Tag: ಮಾರಕಾಸ್ತ್ರ

  • ಮಾರಕಾಸ್ತ್ರ ಹಿಡಿದು ಬಂದ ಮಾಲಾಶ್ರೀ:  ಚಿತ್ರದ ಟೀಸರ್ ರಿಲೀಸ್

    ಮಾರಕಾಸ್ತ್ರ ಹಿಡಿದು ಬಂದ ಮಾಲಾಶ್ರೀ: ಚಿತ್ರದ ಟೀಸರ್ ರಿಲೀಸ್

    ನಸಿನ ರಾಣಿ ಮಾಲಾಶ್ರೀ (Malashree) ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಾರಕಾಸ್ತ್ರ’ (Marakastra) ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ (Teaser) ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾರಕಾಸ್ತ್ರ ಚಿತ್ರದ ಸಾಹಸ ಸನ್ನಿವೇಶಗಳು ಅವರ ಹಿಂದಿನ ಚಾಮುಂಡಿ, ಶಕ್ತಿ ಮುಂತಾದ ಚಿತ್ರಗಳ ಸಾಹಸ ಸನ್ನಿವೇಶಗಳನ್ನು ನೆನಪಿಸಿತು ಎಂದು ನೆನಪಿನಂಗಳಕ್ಕೆ ಜಾರಿದರು.

    ನನಗೆ ಧನಕುಮಾರ್‌ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ‌ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ. ಏಕೆಂದರೆ ಅವರು ವಿಕಲ ಚೇತನರಾಗಿದ್ದರು ಕೂಡ,  ಅವರಲ್ಲಿರುವ ಸಿನಿಮಾ ಪ್ರೀತಿ ಕಂಡು ಸಂತೋಷವಾಯಿತು. ಮೊದಲು ಹನ್ನೊಂದು ದಿನಗಳ ಕಾಲ ನನ್ನ ಚಿತ್ರೀಕರಣ ಎಂದು ನಿಗದಿಯಾಗಿತ್ತು. ಆನಂತರ ಒಟ್ಟು ಅರವತ್ತು ದಿನಗಳ ಕಾಲ  ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೇನೆ. ನಾಲ್ಕು ಸಾಹಸ ಸನ್ನಿವೇಶಗಳಿವೆ. ನಾನು ಆಕ್ಷನ್ ಕ್ವೀನ್ ಎಂದು‌ ಕರೆಸಿಕೊಳ್ಳಲು‌ ಥ್ರಿಲ್ಲರ್ ಮಂಜು ಮಾಸ್ಟರ್ ಪ್ರಮುಖ ಕಾರಣ. ಅವರ ಜೊತೆಗೆ ಈ ಚಿತ್ರದಲ್ಲೂ ಕೆಲಸ ಮಾಡಿದ್ದು ಖುಷಿಯಾಗಿದೆ .  ಇದರಲ್ಲಿ ನನ್ನದು ಪೊಲೀಸ್ ಅಧಿಕಾರಿಯ ಪಾತ್ರ ಎಂದರು ನಟಿ ಮಾಲಾಶ್ರೀ.

    ನಾನು ಮೂಲತಃ ಬಳ್ಳಾರಿಯವನು. ಇದು ನನ್ನ ಮೊದಲ ಚಿತ್ರ. ಪ್ರಥಮ ಚಿತ್ರದಲ್ಲೇ ಮಾಲಾಶ್ರೀ ಅವರಿಗೆ ಆಕ್ಷನ್ ಕಟ್ ಹೇಳುತ್ತೀನಿ ಅಂದುಕೊಂಡಿರಲಿಲ್ಲ. ಮಾರಕಾಸ್ತ್ರ ಒಂದು ಕೌಟುಂಬಿಕ ಚಿತ್ರ‌. ಇದರಲ್ಲಿ ಆಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲವೂ ಇದೆ . ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುಮೂರ್ತಿ ಸುನಾಮಿ (Gurumurthy Tsunami) ತಿಳಿಸಿದರು. ಇದನ್ನೂ ಓದಿ:ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಸ್ಯಾಂಡಲ್‌ವುಡ್‌ಗೆ ಎಂಟ್ರಿ

    ಮಾರಕಾಸ್ತ್ರ ಚಿತ್ರದ ಕಥೆ ಚೆನ್ನಾಗಿದೆ. ಚಿತ್ರದ ಹಾಡು ಹೇಳುವುದಕ್ಕೆ ಹೋದ ನಾನು ನಿರ್ಮಾಪಕನಾದೆ. ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ. ನನಗೆ ನನ್ನ ದೇಶದ ಮೇಲೆ ಅಭಿಮಾನ ಹೆಚ್ಚು. ಹಾಗಾಗಿ ಈ ಚಿತ್ರದ ಹಾಡೊಂದರ ಚಿತ್ರೀಕರಣವನ್ನು ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸುಮಾರು ಮೂವತ್ತೆರಡು ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಸದ್ಯದಲ್ಲೇ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದರು ನಿರ್ಮಾಪಕ ನಟರಾಜ್.

    ಈ ಚಿತ್ರದಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕಾಣಿಸಿಕೊಂಡಿದ್ದೇನೆ ಎಂದು ತಮ್ಮ ಪಾತ್ರದ ಬಗ್ಗೆ ಹರ್ಷಿಕಾ ಪೂಣಚ್ಛ (Harshika Poonachha) ಹೇಳಿದರು. ಚಿತ್ರದಲ್ಲಿ ನಟಿಸಿರುವ ಆನಂದ್ ಆರ್ಯ(ನಾಯಕ), ಭರತ್ ಸಿಂಗ್,  ಉಗ್ರಂ ಮಂಜು, ನಿರ್ಮಾಪಕಿ ಕೋಮಲ ನಟರಾಜ್, ಕ್ರಿಯೇಟಿವ್ ಹೆಡ್ ಧನಕುಮಾರ್, ಕಾರ್ಯಕಾರಿ ನಿರ್ಮಾಪಕ ಮಂಜುನಾಥ್ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಸತೀಶ್ ಬಾಬು ಮುಂತಾದವರು ಮಾರಕಾಸ್ತ್ರ ಚಿತ್ರದ ಕುರಿತು ಮಾತನಾಡಿದರು. ಮಂಜು ಕವಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಮಾಡಿದ್ದಾರೆ.

  • ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ

    ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ

    ಮಂಗಳೂರು: ಅಪರಿಚಿತರ ಗುಂಪೊಂದು ಬಿಜೆಪಿ ಯುವ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ನಡೆದಿದೆ.

    ದುಷ್ಕರ್ಮಿಗಳ ದಾಳಿಯಿಂದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಪುತ್ತೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಾಯಿ ಓದುವಂತೆ ಒತ್ತಾಯಿಸುತ್ತಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – 2 ವಾರಗಳಲ್ಲಿ 3ನೇ ಸಾವು

    ಬೈಕಲ್ಲಿ ಬಂದ ಅಪರಿಚಿತರು ಕೃತ್ಯ ಎಸಗಿದ್ದಾರೆ. ಸದ್ಯ ಪುತ್ತೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪುತ್ತೂರು, ಬೆಳ್ಳಾರೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನೂ ಓದಿ: 55ರ ಮಹಿಳೆಯೊಂದಿಗೆ 29ರ ಯುವಕ ರೊಮ್ಯಾನ್ಸ್ – ಮದುವೆ ಎಂದೊಡನೇ ಯುವಕ ಎಸ್ಕೇಪ್

    ಒಂದು ವಾರದ ಹಿಂದೆಯಷ್ಟೇ ನಡೆದ ಕೊಲೆಗೆ ಸೇಡು ತೀರಿಸಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಲ್ಲದೆ ಪ್ರವೀಣ್ ಅವರನ್ನು ಹತ್ಯೆ ಮಾಡಲು ಬಂದಿದ್ದ ದುಷ್ಕರ್ಮಿಗಳ ಬೈಕ್ ನಂಬರ್ ಕೇರಳದ ನೋಂದಣಿ ಸಂಖ್ಯೆಯಾಗಿದ್ದವು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಕಳೆದ ವಾರ 8 ಮಂದಿ ಯುವಕರ ತಂಡ ಒಬ್ಬ ಯುವಕನನ್ನು ಭೀಕರವಾಗಿ ಕೊಲೆ ಮಾಡಿತ್ತು. ಈ ಸಂಬಂಧ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಮೈಸೂರಿನ APMCಯಲ್ಲಿ ಕ್ಯಾಪ್ಸಿಕಂ ರವಿಯ ಬರ್ಬರ ಹತ್ಯೆ

    ಮೈಸೂರಿನ APMCಯಲ್ಲಿ ಕ್ಯಾಪ್ಸಿಕಂ ರವಿಯ ಬರ್ಬರ ಹತ್ಯೆ

    ಮೈಸೂರು: ಎಪಿಎಂಸಿ ಏಜೆಂಟ್ ಆಗಿದ್ದ ಮಂಡ್ಯ ಮೂಲದ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ಬಂಡೀಪಾಳ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.

    ಹತ್ಯೆಗೊಳಗಾದವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ನಿವಾಸಿ ರವಿ ಅಲಿಯಾಸ್ ಕ್ಯಾಪ್ಸಿಕಂ ರವಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಅಮ್ಮನ ಜೊತೆ ಮಲಗಿದ್ದವನ ಮರ್ಮಾಂಗವನ್ನೇ ಬ್ಲೇಡ್‍ನಿಂದ ಕಟ್ ಮಾಡಿದ ಮಗಳು!

    CRIME 2

    ಗೌತಮ್ ಎಂಬ ವ್ಯಕ್ತಿ ಸೇರಿದಂತೆ ನಾಲ್ವರ ತಂಡದಿಂದ ಕೃತ್ಯ ಎಸಗಲಾಗಿದ್ದು, ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಎಪಿಎಂಸಿಯ ಮಳಿಗೆ ನಂ.7ರಲ್ಲಿ ವಹಿವಾಟು ನಡೆಸುತ್ತಿದ್ದ ರವಿ ಹಾಗೂ ಆರೋಪಿ ಗೌತಮ್ ನಡುವೆ ಕಮಿಷನ್ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದಕ್ಕಾಗಿ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮೊಬೈಲ್ ಜಾಸ್ತಿ ಬಳಸಬೇಡ ಅಂದಿದ್ದಕ್ಕೆ ಯುವತಿ ಆತ್ಮಹತ್ಯೆ

    ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

  • ತಡರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನ ಹತ್ಯೆ

    ತಡರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನ ಹತ್ಯೆ

    ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

    ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?

    ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ನಾನು ಜ್ಯೂನಿಯರ್ ಪುನೀತ್ ರಾಜ್ ಕುಮಾರ್ ಅಲ್ಲ : ಮಾರಕಾಸ್ತ್ರ ಹೀರೋ ಹೇಳಿಕೆ

    ನಾನು ಜ್ಯೂನಿಯರ್ ಪುನೀತ್ ರಾಜ್ ಕುಮಾರ್ ಅಲ್ಲ : ಮಾರಕಾಸ್ತ್ರ ಹೀರೋ ಹೇಳಿಕೆ

    ಪುನೀತ್ ರಾಜ್ ಕುಮಾರ್ ನಿಧನಾ ನಂತರ ಅವರ ಹೆಸರಿನಲ್ಲಿ ಏನೆಲ್ಲ ಕೆಲಸಗಳು ನಡೆಯುತ್ತಿವೆ. ಸಿನಿಮಾಗಳ ಟ್ರೇಲರ್, ಟೀಸರ್, ಚಿತ್ರಗಳ ಬಿಡುಗಡೆಯಲ್ಲೂ ಪುನೀತ್ ಹೆಸರು ಮತ್ತು ಫೋಟೋ ಬಳಕೆ ಆಗುತ್ತಿದೆ. ಆದರೆ, ‘ಮಾರಕಾಸ್ತ್ರ’ ಸಿನಿಮಾದ ನಾಯಕ  ಆನಂದ್ ಆರ್ಯ ಮಾತ್ರ ಇದಕ್ಕೆ ತದ್ವಿರುದ್ಧ. ಯಾವುದೇ ಕಾರಣಕ್ಕೂ ಪುನೀತ್ ಅವರ ಹೆಸರನ್ನು ಬಳಕೆ ಮಾಡಲು ಅವರು ಇಷ್ಟಪಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ : ವಿವಾದ ಇಲ್ಲದೇ ಸಿನಿಮಾ ರಿಲೀಸ್ ಮಾಡಲ್ಲವಾ ಸಂಜಯ್ ಲೀಲಾ ಬನ್ಸಾಲಿ? : ಗಂಗೂಬಾಯಿ ಮೇಲೆ ಮತ್ತೊಂದು ಕೇಸ್

    “ನಾನು ಥೇಟ್ ಪುನೀತ್ ರಾಜ್ ಕುಮಾರ್ ರೀತಿಯಲ್ಲೇ ಕಾಣುತ್ತೇನೆ, ಹಾಗೆಯೇ ಹಾವಭಾವ ಕೂಡ ಇದೆ. ಅವರಂತೆಯೇ ಡೈಲಾಗ್ ಹೇಳುತ್ತೇನೆ ಎಂದು ಅನೇಕರು ಹೇಳಿದ್ದಾರೆ. ಆದರೆ, ನನಗೆ ಹಾಗೆ ಅನಿಸುವುದಿಲ್ಲ. ಪುನೀತ್ ಅವರನ್ನು ಆದರ್ಶವಾಗಿ ತಗೆದುಕೊಳ್ಳುತ್ತೇನೆಯೇ ವಿನಃ ಅವರ ಹೆಸರನ್ನು ಎಲ್ಲಿಯೂ ದುರ್ಬಳಕೆ ಮಾಡಿಕೊಳ್ಳಲಾರೆ” ಎಂದಿದ್ದಾರೆ.  ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತೆ ಮಲಯಾಳಂ ನಟಿ ಲಲಿತಾ ಇನ್ನಿಲ್ಲ

    ಇತ್ತೀಚೆಗಷ್ಟೇ ಆನಂದ್ ಆರ್ಯ ನಟನೆಯ ‘ಮಾರಕಾಸ್ತ್ರ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಿತು. ಅಲ್ಲಿಯೂ ಅನೇಕರು ನೀವು ಪುನೀತ್ ಅವರ ಹಾಗೆಯೇ ಕಾಣುತ್ತೀರಿ ಎಂದಾಗ, ನಕ್ಕು ಸುಮ್ಮನಾದರು ಆನಂದ್ ಆರ್ಯ. ಇದು ಇವರ ನಟನೆಯ ಎರಡನೇ ಸಿನಿಮಾ. ಗುರುಮೂರ್ತಿ ಸುನಾಮಿ ನಿರ್ದೇಶನದಲ್ಲಿ ಮಾರಕಾಸ್ತ್ರ ಸಿನಿಮಾ ಮೂಡಿ ಬರುತ್ತಿದ್ದು, ಮಾರ್ಚ್ ನಿಂದ ಶೂಟಿಂಗ್ ಶುರುವಾಗಲಿದೆ. ಇದನ್ನೂ ಓದಿ : ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ

    ದೇಶಪ್ರೇಮ ಮತ್ತು ಲೇಖನಿಗೆ ಅದೆಷ್ಟು ಶಕ್ತಿ ಇದೆ ಎಂದು ತೋರಿಸುವ ಪ್ರಯತ್ನವನ್ನು ಈ ಸಿನಿಮಾದಲ್ಲಿ ಮಾಡಲಿದ್ದಾರಂತೆ ನಿರ್ದೇಶಕರು. ಮಾಧುರ್ಯ ನಾಯಕಿಯಾಗಿ ನಟಿಸುತ್ತಿದ್ದರೆ, ನಟರಾಜ್ ಚಿತ್ರದ ನಿರ್ಮಾಪಕರು.

  • ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ

    ಕಣ್ಣಿಗೆ ಖಾರದ ಪುಡಿ ಎರಚಿ ಯುವಕನ ಬರ್ಬರ ಕೊಲೆ

    ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.

    ಹನೀಫ್ (30) ಕೊಲೆಯಾದ ಯುವಕನಾಗಿದ್ದಾನೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದಗಣಿ ಪಟ್ಟಣದಲ್ಲಿ ಹಾಡಹಗಲೇ ಯುವಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

    ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಿಂದ ಯುವಕನ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಟ್ಟಿ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜನ್ಮದಿನಾಚರಣೆಯ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್

     

    ಆಟೋಮೊಬೈಲ್ ಅಂಗಡಿ ನಡೆಸುತ್ತಿದ್ದ ಹನೀಫ್ ಜೊತೆ ಕೆಲ ಮೆಕಾನಿಕ್‍ಗಳು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದರು. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

  • ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ – ಅಡುಗೆ ಉಪಕರಣಗಳಿಂದಲೇ ಮಾರಕಾಸ್ತ್ರ ತಯಾರಿ

    ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ – ಅಡುಗೆ ಉಪಕರಣಗಳಿಂದಲೇ ಮಾರಕಾಸ್ತ್ರ ತಯಾರಿ

    – ಚಮಚ, ತಟ್ಟೆಯಿಂದ ಮಾರಕಾಸ್ತ್ರ ತಯಾರಿ
    – 37 ಚಾಕು, ಡ್ರ್ಯಾಗರ್ ಪತ್ತೆ

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ರಾಶಿ ರಾಶಿ ಮಾರಕಾಸ್ತ್ರಗಳು ಪತ್ತೆಯಾಗಿವೆ.

    ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳು ಗಾಂಜಾ ಹಾಗೂ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಕಾರಣ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಕ್ರೈಂ ಡಿಸಿಪಿಗಳ ನೇತೃತ್ವದಲ್ಲಿ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ ತಂಡದಿಂದ ದಾಳಿ ನಡೆಸಲಾಗಿದೆ. ಸಿಸಿಬಿ ತಂಡ ಬೆಳಗ್ಗೆಯಿಂದ ಶೋಧಕಾರ್ಯ ನಡೆಸುತ್ತಿದೆ.

    ಪರಿಶೀಲನೆ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಶಿ ರಾಶಿ ಮಾರಾಕಾಸ್ತ್ರಗಳು ಸಿಕ್ಕಿದ್ದು, ಜೈಲಿನಲ್ಲಿರುವ ಖೈದಿಗಳ ಬಳಿ ರಾಶಿ ರಾಶಿ ಮೊಬೈಲ್ ಹಾಗೂ ಸಿಮ್ ಕಾರ್ಡ್ ಗಳು ಪತ್ತೆಯಾಗಿವೆ. ಗಾಂಜಾ ಸೇದಲು ಬಳಸುವ ಪೈಪ್ ಗಳು ಸಹ ಸಿಸಿಬಿ ದಾಳಿಯ ವೇಳೆ ಪತ್ತೆಯಾಗಿವೆ.

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಕ್ಕಿರುವ ಬಹುತೇಕ ಮಾರಾಕಾಸ್ತ್ರಗಳನ್ನು ಜೈಲಿನಲ್ಲೇ ತಯಾರು ಮಾಡಿಕೊಂಡಿದ್ದಾರೆ. ಜೈಲಿನಲ್ಲಿರುವ ಚಮಚ, ತಟ್ಟೆಗಳು, ಗ್ಯಾಸ್ ಲೈಟರ್ ಸೇರಿದಂತೆ ವಿವಿಧ ವಸ್ತುಗಳಿಂದ ತಯಾರು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ದಾಳಿ ಬಳಿಕ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿ, ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ರೌಡಿ ಚಟುವಟಿಕೆಗೆ ಬ್ರೇಕ್ ಹಾಕಲು ಆಯುಕ್ತರು ಸೂಚಿಸಿದ್ದಾರೆ. ಬೆಳಗ್ಗೆಯೇ ಕಾರಾಗೃಹದ ಮೇಲೆ ದಾಳಿ ಮಾಡಿದ್ದು, ಪ್ರತಿ ಬ್ಯಾರಕ್ ನಲ್ಲೂ ತಪಾಸಣೆ ಮಾಡಲಾಗಿದೆ ಎಂದು ತಿಳಿಸಿದರು.

    ದಾಳಿ ವೇಳೆ 37 ಚಾಕು ಮತ್ತು ಡ್ರ್ಯಾಗರ್ ಗಳು ಸಿಕ್ಕಿವೆ. ಗಾಂಜಾ ಮತ್ತು ಗಾಂಜಾ ಸೇವನೆ ಮಾಡುವ ಪೈಪುಗಳನ್ನೂ ಜಪ್ತಿ ಮಾಡಲಾಗಿದೆ. ಮೊಬೈಲ್ ಮತ್ತು ಸಿಮ್ ಕಾರ್ಡ್ ಗಳು ಸಿಕ್ಕಿದ್ದು, ಅದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿ ಒಳಗಿದ್ದು, ಅಲ್ಲಿಂದಲೇ ಅಪರಾಧ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭಿಸಿದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ತನಿಖೆಯ ದೃಷ್ಟಿಯಿಂದ ಕೆಲ ವಿಷಯಗಳನ್ನು ಗೌಪ್ಯವಾಗಿಡಬೇಕಾಗುತ್ತದೆ. ಪರಿಶೀಲನೆ ವೇಳೆ ಜೈಲು ಅಧೀಕ್ಷಕರು ಜೊತೆಗಿದ್ದರು. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದು ಸಂದೀಪ್ ಪಟೇಲ್ ತಿಳಿಸಿದರು.

  • ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

    ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

    ವಿಜಯಪುರ: ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಶಿಖಾರಖಾನೆಯಲ್ಲಿ ನಡೆದಿದೆ.

    ಸುರೇಶ್ ಬೆಡಸೂರ್ (45) ಕೊಲೆಯಾದ ವ್ಯಕ್ತಿ. ಸುರೇಶ್‍ನನ್ನು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ, ಆತನ ತಲೆಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆಗೈಯಲಾಗಿದೆ. ಬೆಳ್ಳಂಬೆಳಗ್ಗೆ ರಸ್ತೆ ಮೇಲೆ ಸುರೇಶ್ ಮೃತದೇಹ ಕಂಡು ಭಯಗೊಂಡ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ದೊರಕಿಲ್ಲ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್- ಶಾಸಕನನ್ನು ಉಚ್ಚಾಟಿಸಿದ ಬಿಜೆಪಿ

    ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್- ಶಾಸಕನನ್ನು ಉಚ್ಚಾಟಿಸಿದ ಬಿಜೆಪಿ

    ಡೆಹ್ರಾಡೂನ್: ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದ ಉತ್ತರಾಖಂಡ್‍ನ ಶಾಸಕ ಪ್ರಣವ್ ಸಿಂಗ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಲಹೆಗಾರ ಅನಿಲ್ ಬಲುನಿ ಅವರು, ಪ್ರಣವ್ ಸಿಂಗ್ ನಿರಂತರವಾಗಿ ದುರ್ನಡತೆ ತೋರುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದೇವೆ ಎಂದು ತಿಳಿಸಿದರು.

    ಕಪ್ಪು ಬಣ್ಣದ ಬನಿಯನ್ ಹಾಗೂ ಬಿಳಿ ಪ್ಯಾಂಟ್ ಧರಿಸಿ, ಎರಡೂ ಕೈಯಲ್ಲಿ ನಾಲ್ಕು ಗನ್ ಹಿಡಿದುಕೊಂಡು, ಮೊಣಕಾಲ ಮೇಲೆ ಮದ್ಯಪಾನದ ಗ್ಲಾಸ್ ಇಟ್ಟುಕೊಂಡು, ಡ್ಯಾನ್ಸ್ ಮಾಡುತ್ತ ಪೋಸ್ ನೀಡಿದ್ದರು. ಪ್ರಣವ್ ಸಿಂಗ್ ಅವರ ಜೊತೆ ಸಹಚರರು ಸಹ ಡ್ಯಾನ್ಸ್ ಮಾಡಿದ್ದು, ಸುಮಾರು 1.45 ನಿಮಿಷಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಈ ಕುರಿತು ಎಚ್ಚರ ವಹಿಸಿದ್ದರು. ತಕ್ಷಣವೇ ಗನ್ ಹಾಗೂ ಶಸ್ತ್ರಾಸ್ತ್ರಗಳಿಗೆ ಪರವಾನಿಗೆ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿ ತನಿಖೆ ನಡೆಸಿದ್ದರು. ಈ ಘಟನೆಯಿಂದ ಮುಜುಗುರಕ್ಕೆ ಈಡಾಗಿದ್ದ ಬಿಜೆಪಿ ಸಹ ಖಂಡನೆ ವ್ಯಕ್ತಪಡಿಸಿದ್ದು, ಪ್ರಣವ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿತ್ತು.

    ನಾನು ಈ ವಿಡಿಯೋವನ್ನು ಗಮನಿಸಿದ್ದು, ಶಾಸಕ ಪ್ರಣವ್ ಸಿಂಗ್ ಇಂತಹ ವರ್ತನೆಗಳಿಂದಲೇ ಹೆಚ್ಚು ಪ್ರಸಿದ್ಧಿ ಪಡೆದಿದ್ದಾರೆ. ಹೀಗಾಗಿಯೇ ಈ ಹಿಂದೆ ಮೂರು ತಿಂಗಳುಗಳ ಕಾಲ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಘಟನೆ ಕುರಿತು ಉತ್ತರಾಖಂಡ್ ರಾಜ್ಯ ಬಿಜೆಪಿ ಜೊತೆ ಮಾತನಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಲಹೆಗಾರ ಅನಿಲ್ ಬಲುನಿ ತಿಳಿಸಿದ್ದರು.

    ತಮ್ಮ ನಡತೆಯನ್ನು ಸಮರ್ಥಿಸಿಕೊಂಡಿದ್ದ ಶಾಸಕ ಪ್ರಣವ್ ಸಿಂಗ್, ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ. ನಾನು ಗುಂಡುಗಳನ್ನು ಲೋಡ್ ಮಾಡದ ಗನ್ ಹಿಡಿದುಕೊಂಡಿದ್ದೆ. ಮನೆಯಲ್ಲಿ ಪಾರ್ಟಿ ಮಾಡುವುದು, ಕುಡಿಯುವುದು ತಪ್ಪೇ ಎಂದು ಪ್ರಶ್ನಿಸಿದ್ದರು.

  • ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಬಿಜೆಪಿ ಶಾಸಕನ ಡ್ಯಾನ್ಸ್ – ವಿಡಿಯೋ ವೈರಲ್

    ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಬಿಜೆಪಿ ಶಾಸಕನ ಡ್ಯಾನ್ಸ್ – ವಿಡಿಯೋ ವೈರಲ್

    ಡೆಹ್ರಾಡೂನ್: ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿದ್ದ ಉತ್ತರಾಖಂಡ್‍ನ ಬಿಜೆಪಿ ಶಾಸಕ ಪ್ರಣವ್ ಸಿಂಗ್ ಇದೀಗ ಮತ್ತೆ ಸುದ್ದಿಯಾಗಿದ್ದು, ನಾಲ್ಕೈದು ಗನ್ ಹಿಡಿದುಕೊಂಡು ಅಶ್ಲೀಲ ಪದಗಳನ್ನು ಬಳಸಿ ಬೈಯುತ್ತ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಶಾಸಕ ಆಕಾಶ್ ವಿಜಯ್‍ವರ್ಗಿಯಾ ಪ್ರಕರಣದ ನಂತರ ಪ್ರಧಾನಿ ಮೋದಿ ಅವರು ಎಲ್ಲ ಜನಪ್ರತಿನಿಧಿಗಳು ಶಿಸ್ತಿನಿಂದ ವರ್ತಿಸಬೇಕು. ಅಶಿಸ್ತು ಹಾಗೂ ದುರ್ವರ್ತನೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ಆದರೂ ಕೆಲ ನಾಯಕರು ಒಂದಿಲ್ಲೊಂದು ವಿವಾದಗಳನ್ನು ಸೃಷ್ಟಿಸುವ ಮೂಲಕ ಸುದ್ದಿಯಾಗುತ್ತಿದ್ದು, ಉತ್ತರಾಖಂಡ ಶಾಸಕರೊಬ್ಬರು ಇದೀಗ ನಾಲ್ಕೈದು ಗನ್‍ಗಳನ್ನು ಹಿಡಿದುಕೊಂಡು ಅಶ್ಲೀಲ ಶಬ್ದಗಳಿಂದ ಬೈಯ್ಯುವ ಮೂಲಕ ವಿಚಿತ್ರವಾಗಿ ವರ್ತಿಸಿದ್ದಾರೆ.

    ಕಪ್ಪು ಬಣ್ಣದ ಬನಿಯನ್ ಹಾಗೂ ಬಿಳಿ ಪ್ಯಾಂಟ್ ಧರಿಸಿ, ಎರಡೂ ಕೈಯ್ಯಲ್ಲಿ ನಾಲ್ಕು ಗನ್ ಹಿಡಿದುಕೊಂಡು, ಮೊಣಕಾಲ ಮೇಲೆ ಮಧ್ಯಪಾನದ ಗ್ಲಾಸ್ ಇಟ್ಟುಕೊಂಡು, ಡ್ಯಾನ್ಸ್ ಮಾಡುತ್ತ ಪೋಸ್ ನೀಡಿದ್ದಾರೆ. ಶಾಸಕರ ಜೊತೆ ಸಹಚರರು ಸಹ ಡ್ಯಾನ್ಸ್ ಮಾಡಿದ್ದು, ಸುಮಾರು 1.45 ನಿಮಿಷಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಈ ಕುರಿತು ಎಚ್ಚರ ವಹಿಸಿದ್ದು, ಗನ್ ಹಾಗೂ ಶಸ್ತ್ರಾಸ್ತ್ರಗಳಿಗೆ ಪರವಾನಿಗೆ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    ಬಿಜೆಪಿ ಸಹ ಈ ಕುರಿತು ಖಂಡನೆ ವ್ಯಕ್ತಪಡಿಸಿದ್ದು, ಶಾಸಕನ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.

    ನಾನು ಈ ವಿಡಿಯೋವನ್ನು ಗಮನಿಸಿದ್ದು, ಶಾಸಕ ಪ್ರಣವ್ ಸಿಂಗ್ ಇಂತಹ ವರ್ತನೆಗಳಿಂದಲೇ ಹೆಚ್ಚು ಪ್ರಸಿದ್ದಿ ಪಡೆದಿದ್ದಾರೆ. ಹೀಗಾಗಿಯೇ ಈ ಹಿಂದೆ ಮೂರು ತಿಂಗಳುಗಳ ಕಾಲ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಘಟನೆ ಕುರಿತು ಉತ್ತರಾಖಂಡ್ ರಾಜ್ಯ ಬಿಜೆಪಿ ಜೊತೆ ಮಾತನಾಡಿ ಕಠಿಣ ಕ್ರಮ ಕೈಗೊಳ್ಳಲಾಗುವದು ಎಂದು ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಲಹೆಗಾರ ಅನಿಲ್ ಬಲುನಿ ತಿಳಿಸಿದ್ದಾರೆ.

    ಪತ್ರಕರ್ತರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಕಳೆದ ತಿಂಗಳು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿತ್ತು. ಅಲ್ಲದೆ, ಅಶಿಸ್ತು ಹಾಗೂ ದುರ್ವರ್ತನೆಯಿಂದ ಬಿಜೆಪಿ ರೋಸಿ ಹೋಗಿದ್ದು, ಅಮಾನತುಗೊಳಿಸಿದರೂ ಸಹ ಶಾಸಕರ ದುರ್ವರ್ತನೆಗೆ ಕಡಿವಾಣ ಬಿದ್ದಿಲ್ಲ.