– ಕಿಲ್ಲರ್ ಕೆಮ್ಮಿನ ಸಿರಪ್ ಕೇಸ್; ಪ್ರತಿಷ್ಟಿತ ಹೆರಿಗೆ ಆಸ್ಪತ್ರೆ, ಮಕ್ಕಳ ಆಸ್ಪತ್ರೆಗೆ ವಿಶೇಷ ಸೂಚನೆ
ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ (Cough Syrup) ಸೇವಿಸಿ 6 ಮಕ್ಕಳು ಸಾವನ್ನಪ್ಪಿದ ಬಳಿಕ, ಸಿರಪ್ ಬಳಕೆಗೆ ಆರೋಗ್ಯ ಇಲಾಖೆ ಗೈಡ್‌ಲೈನ್ಸ್ ಬಿಡುಗಡೆ ಮಾಡಿತ್ತು. ಈಗ ವೈದ್ಯಕೀಯ ಶಿಕ್ಷಣ ಇಲಾಖೆ (Medical Education Department) ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೆರಿಗೆ ಆಸ್ಪತ್ರೆಗಳಲ್ಲಿ ವೈದ್ಯರು, ಗರ್ಭಿಣಿಯರು ಹಾಗೂ ಬಾಣಂತಿಯರ ಬಗ್ಗೆ ಎಚ್ಚರಿಕೆ ವಹಿಸುತ್ತಾ ಇದ್ದಾರೆ.
ಹೊರ ರಾಜ್ಯಗಳಲ್ಲಿ ಸಿರಪ್‌ನಿಂದ ಮಕ್ಕಳು ಸಾವನ್ನಪ್ಪಿದ ಪ್ರಕರಣದ ಬಳಿಕ ಎಲ್ಲಾ ರಾಜ್ಯಗಳಲ್ಲೂ ಮಾರ್ಗಸೂಚಿ ಬಿಡುಗಡೆ ಆಗಿದೆ. ಕರ್ನಾಟಕದ ಆರೋಗ್ಯ ಇಲಾಖೆಯಿಂದ ಕೂಡ ಮಾರ್ಗಸೂಚಿ ಬಿಡುಗಡೆ ಆಗಿತ್ತು. ಈಗ ವೈದ್ಯಕೀಯ ಶಿಕ್ಷಣ ಇಲಾಖೆಯೂ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳು ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ.
ಅದರಲ್ಲೂ ಹೆರಿಗೆ ಆಸ್ಪತ್ರೆಗಳು ಗರ್ಭಿಣಿಯರ ಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ಸೂಚಿಸಿದ್ದು, ವಾಣಿ ವಿಲಾಸ ಆಸ್ಪತ್ರೆಗೆ ಬರುವ ಬಾಣಂತಿಯರು ಮತ್ತು ಪೋಷಕರಿಗೆ ಸಿರಪ್ ಬಳಕೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುತ್ತಿದ್ದಾರೆ.
ಸಿರಪ್ ಬಳಕೆಗೆ ಮುಂಜಾಗ್ರತಾ ಕ್ರಮವೇನು?
* ಆರು ತಿಂಗಳ ಮಗುವಿಗೆ ಕೆಮ್ಮಿದ್ದರೆ ಎದೆ ಹಾಲುಣಿಸಬೇಕು. ಸಿರಪ್ ನೀಡಬಾರದು.
* ಮಗುವಿಗೆ ನ್ಯುಮೋನಿಯಾದಂತಹ ಲಕ್ಷಣ ಕಂಡುಬಂದಾಗ ಸಿರಪ್ ಬಳಕೆ ಮಾಡಬಾರದು. ವೈದ್ಯರ ಸಲಹೆ ಪಡೆಯಬೇಕು.
* ಮಗು ಅನಾರೋಗ್ಯ ತಪ್ಪಿದಾಗ ವೈದ್ಯರನ್ನ ಭೇಟಿ ಮಾಡಬೇಕು.
* ಮಗುವಿಗೆ ಕೆಮ್ಮು ಜಾಸ್ತಿ ಆದಾಗ ವೈದ್ಯರ ಸಲಹೆ ಮೇರೆಗೆ ಔಷಧಿ ಕೊಡಬೇಕು.
* ಯಾವುದೇ ಸಿರಪನ್ನು ದೀರ್ಘಕಾಲದವರೆಗೂ ಬಳಸಬಾರದು.
ಒಟ್ಟಾರೆ ಸಿರಪ್ ಬಗ್ಗೆ ಎಚ್ಚರಿಕೆಯ ಅಗತ್ಯವಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ವೈದ್ಯರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಿಯಮಗಳನ್ನ ಪಾಲಿಸಬೇಕಾಗಿದೆ.
ಬೆಂಗಳೂರು: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್ (Cough Syrup) ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ಅಲರ್ಟ್ ಆದ ರಾಜ್ಯ ಆರೋಗ್ಯ ಇಲಾಖೆ (Health Department) ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೇ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. ಮಲ್ಟಿಮೆಡಿಸನ್ ಒಳಗೊಂಡ ಸಿರಪ್‌ಗಳನ್ನ ಬಳಸಬಾರದು ಎಂದು ತಿಳಿಸಿದೆ. ಇದನ್ನೂ ಓದಿ: ಹರ್ಷ ಕೊಲೆ ಕೇಸ್‌ನ ಸಾಕ್ಷಿ ಅಮ್ಜದ್ ಹತ್ಯೆ – ಶಿವಮೊಗ್ಗಕ್ಕೆ ಮತ್ತೆ ಎಂಟ್ರಿ ಕೊಟ್ಟ ಎನ್‌ಐಎ
ಇನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್‌ಗಳನ್ನ ಖರೀದಿಸಬಾರದು, ಬಳಸಬಾರದು. ಈ ಹಿಂದೆ ಬಳಸಿದ ಔಷಧಿಗಳನ್ನ ಮರುಬಳಕೆ ಮಾಡಬಾರದು. ಕೆಮ್ಮು ಉಲ್ಬಣಗೊಂಡರೆ ವೈದ್ಯರನ್ನ ಸಂಪರ್ಕಿಸಿ. ಅವಧಿ ಮೀರಿದ ಔಷಧಿಗಳನ್ನ ನೋಡಿ ಬಳಸಬೇಕು. ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ ವಾಂತಿ ಅಥವಾ ಉಸಿರಾಟ ತೊಂದರೆ ಇದ್ದರೆ ಹತ್ತಿರದ ವೈದ್ಯರನ್ನ ಸಂಪರ್ಕಿಸಿ. ಔಷಧ ಅವಧಿ ಮುಗಿಯುವ ದಿನಾಂಕವನ್ನು ಪರಿಶೀಲಿಸಿ ಮತ್ತು ಲೇಬಲ್‌ಗಳನ್ನು ಎಚ್ಚರಿಕೆಯಿಂದ ಓದಿ ಎಂದು ಸೂಚಿಸಲಾಗಿದೆ. ಇದನ್ನೂ ಓದಿ: Bengaluru | ಪತಿಯೊಂದಿಗೆ ಗಲಾಟೆ – ಗೃಹಿಣಿ ನೇಣಿಗೆ ಶರಣು
ಮಕ್ಕಳ ಸಿರಪ್ ಬಳಕೆಗೆ ಏನು ಗೈಡ್‌ಲೈನ್ಸ್?
– ಚಿಕ್ಕಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ.
– 1 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಸಿರಪ್ ನೀಡಬೇಡಿ.
– 2.2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ಸಲಹೆ ಮೇರೆಗೆ ಮಾತ್ರ ಔಷಧಿ ನೀಡಬೇಕು.
ಹಿರಿಯ ಮಕ್ಕಳಿಗೆ ಏನು ಸಲಹೆ?
– ಕೆಮ್ಮಿನ ಸಿರಪ್ ವೈದ್ಯರ ಸಲಹೆ ಮೇರೆಗೆ ಸ್ವೀಕರಿಸಬೇಕು.
– ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕಡಿಮೆ ಡೋಸ್ ಅನ್ನು ಬಳಸಬೇಕು.
– ಬಹುಔಷಧ ಸಂಯೋಜನೆ ಇರುವ ಸಿರಪ್‌ಗಳನ್ನು ಬಳಸಬಾರದು.
ಮನೆ ಮದ್ದುಗಳು:
– ಸಾಕಷ್ಟು ದ್ರವರೂಪದ ಪದಾರ್ಥ ನೀಡುವುದು.
– ಸಾಕಷ್ಟು ವಿಶ್ರಾಂತಿ ಮತ್ತು ನಿದ್ದೆ ಮಾಡಲು ಅವಕಾಶ ನೀಡುವುದು.
– ಪೌಷ್ಠಿಕ ಆಹಾರ ನೀಡುವುದು.
ಈ ರೋಗಲಕ್ಷಣಗಳು ಉಂಟಾದರೆ ವೈದ್ಯರನ್ನು ಸಂಪರ್ಕಿಸಿ:
– ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ
– ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು
– ಅತಿಯಾದ ಜ್ವರ ಮತ್ತು ಆಹಾರ ಸೇವನೆ ಮಾಡದೇ ಇರೋದು
– ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ
ಮಾರ್ಗಸೂಚಿಯಲ್ಲಿ ಏನಿದೆ?
1.ಗಣೇಶ ಹಬ್ಬದ ನಿಮಿತ್ತ ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ಉಪವಿಭಾಗ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾದ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ಕಾರ್ಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
2.ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಲು ಕ್ರಮಕೈಗೊಳ್ಳಬೇಕು.
3.ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಬೇಕು.
4.ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ಬಿಬಿಎಂಪಿಯ ಉಪವಿಭಾಗದ ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ಪರಿಶೀಲಿಸಿ ನೋಟಿಸ್ ನೀಡಬೇಕು.
5.ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಸುತ್ತಿದ್ದಲ್ಲಿ ಹಾಗೂ ಮಾರಾಟ ಮಾಡುತ್ತಿದ್ದಲ್ಲಿ ದಂಡ ವಿಧಿಸಿ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ, ನಿಷೇಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮವಹಿಸಬೇಕು.
6.ವಲಯ ಆಯುಕ್ತರು, ವಲಯ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸಬೇಕು. ವಶಪಡಿಸಿಕೊಳ್ಳಲಾದ ಮೇಲ್ಕಂಡ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮವಹಿಸಬೇಕು.
7.ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುಬೇಕು.
8.ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೇಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸಬೇಕು.
9.ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳಲ್ಲಿ ವಿಸರ್ಜನೆ/ನಿಮಜ್ಜನ ಸ್ಥಳಗಳನ್ನು ಗುರುತಿಸಿ, ಸದರಿ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸಬೇಕು.
10.ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು.
11.ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸಬೇಕು. ಸದರಿ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಬೇಕು. ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ, ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸಬೇಕು. ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸಬೇಕು ಹಾಗೂ ಕಿಯಾಸ್, ಆಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶ್ರೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲಾ ಪಿಹೆಚ್‌ಸಿಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ಧವಿರುವಂತೆ ಕ್ರಮವಹಿಸಬೇಕು. ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ಹಾಜರಿರುವಂತೆ ಕ್ರಮವಹಿಸಬೇಕು.
12.ಪರಿಸರ ಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮವಹಿಸಬೇಕು.
13.ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲ್ಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳಬೇಕು.
ಆರೋಗ್ಯ ಇಲಾಖೆ (Health Deaprtment) ಡೆಂಗ್ಯೂ ಕಾಯಿಲೆಯನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಮಾರ್ಗಸೂಚಿ (Guidelines)ಉಲ್ಲಂಘಿಸಿದವರ ಮೇಲೆ ದಂಡ ಪ್ರಯೋಗ ನಡೆಸಲಾಗುವುದು ಸರ್ಕಾರ ತಿಳಿಸಿದೆ. ಜೊತೆಗೆ ದಂಡದ ಮೊತ್ತವನ್ನು ನಿಗದಿ ಮಾಡಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಒಮ್ಮೆ ದಂಡ ಹಾಕಿ ಮತ್ತೆ ನಿಯಮ ಉಲ್ಲಂಘನೆ ಮಾಡಿದರೆ, ಪ್ರತಿ ವಾರ ದಂಡದ 50% ರಷ್ಟನ್ನು ದಂಡ ಹಾಕುವುದಾಗಿ ಆದೇಶ ಹೊರಡಿಸಿದೆ.
ಮಾರ್ಗಸೂಚಿ:
1. ಮನೆ ಮಾಲೀಕರು ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರನ್ನು ಶೇಖರಿಸಿ ಇಡುವ ಸೊಂಪು ಮತ್ತು ಟ್ಯಾಂಕ್‌ಗಳನ್ನು ಸ್ವಚ್ಛವಾಗಿ ಇಡಬೇಕು ಮತ್ತು ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
2. ಮನೆ ಮಾಲೀಕರು, ಸಾರ್ವಜನಿಕರು ಮನೆಯ ಸುತ್ತಮುತ್ತ ಮಳೆ ನೀರು ನಿಲ್ಲದಂತೆ, ಟೈರ್‌ಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು.
3. ಶಿಕ್ಷಣ ಸಂಸ್ಥೆಗಳು, ಶಾಲಾ ಕಾಲೇಜುಗಳು, ಕಟ್ಟಡ ಮಾಲೀಕರು ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿಯಂತ್ರಿಸಬೇಕು.ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – 9 ನಕ್ಸಲರನ್ನು ಬೇಟೆಯಾಡಿದ ಭದ್ರತಾ ಪಡೆ
ಯಾರ್ಯಾರಿಗೆ ಎಷ್ಟೆಷ್ಟು ದಂಡ? 1. ಮನೆ ಮಾಲೀಕರಿಗೆ
ನಗರ ಪ್ರದೇಶದಲ್ಲಿ 400 ರೂ.
ಗ್ರಾಮಾಂತರ ಪ್ರದೇಶಗಳಲ್ಲಿ – 200 ರೂ.
2.ವಾಣಿಜ್ಯ ಮಳಿಗೆಗಳು, ಸ್ಕೂಲ್, ಕಾಲೇಜು, ರೆಸ್ಟೊರೆಂಟ್, ಹೋಟೆಲ್, ಮಾಲ್, ಸೂಪರ್ ಮಾರ್ಕೆಟ್, ಹೋಂ ಸ್ಟೇ
ನಗರದ ಪ್ರದೇಶದಲ್ಲಿ – 1000 ರೂ.
ಗ್ರಾಮಾಂತರ ಪ್ರದೇಶದಲ್ಲಿ – 500 ರೂ.
3.ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ
ನಗರ ಪ್ರದೇಶದಲ್ಲಿ – 2000 ರೂ.
ಗ್ರಾಮಾಂತರ ಪ್ರದೇಶಗಳಲ್ಲಿ – 1000 ರೂ.
ಜೈಪುರ: ಉದಯ್‌ಪುರದ (Udaipur) ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಸಹಪಾಠಿಗೆ ಚಾಕು ಇರಿದ ಘಟನೆಯ ಬಳಿಕ ರಾಜಸ್ಥಾನ (Rajsthan) ಶಿಕ್ಷಣ ಇಲಾಖೆ ಫುಲ್ ಅಲರ್ಟ್ ಆಗಿದೆ. ಇದೀಗ ಶಾಲೆಗಳಿಗೆ ಚಾಕು ಅಥವಾ ಕತ್ತರಿಗಳಂತಹ ಹರಿತವಾದ ಉಪಕರಣಗಳನ್ನು (Sharp Edged Weapons) ಒಯ್ಯುವುದನ್ನು ನಿಷೇಧಿಸಿ ರಾಜಸ್ಥಾನ ಶಿಕ್ಷಣ ಇಲಾಖೆ ಶನಿವಾರ ಮಾರ್ಗಸೂಚಿಯನ್ನು (Guidelines) ಹೊರಡಿಸಿದೆ.
ಇದರ ಪ್ರಕಾರ, ಚಾಕು, ಕತ್ತರಿಗಳಂತಹ ಯಾವುದೇ ಹರಿತವಾದ ಉಪಕರಣಗಳನ್ನು ವಿದ್ಯಾರ್ಥಿಗಳು ಶಾಲೆಗೆ ಒಯ್ಯುವಂತಿಲ್ಲ. ವಿದ್ಯಾರ್ಥಿಗಳು ತರಗತಿಗೆ ತೆರಳುವ ವೇಳೆ ಶಿಕ್ಷಕರು ಅವರ ಬ್ಯಾಗ್ ಪರಿಶೀಲಿಸಿ ಹರಿತವಾದ ಉಪಕರಣಗಳು ಇದೆಯಾ ಎಂದು ಖಚಿತಪಡಿಸಿಕೊಂಡು ಬಳಿಕ ತರಗತಿ ಒಳಗೆ ಬಿಡಬೇಕು. ಈ ಮಾರ್ಗಸೂಚಿಯನ್ನು ಉಲ್ಲಂಘಿಸುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಉದಯ್‌ಪುರದಲ್ಲಿ ಸಹಪಾಠಿಗೆ ಚಾಕು ಇರಿತ – ಅಕ್ರಮವಾಗಿ ನಿರ್ಮಿಸಿದ್ದ ಆರೋಪಿ ಮನೆ ಧ್ವಂಸ
ಈ ಬಗ್ಗೆ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕ ಆಶಿಶ್ ಮೋದಿ ಮಾತನಾಡಿ, ಪೋಷಕರು ಮಕ್ಕಳನ್ನು ಓದಲೆಂದು ಶಾಲೆಗೆ ಕಳುಹಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಶಾಲಾ ಆವರಣಗಳು ವಿದ್ಯಾರ್ಥಿಗಳಿಗೆ ಸುರಕ್ಷಿತ ಸ್ಥಳವಾಗಬೇಕು. ಯಾವುದೇ ರೀತಿಯ ಹಿಂಸಾಚಾರ ಇಲ್ಲಿ ನಡೆಯಬಾರದು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆ ಈ ಮಾರ್ಗಸೂಚಿಯನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿಯನ್ನು ಶಾಲಾ ಸೂಚನಾ ಫಲಕಗಳಲ್ಲಿ ಅಂಟಿಸಲಾಗುತ್ತದೆ ಮತ್ತು ಪ್ರಾರ್ಥನಾ ಸಭೆಗಳಲ್ಲಿ ವಿದ್ಯಾರ್ಥಿಗಳಿಗೆ ಅದರ ಬಗ್ಗೆ ತಿಳಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ನಾನು ಶುದ್ಧಹಸ್ತ ಎಂದು ಪದೇಪದೆ ಹೇಳುವ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ನಿಖಿಲ್ ಆಗ್ರಹ
ಪ್ರಕರಣ ಏನು?
ಸರ್ಕಾರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಶುಕ್ರವಾರ ಕ್ಷುಲ್ಲಕ ಕಾರಣಕ್ಕೆ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿದ್ದು, ಮಧುಬನ್ ಪ್ರದೇಶದಲ್ಲಿ ಕೋಮುಗಲಭೆ ಸೃಷ್ಠಿಸಿದೆ. ಘಟನೆಯ ಬಳಿಕ ಹಲವಾರು ಹಿಂದೂ ಸಂಘಟನೆಯ ಸದಸ್ಯರು ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಕನಿಷ್ಟ ಮೂರು ಕಾರುಗಳಿಗೆ ಬೆಂಕಿ ಹಚ್ಚಿದ್ದಲ್ಲದೇ ಕಲ್ಲು ತೂರಾಟ ನಡೆಸಿ ಕೋಮುಗಲಭೆ ಸೃಷ್ಠಿಸಿದ್ದರು. ಇದನ್ನೂ ಓದಿ: TB Dam | ಮೂರನೇ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ – ಎಲ್ಲಾ ಗೇಟ್ ಬಂದ್
ಪ್ರಕರಣದಲ್ಲಿ ವಿದ್ಯಾರ್ಥಿಗಳು ವಿವಿಧ ಸಮುದಾಯದವರಾಗಿದ್ದರಿಂದ ನಗರದಲ್ಲಿ ಉದ್ವಿಗ್ನತೆ ಹೆಚ್ಚಾಯಿತು. ಕಾರುಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟದ ಬಳಿಕ ಗುಂಪನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಇನ್ನು ಮಧುಬನ್ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNSS) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಹೇರಲಾಗಿದೆ. ಇದನ್ನೂ ಓದಿ: ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ
ನವದೆಹಲಿ: ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು, ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಜಾಹೀರಾತು (Advertising) ನೀಡುವುದು ಸಾಮಾನ್ಯ. ಆದರೆ ಇನ್ನು ಮುಂದೆ ಯಾವುದೇ ವಸ್ತು ಅಥವಾ ಸೇವೆಗಳನ್ನು ಪ್ರಚಾರ ಮಾಡುವಾಗ ಸೆಲೆಬ್ರಿಟಿ (Celebrity) ಅಥವಾ ಪ್ರಭಾವಿ ವ್ಯಕ್ತಿಗಳು (Influencers) ಕೆಲ ಗೈಡ್‌ಲೈನ್ಸ್ ಅನ್ನು ಪಾಲಿಸಬೇಕೆಂದು ಕೇಂದ್ರ ತಿಳಿಸಿದೆ.
ಸೆಲೆಬ್ರಿಟಿಗಳು ಹಾಗೂ ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಉತ್ಪನ್ನ ಹಾಗೂ ಸೇವೆಗಳನ್ನು ಅನುಮೋದಿಸುವಾಗ ಕಡ್ಡಾಯವಾಗಿ ಎಂಡೋರ್ಸ್ಮೆಂಟ್ಸ್ ನೋ-ಹೌ (Endorsements Know-How) ಎಂಬ ಹೊಸ ಮಾರ್ಗಸೂಚಿಯನ್ನು (Guideline) ಅನುಸರಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದರ ಪ್ರಕಾರ ಉತ್ಪನ್ನಗಳನ್ನು ಪ್ರಚಾರ ಮಾಡುವಾಗ ಜಾಹೀರಾತು (Advertisement), ಪ್ರಾಯೋಜಿತ (Sponsored), ಸಹಯೋಗ (Collaboration) ಅಥವಾ ಪಾವತಿಸಿದ ಪ್ರಚಾರದಂತಹ (Paid Promotion) ಪದಗಳನ್ನು ಬಳಸಬೇಕು ಎಂದು ಹೇಳಿದೆ.
ಗ್ರಾಹಕ ವ್ಯವಹಾರಗಳ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಅತಿ ಹೆಚ್ಚು ಫಾಲೋರ್ಸ್‌ಗಳನ್ನು ಹೊಂದಿರುವ ವ್ಯಕ್ತಿಗಳು ಯಾವುದೇ ವಸ್ತು ಅಥವಾ ಸೇವೆಗಳನ್ನು ಪ್ರಚಾರ ಮಾಡುವಾಗ ತಾವು ಯಾವ ಉದ್ದೇಶಕ್ಕಾಗಿ ನಿರ್ದಿಷ್ಟ ಉತ್ಪನ್ನವನ್ನು ಪ್ರಚಾರ ಮಾಡುತ್ತಿರುವುದು ಎಂಬುದನ್ನು ಕಡ್ಡಾಯವಾಗಿ ತಿಳಿಸಬೇಕಿದೆ. ಹಣದ ಲಾಭಕ್ಕೋ, ಕೊಡುಗೆಯೋ ಎಂಬುದನ್ನು ಉಲ್ಲೇಖಿಸಬೇಕು ಎಂದಿದೆ. ಇದನ್ನೂ ಓದಿ: ಮತ್ತೆ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ
ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಉತ್ಪನ್ನದ ಪ್ರಚಾರದ ಸಂದರ್ಭ ಅದರಲ್ಲಿ ಜಾಹೀರಾತು, ಪ್ರಾಯೋಜಿತ, ಸಹಯೋಗ ಅಥವಾ ಪಾಲುದಾರಿಕೆ ಎಂದು ತಿಳಿಸಬೇಕು. ಅಥವಾ ಆ ಪದಗಳನ್ನು ಹ್ಯಾಶ್‌ಟ್ಯಾಗ್ ಅಥವಾ ಶೀರ್ಷಿಕೆಗಳಲ್ಲಿ ಪಠ್ಯವಾಗಿ ಸೂಚಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಮಾತ್ರವಲ್ಲದೇ ಪ್ರಚಾರ ಮಾಡುತ್ತಿರುವ ವ್ಯಕ್ತಿಗಳು ಯಾವುದೇ ಉತ್ಪನ್ನಗಳನ್ನು ತಾವು ಬಳಸದೇ ಇದ್ದಲ್ಲಿ ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ಮಾಡುವಂತಿಲ್ಲ. ಸರಳ ಸ್ಪಷ್ಟ ಭಾಷೆಯಲ್ಲಿ ಅನುಮೋದನೆಗಳನ್ನು ಮಾಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದೆ. ಇದನ್ನೂ ಓದಿ: ಫಾಸ್ಟ್ ಟ್ಯಾಗ್‌ನಲ್ಲಿ ಹಣವಿಲ್ಲದೇ ಟೋಲ್ ಬಳಿಯೇ ನಿಂತ ಇವಿ ಬಸ್‌ಗಳು
ತಿರುವನಂತಪುರಂ: ಕೇರಳ (Kerala) ಸರ್ಕಾರವು ತನ್ನ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ (Mask) ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ (Covid-19) ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಸರ್ಕಾರ ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ. ಕೋವಿಡ್ ಹೆಚ್ಚಳದ ಆತಂಕದ ನಡುವೆ ಹೊರಡಿಸಲಾದ ಈ ಆದೇಶ ಮುಂದಿನ 30 ದಿನಗಳವರೆಗೆ ಕೇರಳ ರಾಜ್ಯದ ಎಲ್ಲಾ ಭಾಗಗಳಲ್ಲೂ ಜಾರಿಯಲ್ಲಿರಲಿದೆ. ಇದನ್ನೂ ಓದಿ: ವೋಲ್ವೋ ಬಸ್‌ಗಳನ್ನು ಅಂತರ್ ಜಿಲ್ಲೆ ವಿಸ್ತರಣೆಗೆ ಬಿಎಂಟಿಸಿ ಮೆಗಾ ಪ್ಲಾನ್
ನೆರೆಯ ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿದ್ದು, ಇದರ ಅಪಾಯ ಭಾರತಕ್ಕೂ ಇರುವುದರಿಂದ ಕೇರಳ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಚೀನಾದಲ್ಲಿ (China) ಏಕಾಏಕಿ ಹೆಚ್ಚುತ್ತಿರುವ ಕೋವಿಡ್ (Covid) ಪ್ರಕರಣಗಳಿಂದಾಗಿ ಭಾರತ (India) ಅಲರ್ಟ್ ಆಗಿದೆ. ಈ ನಡುವೆ ಕಾಂಗ್ರೆಸ್ (Congress) ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಕೋವಿಡ್ ಮಾರ್ಗಸೂಚಿಗಳನ್ನು (Covid-19 guidelines) ಕಟ್ಟುನಿಟ್ಟಿನಿಂದ ಪಾಲಿಸಲು ಕೇಂದ್ರ ಕೇಳಿಕೊಂಡಿದೆ. ಇಲ್ಲವೆಂದರೆ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲು ತಿಳಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹಾಗೂ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್‌ಗೆ (Ashok Gehlot) ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya), ಕೋವಿಡ್-19 ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯನ್ನು ಗಮನಿಸಿ ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದಿದ್ದಾರೆ.
Union Health Minister Mansukh Mandaviya y’day wrote to Congress MP Rahul Gandhi & Rajasthan CM Ashok Gehlot.
Letter reads that COVID guidelines be strictly followed during Bharat Jodo Yatra & use of masks-sanitiser be implemented; mentions that only vaccinated people participate pic.twitter.com/cRIyZz0DLY
ಸಚಿವರು ಬರೆದಿರುವ ಪತ್ರದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳ ಬಳಕೆ ಮಾಡಲು ಕರೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಲಸಿಕೆ ಹಾಕಿದವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕು ಎಂದು ಮಾಂಡವಿಯಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಡಿ ವಿವಾದ- ಅಮಿತ್ ಶಾ ಸೂಚನೆಗೂ ಕ್ಯಾರೇ ಎನ್ನದ ಮಹಾರಾಷ್ಟ್ರದ NCP ಶಾಸಕರು
ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಸಾಧ್ಯವಾಗದೇ ಹೋದರೆ ಜೋಡೋ ಯಾತ್ರೆಯನ್ನು ಮುಂದೂಡಲು ಮಾಂಡವಿಯಾ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.
ಈ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸಂಸದ ಅಧೀರ್ ರಂಜನ್ ಚೌಧರಿ, ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದ್ದಾರಾ ಎಂದು ನಾನು ಬಿಜೆಪಿಯನ್ನು ಕೇಳಲು ಬಯಸುತ್ತೇನೆ. ಮನ್ಸುಖ್ ಮಾಂಡವಿಯಾ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಇಷ್ಟಪಡುತ್ತಿಲ್ಲ ಎಂದು ನಾನು ಭಾವಿಸುತ್ತೇನೆ. ಜನರು ಈ ಯಾತ್ರೆಯನ್ನು ಇಷ್ಟಪಡುತ್ತಿದ್ದು, ಇದಕ್ಕಾಗಿಯೇ ಯಾತ್ರೆಯಲ್ಲಿ ಸೇರುತ್ತಿದ್ದಾರೆ. ಇದೀಗ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಂಡವಿಯಾ ಈ ಯೋಜನೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗೆಲ್ಲೋದು 50-70 ಸೀಟ್ ಅಷ್ಟೇ – ಜೆಡಿಎಸ್ ಸರ್ಕಾರ ರಚಿಸುತ್ತೆ ಬರೆದಿಟ್ಟುಕೊಳ್ಳಿ: HDK
ಮಂಗಳವಾರ ಭಾರತ್ ಜೋಡೋ ಯಾತ್ರೆ ರಾಜಸ್ಥಾನದಲ್ಲಿ ಕೊನೆಯ ದಿನ ಸಾಗಿ, ಇಂದು ಹರಿಯಾಣವನ್ನು ಪ್ರವೇಶಿಸಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕಾಗಿ ವಿವಿಧ ಇಲಾಖೆಯ ಮಧ್ಯೆ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಉತ್ಸವಕ್ಕೆ ಮುಂಚಿತವಾಗಿಯೇ ಕೋಮು ಸೌಹಾರ್ದ ಸಭೆ ನಡೆಸುವಂತೆ ತಿಳಿಸಿದೆ.
ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ಸೇರಿದಂತೆ ಸುತ್ತೋಲೆ ಬಿಡುಗಡೆ ಮಾಡಿದೆ. ಉತ್ಸವಕ್ಕೂ ಮುಂಚೆ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಸಭೆ ನಡೆಸಲು ಸೂಚನೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್
ಆಗಸ್ಟ್ 30ರಿಂದ ಗೌರಿ ಗಣೇಶ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಪ್ರಕ್ರಿಯ ಸಾಮಾನ್ಯವಾಗಿದ್ದು, ಈ ಸಂದರ್ಭದಲ್ಲಿ ಉತ್ಸವವನ್ನು ಆಯೋಜಿಸುವ ಆಯೋಜಕರಿಗೆ ಪರವಾನಗಿ ನೀಡುವುದು ವಿವಿಧ ಇಲಾಖೆಗಳ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಬೇಕು ಎಂದು ಹೇಳಿದೆ. ಇದನ್ನೂ ಓದಿ: ಎಲ್ಲರೂ ನೂಪುರ್‌ಗೆ ಕ್ಷಮೆ ಕೇಳುವಂತೆ ಹೇಳಿದರು, ಆದರೆ ನಾನು ಮಾತ್ರ ಬೆಂಬಲ ನೀಡಿದ್ದೇನೆ: ರಾಜ್ ಠಾಕ್ರೆ
ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?
ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕ, ಪರವಾನಗಿಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ ಅಗ್ನಿಶಾಮಕ, ಪೋಲಿಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಪರವಾನಗಿ ನೀಡಲು ಸೂಕ್ತ ಕ್ರಮ ವಹಿಸುವುದು.
ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚಾರ ಮಾಡುವುದು.
ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ 3 ದಿನಗಳ ಒಳಗೆ ಪರವಾನಗಿ ನೀಡಲು ಕ್ರಮ ವಹಿಸುವುದು.
ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆ ಪಡೆಯುವುದು
ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮ ವಹಿಸುವಂತೆ ಆಯೋಜಕರಿಗೆ ಸೂಚಿಸುವುದು.
ವಿಶೇಷವಾಗಿ ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ಕೊಡುವಂತಿಲ್ಲ.
ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸುವುದು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೇರಳದಲ್ಲಿ ಮಂಕಿಪಾಕ್ಸ್ ಸೋಂಕಿನ 2 ಪ್ರಕರಣ ಪತ್ತೆಯಾಗಿದ್ದು, ದೇಶದ ಜನತೆಯಲ್ಲಿ ಭೀತಿ ಹುಟ್ಟಿಸಿದೆ. ನೆರೆ ರಾಜ್ಯದಲ್ಲಿ ಈ ಸೋಂಕು ಪತ್ತೆಯಾಗಿರುವುದು ಕರ್ನಾಟಕದಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿ, ಮಾರ್ಗಸೂಚಿ ಹೊರಡಿಸಿದೆ.
ಮಂಕಿಪಾಕ್ಸ್ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಈ ಕುರಿತು ಜನತೆಯಲ್ಲಿ ಅರಿವು ಮೂಡಿಸಬೇಕು. ವಿಮಾನ ನಿಲ್ದಾಣ, ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕ್ರಮವಹಿಸಬೇಕು. ರೋಗ ಲಕ್ಷಣ ಇರುವವರ ಚಿಕಿತ್ಸೆ ಕುರಿತು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ರೋಗ ಲಕ್ಷಣಗಳೇನು?
ಜ್ವರ, ಚಳಿ, ಬೆವರುವಿಕೆ, ಹಾಲ್ರಸ ಗ್ರಂಥಗಳ ಊತ, ತಲೆ ನೋವು, ಮಾಂಸಖಂಡಗಳ ನೋವು ಮತ್ತು ಊತ, ಗಂಟಲ ಉರಿ ಹಾಗೂ ಕೆಮ್ಮು, ಚರ್ಮದ ಮೇಲಿನ ದದ್ದುಗಳು.
ಮಂಕಿಪಾಕ್ಸ್ ವಿರುದ್ಧ ಆರೋಗ್ಯ ಇಲಾಖೆ ಹೊರಡಿಸಿರೋ ಮುನ್ನೆಚ್ಚರಿಕಾ ಕ್ರಮಗಳೇನು?
ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ವಿದೇಶದಿಂದ ಬರುವ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಕಡ್ಡಾಯ, ಸೋಂಕಿತ ಪ್ರದೇಶಗಳಿಂದ ಬಂದ ಜನರಿಗೆ ರೋಗ ಲಕ್ಷಣ ಇದೆಯಾ ಅಂತಾ ಪತ್ತೆ ಹಚ್ಚುವುದು, ರೋಗ ಲಕ್ಷಣರಹಿತ ವ್ಯಕ್ತಿಗಳ ವಿವರ ಕಡ್ಡಾಯವಾಗಿ ದಾಖಲಿಸಬೇಕು. ಏನಾದ್ರು ಸೋಂಕಿನ ಲಕ್ಷಣ ಕಾಣಿಸಿಕೊಳ್ಳುತ್ತಾ ಅಂತಾ 21 ದಿನಗಳ ಕಾಲ ನಿಗಾ ವಹಿಸಬೇಕು. ಇದನ್ನೂ ಓದಿ: ಇಡಿ ವಿರುದ್ಧ ಆಕ್ರೋಶ – ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು
ಮಂಕಿಪಾಕ್ಸ್ ಸೋಂಕಿನ ಶಂಕಿತರನ್ನು ಬೆಂಗಳೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿ ನಿಗಾ ವಹಿಸಬೇಕು. ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು 21 ದಿನಗಳ ಕಾಲ ಐಸೊಲೇಟ್ ಮಾಡಿ ನಿಗಾವಹಿಸಬೇಕು. ಸೋಂಕು ಕಂಡು ಬಂದರೆ ಪ್ರತ್ಯೇಕವಾಗಿ ಐಸೂಲೇಟ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
Live Tv
[brid partner=56869869 player=32851 video=960834 autoplay=true]