Tag: ಮಾಲೆ

  • ಸೇನಾ ಪೈಲಟ್‌ಗಳಿಗೆ ಭಾರತ ಕೊಟ್ಟ ವಿಮಾನಗಳನ್ನು ಹಾರಿಸಲು ಬರಲ್ಲ: ಮಾಲ್ಡೀವ್ಸ್ ರಕ್ಷಣಾ ಸಚಿವ

    ಸೇನಾ ಪೈಲಟ್‌ಗಳಿಗೆ ಭಾರತ ಕೊಟ್ಟ ವಿಮಾನಗಳನ್ನು ಹಾರಿಸಲು ಬರಲ್ಲ: ಮಾಲ್ಡೀವ್ಸ್ ರಕ್ಷಣಾ ಸಚಿವ

    ಮಾಲೆ: ಅಧ್ಯಕ್ಷ ಮೊಹಮ್ಮದ್ ಮುಯಿಝು ( Mohamed Muizzu) ಅವರ ಒತ್ತಾಯದ ಮೇರೆಗೆ 76 ಭಾರತೀಯ ರಕ್ಷಣಾ ಸಿಬ್ಬಂದಿ ಮಾಲ್ಡೀವ್ಸ್ ತೊರೆದ ಕೆಲವೇ ದಿನಗಳಲ್ಲಿಯೇ ಭಾರತ ಕೊಡುಗೆಯಾಗಿ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ದೇಶದ ಮಿಲಿಟರಿಯಲ್ಲಿ ಇನ್ನೂ ಇಲ್ಲ ಎಂದು ಮಾಲ್ಡೀವ್ಸ್ ರಕ್ಷಣಾ ಸಚಿವ ಘಾಸನ್ ಮೌಮೂನ್ (Ghassan Maumoon) ಟೀಕಿಸಿದ್ದಾರೆ.

    ಭಾನುವಾರ ಮಾಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದಿನ ಆಡಳಿತದಲ್ಲಿ ವಿಮಾನವನ್ನು ಹಾರಿಸಲು ತರಬೇತಿಯನ್ನು ಪ್ರಾರಂಭಿಸಿದ ಮಾಲ್ಡೀವಿಯನ್ ಸೈನಿಕರು ಕಾರಣಾಂತರಗಳಿಂದ ಅದನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಎರಡು ಹೆಲಿಕಾಪ್ಟರ್‌ಗಳು ಮತ್ತು ಡೋರ್ನಿಯರ್ ಅನ್ನು ಹಾರಿಸಲು ಪರವಾನಗಿ ಪಡೆದ ಅಥವಾ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ಪೈಲಟ್‌ ನಮ್ಮ ಪಡೆಯಲ್ಲಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ನಿಜ್ಜರ್ ಹತ್ಯೆ ಕೇಸ್‌ – ಕೆನಡಾದಲ್ಲಿ 4ನೇ ಭಾರತೀಯ ಪ್ರಜೆ ಬಂಧನ

    ಚೀನಾ ಪರ ಧೋರಣೆಯುಳ್ಳ ನಾಯಕರಾಗಿ ಗುರುತಿಸಿಕೊಂಡಿರುವ ಮುಯಿಝು, ಮೇ 10ರ ಒಳಗೆ ಭಾರತವು ತನ್ನ ಸಂಪೂರ್ಣ ಮಿಲಿಟರಿ ಸಿಬ್ಬಂದಿಯನ್ನು ಹಿಂದಕ್ಕೆ ಕರೆದುಕೊಳ್ಳಬೇಕು ಎಂದು ಗಡುವು ನೀಡಿದ್ದರು. ಫೆಬ್ರವರಿಯಲ್ಲಿ ನವದೆಹಲಿಯಲ್ಲಿ ಉಭಯ ದೇಶಗಳ ನಡುವಿನ ಒಪ್ಪಂದದ ನಂತರ ಮೇ 10 ರ ಗಡುವಿನ ಪ್ರಕಾರ, ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್ ವಿಮಾನಗಳಿಗಾಗಿ ಎರಡು ಪ್ಲಾಟ್‌ಫಾರ್ಮ್‌ಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿದ್ದ ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲೆ ತೊರೆದು ಶುಕ್ರವಾರ ಭಾರತಕ್ಕೆ ಮರಳಿದ್ದರು.

    ಭಾರತ ಸರ್ಕಾರ ಈ ಹಿಂದೆ ಉಡುಗೊರೆಯಾಗಿ ನೀಡಿದ್ದ 2 ಹೆಲಿಕಾಪ್ಟರ್‌ಗಳ ಮತ್ತು ಡಾರ್ನಿಯರ್‌ ಯುದ್ಧ ವಿಮಾನಗಳ ನಿರ್ವಹಣೆ ಸಲುವಾಗಿ ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ ನಲ್ಲಿ ಉಳಿದುಕೊಂಡಿದ್ದರು.

  • ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಮಾಲೆ: ಭಾರತ ವಿರೋಧಿ ನಿಲುವು ತೆಳೆದು, ಚೀನಾ ಪರ ವಾಲಿರುವ ಮಾಲ್ಡೀವ್ಸ್ (Maldives) ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu) ಅವರ ಪಕ್ಷಕ್ಕೆ ಮೇಯರ್‌ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದ್ದು, ಭಾರತದ ಪರ ನಿಲುವು ಹೊಂದಿರುವ ಪಕ್ಷ ಜಯಗಳಿಸಿದೆ.

    ಮಾಲೆಯ ಮೇಯರ್‌ ಚುನಾವಣೆಯಲ್ಲಿ ಸದ್ಯ ವಿರೋಧ ಪಕ್ಷವಾಗಿರುವ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಭರ್ಜರಿ ಜಯ ಸಾಧಿಸಿದೆ.

    https://twitter.com/MayorAdamAzim/status/1746609631437500766

     

    ಈ ಮೊದಲು ಮೊಹಮ್ಮದ್ ಮುಯಿಝು ಅವರು ಮೇಯರ್‌ ಆಗಿ ಆಯ್ಕೆಯಾಗಿದ್ದರು. ಅಧ್ಯಕ್ಷರಾಗಿ ನೇಮಕವಾದ ಬಳಿಕ ಮೇಯರ್‌ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಉಪ ಚುನಾವಣೆ ನಡೆದಿತ್ತು.

    ಎಂಡಿಪಿ ಅಭ್ಯರ್ಥಿ ಅಜೀಂ 5,303 ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ಮುಯಿಝು ಅವರ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (PNP) ಪಕ್ಷದ ಐಶಾತ್ ಅಜಿಮಾ ಶಕೂರ್ ಅವರು 3,301 ಮತಗಳನ್ನು ಪಡೆದಿದ್ದಾರೆ. ಭಾರತದ ವಿರೋಧಿ ನಿಲುವು ತಳೆದಿದ್ದಕ್ಕೆ ಪಿಎನ್‌ಪಿ ಅಭ್ಯರ್ಥಿಗೆ ಸೋಲಾಗಿದೆ ಎಂದೇ ವಿಶ್ಲೇಷಿಸಲಾಗುತ್ತದೆ.  ಇದನ್ನೂ ಓದಿ: #BoycottMaldives ಯಶಸ್ವಿ – EaseMyTripನಿಂದ ಮಾಲ್ಡೀವ್ಸ್‌ ಫ್ಲೈಟ್‌ ಬುಕ್ಕಿಂಗ್‌ ರದ್ದು

    ಚೀನಾ ಪ್ರವಾಸ ಮುಗಿಸಿ ಬಂದಿರುವ ಮೊಹಮ್ಮದ್ ಮುಯಿಝು ಅವರು ಮಾಲ್ಡೀವ್ಸ್‌ನಿಂದ ಭಾರತೀಯ ಸೈನಿಕರನ್ನು (Indian Army) ವಾಪಸ್‌ ಕರೆಸಿಕೊಳ್ಳಬೇಕು ಎಂದು ಭಾರತ ಸರ್ಕಾರ ಸರ್ಕಾರಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: ಲಕ್ಷದ್ವೀಪಕ್ಕೆ ಮೋದಿ ಭೇಟಿ: ಮಾಲ್ಡೀವ್ಸ್‌ಗೆ ಬಿಗ್‌ ಶಾಕ್‌

    ಮಾರ್ಚ್‌ 15 ರ ಮುಂಚೆಗೆ ಭಾರತೀಯ ಸೇನೆಯನ್ನು ದ್ವೀಪ ರಾಷ್ಟ್ರದಿಂದ (ಮಾಲ್ಡೀವ್ಸ್‌) ಹಿಂತೆಗೆದುಕೊಳ್ಳಬೇಕು ಎಂದು ಮಾಲ್ಡೀವ್ಸ್‌ ಅಧ್ಯಕ್ಷರು ಹೇಳಿದ್ದಾರೆ. ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿಗಳು ಮತ್ತು ಮಾಲೆಯಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ನಡುವಿನ ಸಭೆಯ ನಂತರ ಈ ಹೇಳಿಕೆ ಬಂದಿದೆ.

     

  • ಪುನೀತ್ ಹೆಸರಲ್ಲಿ ‘ಮಾಲೆ’ ಧರಿಸಿದ ಹೊಸಪೇಟೆ ಅಭಿಮಾನಿಗಳು

    ಪುನೀತ್ ಹೆಸರಲ್ಲಿ ‘ಮಾಲೆ’ ಧರಿಸಿದ ಹೊಸಪೇಟೆ ಅಭಿಮಾನಿಗಳು

    ವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಅಭಿಮಾನಿಗಳು ಶಬರಿ ಮಲೈ ಮಾಲಾಧಾರಿಗಳಂತೆ ಅಪ್ಪು (Appu) ಮಾಲೆ (Maale) ಧರಿಸಿದ್ದಾರೆ. ಹೊಸಪೇಟೆಯ (Hospet) ಸಾಕಷ್ಟು ಅಭಿಮಾನಿಗಳು ಮಾಲೆ ಧರಿಸಿದ್ದು, 18 ದಿನಗಳ ವ್ರತವನ್ನು ಮುಗಿಸಿಕೊಂಡು ಇಂದು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿ ವ್ರತ ಮುಗಿಸಲಿದ್ದಾರೆ.

    ಹೊಸಪೇಟೆ ಅಪ್ಪು ಅಭಿಮಾನಿಗಳು ಕಳೆದ 18 ದಿನಗಳಿಂದ ಮಾಲೆಹಾಕಿಕೊಂಡು ವ್ರತ ಮಾಡುತ್ತಿದ್ದರು. ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದವರೆಗೂ ಈ ವ್ರತವನ್ನು ಆಚರಿಸುತ್ತಿದ್ದರು. ನಿನ್ನೆಯಷ್ಟೇ ವ್ರತ ಮುಗಿದಿದ್ದು ಇಂದು ಬೆಳಗ್ಗೆ 6 ಗಂಟೆಗೆ ಹೊಸಪೇಟೆಯಿಂದ ಮಾಲಾಧಾರೆಗಳು ಬೆಂಗಳೂರಿಗೆ ಬರುತ್ತಿದ್ದಾರೆ. ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ವಿಶೇಷ ಪೂಜೆಯನ್ನು ಮಾಡಲಿದ್ದಾರೆ. ಇದನ್ನೂ ಓದಿ: ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯ ವೀಕ್ಷಿಸಿದ ರಜನಿಕಾಂತ್‌

    ಬೆಂಗಳೂರಿನತ್ತ ಬರುತ್ತಿರುವ ಮಾಲೆಧಾರಿ ಅಭಿಮಾನಿಗಳನ್ನು ರಾಘವೇಂದ್ರ ರಾಜ್ ಕುಮಾರ್ ಬರಮಾಡಿಕೊಳ್ಳಲಿದ್ದು, ಅವರಿಗಾಗಿ ವಿಶೇಷ ಪೂಜೆಯ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ. ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸುವ ಮೂಲಕ ಇಂದು ವ್ರತವನ್ನು ಕೈ ಬಿಡಲಿದ್ದಾರೆ ಅಭಿಮಾನಿಗಳು.

  • ಮಾಲ್ಡೀವ್ಸ್‌ನಲ್ಲಿ ಭೀಕರ ಅಗ್ನಿ ದುರಂತ – 9 ಮಂದಿ ಭಾರತೀಯರು ಸಾವು

    ಮಾಲ್ಡೀವ್ಸ್‌ನಲ್ಲಿ ಭೀಕರ ಅಗ್ನಿ ದುರಂತ – 9 ಮಂದಿ ಭಾರತೀಯರು ಸಾವು

    ಮಾಲೆ: ಬೇರೆ ಬೇರೆ ದೇಶಗಳಿಂದ ಕೆಲಸಕ್ಕಾಗಿ ಬಂದು ಮಾಲ್ಡೀವ್ಸ್ (Maldives) ರಾಜಧಾನಿ ಮಾಲೆಯಲ್ಲಿ (Male) ವಾಸವಾಗಿದ್ದವರ ಇಕ್ಕಟ್ಟಾದ ವಸತಿಗೃಹಗಳಲ್ಲಿ ಅಗ್ನಿ ಅವಘಡ ಕಾಣಿಸಿಕೊಂಡಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ನೆಲ ಮಹಡಿಯಲ್ಲಿ ವಾಹನಗಳನ್ನು ರಿಪೇರಿ ಮಾಡುವ ಗ್ಯಾರೇಜ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯನ್ನು ನಂದಿಸಲು ಸುಮಾರು ನಾಲ್ಕು ಗಂಟೆಗಳ ಕಾಲ ಬೇಕಾಯಿತು. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇದೀಗ ಕಟ್ಟಡದ ಮೇಲಿನ ಮಹಡಿಯಿಂದ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತರಲ್ಲಿ ಒಂಬತ್ತು ಮಂದಿ ಭಾರತ ಮೂಲದವಾರಗಿದ್ದು, ಓರ್ವ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- ವಿವಾದಿತ ವಸ್ತುವಿನ ರಕ್ಷಣೆ ವಿಸ್ತರಣೆಗೆ ಮನವಿ

    ಘಟನೆ ಕುರಿತಂತೆ ಮಾಲ್ಡೀವ್ಸ್‍ನಲ್ಲಿರುವ ಭಾರತದ ಹೈಕಮಿಷನ್ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದೆ. ಮಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಮ್ಮ ಭಾರತೀಯ ಮೂಲದ ಪ್ರಜೆಗಳು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ. ನಾವು ಮಾಲ್ಡೀವ್ಸ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಹೈಕಮಿಷನ್ ಟ್ವೀಟ್ ಮಾಡಿದೆ. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ – 14 ಮಂದಿ ಮಹಿಳೆಯರು ಸೇರಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

    ಬೇರೆ ಬೇರೆ ದೇಶದಿಂದ ಇಲ್ಲಿಗೆ ಬಂದಿದ್ದ ಮತ್ತು ಮಾಲ್ಡೀವ್ಸ್‍ನಲ್ಲಿ ವಾಸವಾಗಿದ್ದ ಉದ್ಯೋಗಿಗಳು ಈ ಕಟ್ಟದಲ್ಲಿ ಅರ್ಧದಷ್ಟು ಜನ ಇದ್ದರು ಮತ್ತು ಹೆಚ್ಚಾಗಿ ಬಾಂಗ್ಲಾದೇಶ, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾದಿಂದ ಬಂದವರು ಎಂದು ಹೇಳಲಾಗುತ್ತದೆ. ಯಾವುದೇ ಸಹಾಯಕ್ಕಾಗಿ, HCI ಅನ್ನು ಈ ಸಂಖ್ಯೆಗಳಲ್ಲಿ ಸಂಪರ್ಕಿಸಿ ಎಂದು +9607361452 ; +9607790701 ಮಾಲ್ಡೀವ್ಸ್ ಟ್ವೀಟ್ ಮಾಡಿದೆ.

    ದ್ವೀಪಗಳ ರಾಜಧಾನಿ, ರಜೆಯನ್ನು ಕಳೆಯಲು ಮತ್ತು ಉನ್ನತ ಮಾರುಕಟ್ಟೆಯನ್ನು ಹೊಂದಿರುವ ಮಾಲ್ಡೀವ್ಸ್ ಪ್ರಸಿದ್ಧ ತಾಣವಾಗಿದ್ದು, ಇದು ವಿಶ್ವದ ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾಗಿದೆ.

    Live Tv
    [brid partner=56869869 player=32851 video=960834 autoplay=true]