ನವದೆಹಲಿ: ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ದ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾಬ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದಾರೆ.
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿನ್ನಡೆಯನ್ನು ಅನುಭವಿಸುತ್ತಿದೆ. ಮಾಳವಿಕಾ ಸೂದ್ ತಮ್ಮ ಹುಟ್ಟೂರಾದ ಪಂಜಾಬ್‍ನ ಮೊಗಾದಲ್ಲಿ ಮೊಗಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಮಾಳವಿಕಾ ಸೂದ್, ಎಎಪಿಯ ಅಮನ್‍ದೀಪ್ ಕೌರ್ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಸೂದ್ ಚಾರಿಟಿ ಫೌಂಡೇಶನ್‍ನೊಂದಿಗೆ ಮಾಳವಿಕಾ ಸೂದ್ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ, ಆದರೆ ಮತದಾರ ಇವರ ಕೈ ಹಿಡಿದಿಲ್ಲ. ಇದನ್ನೂ ಓದಿ:ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ
ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಬಡಜನರಿಗೆ ಸೋನು ಸೂದ್ ಅವರು ಅಪಾರ ನೆರವು ಒದಗಿಸುವ ಮೂಲಕ ನಿಜಜೀವನದಲ್ಲೂ ಹೀರೋ ಎನಿಸಿಕೊಂಡಿದ್ದರು. ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಸಹೋದರಿ ಪರವಾಗಿ ಅಬ್ಬರದ ಪ್ರಚಾರವನ್ನು ಮಾಡಿದ್ದರು. ಆದರೆ ಇದು ಯಾವುದು ಸೋನು ಅವರ ಸಹೋದರಿಗೆ ಫಲಸಿಕ್ಕಿಲ್ಲ. ಇದನ್ನೂ ಓದಿ:ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್‌ಗೆ ಸೋಲು
ಚಂಡೀಗಢ: ಮತಗಟ್ಟೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಬಾಲಿವುಡ್ ನಟ ಸೋನು ಸೂದ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಪಂಜಾಬ್‍ನ ಮೋಗಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಹೋಗಲು ಬಂದಿದ್ದರು. ಈ ವೇಳೆ ಅವರು ಮತಗಟ್ಟೆಗೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಅವರ ಕಾರನ್ನು ಜಪ್ತಿ ಮಾಡಲಾಗಿದೆ. ಚುನಾವಣಾ ವೀಕ್ಷಕರ ನಿರ್ದೇಶನದ ಮೇರೆಗೆ ಅವರ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ
Sonu Sood was trying to enter a polling booth. During this, his car was confiscated and he was sent home. Action will be taken against him if he steps out of his house: Moga District PRO Pradbhdeep Singh
ಮೊಗಾ ಜಿಲ್ಲೆಯ ಪಿಆರ್‍ಒ ಪ್ರದ್ಭದೀಪ್ ಸಿಂಗ್ ಪ್ರಕಾರ, ಸೋನು ಸೂದ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅವರ ಕಾರನ್ನು ಜಪ್ತಿ ಮಾಡಿ ಅವರನ್ನು ಮನೆಗೆ ವಾಪಸ್ ಕಳುಹಿಸಲಾಗಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು, ವಿಶೇಷವಾಗಿ ಅಕಾಲಿದಳದ ಜನರು ವಿವಿಧ ಬೂತ್‍ಗಳಲ್ಲಿ ಬೆದರಿಕೆ ಕರೆಗಳ ಬಗ್ಗೆ ನನಗೆ ತಿಳಿದಿತ್ತು. ಕೆಲವು ಬೂತ್‍ಗಳಲ್ಲಿ ಹಣ ಹಂಚಲಾಗುತ್ತಿದೆ. ಆದ್ದರಿಂದ ಪರಿಶೀಲಿಸಿ ನ್ಯಾಯಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಅದಕ್ಕಾಗಿಯೇ ನಾವು ಹೊರಗೆ ಹೋಗಿದ್ದೆವು. ಈಗ ನಾನು ಮನೆಯಲ್ಲಿದ್ದೇನೆ. ನ್ಯಾಯಯುತ ಚುನಾವಣೆ ನಡೆಯಬೇಕು ಎಂದರು.
We got to know of threat calls at various booths by opposition, especially the people of Akali Dal. Money being distributed at some booths. So it’s our duty to go check & ensure fair elections. That’s why we had gone out. Now, we’re at home. There should be fair polls: Sonu Sood pic.twitter.com/Va93f3V7zH
ಚುನಾವಣೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಳವಿಕಾ ಸೂದ್, ಈ ಹಿಂದೆ ಪಂಜಾಬ್‍ನ ಮೋಗಾ ಕ್ಷೇತ್ರದಿಂದ ಕಾಂಗ್ರೆಸ್ ವತಿಯಿಂದ ಸ್ಪರ್ಧಿಸುತ್ತಿರುವುದಾಗಿ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಹೊಂದಿದ್ದೇನೆ ಅಂತ ಹೇಳಿದ್ದರು. ನಾನು ಇಂದು ಸಕಾರಾತ್ಮಕ ಭಾವನೆ ಹೊಂದಿದ್ದೇನೆ. ವಿದೇಶದಿಂದ ಬಂದವರು ಸೇರಿದಂತೆ ಬಹಳಷ್ಟು ಜನರು ಕರೆ ಮಾಡುತ್ತಿದ್ದಾರೆ. ನನ್ನ ಬೆಂಬಲಕ್ಕಾಗಿ ಹುರಿದುಂಬಿಸುತ್ತಿದ್ದಾರೆ. ಅವರಲ್ಲಿ ಹಲವರು ಇಂದು ನನಗೆ ಮತ ಹಾಕುವಂತೆ ಭರವಸೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್
ನಾನು ಜನರ ಕಲ್ಯಾಣಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ನಾವು ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇವೆ. ಬೇರೆ ಯಾವುದೇ ಅಭ್ಯರ್ಥಿಗಳು ಇಷ್ಟು ಸಾಮಾಜಿಕ ಕೆಲಸ ಮಾಡಿದ್ದಾರೆ ಅಂತ ನಾನು ಭಾವಿಸುವುದಿಲ್ಲ ಎಂದರು.
ಈ ವರ್ಷದ ಜನವರಿ 10 ರಂದು ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಪಂಜಾಬ್‍ನ ಮೊಗಾದಲ್ಲಿ ಕಾಂಗ್ರೆಸ್‍ಗೆ ಸೇರಿದರು. ರಾಜ್ಯದ 2.14 ಕೋಟಿ ಮತದಾರರು ಭಾನುವಾರ 117 ಕ್ಷೇತ್ರಗಳಿಂದ ಕಣದಲ್ಲಿರುವ 1304 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ.
ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ. ಪಂಜಾಬ್ ಈ ಬಾರಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಶಿರೋಮಣಿ ಅಕಾಲಿದಳ-ಬಹುಜನ ಸಮಾಜ ಪಕ್ಷದ ಮೈತ್ರಿ, ಮತ್ತು ಭಾರತೀಯ ಜನತಾ ಪಾರ್ಟಿ-ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಒಕ್ಕೂಟದೊಂದಿಗೆ ಸ್ಪರ್ಧೆಗೆ ಸಾಕ್ಷಿಯಾಗಿದೆ.
ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚೆನ್ನಿ ಮತ್ತು ನವಜೋತ್ ಸಿಧು ಅವರ ಸಮ್ಮುಖದಲ್ಲಿ ಮಾಳವಿಕಾ ಸೂದ್ ಅವರು ಕಾಂಗ್ರೆಸ್ ಸೇರಿದ್ದಾರೆ. ಜನರ ಸೇವೆ ಮಾಡಲು ನಾನು ರಾಜಕೀಯ ಪ್ರದೇಶಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಮಾಳವಿಕಾ ಅವರು ಯುವ ಹಾಗೂ ಶಿಕ್ಷಿತ ಮಹಿಳೆ. ಯುವ ಮಹಿಳೆಯೊಬ್ಬರು ನಮ್ಮ ಪಕ್ಷಕ್ಕೆ ಸೇರಿರುವುದು ಸಂತಸ ತಂದಿದೆ. ಜನರ ಸೇವೆ ಮಾಡಲು ಅವರು ನಮ್ಮ ಪಕ್ಷಕ್ಕೆ ಸೇರಿರುವುದು ಖುಷಿ ತಂದಿದೆ ಎಂದು ನವಜೋತ್ ಸಿಧು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ʻಸ್ಟೇಟ್ ಐಕಾನ್ʼ ಸ್ಥಾನದಿಂದ ಹೊರಗುಳಿದ ನಟ ಸೋನು ಸೂದ್
ಕಳೆದ ವರ್ಷ ನವೆಂಬರ್‌ನಲ್ಲಿ ತನ್ನ ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ನಟ ಸೋನು ಸೂದ್ ಘೋಷಿಸಿದ್ದರು. ಆದರೆ ಯಾವ ಪಕ್ಷ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ.
ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಬಡಜನರಿಗೆ ಸೋನು ಸೂದ್ ಅವರು ಅಪಾರ ನೆರವು ಒದಗಿಸುವ ಮೂಲಕ ನಿಜಜೀವನದಲ್ಲೂ ಹೀರೋ ಎನಿಸಿಕೊಂಡಿದ್ದಾರೆ. ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಸೋನು ಸೂದ್, ಈಚೆಗಷ್ಟೇ ಪಂಜಾಬ್ ಸ್ಟೇಟ್ ಐಕಾನ್ ಸ್ಥಾನದಿಂದ ಹೊರಬಂದರು. ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಪ್ರವಾಹಪೀಡಿತ ಜನರ ನೆರವಿಗೆ ನಿಂತ ಸೋನು ಸೂದ್
ಪಂಚ ರಾಜ್ಯಗಳಿಗೆ ಫೆ.10ರಿಂದ ಚುನಾವಣೆ ನಡೆಯಲಿದೆ. ಫೆ.14ರಂದು ಪಂಜಾಬ್ ರಾಜ್ಯಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಾಳವಿಕಾ ಸೂದ್ ಕಾಂಗ್ರೆಸ್ ಸೇರಿದ್ದಾರೆ.
2017ರಲ್ಲಿ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಿತ್ತು. 10 ವರ್ಷಗಳ ಬಳಿಕ ಎಸ್‌ಎಡಿ-ಬಿಜೆಪಿ ಸರ್ಕಾರ ಹೊರದೂಡಲ್ಪಟ್ಟಿತು. 117 ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಪಂಜಾಬ್‌ನಲ್ಲಿ ನೆಲೆಯೂರಿದೆ. ಆಗ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) 15 ಸ್ಥಾನಗಳನ್ನೂ, ಬಿಜೆಪಿ ಕೇವಲ 3 ಸ್ಥಾನಗಳಿಗೆ ತೃಪ್ತಿಪಟ್ಟಿದ್ದವು.
ಚಂಡೀಗಢ: ಸಹೋದರಿ ಮಾಳವಿಕಾ ಸೂದ್ ಪಂಜಾಬ್ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಾಲಿವುಡ್ ನಟ ಸೋನು ಸೂದ್ ತಿಳಿಸಿದ್ದಾರೆ.
ಚಂಡೀಗಢದಿಂದ ಸುಮಾರು 170 ಕಿಮೀ ದೂರದಲ್ಲಿರುವ ಮೊಗಾ ಎಂಬಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್ ಚುನಾವಣೆಯಲ್ಲಿ ಸಹೋದರಿ ಮಾಳವಿಕಾ ಸೂದ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಯಾವ ಪಕ್ಷದಿಂದ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನುವುದು ಮಾತ್ರ ಇನ್ನೂ ಗೌಪ್ಯವಾಗಿದೆ. ಇದನ್ನೂ ಓದಿ:ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್
ಸೂದ್ ಇತ್ತೀಚೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‍ಜೀತ್ ಸಿಂಗ್ ಚನ್ನಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು. ಕೇಜ್ರಿವಾಲ್ ಅವರೊಂದಿಗಿನ ಭೇಟಿ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿ ರಾಜಕೀಯ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ವದಂತಿಗಳನ್ನು ಹುಟ್ಟುಹಾಕಿತು. ಆದರೆ ಈ ವೇಳೆ ಸೂನು ಸೂದ್ ಅವರು ನಾವು ಸದ್ಯಕ್ಕೆ ನಾವು ಯಾವುದೇ ರಾಜಕೀಯವನ್ನು ಚರ್ಚಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದರು. ಆದರೆ ಇದೀಗ ಅವರ ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ ಆಗಿದೆ. ಯಾವ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ:ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ
ಸೋನು ಸೂದ್ ಅವರು ಕೊರೊನಾ ಲಾಕ್‍ಡೌನ್‍ನಲ್ಲಿ ಸಿಲುಕಿ ಅಸಹಾಯಕರಾಗಿರುವ ನೂರಾರು ವಲಸಿಗರನ್ನು ಅವರ ಸ್ವಂತ ರಾಜ್ಯಕ್ಕೆ ಕರೆದೊಯ್ಯಲು ಬಸ್‍ಗಳು, ರೈಲು ಮತ್ತು ವಿಮಾನಗಳನ್ನು ಸಹ ವ್ಯವಸ್ಥೆ ಮಾಡಿದರು. ಈ ವರ್ಷದ ಆರಂಭದಲ್ಲಿ ಎರಡನೇ ಅಲೆ ವೇಳೆ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಸಿಲಿಂಡರ್ ಮತ್ತು ಕೊರೊನಾ ಲಸಿಕೆಯನ್ನು ನೀಡುವಲ್ಲಿ ಸಹಾಯ ಮಾಡಿದ್ದರು.