ಷಣೆಗೆ 10 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಮೈದಾನದ ಸುತ್ತ 70 ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

    ಕಾರ್ಯಕ್ರಮ ನಡೆಯೋ ಮಾಣಿಕ್ ಷಾ ಮೈದಾನದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲಾಗಿದೆ. ಭದ್ರತೆಗಾಗಿ 10 ಕೆಎಸ್‍ಆರ್ ಪಿ ತುಕಡಿ, 2 ಡಿಸ್ವ್ಯಾಟ್ ತಂಡ, 1 ಕ್ಷಿಪ್ರ ಕಾರ್ಯಾಚರಣೆ ತಂಡ, ಗರುಡ ಪಡೆ, ಕಮಾಂಡ್ ಕಂಟ್ರೋಲ್ ವಾಹನ ನಿಯೋಜನೆ ಮಾಡಲಾಗಿದೆ. ಮೈದಾನದ ಸಂಪೂರ್ಣ ತಪಾಸಣೆಗೆ 7 AS ಚೆಕ್ ತಂಡ ನಿಯೋಜನೆ ಮಾಡಲಾಗಿದೆ. 9 ಡಿಸಿಪಿ ನೇತೃತ್ವದಲ್ಲಿ ಬಂದೋಬಸ್ತ್ ಕಾರ್ಯ ನಡೆಯಲಿದೆ 150 ಅಧಿಕಾರಿಗಳು, 943 ಸಿಬ್ಬಂದಿ ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ಬೆಂಗಳೂರಲ್ಲಿ ಅನುಮಾನವಾಗಿ ವಾಸ್ತವ್ಯ ಹೂಡುವವರ ಮೇಲೆ ನಿಗಾವಹಿಸಲಾಗಿದೆ. ಹೊಟೇಲ್, ಲಾಡ್ಜ್ ಗಳು, ತಂಗುದಾಣಗಳಲ್ಲಿ ನಿಗಾ ಇಡಲಾಗಿದೆ ಅಂತ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಅಲ್ಲದೆ ಮೈದಾನ ಸುತ್ತ 85 ಸಿಸಿ ಕ್ಯಾಮರಾ ಅಳವಡಿಕೆ ಮಾಡಿ ಹದ್ದಿನ ಕಣ್ಗಾವಲು ಇಡಲಾಗಿದೆ.

    ಗಣರಾಜ್ಯೋತ್ಸವ ದಿನ ಮಾಣಿಕ್ ಷಾ ಮೈದಾನಕ್ಕೆ ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು, ಹರಿತವಾದ ವಸ್ತು, ಚಾಕು ಚೂರಿಗಳು, ಕಪ್ಪು ಕರವಸ್ತ್ರ, ಬಣ್ಣದ ದ್ರಾವಣ, ವಿಡಿಯೋ, ಸ್ಟಿಲ್ ಕ್ಯಾಮರಾ, ನೀರಿನ ಬಾಟಲ್, ಕ್ಯಾನ್, ಶಸ್ತ್ರಾಸ್ತ್ರಗಳು, ಮದ್ಯದ ಬಾಟಲ್, ತಿಂಡಿ-ತಿನಿಸು, ಬಾವುಟಗಳು, ಪಟಾಕಿ, ಸ್ಫೋಟಕ ವಸ್ತುಗಳು ಮೈದಾನದ ಒಳಗೆ ನಿಷೇಧ ಮಾಡಲಾಗಿದೆ.

    ಗಣರಾಜ್ಯೋತ್ಸವ ದಿನದಂದು ವಾಹನ ಸಂಚಾರಕ್ಕೆ ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಮಿಸೋ ಗಣ್ಯರು, ಸಾರ್ವಜನಿಕರಿಗೆ 4 ಬಗೆಯ ಪಾಸ್ ನೀಡಲಾಗಿದೆ. ಅಲ್ಲದೆ ಎಲ್ಲರಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ನೀಡಲಾಗಿದೆ. ಭಾನುವಾರ ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಲೆ ಸರ್ಕಲ್ ನಿಂದ ಶಿವಾಜಿ ನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಓ ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ, ಎಂಜಿ ರೋಡ್, ಅನಿಲ್ ಕುಂಬ್ಳೆ ರಸ್ತೆಯಿಂದ ಕ್ವೀನ್ಸ್ ವೃತ್ತಿದ ವರೆಗೆ ವಾಹನ ನಿಲುಗಡೆ ನಿಷೇಧ ಹೇರಲಾಗಿದೆ.

    ಭಾನುವಾರ ಬದಲಿ ರಸ್ತೆ ಮಾರ್ಗಗಳು:
    * ಕಬ್ಬನ್ ಪಾರ್ಕ್, ಬಿವಿಆರ್ ಜಂಕ್ಷನ್ ಕಡೆಯಿಂದ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ಇನ್‍ಫೆಂಟ್ರಿ ರಸ್ತೆಗೆ ಬಂದು ಸಫೀನಾ ಪ್ಲಾಜಾದ ಬಳಿ ಎಡ ತಿರುವು ಪಡೆದು ಮೈನ್‍ಗಾರ್ಡ್ ರಸ್ತೆ ? ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡೆಕನ್‍ಸನ್ ರಸ್ತೆ ಜಂಕ್ಷನ್‍ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ ಜಂಕ್ಷನ ಬಳಿ ಎಡಕ್ಕೆ ತಿರುವು ಪಡೆದು ಮನಿಪಾಲ್ ಸೆಂಟರ್ ಗೆ ಹೋಗಬಹುದು.

    * ಮಣಿಪಾಲ್ ಸೆಂಟರ್ ಕಡೆಯಿಂದ ಬಿಆರ್ ವಿ ಜಂಕ್ಷನ್ ಕಡೆ ಹೋಗುವ ವಾಹನಗಳು ಎಂ.ಜಿ.ರಸ್ತೆಗೆ ತೆರಳಿ ಅನಿಲ್‍ಕುಂಬ್ಳೆ ವೃತ್ತದಲ್ಲಿ ಎಡಕ್ಕೆ ತಿರುವು ಪಡೆಯುವ ಮೂಲಕ ಸಾಗಬಹುದು.

    * ಭದ್ರತಾ ದೃಷ್ಟಿ ಹಿನ್ನೆಲೆ ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಮಾಣಿಕ್ ಷಾ ಮೈದಾನ ಸುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ.

  • ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ

    ಪ್ರವಾಹದಲ್ಲಿ ಮೃತಪಟ್ಟ, ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ- ಬಿಎಸ್‍ವೈ

    – ಕನ್ನಡಿಗರಿಗೆ ಉದ್ಯೋಗ ನೀಡೋದು ಮೊದಲ ಆದ್ಯತೆ

    ಬೆಂಗಳೂರು: 73 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರವಾಹದಲ್ಲಿ ಮೃತಪಟ್ಟ ಕುಟುಂಬಕ್ಕೆ ಮತ್ತು ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

    ಈ ವೇಳೆ ಮಾತನಾಡಿದ ಬಿಎಸ್‍ವೈ ನಾಡ ಬಾಂಧವರೇ ನಿಮ್ಮಗೆಲ್ಲರಿಗೂ 73 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಮಹಾತ್ಮ ಗಾಂಧಿ ಹೇಳಿದಂತೆ ಸ್ವಾತಂತ್ರ್ಯ ಉಸಿರಾಟದಷ್ಟೇ ಅಮೂಲ್ಯವಾದದ್ದು, ಗಾಂಧಿ 150 ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಸಂದೇಶ ನೀಡುವ ಅವಕಾಶ ಸಿಕ್ಕಿದು ಸಂತೋಷ ತಂದಿದೆ. ನಮಗೆ ಅಭಿವೃದ್ಧಿ ಆಡಳಿತದ ಮಂತ್ರ ಎಂದು ಹೇಳಿದರು.

    ಕನ್ನಡಿಗರಿಗೆ ಉದ್ಯೋಗಕ್ಕೆ ಪ್ರಾತಿನಿಧ್ಯ ನೀಡುವುದು ಈ ಸರ್ಕಾರದ ಮೊದಲ ಆದ್ಯತೆ ಮತ್ತು ನಿಲುವು ಆಗಿದೆ. ಕನ್ನಡಿಗರ ಉದ್ಯೋಗ ಅವಕಾಶದಲ್ಲಿ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಎಚ್ಚರ ವಹಿಸುತ್ತೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿ 4 ಸಾವಿರ ನೆರವು ಕೊಡುತ್ತಿದ್ದೇವೆ. ಜನರ ಹಿತಕ್ಕಾಗಿ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಮಾಡುತ್ತೇವೆ. ಸಕಾಲದಲ್ಲಿ ಖರೀದಿ ಕೇಂದ್ರ ತೆರೆಯಲು ಸರ್ಕಾರ ಬದ್ಧ ಎಂದು ತಿಳಿಸಿದರು.

    ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳ ಸಭೆ ನಡೆಸಿ ಜನರ ಅಭಿವೃದ್ಧಿಗಾಗಿ ಚರ್ಚೆ ಮಾಡಿದ್ದೇನೆ. ಪ್ರಕೃತಿ ವಿಕೋಪ ಮತ್ತು ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ನನ್ನ ಸರ್ಕಾರ ಸಿದ್ಧವಿದೆ. ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದೇನೆ. ಸುಮಾರು ಅರ್ಧ ರಾಜ್ಯ ಜಲಪ್ರಳಯ ಆಗಿದೆ. 103 ತಾಲೂಕುಗಳು ಭೀಕರ ಪ್ರವಾಹಕ್ಕೆ ತುತ್ತಾಗಿದೆ. 5 ಜಿಲ್ಲೆ ಭಾಗದಲ್ಲಿ ಮಳೆ ಇಲ್ಲದೆ ಬರದ ಪರಿಸ್ಥಿತಿಯೂ ಇದೆ. ಪ್ರವಾಹದಲ್ಲಿ 61 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

    ಕೇಂದ್ರಕ್ಕೆ ಅಗತ್ಯ ನೆರವು ಕೇಳಿದ್ದೇವೆ, ಖುದ್ದು ಕೇಂದ್ರದ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಡಿ ವಿ ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಬಂದು ಪರಿಶೀಲನೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ ಪರಿಹಾರ. ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂ, ಮನೆ ಸಂಪೂರ್ಣ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ. ಪ್ರತಿ ಪಕ್ಷಗಳೂ ಸರ್ಕಾರದ ಪರಿಹಾರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಹೇಳಿದರು.

    ರಾಜ್ಯದಲ್ಲಿ ನೀರಾವರಿ ಸೌಲಭ್ಯದ ಹೆಚ್ಚಳಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ರೈತರಿಗೆ ವ್ಯವಸ್ಥಿತ ಮತ್ತು ವೈಜ್ಞಾನಿಕ ಗೋದಾಮು ಸೌಕರ್ಯ ಕಲ್ಪಿಸುತ್ತೇವೆ. ಕೈಗಾರಿಕೆಗಳಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣದ ಸೃಷ್ಟಿ ಮಾಡುವ ನಿಟ್ಟಿನಲ್ಲಿ ನೂತನ ಕೈಗಾರಿಕಾ ನೀತಿಯನ್ನು ರೂಪಿಸುತ್ತೇವೆ. 2019-24 ರ ನೂತನ ಜವಳಿ ಮತ್ತು ಶುದ್ಧ ಉಡುಪು ನೀತಿಯನ್ನು ಜಾರಿಗೊಳಿಸಲಿದ್ದೇವೆ ಎಂದು ಹೇಳಿದರು.

    ಧ್ವಜಾರೋಹಣಕ್ಕಿಂತ ಮೊದಲು ಸಿಎಂ ಅವರಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಬಳಿಕ ಗೌರವ ರಕ್ಷೆ ಸ್ವೀಕಾರ ಪಥಸಂಚಲದಲ್ಲಿ ಕೆ ಎಸ್ ಆರ್ ಪಿ, ಸ್ಕೌಟ್ಸ್, ಗೈಡ್ಸ್, ಎನ್ ಸಿಸಿ, ಸೇವಾದಳ ಹಾಗೂ ಶಾಲಾ ಮಕ್ಕಳನೊಳಗೊಂಡ ಕವಾಯತು ಮತ್ತು ಬ್ಯಾಂಡ್ ನ 34 ತುಕಡಿಗಳಲ್ಲಿ ಸುಮಾರು 1130 ಮಂದಿ ಭಾಗಿಯಾಗಿದ್ದರು.