Tag: ಮಾವೋವಾದಿ

  • Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

    Chhattisgarh| ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ- 12 ಮಾವೋವಾದಿಗಳು ಬಲಿ

    ರಾಯ್ಪುರ: ಭದ್ರತಾ ಪಡೆಗಳು (Security Force) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ (Chhattisgarh) ಬಿಜಾಪುರ (Bijapur) ಜಿಲ್ಲೆಯಲ್ಲಿ ನಡೆದಿದೆ.

    ದಕ್ಷಿಣ ಬಿಜಾಪುರದ ಕಾಡಿನಲ್ಲಿ ಬೆಳಗ್ಗೆ 9 ಗಂಟೆಯ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಮೂರು ಜಿಲ್ಲೆಗಳಿಂದ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್‌ಗೆ (ಡಿಆರ್‌ಜಿ) ಸೇರಿದ ಸಿಬ್ಬಂದಿ, ಕೋಬ್ರಾದ ಐದು ಬೆಟಾಲಿಯನ್‌ಗಳು ಮತ್ತು ಸಿಆರ್‌ಪಿಎಫ್‌ನ 229ನೇ ಬೆಟಾಲಿಯನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

    ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಗೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಪೊಲಿಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

    ಜನವರಿ ತಿಂಗಳಿನಲ್ಲಿ ಇಲ್ಲಿಯವರೆಗೆ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 26 ಮಾವೋವಾದಿಗಳು ಮೃತಪಟ್ಟಿದ್ದಾರೆ. ಜ.12ರಂದು ಬಿಜಾಪುರ ಜಿಲ್ಲೆಯ ಮದ್ದೇಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 5 ಮಾವೋವಾದಿಗಳು ಸಾವನ್ನಪ್ಪಿದ್ದರು. ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

     

  • ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ – ಓರ್ವ ಸಿಬ್ಬಂದಿ ಸಾವು

    ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ – ಓರ್ವ ಸಿಬ್ಬಂದಿ ಸಾವು

    ರಾಯ್ಪುರ: ಭದ್ರತಾ ಪಡೆ (Security Personnel) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ‌ (Chhattisgarh) ಬಸ್ತಾರ್ ಪ್ರದೇಶದಲ್ಲಿ ನಡೆದಿದೆ.

    ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಕಾಡಿನಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಮೀಸಲು ಗಾರ್ಡ್‌ನ (ಡಿಆರ್‌ಜಿ) ಹೆಡ್ ಕಾನ್ಸ್‌ಟೇಬಲ್ ಸನ್ನು ಕರಮ್ ತೀವ್ರಗಾಯಗೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಲಾಹಬ್ಬ 22ನೇ ಚಿತ್ರಸಂತೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    ಗುಂಡಿನ ದಾಳಿ ಬಳಿಕ ನಾಲ್ವರು ಮಾವೋವಾದಿಗಳ ಮೃತದೇಹ ಮತ್ತು ಎಕೆ -47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು

  • Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ರಾಯಪುರ: ಛತ್ತೀಸ್‌ಗಢನ (Chattisgarh) ಅಬುಜ್ಮಾರ್‌ನಲ್ಲಿ (Abujhmarh) ಅ.3ರಂದು ನಡೆದ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳು ಹತರಾಗಿದ್ದು, ಬಸ್ತಾರ್‌ನಲ್ಲಿ ನಡೆದ ಅತೀ ದೊಡ್ಡ ಎನ್‌ಕೌಂಟರ್ ಇದಾಗಿದೆ.

    ಶುಕ್ರವಾರ ದಂತೇವಾಡ ಪೊಲೀಸರು (Dantewada Police) 9 ಗಂಟೆಗಳ ಕಾಲ ನಡೆಸಿದ ಗುಂಡಿನ ದಾಳಿಯಲ್ಲಿ ಒಟ್ಟು 38 ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ. ಒಟ್ಟು 2.6 ಕೋಟಿ ರೂ.ಗೂ ಅಧಿಕ ಬಹುಮಾನವನ್ನು ಪಡೆದುಕೊಂಡಿದ್ದಾರೆ.

    ಎನ್‌ಕೌಂಟರ್ ನಡೆದ ಒಂದು ದಿನದ ಬಳಿಕ 13 ಮಹಿಳೆಯರು ಸೇರಿದಂತೆ 31 ಮಾವೋವಾದಿಗಳ ಶವವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅ.13 ರಂದು ಮಾವೋವಾದಿಗಳು ತಮ್ಮ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಹೇಳಿಕೆಯ ಪ್ರಕಾರ ಒಟ್ಟು 35 ಮಾವೋವಾದಿಗಳು ಸಾವನ್ನಪ್ಪಿದ್ದು, ಅವರ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಬಳಿಕ ತಮ್ಮ ಬಳಿಯಿದ್ದ ಮಾವೋವಾದಿಗಳ ಪಟ್ಟಿಯನ್ನು ಹಾಗೂ ಬಿಡುಗಡೆಗೊಳಿಸಿದ ಪಟ್ಟಿಯನ್ನು ತಾಳೆ ಮಾಡಿದಾಗ 7 ಹೆಚ್ಚುವರಿ ಹೆಸರಿರುವುದು ಗಮನಕ್ಕೆ ಬಂದಿದೆ.

    ದಂತೇವಾಡ ಎಸ್‌ಪಿ ಗೌರವ್ ರೈ ಮಾಹಿತಿ ಪ್ರಕಾರ, ಎನ್‌ಕೌಂಟರ್ ಸ್ಥಳದಿಂದ ಭದ್ರತಾ ಪಡೆಗಳು ಶವಗಳನ್ನು ಸಾಗಿಸದೇ ಇರುವ ಸಂದರ್ಭದಲ್ಲಿ ಕೆಲವು ನಕ್ಸಲರು ತಮ್ಮ ಕಾರ್ಯಕರ್ತರಿಂದ ಆ ಶವಗಳನ್ನು ಸಾಗಿಸುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಎನ್‌ಕೌಂಟರ್ ವೇಳೆ ಹಲವಾರು ನಕ್ಸಲರು (Naxals) ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಕೆಲವರು ಅಲ್ಲಿಂದ ತಪ್ಪಿಸಿಕೊಳ್ಳುವಾಗ ಕೆಲವರನ್ನು ಎಳೆದುಕೊಂಡು ಹೋಗಿರಬಹುದು. ಆದರೆ ಅವರಿಗೆ ವೈದ್ಯಕೀಯ ಆರೈಕೆಯಿಲ್ಲದೆ ಬದುಕುಳಿಯುವುದು ಕಷ್ಟ ಎಂದು ತಿಳಿಸಿದರು.

    ಬಸ್ತಾರ್ ರೇಂಜ್ ಐಜಿ ಪಿ ಸುಂದರರಾಜ್ ಮಾತನಾಡಿ, ಹತ್ಯೆಯಾದವರಲ್ಲಿ ದಂಡಕಾರಣ್ಯ ವಿಶೇಷ ವಲಯ ಸಮಿತಿ ಸದಸ್ಯ, ವಿಭಾಗೀಯ ಸಮಿತಿ ಸದಸ್ಯ, ಪಿಎಲ್‌ಜಿಎ ಕಂಪನಿಯ 18 ಜನ, ಡಿಕೆಎಸ್‌ಜೆಡ್‌ಸಿ 2 ಗಾರ್ಡ್‌ಗಳು, 9 ಜನ ಕಮಿಟಿ ಸದಸ್ಯರು ಹಾಗೂ ಪ್ರದೇಶ ಕಮಿಟಿ ಸದಸ್ಯರು ಇದ್ದರು ಎಂದು ತಿಳಿಸಿದರು.

    ನಾರಾಯಣಪುರ ಮತ್ತು ದಾಂತೇವಾಡದಿಂದ ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆಯ ಸುಮಾರು 1,500 ಯೋಧರು 72 ಗಂಟೆಗಳ ಕಾಲ ಬೃಹತ್ ಕಾರ್ಯಾಚರಣೆಯನ್ನು ನಡೆಸಿದ್ದು, 303 ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ.

  • ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ ಮೂವರು ಮಾವೋವಾದಿಗಳ ಬಲಿ

    ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್‌ಗೆ ಮೂವರು ಮಾವೋವಾದಿಗಳ ಬಲಿ

    ರಾಯ್‍ಪುರ್: ಛತ್ತೀಸ್‍ಗಢದ (Chhattisgarh) ಕಂಕೇರ್‌ನಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು (Maoists) ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೊಯಲಿಬೆಡ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ರಾ-ಹುರ್ತರೈ ಗ್ರಾಮಗಳ ನಡುವಿನ ಬೆಟ್ಟದ ಮೇಲೆ ಮಾವೋವಾದಿಗಳು ಹಾಗೂ ಭದ್ರತಾ ಸಿಬ್ಬಂದಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಎರಡೂ ಕಡೆಗಳಿಂದಲೂ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ನಕ್ಸಲರು ಭದ್ರತಾ ಸಿಬ್ಬಂದಿ ಗುಂಡಿಗೆ ಬಲಿಯಾಗಿದ್ದಾರೆ. ಗುಂಡಿನ ದಾಳಿ ಬಳಿಕ ಉಳಿದ ಕೆಲವು ಮಾವೋವಾದಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

    ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಬಂದೂಕುಗಳು ಹಾಗೂ ನಕ್ಸಲರ ಕೆಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹತ್ಯೆಯಾದ ಮಾವೋವಾದಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೊಮ್ರಾ-ಹುರ್ತರೈ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಬಗ್ಗೆ ಮಾಹಿತಿ ತಿಳಿದ ಬಳಿಕ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಜಂಟಿ ತಂಡವನ್ನು ಶನಿವಾರ ರಾತ್ರಿ ಪ್ರದೇಶಕ್ಕೆ ಕಳಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.

  • ಮಾವೋವಾದಿಗಳ ವಿರುದ್ಧ ಎನ್‌ಕೌಂಟರ್‌; ಪ್ಯಾರಾಮಿಲಿಟರಿ ಯೋಧ ಹುತಾತ್ಮ

    ಮಾವೋವಾದಿಗಳ ವಿರುದ್ಧ ಎನ್‌ಕೌಂಟರ್‌; ಪ್ಯಾರಾಮಿಲಿಟರಿ ಯೋಧ ಹುತಾತ್ಮ

    ರಾಯ್ಪುರ: ಛತ್ತೀಸ್‌ಗಢದ (Chhattisgarh) ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವಿನ ಎನ್‌ಕೌಂಟರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಬ್ ಇನ್‌ಸ್ಪೆಕ್ಟರ್ ಒಬ್ಬರು ಹುತಾತ್ಮರಾಗಿದ್ದಾರೆ.

    ಎನ್‌ಕೌಂಟರ್‌ನಲ್ಲಿ ಕಾನ್‌ಸ್ಟೇಬಲ್‌ ಒಬ್ಬರು ಗಾಯಗೊಂಡಿದ್ದಾರೆ. ಸಿಆರ್‌ಪಿಎಫ್‌ನ 165ನೇ ಬೆಟಾಲಿಯನ್‌ನ ತಂಡವೊಂದು ಮಾವೋವಾದಿ (Maoist) ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಜಗರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅರ್ಚಕರ ಕಣ್ಣು ಕಿತ್ತು, ಜನನಾಂಗ ಕತ್ತರಿಸಿ ಭೀಕರ ಹತ್ಯೆ; ಬಿಹಾರ ಉದ್ವಿಗ್ನ

    ಬೆಳಗ್ಗೆ 7 ಗಂಟೆ ಸುಮಾರಿಗೆ ಬೇದ್ರೆ ಕ್ಯಾಂಪ್‌ನಿಂದ ಉರಸಂಗಲ್ ಗ್ರಾಮದ ಕಡೆಗೆ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಸಬ್ ಇನ್‌ಸ್ಪೆಕ್ಟರ್ ಸುಧಾಕರ್ ರೆಡ್ಡಿ ಹುತಾತ್ಮರಾಗಿದ್ದಾರೆ. ಕಾನ್‌ಸ್ಟೇಬಲ್ ರಾಮು ಅವರಿಗೆ ಬುಲೆಟ್ ತಗುಲಿ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಗುಂಡಿನ ಚಕಮಕಿ ನಿಂತ ನಂತರ, ನಾಲ್ವರು ಶಂಕಿತರನ್ನು ಸ್ಥಳದಿಂದ ಸುತ್ತುವರಿಯಲಾಯಿತು. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಪ್ರದೇಶದಲ್ಲಿ ಶೋಧ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೀರೆಯ ಸೆರಗು ಮೆಟ್ರೋ ಬಾಗಿಲಿಗೆ ಸಿಲುಕಿ ಎಳೆದೊಯ್ದ ರೈಲು – ಮಹಿಳೆ ಸಾವು

    ಗಾಯಗೊಂಡಿರುವ ಕಾನ್‌ಸ್ಟೇಬಲ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ವೈದ್ಯ, ಆರ್ಮಿ ಡಾಕ್ಟರ್‌, ಪ್ರಧಾನ ಮಂತ್ರಿ ಕಚೇರಿ ಅಧಿಕಾರಿ.. ನಾನಾ ವೇಶ – ಮಹಿಳೆಯರನ್ನು ವಂಚಿಸುತ್ತಿದ್ದ ವ್ಯಕ್ತಿ ಬಂಧನ

  • ದಾಂತೇವಾಡ ಸ್ಫೋಟ ಪ್ರಕರಣ- ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳು ಅರೆಸ್ಟ್

    ದಾಂತೇವಾಡ ಸ್ಫೋಟ ಪ್ರಕರಣ- ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳು ಅರೆಸ್ಟ್

    ರೈಪುರ್: ದಾಂತೇವಾಡ (Dantewada) ಸ್ಫೋಟ ಪ್ರಕರಣದಲ್ಲಿ ಪಾಲ್ಗೊಂಡ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳನ್ನು (Maoists) ಛತ್ತೀಸ್‍ಗಢದ (Chhattisgarh) ಪೊಲೀಸರು ಬಂಧಿಸಿದ್ದಾರೆ.

    ನಾಲ್ವರು ಮಾವೋವಾದಿಗಳನ್ನು ಬುಧ್ರಾ ಮದ್ವಿ, ಜಿತೇಂದ್ರ ಮುಚಕಿ, ಹಿದ್ಮಾ ಮಡ್ಕಮ್ ಮತ್ತು ಹಿದ್ಮಾ ಮದ್ವಿ ಎಂದು ಗುರುತಿಸಲಾಗಿದೆ. ಇವರೆಲ್ಲ ನಿಷೇಧಿತ ಸಿಪಿಐನ ದರ್ಭಾ ವಿಭಾಗದ (Darbha Division) ಸದಸ್ಯರಾಗಿದ್ದಾರೆ. ಅಪ್ರಾಪ್ತರು 15 ರಿಂದ 17 ವರ್ಷದವರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಓರ್ವನನ್ನು ಜೈಲಿನಲ್ಲಿರಿಸಲಾಗಿದೆ. ಅಪ್ರಾಪ್ತರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏ. 26 ರಂದು ದಾಂತೇವಾಡದಲ್ಲಿ ಮಾವೋವಾದಿಗಳು, ಜವಾನರನ್ನು ಸಾಗಿಸುತ್ತಿದ್ದ ವಾಹನವನ್ನು ಐಇಡಿ ಬಳಸಿ ಸ್ಫೋಟಿಸಿದ್ದರು (IED Blast). ಸ್ಪೋಟದಲ್ಲಿ ಹತ್ತು ಜಿಲ್ಲಾ ಶಸ್ತ್ರಾಸ್ತ್ರ ಪಡೆಯ ಯೋಧರು (DRG) ಮತ್ತು ಓರ್ವ ಸ್ಥಳೀಯ ಚಾಲಕ ಸಾವನ್ನಪ್ಪಿದ್ದರು. ಇದನ್ನೂ ಓದಿ: ಬಾಡಿಗೆ ವಾಹನದಲ್ಲಿ ಬರುತ್ತಿದ್ದ ಯೋಧರು – ದಾಳಿಗೆ ನಕ್ಸಲರಿಂದ 50 ಕೆಜಿ ಸುಧಾರಿತ IED ಬಳಕೆ

  • ಮಾವೋವಾದಿಗಳ ದಾಳಿಗೆ 3 CRPF ಸಿಬ್ಬಂದಿ ಹುತಾತ್ಮ

    ಮಾವೋವಾದಿಗಳ ದಾಳಿಗೆ 3 CRPF ಸಿಬ್ಬಂದಿ ಹುತಾತ್ಮ

    ಭುವನೇಶ್ವರ್: ಒಡಿಶಾದ ನುವಾಪಾದ ಜಿಲ್ಲೆಯ ಭದ್ರತಾ ಪೋಸ್ಟ್‌ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚು ದಾಳಿಗೆ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಲ್ಲಿ ಒಬ್ಬರು ಯೋಧ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಇಬ್ಬರು ಅಧಿಕಾರಿಗಳು ಸೇರಿದ್ದಾರೆ. ಇದನ್ನೂ ಓದಿ: ಮಹಿಳಾ ಪೊಲೀಸರಿಗೆ ಕ್ಯಾಕರಿಸಿ ಉಗಿದು ಕೈ ನಾಯಕಿ ನೆಟ್ಟಾ ಡಿಸೋಜಾ ಆಕ್ರೋಶ

    ಎಎಸ್‌ಐ ಶಿಶುಪಾಲ್ ಸಿಂಗ್, ಎಎಸ್‌ಐ ಶಿವ ಲಾಲ್ ಮತ್ತು ಕಾನ್‌ಸ್ಟೇಬಲ್ ಧರ್ಮೇಂದ್ರ ಕುಮಾರ್ ಸಿಂಗ್ ಹುತಾತ್ಮರು ಎಂದು ಗುರುತಿಸಲಾಗಿದೆ.

    ಪಡೆಗಳ ಮೇಲೆ ಮಾವೋವಾದಿಗಳು ಸುಧಾರಿತ ಮತ್ತು ಕಚ್ಚಾ ಬ್ಯಾರೆಲ್ ಗ್ರೆನೇಡ್ ಲಾಂಚರ್‌ಗಳನ್ನು ಬಳಸಿ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳನ್ನು ಉಲ್ಲೇಖಿಸಿ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಅಗ್ನಿಪಥ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಸೇನಾ ವ್ಯವಹಾರಗಳ ಇಲಾಖೆ

    ನಕ್ಸಲರು ಹುತಾತ್ಮ ಸಿಆರ್‌ಪಿಎಫ್‌ ಸಿಬ್ಬಂದಿ ಬಳಿಯಿದ್ದ ಮೂರು ಎಕೆ-47 ರೈಫಲ್‌ಗಳನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಐಜಿ ಪೊಲೀಸ್ (ಕಾರ್ಯಾಚರಣೆ) ಅಮಿತಾಭ್ ಠಾಕೂರ್ ಹೇಳಿದ್ದಾರೆ.

    Live Tv

  • ತಲೆಗೆ 25 ಲಕ್ಷ ಬಹುಮಾನ ಘೋಷಣೆಗೆಯಾಗಿದ್ದ ನಕ್ಸಲ್‌ ನಾಯಕ ಶವವಾಗಿ ಪತ್ತೆ

    ತಲೆಗೆ 25 ಲಕ್ಷ ಬಹುಮಾನ ಘೋಷಣೆಗೆಯಾಗಿದ್ದ ನಕ್ಸಲ್‌ ನಾಯಕ ಶವವಾಗಿ ಪತ್ತೆ

    ಪಾಟ್ನಾ: 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾವೋವಾದಿ ನಾಯಕ ಸಂದೀಪ್ ಯಾದವ್ ಬಿಹಾರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

    ಮಾವೋವಾದಿಗಳ ಉನ್ನತ ನಾಯಕ ಮತ್ತು ಸಿಪಿಐ(ಮಾವೋವಾದಿ) ಕೇಂದ್ರ ಸಮಿತಿಯ ಸದಸ್ಯ ಸಂದೀಪ್ ಅಲಿಯಾಸ್ ವಿಜಯ್ ಯಾದವ್ ಬುಧವಾರ ಸಂಜೆ ಗಯಾದ ಲುಟುವಾ ಅರಣ್ಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಕುರಿತು ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್‍ಎಸ್‍ಪಿ) ಹರ್‌ಪೀತ್ ಕೌರ್ ಅವರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿ ಕೈಕೊಟ್ಟ ಯುವಕ – ಲವ್‍ಜಿಹಾದ್‍ಗೆ ಯುವತಿ ಬಲಿ? 

    ಯಾದವ್ ಮೃತದೇಹವನ್ನು ಸಿಆರ್‌ಪಿಎಫ್ ತಂಡ ಪತ್ತೆ ಮಾಡಿದ್ದು, ಆತ ಹೇಗೆ ಸಾವನ್ನಪ್ಪಿದ್ದಾನೆ ಎಂಬುದರ ಕುರಿತು ಯಾವುದೇ ಮಾಹಿತಿ ಕೊಟ್ಟಿಲ್ಲ. ಪ್ರಸ್ತುತ ಯಾದವ್ ಮೃತದೇಹವನ್ನು ಗಯಾದ ಅನುಗ್ರಹ ನಾರಾಯಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಯಾರಿದು?
    ಮೃತ ಯಾದವ್ ಬಿಹಾರ, ಜಾರ್ಖಂಡ್ ಮತ್ತು ಛತ್ತೀಸ್‍ಗಢ ಸೇರಿದಂತೆ ಐದು ರಾಜ್ಯಗಳಿಗೆ ಬೇಕಾದ ಆರೋಪಿಯಾಗಿದ್ದನು. ಯಾದವ್ 1990ರ ದಶಕದಿಂದಲೂ ಅಪರಾಧ ಕೃತ್ಯಗಳಲ್ಲಿ ಸಕ್ರಿಯವಾಗಿದ್ದು, ಸಿಪಿಐ(ಮಾವೋವಾದಿ) ಕೇಂದ್ರ ವಲಯದ ಉಸ್ತುವಾರಿ ವಹಿಸಿದ್ದ. ಇದನ್ನೂ ಓದಿ:  ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಕ್ಲಾಸ್ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    KILLING CRIME

    ಯಾದವ್ ಮೇಲೆ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 27 ವರ್ಷಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆ ಬಿಹಾರ ಸರ್ಕಾರ ಯಾದವ್‍ನನ್ನು ಹುಡುಕಿಕೊಟ್ಟರೆ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಜಾರ್ಖಂಡ್ ಸರ್ಕಾರ ಯಾದವ್‍ನನ್ನು ಜೀವಂತವಾಗಿ ಅಥವಾ ಶವವಾಗಿ ಹುಡುಕಿ ಕೊಟ್ಟರೆ ಅವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

  • ಕೇರಳದಲ್ಲಿ ಮಾವೋವಾದಿಗಳ ಹತ್ಯೆ – ಚಿಕ್ಕಮಗಳೂರಿನ ಇಬ್ಬರು ಸಾವು

    ಕೇರಳದಲ್ಲಿ ಮಾವೋವಾದಿಗಳ ಹತ್ಯೆ – ಚಿಕ್ಕಮಗಳೂರಿನ ಇಬ್ಬರು ಸಾವು

    ಚಿಕ್ಕಮಗಳೂರು: ಕೇರಳದಲ್ಲಿ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಮಹಿಳೆ ಸೇರಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ.

    ಮೃತಪಟ್ಟವನ್ನು ಶ್ರೀಮತಿ ಮತ್ತು ಸುರೇಶ್ ಅಲಿಯಾಸ್ ಮಹೇಶ್ ಎಂದು ಗುರುತಿಸಲಾಗಿದೆ. ಸೋಮವಾರ ಕೇರಳದ ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ಮಾವೋವಾದಿಗಳು ಹತರಾಗಿದ್ದರು. ಈ ಮೂವರಲ್ಲಿ ಶ್ರೀಮತಿ ಮತ್ತು ಸುರೇಶ್ ಕೂಡ ಇದ್ದರು ಎಂಬ ಮಾಹಿತಿ ಸಿಕ್ಕಿದೆ.

    ಶೃಂಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದವಳಾದ ಶ್ರೀಮತಿ 2008ರಲ್ಲಿ ನಕ್ಸಲ್ ಚಟುವಟಿಕೆಗೆ ಸೇರಿದಳು. ಈಕೆಯ ವಿರುದ್ಧ ಸುಮಾರು 10 ರಿಂದ 12 ಪ್ರಕರಣಗಳಿವೆ. ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದವನಾದ ಸುರೇಶ್ ಕೂಡ 2004ರಲ್ಲೇ ನಕ್ಸಲ್ ಗುಂಪಿಗೆ ಸೇರಿಕೊಂಡಿದ್ದು, ಇತನ ವಿರುದ್ಧ 40 ಪ್ರಕರಣಗಳಿವೆ. ಈಗ ಇಬ್ಬರೂ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ.

    ಸೋಮವಾರ ಬೆಳಗ್ಗೆ ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸರ ಗುಂಡಿಗೆ ಮೂವರು ಮಾವೋವಾದಿಗಳು ಹತರಾಗಿದ್ದರು. ಕೇರಳದ ಥಂಡರ್ ಬೋಲ್ಟ್ ಕಮಾಂಡೋ ತಂಡವು ಈ ಕಾರ್ಯಚರಣೆ ನಡೆಸಿದ್ದು, ಯಶಸ್ವಿಯಾಗಿ ಮೂವರನ್ನು ಹತ್ಯೆ ಮಾಡಿತ್ತು.

    ಇತ್ತೀಚಿಗೆ ಮಾವೋವಾದಿಗಳ ಉಪಟಳ ಕೇರಳದಲ್ಲಿ ಜಾಸ್ತಿಯಾಗಿದ್ದು, ಇವರನ್ನು ಸದೆಬಡಿಯಲು ಕೇರಳ ಪೊಲೀಸರು ಕಾದು ಕುಳಿತಿದ್ದರು. ಅದರಂತೆ ಸೋಮವಾರ ಬೆಳಗ್ಗೆ ಮಾವೋವಾದಿಗಳು ಪಾಲಕ್ಕಾಡ್‍ನ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದರು. ಈ ವೇಳೆ ಪಾಲಕ್ಕಾಡ್ ಅರಣ್ಯದ ಮಂಚಕತ್ತಿ ಎಂಬ ಪ್ರದೇಶದಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿಯಾಗಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.

    ಕಳೆದ ಕೆಲ ವರ್ಷಗಳಿಂದ ಕರ್ನಾಟಕ ತಮಿಳುನಾಡು ಮತ್ತು ಕೇರಳದಲ್ಲಿ ಮಾವೋವಾದಿಗಳು ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಲು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದ್ದರಿಂದ ಕೆಲ ಸೂಕ್ಷ್ಮ ಪ್ರದೇಶದ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಆದರೆ ಕೇರಳದಲ್ಲಿ ಬಿಟ್ಟರೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾವೋವಾದಿಗಳು ಕಾಣಿಸಿಕೊಂಡಿರಲಿಲ್ಲ. 2014 ರಿಂದ 2017ರವರೆಗೆ ಕೇರಳದಲ್ಲಿ ಮಾವೋವಾದಿಗಳ ವಿರುದ್ಧ 23 ವಿವಿಧ ಕೇಸ್‍ಗಳು ದಾಖಲಾಗಿದ್ದವು.

  • ಗಾಯಗೊಂಡಿದ್ದ ನಕ್ಸಲ್ ಕಮಾಂಡರ್‌ನನ್ನು 12 ಕಿ.ಮೀ ಹೊತ್ತು ಆಸ್ಪತ್ರೆ ದಾಖಲಿಸಿದ ಪೊಲೀಸ್ರು

    ಗಾಯಗೊಂಡಿದ್ದ ನಕ್ಸಲ್ ಕಮಾಂಡರ್‌ನನ್ನು 12 ಕಿ.ಮೀ ಹೊತ್ತು ಆಸ್ಪತ್ರೆ ದಾಖಲಿಸಿದ ಪೊಲೀಸ್ರು

    ರಾಯ್ಪುರ್: ಗಾಯಗೊಂಡಿದ್ದ ನಕ್ಸಲ್ ಕಮಾಂಡರ್ ನನ್ನು ಪೊಲೀಸರ ತಂಡವೊಂದು 12 ಕಿ.ಮೀ ಹೊತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಘಟನೆ ಛತ್ತೀಸ್‍ಗಢದ ದಾಂತೇವಾಡದಲ್ಲಿ ನಡೆದಿದೆ.

    ಮಡ್ಕಮ್ ಹಿಡ್ಮಾ ಗಾಯಗೊಂಡಿರುವ ಕಮಾಂಡರ್. ಈತ ಮಲಂಗಿರ್ ಪ್ರದೇಶದ ಸಮಿತಿಯ ಸದಸ್ಯನಾಗಿದ್ದು, ಈತನ ತಲೆಗೆ ಸರ್ಕಾರ 5 ಲಕ್ಷ ಘೋಷಣೆ ಮಾಡಲಾಗಿತ್ತು. ಈತ 12 ದಿನಗಳ ಹಿಂದೆ ಜಿಲ್ಲಾ ಮೀಸಲು ಪಡೆಯ ಗುಂಪು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಆಳವಾದ ಹೊಂಡಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಅಲ್ಲದೆ ಈತನ ಜೊತೆಗಿದ್ದ ಇತರರು ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಆಳವಾದ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದ ಮಾವೋವಾದಿ ಹೇಗೋ ಅದರಿಂದ ಮೇಲಕ್ಕೆ ಬಂದು ಪಕ್ಕದ ಗ್ರಾಮದ ಮನೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದನು. ಈ ವಿಚಾರ ಪೊಲೀಸ್ ತಂಡಕ್ಕೆ ಮಾಹಿತಿ ಲಭಿಸಿದ್ದು, ಕೂಡಲೇ ಸುಕ್ಮಾ ಜಿಲ್ಲೆಯ ನಗಲ್ ಗುಂಡಕ್ಕೆ ದೌಡಾಯಿಸಿ ಆತನನ್ನು ವಿಚಾರಿಸಿದ್ದಾರೆ. ನಂತರ ತಾತ್ಕಾಲಿಕ ಮಂಚ ತಯಾರಿಸಿ ಅದರಲ್ಲಿ ಆತನನ್ನು ಕುಳ್ಳಿರಿಸಿಕೊಂಡು ಸುಮಾರು 12 ಕಿ.ಮೀ ಹೊತ್ತು ಕಾಡಿನ ಮಖಾಂತರ ತಂದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದಾಂತೇವಾಡ ಪೊಲೀಸ್ ಅಧೀಕ್ಷಕ ಅಭಿಷೇಕ್ ಪಲ್ಲಾವ್ ವಿವರಿಸಿದ್ದಾರೆ.

    ಮಡ್ಕಮ್ ಕಳೆದ 2008ರಿಂದ ಮಲಂಗೀರ್ ಪ್ರದೇಶದಲ್ಲಿ ಸಕ್ರಿಯವಾಗಿದ್ದನು. ಅಲ್ಲದೆ ಐಇಡಿ ಸ್ಫೋಟಕಗಳನ್ನು ಬಳಸುವಲ್ಲಿ ನಿಪುಣನಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.