Tag: ಮಾಸ್ಕ್‌ಮ್ಯಾನ್‌

  • ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಮೊದಲು 2 ಲಕ್ಷಕ್ಕೆ ನಡೆದಿತ್ತು ಡೀಲ್‌

    ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಮೊದಲು 2 ಲಕ್ಷಕ್ಕೆ ನಡೆದಿತ್ತು ಡೀಲ್‌

    – 19 ಗಂಟೆ ವಿಚಾರಣೆ ಬಳಿಕ ತಿಮರೋಡಿ, ಮಟ್ಟಣ್ಣನವರ್‌ ಹೆಸರು ಕಕ್ಕಿದ ಚಿನ್ನಯ್ಯ
    – 12 ದಿನ, 17 ಪಾಯಿಂಟ್, 25 ಗುಂಡಿ, 52 ದಿನಗಳ ಬಳಿಕ ಮುಖವಾಡ ಕಳಚಿದ ಮಾಸ್ಕ್‌ ಮ್ಯಾನ್‌

    ಮಂಗಳೂರು: ಅನಾಮಿಕನ ಪಾಪ ಪ್ರಜ್ಞೆಯ ಆಟಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. 12 ದಿನ, 260 ಸಿಬ್ಬಂದಿ, 17 ಪಾಯಿಂಟ್, 25 ಗುಂಡಿ, 52 ದಿನಗಳ ಬಳಿಕ ವಿಶೇಷ ತನಿಖಾ ತಂಡ ಮಾಸ್ಕ್‌ ಮ್ಯಾನ್‌ನ ಮುಖವಾಡ ಕಳಚಿದೆ. ಬಳಿಕ 10 ದಿನಗಳ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿರುವ ಎಸ್‌ಐಟಿ (SIT) ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದೆ.

    ಆರೋಪಿ ಚಿನ್ನಯ್ಯ, ಆರಂಭದಲ್ಲಿ 2 ಲಕ್ಷ ರೂ. ಹಣ ಪಡೆದು ಡ್ರಾಮಾ ಶುರು ಮಾಡಿದ್ದ. 2023 ಡಿಸೆಂಬರ್‌ನಲ್ಲಿ ಗ್ಯಾಂಗ್ ಒಂದು ಚಿನ್ನಯ್ಯನನ್ನ ಸಂಪರ್ಕ ಮಾಡಿತ್ತು. ಈ ವೇಳೆ ಅಕ್ರಮವಾಗಿ ಶವಗಳನ್ನ ಹೂತಿಟ್ಟಿರುವ ಬಗ್ಗೆ ತಪ್ಪು ಒಪ್ಪಿಗೆ ಕೊಡುವಂತೆ ಆ ಗ್ಯಾಂಗ್‌ನೊಂದಿಗೆ ಚಿನ್ನಯ್ಯ ಡೀಲ್ ಮಾಡಿಕೊಂಡಿದ್ದ. ಇದನ್ನೂ ಓದಿ: ದೆಹಲಿಗೂ ಬುರುಡೆ ಕೊಂಡೊಯ್ದಿದ್ದ ಚಿನ್ನಯ್ಯ & ಗ್ಯಾಂಗ್‌ – ಮಹಾ ರಹಸ್ಯ ಸ್ಫೋಟ

    ಇದೀಗ ಅಪಪ್ರಚಾರ ಮಾಡುವ ಗ್ಯಾಂಗ್‌ನಲ್ಲಿ ಯಾರಿದ್ರು ಅನ್ನೋದರ ಬಗ್ಗೆ ವಿಚಾರಣೆ ವೇಳೆ ಚಿನ್ನಯ್ಯ (Chinnayya) ಬಾಯ್ಚಿಟ್ಟಿದ್ದಾನೆ. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಹೆಸರನ್ನು ಚಿನ್ನಯ್ಯ ಕಕ್ಕಿದ್ದಾನೆ. ಇದನ್ನೂ ಓದಿ: ಸಮೀರ್‌ನ ಸುಳ್ಳಿನ ಕಂತೆ ಬಯಲು – ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ʻದೂತʼನ ವಿಚಾರಣೆ

    19 ಗಂಟೆಗಳ ವಿಚಾರಣೆಯಲ್ಲಿ ಕೆಲವು ಸ್ಫೋಟಕ ವಿಷಯಗಳನ್ನ ಆರೋಪಿ ಚಿನ್ನಯ್ಯ ಬಾಯಿಬಿಟ್ಟಿದ್ದು, ಸೂತ್ರಧಾರಿಗಳ ಪಾತ್ರದ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಇಂದು ಕೂಡ ಎಸ್‌ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನ ವಿಚಾರಣೆಯನ್ನು ಮುಂದುವರೆಸಿದ್ದು, ವಿಚಾರಣೆ ವೇಳೆ ಮತ್ತಷ್ಟು ಸತ್ಯ ಹೊರ ಬೀಳಲಿದೆ.

    FSL ವರದಿಯಿಂದ ಬುರುಡೆ ಬಂಡವಾಳ ಬಯಲು
    ಈ ಬುರುಡೆಯನ್ನು ಇಟ್ಟುಕೊಂಡು ನ್ಯಾಯಾಲಯದಿಂದ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಭದ್ರತೆ ಪಡೆದುಕೊಂಡಿದ್ದ. ಹೀಗಾಗಿ ಎಸ್‌ಐಟಿ (SIT) ಸಹ ಆತ ಹೇಳಿದಂತೆ ಕೇಳುತ್ತಿತ್ತು. ಆತ ಹೇಳಿದ್ದ 17 ಜಾಗಗಳಲ್ಲಿ ಗುಂಡಿ ತೋಡಿದ ಬಳಿಕ ಮೂಲ ಬುರುಡೆಯ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿದ್ದರು. ಈ ವೇಳೆ ಆತ ಒಂದೊಂದು ಜಾಗದ ಹೆಸರನ್ನು ಹೇಳಿದ್ದ. ಒಮ್ಮೆ ಬೋಳಿಯಾರ್‌ ಮತ್ತೊಮ್ಮೆ ಕಲ್ಲೇರಿ ಇನ್ನೊಮ್ಮೆ ಇನ್ಯಾವುದೋ ಜಾಗವನ್ನು ಹೇಳಿದ್ದ. ಇದನ್ನೂ ಓದಿ: ಅನನ್ಯಾ ಭಟ್ ನಾಪತ್ತೆ ಪ್ರಕರಣ – ಎಸ್‌ಐಟಿ 2ನೇ ನೋಟಿಸ್‌ಗೂ ಉತ್ತರಿಸದ ಸುಜಾತ ಭಟ್

    ಈ ಮಧ್ಯೆ ಬುರುಡೆಯಲ್ಲಿದ್ದ ಮಣ್ಣು ಧರ್ಮಸ್ಥಳ (Dharmasthala) ಪರಿಸರದ್ದೇ ಅಲ್ಲ ಎನ್ನುವುದು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ದೃಢಪಟ್ಟಿತ್ತು. ಇದು ಪಕ್ಕಾ ಆಗುತ್ತಿದ್ದಂತೆ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆತ ಬೇರೆ ಜಾಗದಿಂದ ಈ ಬುರುಡೆ ತಂದಿದ್ದೇನೆ. ಬೇರೆಯವರು ಹೇಳಿದಂತೆ ನಾನು ಈ ಪ್ರಕರಣಕ್ಕೆ ಬಂದಿದ್ದೇನೆ ಎಂದು ಬಾಯಿಬಿಟ್ಟಿದ್ದ.

     

     

  • ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    – ರೆಡ್ಡಿ ಕೃತ್ಯಗಳನ್ನ ಬಯಲಿಗೆಳೆದಿದ್ದಕ್ಕೆ ನನ್ನ ವಿರುದ್ಧ ಆರೋಪ ಎಂದ ಸಂಸದ
    – ʻವೋಟ್ ಚೋರಿʼ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಯತ್ನ

    ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್ ಎಂಬ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    Janardhana Reddy

    ದೆಹಲಿಯಲ್ಲಿ ʻಪಬ್ಲಿಕ್‌ ಟಿವಿ; ಜೊತೆಗೆ ಮಾತನಾಡಿರುವ ಸೆಂಥಿಲ್, ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಅದರಲ್ಲಿ ಯಾವುದೇ ಸತ್ಯವಿಲ್ಲ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧಗಳನ್ನ ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ನನ್ನ ಮೇಲೆ ಈ ಆರೋಪ ಮಾಡಿರಬಹುದು. ಇದನ್ನ ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ.

    ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ ʻವೋಟ್ ಚೋರಿʼ ಪ್ರಕರಣದ ಗಮನವನ್ನ ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಸೆಂಥಿಲ್‌ ಬಾಲಾಜಿಗೆ ಶೀಘ್ರವೇ ಬೈಪಾಸ್‌ ಸರ್ಜರಿ ಅಗತ್ಯ – ಇಡಿ ಅರೆಸ್ಟ್‌ ಬೆನ್ನಲ್ಲೇ ವೈದ್ಯರ ಸಲಹೆ

    ಜನಾರ್ಧನ ರೆಡ್ಡಿ ಆರೋಪಗಳೇನು?
    ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು.

    ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು. ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್‌ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್‌ ಮೈಂಡ್‌ ಸೆಂಥಿಲ್‌.

    ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ದೂರಿದ್ದರು. ಇದನ್ನೂ ಓದಿ: ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ

  • ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ  ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    – ಇಡೀ ಪ್ರಕರಣದ ಮಾಸ್ಟರ್‌ ಮೈಂಡ್‌ ಕೈ ಸಂಸದ

    ಬೆಂಗಳೂರು: ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ (Sasikanth Senthil) ಮಾಸ್ಕ್‌ಮ್ಯಾನ್‌ಗೆ (Maskman) ಬುರುಡೆ (Skull) ಕೊಟ್ಟು ಕಳುಹಿಸಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಗಂಭೀರ ಆರೋಪ ಮಾಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

     

    ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್‌ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್‌ ಮೈಂಡ್‌ ಸೆಂಥಿಲ್‌ ಎಂದಿದ್ದಾರೆ.

    ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ಹೇಳಿದರು.

    ಈ ಪ್ರಕರಣ ಸಿಬಿಐ, ಎನ್‌ಐಎ ತನಿಖೆ ನಡೆಸಬೇಕು. ಇಲ್ಲದೇ ಇದ್ದರೆ ಹೈಕೋರ್ಟ್ ಅಥವಾ ಸುಪ್ರಿಂ ಕೋರ್ಟ್ ಜಡ್ಜ್ ಮೂಲಕ ತನಿಖೆ ಆಗಬೇಕು. ಸರ್ಕಾರ ನಿರ್ಧಾರ ಮಾಡದೇ ಇದ್ದರೆ ನಾನೇ ಇದರ ವಿರುದ್ದ ಕೋರ್ಟ್ ಗೆ ಹೋಗಲು ನಿರ್ಧರಿಸಿದ್ದೇನೆ ಎಂದರು.