ದಾವಣಗೆರೆ: ವಿಷ (Poison) ಕುಡಿದಿದ್ದ ವ್ಯಕ್ತಿಯನ್ನು ಮಾಯಕೊಂಡ (Mayakonda) ಶಾಸಕ ಬಸವಂತಪ್ಪ (Basavantappa) ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ (Hospital) ಸಾಗಿಸಿ ಜೀವ ಉಳಿಸಿದ್ದಾರೆ.
ದಾವಣಗೆರೆ (Davangere) ತಾಲೂಕು ಅಣಬೇರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೇವಣಸಿದ್ದಪ್ಪ (45) ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ವಿಷ ಸೇವಿಸಿದ್ದ. ಆತನನ್ನು ಚಿಕಿತ್ಸೆಗೆ ಕರೆದೊಯ್ಯಲು ಅಂಬುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ 1 ಗಂಟೆ ಕಾದರೂ ಅಂಬುಲೆನ್ಸ್ ಬಾರದ ಹಿನ್ನೆಲೆ ಪಕ್ಕದ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಬಸವಂತಪ್ಪ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಮತ್ತೆ ಅರೆಸ್ಟ್ ವಾರೆಂಟ್ ಜಾರಿ
ವಿಷ ಕುಡಿದು 1 ಗಂಟೆಯಿಂದ ನರಳಾಡುತ್ತಿದ್ದ ವ್ಯಕ್ತಿಯ ಸ್ಥಿತಿ ಗಂಭೀರ ಆಗಿದ್ದರಿಂದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ತಮ್ಮ ಕಾರಿನಲ್ಲಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾವಣಗೆರೆಯ ಸಿಜೆ ಆಸ್ಪತ್ರೆಗೆ ವ್ಯಕ್ತಿಯನ್ನು ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಶಾಸಕರ ಸಮಯಪ್ರಜ್ಞೆಯಿಂದ ಜೀವವೊಂದು ಉಳಿದಿದೆ. ಇದನ್ನೂ ಓದಿ: ಕಾರ್ಯಕ್ರಮಕ್ಕೆ ಬಂದಿದ್ದ ಕೆನಡಾ ಉರ್ದು ಸಾಹಿತಿಗೆ ಹೃದಯಾಘಾತ
ನಟ ಸುದೀಪ್ (Sudeep) ಅವರಿಗೆ ಬೆದರಿಕೆ ಪತ್ರ ಬಂದು ಒಂದು ತಿಂಗಳು ಕಳೆದಿದೆ. ಅವರು ದೂರು ದಾಖಲಿಸಿ 25 ದಿನಕ್ಕೂ ಹೆಚ್ಚು ದಿನಗಳು ಉರುಳಿವೆ. ಪತ್ರ ಬರೆದವರ ಬೆನ್ನತ್ತಿರುವ ಸಿಸಿಬಿಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಆದರೂ, ತಮ್ಮ ಪ್ರಯತ್ನವನ್ನು ಅವರು ನಿಲ್ಲಿಸಿಲ್ಲ. ಈ ಕುರಿತು ಇದೇ ಮೊದಲ ಬಾರಿಗೆ ಕಿಚ್ಚು ಸುದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚುನಾವಣಾ ಪ್ರಚಾರಕ್ಕೆ ಹೊರಡುತ್ತಿರುವ ಸಂದರ್ಭದಲ್ಲಿ ಬೆದರಿಕೆ ಪತ್ರದ ಬಗ್ಗೆ ಮಾತನಾಡಿದ್ದಾರೆ.
ಬೆದರಿಕೆಯ ಪತ್ರದ (Threat letter) ಬಗ್ಗೆ ಮಾತನಾಡಿದ ಸುದೀಪ್, ‘ನಂಗೆ ತುಂಬಾ ಲವ್ ಲೇಟರ್ ಗಳು ಬರ್ತಾ ಇರ್ತಾವೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳೋಕೆ ಆಗಲ್ಲ’ ಎಂದು ಚುಟುಕಾಗಿ ಉತ್ತರಿಸಿದ್ದಾರೆ. ಈ ಮೂಲಕ ಪತ್ರ ಬರೆದವರ ಬಗ್ಗೆ ಕೇರ್ ಮಾಡುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ‘ಆ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ನನ್ನ ಪಾಡಿಗೆ ನಾನು ಇವತ್ತಿನಿಂದ ಪ್ರಚಾರಕ್ಕೆ ಹೋಗ್ತಾ ಇದೀನಿ’ ಎಂದಿದ್ದಾರೆ.
ಇಂದಿನಿಂದ ಸುದೀಪ್ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ (Campaign) ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು (Molakalmuru) ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ವಿಜಯ್ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್ ಡೇಟ್
ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ.
ಜಗಳೂರು (Jagaluru) ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.
ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.
ಕಳೆದ ವಾರವಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರಕ್ಕಾಗಿ ಶಿಗ್ಗಾಂವಿಗೆ ತೆರಳಿದ್ದ ನಟ ಕಿಚ್ಚ ಸುದೀಪ್ (Sudeep) ನಾಳೆ ಹಲವು ಊರುಗಳಲ್ಲಿ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಬೊಮ್ಮಾಯಿ ಮಾಮ ಸೂಚಿಸಿದ ಊರುಗಳಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದಿದ್ದ ಕಿಚ್ಚ ಕೊಟ್ಟ ಮಾತಿನಂತೆ ನಾಳೆಯಿಂದ ಭರ್ಜರಿ ಪ್ರಚಾರ (campaign) ಮಾಡಲಿದ್ದಾರೆ. ಕಿಚ್ಚನಿಗಾಗಿಯೇ ಹೆಲಿಕಾಪ್ಟರ್ ಸಿದ್ಧಗೊಂಡಿದೆ.
ನಾಳೆ ಸುದೀಪ್ ಯಾವೆಲ್ಲ ಊರಿಗೆ ಹೋಗಬೇಕು ಮತ್ತು ಯಾರ ಪರವಾಗಿ ಪ್ರಚಾರ ಮಾಡಬೇಕು ಎನ್ನುವುದರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಬೆಂಗಳೂರಿನಿಂದ ಹೊರಡುವ ಕಿಚ್ಚ, ನಾಳೆಯೇ ಐದು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು (Molakalmuru) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ.
ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು (Jagaluru) ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ. ಇದನ್ನೂ ಓದಿ:ವಿಜಯ್ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್ ಡೇಟ್
ಜಗಳೂರು ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.
ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.
ದಾವಣಗೆರೆ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್‍ಸ್ಟೇಬಲ್ ಅವರಿಗೆ ಕಲ್ಲಿನಲ್ಲಿ ಹೊಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಹನುಮಂತಪ್ಪ ಗಾಯಗೊಂಡ ಪೊಲೀಸ್ಕಾನ್‍ಸ್ಟೇಬಲ್. ಜಿಲ್ಲೆಯ ಮಾಯಕೊಂಡ ಹೋಬಳಿಯ ಹಿರೇತೊಗಲೆರಿ ಗ್ರಾಮದಲ್ಲಿ ಹಬ್ಬದ ವಿಚಾರವಾಗಿ ಎರಡು ಗುಂಪುಗಳ ನಡುವೆ ಜಗಳ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಯಕೊಂಡ ಠಾಣೆಯ ಕಾನ್‍ಸ್ಟೇಬಲ್ ಹನುಮಂತಪ್ಪ ಜಗಳವಾಡುತ್ತಿದ್ದವರನ್ನು ಬಿಡಿಸಿ ಜೀಪಿಗೆ ಹತ್ತಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಶುಶ್ರುಕಿ ಆತ್ಮಹತ್ಯೆಗೆ ಯತ್ನ
ಜೀಪಿಗೆ ಹತ್ತಿಸುವ ವೇಳೆಯಲ್ಲಿ ನಿವೃತ್ತ ಎಎಸ್‍ಐ ರುದ್ರಪ್ಪ ಕುಟುಂಬಸ್ಥರು ಪೊಲೀಸ್ ಕಾನ್‍ಸ್ಟೇಬಲ್ ಹನುಮಂತಪ್ಪ ಅವರ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ಗಾಯಗೊಂಡಿರುವ ಹನುಮಂತಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿರುವ ನಿವೃತ್ತ ಎಎಸ್‍ಐ ಕುಟುಂಬದ ವಿರುದ್ಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆಎಸ್ ಪಿ ರಿಷ್ಯಂತ್ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇದನ್ನೂ ಓದಿ: ಸೋನು ಸೂದ್ ಕಚೇರಿ ಮೇಲೆ ಐಟಿ ದಾಳಿ
ದಾವಣಗೆರೆ: ಮಾಯಕೊಂಡ ತಾಲೂಕು ಕೇಂದ್ರವನ್ನಾಗಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಆನಗೋಡು ಹೋಬಳಿಯನ್ನು ಮಾಯಕೊಂಡ ತಾಲೂಕಿಗೆ ಸೇರಿಸಿದರೆ 1992 ಗೋಲಿಬಾರ್ ಮರುಕಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳ ಮುಂದೆಯೇ ರೈತ ಮುಖಂಡ ಚಿನ್ನಸಮುದ್ರದ ಶೇಖರ್ ನಾಯ್ಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಯಕೊಂಡ ಪ್ರತ್ಯೇಕ ತಾಲೂಕು ವಿಚಾರದಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಭೆ ನಡೆದಿತ್ತು. ಜಿಲ್ಲಾಧಿಕಾರಿ ಸಭೆಯ ನೇತೃತ್ವ ವಹಿಸಿದ್ದರು. ಮಾಯಕೊಂಡ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಶೇಖರ್ ನಾಯ್ಕ್, ಮಾಯಕೊಂಡ ಕ್ಷೇತ್ರವನ್ನು ತಾಲೂಕು ಮಾಡಲು ನಮ್ಮ ವಿರೋಧವಿಲ್ಲ. ಆದರೆ ಮಾಯಕೊಂಡ ತಾಲೂಕಿಗೆ ಆನಗೋಡು ಹೋಬಳಿಯನ್ನು ಸೇರ್ಪಡೆ ಮಾಡಿದರೆ 1992ರಲ್ಲಿ ನಡೆದ ಗೋಲಿಬಾರ್ ಮತ್ತೆ ಮರುಕಳಿಸುತ್ತದೆ ಎಂದು ವೇದಿಕೆ ಮೇಲೆಯೇ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಮುಂದೆಯೇ ಈ ರೀತಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಇತರ ಗ್ರಾಮಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಅವರ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡಿದರು. ಹೀಗಾಗಿ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಶೇಖರ್ ನಾಯ್ಕ್ ವಿರುದ್ಧ ಜನರು ಮುಗಿಬಿದ್ದರು. ಆಗ ಪೊಲೀಸರು ಶೇಖರ್ ನಾಯ್ಕ್ ಅವರನ್ನು ಸಭೆಯಿಂದ ಹೊರಗೆ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಅಲ್ಲದೆ ಸಭೆಯಲ್ಲಿ ಗೊಂದಲ ಸೃಷ್ಟಿಯಾದ ಹಿನ್ನಲೆ ಜಿಲ್ಲಾಧಿಕಾರಿಗಳೇ ಸಭೆಯಿಂದ ಹೊರ ನಡೆದರು.
ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಎಎಸ್‍ಐಗೆ ಸಾರ್ವಜನಿಕರು ಗೂಸಾ ಕೊಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಾಯಕೊಂಡ ಪೊಲೀಸ್ ಠಾಣೆಯ ಓಬಳೇಶ್ ಸಾರ್ವಜನಿಕರಿಂದ ಥಳಿತಕ್ಕೆ ಒಳಗಾದ ಎಎಸ್‍ಐ. ಗಣೇಶ ವಿಸರ್ಜನೆ ಬಂದೋಬಸ್ತ್‍ಗಾಗಿ ಓಬಳೇಶ್ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮನೆ ಬಳಿ ಬಂದಿದ್ದರು. ಈ ವೇಳೆ ಯಾರಿಗೂ ತಿಳಿಯದಂತೆ ಓಬಳೇಶ್, ಮಹಿಳೆಯ ಮನೆಗೆ ಹೋಗಿದ್ದರು. ಆದರೆ ಇದನ್ನು ಸ್ಥಳೀಯರೊಬ್ಬರು ನೋಡಿ ಮಹಿಳೆಯ ಕುಟುಂಬದವರಿಗೆ ತಿಳಿಸಿದ್ದಾರೆ.
ಮಹಿಳೆಯ ಜೊತೆಗೆ ಇದ್ದ ಓಬಳೇಶ್ ಅವರನ್ನು ಮಹಿಳೆ ಸಂಬಂಧಿಕರು ಹಾಗೂ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಳಿಕ ಓಬಳೇಶ್‍ರನ್ನು ಎಳೆದುಕೊಂಡು ಬಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಎಷ್ಟೇ ಬೇಡಿಕೊಂಡರೂ ಸ್ಥಳೀಯರು ಹಲ್ಲೆ ಮುಂದುವರಿಸಿದ ಪರಿಣಾಮ ಓಬಳೇಶ್ ಅಸ್ವಸ್ಥಗೊಂಡು ಕೆಳಗೆ ಬಿದ್ದರು.
ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿ, ಓಬಳೇಶ್ ಅವರನ್ನು ಆಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಾರ್ವಜನಿಕರ ಥಳಿತದಿಂದ ಗಾಯಗೊಂಡಿರುವ ಓಬಳೇಶ್ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ಬೆಂಗಳೂರು: ಮಾಯಕೊಂಡ ಕ್ಷೇತ್ರದ ಶಾಸಕ ಶಿವಮೂರ್ತಿ ನಾಯ್ಕ್ ಅವರು ಮುಂದೆ ನಿನ್ನನ್ನು ನೋಡಿಕೊಳ್ಳುತ್ತೀನಿ ಎಂದು ನನಗೆ ಬೆದರಿಕೆ ಹಾಕಿದ್ದರು ಎಂದು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದ್ದಾರೆ.
ಶಾಸಕ ಶಿವಮೂರ್ತಿ ನಾಯ್ಕ್ ಅವರು ಕಚೇರಿಗೆ ಬಂದು ಹೇಗೆ ಬೆದರಿಕೆ ಹಾಕಿದ್ದರು ಎನ್ನುವುದನ್ನು ರಾಜೇಂದ್ರ ಕುಮಾರ್ ಕಟಾರಿಯಾ ಪಬ್ಲಿಕ್ ಟಿವಿಗೆ ವಿವರಿಸಿದ್ದಾರೆ.
ಸೋಮವಾರ ಶಿವಮೂರ್ತಿನಾಯ್ಕ್ ಅವರು ತಮ್ಮ ಮಗನ ಕೇಸ್ ಬಗ್ಗೆ ಕಚೇರಿಗೆ ಬಂದು ನಿಮ್ಮಲ್ಲಿ ಅರ್ಜಿ ಪೆಂಡಿಂಗ್ ಇದೆ, ಅದನ್ನು ಬೇಗನೆ ಅನುಮೋದನೆ ನೀಡಬೇಕೆಂದು ಕೇಳಿದರು.
ನಾನು ಅವರಿಗೆ ಇದನ್ನು ಕಾನೂನಾತ್ಮಕವಾಗಿ ಅನುಮೋದನೆ ಮಾಡಲು ಬರುವುದಿಲ್ಲ. ನಿಮ್ಮ ಅರ್ಜಿ ನಿರ್ದೇಶಕರ ಹತ್ತಿರ ಪೆಂಡಿಂಗ್ ಇದೆ, ಅವರು ಅವರ ಕಾನೂನು ಚೌಕಟ್ಟಿನಲ್ಲಿ ಏನು ಮಾಡಲು ಬರುತ್ತೋ ಅದನ್ನು ಮಾಡುತ್ತಾರೆ ಎನ್ನುವುದನ್ನು ವಿವರಿಸಿದೆ.
ನಾನು ತಿಳಿಸಿದರೂ ಅವರು ಇವತ್ತೇ ನನಗೆ ಬೇಕು, ಇವತ್ತೆ ಆರ್ಡರ್ ಕೊಡಬೇಕು ಎಂದು ವಾದಿಸುತ್ತಿದ್ದರು. ಜೋರಾಗಿ ಬಾಯಿ ಮಾಡುತ್ತಿದ್ದರು. ತುಂಬಾ ಅವಾಚ್ಯ ಶಬ್ಧಗಳನ್ನು ಬಳಸುತ್ತಿದ್ದರು. ನಾನು ನಿರಾಕರಿಸಿದ್ದಕ್ಕೆ ನಿನ್ನ ಮುಂದೆ ನೋಡ್ಕೋತ್ತೀನಿ ಅಂತ ಎಲ್ಲಾ ಹೆದರಿಸಿದರು. ತುಂಬಾ ಜಾಸ್ತಿನೆ ಜಗಳ ಆಯ್ತು ಅದರ ಬಗ್ಗೆ ನಾನು ವಿವರವಾಗಿ, ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಅವರಿಗೆ ದೂರು ಕೊಟ್ಟಿದ್ದೇನೆ. ಇವತ್ತು ನಾನು ಸಿಎಂ ಅವರನ್ನು ಭೇಟಿ ಮಾಡಿ ಅವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.
ಎಸ್‍ಸಿ, ಎಸ್‍ಟಿ ಅನುಕೂಲಗಳಿಗೆ ಅಧಿಕಾರಿಗಳು ಅಡ್ಡಿ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ, ಆ ಪಂಗಡಗಳಿಗೆ ಏನು ಸಿಗಬೇಕೋ ಅದು ಸಿಗುತ್ತದೆ. ಅವುಗಳಿಗಾಗಿ ಬೇರೆ ಬೇರೆ ಕಛೇರಿಗಳಿವೆ. ಅನುದಾನ ಏನು ನೀಡಬೇಕೋ ಅದನ್ನು ಸರಿಯಾಗಿ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯನವರು ನನಗೆ ಭರವಸೆಯನ್ನು ನೀಡಿದ್ದಾರೆ. ಇಂತಹ ನಾನ್ ಸೆನ್ಸ್ ಗಳಿಗೆ ನೀವು ತಲೆ ಕೆಡಿಸಿಕೊಳ್ಳಬೇಡಿ ನಾನು ನೋಡಿಕೊಳ್ಳುತ್ತೇನೆ. ನಿಮ್ಮ ಡ್ಯೂಟಿಯನ್ನು ನೀವು ಮಾಡಿ ಎಂದು ಹೇಳಿದ್ದಾರೆ. ಸಿಎಂ ಅವರು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ತಿಳಿಸಿದರು.
ತಮ್ಮ ಪುತ್ರ ಸೂರಜ್ ಎಸ್. ನಾಯ್ಕ್ ಅವರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗದಲ್ಲಿ ಗ್ರಾನೈಟ್ ಗಣಿಗಾರಿಕೆ ನಡೆಸಲು ಪರವಾನಗಿ ನೀಡಿಲ್ಲ ಎನ್ನುವ ಕಾರಣಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಖುಂಟಿಆ ಅವರಿಗೆ ರಾಜೇಂದ್ರ ಕುಮಾರ್ ಕಟಾರಿಯಾ ದೂರು ನೀಡಿದ್ದರು.
ಅಕ್ಟೋಬರ್ 9ರಂದು ಕಚೇರಿಗೆ ನುಗ್ಗಿದ ಶಿವಮೂರ್ತಿ ನಾಯ್ಕ್ ತಕ್ಷಣವೇ ಕಡತ ತರಿಸಿ ಗಣಿಗಾರಿಕೆಗೆ ಅನುಮೋದನೆ ನೀಡಬೇಕೆಂದು ಒತ್ತಡ ಹೇರಿದರು. ನಾನೇ ಸರ್ಕಾರ. ನನ್ನ ಆದೇಶವನ್ನು ಪಾಲಿಸಲೇಬೇಕು ಎಂದು ಕೂಗಾಡಿದರು ಎಂದು ಕಟಾರಿಯಾ ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಕೊಂಡ ಶಾಸಕ ಶಿವಮೂರ್ತಿನಾಯ್ಕ್ ಗೆ ಸಿಎಂ ಸಿದ್ದರಾಮಯ್ಯ ಚೆನ್ನಾಗಿ ಕ್ಲಾಸ್ ಮಾಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.
ಮಂಗಳವಾರ ಸಂಜೆ ಶಿವಮೂರ್ತಿ ನಾಯ್ಕ್ ಅವರು ಗಲಾಟೆ ಬಗ್ಗೆ ಸಿಎಂ ಗೆ ಮಾಹಿತಿ ನೀಡಲು ಸಿಎಂ ನಿವಾಸಕ್ಕೆ ತೆರಳಿದ್ದರು. ಎಸ್‍ಸಿ ಎಸ್‍ಟಿ ಸೌಲಭ್ಯಗಳಿಗೆ ಅಧಿಕಾರಿ ಕಟಾರಿಯಾ ಅಡ್ಡಿ ಮಾಡುತ್ತಿದ್ದಾರೆಂದು ಶಿವಮೂರ್ತಿ ಆರೋಪಿಸಿದಾಗ, ಅಧಿಕಾರಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಅನ್ನೋದು ಗೊತ್ತಿಲ್ವೇನಯ್ಯ ನಿನಗೆ ಎಂದು ಪ್ರಶ್ನಿಸಿ ಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇಂತಹ ನಾನ್ ಸೆನ್ಸ್ ಕೆಲಸ ಎಲ್ಲಾ ಮಾಡಬೇಡ, ಐಎಎಸ್ ಅಧಿಕಾರಿಗಳಿಗೆ ಬೈಯೋದು ಅಂದ್ರೆ ಏನು ಅನ್ಕೋಂಡಿದಿಯಾ, ಹೆಚ್ಚು ಕಡಿಮೆ ಆದರೆ ಜೈಲಿಗೆ ಕಳುಹಿಸುತ್ತಾರೆ ಹುಷಾರ್. ಲಾಸ್ಟ್ ಎಲೆಕ್ಷನ್‍ನಲ್ಲಿ ಬಿ-ಫಾರಂ ಕೊಡಿಸಿದ್ದು ನಾನೇ ಅಲ್ವ ನಿನಗೆ, ಎಲೆಕ್ಷನ್ ಸಮಯದಲ್ಲಿ ಹೀಗಿಲ್ಲ ಮಾಡಿಕೊಂಡರೆ ಬಿ-ಫಾರಂ ಸಿಗಲ್ಲ ತಿಳ್ಕೋ ಎಂದು ಎಚ್ಚರಿಸಿದ್ದಾರೆನ್ನಲಾಗಿದೆ.
ಅಧಿಕಾರಿ ವಿರುದ್ಧ ದೂರು ನೀಡಲು ಹೋದಂತಹ ಶಿವಮೂರ್ತಿ ನಾಯ್ಕ್ ಸಿಎಂ ಆಕ್ರೋಶಗೊಂಡಿದ್ದನ್ನು ನೋಡಿ ಹಾಗಲ್ಲ ಸರ್, ಹೀಗೆ ಎಂದು ಹೇಳಿ ಮರು ಮಾತನಾಡದೆ ಜಾಗ ಖಾಲಿ ಮಾಡಿ ರಾತ್ರಿಯೇ ತಮ್ಮ ಸ್ವಕ್ಷೇತ್ರ ಮಾಯಕೊಂಡಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ತಮ್ಮ ಪುತ್ರ ಸೂರಜ್ ಎಸ್. ನಾಯ್ಕ್ ಅವರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗದಲ್ಲಿ ಗ್ರಾನೈಟ್ ಗಣಿಗಾರಿಕೆ ನಡೆಸಲು ಪರವಾನಗಿ ನೀಡಿಲ್ಲ ಎನ್ನುವ ಕಾರಣಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಖುಂಟಿಆ ಅವರಿಗೆ ರಾಜೇಂದ್ರ ಕುಮಾರ್ ಕಟಾರಿಯಾ ದೂರು ಸಲ್ಲಿಸಿದ್ದರು.
ಅಕ್ಟೋಬರ್ 9ರಂದು ಕಚೇರಿಗೆ ನುಗ್ಗಿದ ಶಿವಮೂರ್ತಿ ನಾಯ್ಕ್ ತಕ್ಷಣವೇ ಕಡತ ತರಿಸಿ ಗಣಿಗಾರಿಕೆಗೆ ಅನುಮೋದನೆ ನೀಡಬೇಕೆಂದು ಒತ್ತಡ ಹೇರಿದರು. ನಾನೇ ಸರ್ಕಾರ. ನನ್ನ ಆದೇಶವನ್ನು ಪಾಲಿಸಲೇಬೇಕು ಎಂದು ಕೂಗಾಡಿದರು ಎಂದು ಕಟಾರಿಯಾ ದೂರಿನಲ್ಲಿ ತಿಳಿಸಿದ್ದಾರೆ.