Tag: ಮಾನವ ಸರಪಳಿ

  • ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನ

    ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನ

    ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿದ್ದ ಬೀದರ್‌ನಿಂದ (Bidar) ಚಾಮರಾಜನಗರದವರೆಗೆ (Chamarajanagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwar) ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಈಗ ಸೇವೆಗಳಲ್ಲಿ ಸ್ವಾರ್ಥ ಬಂದಿದೆ: ಹೆಚ್‌.ಆರ್‌.ರಂಗನಾಥ್‌ ಬೇಸರ

    ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಎಂಬ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮುಖ, ತಲೆ, ಮೈ, ಕೈಗೆ ತೀವ್ರವಾಗಿ ಕಚ್ಚಿವೆ. ನೋವಿನ್ನು ಸಹಿಸಲಾಗದೇ ಅಸ್ವಸ್ಥಗೊಂಡಿದ್ದಾರೆ.

    ತಕ್ಷಣವೇ ಇಬ್ಬರು ಶಿಕ್ಷಕಿಯರಿಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಪೆಟ್ಟಾ’ ಚಿತ್ರದ ನಟಿ ಮೇಘಾ

  • ಮದುವೆ ಮಂಟಪದಿಂದ ನೇರವಾಗಿ ಬಂದು ನವಜೋಡಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿ

    ಮದುವೆ ಮಂಟಪದಿಂದ ನೇರವಾಗಿ ಬಂದು ನವಜೋಡಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿ

    ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವದ ಅತಿದೊಡ್ಡ ಮಾನವ ಸರಪಳಿ ನಿರ್ಮಾಣದಲ್ಲಿ ನವಜೋಡಿಯೊಂದು ಪಾಲ್ಗೊಂಡು ಗಮನ ಸೆಳೆಯಿತು.

    ರಾಜ್ಯದಾದ್ಯಂತ ಸುಮಾರು 2,500 ಕಿ.ಮೀ ಉದ್ಧದ ಮಾನವ ಸರಪಳಿ ನಿರ್ಮಿಸಲಾಗಿತ್ತು. ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ, ಸುಮಾರು 60 ಕಿಮೀ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು.

    ಶಿವಮೊಗ್ಗ ಜಿಲ್ಲಾಡಳಿತದಿಂದ ಕೈಗೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನವಜೋಡಿಯೊಂದು ಪಾಲ್ಗೊಂಡಿತ್ತು. ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ವಧು-ವರ ಭಾಗವಹಿಸಿದ್ದರು. ಮದುವೆ ಮಂಟಪದಿಂದ ಸೀದಾ ಬಂದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜೋಡಿ ಭಾಗವಹಿಸಿತು.

    ಮಾನವ ಸರಪಳಿಯಲ್ಲಿ ಸರ್ಕಾರಿ ಶಾಲೆ, ಖಾಸಗಿ ಶಾಲೆ ಮಕ್ಕಳು ಮತ್ತು ಸರ್ಕಾರಿ ನೌಕರರು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.

    ಕಾರ್ಯಕ್ರಮಕ್ಕೂ ಮುನ್ನ ಮಹಾನಗರ ಪಾಲಿಕೆ ಆಚರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಜೊತೆಗೆ ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಸ್‌ಪಿ ಮಿಥುನ್ ಕುಮಾರ್ ಸಾಥ್ ನೀಡಿದರು.

  • ಮಾನವ ಸರಪಳಿ: ಗಡಿ ಜಿಲ್ಲೆಯಲ್ಲಿ 1 ಕಿಮೀ ಧ್ವಜ, ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ ಅನಾವರಣ

    ಮಾನವ ಸರಪಳಿ: ಗಡಿ ಜಿಲ್ಲೆಯಲ್ಲಿ 1 ಕಿಮೀ ಧ್ವಜ, ವಿವಿಧತೆಯಲ್ಲಿ ಏಕತೆಯ ಪ್ರತಿಬಿಂಬ ಅನಾವರಣ

    ಚಾಮರಾಜನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿರುವ ಬೀದರ್‌ನಿಂದ (Bidar) ಚಾಮರಾಜನಗರದವರೆಗೆ (Chamarajnagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧ್ವಜವನ್ನು ಹಿಡಿದು ಏಕತೆಯ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದಾರೆ.

    ಚಾಮರಾಜನಗರ ಮತ್ತು ಮೈಸೂರು (Mysuru) ಗಡಿ ಭಾಗವಾದ ಮೂಗೂರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ಚಾಮರಾಜನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ ಬಳಿ ಕೊನೆಗೊಂಡಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮಾನವ ಸರಪಳಿ ಹಾದು ಹೋಗಿದ್ದ ಮಾರ್ಗದಲ್ಲಿ ಭಾರತದ ಒಂದೊಂದು ರಾಜ್ಯದ ಸಾಂಸ್ಕೃತಿಕ ಧಿರಿಸು ಧರಿಸಿ ವಿವಿಧೆತೆಯಲ್ಲಿ ಏಕತೆಯನ್ನು ಮೆರೆದಿದ್ದಾರೆ.ಇದನ್ನೂ ಓದಿ: ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಾರಿಯಲ್ಲಿ ಸಾಗುತ್ತಿದೆ: ಸಿಎಂ

    ಮಾನವ ಸರಪಳಿಯ ಪ್ರಮುಖ ವೃತ್ತಗಳಲ್ಲಿ ಜಾನಪದ ನೃತ್ಯ ಪ್ರಸ್ತುತ ಪಡಿಸಲಾಯಿತು. ಸೋಲಿಗರ ಗೊರುಕನ, ಜೇನುಕುರುಬರ ನೃತ್ಯ, ಗೊರವರ ಕುಣಿತ, ಹುಲಿ ವೇಷ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು. ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಹಿನ್ನೆಲೆ ಸರ್ಕಾರಿ ನೌಕರರು, ಕಾಲೇಜಿನ ಉಪನ್ಯಾಸಕರು, ಸಾರ್ವಜನಿಕರು, ರೈತರು, ಕನ್ನಡಪರ ಹೋರಾಟಗಾರರು ಪ್ರತಿನಿಧಿಸಿದರು. ಮಹಿಳೆಯರು ಹಸಿರು ಸೀರೆ, ಪುರುಷರು ಬಿಳಿ ಪಂಚೆ, ಶರ್ಟ್, ಶಲ್ಯ ಧರಿಸಿ ಮಿಂಚಿದರು. ರೈತರು ಹಸಿರು ಟವೆಲ್, ಕನ್ನಡಪರ ಹೋರಾಟಗಾರರು ನಾಡ ಧ್ವಜ, ಹೋರಾಟಗಾರರು ನೀಲಿ ಶಲ್ಯ ಹೊದ್ದಿದ್ದರು. ರಾಮಸಮುದ್ರದಲ್ಲಿ 1 ಕಿಮೀ ಉದ್ದದ ಭಾರತ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿದ್ದು ಎಲ್ಲರ ಮನ ಗೆದ್ದಿತು. ಗಡಿ ಜಿಲ್ಲೆ ಚಾಮರಾಜನಗರಲ್ಲಿ 25 ಕಿಮೀ ಉದ್ದದ ಮಾನವ ಸರಪಳಿ 19,700 ಮಂದಿ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಜಿಲ್ಲಾಡಳಿತದ ನಿರೀಕ್ಷೆ ಹುಸಿಯಾಗಿ ಮಾನವ ಸರಪಳಿ ಅಲ್ಲಲ್ಲಿ ನಿರೀಕ್ಷಿತ ಪ್ರಮಾಣದ ಜನರು ಸೇರದೇ ಇದ್ದದ್ದು ಕಂಡುಬಂದಿತು.ಇದನ್ನೂ ಓದಿ: ‘ಗಿಚ್ಚಿ ಗಿಲಿಗಿಲಿ’ ಫಿನಾಲೆಯಲ್ಲಿ ರಿವೀಲ್ ಆಗ್ತಿದೆ Bigg Boss ಬಿಗ್ ಅಪ್‌ಡೇಟ್- ಏನದು?

  • ಪ್ಲಾಸ್ಟಿಕ್ ವಿರುದ್ಧ ಜಾಗೃತಿಗಾಗಿ ವಿದ್ಯಾರ್ಥಿಗಳಿಂದ 50 ಕಿ.ಮೀ ಮಾನವ ಸರಪಳಿ: ವಿಡಿಯೋ

    ಪ್ಲಾಸ್ಟಿಕ್ ವಿರುದ್ಧ ಜಾಗೃತಿಗಾಗಿ ವಿದ್ಯಾರ್ಥಿಗಳಿಂದ 50 ಕಿ.ಮೀ ಮಾನವ ಸರಪಳಿ: ವಿಡಿಯೋ

    ಡೆಹ್ರಾಡೂನ್: 50 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಿ ಉತ್ತರಾಖಂಡದ ವಿದ್ಯಾರ್ಥಿಗಳು ಪಾಲಿಥಿನ್ (ಪ್ಲಾಸ್ಟಿಕ್) ವಿರುದ್ಧ ಜಾಗೃತಿ ಮೂಡಿಸಿದ್ದಾರೆ.

    ವಿವಿಧ ಶಾಲಾ ಮಕ್ಕಳು ಡೆಹ್ರಾಡೂನ್‌ನ ರಸ್ತೆಯುದ್ದಕ್ಕೂ ಸುಮಾರು 50 ಕಿ.ಮೀ ನಿಂತು, ಪಾಲಿಥಿನ್ ಬಳಕೆಯ ವಿರುದ್ಧ ಜಾಗೃತಿ ಮೂಡಿಸಲು ಮಾನವ ಸರಪಳಿಯನ್ನು ರಚಿಸಿದರು. ಈ ಅಭಿಯನದಲ್ಲಿ ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಕೂಡ ಭಾಗವಹಿಸಿದ್ದರು.

    ವಿದ್ಯಾರ್ಥಿಗಳು ಜಾಗೃತಿ ಮೂಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೆಲ ನೆಟ್ಟಿಗರು ಕಮೆಂಟ್ ಮೂಲಕ ಪಾಲಿಥಿಲ್ ಬಳಸದಂದೆ ಮನವಿ ಮಾಡಿಕೊಂಡಿದ್ದಾರೆ.

    ಪ್ಯಾಕಿಂಗ್ ಕವರ್, ಕೈಚೀಲ, ಉಪಾಹಾರ ನೀಡುವ ಪ್ಲೇಟ್, ನೀರಿನ ಗ್ಲಾಸ್, ಟೇಬಲ್ ಪೇಪರ್ ಸೇರಿ ಹತ್ತು ಹಲವು ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಆದರೂ ಕೆಲವು ವ್ಯಾಪಾರಸ್ತರು ಕದ್ದು ಮುಚ್ಚಿ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಅಭಿಯಾನದ ಮೂಲಕ ಹೂವು, ಹಣ್ಣು, ಚಿಲ್ಲರೆ ಅಂಗಡಿಗಳಲ್ಲಿ ಪಾಲಿಥಿನ್ ಕವರ್ ಮಾರಾಟ ಅಥವಾ ಬಳಸಬಾರದು. ಅದಕ್ಕೆ ಪರಾರಯಯವಾಗಿ ಬಟ್ಟೆ ಅಥವಾ ಬ್ಯಾಗ್ ಬಳಸುವಂತೆ ಮನವಿ ಮಾಡಿಕೊಳ್ಳಲಾಗಿದೆ.

  • ಮಾನವ ಸರಪಳಿ ನಿರ್ಮಿಸಿ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದವರ ರಕ್ಷಣೆಗೆ ನಿಂತ ಜನ

    ಮಾನವ ಸರಪಳಿ ನಿರ್ಮಿಸಿ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದವರ ರಕ್ಷಣೆಗೆ ನಿಂತ ಜನ

    ಭೋಪಾಲ್: ಮಧ್ಯಪ್ರದೇಶದ ಇಂದೋರಿನ ಗೌತಮಪುರದಲ್ಲಿ ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗುತ್ತಿದ್ದರು. ಈ ವೇಳೆ ಸ್ಥಳೀಯರು ಮಾನವ ಸರ್ಪಳಿ ನಿರ್ಮಿಸಿ, ತಮ್ಮ ಪ್ರಾಣ ಪಣಕ್ಕಿಟ್ಟು ಅವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

    ಗುರುವಾರ ಗೌತಮಪುರದಲ್ಲಿನ ಹೊಳೆಯಲ್ಲಿ ಇಬ್ಬರು ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರ ರಕ್ಷಣೆ ಮಾಡಲು ಮುಂದಾದರು. ಈ ವೇಳೆ 10ರಿಂದ 15 ಮಂದಿ ಸೇರಿ ಒಬ್ಬರ ಕೈ ಮತ್ತೊಬ್ಬರು ಹಿಡಿದು ಮಾನವ ಸರಪಳಿ ನಿರ್ಮಿಸಿಕೊಂಡು ಹೊಳೆಗೆ ಇಳಿದಿದ್ದಾರೆ. ಸದ್ಯ ಕೊಚ್ಚಿ ಹೋಗುತ್ತಿದ್ದ ಓರ್ವನನ್ನು ಸ್ಥಳೀಯರೇ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ಇನ್ನೋರ್ವ ಪತ್ತೆಯಾಗದ ಹಿನ್ನೆಲೆ ರಕ್ಷಣಾ ಕಾರ್ಯಚರಣೆ ಮುಂದುವರಿಸಿದ್ದಾರೆ. ಅವರಿಗೆ ಸ್ಥಳೀಯರು ಕೂಡ ಸಾಥ್ ನೀಡುತ್ತಿದ್ದಾರೆ. ಹೊಳೆಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ ಈ ವ್ಯಕ್ತಿಗಳು ಹೊಳೆ ಬಳಿ ಏಕೆ ಹೋಗಿದ್ದರು? ಹೇಗೆ ನೀರಿಗೆ ಬಿದ್ದರು ಎನ್ನುವ ಬಗ್ಗೆ ಕೂಡ ಯಾವುದೇ ಮಾಹಿತಿ ದೊರಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

  • 60 ಸಾವಿರ ಚದರಡಿಯಲ್ಲಿ ಮೂಡಿತು ಮಾನವ ಸರಪಳಿ ಭಾರತ ನಕಾಶೆ

    60 ಸಾವಿರ ಚದರಡಿಯಲ್ಲಿ ಮೂಡಿತು ಮಾನವ ಸರಪಳಿ ಭಾರತ ನಕಾಶೆ

    ಕೊಪ್ಪಳ: ವಿಧಾನಸಭೆ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಲೇ, ರಾಜ್ಯದ ಪ್ರಮುಖ ಮೂರು ಪಕ್ಷಗಳು ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿವೆ. ಮೂರು ಪಕ್ಷದ ನಾಯಕರು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

    ಇದನ್ನೆಲ್ಲ ನೋಡಿದ ಕೊಪ್ಪಳದ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಡಿಸಿ ನಾವೇನು ಕಮ್ಮಿ ಎಂದು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಹೌದು. ಜಿಲ್ಲಾಧಿಕಾರಿಗಳೂ ಚುನಾವಣೆ ಪ್ರಚಾರ ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಮತದಾನದ ಕುರಿತ ಜಾಗೃತಿ ಮೂಡಿಸಲು ವಿಶೇಷವಾದ ಕಾರ್ಯಕ್ಕೆ ಮುಂದಾಗಿದ್ದಾರೆ.

    ಜಾಗೃತಿ ಹೇಗೆ?: ವಿದ್ಯಾರ್ಥಿಗಳಿಂದ ಭಾರತರ ನಕಾಶೆ ಮಾದರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಅದರಲ್ಲಿ ಮನಸ್ಸಿಗೆ ಮುದ ನೀಡುವ ಕರ್ನಾಟಕ ನಕಾಶೆಯ ದೃಶ್ಯವನ್ನು ನಿರ್ಮಿಸಿದ್ದರು. ಕೊಪ್ಪಳದ ಗವಿಮಠದ ಆವರಣದಲ್ಲಿ ನಡೆದ ಮತದಾನದ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಸುಮಾರು 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಭಾರತ ನಕಾಶೆ ಜೊತೆಗೆ ಕನ್ನಡದಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದು ಹಾಗೂ ಇಂಗ್ಲೀಷ್ ನಲ್ಲಿ ಮೈ ವೋಟ್, ಮೈ ರೈಟ್ಸ್ ಎಂಬ ಘೋಷ ವಾಕ್ಯ ಬರೆದು ಅದರಲ್ಲೂ ಮಾನವ ಸರಪಳಿ ಮಾಡಲಾಗಿತ್ತು.

    ಮುಂಬಾರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಚುನಾವಣಾ ಆಯೋಗ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವ ಉದ್ದೇಶವನ್ನು ಈ ಕಾರ್ಯ ಹೊಂದಿದೆ. ಈ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ಜಿಲ್ಲೆಯ ಜಿಪಂ ಸಿಇಒಗೆ ಚುನಾವಣಾ ಆಯೋಗ ಜವಾಬ್ದಾರಿ ವಹಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರನ್ನು ಮತಗಟ್ಟೆಗೆ ಕರೆತರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ವಿಭಿನ್ನ ಮಾದರಿಯಲ್ಲಿ ಮತದಾನ ಜಾಗೃತಿ ಆರಂಭವಾಗಲಿದ್ದು, ಕೊಪ್ಪಳ ಜಿಲ್ಲಾಡಳಿತ ತುಸು ಮುಂಚಿತವಾಗಿಯೇ ಈ ಕಾರ್ಯಕ್ಕೆ ಚಾಲನೆ ನೀಡಿದೆ.

    ಕಾರ್ಯಕ್ರಮದ ವೇಳೆ ಮಾತನಾಡಿದ ಕೊಪ್ಪಳ ಡಿಸಿ, ಮತದಾನದ ಹಕ್ಕನ್ನು ನಾವು ಚಲಾಯಿಸದಿದ್ದಲ್ಲಿ, ನಮಗೆ ನಾವು ವಂಚನೆ ಮಾಡಿಕೊಂಡಂತಾಗುತ್ತದೆ ಅಂದ್ರು. ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವಾಸವುಳ್ಳ ನಾವು, ಯಾವುದೇ ಪ್ರೇರಣೆ ಮತ್ತು ದಾಕ್ಷಿಣ್ಯಕ್ಕೆ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂಬ ಪ್ರತಿಜ್ಞಾವಿಧಿ ಭೋದಿಸಿದರು. ಈ ಬಾರಿ ಎಲ್ಲ ಪ್ರಜ್ಞಾವಂತರು ಮತಗಟ್ಟೆಗೆ ಬಂದು ಮತ ಚಲಾಯಿಸಲು. ಶೇ. 100 ರಷ್ಟು ಮತದಾನವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.