Tag: ಮಾರ್ಗರೇಟ್ ಆಳ್ವಾ

  • ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾನೆ ದೊಡ್ಡಣ್ಣ – ಮಾರ್ಗರೇಟ್ ಆಳ್ವ ಟ್ಟೀಟ್ ಮಾಡಿ ಆರೋಪ

    ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾನೆ ದೊಡ್ಡಣ್ಣ – ಮಾರ್ಗರೇಟ್ ಆಳ್ವ ಟ್ಟೀಟ್ ಮಾಡಿ ಆರೋಪ

    ಕಾರವಾರ: ಉಪರಾಷ್ಟ್ರಪತಿ ಚುನಾವಣೆಯ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮಾಜಿ ಸಂಸದೆ ಮಾರ್ಗರೇಟ್ ಆಳ್ವ ಅವರು ಕೇಂದ್ರ ಬಿಜೆಪಿ ಸರ್ಕಾರ ತನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ.

    ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಟ್ಟೀಟ್ ಮಾಡಿರುವ ಅವರು, ದೊಡ್ಡಣ್ಣನಿಗೆ ಭಯ ಹಾಗಾಗಿ ರಾಜಕಾರಣಿಗಳ ಫೋನ್ ಟ್ಯಾಪ್ ಮಾಡುತ್ತಿದ್ದಾನೆ. ಆದರೆ ದೊಡ್ಡಣ್ಣನ ಈ ಭಯ ಪ್ರಜಾಪ್ರಭುತ್ವವನ್ನು ಕೊಲ್ಲುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ವಿಭಜನೆ ನೋವಿನಿಂದ ಕೂಡಿದೆ – ಪಾಕ್, ಬಾಂಗ್ಲಾದೇಶ, ಭಾರತ ಒಂದಾಗಬಹುದು: ಮನೋಹರ್ ಲಾಲ್ ಖಟ್ಟರ್ 

    ನಾನು ಬಿಜೆಪಿಯಲ್ಲಿ ಇರುವ ನನ್ನ ಸ್ನೇಹಿತರು, ಆಪ್ತರಲ್ಲಿ ಫೋನ್ ಮೂಲಕ ಮಾತನಾಡಿದೆ. ಅದಾದ ಬಳಿಕ ನನ್ನ ಫೋನ್ ಕರೆಗಳೆಲ್ಲಾ ಡೈವರ್ಟ್‌ ಆಗುತ್ತಿದೆ. ಯಾವುದೇ ಕರೆ ಮಾಡಲು, ಸ್ವೀಕರಿಸಲು ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

    ಇದಲ್ಲದೇ ನನ್ನ ಫೋನ್ ರೀ-ಕನೆಕ್ಟ್ ಮಾಡಿಕೊಡಿ. ಖಂಡಿತವಾಗಿಯೂ ಬಿಜೆಪಿ, ಟಿಎಂಸಿ ಮತ್ತು ಬಿಜೆಡಿಯ ಯಾವುದೇ ಸಂಸದರು, ಶಾಸಕರಿಗೆ ಕರೆ ಮಾಡುವುದಿಲ್ಲ ಎಂದು ಭರವಸೆ ನೀಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಒಂದಲ್ಲ, ಎರಡಲ್ಲ 6 ಮಂದಿಯ ಜೊತೆ ವಿವಾಹ – ಪತ್ನಿಯರಿಗೂ ಬಂದಿಲ್ಲ ಅನುಮಾನ, ಕೊನೆಗೆ ಸಿಕ್ಕಿ ಬಿದ್ದ 

    ತಮ್ಮ ಟ್ಟಿಟ್ಟರ್‌ನಲ್ಲಿ ಬಿ.ಎಸ್.ಎನ್.ಎಲ್. ಹಾಗೂ ಎಮ್.ಟಿ.ಎನ್.ಎಲ್‍ಗಳನ್ನು ಟ್ಯಾಗ್ ಮಾಡಿ ಫೋಸ್ಟ್ ಮಾಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ: ಪ್ರಹ್ಲಾದ್ ಜೋಶಿ ತಿರುಗೇಟು

    ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ: ಪ್ರಹ್ಲಾದ್ ಜೋಶಿ ತಿರುಗೇಟು

    ನವದೆಹಲಿ: ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪವನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಲ್ಲಗೆಳೆದಿದ್ದಾರೆ.

    ಮಾರ್ಗರೇಟ್ ಆಳ್ವಾ ಅವರ ಫೋನ್ ಅನ್ನು ಯಾರು ಏಕೆ ಟ್ಯಾಪ್ ಮಾಡಬೇಕು? ಉಪರಾಷ್ಟ್ರಪತಿ ಚುನಾವಣೆಯಲ್ಲಿ ಫಲಿತಾಂಶ ಏನು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಿರುವಾಗ ಆಳ್ವಾ ಅವರ ಫೋನ್ ಅನ್ನು ಟ್ಯಾಪ್ ಮಾಡುವ ಅಗತ್ಯತೆ ನಮಗಿಲ್ಲ. ಅಂಥಹ ಕೀಳು ಮಟ್ಟದ ರಾಜಕಾರಣವನ್ನು ಬಿಜೆಪಿ ಮಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ತಾಕತ್ತಿದ್ದರೆ ನನ್ನ ವಿಚಾರವನ್ನ ಯಾವುದೇ ನ್ಯಾಯಾಲಯಕ್ಕೆ ಹೋಗಿ ಗೆದ್ದು ತೋರಿಸಲಿ: ಈಶ್ವರಪ್ಪ ಸವಾಲ್

    ಕಾಂಗ್ರೆಸ್‍ನಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಬಳಿಕ ಮಾರ್ಗರೇಟ್ ಆಳ್ವಾ ಅವರು ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿದ್ದಾರೆ. ಇಂದು ನನ್ನ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಆಳ್ವಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಇಂದು ಬಿಜೆಪಿಯ ಕೆಲವು ಸ್ನೇಹಿತರೊಂದಿಗೆ ಮಾತನಾಡಿದೆ. ಆ ನಂತರ ನನ್ನ ಮೊಬೈಲ್‍ಗೆ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗುತ್ತಿದೆ ಎಂದು ಮಾರ್ಗರೇಟ್ ಆಳ್ವಾ ಅವರು ಆರೋಪಿಸಿದ್ದರು. ನನ್ನ ಫೋನ್ ಟ್ಯಾಪ್ ಆಗಿದ್ದು, ನನಗೆ ಕರೆ ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಫೋನ್ ಸರಿಮಾಡಿದರೆ, ಇಂದು ರಾತ್ರಿ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯಿಂದ ಯಾವುದೇ ಸಂಸದರನ್ನು ಕರೆಯುವುದಿಲ್ಲ ಎಂಬ ಭರವಸೆ ನೀಡುತ್ತೇನೆ ಎಂದು ಬಿಜೆಪಿಯನ್ನು ಗುರಿಯಾಗಿಸಿ ಟ್ವೀಟ್ ಮಾಡಿದ್ದರು.

    ಆಳ್ವಾ ಅವರ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಪ್ರಹ್ಲಾದ್ ಜೋಶಿ ಅವರು, ಇದೊಂದು ಬಾಲಿಶ ಹೇಳಿಕೆ ಅಂತಾ ಲೇವಡಿ ಮಾಡಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಅದು ಎಲ್ಲರಿಗೂ ಈಗಾಗಲೇ ಗೊತ್ತಿರುವಂತದ್ದು. ಹೀಗಿರುವಾಗ ಯಾರಾದರೂ ಆಳ್ವಾ ಅವರ ಫೋನ್ ಅನ್ನು ಏಕೆ ಟ್ಯಾಪ್ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

    ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನು ತೋರಿಸುತ್ತವೆ. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ. ಆರೋಪಗಳನ್ನು ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ. ಹುರುಳಿಲ್ಲದ, ಆಧಾರವಿಲ್ಲದ ಆರೋಪಗಳಿಗೆ ಅರ್ಥವಿಲ್ಲ ಎಂದು ಆಳ್ವಾ ಅವರಿಗೆ ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]