Tag: ಮಾನಹಾನಿ ಪ್ರಕರಣ

  • ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

    ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

    ರಾಂಚಿ: ಅಮಿತ್ ಶಾ (Amit shah) ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ಜಾರ್ಖಂಡ್ ಹೈಕೋರ್ಟ್‌ನ ನಿರ್ದೇಶನದ ಪ್ರಕಾರ ಇಂದು (ಆ.6) ಬೆಳಿಗ್ಗೆ 10:55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು. ಇದಕ್ಕೂ ಮುನ್ನ ಜೂ.26ರಂದು ಖುದ್ದು ಹಾಜರಾಗುವಂತೆ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಜಾರ್ಖಂಡ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.ಇದನ್ನೂ ಓದಿ: ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ

    ರಾಹುಲ್ ಗಾಂಧಿ ಪರ ವಕೀಲರು, ತಮ್ಮ ಕಕ್ಷಿದಾರರು ನಿಗದಿತ ದಿನದಂದು ಹಾಜರಾಗಲು ಸಾಧ್ಯವಾಗುವುದಿಲ್ಲ. ಬದಲಿಗೆ ಆ.6ರಂದು ಹಾಜರಾಗಲು ಅವಕಾಶ ನೀಡುವಂತೆ ಜೂ.10ರಂದು ಕೇಳಿಕೊಂಡಿದ್ದರು. ಅದರಂತೆ ಇದೀಗ ಜಾರ್ಖಂಡ್‌ನ ಚೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    2018ರ ಚುನಾವಣಾ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿಯವರು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಪ್ರತಾಪ್ ಕುಮಾರ್ ಎಂಬ ವ್ಯಕ್ತಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.ಇದನ್ನೂ ಓದಿ: ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

  • ಮಾನಹಾನಿ ಪ್ರಕರಣ – ಏಪ್ರಿಲ್ 13 ರವರೆಗೂ ರಾಗಾಗೆ ರಿಲೀಫ್

    ಮಾನಹಾನಿ ಪ್ರಕರಣ – ಏಪ್ರಿಲ್ 13 ರವರೆಗೂ ರಾಗಾಗೆ ರಿಲೀಫ್

    – ಮೇ 3ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

    ಸೂರತ್: ಮಾನಹಾನಿ ಪ್ರಕರಣದಲ್ಲಿ (Defamation Case) ಜೈಲು ಶಿಕ್ಷೆಗೆ ಒಳಪಟ್ಟಿರುವ ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಸೂರತ್ (Surat) ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ಸೆಷನ್ಸ್ ನ್ಯಾಯಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮೇಲ್ಮನವಿ ಅರ್ಜಿಯನ್ನು ಮೇ 3 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.

    ಸೋಮವಾರ ದೆಹಲಿಯಿಂದ ಸಹೋದರಿ ಪ್ರಿಯಾಂಕಾ ಗಾಂಧಿಯೊಂದಿಗೆ ಹೊರಟ ರಾಹುಲ್ ಗಾಂಧಿ ಮಧ್ಯಾಹ್ನ ವೇಳೆಗೆ ಸೂರತ್ ತಲುಪಿ ಕೋರ್ಟ್ ಮುಂದೆ ಹಾಜರಾದರು. ಜಿಲ್ಲಾ ನ್ಯಾಯಲಯ ನೀಡಿದ ಆದೇಶ ರದ್ದು ಮಾಡಬೇಕು, ವಿಚಾರಣೆ ಅಂತ್ಯವಾಗುವವರೆಗೂ ಮಧ್ಯಂತರ ತಡೆ ನೀಡಬೇಕು ಎಂದು ರಾಗಾ ಪರ ವಕೀಲರು ಮನವಿ ಮಾಡಿದರು.

    ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಲಯ ಮೇ 3 ರಂದು ವಿಚಾರಣೆ ನಡೆಸಲಾಗುವುದು, ಏಪ್ರಿಲ್ 13ರ ವರೆಗೂ ಜಾಮೀನು ವಿಸ್ತರಿಸಿದೆ ಎಂದು ತಿಳಿಸಿತು. ರಾಹುಲ್ ಗಾಂಧಿ ವಿಚಾರಣೆ ಹಿನ್ನೆಲೆ ಸಾವಿರಾರು ಕಾರ್ಯಕರ್ತರು ಕೋರ್ಟ್ ಆವರಣದಲ್ಲಿ ಜಮಾಯಿಸಿದ್ದರು. ಇದನ್ನೂ ಓದಿ: ದೇಶವನ್ನು ಭ್ರಷ್ಟಾಚಾರ ಮುಕ್ತಗೊಳಿಸುವುದು ಸಿಬಿಐ ಜವಾಬ್ದಾರಿ: ಮೋದಿ

    ರಾಹುಲ್ ಗಾಂಧಿ ವಿಚಾರಣೆ ವೇಳೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಸೆಷನ್ಸ್ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು.

    ಈ ಬಗ್ಗೆ ಮಾತನಾಡಿರುವ ಕಾನೂನು ಸಚಿವ ಕಿರಣ್ ರಿಜಿಜು, ಕಾಂಗ್ರೆಸ್ ನ್ಯಾಯಾಂಗದ ಮೇಲೆ ಅನಾವಶ್ಯಕ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ನ್ಯಾಯಲಯದ ಮುಂಭಾಗದಲ್ಲಿ ಘೇರಾವ್ ಹಾಕಲಾಗುತ್ತಿದೆ. ವಿರೋಧ ಪಕ್ಷದ ಸದಸ್ಯರು ರಾಹುಲ್ ಗಾಂಧಿ ಅವರನ್ನು ಸೂರತ್ ಕೋರ್ಟ್‌ಗೆ ಕರೆದೊಯ್ಯುವ ರೀತಿ ಹೀಗೆಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಟಿಕೆಟ್ ಹಂಚಿಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಮಹೇಶ್ ಕುಮಟಳ್ಳಿ

  • ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಶೃತಿ ಹರಿಹರನ್ ದಾಖಲಿಸಿದ್ದ ಕೇಸ್ ಗೆ ತಡೆಯಾಜ್ಞೆ

    ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಶೃತಿ ಹರಿಹರನ್ ದಾಖಲಿಸಿದ್ದ ಕೇಸ್ ಗೆ ತಡೆಯಾಜ್ಞೆ

    ವಿಸ್ಮಯ ಸಿನಿಮಾ ಶೂಟಿಂಗ್ ವೇಳೆ ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಲಾಗಿದೆ ಎಂದು ಹೆಸರಾಂತ ನಟರೊಬ್ಬರ ಮೇಲೆ ನಟಿ ಶ್ರುತಿ ಹರಿಹರನ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ನಟನ ಪರವಾಗಿ ಪ್ರಶಾಂತ್ ಸಂಬರ್ಗಿ ನಾನಾ ಹೇಳಿಕೆಗಳನ್ನು ನೀಡಿದ್ದರು. ಮಾಧ್ಯಮಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡುವಾಗ ಪ್ರಶಾಂತ್ ಸಂಬರ್ಗಿ ತಮ್ಮ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ನಲ್ಲಿ ನಡೆಯುತ್ತಿರುವ ಈ ಪ್ರಕರಣವನ್ನು ರದ್ದು ಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ  ವಿಚಾರಣೆಯನ್ನು 2023ರ ಫೆಬ್ರುವರಿ 1ಕ್ಕೆ ಮುಂದೂಡಿದೆ. ಇದನ್ನೂ ಓದಿ: IMDB 2022ರ ಜನಪ್ರಿಯ ಭಾರತೀಯ ಸಿನಿಮಾ ಪಟ್ಟಿಯಲ್ಲಿ ಕನ್ನಡದ ಟಾಪ್‌ 3 ಚಿತ್ರಗಳು

    ಶ್ರುತಿ ಹರಿಹರನ್ ಮಾಡಿದ್ದ ಆರೋಪದ ಕುರಿತಂತೆ  2018ರ ಅಕ್ಟೋಬರ್ 25ರಂದು ವಾಣಿಜ್ಯ ಮಂಡಳಿಯಲ್ಲಿ ಸಂಧಾನ ಸಭೆ ನಡೆದಿತ್ತು. ಹಿರಿಯ ನಟ ಅಂಬರೀಶ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಶ್ರುತಿ ಹರಿಹರನ್ ಮತ್ತು ನಟನಿಗೆ ಆಪ್ತರಾಗಿದ್ದ ಸಂಬರಗಿ ಹಾಜರಿದ್ದರು. ನಂತರ ತನ್ನ ವಿರುದ್ಧ ಮಾಧ್ಯಮಗಳಲ್ಲಿ ಸಂಬರಗಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದು, ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿದ್ದರು. ಸಂಬರಗಿ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    Live Tv
    [brid partner=56869869 player=32851 video=960834 autoplay=true]