Tag: ಮಾರಿಗೋಲ್ಡ್

  • ಸಂಗೀತಾ ಬರ್ತ್‌ಡೇಗೆ ವಿಶೇಷ ಉಡುಗೊರೆ ನೀಡಿದ ಡ್ರೋನ್‌ ಪ್ರತಾಪ್

    ಸಂಗೀತಾ ಬರ್ತ್‌ಡೇಗೆ ವಿಶೇಷ ಉಡುಗೊರೆ ನೀಡಿದ ಡ್ರೋನ್‌ ಪ್ರತಾಪ್

    ‘ಬಿಗ್ ಬಾಸ್’ ಖ್ಯಾತಿಯ (Bigg Boss Kannada 10) ಸಂಗೀತಾ ಶೃಂಗೇರಿ (Sangeetha Sringeri) ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.  ಬರ್ತ್‌ಡೇ ಸಂಭ್ರಮದಲ್ಲಿ ಡ್ರೋನ್ ಪ್ರತಾಪ್, ನೀತು ಸೇರಿದಂತೆ ಅನೇಕರು ಭಾಗಿಯಾಗಿ ಸಂಗೀತಾಗೆ ವಿಶ್ ಮಾಡಿದ್ದಾರೆ.‌ ಅಕ್ಕ ಸಂಗೀತಾಗೆ ಪ್ರತಾಪ್‌ ವಿಶೇಷ ಉಡುಗೊರೆ ಕೂಡ ನೀಡಿದ್ದಾರೆ. ಸದ್ಯ ನಟಿಯ ಬರ್ತ್‌ಡೇ ಸೆಲೆಬ್ರೇಶನ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ:ದುನಿಯಾ ಸೂರಿ ನಿರ್ದೇಶನದ ‘ಕಾಗೆ ಬಂಗಾರ’ ಚಿತ್ರಕ್ಕೆ ಮುಹೂರ್ತ ಫಿಕ್ಸ್

    ಇದೀಗ ಡ್ರೋನ್ ಪ್ರತಾಪ್ (Drone Prathap) ಪ್ರೀತಿಯ ಅಕ್ಕ ಸಂಗೀತಾ ಶೃಂಗೇರಿ ಮನೆಗೆ ಭೇಟಿ ಕೊಟ್ಟಿದ್ದಾರೆ. ಇವರ ಜೊತೆಗೆ ನೀತು (Neethu Vanajakshi) ಕೂಡ ಭಾಗಿಯಾಗಿದ್ದರು. ಹುಟ್ಟುಹಬ್ಬದ ನಿಮಿತ್ತ ಪ್ರತಾಪ್ ಮತ್ತು ನೀತು ಅವರು ಕೇಕ್ ತೆಗೆದುಕೊಂಡು ಸಂಗೀತಾ ಶೃಂಗೇರಿ ಅವರ ಮನೆಗೆ ಆಗಮಿಸಿದ್ದಾರೆ.

    ಸಂಗೀತಾ ಮನೆಗೆ ಭೇಟಿ ಕೊಟ್ಟ ವೇಳೆ, ಡ್ರೋನ್ ಪ್ರತಾಪ್ ಅವರಿಗಾಗಿಯೇ ವಿಶೇಷವಾದ ಗಿಫ್ಟ್ ನೀಡಿದ್ದಾರೆ. ಡ್ರೋನ್ ಪ್ರತಾಪ್ ಪ್ರೀತಿಯ ಅಕ್ಕ ಸಂಗೀತಾಗೆ ತಿಳಿ ಹಸಿರು ಬಣ್ಣದ ಚೂಡಿದಾರ್ ಅನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ವೇಳೆ, ಪ್ರತಾಪ್‌ಗೆ ನಟಿ ರಾಕಿ ಕಟ್ಟಿ ಸಂಭ್ರಮಿಸಿದ್ದಾರೆ. ಈ ಸಂದರ್ಭದ ವಿಡಿಯೋ ಶೇರ್‌ ಮಾಡಿ ಪ್ರೀತಿಯ ಅಕ್ಕ ಜೊತೆಗಿರುವೆ ಸದಾ ಅಂತಾ ಪ್ರತಾಪ್ ಬರೆದುಕೊಂಡಿದ್ದಾರೆ. ಅದಷ್ಟೇ ಅಲ್ಲ, ರಕ್ಷಕ್‌ ಕೂಡ ಸಂಗೀತಾರನ್ನು ಭೇಟಿಯಾಗಿದ್ದಾರೆ.  ಇದನ್ನೂ ಓದಿ:‘ಶಿವಶರಣ ಮೋಳಿಗೆ ಮಾರಯ್ಯ’ ಚಿತ್ರಕ್ಕೆ ಚಾಲನೆ ನೀಡಿದ ಗವಿಶ್ರೀ

    ಅಂದಹಾಗೆ, ಸಂಗೀತಾ ದೊಡ್ಮನೆಯಿಂದ ಬಂದ್ಮೇಲೆ ‘ಮಾರಿಗೋಲ್ಡ್’ ಎಂಬ ಸಿನಿಮಾ ರಿಲೀಸ್ ಆಗಿತ್ತು. ಇದೀಗ ಹೊಸ ಬಗೆಯ ಕಥೆಗಳನ್ನು ನಟಿ ಕೇಳ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಲಿದೆ.

  • ‘ಮಾರಿಗೋಲ್ಡ್’ ಹಿಂದೆ ಬಿದ್ದ ಸಂಗೀತಾ ಶೃಂಗೇರಿ: ಮಜವಾಗಿದೆ ಟೀಸರ್

    ‘ಮಾರಿಗೋಲ್ಡ್’ ಹಿಂದೆ ಬಿದ್ದ ಸಂಗೀತಾ ಶೃಂಗೇರಿ: ಮಜವಾಗಿದೆ ಟೀಸರ್

    ಘುವರ್ಧನ್ ನಿರ್ಮಾಣ ಮಾಡಿ  ರಾಘವೇಂದ್ರ ಎಂ. ನಾಯ್ಕ. ಆಕ್ಷನ್ ಕಟ್ ಹೇಳಿರುವ ‘ಮಾರಿ ಗೋಲ್ಡ್‘ (Marigold) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬಳಿಕ ಮಾತಿಗಿಳಿದ ನಿರ್ಮಾಪಕ ರಘುವರ್ಧನ್, ಗುಣವಂತ ಸೇರಿ ಹಲವು ಚಿತ್ರ ನಿರ್ದೇಶನ ಮಾಡಿದ್ದೇನೆ. ರಾಘವೇಂದ್ರ ನಾಯ್ಕ್ ಹೇಳಿದ ಕಥೆ ಇಷ್ಟವಾಯಿತು. ನಾನು ನಿರ್ಮಾಣ ಮಾಡುತ್ತೇನೆ. ನೀವೇ ನಿರ್ದೇಶನ ಮಾಡಿ ಎಂದು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಚಿತ್ರ ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿ ಬಂದಿದೆ. ನಾಯಕ ದಿಗಂತ್ (Diganth), ನಾಯಕಿ ಸಂಗೀತಾ (Sangeetha Sringeri) ಸಹಕಾರ ಅದ್ಬುವಾಗಿತ್ತು. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಎರಡನೇ ಅಥವಾ ಮೂರನೇ ವಾರ ಚಿತ್ರ ತೆರೆಗೆ ತರುವ ಉದ್ದೇಶವಿದೆ ಸಹಕಾರವಿರಲಿ ಎಂದರು.

    ನಿರ್ದೇಶಕ  ರಾಘವೇಂದ್ರ ಎಂ, ನಾಯ್ಕ್  ಮಾತನಾಡಿ,  ಮಾರಿ ಗೋಲ್ಡ್ ಗೋಲ್ಡ್ ಬಿಸ್ಕಟ್ ಮಾರಲು ಹೋದ 4 ಜನ ಹುಡುಗರ ಕಥೆ, ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರ ಕಡೆ ಚಿತ್ರೀಕರಣ ಮಾಡಲಾಗಿದೆ. ಕೋವಿಡ್ ಆದ ಮೇಲೆ ಆ ನಂತರದ ಬೆಳವಣಿಗೆಗಳು ಚಿತ್ರ ವಿಳಂಬಕ್ಕೆ ಕಾರಣವಾಯಿತು. ಈಗ ಬಿಡುಗಡೆಗೆ ಸಜ್ಜಾಗಿದೆ. ಟೀಸರ್ ಮೂಲಕ ಪ್ರಚಾರ ಆರಂಬಿಸಿದ್ದೇವೆ ಎಂದು ಹೇಳಿದರು. ಶುದ್ದ ಮನರಂಜನೆಗೆ ಒತ್ತು ನೀಡಿ ಚಿತ್ರ ಮಾಡಲಾಗಿದೆ. ಚಿತ್ರದ ಮೂಲಕ  ದಿಗಂತ್ ಅವರನ್ನು ಬೇರೆ ರೀತಿ ತೋರಿಸುವ ಪ್ರಯತ್ನ ಮಾಡಲಾಗಿದೆ‌. ಚಿತ್ರೀಕರಣಕ್ಕೂ ಮುನ್ನ ದಿಗಂತ್ ಅವರಿಗೆ ರಿಹಸರ್ಲ್ ಮಾಡಲಾಗಿದೆ. ಮನರಂಜನೆ ಡ್ರಾಮ ಮತ್ತು ಥ್ರಿಲ್ಲರ್ ಕಥೆ ಹೊಂದಿದೆ ಎಂದು ಮಾಹಿತಿ ನೀಡಿದರು.

    ನಟ ದಿಗಂತ್ ಮಾತನಾಡಿ, ಹೆಸರಾಂತ ನಿರ್ಮಾಪಕ ಹಣ ನೀಡಿದ್ದು, ಆದರೆ ಅದು ಅಲ್ಲಿಯೇ ನಿಂತಿದೆ. ಮಾರಿಗೋಲ್ಡ್ ಮೇಲೆ ನಿರ್ದೇಶಕರ ಜೊತೆ ಸಿನಿಮಾ ಮಾಡಬಹುದು. ಕಥೆ ಇಷ್ಡವಾಯಿತು, ಯಶ್ ಶೆಟ್ಟಿ, ಸಂಗೀತ ಶೆಟ್ಟಿ, ಸಂಪತ್, ಕಾಕ್ರೋಚ್ ಸುಧಿ, ಟ್ರೈಲರ್ ಇಷ್ಟವಾದರೆ ಎಲ್ಲರಿಗೂ ಹೇಳಿ, ಸಿನಿಮಾ ಗೆದ್ದರೆ ಮತ್ತಷ್ಟು ಮಾಡೋಣ ಎಂದಿದ್ದಾರೆ. ಚಿತ್ರದಲ್ಲಿ  ಬುದ್ದಿವಂತ ಸ್ಕಾಮರ್ ಪಾತ್ರ ಎಂದಿದ್ದಾರೆ. ನಟಿ ಸಂಗೀತಾ ಶೃಂಗೇರಿ ಮಾತನಾಡಿ, ನಟ ದಿಗಂತ್ ನನ್ನ ‌ ಚೈಲ್ಡ್ ವುಡ್ ಕ್ರಷ್. ಅದನ್ನು ಅವರಿಗೂ ಹೇಳಿದ್ದೇನೆ. ಎಲ್ಲವೂ ಊಹೆ ಮಾಡಿಕೊಂಡು ಸಿನಿಮಾ ಮಾಡಿದ್ದಾರೆ. ಛಾಯಾಗ್ರಾಹಕ ಚಂದ್ರಶೇಖರ್ ಉತ್ತಮವಾಗಿ ತೋರಿಸಿದ್ದಾರೆ‌. ಚಿತ್ರದಿಂದ ಸುಮಾರು‌ ವರ್ಷದ ಕನಸು ನನಸಾಗಿದೆ ಎಂದರು

    ಕಲಾವಿದ ಭಜರಂಗ ಶೆಟ್ಟಿ ಮಾತನಾಡಿ,  ಮಾರಿಗೋಲ್ಡ್‌ನಲ್ಲಿ ನಟಿಸಲು ಗೆಳೆಯ ಯಶ್ ಶೆಟ್ಟಿ ಕಾರಣ ಕೋವಿಡ್ ಸಮಯದಲ್ಲಿ ಊರಲ್ಲಿ‌ ಮೀನು ಹಿಡಿಯುತ್ತಿದ್ದೆ. ಬಳಿಕ ಕಾಕ್ರೋಚ್‌ ಸುಧಿ ಮಾತನಾಡಿದರು. ನಂತರ ನಿರ್ದೇಶಕರು ಮಾತನಾಡಿದ ಮಾಹಿತಿ ಹಂಚಿಕೊಂಡರು. ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ವಿಭಿನ್ನ ಸಂಭಾಷಣೆ ಇದೆ ಎಂದರೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ , ಚಿತ್ರದಲ್ಲಿ ಎರಡೆ ಹಾಡು ಇವೆ. ಇದೊಂದು ಥ್ರಿಲ್ಲರ್ ಸಿನಿಮಾ ಆಕ್ಷನ್ ಸಿನಿಮಾ, ಸಿನಿಮಾ‌ ಹಿಟ್ ಆದರೆ ದಿಗಂತ್ ಆಕ್ಷನ್ ಹೀರೋ ಆಗಲಿದ್ದಾರೆ. ಯೋಗರಾಜ್ ಭಟ್, ವಿಜಯ್ ಭರಮಸಾಗರ, ಕವಿರಾಜ್ ಹಾಡು ಬರೆದಿದ್ದಾರೆ. ಗೆಲವಿನ ಆಶಾಕಿರಣ ಇದೆ ಎಂದರು.

    ಛಾಯಾಗ್ರಾಹಕ ಚಂದ್ರಶೇಖರ್ ಹೊಸ ಜಾನರ್ ಸಿನಿಮಾ, ಥ್ರಿಲ್ಲರ್ ಸಿನಿಮಾ ಮಾಡಿರಲಿಲ್ಲ. ನಿರ್ಮಾಪಕ ರಘುವರ್ಧನ್ ಜೊತೆ ಗುಣವಂತದಲ್ಲಿ ಕೆಲಸ ಮಾಡಿದ್ದೆ. ಈಗ ಅವರ ನಿರ್ಮಾಣದಲ್ಲಿ ಕೆಲಸ ಮಾಡಿದ್ದೇವೆ ಎಂದರು. ಚಿತ್ರದಲ್ಲಿ ದಿಗಂತ್ ಮಂಚಾಲೆ, ಸಂಗೀತ ಶ್ರಂಗೇರಿ, ಸಂಪತ್ ಮೈತ್ರೇಯ, ಯಶ್ ಶೆಟ್ಟಿ, ಕಾಕ್ರೋಚ್ ಸುಧೀ, ವಜ್ರಾಂಗ್ ಶೆಟ್ಟಿ, ಬಾಲಾ ರಾಜವಾಡಿ, ಮಹಂತೇಶ್, ಸಂದೀಪ್ ಮಲಾನಿ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ.

     

    ಚಿತ್ರಕ್ಕೆ  ವೀ‌ರ್ ಸಮರ್ಥ್ ಸಂಗೀತ,  ರಘು ನಿಡುವಳ್ಳಿ  ಸಂಭಾಷಣೆಣ , ಕೆ.ಎಸ್. ಚಂದ್ರಶೇಖರ್  ಛಾಯಾಗ್ರಹಣ, ಕೆ.ಎಂ. ಪ್ರಕಾಶ್  ಸಂಕಲನ, ಪ್ರಶಾಂತ್ ಗೌಡ ಕಲೆ, ನೃತ್ಯ ಕಲೈ, ಸಾಹಸ ಅರ್ಜುನ್ ರಾಜ್ ಹಾಗೂ ನಿರ್ಮಾಣ ನಿರ್ವಹಣೆ: ಜೇವಿಯ‌ರ್ ಫರ್ನಾಂಡಿಸ್‌ ಚಿತ್ರಕ್ಕಿದೆ.

  • ಚಿತ್ರದ ಹಿನ್ನೆಲೆ ಸಂಗೀತ ಕೆಲಸದಲ್ಲಿ ನಿರತವಾದ ‘ಮಾರಿಗೋಲ್ಡ್’ ಚಿತ್ರತಂಡ

    ಚಿತ್ರದ ಹಿನ್ನೆಲೆ ಸಂಗೀತ ಕೆಲಸದಲ್ಲಿ ನಿರತವಾದ ‘ಮಾರಿಗೋಲ್ಡ್’ ಚಿತ್ರತಂಡ

    ಟ ದೂದ್ ಪೇಡಾ ದಿಗಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಮಾರಿಗೋಲ್ಡ್’ ಲಾಕ್‍ಡೌನ್ ನಿಂದ ನಿಂತಿದ್ದ ಚಿತ್ರೀಕರಣ ಅನ್‍ಲಾಕ್ ಬಳಿಕ ಆರಂಭವಾಗಿ ಈಗ ಚಿತ್ರೀಕರಣಕ್ಕೆ ಶುಭಂ ಹೇಳಿದೆ ಚಿತ್ರತಂಡ. ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಸಂಗೀತ ನಿರ್ದೇಶಕ ವೀರ್ ಸಮರ್ಥ್ ನಿರ್ದೇಶನದಲ್ಲಿ ಚಿತ್ರದ ಹಿನ್ನೆಲೆ ಸಂಗೀತದ ಕೆಲಸಗಳು ಭರದಿಂದ ನಡೆಯುತ್ತಿದೆ.


    ಚಿತ್ರೀಕರಣ, ಡಬ್ಬಿಂಗ್ ಕಾರ್ಯವನ್ನು ಮುಗಿಸಿರುವ ಚಿತ್ರತಂಡ ಹಿನ್ನೆಲೆ ಸಂಗೀತದ ಕೊನೆ ಹಂತದ ಕೆಲಸದಲ್ಲಿದೆ.  ಚಿತ್ರದ ಕೆಲಸಗಳು ಸರಾಗವಾಗಿ ನಡೆಯುತ್ತಿದ್ದು ಸದ್ಯದಲ್ಲೇ ಸೆನ್ಸಾರ್ ಅಂಗಳಕ್ಕೂ ಕಾಲಿಡಲಿದೆ. ಟೈಟಲ್ ನಿಂದಲೇ ಕ್ಯೂರಿಯಾಸಿಟಿ ಹುಟ್ಟು ಹಾಕಿರುವ ಚಿತ್ರ ಮಾರಿಗೋಲ್ಡ್ ಫಸ್ಟ್ ಲುಕ್ ಪೋಸ್ಟರ್ ಕೂಡ ಕುತೂಹಲ ಹುಟ್ಟು ಹಾಕುವುದರ ಜೊತೆ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು ಮಾಡಿದೆ.

     

    ಕ್ರೈಂ, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ದಿಗಂತ್ ಹೊಸ ಪಾತ್ರದಲ್ಲಿ ಮಿಂಚಿದ್ದಾರೆ. ದಿಗಂತ್ ಈವರೆಗಿನ ಸಿನಿಮಾಗಳಿಗಿಂತಲೂ ಈ ಚಿತ್ರ ವಿಭಿನ್ನವಾಗಿದ್ದು, ಡಿಫ್ರೆಂಟ್ ಲುಕ್ ಹಾಗೂ ಡಿಫ್ರೆಂಟ್ ಸ್ಟೈಲ್ ನಲ್ಲಿ ದೂದ್ ಪೇಡಾ ಇಲ್ಲಿ ಕಾಣಸಿಗಲಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸಂಗೀತ ಶೃಂಗೇರಿ ದಿಗಂತ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ಎಂ.ನಾಯಕ್ ಕಥೆ, ಚಿತ್ರಕಥೆ ಬರೆದು ಮಾರಿಗೋಲ್ಡ್ ಚಿತ್ರ ನಿರ್ದೇಶನ ಮಾಡಿದ್ದಾರೆ. ಇದು ಇವರ ನಿರ್ದೇಶನದ ಚೊಚ್ಚಲ ಸಿನಿಮಾ ಕೂಡ ಹೌದು. ಆರ್.ವಿ.ಕ್ರಿಯೇಷನ್ಸ್ ಮೂಲಕ ಸಿನಿಮಾ ನಿರ್ಮಾಣವಾಗಿದ್ದು, ತಿಮ್ಮರಾಯ, ಬದ್ರಿ, ಗುಣವಂತ, ಮಿಸ್ಟರ್ ಎಲ್.ಎಲ್.ಬಿ. ಚಿತ್ರಗಳನ್ನು ನಿರ್ದೇಶಿಸಿದ್ದ ರಘುವರ್ಧನ್ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಿದ್ದಾರೆ.

    ಕೆ.ಎಸ್. ಚಂದ್ರಶೇಖರ್ ಕ್ಯಾಮೆರಾ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಯೋಗರಾಜ್ ಭಟ್, ಕವಿರಾಜ್ ಮತ್ತು ವಿಜಯ್ ಭರಮಸಾಗರ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಬೆಂಗಳೂರು, ಸಕಲೇಶಪುರ ಸುತ್ತಮುತ್ತಲಿನ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ತಾರಾಬಳಗದಲ್ಲಿ  ಸಂಪತ್‍ಕುಮಾರ್, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ವಜ್ರಾಂಗ್ ಶೆಟ್ಟಿ, ಬಾಲ ರಾಜ್ವಾಡಿ, ಗಣೇಶ್‍ರಾವ್, ಭಾಸ್ಕರ್ ಪಾಂಡವಪುರ, ಮನಮೋಹನ್ ರೈ, ಮಹಾಂತೇಶ್ ಹೀರೆಮಠ, ಮಿಮಿಕ್ರಿ ಗೋಪಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

  • ದಿಗಂತ್ ಹುಟ್ಟುಹಬ್ಬಕ್ಕೆ ‘ಮಾರಿಗೋಲ್ಡ್’ ಫಸ್ಟ್ ಲುಕ್ ಗಿಫ್ಟ್

    ದಿಗಂತ್ ಹುಟ್ಟುಹಬ್ಬಕ್ಕೆ ‘ಮಾರಿಗೋಲ್ಡ್’ ಫಸ್ಟ್ ಲುಕ್ ಗಿಫ್ಟ್

    ಸ್ಯಾಂಡಲ್‍ವುಡ್ ದೂದ್ ಪೇಡಾ ನಟ ದಿಗಂತ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 36ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ದಿಗಂತ್‍ಗೆ ಚಿತ್ರರಂಗದ ಸ್ನೇಹಿತರು ಅಭಿಮಾನಿಗಳು ಶುಭ ಕೋರಿದ್ದಾರೆ. ದಿಗ್ಗಿ ಹುಟ್ಟು ಹಬ್ಬಕ್ಕೆ ‘ಮಾರಿಗೋಲ್ಡ್’ ಚಿತ್ರತಂಡ ಫಸ್ಟ್ ಲುಕ್ ಗಿಫ್ಟ್ ನೀಡುವ ಮೂಲಕ ಹುಟ್ಟು ಹಬ್ಬದ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ.

    ‘ಮಾರಿಗೋಲ್ಡ್’ ದಿಗಂತ್ ಅಭಿನಯದ ಬಹು ನಿರೀಕ್ಷಿತ ಸಿನಿಮಾವಾಗಿದ್ದು, ಹುಟ್ಟು ಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ಫಸ್ಟ್ ಲುಕ್ ಸಖತ್ ಇಂಟರೆಸ್ಟಿಂಗ್ ಆಗಿದ್ದು, ದಿಗಂತ್ ಲುಕ್ ಗಮನ ಸೆಳೆಯುತ್ತಿದೆ. ‘ಮಾರಿಗೋಲ್ಡ್’ ಚಿತ್ರಕ್ಕೆ ರಾಘವೇಂದ್ರ ಎಂ.ನಾಯಕ್ ಆಕ್ಷನ್ ಕಟ್ ಹೇಳಿದ್ದು, ಕಥೆ, ಚಿತ್ರಕಥೆ ಕೂಡ ಇವರದ್ದೆ. ಇದೊಂದು ಕಾಮಿಡಿ, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರವಾಗಿದ್ದು, ಸಡನ್ನಾಗಿ ಗೋಲ್ಡ್ ಬಿಸ್ಕಟ್ ಸಿಕ್ಕಿದ್ರೆ ಏನಾಗುತ್ತೆ ಎಂಬ ಎಳೆಯ ಸುತ್ತಾ ಸಿನಿಮಾ ಹೆಣೆಯಲಾಗಿದೆ.

    ದೂದ್ ಪೇಡಾಗೆ ಇಲ್ಲಿ ಜೋಡಿಯಾಗಿ ಸಂಗೀತ ಶೃಂಗೇರಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ಆರ್.ವಿ.ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ‘ಮಾರಿಗೋಲ್ಡ್’ ಚಿತ್ರ ನಿರ್ಮಾಣವಾಗಿದ್ದು, ರಘುವರ್ಧನ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿದೆ. ಚಿತ್ರಕ್ಕೆ ಕೆ.ಎಸ್ ಚಂದ್ರಶೇಖರ್ ಕ್ಯಾಮೆರಾ ನಿರ್ದೇಶನ, ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸಂಪತ್ ಕುಮಾರ್, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ ಸೇರಿದಂತೆ ಹಲವು ಕಲಾವಿದರು ಮಾರಿಗೋಲ್ಡ್ ತಾರಾಬಳಗದಲ್ಲಿದ್ದಾರೆ.

     

    View this post on Instagram

     

    A post shared by diganthmanchale (@diganthmanchale)

  • ಮತ್ತೆ ಕರೆದ್ರೆ ವಿಚಾರಣೆಗೆ ಬರ್ತೀನಿ: ದಿಗಂತ್

    ಮತ್ತೆ ಕರೆದ್ರೆ ವಿಚಾರಣೆಗೆ ಬರ್ತೀನಿ: ದಿಗಂತ್

    ಬೆಂಗಳೂರು: ಮೂರು ಗಂಟೆಯ ಸಿಸಿಬಿ ವಿಚಾರಣೆ ಎದುರಿಸಿದ ಬಳಿಕ ನಟ ದಿಗಂತ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ದಿಗಂತ್ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

    ಸಿಸಿಬಿ ಕಚೇರಿಯಿಂದ ಹೊರ ಬಂದ ದಿಗಂತ್, ಪ್ರಕರಣ ತನಿಖಾ ಹಂತದಲ್ಲಿದೆ. ಇಂದು ಕರೆದಿದ್ದಕ್ಕೆ ಬಂದಿದ್ದೇನೆ. ಮತ್ತೆ ಕರೆದ್ರೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದರು. ಇಂದು ಮಾರಿಗೋಲ್ಡ್ ಸಿನಿಮಾ ಚಿತ್ರೀಕರಣದಿಂದ ದಿಗಂತ್ ನೇರವಾಗಿ ಸಿಸಿಬಿ ಕಚೇರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ದಿಗಂತ್ ಅವರಿಗೆ ಸಿಸಿಬಿ ನೋಟಿಸ್ ನೀಡಿತ್ತು.

    ಬೆಂಗಳೂರಿನ ಹೆಚ್‍ಎಂಟಿ ಬಳಿ ಮಾರಿಗೋಲ್ಡ್ ಸಿನಿಮಾದ ಚಿತ್ರೀಕರಣದಲ್ಲಿ ದಿಗಂತ್ ಭಾಗಿಯಾಗಿದ್ದರು. ನೋಟಿಸ್ ಹಿನ್ನೆಲೆ ದಿಗಂತ್ ಚಿತ್ರತಂಡಕ್ಕೆ ಮಾಹಿತಿ ನೀಡಿ ವಿಚಾರಣೆಗೆ ಹಾಜರಾಗಿದ್ದರು. ಮಂಗಳವಾರ ಸಾಹಸ ದೃಶ್ಯ ಚಿತ್ರೀಕರಣ ಮಾಡಲಾಗಿತ್ತು. ಇಂದು ಬೆಳಗ್ಗೆ ಎಮೋಷನಲ್ ದೃಶ್ಯಗಳನ್ನ ಶೂಟ್ ಮಾಡಲಾಗಿತ್ತು ಎಂದು ಚಿತ್ರತಂಡ ಹೇಳಿದೆ.

    ಈ ಹಿಂದೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಇಬ್ಬರನ್ನೂ ಸಿಸಿಬಿ ವಿಚಾರಣೆ ನಡೆಸಿ ಕಳುಹಿಸಿತ್ತು. ಇಬ್ಬರ ಮೊಬೈಲ್ ನ್ನು ಕೂಡ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಸಿಸಿಬಿ, ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗಬೇಕು ಎಂದು ಹೇಳಿತ್ತು. ಅಂತೆಯೇ ದಂಪತಿ ಕೂಡ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಮತ್ತೆ ಸಿಸಿಬಿ ಅಧಿಕಾರಿಗಳು ಕರೆದರೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು.

    ಮೊಬೈಲ್ ಪಾಸ್ ವರ್ಡ್ ಪಡೆದುಕೊಂಡಿದ್ದ ಸಿಸಿಬಿಗೆ ದಿಗಂತ್ ಮೊಬೈಲ್ ನಲ್ಲಿ ಹಲವು ಮಾಹಿತಿಗಳು ಲಭ್ಯವಾಗಿದೆ. ದಿಗಂತ್ ಹೇಳಿಕೆ ಆಧಾರದ ಮೇಲೆ ಕೆಲ ಡ್ರಗ್ಸ್ ಪೆಡ್ಲರ್ಸ್ ಗಳನ್ನು ಸಿಸಿಬಿ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ದಿಗಂತ್ ವಿರುದ್ಧ ಕೆಲ ಮಾಹಿತಿ ಮತ್ತು ಸಾಕ್ಷಿಗಳು ಸಿಕ್ಕ ಮಾಹಿತಿ ಲಭ್ಯವಾಗಿದೆ. ಮೊಬೈಲ್ ನಲ್ಲಿ ನಡೆಸಿದ್ದ ಚಾಟಿಂಗ್ ರಿಟ್ರೀವ್ ಮಾಡಲಾಗಿದೆ. ಈ ಕುರಿತು ವಿಚಾರಣೆಗೆ ಬುಲಾವ್ ನೀಡಿತ್ತು ಎನ್ನಲಾಗಿದೆ.