Tag: ಮಾರಿಕಾಂಬಾ ದೇವಸ್ಥಾನ

  • ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಪ್ರವೇಶಿಸಲು ವಸ್ತ್ರ ಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ವೇದಿಕೆ ಒತ್ತಾಯ

    ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಪ್ರವೇಶಿಸಲು ವಸ್ತ್ರ ಸಂಹಿತೆ ಜಾರಿಗೆ ಹಿಂದೂ ಜನಜಾಗೃತಿ ವೇದಿಕೆ ಒತ್ತಾಯ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆವರಣದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಿ ವಿವಾದವಾದ ಹಿನ್ನೆಲೆಯಲ್ಲಿ ಇದೀಗ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ (Marikamba Temple) ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿಯಿಂದು ಆಡಳಿತ ಸಮಿತಿಗೆ ಮನವಿ ಮಾಡಿದ್ದಾರೆ.

    ಹಿಂದೂ ಸಂಸ್ಕೃತಿ ಪ್ರಕಾರ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವುದಕ್ಕೆ ಮಾತ್ರ ಅವಕಾಶ ನೀಡಬೇಕು. ಅರೆಬರೆ ಬಟ್ಟೆ ಧರಿಸಿ ದೇವಸ್ಥಾನದ ಒಳಗೆ ಬರುವುದಕ್ಕೆ ಅವಕಾಶ ನೀಡಬಾರದು. ಅರೆಬರೆ ಬಟ್ಟೆ ಧರಿಸಿ ಬರುವುದರಿಂದ ದೇವಸ್ಥಾನ ಪಾವಿತ್ರ್ಯತೆಗೆ ಧಕ್ಕೆ ಬರುತ್ತದೆ. ಈ ಕಾರಣದಿಂದ ವಸ್ತ್ರಸಂಹಿತೆ ಜಾರಿ ಮಾಡುವಂತೆ ಆಡಳಿತ ಮಂಡಳಿಗೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ ಮಾಡಿದೆ.

    ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ಈಗ ಹೇಗಿದೆ?: ಶಿರಸಿ (Sirsi) ಮಾರಿಕಾಂಬಾ ದೇವಸ್ಥಾನದಲ್ಲಿ ಜಾತಿ, ಕುಲ ಎನ್ನದೇ ದೇವಸ್ಥಾನಕ್ಕೆ ಪ್ರವೇಶವನ್ನು ಆಡಳಿತ ಮಂಡಳಿ ಕಲ್ಪಿಸಿಕೊಟ್ಟಿದೆ. ಹೆಚ್ಚಾಗಿ ಭಕ್ತರು ಬಂದಾಗ ಪಂಚೆ, ಲುಂಗಿ, ಪ್ಯಾಂಟ್ ಧರಿಸಿ ಹೋಗುವ ಪುರುಷರಿಗೆ ಹಾಗೂ ಸೀರೆ, ಚೂಡಿದಾರ, ಪ್ಯಾಂಟ್ ಧರಿಸಿದ ಮಹಿಳೆಯರಿಗೂ ಜಾತಿ ಕೇಳದೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿತ್ತು. ಆದರೆ ದೇವಸ್ಥಾನದ ಗರ್ಭಗುಡಿಯೊಳಗೆ ಅರ್ಚಕರಿಗೆ ಹೊರತುಪಡಿಸಿ ಯಾರಿಗೂ ಪ್ರವೇಶ ಇರುವುದಿಲ್ಲ.

    ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಹೇಗಿದೆ?: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ (Temple) ಒಳಗೆ ಪ್ರವೇಶಿಸಲು ಪುರುಷರು ಕಡ್ಡಾಯವಾಗಿ ಪಂಚೆ, ಶಲ್ಯ ಧಾರಣೆ ಮಾಡಿರಬೇಕು. ಮಹಿಳೆಯರು ಸೀರೆವುಟ್ಟಿರಬೇಕು. ಹೀಗಿದ್ದರೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶವನ್ನು ನೀಡಲಾಗುತ್ತದೆ. ಜೊತೆಗೆ ದೇವರ ಆತ್ಮಲಿಂಗ ಸ್ಪರ್ಶಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೆ ಬರ್ಬರ ಕೊಲೆ- ನಾಲ್ವರು ಕುಟುಂಬಸ್ಥರನ್ನು ಕತ್ತು ಸೀಳಿ ಕೊಲೆಗೈದ ಮಾದಕ ವ್ಯಸನಿ

    ಆದರೆ ಈ ಹಿಂದೆ ಕುಮಟಾ ತಾಲೂಕಿನ ಗೋಕರ್ಣ (Gokarna) ಮಹಾಬಲೇಶ್ವರ ದೇವಸ್ಥಾನದ ಒಳಗೆ ಸೀಮಿತವಾಗಿದ್ದ ವಸ್ತ್ರಸಂಹಿತೆ ರಥ ಬೀದಿಗೂ ಸಹ ವಿಸ್ತರಿಸಿತ್ತು. ರಥಬೀದಿಯಲ್ಲಿ ಜನರು ಅರೆಬರೆ ಬಟ್ಟೆ ಹಾಕಿ ಸಂಚರಿಸದಂತೆ ಆಡಳಿತ ಕಮಿಟಿ ನಿಷೇಧ ಹೇರಿತ್ತು. ಈ ಕುರಿತು ಜನರ ವಿರೋಧ ಬೆನ್ನಲ್ಲೇ ಜಿಲ್ಲಾಧಿಕಾರಿ ಸೂಚನೆ ಮೇಲೆ ರಸ್ತೆಗೆ ಹಾಕಿದ್ದ ನಾಮಫಲಕವನ್ನು ತೆಗೆದುಹಾಕಲಾಗಿತ್ತು. ನಂತರ ವಿವಾದ ತಣ್ಣಗಾಗುವ ಹೊತ್ತಲ್ಲೇ ಇದೀಗ ಹಿಂದೂ ಜನಜಾಗೃತಿ ವೇದಿಕೆ ಐತಿಹಾಸಿಕ ಹಿನ್ನೆಲೆ ಇರುವ ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ವಸ್ತ್ರ ಸಂಹಿತೆ ಜಾರಿ ಮಾಡಲು ಮನವಿ ಸಲ್ಲಿಸಿದ್ದು, ಆಡಳಿತ ಮಂಡಳಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: JDS ಅಧಿಕಾರಕ್ಕೆ ಬಂದ್ರೆ 24 ಗಂಟೆಯಲ್ಲಿ ಸಂಪೂರ್ಣ ಸಾಲ ಮನ್ನಾ: HDK

    Live Tv
    [brid partner=56869869 player=32851 video=960834 autoplay=true]

  • ಬಪ್ಪನಾಡು ದೇವಸ್ಥಾನ ಹಾಗೂ ಮಾರಿಕಾಂಬಾ ದೇವಸ್ಥಾನ ಕಟ್ಟಿದವರು ಮುಸ್ಲಿಮರು: ರಿಜ್ವಾನ್

    ಬಪ್ಪನಾಡು ದೇವಸ್ಥಾನ ಹಾಗೂ ಮಾರಿಕಾಂಬಾ ದೇವಸ್ಥಾನ ಕಟ್ಟಿದವರು ಮುಸ್ಲಿಮರು: ರಿಜ್ವಾನ್

    ಬೆಂಗಳೂರು: ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ನಿಷೇಧ ಬ್ಯಾನರ್ ಹಾಕುವ ಮೂಲಕ ಸರ್ಕಾರವೇ ಚುನಾವಣಾ ದೃಷ್ಟಿಯಿಂದ ಸಾಮರಸ್ಯ ಕೆಡಿಸುವ ಕೆಲಸ ಮಾಡುತ್ತಿದೆ ಎಂದು ಶಾಸಕ ರಿಜ್ವಾನ್ ಅರ್ಷದ್ ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಇಲ್ಲಾ ಅನ್ನೋ ಬ್ಯಾನರ್ ಹಾಕಿದ್ದಾರೆ. ಬಜರಂಗದಳದವರು ಎಲ್ಲಾ ಮಳಿಗೆಯನ್ನು ಪಡೆದುಕೊಂಡಿದ್ದಾರೆ. ಇದೆಲ್ಲಾ ರಾಜಕೀಯ ಉದ್ದೇಶಕ್ಕೆ ಆಗುತ್ತಿದೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ನಾಯಕರು ತಮ್ಮ ಸಹ ಸಂಘಟನೆಗಳ ಮೂಲಕ ಇದನ್ನು ಮಾಡಿಸುತ್ತಿದ್ದಾರೆ. ಸಂವಿಧಾನವೇ ನಮಗೆ ಎಲ್ಲಾ ಎಂದು ಅಧಿಕಾರಕ್ಕೆ ಬಂದವರು, ಈಗ ಇದನ್ನೆಲ್ಲಾ ನೋಡಿಕೊಂಡು ಮೌನವಾಗಿರುವುದು ನೋಡಿದರೆ ಎಲ್ಲಾ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಮಾರಿಕಾಂಬಾ ದೇವಸ್ಥಾನ ಕಟ್ಟಿಸಿದವನು ಒಬ್ಬ ಮುಸ್ಲಿಂ ಸೈನಿಕ. 1740ರಲ್ಲಿ ಮುಸ್ಲಿಂ ಸೈನಿಕನ ಕನಸಿನಲ್ಲಿ ಮಾರಿಕಾಂಬೆ ಬಂದು ದೇವಸ್ಥಾನ ಕಟ್ಟಲು ಹೇಳಿದಾಗ ದೇವಸ್ಥಾನ ನಿರ್ಮಾಣ ಆಗಿದ್ದು. ಅದು ನಿಜವಾದ ಸಾಮರಸ್ಯ. ಬಪ್ಪನಾಡು ದೇವಸ್ಥಾನ ಕಟ್ಟಿದ್ದು ಬಪ್ಪ ಬ್ಯಾರಿ ಎಂದರು. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧದ ಬ್ಯಾನರ್ ಹಾಕಿದವರು ಹೇಡಿಗಳು: ಖಾದರ್

    ಇಂದಿಗೂ ಬಪ್ಪ ಬ್ಯಾರಿ ವಂಶಸ್ಥರಿಂದ ಎಣ್ಣೆ ತಂದ ಮೇಲೆ ಪೂಜೆ ಪ್ರಾರಂಭವಾಗುತ್ತದೆ. ಇಂತಹ ಸಾಮರಸ್ಯಕ್ಕೆ ಇವರು ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಸಾಮರಸ್ಯ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಂಗಳೂರು, ಉಡುಪಿ ಬಳಿಕ ಬೆಂಗಳೂರಿಗೂ ವ್ಯಾಪಿಸಿದ ಧರ್ಮ ಸಂಘರ್ಷ

  • ಶಿರಸಿ ಮಾರಿಕಾಂಬಾ ದೇವಿ ಸೇವೆಗೆ ದುಬಾರಿ ಶುಲ್ಕ-ಭಕ್ತರ ಆಕ್ರೋಶ

    ಶಿರಸಿ ಮಾರಿಕಾಂಬಾ ದೇವಿ ಸೇವೆಗೆ ದುಬಾರಿ ಶುಲ್ಕ-ಭಕ್ತರ ಆಕ್ರೋಶ

    ಕಾರವಾರ: ಶಿರಸಿ ಮಾರಿಕಾಂಬಾ ದೇವಿ ಸೇವೆಗೆ ದುಬಾರಿ ಶುಲ್ಕ ವಿಧಿಸಲು ಹೊರಟಿರುವ ಹಿನ್ನಲೆಯಲ್ಲಿ ವ್ಯಾಪಾರ ಕೇಂದ್ರಮಾಡಿದ ಆಡಳಿತ ಮಂಡಳಿ ವಿರುದ್ಧವಾಗಿ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.

    ಲಕ್ಷಾಂತರ ಭಕ್ತರನ್ನು ಸೆಳೆಯುವ ಶಿರಸಿಯ ಮಾರಿಕಾಂಬಾ ದೇವಾಲಯದಲ್ಲಿ ಧಾರ್ಮಿಕ ಸೇವೆಗಳಿಗೆ ಆಡಳಿತ ಮಂಡಳಿ ಇದೀಗ ದುಬಾರಿ ಶುಲ್ಕ ವಿಧಿಸಲು ಹೊರಟಿದೆ. ಈ ಕುರಿತು ಆಡಳಿತ ಮಂಡಳಿ ಸಭೆ ನಡೆಸಿ, ಕರಡು ಪ್ರತಿ ಹೊರಡಿಸಿ ದೇವಸ್ಥಾನದ ಸೂಚನಾ ಫಲಕಕ್ಕೆ ಹಾಕಿದ್ದು ಸೆ.5 ರ ಒಳಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಕೋರಿದೆ. ಇದನ್ನೂ ಓದಿ: ಕೇಳದೇ ಪಾನಿಪುರಿ ತಂದ ಗಂಡ- ಪ್ರಾಣ ಬಿಟ್ಟ ಪತ್ನಿ

    ಕಳೆದ ಹಲವು ವರ್ಷದಿಂದ ಸ್ಥಿರತೆ ಕಂಡುಕೊಂಡಿದ್ದ ಸೇವಾದರವನ್ನು ಪರಿಷ್ಕರಿಸಲು ಹಾಲಿ ಧರ್ಮದರ್ಶಿ ಮಂಡಳಿ ನಿರ್ಧರಿಸಿದೆ. ಬಹುತೇಕ ಎಲ್ಲ ಸೇವೆಗಳ ದರವನ್ನು ಪ್ರಸ್ತುತಕ್ಕಿಂತ ದುಪ್ಪಟ್ಟು ಹೆಚ್ಚಿಸಲಾಗಿದೆ. ದೇವಸ್ಥಾನದಲ್ಲಿ ರುದ್ರಾಭಿಷೇಕ ಸೇವೆಗೆ 10ರ ಬದಲು 100, ಮೃತ್ಯುಂಜಯ ಶಾಂತಿಗೆ 1001 ಬದಲು 3500, ಸತ್ಯನಾರಾಯಣ ಕಥೆಗೆ 325ರ ಬದಲು 1500ಕ್ಕೆ, ನಿರಂತರ ಪಲ್ಲಕ್ಕಿ ಸೇವೆ ದರ 6,001 ರಿಂದ 25,000ಕ್ಕೆ ಏರಿಕೆ ಮಾಡಲಾಗಿದೆ. ಇದನ್ನೂ ಓದಿ: ಬ್ಲೂ ಬಿಕಿನಿಯಲ್ಲಿ ಹಾಟ್ ಫೋಸ್ ಕೊಟ್ಟ ಸನ್ನಿ ಲಿಯೋನ್

    ಕಾರ್ತೀಕ ದೀಪೋತ್ಸವದ ಒಂದು ದಿನದ ಸೇವೆ ಮೊತ್ತವನ್ನು 650 ರಿಂದ 5,000, ಶಾಶ್ವತ ಸೇವೆಗೆ 6001ರ ಬದಲು 10,001, ನಿರಂತರ ಸೇವೆ ಪಾರಾಯಣ 2001ರ ಬದಲಾಗಿ 5,000, ಶಾಶ್ವತ ಸೇವೆಗೆ 6001ರ ಬದಲು 10,000ಕ್ಕೆ ಏರಿಕೆ ಮಾಡಿ ಕರಡು ಪಟ್ಟಿಯಲ್ಲಿ ಪ್ರಕಟಣೆ ಮಾಡಿದೆ. ಇದನ್ನೂ ಓದಿ: ಸೀರೆ ಧರಿಸಿ ಬಂದ ಹಾಟ್ ಗರ್ಲ್ ಮಲ್ಲಿಕಾ ಟ್ರೋಲ್

    ಆದರೇ ಇದೀಗ ಧರ್ಮದರ್ಶಿ ಮಂಡಳಿಯ ಈ ಕ್ರಮ ಇದೀಗ ಭಕ್ತರಲ್ಲಿ ವಿರೋಧಕ್ಕೆ ಕಾರಣವಾಗಿದೆ. ಕೊರೊನಾ ಸಂದರ್ಭದಲ್ಲಿ ಈ ರೀತಿ ಏಕಾಏಕಿ ಏರಿಕೆ ಸರಿಯಲ್ಲ, ದೇವಸ್ಥಾನವು ವ್ಯಾಪಾರ ಕೇಂದ್ರವಲ್ಲಾ, ಶ್ರದ್ದಾ ಕೇಂದ್ರ. ಹೀಗೆ ಭಕ್ತರ ನಂಬಿಕೆ ಮೇಲೆ ಹಣ ಹೊಂದಿಸುವ ಕೆಲಸ ಸರಿಯಲ್ಲ ಎಂಬ ಅಭಿಪ್ರಾಯ ಇದೀಗ ಭಕ್ತ ವಲಯದಲ್ಲಿ ಕೇಳಿಬಂದಿದೆ. ಇದನ್ನೂ ಓದಿ: ಹಿರಿಯರನ್ನು ಕಸದ ಬುಟ್ಟಿಗೆ ಹಾಕುವುದು ಬಿಜೆಪಿ ಸಂಸ್ಕೃತಿ- ಸಲೀಂ ಅಹ್ಮದ್

    ಇನ್ನು ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿರುವ ಮಾರಿಕಾಂಬಾ ದೇವಸ್ಥಾನ ಧರ್ಮದರ್ಶಿ ಮಂಡಳದ ಅಧ್ಯಕ್ಷ ರವೀಂದ್ರ ಜಿ.ನಾಯ್ಕರವರು ಈಗಿನ ಕಾಲಮಾನಕ್ಕೆ ಅನುಗುಣವಾಗಿ ಸೇವಾದರ ಪರಿಷ್ಕರಿಸಲು ನಿಯಮದ ಪ್ರಕಾರ ಮುಂದಾಗಿದ್ದೇವೆ. ಭಕ್ತರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಅವರ ಅಭಿಪ್ರಾಯ ಪಡೆದು ಅಂತಿಮ ನಿರ್ಣಯವಾಗುತ್ತದೆ ಎಂದಿದ್ದಾರೆ.

  • ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ತಲೆ ತಲಾಂತರದಿಂದ ಬಂದ ಸಂಪ್ರದಾಯಕ್ಕೆ ಬ್ರೇಕ್

    ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ತಲೆ ತಲಾಂತರದಿಂದ ಬಂದ ಸಂಪ್ರದಾಯಕ್ಕೆ ಬ್ರೇಕ್

    – ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ

    ಕಾರವಾರ: ಶಿರಸಿ ಎಂದಾಕ್ಷಣ ಮಾರಿಕಾಂಬ ದೇವಸ್ಥಾನವೇ ನೆನಪಿಗೆ ಬರುತ್ತದೆ. ಅದರಲ್ಲೂ ರಾಜ್ಯದಲ್ಲೇ ಅತೀ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಯೂ ಈ ದೇವಿಗೆ ಸಲ್ಲಿಕೆಯಾಗುತ್ತದೆ. ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ರಥ ಕಟ್ಟಲು ಕಾಡಿನ ಮರ ಕಡಿಯುವ ಸಂಪ್ರದಾಯವಿದ್ದು, ಸದ್ಯ ಈ ಪದ್ಧತಿಗೆ ಸರ್ಕಾರ ಅಧಿಕೃತವಾಗಿ ಬ್ರೇಕ್ ಹಾಕಿದೆ.

    ಹೌದು, 2018 ರಲ್ಲಿ ನಡೆದ ಜಾತ್ರೆಯ ಸಂದರ್ಭದಲ್ಲಿ ಶಿರಸಿಯ ಬಿನಕಳ್ಳಿಯ ರಕ್ಷಿತ ಅರಣ್ಯ ಪ್ರದೇಶದಲ್ಲಿ ಅನಧಿಕೃತ ಪ್ರವೇಶ ಮಾಡಿ ತಾರೆ, ನಂದಿ, ಮತ್ತಿ, ಕಿಂದಳ ಮರಗಳನ್ನು ಕಡಿದು ನಾಟ ಹಾಗೂ ಜಲಾವು ಮಾಡಿದ ಸಂಬಂಧ ಶಿರಸಿ ವಲಯ ಅರಣ್ಯಾಧಿಕಾರಿ ದೇವಾಲಯದ ಧರ್ಮದರ್ಶಿ ಮಂಡಳಿ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಆಡಳಿತ ಮಂಡಳಿ ಕೋರ್ಟಿನಲ್ಲಿ 80 ಸಾವಿರ ರೂ.ದಂಡ ಸಹ ತುಂಬಿತ್ತು.

    ಅರಣ್ಯ ಇಲಾಖೆ ನೀಡಿದ ನೋಟಿಸ್ ನಲ್ಲಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮ ಪ್ರವೇಶಿಸಿ ಅಮೂಲ್ಯ ಮರ, ಗಿಡಗಳನ್ನು ನಾಶ ಪಡಿಸಿರುವುದು, ಇವುಗಳನ್ನು ಆಶ್ರಯಿಸಿದ ವನ್ಯಜೀವಿಗಳಿಗೆ ತೊಂದರೆಯಾಗುತ್ತವೆ ಹೀಗಾಗಿ ಗಂಭೀರ ಅಪರಾಧ ಪ್ರಕರಣವಾಗಿದೆ. ಅಲ್ಲದೇ ಜಾಮೀನು ರಹಿತ ಪ್ರಕರಣವೂ ಆಗಿದ್ದು, ಮತ್ತೆ ಇಂತಹ ಪ್ರಕರಣ ನಡೆದಲ್ಲಿ ಕರ್ನಾಟಕ ಅರಣ್ಯ ಕಾಯ್ದೆ 1963 ಕಲಂ24(ಇ), ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಇನ್ನು ಮುಂದೆ ಸಂಪ್ರದಾಯದ ಹೆಸರಿನಲ್ಲಿ ಕಾಯ್ದಿಟ್ಟ ಅರಣ್ಯದಲ್ಲಿ ಅನಧಿಕೃತ ಪ್ರವೇಶ ಮಾಡಬಾರದು ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ.

    ಮುಂಬರುವ ಮಾರ್ಚ್ ನಲ್ಲಿ ಜಾತ್ರೆ ನಡೆಯಲಿದ್ದು, ಹೀಗಾಗಿ ಈ ಕುರಿತು ಕಮಿಟಿಯಲ್ಲಿ ಚರ್ಚೆ ನಡೆದಿದೆ. ಧಾರ್ಮಿಕ ಹಿನ್ನೆಲೆಯಲ್ಲಿ ಆಚರಣೆ ಮಾಡಿದಲ್ಲಿ ಕೋರ್ಟ್ ಕೇಸ್ ಎದುರಿಸಬೇಕೆಂಬ ಭಯದ ಜೊತೆ ಬಂಧನವಾಗುವ ಭೀತಿ ಕೂಡ ಕಮಿಟಿ ಸದಸ್ಯರಲ್ಲಿ ಎದುರಾಗಿದ್ದು, ಧಾರ್ಮಿಕ ಆಚರಣೆಯನ್ನು ಕೈ ಬಿಡುವ ಕುರಿತು ಕಮಿಟಿ ಚರ್ಚೆ ನಡೆಸಿದೆ.

    ಈ ಕುರಿತು ಪಬ್ಲಿಕ್ ಟಿ.ವಿ ಜೊತೆ ಮಾತನಾಡಿದ ಮಾರಿಕಾಂಬ ಕಮಿಟಿ ಅಧ್ಯಕ್ಷ ವೆಂಕಟೇಶ್ ನಾಯ್ಕ, ನಾವು ಈ ಹಿಂದೆ ಮರ ಕಡಿದ ಕುರಿತು ಕೋರ್ಟಿನಲ್ಲಿ ದಂಡ ಕಟ್ಟಿದ್ದೇವೆ. ಧಾರ್ಮಿಕ ಭಾವನೆಗೆ ಧಕ್ಕೆ ಬರದಂತೆ ಹಾಗೂ ಇಂದಿನ ಕಾಲಮಾನಕ್ಕೆ ತಕ್ಕಂತೆ ನಡೆದುಕೊಳ್ಳಬೇಕಿದ್ದು. ಈ ಬಾರಿ ಮರ ಕಡಿಯುವ ಕಾರ್ಯಕ್ರಮವನ್ನು ನಿಲ್ಲಿಸುವ ತೀರ್ಮಾನ ಕೈಗೊಳ್ಳುತಿದ್ದೇವೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ತಲಾ ತಲಾಂತರದಿಂದ ಬಂದ ಸಂಪ್ರಾದಾಯಕ್ಕೆ ಈ ಬಾರಿ ಬ್ರೇಕ್ ಬೀಳಲಿದ್ದು, ಜಾತ್ರೆಯಲ್ಲಿ ಒಂಬತ್ತು ದಿನದ ಸಂಪ್ರದಾಯ ಬದಲಾಗಲಿದೆ.