Tag: ಮಾನಹಾನಿ ಕೇಸ್‌

  • ಮಾನಹಾನಿ ಕೇಸ್ ರದ್ದು ಕೋರಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

    ಮಾನಹಾನಿ ಕೇಸ್ ರದ್ದು ಕೋರಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

    ಬೆಂಗಳೂರು: ತಮ್ಮ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಮಾನಹಾನಿ ಕೇಸ್‌ ರದ್ದುಗೊಳಿಸುವಂತೆ ಕೋರಿದ್ದ ಡಿ. ರೂಪಾ ಮೌದ್ಗಿಲ್ (Roopa Moudgil) ಅವರ ಅರ್ಜಿಯನ್ನ ಹೈಕೋರ್ಟ್‌ ವಜಾಗೊಳಿಸಿದೆ.

    ಐಪಿಎಸ್‌ ಅಧಿಕಾರಿ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ಅರ್ಜಿಯನ್ನು ಹೈಕೋರ್ಟ್‌ ಸೋಮವಾರ (ಆ.21) ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ ಪ್ರಕರಣ ರದ್ದು ಕೋರಿದ್ದ ಡಿ.ರೂಪಾ‌ ಮೌದ್ಗಿಲ್ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ನಲ್ಲಿ ರೂಪಾ ಮೌದ್ಗಿಲ್ ಗೆ ಹಿನ್ನಡೆ ಉಂಟಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ ಮಾಡಿದೆ.

    ಪ್ರಕರಣದ ಹಿನ್ನೆಲೆ ಏನು?
    ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ (Rohini Sindhuri) ಅವರು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕೋರ್ಟ್ ರೂಪಾ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು, ಆ ನಂತರ ಕೋರ್ಟ್‌ಗೆ ಹಾಜರಾಗಿ ರೂಪಾ ಜಾಮೀನು ಪಡೆದಿದ್ದರು. ಇದನ್ನೂ ಓದಿ: ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

    ಏನಿದು ವಿವಾದ?
    ಸೋಷಿಯಲ್‌ ಮೀಡಿಯಾ ಮತ್ತು ಮಾಧ್ಯಮಗಳ ಮೂಲಕ ಐಎಎಸ್‌ ಅಧಿಕಾರಿ (IAS Officer) ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರು ಬಹಿರಂಗವಾಗಿ ಕಿತ್ತಾಟಕ್ಕೆ ಇಳಿದಿದ್ದರು. ರೋಹಿಣಿ ವಿರುದ್ಧ ರೂಪಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪ ಮಾಡಿದ್ದರು. ಬಳಿಕ ಇಬ್ಬರ ನಡುವೆ ಕಿತ್ತಾಟ ಜೋರಾಗಿತ್ತು. ಮುನೀಶ್‌ ಮೌದ್ಗಿಲ್‌ ಹೆಸರನ್ನೂ ರೂಪಾ ಆರೋಪಗಳಲ್ಲಿ ಉಲ್ಲೇಖಿಸಿದ್ದರು. ಅಧಿಕಾರಿಗಳು ಹೀಗೆ ಬಹಿರಂಗವಾಗಿ ಕಿತ್ತಾಡಬಾರದು ಎಂದು ಹಿರಿಯ ಅಧಿಕಾರಿಗಳು, ಸಚಿವರು ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಇಬ್ಬರಿಗೂ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ಡಿ.ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರೋಹಿಣಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರಿಷ್ಠರು ಅನುಮತಿ ನೀಡಿದರೆ ಪ್ರಭು ಚವ್ಹಾಣ್ ವಿರುದ್ಧ ನೂರು ಕೋಟಿ ಮಾನಹಾನಿ ಕೇಸ್ ದಾಖಲಿಸುವೆ: ಖೂಬಾ ಎಚ್ಚರಿಕೆ

    ವರಿಷ್ಠರು ಅನುಮತಿ ನೀಡಿದರೆ ಪ್ರಭು ಚವ್ಹಾಣ್ ವಿರುದ್ಧ ನೂರು ಕೋಟಿ ಮಾನಹಾನಿ ಕೇಸ್ ದಾಖಲಿಸುವೆ: ಖೂಬಾ ಎಚ್ಚರಿಕೆ

    ನವದೆಹಲಿ: ಮಾಜಿ ಸಚಿವ ಪ್ರಭು ಚವ್ಹಾಣ್ (Prabhu Chauhan) ವಿರುದ್ಧ ನೂರು ಕೋಟಿ ಮಾನಹಾನಿ (Defamation) ಪ್ರಕರಣ ದಾಖಲಿಸಲು ಚಿಂತಿಸಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರ ಅನುಮತಿ ಕೇಳಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ಕಾನೂನು ಹೋರಾಟ ಮಾಡಲಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಹೇಳಿದ್ದಾರೆ.

    ನನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಪಕ್ಕೆ ನವದೆಹಲಿಯಲ್ಲಿ (New Delhi) ಪ್ರತಿಕ್ರಿಯಿಸಿದ ಅವರು, ಈ ಗಂಭೀರ ಆರೋಪದಿಂದಾಗಿ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಇದರಿಂದ ನನ್ನ ಕುಟುಂಬ ವಿಚಲಿತವಾಗಿದೆ. ಹೇಳಿಕೊಳ್ಳಲಾಗದಷ್ಟು ಮನಸ್ಸಿಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್‌ ರೇಪ್‌ಗೆ 20 ವರ್ಷ ಜೈಲು – ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್‌ ಶಾ

    ಮಂಡಲದ ಕಾರ್ಯಕಾರಣಿಯಲ್ಲಿ ಮಾತನಾಡುವ ಮಾತು ಬಿಟ್ಟು ನನ್ನ ಮೇಲೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು, ಹಿತೈಷಿಗಳು ನಿರಂತರವಾಗಿ ಸಂಪರ್ಕ ಮಾಡಿ ಧೈರ್ಯ ತುಂಬುತ್ತಿದ್ದಾರೆ. ಪ್ರಭು ಚವ್ಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದೆ. ಕಳೆದ 9 ವರ್ಷದ ಹಿಂದೆ ಇದೇ ರೀತಿ ಆರೋಪ ಮಾಡಿದ್ದರು ಎಂದರು. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

    ನನ್ನ ಮತ್ತು ಅವರ ಸಮಸ್ಯೆ ಪಕ್ಷದ ವೇದಿಕೆಯಲ್ಲಿ ಬಗೆಹರಿಯುತ್ತವೆ. ತಪ್ಪು ತಿಳುವಳಿಕೆ ಸರಿಯಾಗಬಹುದು ಎಂದು ಭಾವಿಸಿದ್ದೆ. ಆದರೆ ಇದರ ಹಿಂದೆ ತಂತ್ರ, ಕುತಂತ್ರ, ಮೋಸ, ಕಪಟತನವಿದೆ ಎಂದು ಈಗ ಅರ್ಥವಾಗಿದೆ. ನನ್ನ ಚರಿತ್ರೆ, ಪಕ್ಷದ ಸೇವೆ ನೋಡಿ ಮೋದಿ ಅವರು ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 50ರ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆ ಇಲ್ಲ: ಕಾಂಗ್ರೆಸ್ ಶಾಸಕಿ ಹೇಳಿಕೆ

    ಬೀದರ್ (Bidar) ಜಿಲ್ಲೆಯಲ್ಲಿ ಒಬ್ಬ ಶಾಸಕನಿಂದ ನಾಲ್ಕಕ್ಕೆ ಶಾಸಕರ ಸಂಖ್ಯೆ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಪ್ರಭು ಚವ್ಹಾಣ್ ಎಲ್ಲರ ಜೊತೆಗೆ ಸಂಭ್ರಮಿಸಬೇಕಿತ್ತು. ಆದರೆ ಅತ್ತು ಕರೆದು ದೂಷಣೆ ಮಾಡುತ್ತಿದ್ದಾರೆ. ಇದು ಅವರ ತಂತ್ರ ಕುತಂತ್ರದ ಆಟ. ಈ ಬಗ್ಗೆ ನಮ್ಮ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ನಾನು ನನ್ನ ಭಾವನೆ ಹೇಳಿಕೊಂಡಿದ್ದೇನೆ. ಪಕ್ಷದ ವೇದಿಕೆಯಲ್ಲಿ ಸತ್ಯಾಸತ್ಯತೆಯನ್ನು ವರಿಷ್ಠರು ಹೊರ ಹಾಕಲಿದ್ದಾರೆ ಎಂದರು. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಹೊರಗೆ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

    ನೂರು ಕೋಟಿ ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ. ಯಾವ್ಯಾವ ಆರೋಪ ಮಾಡಿದ್ದಾರೆ ಎಲ್ಲದಕ್ಕೂ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ನಾನು ಪಕ್ಷಕ್ಕೆ ಮುಜುಗರ ಮಾಡುವುದಿಲ್ಲ. ಪಕ್ಷದಲ್ಲಿ ಅಥವಾ ಕೋರ್ಟ್‌ನಲ್ಲಿ ಅವರಿಗೆ ಉತ್ತರ ಸಿಗಲಿದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಎರಡನೇ ಬಾರಿ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದ ಮೋದಿ – ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

    ಪ್ರಚಾರಕ್ಕೆ ಬಂದಿಲ್ಲ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ಚುನಾವಣೆ ಪೂರ್ವ ಕಾರ್ಯಕರ್ತರ ಅಸಮಾಧಾನ ಅವರ ಗಮನಕ್ಕೆ ತಂದಿದ್ದೆ. ಸಿಟಿ ರವಿ ಸಮ್ಮುಖದಲ್ಲಿ ಪ್ರಸ್ತಾಪ ಮಾಡಿದ್ದೆ. ಅವರ ಕ್ಷೇತ್ರದಲ್ಲಿ ಪ್ರವಾಸ ಮಾಡುವುದಾಗಿ ಹೇಳಿದ್ದೆ. ನಾನು ಮಂತ್ರಿಯಾಗಿದ್ದೇನೆ, ನಾನು ಗೆಲ್ಲುತ್ತೇನೆ. ನನ್ನ ಕ್ಷೇತ್ರಕ್ಕೆ ಬರುವ ಅಗತ್ಯ ಇಲ್ಲ ಎಂದು ಹೇಳಿದ್ದರು ಎಂದು ಹೇಳಿದರು. ಇದನ್ನೂ ಓದಿ: ಚಂದ್ರನ ಮೇಲ್ಮೈ ಹೇಗಿದೆ ನೋಡಿ – Chandrayaan-3 ಲ್ಯಾಂಡರ್ ಸೆರೆಹಿಡಿದ ಫೋಟೋ ಹಂಚಿಕೊಂಡ ಇಸ್ರೋ

    9 ವರ್ಷಗಳಿಂದ ಸಾರ್ವಜನಿಕವಾಗಿ ಆರೋಪಗಳನ್ನು ಎದುರಿಸಿದ್ದೇನೆ. ಪಕ್ಷ ಕಟ್ಟುವುದು ನನ್ನ ಕೆಲಸ. ಬಿಜೆಪಿ (BJP) ಮೇಲೆ ನಂಬಿಕೆ ಇದೆ. ಸಂಬಂಧ ಕಡಿದು ಹೋಯಿತು ಎಂದು ಭಾವಿಸುವುದಿಲ್ಲ. ಅವರು ಅಹಂಕಾರದ ಸ್ವಭಾವ ಮುಂದುವರಿಸಿದರೆ ಮಾನಹಾನಿ ಕೇಸ್ ಹಾಕುತ್ತೇನೆ. ಚುನಾವಣೆ ಹತ್ತಿರ ಬಂದಾಗ ಮನಸ್ಸು ಬದಲಾಗಬಹುದು. ಚುನಾವಣೆಯಲ್ಲಿ ನನ್ನ ವಿಜಯಕ್ಕೆ ಅವರು ದುಡಿಯುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ಮಣಿಪುರ ಶೀಘ್ರದಲ್ಲೇ ಶಾಂತಿಯ ಬೆಳಕನ್ನು ಕಾಣಲಿದೆ: ಮೋದಿ ಭರವಸೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾನಹಾನಿ ಕೇಸ್‌ನಲ್ಲಿ ಜೈಲು ಶಿಕ್ಷೆ – ಸುಪ್ರೀಂ ಕೋರ್ಟ್‌ನಲ್ಲೂ ರಾಹುಲ್ ಗಾಂಧಿಗೆ ಹಿನ್ನಡೆ

    ಮಾನಹಾನಿ ಕೇಸ್‌ನಲ್ಲಿ ಜೈಲು ಶಿಕ್ಷೆ – ಸುಪ್ರೀಂ ಕೋರ್ಟ್‌ನಲ್ಲೂ ರಾಹುಲ್ ಗಾಂಧಿಗೆ ಹಿನ್ನಡೆ

    ನವದೆಹಲಿ: ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರ ಪೂರ್ಣೇಶ್ ಈಶ್ವರಭಾಯಿ ಮತ್ತು ಗುಜರಾತ್ ಸರ್ಕಾರಕ್ಕೆ (Gujarat government) ನೋಟಿಸ್ ನೀಡಿದೆ.

    ಇಂದು ಪ್ರಕರಣ ವಿಚಾರಣೆ ನಡೆಸಿದ ನ್ಯಾ.ಬಿ.ಆರ್ ಗವಾಯಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠ ಪ್ರತಿವಾದಿಗಳ ವಾದ ಆಲಿಸದೇ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ, ಮುಂದಿನ ವಿಚಾರಣೆ ಅಗಸ್ಟ್ 4 ರಂದು ನಡೆಯಲಿದೆ ಎಂದು ತಿಳಿಸಿತು. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ

    ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮಧ್ಯಂತರ ತಡೆಯಾಜ್ಞೆಗೆ ಒತ್ತಾಯಿಸಿದರು. ಅರ್ಜಿದಾರರು 111 ದಿನಗಳಿಂದ ಸಂಕಷ್ಟದಲ್ಲಿದ್ದಾರೆ. ಅವರು ಈಗಾಗಲೇ ಒಂದು ಅಧಿವೇಶನ ಕಳೆದುಕೊಂಡಿದ್ದಾರೆ. ಸದ್ಯ ನಡೆಯುತ್ತಿರುವ ಅಧಿವೇಶನಕ್ಕೆ ಹಾಜರಾಗಿಲ್ಲ. ವಯನಾಡಿನ ಸಂಸತ್ ಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ತಡೆ ನೀಡಬಹುದು ಎಂದು ಮನವಿ ಮಾಡಿದರು.

    ಸಿಂಘ್ವಿ ವಾದ ಆಲಿಸಿದ ನ್ಯಾಯಾಲಯವು ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿತು, ಪ್ರತಿವಾದಿಗಳ ವಾದವನ್ನು ಸಹ ಕೇಳಬೇಕಾಗುತ್ತದೆ ಎಂದು ತಿಳಿಸಿತು. ಇದನ್ನೂ ಓದಿ: ಜೈಪುರದಲ್ಲಿ ಮುಂಜಾನೆ 3 ಬಾರಿ ನಡುಗಿದ ಭೂಮಿ- ಗಾಢ ನಿದ್ದೆಯಲ್ಲಿದ್ದ ಮಂದಿಗೆ ಶಾಕ್

    ಮಾನಹಾನಿ ಪ್ರಕರಣದಲ್ಲಿ (Defamation Case) ಗುಜರಾತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತಮಗೆ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ತಡೆಯಲು ಗುಜರಾತ್ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Savarkar Controversy: ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್‌

    Savarkar Controversy: ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್‌

    ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಸದ್ಯಕ್ಕೆ ಸಂಕಷ್ಟ ಬೆಂಬಿಡದಂತೆ ಕಾಣ್ತಿದೆ. ಸ್ವಾತಂತ್ರ್ಯ ಹೋರಾಟಗಾರ ವಿ.ಡಿ ಸಾವರ್ಕರ್ (VD Savarkar) ಅವರ ಮೊಮ್ಮಗ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಈ ಹಿಂದೆ ರಾಹುಲ್‌ ಗಾಂಧಿ ಲಂಡನ್‌ಗೆ ತೆರಳಿದ್ದಾಗ ತಮ್ಮ ಭಾಷಣದಲ್ಲಿ ವಿ.ಡಿ ಸಾವರ್ಕರ್ ವಿರುದ್ಧ ತಪ್ಪು ಆರೋಪ ಮಾಡಿದ್ದಾರೆ ಎಂಬುದಾಗಿ ಈ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಮೊಮ್ಮಗ ಸತ್ಯಕಿ ಸಾವರ್ಕರ್ (Satyaki Savarkar) ತಿಳಿಸಿದ್ದಾರೆ. ಸತ್ಯಕಿ ಪರ ವಕೀಲರು ಸಿಟಿ ಸಿವಿಲ್‌ ಕೋರ್ಟ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ (IPC) ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಕೋರ್ಟ್‌ ಅಧಿಕಾರಿ ಇಂದು ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ ಇನ್ನೂ ಕೇಸ್ ಸಂಖ್ಯೆ ಸಿಕ್ಕಿಲ್ಲ ಎಂದು ಸತ್ಯಕಿ ಸಾವರ್ಕರ್ ಹೇಳಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

    ರಾಗಾ ಹೇಳಿದ್ದೇನು?
    ಲಂಡನ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಸಾವರ್ಕರ್ ವಿಷಯ ಪ್ರಸ್ತಾಪಿಸಿದ್ದರು. ʻತಾವು ಹಾಗೂ ತಮ್ಮ 5-6 ಮಂದಿ ಸ್ನೇಹಿತರು ಸೇರಿ ಓರ್ವ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದೆವು ಆಗ ತಮಗೆ ಸಂತೋಷವಾಗಿತ್ತುʼ ಎಂದು ಸಾವರ್ಕರ್ ತಮ್ಮ ಪುಸ್ತಕದಲ್ಲಿ ಬರೆದುಕೊಂಡಿರುವುದಾಗಿ ರಾಹುಲ್ ಗಾಂಧಿ ಸಭೆಗೆ ತಿಳಿಸಿದ್ದರು. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    2019ರ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಸೂರ್‌ ಜಿಲ್ಲಾ ನ್ಯಾಯಾಲಯ ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತು. 2 ವರ್ಷ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.