Tag: ಮಾನಹಾನಿ

  • ತ್ರಿಷಾ ಪ್ರಕರಣ: ನಟನಿಗೆ ಮತ್ತೆ ಎಚ್ಚರಿಸಿದ ಕೋರ್ಟ್

    ತ್ರಿಷಾ ಪ್ರಕರಣ: ನಟನಿಗೆ ಮತ್ತೆ ಎಚ್ಚರಿಸಿದ ಕೋರ್ಟ್

    ದಕ್ಷಿಣದ ಹೆಸರಾಂತ ನಟಿ ತ್ರಿಷಾ (Trisha) ಅವರಿಗೆ ಮಾನಹಾನಿ ರೀತಿಯಲ್ಲಿ ಮಾತನಾಡಿದ್ದ ತಮಿಳಿನ ಖ್ಯಾತ ನಟ ಮನ್ಸೂರ್ ಅಲಿಖಾನ್ (Mansoor Ali Khan) ಗೆ ಮದ್ರಾಸ್ ಹೈಕೋರ್ಟ್ ಮತ್ತೆ ಎಚ್ಚರಿಕೆಯ ಮಾತುಗಳನ್ನು ಆಡಿದೆ. ತ್ರಿಷಾ ಅವರಿಗೆ ನಾನು ಮಾನ ಹಾನಿ ಆಗುವಂತಹ ಮಾತುಗಳನ್ನು ಆಡಿಲ್ಲ. ನನ್ನ ಮಾತುಗಳನ್ನು ಎಡಿಟ್ ಮಾಡಲಾಗಿದೆ. ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲವೆಂದು ಮನ್ಸೂರ್ ನುಡಿದಿದ್ದರು. ತಮ್ಮ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ನಿರೀಕ್ಷನಾ ಜಾಮೀನು ನೀಡುವಂತೆ ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯಕ್ಕೆ ಈ ಹಿಂದೆ ಮನ್ಸೂರ್ ಮೊರೆ ಹೋಗಿದ್ದರು. ಆಗಲೂ ಸೆಷನ್ಸ್ ನ್ಯಾಯಾಲಯ ಛೀಮಾರಿ ಹಾಕಿತ್ತು.

    ಈ ಪ್ರಕರಣ ಸುಖಾಂತ್ಯಗೊಳಲಿದೆ ಎನ್ನುವ ಹೊತ್ತಿನಲ್ಲಿ, ಮನ್ಸೂರ್ ಅಲಿಖಾನ್ ಮತ್ತೆ ತ್ರಿಷಾ ಹಾಗೂ ಇನ್ನೂ ಇಬ್ಬರ ಕಲಾವಿದರ ಬಗ್ಗೆ ಅಬ್ಬರಿಸಿದ್ದರು. ತ್ರಿಷಾ ವಿಚಾರದಲ್ಲಿ ಸುಖಾಸುಮ್ಮನೆ ತಮ್ಮ ಮಾನಹಾನಿ ಮಾಡಿದ್ದಾರೆ ಎಂದು ನಟಿ ಖುಷ್ಭೂ (Khushboo) ಹಾಗೂ ಚಿರಂಜೀವಿ (Chiranjeevi) ಅವರ ಮೇಲೆ ಹರಿಹಾಯ್ದಿದ್ದರು. ಅವರ ಮೇಲೆ ಮಾನನಷ್ಟ (Defamation) ಮೊಕದ್ದಮೆ ಹೂಡುವುದಾಗಿ ಹೇಳಿಕೊಂಡಿದ್ದರು.

    ಅದರಂತೆ ಮದ್ರಾಸ್ ಹೈಕೋರ್ಟಿಗೆ ಮನ್ಸೂರ್ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇಂದು ಈ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಸತೀಶ್ ಕುಮಾರ್ ಅವರು, ಮನ್ಸೂರ್ ಅಲಿಖಾನ್ ಅವರಿಗೆ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕವಾಗಿ ಹೀಗೆ ಅಸಭ್ಯವಾಗಿ ವರ್ತಿಸಲು ಅನುಮತಿ ಇದೆಯೇ? ಎಂದು ಪ್ರಶ್ನೆ ಮಾಡಿದರು. ಸಾರ್ವಜನಿಕವಾಗಿ ಹೇಗೆ ವರ್ತಿಸಬೇಕು ಎನ್ನುವುದು ಅರಿವಿರಬೇಕು. ಇಂತಹ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗಬಾರದು ಎಂದು ಹೇಳಿದ ನ್ಯಾಯಮೂರ್ತಿಗಳು, ಪ್ರಕರಣವನ್ನು ಡಿ.22ಕ್ಕೆ ಮುಂದೂಡಿದಿದ್ದಾರೆ.

    ತ್ರಿಷಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಳಹಂತದ ನ್ಯಾಯಾಲಯದಲ್ಲಿ ಮನ್ಸೂರ್ ಅಲಿಖಾನ್ ಪಾಠ ಮಾಡಿಸಿಕೊಂಡಾಗಿದೆ. ಈಗ ಹೈಕೋರ್ಟ್ ನಲ್ಲೂ ಅಂಥದ್ದೇ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬಂದಿದೆ. ಡಿ.22ಕ್ಕೆ ನ್ಯಾಯಾಲಯವು ಈ ಪ್ರಕರಣವನ್ನು ಯಾವ ರೀತಿಯಲ್ಲಿ ನೋಡುತ್ತದೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

  • 200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

    200 ಕೋಟಿ ವಂಚನೆ ಕೇಸ್ : ‘ವಿಕ್ರಾಂತ್ ರೋಣ’ ಬೆಡಗಿಯ ವಿರುದ್ಧ ಮಾನನಷ್ಟ ಮೊಕದ್ದಮೆ

    ಕನ್ನಡದ ವಿಕ್ರಾಂತ್ ರೋಣ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ, ಬಾಲಿವುಡ್ ನಟಿ ನೋರಾ ಫತೇಹಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಇಬ್ಬರೂ ನಟಿಯರು ಸುಕೇಶ್ ಚಂದ್ರಶೇಖರ್ ವಿರುದ್ಧದದ 200 ಕೋಟಿ ವಂಚನೆ ಪ್ರಕರಣದ ಆರೋಪಿಗಳಾಗಿದ್ದಾರೆ ಎನ್ನುವುದು ವಿಶೇಷ. ಇದೇ ಕಾರಣಕ್ಕಾಗಿಯೇ ಜಾಕ್ವೆಲಿನ್ ಮೇಲೆ ನೋರಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಸುಕೇಶ್ ವಂಚನೆ ಪ್ರಕರಣದಲ್ಲಿ ಈ ನಟಿಯರ ಹೆಸರು ಕೇಳಿ ಬಂದಿತ್ತು. ಜಾರಿ ನಿರ್ದೇಶನಾಲಯ ಕೂಡ ಇಬ್ಬರನ್ನೂ ಕರೆಯಿಸಿ ವಿಚಾರಣೆಗೆ ಒಳಪಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋರಾ ಫತೇಹಿ ವಿರುದ್ಧ ಜಾಕ್ವೆಲಿನ್ ಮಾನಹಾನಿ ಆಗುವಂತಹ ಮತ್ತು ದುರುದ್ದೇಶಪೂರಿತ ಕಾರಣಗಳನ್ನು ನೀಡುತ್ತಿದ್ದಾರಂತೆ. ಅದರಿಂದಾಗಿ ತಮಗೆ ಮಾನ ಹಾನಿ ಆಗುತ್ತಿದೆ ಎಂದು ನೋರಾ ಆರೋಪಿಸಿದ್ದಾರೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಈ ಇಬ್ಬರೂ ನಟಿಯರು ಮೂಲತಃ ವಿದೇಶಿಗರಾಗಿದ್ದು, ಬಾಲಿವುಡ್ ನಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಕಾರಣದಿಂದಾಗಿಯೇ ಇವರು ಸುಕೇಶ್ ಸಂಪರ್ಕಕ್ಕೂ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹಲವು ಬಾರಿ ಈ ನಟಿಯರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗಾಗಿ ಕರೆದಿದೆ. ಆದರೆ, ಈ ಕೇಸ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ನಟಿಯರು ಹೇಳಿಕೆ ಕೊಡುತ್ತಲೇ ಬಂದಿದ್ದಾರೆ. ಸುಕೇಶ್ ತಮಗೆ ನೇರವಾಗಿ ಪರಿಚಯವೇ ಇಲ್ಲವೆಂದು ನೋರಾ ಹೇಳಿದ್ದರೆ, ಅವನಿಂದ ಯಾವುದೇ ಉಡುಗೊರೆ ಪಡೆದಿಲ್ಲ ಎಂದು ಜಾಕ್ವೆಲಿನ್ ವಾದಿಸಿದ್ದಾರೆ.

    ಈ ಇಬ್ಬರೂ ನಟಿಯರು ಏನೇ ಹೇಳಿದರೂ, ಈಗಾಗಲೇ ಕೋರ್ಟ್ ಕಟಕಟೆಯಲ್ಲಿ ನಿಂತು ಬಂದಿದ್ದಾರೆ. ಜಾರಿ ನಿರ್ದೇಶನಾಲಯವು ಇಬ್ಬರ ಮೇಲೂ ಗುರುತರ ಆರೋಪ ಮಾಡಿ ಜಾರ್ಜ್ ಶೀಟ್ ಕೂಡ ಸಲ್ಲಿಸಲಾಗಿದೆ. ನೂರಾರು ಕೋಟಿಯ ವಂಚನೆಯ ಪ್ರಕರಣ ಇದಾಗಿದ್ದರಿಂದ, ಗಂಭೀರವಾಗಿ ಈ ಪ್ರಕರಣವನ್ನು ತಗೆದುಕೊಳ್ಳಲಾಗಿದೆ. ಇಬ್ಬರೂ ಇಕ್ಕಟ್ಟಿಗೆ ಸಿಲುಕಿದ್ದರೂ, ಒಬ್ಬರ ಮೇಲೆ ಒಬ್ಬರು ಆರೋಪ ಮಾಡಿ, ಬೇರೆ ಕಾರಣಗಳಿಂದಾಗಿ ಮತ್ತೆ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ.

    Live Tv
    [brid partner=56869869 player=32851 video=960834 autoplay=true]